ಮಂಡ್ಯ: ಸದಾ ಸುದ್ದಿಯಲ್ಲೇ ಇರುವ ಕಾಂಗ್ರೆಸ್‍ನ (Congress) ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್‍ನ ಸಹೋದರ ಕೆ.ಬಿ.ರವಿಕುಮಾರ್ ಇದೀಗ ಮಹಿಳೆಯ ವಿಚಾರದಲ್ಲಿ ಸುದ್ದಿಯಾಗಿದ್ದಾರೆ. ಕೆಆರ್ ಪೇಟೆಯ (K.R.Pete) ಮಹಿಳೆಯೊಂದಿಗೆ ಕೆ.ಬಿ.ರವಿ ಟವಲ್ ಹಾಗೂ ಬನಿಯನ್‍ನಲ್ಲಿ ಸಿಕ್ಕಿಬಿದ್ದು ವಿಚಾರ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ನಗರದಲ್ಲಿರುವ ರವಿಯವರ ವಾಣಿಜ್ಯ ಕಟ್ಟಡದಲ್ಲಿ ಮಹಿಳೆ ಬ್ಯೂಟಿ ಪಾರ್ಲರ್ (Beauty Parlour) ನಡೆಸುತ್ತಿದ್ದಳು. ಶುಕ್ರವಾರ ಮಹಿಳೆ ಮನೆಗೆ ಬಾರದ ಹಿನ್ನೆಲೆ ಗಂಡ ಹಾಗೂ ಆತನ ಮನೆಯವರು ರವಿಯವರ ಮನೆಯ ಬಳಿ ಬಂದು ನೋಡಿದಾಗ ಆಕೆಯ ಸ್ಕೂಟರ್ (Scooter) ಇರುವುದು ಪತ್ತೆಯಾಗಿದೆ. ಕುಟುಂಬ ಆಕೆಯನ್ನು ಕರೆದು ಕೇಳಿದಾಗ ನನಗೆ ನೀನು ಬೇಡ, ನಾನು ಏನು ಬೇಕಾದರೂ ಮಾಡಿಕೊಳ್ಳುತ್ತೇನೆ ಎಂದು ಗಂಡನಿಗೆ ಗದರಿಸಿದ್ದಾಳೆ. ಬಳಿಕ ಪೊಲೀಸರಿಗೆ ಕರೆ ಮಾಡಿ ಇಬ್ಬರನ್ನೂ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಮಾಡಾಳ್ ಕುಟುಂಬದಿಂದ ಖತರ್ನಾಕ್ ಪ್ಲಾನ್- ಲೋಕಾಯುಕ್ತ ಬರುತ್ತೆ ಅಂತ ಸಿಸಿಟಿವಿ ಆಫ್! ಮಹಿಳೆಯ ಕುಟುಂಬದಲ್ಲಿ ಅಕ್ರಮ ಸಂಬಂಧ ವಿಚಾರವಾಗಿ ನಿರಂತರ ಜಗಳ ನಡೆಯುತ್ತಿತ್ತು. ಇದೇ ವಿಚಾರವಾಗಿ ಗಂಡ ಹಾಗೂ…
Author: Prajatv Kannada
ಬೆಂಗಳೂರು: ಮಹಿಳಾ ದಿನಾಚರಣೆಯ ಕೊಡುಗೆಯಾಗಿ ಬಿಎಂಟಿಸಿ ಮಾರ್ಚ್ 8 ರಂದು ತನ್ನ ಬಸ್ ಗಳಲ್ಲಿ ಉಚಿತ ಪ್ರಯಾಣ ಘೋಷಿಸಿದೆ. ಮಾರ್ಚ್ 8 ರಂದು ನೀವು ನಗರದಾದ್ಯಂತ ಸಂಚರಿಸುವ ಬಿಎಂಟಿಸಿ ಬಸ್ ಗಳಲ್ಲಿ ನಿರ್ಭಯವಾಗಿ, ಸಂಪೂರ್ಣವಾಗಿ ಉಚಿತ ಸಂಚಾರ ನಡೆಸಬಹುದಾಗಿದೆ. ಎಷ್ಟು ಭಾರಿ ಯಾವ ಬಸ್ ನಲ್ಲಿ ಓಡಾಡಿದ್ರೂ ಹೆಣ್ಣು ಮಕ್ಕಳಿಂದ ಹಣ ಪಡೆಯದಿರಲು ಬಿಎಂಟಿಸಿ ನಿರ್ಧರಿಸಿದೆ. ಬಿಎಂಟಿಸಿ ಬಳಕೆಯನ್ನು ಮತ್ತಷ್ಟು ಜನಪ್ರಿಯಗೊಳಿಸಲು ಹಾಗೂ ಜನರನ್ನು ಬಿಎಂಟಿಸಿಯತ್ತ ಸೆಳೆಯಲು ಬಿಎಂಟಿಸಿ ಈ ಪ್ರಯತ್ನ ಮಾಡಿದೆ. ಕೇವಲ ಮಹಿಳೆಯರಿಗೆ ಮಾತ್ರವಲ್ಲ ಈ ಹಿಂದೆ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆ ವೇಳೆಯೂ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಕ್ಕೆ ಅವಕಾಶ ಕಲ್ಪಿಸಿತ್ತು. ಕೊರೋನಾ ಬಳಿಕ ಬಿಎಂಟಿಸಿ ಪ್ರಯಾಣಿಕರ ಕೊರತೆಯಿಂದಾಗಿ ನಷ್ಟ ಎದುರಿಸುತ್ತಿತ್ತು. ಆದರೆ ಈಗ ಜನಜೀವನ ಸಹಜಸ್ಥಿತಿಗೆ ಮರಳುತ್ತಿದ್ದಂತೆ ಬಿಎಂಟಿಸಿಯಲ್ಲಿ ಪ್ರಯಾಣಿಕರ ಸಂಖ್ಯೆ ನಿಧಾನಕ್ಕೆ ಏರಿಕೆಯಾಗ ತೊಡಗಿದೆ. ಆದರೆ ಮಾರ್ಚ್ 8 ರಂದು ಬಿಎಂಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣ ಘೋಷಿಸಿದೆ.
ಪ್ರಕರಣದ ಮೊದಲ ಆರೋಪಿ ಮಹಾದೇವ ಬೈರಗೊಂಡ, ಗೋಪಾಲ್ ಹಳ್ಳೂರ್, ಮಲ್ಲಿಕಾರ್ಜುನ್ ಅಸೋಡೆ, ಮೂವರು ಪೊಲೀಸ್ ಪೇದೆಗಳು ಸೇರಿದಂತೆ 16 ಆರೋಪಿಗಳು ಹಾಜರಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 17 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ವಿಜಯಪುರ(ಮಾ.01): ಜಿಲ್ಲೆಯ ಚಡಚಣ ತಾಲೂಕಿನ ಕೊಂಕಣಗಾಂವ ಗ್ರಾಮದಲ್ಲಿ ನಡೆದಿದ್ದ ಧರ್ಮರಾಜ್ ಚಡಚಣ ನಕಲಿ ಎನ್‌ಕೌಂಟರ್ ಹಾಗೂ ಗಂಗಾಧರ ಚಡಚಣ ನಿಗೂಢ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೀಮಾತೀರದ ಮಹಾದೇವ ಬೈರಗೊಂಡ ಸೇರಿದಂತೆ ಎಲ್ಲ ಆರೋಪಿಗಳು ಸೋಮವಾರ ಜಿಲ್ಲಾ ನ್ಯಾಯಾಲಯಕ್ಕೆ ಆಗಮಿಸಿ ವಿಚಾರಣೆ ಎದುರಿಸಿದರು. ಈ ವೇಳೆ ನ್ಯಾಯಾಲಯವು ಏ.10 ವಿಚಾರಣೆ ಮುಂದೂಡಿದೆ. ಪ್ರಕರಣದ ಮೊದಲ ಆರೋಪಿ ಮಹಾದೇವ ಬೈರಗೊಂಡ, ಗೋಪಾಲ್ ಹಳ್ಳೂರ್, ಮಲ್ಲಿಕಾರ್ಜುನ್ ಅಸೋಡೆ, ಮೂವರು ಪೊಲೀಸ್ ಪೇದೆಗಳು ಸೇರಿದಂತೆ 16 ಆರೋಪಿಗಳು ಹಾಜರಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 17 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. 6ನೇ ಆರೋಪಿ ಬಾಬು ಕಚನಾಳರ್ ಊಫ್‌ರ್ ಮೆಂಬರ್ ಮಹಾದೇವ ಬೈರಗೊಂಡನ ಮೇಲೆ ನಡೆದ ಚಡಚಣ ಗ್ಯಾಂಗ್ ದಾಳಿ ಮಾಡಿದ ವೇಳೆ ಸಾವನ್ನಪ್ಪಿದ ಕಾರಣ…
ಮಾಲಾಧಾರಿಗಳು ಮಾ.18ರಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಅವರ ಸಮಾಧಿ ದರ್ಶನ (ಪುಣ್ಯಭೂಮಿ) ಮಾಡಲಿದ್ದಾರೆ. ಅಪ್ಪು ಅವರ ಜನ್ಮದಿನವನ್ನು ಸರ್ಕಾರ ಸ್ಫೂರ್ತಿ ದಿನ ಎಂದು ಆಚರಿಸುತ್ತಿದೆ. ಹೊಸಪೇಟೆ(ಮಾ.02): ಪವರ್ ಸ್ಟಾರ್ ಪುನೀತ್ ರಾಜಕುಮಾರ ಅಭಿಮಾನಿಗಳು ನಗರದಲ್ಲಿ ಬುಧವಾರ ಅಪ್ಪು ದೇವರ ಮಾಲೆ ಧರಿಸಿ ವ್ರತಾಚರಣೆಗೆ ಚಾಲನೆ ನೀಡಿದರು. ಒಂಬತ್ತು ಜನ ಅಭಿಮಾನಿಗಳು ಪುನೀತ್ ಪ್ರತಿಮೆ ಬಳಿ ವಿಶೇಷ ಪೂಜೆ ಸಲ್ಲಿಸಿ ಮಾಲೆ ಧರಿಸಿದರು. ಅಪ್ಪು ದೇವರ ಮಾಲಾಧಾರಿಗಳು ಮಾ. 18ಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಅವರ ಸಮಾಧಿ ದರ್ಶನ (ಪುಣ್ಯಭೂಮಿ) ಮಾಡಲಿದ್ದಾರೆ. ಅಪ್ಪು ಅವರ ಜನ್ಮದಿನವನ್ನು ಸರ್ಕಾರ ಸ್ಫೂರ್ತಿ ದಿನ ಎಂದು ಆಚರಿಸುತ್ತಿದೆ. ಈ ಹಿನ್ನೆಲೆ ವಿಜಯನಗರ ಜಿಲ್ಲೆಯ ಅಪ್ಪು ಅಭಿಮಾನಿಗಳು ಅಪ್ಪು ದೇವರ ಮಾಲಾಧಾರಣೆ ಮಾಡಿದರು. ಮಾ. 17ರಂದು ಪುನೀತ್ ಪುತ್ಥಳಿ ಬಳಿ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದಲ್ಲೂ ಭಾಗಿಯಾಗಲಿದ್ದಾರೆ. ಮಾ. 18ರಂದು ಮಾಲಾಧಾರಿಗಳು ಪುನೀತ್ ಅವರ ಸಮಾಧಿ ದರ್ಶನ ಅಪ್ಪು ಹುಟ್ಟುಹಬ್ಬಕ್ಕೆ ಭರ್ಜರಿ ತಯಾರಿ: ‘ಕರ್ನಾಟಕ ರತ್ನ’ನ ನೆನಪಿನಲ್ಲಿ…
