ಆತ ಪ್ರೀತಿಸಿದವಳು ದೂರ ಮಾಡಿದ್ಲು ಅಂತ ನಡುರಸ್ತೆಯಲ್ಲೇ ಪ್ರೇಯಸಿಯ ರಕ್ತ ಹರಿಸಿದ್ದ. ಬರೋಬ್ಬರಿ 16 ಬಾರಿ ಭೀಕರವಾಗಿ ಚಾಕುವಿನಿಂದ ಇರಿದು ಕೊಲೆಗೈದಿದ್ದ. ಪ್ರೀತಿ ಪ್ರೇಮ ಅಂತ ಸುತ್ತಿದ್ದ ಜೋಡಿಗೆ ಜಾತಿ ಅಡ್ಡ ಬಂದಿತ್ತು. ಸಹಿಸದ ಪಾಗಲ್ ಪ್ರೇಮಿ ತನ್ನ ಹುಡುಗಿಯ ಕತ್ತು ಸೀಳಿದ್ದ.. ತಾನೇ ಕೊಲೆಗೈದ ಪ್ರೇಯಸಿಯ ಶವದ ಮುಂದೆ ಬಿಕ್ಕಿ ಬಿಕ್ಕಿ ಅಳ್ತಿರೋ ಈ ಪಾಗಲ್ ಪ್ರೇಮಿಯ ಹೆಸರು ದಿನಕರ ಬನಾಲಾ. ಆಂದ್ರಪ್ರದೇಶದ ಶ್ರೀಕಾಕುಲಂ ನ ನಿವಾಸಿಯಾಗಿರೋ ದಿನಕರ ಇದೇ ಲೀಲಾ ಪವಿತ್ರ ಎಂಬಾಕೆಯನ್ನ ಕಳೆದ ಐದು ವರ್ಷದಿಂದ ಪ್ರೀತಿಸ್ತಿದ್ದ. ನಿನ್ನೆ ಬೆಂಗಳೂರಿನ ಮುರುಗೇಶ್ ಪಾಳ್ಯದಲ್ಲಿ ಪ್ರೇಯಸಿ ಲೀಲಾಳನ್ನ 16 ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆಗೈದಿದ್ದ. ತನ್ನ ಜೀವದ ಜೀವ ಲೀಲಾಳನ್ನ ಕೊಂದ್ನಲ್ಲಾ ಅನ್ನೋ ಫೀಲಿಂಗ್ ನಲ್ಲೇ ಪ್ರೇಯಸಿಯ ಶವದ ಮುಂದೆಯೇ ಬಿಕ್ಕಿಬಿಕ್ಕಿ ಅಳ್ತಾ ಕೂತಿದ್ದ. ಸ್ಥಳಕ್ಕೆ ಬಂದ ಜೀವನ್ ಭೀಮಾನಗರ ಪೊಲೀಸ್ರು ಪ್ರೀತಿಯ ಕೊಲೆಗಾರನನ್ನು ಬಂಧಿಸಿ ವಿಚಾರಣೆ ಶುರುಹಚ್ಚಿಕೊಂಡಿದ್ರು. ಆರೋಪಿ ದಿನಕರ ಹಾಗೂ ಲೀಲಾ ಆಂದ್ರಪ್ರದೇಶ…
Author: Prajatv Kannada
ಉತ್ಸಾಹಿ ಯುವಕರ ತಂಡದಿಂದ ಮೂಡಿಬಂದಿರುವ ‘ಕಡಲತೀರದ ಭಾರ್ಗವ’ ಚಿತ್ರದ ಟ್ರೇಲರ್ ಮತ್ತು ಹಾಡುಗಳು ಈಗಾಗಲೇ ಪ್ರೇಕ್ಷಕರ ಗಮನ ಸೆಳೆದಿವೆ. ಈಗ ಚಿತ್ರವು ಇದೇ ಮಾರ್ಚ್ 03ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ‘ಕಡಲತೀರದ ಭಾರ್ಗವ’ ಎಂದರೆ ಮೊದಲಿಗೆ ನೆನಪಿಗೆ ಬರುವುದು ಡಾ. ಶಿವರಾಮ ಕಾರಂತರು. ಕನ್ನಡ ನಾಡಿನಲ್ಲಿ ಅವರು ‘ಕಡಲತೀರದ ಭಾರ್ಗವ’ ಎಂಬ ಬಿರುದಿನಿಂದಲೇ ಅವರು ಪ್ರಸಿದ್ಧರಾದವರು. ಆದರೆ, ಅವರಿಗೂ, ಈ ಚಿತ್ರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ, ಇದು