ಸೂರ್ಯೋದಯ: 06.36 AM, ಸೂರ್ಯಾಸ್ತ : 06.28 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078 ಫಾಲ್ಗುಣ ಮಾಸ, ಶಿಶಿರ ಋತು,ಶುಕ್ಲ ಪಕ್ಷ, ಉತ್ತರಾಯಣ ತಿಥಿ: ಇವತ್ತು ನವಮಿ 04:18 AM ತನಕ ನಂತರ ದಶಮಿ ನಕ್ಷತ್ರ: ಇವತ್ತು ಮೃಗಶಿರ 09:52 AM ತನಕ ನಂತರ ಆರ್ದ್ರಾ ಯೋಗ: ಇವತ್ತು ಪ್ರೀತಿ 05:02 PM ತನಕ ನಂತರ ಆಯುಷ್ಮಾನ್ ಕರಣ: ಇವತ್ತು ಕೌಲವ 04:18 AM ತನಕ ನಂತರ ತೈತಲೆ 05:26 PM ತನಕ ನಂತರ ಗರಜ ರಾಹು ಕಾಲ: 12:00 ನಿಂದ 01:30 ವರೆಗೂ ಯಮಗಂಡ: 07:30 ನಿಂದ 09:00 ವರೆಗೂ ಗುಳಿಕ ಕಾಲ: 10:30 ನಿಂದ 12:00 ವರೆಗೂ ಅಮೃತಕಾಲ: 12.08 AM to 01.54 AM ಅಭಿಜಿತ್ ಮುಹುರ್ತ: ಇಲ್ಲ ಜಾತಕ ಆಧಾರದ ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ,…
Author: Prajatv Kannada
ಸರ್ಕಾರಿ ನೌಕರರ ಬೇಡಿಕೆಗಳಾದ ವೇತನ, ಭತ್ಯೆಗಳ ಪರಿಷ್ಕರಣೆ ಹಾಗೂ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಸಂಬಂಧ ಫೆಬ್ರವರಿ 21 ರಂದು ನಡೆದ ರಾಜ್ಯ ಕಾರ್ಯಕಾರಣಿ ಮತ್ತು ವೃಂದ ಸಂಘಗಳ ಸಭೆಯಲ್ಲಿ ಕೈಗೊಂಡ ಸರ್ವಾನುಮತದ ತೀರ್ಮಾನದಂತೆ ಸರ್ಕಾರಿ ಅಧಿಕಾರಿಗಳು, ನೌಕರರು ಮಾರ್ಚ್ 1 ಇಂದಿನಿಂದ ಕರ್ತವ್ಯಕ್ಕೆ ಗೈರಾಗಿ ಅನಿರ್ದಿಷ್ಟಾವಧಿ ಮುಷ್ಕರ. ವೇತನ ಪರಿಷ್ಕರಣೆಗೆ ಸಂಬಂಧಿಸಿದ ಮಧ್ಯಂತರ ವರದಿಯನ್ನು 7ನೇ ವೇತನ ಆಯೋಗದಿಂದ ಶೀಘ್ರವಾಗಿ ಪಡೆದು ಕಳೆದ ಮೇ 1 ರಿಂದ ಜಾರಿಗೆ ಬರುವಂತೆ ಶೇ.40 ರಷ್ಟು ವೇತನ ಹೆಚ್ಚಳ ಮಾಡಿ ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಮುಷ್ಕರ ನಿರತರ ಒತ್ತಾಯವಾಗಿದೆ.
ಭಕ್ತಾಧಿಗಳು ತಮ್ಮ ಇಷ್ಟಾರ್ಥಗಳ ಈಡೇರಿಕೆಗಾಗಿ ನಾನಾ ಬಗೆಯ ಹರಕೆಗಳನ್ನ ಸಲ್ಲಿಸುತ್ತಾರೆ.ಆದ್ರೆ ಗಣಿನಾಡು ಬಳ್ಳಾರಿ ನಗರದ ಕನಕದುರ್ಗಮ್ಮ ದೇವಿಯ ಸಿಡಿಬಂಡಿ ರಥೋತ್ಸವದಲ್ಲಿ ಭಕ್ತಾಧಿಗಳು ತಮ್ಮ ಇಷ್ಟಾರ್ಥಗಳ ಸಿದ್ದಿಗಾಗಿ ಕೋಳಿಗಳನ್ನ ಎಸೆಯುತ್ತಾರೆ.ಬಳ್ಳಾರಿ ನಗರದ ಸಿಡಿಬಂಡಿ ಉತ್ಸವದ ವೈಭವ ಹೇಗಿತ್ತು ಬನ್ನಿ ನೋಡೋಣ… ಭಾರಿ ಜನಸಾಗರದಲ್ಲಿ ಸಿಡಿಬಂಡಿ ಉತ್ಸವ….ಇಷ್ಟಾರ್ಥ ಸಿದ್ದಿಗಾಗಿ ಭಕ್ತರಿಂದ ನಾನಾ ಬಗೆಯ ಹರಕೆ…ಸಿಡಿಬಂಡಿಗೆ ಕೋಳಿ ಎಸೆದು ಹರಕೆ ತೀರಿಸಿದ ಭಕ್ತರು…ಹೌದು ಬಳ್ಳಾರಿ ನಗರದ ಆದಿಶಕ್ತಿ ಕನಕದುರ್ಗಮ್ಮ ದೇವಿಯ ಸಿಡಿಬಂಡಿ ರಥೋತ್ಸವದಲ್ಲಿ ಕಂಡು ಬಂದ ದೃಶ್ಯಗಳಿವು. ಪ್ರತಿವರ್ಷದಂತೆ ನಡೆಯುವ ಸಿಡಿಬಂಡಿ ರಥೋತ್ಸವದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸಿ, ದೇವಿಯ ಕೃಪೆಗೆ ಪಾತ್ತರಾದ್ರು.ಕಿಕ್ಕಿರಿದು ಸೇರಿದ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸಿಡಿಬಂಡಿ ರಥೋತ್ಸವ ನಡೆಯಿತು.ಈ ರಥೋತ್ಸವ ದೇವಸ್ಥಾನದ ಸುತ್ತ ಮೂರು ಸಲ ಪ್ರದಕ್ಷಿಣೆ ಹಾಕಲಾಗುತ್ತದೆ. ಶೃಂಗರಗೊಂಡ ಎತ್ತುಗಳ ಸಿಡಿಬಂಡಿ ರಥೋತ್ಸವವನ್ನ ಎಳೆಯುತ್ತವೆ.ಈ ವೇಳೆ ಭಕ್ತಾಧಿಗಳು ತಮ್ಮ ಇಷ್ಟಾರ್ಥ ಈಡೇರಿಕೆಗಾಗಿ ಹರಕೆಗಳನ್ನ ಸಲ್ಲಿಸುತ್ತಾರೆ. ಕೆಲವರು ಸಿಡಿಬಂಡಿಗೆ ಕೋಳಿಗಳನ್ನ ಎಸೆಯುತ್ತಾರೆ.ಸಿಡಿಬಂಡಿ ರಥೋತ್ಸವಕ್ಕೆ ಕೋಳಿ ಎಸೆಯುವುದ್ರಿಂದ ಇಷ್ಟಾರ್ಥಗಳು ಈಡೇರಿಕೆಯಾಗುತ್ತವೆ ಅನ್ನೋದು ಭಕ್ತರ ನಂಬಿಕೆ.…
ನವದೆಹಲಿ: ಸಚಿವ ಸ್ಥಾನಕ್ಕೆ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಗಳನ್ನು ಸಿಎಂ ಅರವಿಂದ್ ಕೇಜ್ರಿವಾಲ್ ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ. ಅಬಕಾರಿ ಹಗರಣದಲ್ಲಿ ಬಂಧನಕ್ಕೀಡಾಗಿರುವ ಮನೀಶ್ ಸಿಸೋಡಿಯಾ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೊಳಗಾಗಿರುವ ಎಎಪಿ ಸರ್ಕಾರದ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ತಿಹಾರ್ ಜೈಲಿನಲ್ಲಿದ್ದಾರೆ. ಇದೀಗ ಇಬ್ಬರೂ ಸಚಿವರು ತನ್ನ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಇಬ್ಬರ ರಾಜಿನಾಮೆಯನ್ನು ಸಿಎಂ ಅರವಿಂದ್ ಕೇಜ್ರಿವಾಲ್ ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ. ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಈ ಇಬ್ಬರು ಸಚಿವರ ರಾಜೀನಾಮೆಗೆ ಬಿಜೆಪಿಯಿಂದ ನಿರಂತರ ಬೇಡಿಕೆ ಇತ್ತು. ಏತನ್ಮಧ್ಯೆ, ದೆಹಲಿ ಸರ್ಕಾರದಲ್ಲಿ ಈ ದೊಡ್ಡ ಪುನಾರಚನೆ ನಡೆದಿದ್ದು, ಮಾಹಿತಿ ಪ್ರಕಾರ ಮನೀಶ್ ಸಿಸೋಡಿಯಾ ಅವರ ಇಲಾಖೆಗಳನ್ನು ಕೈಲಾಶ್ ಗೆಹ್ಲೋಟ್ ಮತ್ತು ರಾಜ್ ಕುಮಾರ್ ಆನಂದ್ ಅವರಿಗೆ ನೀಡುವ ಸಾಧ್ಯತೆ ಇದೆ.
ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯಲ್ಲಿ ರೈಲು ಸ್ಫೋಟ ಪ್ರಕರಣದಲ್ಲಿ ಉತ್ತರ ಪ್ರದೇಶದ ವಿಶೇಷ ಎನ್ಐಎ ಕೋರ್ಟ್ ನ ತೀರ್ಪು ಇಂದು ಹೊರಬಿದ್ದಿದ್ದು ಎಂಟು ಅಪರಾಧಿಗಳ ಪೈಕಿ ಏಳು ಮಂದಿಗೆ ಮರಣದಂಡನೆ ವಿಧಿಸಲಾಗಿದ್ದು, ಒಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಆರು ವರ್ಷಗಳ ಹಿಂದೆ ಶಾಜಾಪುರ ಸಮೀಪದ ಜಬ್ಡಿ ರೈಲು ನಿಲ್ದಾಣದಲ್ಲಿ ಭೋಪಾಲ್-ಉಜ್ಜಯಿನಿ ಪ್ಯಾಸೆಂಜರ್ ರೈಲಿನಲ್ಲಿ ಸ್ಫೋಟ ಸಂಭವಿಸಿತ್ತು. ಇದರಲ್ಲಿ ಒಂಬತ್ತು ಮಂದಿ ಗಾಯಗೊಂಡಿದ್ದರು. ಮಾಹಿತಿಯ ಪ್ರಕಾರ, ಆರು ವರ್ಷಗಳ ಹಿಂದೆ ಮಧ್ಯಪ್ರದೇಶದ ಶಾಜಾಪುರ ಬಳಿಯ ಜಬ್ರಿ ರೈಲು ನಿಲ್ದಾಣದಲ್ಲಿ ಬೆಳಿಗ್ಗೆ 9.38ಕ್ಕೆ ಭೋಪಾಲ್-ಉಜ್ಜಯಿನಿ ಪ್ಯಾಸೆಂಜರ್ ರೈಲಿನಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಈ ಘಟನೆಯಲ್ಲಿ 9 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ರೈಲಿನಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಜನರು ರೈಲಿನಿಂದ ಜಿಗಿದಿದ್ದು, ಅನೇಕ ಪ್ರಯಾಣಿಕರು ಗಾಯಗೊಂಡಿದ್ದರು. ಈ ಘಟನೆಯ ತನಿಖೆಯನ್ನು ಎನ್‌ಐಎಗೆ ವಹಿಸಲಾಗಿತ್ತು. ಈ ಪ್ರಕರಣ ವಿಚಾರಣೆ ಲಖನೌದ NIA ನ್ಯಾಯಾಲಯದಲ್ಲಿ ನಡೆಯುತ್ತಿತ್ತು. ಕಳೆದ ಶುಕ್ರವಾರವೇ, ಎನ್‌ಐಎ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ವಿವೇಕಾನಂದ ಶರಣ್ ಪಾಂಡೆ ಅವರು…
ಬೆಂಗಳೂರು: ಸರ್ಕಾರಿ ನೌಕರರ ಜೊತೆ ಸೌಹಾರ್ದಯುತ ಸಭೆ ನಡೆದಿದ್ದು ಸೌಹಾರ್ದಯುತವಾಗಿ ಸಮಸ್ಯೆ ಬಗೆ ಹರಿಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಜೊತೆ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಹಿರಿಯ ಅಧಿಕಾರಿಗಳ ಜೊತೆ ಹಾಗೂ ನೌಕರರ ಸಂಘದವರ ಜೊತೆ ಸುದೀರ್ಘ ಚರ್ಚೆ ನಡೆಸಿದ್ದೇವೆ. ಅವರು ಹಲವಾರು ವಿಷಯ ಪ್ರಸ್ತಾಪ ಮಾಡಿದ್ದಾರೆ. ಸಾಕಷ್ಟು ವಿಷಯ ಚರ್ಚೆಯಾಗಿದೆ. ಅವರು ಯಾವುದಾದರೂ ಒಂದು ತೀರ್ಮಾನಕ್ಕೆ ಬಂದಮೇಲೆ ನಮ್ಮ ಹಣಕಾಸಿನ ನಿರ್ಧಾರ ತೆಗೆದುಕೊಳ್ಳಲು ಅನುಕೂಲವಾಗಲಿದೆ. ನಮ್ಮ ಮಾತುಕತೆಯ ಆಧಾರದ ಮೇಲೆ ಮಾತುಕತೆ ಸೌಹಾರ್ದಯುತವಾಗಿ ಮುಕ್ತಾಯವಾಗುವ ವಿಶ್ಬಾಸ ಇದೆ. ಅವರು ಪದಾಧಿಕಾರಿಗಳ ಜೊತೆ ಚರ್ಚಿಸಿ ನಿರ್ಣಯ ತಿಳಿಸುವುದಾಗಿ ಹೇಳಿದ್ದಾರೆ. ಅವರ ನಿರ್ಣಯದ ಆಧಾರದ ಮೇಲೆ ನಾವು ಮಿರ್ಣಯ ಕೈಗೊಳ್ಳುತ್ತೇವೆ. ವೇತನ ಆಯೋಗಕ್ಕೆ ಆದಷ್ಟು ಬೇಗ ಮಧ್ಯಂತರ ವರದಿ ನೀಡುವಂತೆ ಕೇಳಿದ್ದೇವೆ. ಆದಷ್ಟು ಬೇಗ ವರದಿ ಬರುವ ವಿಶ್ವಾಸ ಇದೆ ಎಂದು ಹೇಳಿದರು. ಕೊವಿಡ್ ಸಮಯದಲ್ಲಿ ಸರ್ಕಾರ ಅವರ ಸಂಬಳ ಕಡಿತ ಮಾಡಿಲ್ಲ.…
ಬೆಂಗಳೂರು: ಏಳನೇ ಪರಿಷ್ಕೃತ ವೇತನ ಜಾರಿಗೆ ಆಗ್ರಹಿಸಿ ಇಂದಿನಿಂದ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಜೊತೆಗೆ ನಿನ್ನೆ ಸರ್ಕಾರಿ ನೌಕರರ ಸಂಧಾನ ಸಭೆ ವಿಫಲವಾದ ಕಾರಣ ನೌಕರರು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಹೀಗಾಗಿ ಇಂದು ಬಹುತೇಕ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಸರ್ಕಾರಿ ಕಚೇರಿಗಳು ಬಹುತೇಕ ಕಾರ್ಯಸ್ಥಗಿತವಾಗುವ ಸಾಧ್ಯತೆಯೂ ಇದೆ. ರಾಜ್ಯದ ಜನರಿಗೆ ಸರ್ಕಾರಿ ಸೇವೆಗಳು ಸಿಗುವುದು ಅನುಮಾನ. ಯಾಕೆಂದರೆ ಸುಮಾರು 10 ಲಕ್ಷ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರಾಗಿ ಆಕ್ರೋಶ ಹೊರಹಾಕಲಿದ್ದಾರೆ. ಸರ್ಕಾರದ ಯಾವುದೇ ಇಲಾಖೆಗಳು ಇಂದು ಕಾರ್ಯನಿರ್ವಹಿಸಲ್ಲ. ಸುಮಾರು 42 ಸರ್ಕಾರಿ ಇಲಾಖೆಗಳು ಮುಷ್ಕರಕ್ಕೆ ಬೆಂಬಲ ಸೂಚಿಸಿವೆ. ವಿಧಾನಸೌಧದ ಎಲ್ಲಾ ಕಚೇರಿಗಳು, ಸಚಿವಾಲಯದ ಎಲ್ಲಾ ಕಚೇರಿಗಳು, ಬಿಬಿಎಂಪಿ, ತಾಲೂಕು ಕಚೇರಿ, ಜಿಲ್ಲಾಧಿಕಾರಿ ಕಚೇರಿ, ಗ್ರಾಮ ಪಂಚಾಯಿತಿ, ಸರ್ಕಾರಿ ಶಾಲೆಗಳು, ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಪುರಸಭೆ, ಸರ್ಕಾರಿ ಹಾಸ್ಟೆಲ್ ಗಳು, ತಾಲೂಕು ಕಚೇರಿ, ಜಿಲ್ಲಾ ಕಚೇರಿ, ಆರೋಗ್ಯ ಇಲಾಖೆ, ಕಂದಾಯ ಇಲಾಖೆಗಳ…