ಬೆಂಗಳೂರು: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ತಲಾ10 ಕೋಟಿ ರೂ ಅನುದಾನ ಮಂಜೂರು ಮಾಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನ ವಿಧಾನ ಪರಿಷತ್ ಸದಸ್ಯ TA ಶರವಣ ಅಭನಂದಿಸಿದ್ದಾರೆ. 2023 – 24ನೇ ಸಾಲಿನ ಆಯವ್ಯಯ ಅಧಿವೇಶನದಲ್ಲಿ ಬ್ರಾಹ್ಮಣ ಮತ್ತು ಆರ್ಯ ವೈಶ್ಯ ಸಮುದಾಯದವರಿಗೆ ಅನ್ಯಾಯವಾಗಿರುವ ಬಗ್ಗೆ ಸದನದಲ್ಲಿ ವಿಧಾನ ಪರಿಷತ್ ಸದಸ್ಯ TA ಶರವಣ ಪ್ರಸ್ತಾಪಿಸಿದ್ದರು. ಇದನ್ನು ಪರಿಶಿಲಿಸಿದ ಸಿ.ಎಂ ಬೊಮ್ಮಾಯಿ ಅವರು ಅನುದಾನದ ಮರು ಹೊಂದಾಣಿಕೆ ಮಾಡುವ ಮೂಲಕ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ತಲಾ.10 ಕೋಟಿ ರೂ ಅನುದಾನವನ್ನು ಇದೇ ಆರ್ಥಿಕ ವರ್ಷದಲ್ಲಿ ನೀಡುವುದಾಗಿ ಬರವಸೆ ನೀಡುವ ಮೂಲಕ ಸಕಾರಾತ್ಮಕವಾಗಿ ಸ್ಪಂದಿಸಿ ಅನುದಾನ ಬಿಡುಗಡೆ ಮಾಡಿದ್ದಾರೆ. ಇದಕ್ಕಾಗಿ ವಿಧಾನ ಪರಿಷತ್ ಸದಸ್ಯ TA ಶರವಣ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನ ಅಭಿನಂದಿಸಿದ್ದಾರೆ. ಹಾಗೂ ಸರ್ಕಾರವು ಸಮಾನ್ಯ…
ಬೆಂಗಳೂರು: ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್ ಧರಿಸಿ ಬರುವಂತಿಲ್ಲ ಎಂದು ಇಂದು ಮತ್ತೊಮ್ಮೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ವಿಕಾಸಸೌಧದಲ್ಲಿ ಮಾತನಾಡಿದ ಅವರು, ಮಾರ್ಚ್ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್ಗೆ ನಿರ್ಬಂಧಿಸಲಾಗಿದ್ದು, ಹಿಜಾಬ್ ಧರಿಸಿ ಬರುವವರಿಗೆ ಪರೀಕ್ಷೆ ಬರೆಯಲು ಅವಕಾಶವಿಲ್ಲ. ಹಿಜಾಬ್ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿದೆ. ಹೀಗಾಗಿ ಪರೀಕ್ಷೆ ಸಮಯದಲ್ಲಿ ಹಿಜಾಬ್ ಅನುಮತಿಸುವ ಪ್ರಶ್ನೆಯೇ ಇಲ್ಲ ಎಂದು ಕಡ್ಡಿ ಮುರಿದಂತೆ ನಿರ್ಧಾರ ಪ್ರಕಟಿಸಿದರು. ಇನ್ನೂ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ವಿವಿಧ ಜಿಲ್ಲೆಗಳಲ್ಲಿ ಕಾಲೇಜು ಪ್ರಾಂಶುಪಾಲರಿಗೆ ಮುಸ್ಲಿಂ ವಿದ್ಯಾರ್ಥಿನಿಯರು ಮನವಿ ಮಾಡಿದ್ದರು. ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕಾಲೇಜುಗಳಲ್ಲಿ ಮುಸ್ಲಿಂ ಹುಡುಗಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಬೇಕೆಂದು ಮನವಿ ಸಲ್ಲಿಸಿದ್ದರು ಎಂದು ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ. ಆದ್ರೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪಿಯು…
ಮಂಡ್ಯ: ಮಗ ಮಾಡಿರುವ ತಪ್ಪಿಗೆ ಶಾಸಕ ಮಾಡಾಳು ವಿರೂಪಾಕ್ಷಪ್ಪ (Madal Virupakshappa) ಯಾಕೆ ರಾಜೀನಾಮೆ ಕೊಡಬೇಕು ಎಂದು ಸಚಿವ ಮಾಧುಸ್ವಾಮಿ (Madhuswamy) ಪ್ರಶ್ನಿಸಿದ್ದಾರೆ. ವಿರೂಪಾಕ್ಷಪ್ಪ ಪುತ್ರನ ಲಂಚ ಪ್ರಕರಣ ಸಂಬಂಧ ಮಂಡ್ಯದ ಹುಲಿಕೆರೆಯಲ್ಲಿ ಮಾತನಾಡಿದ ಸಚಿವರು, ನಾವು ಅದರ ಬಗ್ಗೆ ಕಮೆಂಟ್ ಮಾಡೊಕೆ ಅಗಲ್ಲ. ಶಾಸಕರು ಯಾಕೆ ರಾಜೀನಾಮೆ ಕೊಡಬೇಕು. ಅವರ ಮಗ ಸರ್ಕಾರಿ ಅಧಿಕಾರಿಯಾಗಿದ್ದಾರೆ. ಅವರ ಮಗ ದುಡ್ಡು ತೆಗೆದುಕೊಂಡಿದ್ದಾನೆ ಮುಂದಿನ ಪರಿಣಾಮ ಎದುರಿಸುತ್ತಾನೆ ಎಂದು ಹೇಳಿದ್ದಾರೆ. ವಿರೂಪಾಕ್ಷಪ್ಪನ ಮಗ ಭ್ರಷ್ಟಾಚಾರ ನಿಗ್ರಹ ದಳ (ACB) ಯಲ್ಲಿ ಒಬ್ಬ ಆಫೀಸರ್. ಅವನು ಲಂಚ ತೆಗೆದುಕೊಂಡರೆ ವಿರೂಪಾಕ್ಷಪ್ಪ ಏನು ಮಾಡ್ತಾರೆ. ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಯಾಕೆ ಬರೆ ಹಾಕಬೇಕು. ಶಾಸಕರ ಮಗ ಮಾಡಿದ್ದಕ್ಕೆ ಸಿಎಂ ಯಾಕೆ ರಾಜೀನಾಮೆ ಕೊಡಬೇಕು. ಇಂತಹ ಅಯೋಗ್ಯರು ಯಾರ್ ಯಾರು ಇದ್ದಾರೆ ಎಂದು ನಾವು ಹುಡುಕಿಕೊಂಡು ಕೂರೋಕೆ ಆಗುತ್ತಾ ಎಂದು ಸಚಿವರು ಪ್ರಶ್ನಿಸಿದರು. 40% ದಂಧೆ ಮಾಡುವುದಕ್ಕೆ ಅವರು ಯಾರೂ ಮಂತ್ರಿಯಲ್ಲ. ಆತ ಒಬ್ಬ ಸರ್ಕಾರಿ ಅಧಿಕಾರಿ,…