ಅವರ ಜೀವನದ ಕಥೆಯಲ್ಲ ಎನ್ನುತ್ತಾರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿರುವ ಪನ್ನಗ ಸೋಮಶೇಖರ್. ಈ ಕುರಿತು ಮಾತನಾಡುವ ಅವರು, ‘ಕಡಲು ಎಂದರೆ ಅಂತ್ಯವಿಲ್ಲದ್ದು ಅಥವಾ ಅನಂತ ಎಂದರ್ಥ. ಆ ಕಡಲನ್ನು ನಮ್ಮ ಚಿತ್ರದಲ್ಲಿ ಒಂದು ವಿಷಯಕ್ಕೆ ಹೋಲಿಸಿದ್ದೇನೆ. ಇನ್ನು, ಭಾರ್ಗವರಾಮ ಅಥವಾ ಪರಶುರಾಮ ಎನ್ನುವುದು ನಮ್ಮ ಪುರಾಣಗಳಲ್ಲಿ ಬರುವ ಒಂದು ಪವರ್ಫುಲ್ ಪಾತ್ರ. ಇಲ್ಲಿ ನಾಯಕ ಭಾರ್ಗವ, ಪರಶುರಾಮನ ಗುಣಲಕ್ಷಣಗಳನ್ನು ಹೊಂದಿರುತ್ತಾನೆ. ಏನೇ ಆದರೂ ಗುರಿ ಸಾಧಿಸುತ್ತೇನೆ ಎಂಬ ಛಲದಿಂದ…
ಸ್ಯಾಂಡಲ್‌ವುಡ್ ಸ್ಟಾರ್ ನಿರ್ದೇಶಕ ಎ.ಹರ್ಷ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಇತ್ತೀಚೆಗೆ ಹರ್ಷ ನಿರ್ದೇಶನದ `ವೇದ’ ಚಿತ್ರದ ಸೂಪರ್ ಸಕ್ಸಸ್ ನಂತರ ಟಾಲಿವುಡ್‌ನತ್ತ ಮುಖ ಮಾಡಿದ್ದಾರೆ. ಸೀತಾರಾಮ ಕಲ್ಯಾಣ, ಭಜರಂಗಿ, ಭಜರಂಗಿ 2, ವೇದ, ಹೀಗೆ ಸಾಕಷ್ಟು ಸೂಪರ್ ಹಿಟ್ ಸಿನಿಮಾಗಳಿಗೆ ಎ.ಹರ್ಷ ನಿರ್ದೇಶನ ಮಾಡಿದ್ದಾರೆ. ಇತ್ತೀಚಿನ ಶಿವಣ್ಣ ನಟನೆಯ `ವೇದ’ ಚಿತ್ರ ಕನ್ನಡ ಮತ್ತು ತೆಲುಗು ಎರಡು ಭಾಷೆಯಲ್ಲೂ ರಿಲೀಸ್ ಆಗಿ ಕಮಾಲ್ ಮಾಡಿತ್ತು. ಭರ್ಜರಿ ಕಲೆಕ್ಷನ್ ಮಾಡುವ ಪರಭಾಷೆಯಲ್ಲೂ ವೇದ ಮಿಂಚಿತ್ತು. ಹೀಗಿರುವಾಗ ಪ್ರಶಾಂತ್ ನೀಲ್ ಅವರಂತೆಯೇ ತೆಲುಗು ಚಿತ್ರರಂಗದಲ್ಲಿ ಮಿಂಚಲು ಡೈರೆಕ್ಟರ್ ಹರ್ಷ ರೆಡಿಯಾಗಿದ್ದಾರೆ. ತೆಲುಗಿನ ಮಾಸ್ ಹೀರೋ ಗೋಪಿಚಂದ್‌ಗೆ ಹರ್ಷ ನಿರ್ದೇಶನ ಮಾಡ್ತಿದ್ದಾರೆ. `ವೇದ’ ಚಿತ್ರದ ಸಕ್ಸಸ್ ರೆಸ್ಪಾನ್ಸ್ ನೋಡಿ ನಟ ಗೋಪಿಚಂದ್ ಕೂಡ ಕಥೆ ಕೇಳಿ, ಎ. ಹರ್ಷ ಅವರಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ರಾಧ ಮೋಹನ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.