ಹೊಸದಿಲ್ಲಿ: ಆಸ್ಟ್ರೇಲಿಯಾ ವಿರುದ್ದ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಲ್ಲಿ ಕೆ.ಎಲ್ ರಾಹುಲ್ ಬದಲು ಇನಿಂಗ್ಸ್ ಆರಂಭಿಸಲು ಶುಭಮನ್ ಗಿಲ್‌ಗೆ ಅವಕಾಶ ನೀಡಬೇಕೆಂದು ಭಾರತ ತಂಡದ ಮಾಜಿ ಕೋಚ್ ರವಿ ಶಾಸ್ತ್ರಿ ಹೇಳಿದ್ದಾರೆ. ಇತ್ತೀಚೆಗೆ ಸೀಮಿತ ಓವರ್‌ಗಳ ಸ್ವರೂಪದಲ್ಲಿ ಶುಭಮನ್ ಗಿಲ್ ಅದ್ಭುತ ಪ್ರದರ್ಶನ ತೋರಿದ್ದಾರೆ. ಒಂದು ದ್ವಿಶತಕ ಸೇರಿದಂತೆ ಹಲವು ಶತಕಗಳನ್ನು ಅವರು ಸಿಡಿಸಿದ್ದಾರೆ. ಆದರೆ, ಆಸ್ಟ್ರೇಲಿಯಾ ವಿರುದ್ದ ಆರಂಭಿಕ ಎರಡು ಪಂದ್ಯಗಳಿಗೆ ಕೆ.ಎಲ್ ರಾಹುಲ್‌ಗೆ ಅವಕಾಶ ನೀಡಲಾಗಿತ್ತು. ಆದರೆ, ಎರಡೂ ಪಂದ್ಯಗಳಲ್ಲಿ ರಾಹುಲ್ ಗಳಿಸಿದ್ದು ಕೇವಲ 38 ರನ್ ಮಾತ್ರ. ಈ ಹಿನ್ನೆಲೆಯಲ್ಲಿ ಮೂರನೇ ಟೆಸ್ಟ್ ಪಂದ್ಯದಲ್ಲಿ ಕೆ.ಎಲ್ ರಾಹುಲ್ ಬದಲು ಶುಭಮನ್ ಗಿಲ್‌ಗೆ ಅವಕಾಶ ನೀಡಬೇಕೆಂದು ಹಲವು ಮಾಜಿ ಆಟಗಾರರು ಆಗ್ರಹಿಸಿದ್ದಾರೆ. ಅದರಂತೆ ಇದೀಗ ಟೀಮ್ ಇಂಡಿಯಾ ಮಾಜಿ ಕೋಚ್ ರವಿ ಶಾಸ್ತ್ರಿ ಕೂಡ ಇದೇ ಅಭಿಪ್ರಾಯವನ್ನು ಹೊರ ಹಾಕಿದ್ದಾರೆ. ಐಸಿಸಿ ರಿವ್ಯೂವ್ ಇತ್ತೀಚೆಗೆ ಆವೃತ್ತಿಯಲ್ಲಿ ಮಾತನಾಡಿದ್ದ ರವಿ ಶಾಸ್ತ್ರಿ, “ಪ್ರಸ್ತುತ ಶುಭಮನ್ ಗಿಲ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ.…
ಬೆಂಗಳೂರು; ಕಳೆದ ವರ್ಷ ಡಿಸೆಂಬರ್ 29ರಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾದ ಟೀಮ್ ಇಂಡಿಯಾದ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್, ಸಂಪೂರ್ಣ ಗುಣಮುಖರಾಗಿ ಟೀಮ್ ಇಂಡಿಯಾ ಪರ ಮರಳಿ ಆಡುವಂತ್ತಾಗಲು ಕನಿಷ್ಠ ಎರಡು ವರ್ಷಗಳಾದರೂ ಬೇಕಾಗುತ್ತದೆ ಎಂದು ಬಿಸಿಸಿಐನ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಪಂತ್ ಅಲಭ್ಯತೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಭಾರಿ ಹಿನ್ನಡೆ ತಂದೊಡ್ಡಿದೆ. ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ದಿಲ್ಲಿ ಫ್ರಾಂಚೈಸಿ ಪರ ಮೆಂಟರ್ ಆಗಿ ಸೇವೆ ಸಲ್ಲಿಸಲಿರುವ ಸೌರವ್, ಈ ಸಂದರ್ಭದಲ್ಲಿ ಪಂತ್ ಸ್ಥತಿಗತಿ ಬಗ್ಗೆ ಬೆಳಕು ಚೆಲ್ಲಿದ್ದಾರೆ. ರಿಷಭ್ ಅಲಭ್ಯತೆ ನಡುವೆ ಆಸ್ಟ್ರೇಲಿಯಾದ ಅನುಭವಿ ಓಪನರ್ ಡೇವಿಡ್ ವಾರ್ನರ್ ತಂಡದ ಸಾರಥ್ಯ ವಹಿಸಿಕೊಂಡಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ರಿಷಭ್ ಪಂತ್ ಸ್ಥಾನವನ್ನು ತುಂಬಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ. ಅವರ ಜಾಗದಲ್ಲಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಆಗಿ ಆಡುವ 11ರ ಬಳಗ ಸೇರುವವರು ಯಾರು? ಎಂಬುದರ ಬಗ್ಗೆ…
ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪಗೆ (BS Yediyurappa) ಬಿಜೆಪಿ ಕೇಂದ್ರ ನಾಯಕರು ಕೊಟ್ಟ ನೋವಿನ ಬಗ್ಗೆ ಪ್ರಧಾನಿ ಮೋದಿ (Narendra Modi) ಅವರು ಮಾತಾಡಬೇಕು ಅಂತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಆಗ್ರಹಿಸಿದರು. ಶಿವಮೊಗ್ಗ ವಿಮಾನ ನಿಲ್ದಾಣ (Shivamogga Airport) ಉದ್ಘಾಟನಾ ಕಾರ್ಯಕ್ರಮದಲ್ಲಿ ಮೋದಿ ಅವರು ಬಿಎಸ್‌ವೈರನ್ನ ಹಾಡಿ ಹೊಗಳಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಎಸ್‌ವೈಗೆ ಈಗ ತೋರಿದ ನಮ್ರತೆ ಇಷ್ಟು ದಿನ ಎಲ್ಲಿ ಹೋಗಿತ್ತು? ಅವರ ಕಣ್ಣಲ್ಲಿ ನೀರು ಹಾಕಿಸಿ ಅಧಿಕಾರದಿಂದ ಕೆಳಗೆ ಇಳಿಸಿದ್ದು ಯಾಕೆ? ಎಂಬುದರ ಬಗ್ಗೆ ಪ್ರಧಾನಿಗಳು ಸ್ಪಷ್ಟನೆ ನೀಡಲಿ ಎಂದು ಒತ್ತಾಯಿಸಿದರು. ಮೋದಿ ಈ ದೇಶದ ಪ್ರಧಾನಿ, ನಾವು ಅವರನ್ನ ಗೌರವಿಸುತ್ತೇವೆ. ಆದರೆ ಬಿಜೆಪಿಯಲ್ಲಿ ಬಿಎಸ್‌ವೈ ಅವರಿಗೆ ಕೊಟ್ಟ ನೋವು, ವಿಧಾನಸೌಧದಿಂದ ರಾಜ್ಯಪಾಲರ ಮನೆವರೆಗೂ ಕಣ್ಣೀರು ಹಾಕಿಕೊಂಡೇ ಹೋಗಿ ರಾಜೀನಾಮೆ ನೀಡಿದ್ರಲ್ಲ, ಆ ಬಗ್ಗೆ ಮೋದಿ ಅವರು ಮಾತನಾಡಬೇಕು. ಯಡಿಯೂರಪ್ಪ, ಅವರ ಕುಟುಂಬದ ಸದಸ್ಯರು, ಆಪ್ತರ ಮೇಲೆ ಇ.ಡಿ (ED) ದಾಳಿ ನೋಟೀಸ್ ನೀಡಿರುವ ಬಗ್ಗೆ,…