ಚಿತ್ರದುರ್ಗ,ಮಾ.03,ಚಿತ್ರದುರ್ಗದಲ್ಲಿ ಇದೇ ಮೊದಲ ಬಾರಿಗೆ ಐಟಿ ಹಾಗು ನಾನ್ ಐಟಿ ಕಂಪನಿ ಆರಂಭಕ್ಕೆ ಸಕಲ ಸಿದ್ಧತೆ ನಡೆಸಲಾಗಿದ್ದು, ಸ್ಪಾರ್ಟ್ ಅಪ್ IT ಪ್ರೈವೆಟ್ ಲಿಮಿಟೆಡ್ ಕಂಪನಿ LANCIERE ಪ್ರೈವೆಟ್ ಲಿಮಿಟೆಡ್ ಕಂಪನಿ ಮತ್ತು ಫೈನಾನಿಸಿಯಲ್ ಸರ್ವಿಸ್ ಆರಂಭಿಸಲಿದ್ದೇವೆ ಎಂದು ಸಂಸ್ಥೆಯ HR Manager ಯಶ್ವಂತ್ ತಿಳಿಸಿದರು. ನಗರದ ಖಾಸಗಿ ಹೊಟೆಲ್ ನಲ್ಲಿ ಇಂದು ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್ ಮಹಾಮಾರಿ ಸಂದರ್ಭದಲ್ಲಿ ಉಂಟಾದ ಲಾಕ್ ಡೌನ್ ನಿಂದಾಗಿ ಸಾಕಷ್ಟು ಯುವಕ ಯುವತಿಯರು ಕೆಲಸ ಕಳೆದುಕೊಂಡಿದ್ದಾರೆ. ಬೇರೆ ಬೇರೆ ನಗರಗಳಲ್ಲಿ ಕೆಲಸ ಮಾಡುತ್ತಿದ್ದ ಅನೇಕ ಜನರು ತಮ್ಮ ತಮ್ಮ ಊರುಗಳಿಗೆ ವಾಪಾಸಾಗಿ ವ್ಯವಸಾಯ ಮಾಡುತ್ತಿದ್ದಾರೆ. ಉದ್ಯೋಗಸ್ಥ ಮಹಿಳೆಯರು ನಾನಾ ಕಾರಣಗಳಿಂದ ಕೆಲಸ ಬಿಟ್ಟು ಮನೆಯಲ್ಲೇ ಇದ್ದಾರೆ. ಇದನ್ನು ಮನಗಂಡು ಮಾಜಿ ಎಂಎಲ್‌ಸಿ ರಘು ಆಚಾರ್ ಅವರು ಹೈದರಾಬಾದ್‌ನ ಐಟಿ ಕಂಪನಿಯಲ್ಲಿ ತಮ್ಮ ಜಿಲ್ಲೆಯ ನಿರುದ್ಯೋಗಿಗಳಿಗೆ ಉದ್ಯೋಗ ಕೊಡುವ ಬಗ್ಗೆ ಚರ್ಚಿಸುತ್ತಿದ್ದ ವೇಳೆ, ಅದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ನನಗೆ ಅಚ್ಚರಿಯಾಗಿ,ಅವರ…
ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಕಮಿಷನ್ ಪಡೆಯುತ್ತಿದ್ದಾಗ ಕೋಟ್ಯಂತರ ರೂಪಾಯಿ ಹಣದೊಂದಿಗೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿರುವಾಗ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಯಾವ ಮುಖ ಇಟ್ಟುಕೊಂಡು ರಾಜ್ಯದಲ್ಲಿ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ(AAP) ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್ ಕಾಳಪ್ಪ ಪ್ರಶ್ನಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಅಭಿವೃದ್ಧಿ ಕಾರ್ಯಗಳ ನೆಪದಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಪದೇಪದೇ ಕರ್ನಾಟಕಕ್ಕೆ ಬಂದು ಚುನಾವಣಾ ಭಾಷಣ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತವೆಂಬಂತೆ ಮಾತನಾಡುತ್ತಿದ್ದಾರೆ. ಆದರೆ ಈಗಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಚಿತ್ರದುರ್ಗ ಶಾಸಕ ತಿಪ್ಪಾರೆಡ್ಡಿ, ಶಿವಮೊಗ್ಗ ಶಾಸಕ ಕೆ.