ಮೆಗಾಸ್ಟಾರ್ ಚಿರಂಜೀವಿ ಹಾಗೂ ರಾಮ್ ಚರಣ್ ನಟನೆಯ `ಆಚಾರ್ಯ’ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಮಕಾಡೆ ಮಲಗಿತ್ತು. ಸಾಕಷ್ಟು ಅದ್ದೂರಿ ಬಜೆಟ್ ನಲ್ಲಿ ನಿರ್ಮಾಣವಾದ ಆಚಾರ್ಯ ಸಿನಿಮಾಗಾಗಿ 20 ಕೋಟಿ ವೆಚ್ಚದ ಸೆಟ್‌ನ್ನ ನಿರ್ಮಾಣ ಮಾಡಲಾಗಿತ್ತು. ಆದರೆ ಇದೀಗ ಈ ಸೆಟ್ ಬೆಂಕಿಗಾಹುತಿ ಆಗಿದೆ. ಕೊರಟಾಲ ಶಿವ ನಿರ್ದೇಶನದ `ಆಚಾರ್ಯ’ ಚಿತ್ರದಲ್ಲಿ ಚಿರಂಜೀವಿ, ರಾಮ್ ಚರಣ್ ಲೀಡ್ ರೋಲ್‌ನಲ್ಲಿ ನಟಿಸಿದ್ದರು. ಬಹುಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣ ಮಾಡಿದ್ದರು. ಚಿರಂಜೀವಿ ಅವರ ಖಾಸಗಿ ಜಾಗದಲ್ಲಿ 20 ಕೋಟಿ ರೂಪಾಯಿ ವೆಚ್ಚದ ದೇವಸ್ಥಾನದ ಪಟ್ಟಣದ ಅದ್ದೂರಿ ಸೆಟ್ ಕೂಡ ನಿರ್ಮಾಣ ಮಾಡಲಾಗಿತ್ತು. 20 ಎಕರೆ ಜಾಗದಲ್ಲಿ ನಿರ್ಮಾಣ ಮಾಡಲಾಗಿದ್ದು, ಇದೀಗ ಈ ಸೆಟ್‌ಗೆ ಬೆಂಕಿ ಬಿದ್ದಿದೆ. ಮುಂದೆ ತಮ್ಮ ಸಿನಿಮಾ ನಂತರ ಬೇರೆ ಚಿತ್ರದ ಶೂಟಿಂಗ್‌ಗೂ ಕೊಡಬಹುದು ಎಂಬ ಕಾರಣಕ್ಕೆ ಈ ಸೆಟ್‌ನ್ನ ಹಾಗೆಯೇ ಇರಿಸಲಾಗಿತ್ತು. ಕೆಲವರು ಈ ಜಾಗದಲ್ಲಿ ಸಿಗರೇಟ್ ಸೇದಿದ್ದು, ಅವರು ಎದ್ದು ಹೋದ ಮೇಲೆ ಸೆಟ್‌ಗೆ ಬೆಂಕಿ ತಗುಲಿದೆ ಎನ್ನಲಾಗುತ್ತಿದೆ. ತಕ್ಷಣ ಅಗ್ನಿಶಾಮಕ…
ಜಿನೇವಾ: ವಿಶ್ವಸಂಸ್ಥೆಯ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಹಕ್ಕುಗಳ ಮಹಾಸಭೆಯಲ್ಲಿ ಸ್ವಘೋಷಿತ ದೇವಮಾನವ ಹಾಗೂ ಕೈಲಾಸ ದೇಶದ ಸಂಸ್ಥಾಪಕ ಸ್ವಾಮಿ ನಿತ್ಯಾನಂದನ ಕೈಲಾಸ ದೇಶದ ಪ್ರತಿನಿಧಿ ಭಾಗವಹಿಸಿದ್ದರು ಎನ್ನಲಾಗಿದೆ. ಇತ್ತಿಚೆಗೆ ವಿಶ್ವಸಂಸ್ಥೆ ವತಿಯಿಂದ ಜಿನೇವಾದಲ್ಲಿ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಹಕ್ಕುಗಳ ಮಹಾಸಭೆ ನಡೆದಿದ್ದು, ಈ ಸಭೆಯಲ್ಲಿ ಅಮೆರಿಕ, ಯುಕೆ, ಸ್ಲೊವೇನಿಯಾ, ಫ್ರಾನ್ಸ್ ಮುಂತಾದ ಕಡೆಗಳಲ್ಲಿ ನಿತ್ಯಾನಂದ ಆಶ್ರಮಗಳನ್ನು ನಡೆಸುತ್ತಿರುವ ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸದ ಮಹಿಳಾ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಸ್ವಘೋಷಿತ ದೇವಮಾನವ, ಕಾಲ್ಪನಿಕ ʼಕೈಲಾಸʼ ರಾಷ್ಟ್ರದ ಸೂತ್ರಧಾರಿ, ಅತ್ಯಾಚಾರ ಆರೋಪಿ ಸ್ವಾಮಿ ನಿತ್ಯಾನಂದನ ಜಿನೀವಾದಲ್ಲಿ ನಡೆದ ವಿಶ್ವಸಂಸ್ಥೆ ಸಭೆಯೊಂದರಲ್ಲಿ ತನ್ನ ಪ್ರತಿನಿಧಿಗಳು ಭಾಗವಹಿಸಿದ್ದಾರೆ ಎಂದು ಹೇಳಿಕೊಂಡಿದ್ದಾನೆ. ನಿತ್ಯಾನಂದ ತನ್ನ ದ್ವೀಪವನ್ನು ʼಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸʼ ಎಂದು ಕರೆದುಕೊಂಡಿದ್ದಾನೆ. ಈ ದ್ವೀಪಕ್ಕೆ ವಿಶ್ವಸಂಸ್ಥೆ ರಾಷ್ಟ್ರದ ಸ್ಥಾನಮಾನ ನೀಡಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ಈತನ ದ್ವೀಪ ಎಲ್ಲಿದೆ ಎಂಬುದೂ ಖಚಿತವಾಗಿಲ್ಲ. ಅತ್ಯಾಚಾರ ಆರೋಪ ಹೊತ್ತು ಭಾರತ ಬಿಟ್ಟು ಪರಾರಿಯಾಗಿರುವ ನಿತ್ಯಾನಂದನ ಕಾಲ್ಪನಿಕ ದೇಶ…
ಸೂರ್ಯೋದಯ: 06.36 AM, ಸೂರ್ಯಾಸ್ತ : 06.28 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078 ಫಾಲ್ಗುಣ ಮಾಸ, ಶಿಶಿರ ಋತು,ಶುಕ್ಲ ಪಕ್ಷ, ಉತ್ತರಾಯಣ ತಿಥಿ: ಇವತ್ತು ನವಮಿ 04:18 AM ತನಕ ನಂತರ ದಶಮಿ ನಕ್ಷತ್ರ: ಇವತ್ತು ಮೃಗಶಿರ 09:52 AM ತನಕ ನಂತರ ಆರ್ದ್ರಾ ಯೋಗ: ಇವತ್ತು ಪ್ರೀತಿ 05:02 PM ತನಕ ನಂತರ ಆಯುಷ್ಮಾನ್ ಕರಣ: ಇವತ್ತು ಕೌಲವ 04:18 AM ತನಕ ನಂತರ ತೈತಲೆ 05:26 PM ತನಕ ನಂತರ ಗರಜ ರಾಹು ಕಾಲ: 12:00 ನಿಂದ 01:30 ವರೆಗೂ ಯಮಗಂಡ: 07:30 ನಿಂದ 09:00 ವರೆಗೂ ಗುಳಿಕ ಕಾಲ: 10:30 ನಿಂದ 12:00 ವರೆಗೂ ಅಮೃತಕಾಲ: 12.08 AM to 01.54 AM ಅಭಿಜಿತ್ ಮುಹುರ್ತ: ಇಲ್ಲ ಜಾತಕ ಆಧಾರದ ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ,…
ಸರ್ಕಾರಿ ನೌಕರರ ಬೇಡಿಕೆಗಳಾದ ವೇತನ, ಭತ್ಯೆಗಳ ಪರಿಷ್ಕರಣೆ ಹಾಗೂ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಸಂಬಂಧ ಫೆಬ್ರವರಿ 21 ರಂದು ನಡೆದ ರಾಜ್ಯ ಕಾರ್ಯಕಾರಣಿ ಮತ್ತು ವೃಂದ ಸಂಘಗಳ ಸಭೆಯಲ್ಲಿ ಕೈಗೊಂಡ ಸರ್ವಾನುಮತದ ತೀರ್ಮಾನದಂತೆ ಸರ್ಕಾರಿ ಅಧಿಕಾರಿಗಳು, ನೌಕರರು ಮಾರ್ಚ್ 1 ಇಂದಿನಿಂದ ಕರ್ತವ್ಯಕ್ಕೆ ಗೈರಾಗಿ ಅನಿರ್ದಿಷ್ಟಾವಧಿ ಮುಷ್ಕರ. ವೇತನ ಪರಿಷ್ಕರಣೆಗೆ ಸಂಬಂಧಿಸಿದ ಮಧ್ಯಂತರ ವರದಿಯನ್ನು 7ನೇ ವೇತನ ಆಯೋಗದಿಂದ ಶೀಘ್ರವಾಗಿ ಪಡೆದು ಕಳೆದ ಮೇ 1 ರಿಂದ ಜಾರಿಗೆ ಬರುವಂತೆ ಶೇ.40 ರಷ್ಟು ವೇತನ ಹೆಚ್ಚಳ ಮಾಡಿ ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಮುಷ್ಕರ ನಿರತರ ಒತ್ತಾಯವಾಗಿದೆ.
ಭಕ್ತಾಧಿಗಳು ತಮ್ಮ ಇಷ್ಟಾರ್ಥಗಳ ಈಡೇರಿಕೆಗಾಗಿ ನಾನಾ ಬಗೆಯ ಹರಕೆಗಳನ್ನ ಸಲ್ಲಿಸುತ್ತಾರೆ.ಆದ್ರೆ ಗಣಿನಾಡು ಬಳ್ಳಾರಿ ನಗರದ ಕನಕದುರ್ಗಮ್ಮ ದೇವಿಯ ಸಿಡಿಬಂಡಿ ರಥೋತ್ಸವದಲ್ಲಿ ಭಕ್ತಾಧಿಗಳು ತಮ್ಮ ಇಷ್ಟಾರ್ಥಗಳ ಸಿದ್ದಿಗಾಗಿ ಕೋಳಿಗಳನ್ನ ಎಸೆಯುತ್ತಾರೆ.ಬಳ್ಳಾರಿ ನಗರದ ಸಿಡಿಬಂಡಿ ಉತ್ಸವದ ವೈಭವ ಹೇಗಿತ್ತು ಬನ್ನಿ ನೋಡೋಣ… ಭಾರಿ ಜನಸಾಗರದಲ್ಲಿ ಸಿಡಿಬಂಡಿ ಉತ್ಸವ….ಇಷ್ಟಾರ್ಥ ಸಿದ್ದಿಗಾಗಿ ಭಕ್ತರಿಂದ ನಾನಾ ಬಗೆಯ ಹರಕೆ…ಸಿಡಿಬಂಡಿಗೆ ಕೋಳಿ ಎಸೆದು ಹರಕೆ ತೀರಿಸಿದ ಭಕ್ತರು…ಹೌದು ಬಳ್ಳಾರಿ ನಗರದ ಆದಿಶಕ್ತಿ ಕನಕದುರ್ಗಮ್ಮ ದೇವಿಯ ಸಿಡಿಬಂಡಿ ರಥೋತ್ಸವದಲ್ಲಿ ಕಂಡು ಬಂದ ದೃಶ್ಯಗಳಿವು. ಪ್ರತಿವರ್ಷದಂತೆ ನಡೆಯುವ ಸಿಡಿಬಂಡಿ ರಥೋತ್ಸವದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸಿ, ದೇವಿಯ ಕೃಪೆಗೆ ಪಾತ್ತರಾದ್ರು.ಕಿಕ್ಕಿರಿದು ಸೇರಿದ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸಿಡಿಬಂಡಿ ರಥೋತ್ಸವ ನಡೆಯಿತು.ಈ ರಥೋತ್ಸವ ದೇವಸ್ಥಾನದ ಸುತ್ತ ಮೂರು ಸಲ ಪ್ರದಕ್ಷಿಣೆ ಹಾಕಲಾಗುತ್ತದೆ. ಶೃಂಗರಗೊಂಡ ಎತ್ತುಗಳ ಸಿಡಿಬಂಡಿ ರಥೋತ್ಸವವನ್ನ ಎಳೆಯುತ್ತವೆ.ಈ ವೇಳೆ ಭಕ್ತಾಧಿಗಳು ತಮ್ಮ ಇಷ್ಟಾರ್ಥ ಈಡೇರಿಕೆಗಾಗಿ ಹರಕೆಗಳನ್ನ ಸಲ್ಲಿಸುತ್ತಾರೆ. ಕೆಲವರು ಸಿಡಿಬಂಡಿಗೆ ಕೋಳಿಗಳನ್ನ ಎಸೆಯುತ್ತಾರೆ.ಸಿಡಿಬಂಡಿ ರಥೋತ್ಸವಕ್ಕೆ ಕೋಳಿ ಎಸೆಯುವುದ್ರಿಂದ ಇಷ್ಟಾರ್ಥಗಳು ಈಡೇರಿಕೆಯಾಗುತ್ತವೆ ಅನ್ನೋದು ಭಕ್ತರ ನಂಬಿಕೆ.…