ಎಸ್.ಈಶ್ವರಪ್ಪ, ಮಹದೇವಪುರ ಶಾಸಕ ಅರವಿಂದ್ ಲಿಂಬಾವಳಿ ಮತ್ತಿತರರ ವಿರುದ್ಧ ಸಾಕ್ಷಿಸಹಿತ ಕಮಿಷನ್ ಆರೋಪ ಕೇಳಿಬಂದಿದ್ದರೂ ಈ ಬಗ್ಗೆ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಮಾತನಾಡಿಲ್ಲ. ಆದರೆ…
ಬೆಂಗಳೂರು: ಸರ್ಕಾರಿ ನೌಕರರ ಸಂಬಳ ಏರಿಕೆ ಬೆನ್ನೆಲ್ಲೇ ಕೆಪಿಟಿಸಿಎಲ್ ನೌಕರರು ಸಿಡಿದೆದ್ದಿದ್ದು, ಪೇ ಸ್ಕೇಲ್ ಜಾರಿಗಾಗಿ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಕಾವೇರಿ ಭವನ ಮುಂಭಾಗ ಮಧ್ಯಾಹ್ನವಾಗ್ತಿದ್ದಂತೆ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದ್ದಾರೆ. ಶೇ. 25 ರಷ್ಟು ಸಂಬಳ ಏರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಐದು ವರ್ಷಕ್ಕೊಮ್ಮೆ ಸಂಬಳ ಏರಿಕೆ ಆಗಬೇಕು. ಸದ್ಯ ಕೆಪಿಟಿಸಿಎಲ್ ನಿಂದ ಸಂಬಳ ಏರಿಕೆ ಆಗಿಲ್ಲ. ಸರ್ಕಾರಿ ಅಧಿಕಾರಿಗಳಿಗೆ ನೌಕರರಿಗೆ ಸರ್ಕಾರ ಸಂಬಳ ಏರಿಕೆ ಮಾಡಿದೆ. ಆದ್ರೆ ಕೆಪಿಟಿಸಿಎಲ್ ನೌಕರರಿಗೆ ಸಂಬಳ ಏರಿಲ್ಲ. ಹೀಗಾಗಿ ನೌಕರರು ಕೆಲಸ ಸ್ಥಗಿತಗೊಳಿಸಿ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಇನ್ನೂ ಇದೇ ವೇಳೆ KPTCL ನೌಕರರ ಸಂಘದ ಕಾರ್ಯದರ್ಶಿ ಬಲರಾಮ್ ಪ್ರತಿಕ್ರಿಯೆ ನೀಡಿ, ನಮಗೆ ವೇತನ ಹೆಚ್ಚಳ ಆಗಬೇಕು, ಅದುವರೆಗೂ ಹೋರಾಟ ಮಾಡ್ತೇವೆ. ಎಲ್ಲರಿಗೂ ಬೇಕಾದ ಹಾಗೆ ವೇತನ ಹೆಚ್ಚಳ ಮಾಡಿಕೊಡಲಾಗ್ತಿದೆ. ನಮಗೆ 22% ವೇತನ ಹೆಚ್ಚಳ ಮಾಡಬೇಕು ಅಂತ ಮನವಿ ಮಾಡಿದ್ದೇವೆ ನಿರ್ದೇಶಕರಿಗೆ ಈ ಬಗ್ಗೆ ಬರೆದು ಕೊಟ್ಟು ಮನವಿ ಮಾಡಿದ್ದೇವೆ ಎಂದು…