ನವದೆಹಲಿ: ಸಚಿವ ಸ್ಥಾನಕ್ಕೆ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಗಳನ್ನು ಸಿಎಂ ಅರವಿಂದ್ ಕೇಜ್ರಿವಾಲ್ ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ. ಅಬಕಾರಿ ಹಗರಣದಲ್ಲಿ ಬಂಧನಕ್ಕೀಡಾಗಿರುವ ಮನೀಶ್ ಸಿಸೋಡಿಯಾ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೊಳಗಾಗಿರುವ ಎಎಪಿ ಸರ್ಕಾರದ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ತಿಹಾರ್ ಜೈಲಿನಲ್ಲಿದ್ದಾರೆ. ಇದೀಗ ಇಬ್ಬರೂ ಸಚಿವರು ತನ್ನ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಇಬ್ಬರ ರಾಜಿನಾಮೆಯನ್ನು ಸಿಎಂ ಅರವಿಂದ್ ಕೇಜ್ರಿವಾಲ್ ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ. ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಈ ಇಬ್ಬರು ಸಚಿವರ ರಾಜೀನಾಮೆಗೆ ಬಿಜೆಪಿಯಿಂದ ನಿರಂತರ ಬೇಡಿಕೆ ಇತ್ತು. ಏತನ್ಮಧ್ಯೆ, ದೆಹಲಿ ಸರ್ಕಾರದಲ್ಲಿ ಈ ದೊಡ್ಡ ಪುನಾರಚನೆ ನಡೆದಿದ್ದು, ಮಾಹಿತಿ ಪ್ರಕಾರ ಮನೀಶ್ ಸಿಸೋಡಿಯಾ ಅವರ ಇಲಾಖೆಗಳನ್ನು ಕೈಲಾಶ್ ಗೆಹ್ಲೋಟ್ ಮತ್ತು ರಾಜ್ ಕುಮಾರ್ ಆನಂದ್ ಅವರಿಗೆ ನೀಡುವ ಸಾಧ್ಯತೆ ಇದೆ.
ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯಲ್ಲಿ ರೈಲು ಸ್ಫೋಟ ಪ್ರಕರಣದಲ್ಲಿ ಉತ್ತರ ಪ್ರದೇಶದ ವಿಶೇಷ ಎನ್ಐಎ ಕೋರ್ಟ್ ನ ತೀರ್ಪು ಇಂದು ಹೊರಬಿದ್ದಿದ್ದು ಎಂಟು ಅಪರಾಧಿಗಳ ಪೈಕಿ ಏಳು ಮಂದಿಗೆ ಮರಣದಂಡನೆ ವಿಧಿಸಲಾಗಿದ್ದು, ಒಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಆರು ವರ್ಷಗಳ ಹಿಂದೆ ಶಾಜಾಪುರ ಸಮೀಪದ ಜಬ್ಡಿ ರೈಲು ನಿಲ್ದಾಣದಲ್ಲಿ ಭೋಪಾಲ್-ಉಜ್ಜಯಿನಿ ಪ್ಯಾಸೆಂಜರ್ ರೈಲಿನಲ್ಲಿ ಸ್ಫೋಟ ಸಂಭವಿಸಿತ್ತು. ಇದರಲ್ಲಿ ಒಂಬತ್ತು ಮಂದಿ ಗಾಯಗೊಂಡಿದ್ದರು. ಮಾಹಿತಿಯ ಪ್ರಕಾರ, ಆರು ವರ್ಷಗಳ ಹಿಂದೆ ಮಧ್ಯಪ್ರದೇಶದ ಶಾಜಾಪುರ ಬಳಿಯ ಜಬ್ರಿ ರೈಲು ನಿಲ್ದಾಣದಲ್ಲಿ ಬೆಳಿಗ್ಗೆ 9.38ಕ್ಕೆ ಭೋಪಾಲ್-ಉಜ್ಜಯಿನಿ ಪ್ಯಾಸೆಂಜರ್ ರೈಲಿನಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಈ ಘಟನೆಯಲ್ಲಿ 9 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ರೈಲಿನಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಜನರು ರೈಲಿನಿಂದ ಜಿಗಿದಿದ್ದು, ಅನೇಕ ಪ್ರಯಾಣಿಕರು ಗಾಯಗೊಂಡಿದ್ದರು. ಈ ಘಟನೆಯ ತನಿಖೆಯನ್ನು ಎನ್‌ಐಎಗೆ ವಹಿಸಲಾಗಿತ್ತು. ಈ ಪ್ರಕರಣ ವಿಚಾರಣೆ ಲಖನೌದ NIA ನ್ಯಾಯಾಲಯದಲ್ಲಿ ನಡೆಯುತ್ತಿತ್ತು. ಕಳೆದ ಶುಕ್ರವಾರವೇ, ಎನ್‌ಐಎ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ವಿವೇಕಾನಂದ ಶರಣ್ ಪಾಂಡೆ ಅವರು…