ನವದೆಹಲಿ: ಒಂದೇ ದಿನ ತಜಕಿಸ್ತಾನ ಮತ್ತು ಅಫ್ಘಾನಿಸ್ತಾನ ಸೇರಿದಂತೆ ಭಾರತದ ಮಣಿಪುರದಲ್ಲೂ ಭೂಮಿ ಕಂಪಿಸಿರುವ ಕುರಿತು ವರದಿಯಾಗಿದೆ. ಇಂದು(ಮಂಗಳವಾರ ಮುಂಜಾನೆ ತಜಕಿಸ್ತಾನದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದರೆ, ಅಫ್ಘಾನಿಸ್ತಾನದಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. ಈ ನಡುವೆ ಭಾರತದ ಮಣಿಪುರದ ನೋನಿಯಲ್ಲಿ ನಸುಕಿನ ಜಾವ 2.46ರ ಸುಮಾರಿಗೆ 3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಎನ್‌ಸಿಎಸ್ ತಿಳಿಸಿದೆ. ಭೂಕಂಪದಿಂದಾದ ಹಾನಿಯ ಬಗ್ಗೆ ಯಾವುದೇ ವರದಿಯಾಗಿಲ್ಲ.
Author: Prajatv Kannada
ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಮಂಗಳವಾರ ಮುಂಜಾನೆ ಟಿಎಂಸಿಯ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಪ್ರೊಫೈಲ್ ಫೋಟೋ ಮತ್ತು ಹೆಸರನ್ನು ಬದಲಾಯಿಸಲಾಗಿದೆ ಹ್ಯಾಕರ್‌ಗಳು ಟಿಎಂಸಿಯ ಪ್ರೊಫೈಲ್ ಚಿತ್ರ ಮತ್ತು ಹೆಸರನ್ನು ಬದಲಾಯಿಸಿದ್ದಾರೆ. ಪ್ರೊಫೈಲ್‌ನಲ್ಲಿ ಟಿಎಂಸಿ ಬದಲಿಗೆ ಯುಗಾ ಲ್ಯಾಬ್ಸ್ ಎಂದು ಬರೆಯಲಾಗಿದೆ. ಈ ಬಗ್ಗೆ ಟಿಎಂಸಿ ನಾಯಕರಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.ಹ್ಯಾಕ್ ಆದ ಬಳಿಕ ಯಾವುದೇ ಹೊಸ ಟ್ವೀಟ್ನ್ನು ಪೋಸ್ಟ್ ಮಾಡಿಲ್ಲ, ಈ ಬಗ್ಗೆ ಟ್ವಿಟ್ಟರ್ಗೆ ಮಾಹಿತಿ ನೀಡಲಾಗಿದ್ದು, ಸರಿಪಡಿಸುವಂತೆ ಕೇಳಿಕೊಳ್ಳಲಾಗಿದೆ. ಇದು 2020 ರ ಪ್ರಕರಣಕ್ಕೆ ಹೋಲುತ್ತದೆ, ಇದರಲ್ಲಿ ಯುಎಸ್‌ನ ಹಲವಾರು ಪ್ರಮುಖ ವ್ಯಕ್ತಿಗಳ ಟ್ವಿಟರ್ ಹ್ಯಾಂಡಲ್‌ಗಳು ಹ್ಯಾಕ್ ಆಗಿದ್ದವು.
ನವದೆಹಲಿ: ಮದ್ಯ ಹಗರಣ ಪ್ರಕರಣದಲ್ಲಿ ತಮ್ಮ ಬಂಧನ ಮತ್ತು ಸಿಬಿಐ ತನಿಖೆಯ ವಿಧಾನವನ್ನು ಪ್ರಶ್ನಿಸಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ತುರ್ತು ವಿಚಾರಣೆಗಾಗಿ 10.30 ಕ್ಕೆ ಸಿಜೆಐ ಮುಂದೆ ವಿಷಯವನ್ನು ಪ್ರಸ್ತಾಪಿಸುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ. ಮನೀಶ್ ಸಿಸೋಡಿಯಾ ಇಂದು ತಮ್ಮನ್ನು ಸಿಬಿಐ ಬಂಧಿಸಿರುವುದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಸಿಸೋಡಿಯಾ ಪರ ವಕೀಲ ಅಭಿಷೇಕ್ ಸಿಂಘ್ವಿ ಅವರ ವಾದವನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ನೇರವಾಗಿ ಸುಪ್ರೀಂ ಕೋರ್ಟ್‌ಗೆ ಬರುವ ಮೊದಲು ಏಕೆ ಹೈಕೋರ್ಟ್‌ಗೆ ಹೋಗಲಿಲ್ಲ ಎಂದು ಕೇಳಿದರು. ವಿನೋದ್ ದುವಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಸಿಸೋಡಿಯಾ ಸುಪ್ರೀಂ ಕೋರ್ಟ್‌ಗೆ ಸಂಪರ್ಕಿಸಲು ಸಿಂಘ್ವಿ ಕಾರಣವೆಂದು ಉಲ್ಲೇಖಿಸಿದ್ದಾರೆ. ಇದಾದ ಬಳಿಕ, ಮಧ್ಯಾಹ್ನ 3.50ಕ್ಕೆ ವಿಚಾರಣೆ ನಡೆಸುವುದಾಗಿ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ದೆಹಲಿ ನ್ಯಾಯಾಲಯವು ನಿನ್ನೆ ಕೇಂದ್ರೀಯ ತನಿಖಾ ದಳದ (ಸಿಬಿಐ) ಐದು ದಿನಗಳ ಕಸ್ಟಡಿಗೆ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi ) ಅವರ ಸಹೋದರ ಪ್ರಹ್ಲಾದ್ ಮೋದಿ (Prahlad Modi) ಚೆನ್ನೈನ ಅಯನಂಬಾಕ್ಕಂ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪ್ರಹ್ಲಾದ್ ಮೋದಿ ಪ್ರಧಾನಿ ನರೇಂದ್ರ ಮೋದಿಯವರ ಕಿರಿಯ ಸಹೋದರ. ಪ್ರಹ್ಲಾದ್ ಮೋದಿ ಮೂತ್ರಪಿಂಡದಲ್ಲಿ ಸಮಸ್ಯೆ ಉಂಟಾಗಿದ್ದು. ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಪ್ರಧಾನಿ ಮೋದಿಯವರ ಸಹೋದರ ಮತ್ತು ಅವರು ಪ್ರಯಾಣಿಸುತ್ತಿದ್ದ ಕಾರು ಕರ್ನಾಟಕದ ಮೈಸೂರಿನಲ್ಲಿ ಅಪಘಾತಕ್ಕೀಡಾದ ನಂತರ ಕುಟುಂಬ ಸದಸ್ಯರು ಗಾಯಗೊಂಡಿದ್ದಾರೆ. ಪ್ರಹ್ಲಾದ್ ಮೋದಿ ಅವರು ಪತ್ನಿ, ಮಗ, ಸೊಸೆ ಮತ್ತು ಮೊಮ್ಮಗನೊಂದಿಗೆ ಬಂಡೀಪುರಕ್ಕೆ ಪ್ರಯಾಣಿಸುತ್ತಿದ್ದಾಗ ಅವರ ಮರ್ಸಿಡಿಸ್ ಬೆಂಜ್ ಎಸ್‌ಯುವಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.
ಉತ್ತರ ಕನ್ನಡ: ರಾಜ್ಯದಲ್ಲಿ ಬಿಜೆಪಿ ವಿರುದ್ಧ ಪೋಸ್ಟರ್ ಅಭಿಯಾನ ಮುಂದುವರೆದಿದೆ. ಸಿಎಂ ಬೊಮ್ಮಾಯಿ ಇಂದು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಹಿನ್ನೆಲೆ ಬನವಾಸಿಯ ರಸ್ತೆ ಉದ್ದಕ್ಕೂ ‘ಪೇ ಸಿಎಂ’ ಪೋಸ್ಟರ್ ಅಳವಡಿಸಲಾಗಿದೆ. ಸಿಎಂ ಸಂಚರಿಸುವ ರಸ್ತೆ ಬದಿಯಲ್ಲಿನ ಮರಗಳಿಗೆ ‘ಡೀಲ್ ನಿಮ್ಮದು ಕಮಿಷನ್ ನಮ್ದು’ ಎಂಬ ಬರಹವುಳ್ಳ ಪೋಸ್ಟರ್ ಅಳವಡಿಸಲಾಗಿದೆ. ರಸ್ತೆ ಪಕ್ಕದ ಕಟ್ಟಡಗಳಿಗೆ ಸಚಿವ ಹೆಬ್ಬಾರ್ ಫೋಟೋ ಅಳವಡಿಸಲಾಗಿದೆ. ಕಂದಬೋತ್ಸವ ಹಾಗೂ ವಿವಿಧ ಕಾರ್ಯಕ್ರಮಕ್ಕಾಗಿ ಮಂಗಳವಾರ ಸಂಜೆ ಶಿರಸಿ ಮತ್ತು ಸಿದ್ದಾಪುರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಬಿಜೆಪಿ ವಿರುದ್ಧ ಪೋಸ್ಟರ್ ಅಭಿಯಾನ ಮುಂದುವರೆಸಲಾಗಿದೆ. ಪೇ ಸಿಎಂ ಜತೆಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ವಿರುದ್ಧ ಪೋಸ್ಟರ್ ಗಳನ್ನ ಅಂಟಿಸಲಾಗಿದೆ.
ಬೀದರ್: ಗಡಿ ಜಿಲ್ಲೆ ಬೀದರ್‌ನಲ್ಲಿ (Bidar) ವಿಜಯ ಸಂಕಲ್ಪ ರಥಯಾತ್ರೆಗೆ (Vijay Sankalpa Rath Yatra) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಚಾಲನೆ ನೀಡಲಿದ್ದು, ಮಾರ್ಚ್ 3 ರಂದು ಅವರು ಬಸವಕಲ್ಯಾಣಕ್ಕೆ (Basavakalyan) ಬರಲಿದ್ದಾರೆ. ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ (Prabhu Chauhan) ತಿಳಿಸಿದರು. ಮಾರ್ಚ್ 3 ರಂದು 11 ಗಂಟೆಗೆ ಅಮಿತ್ ಶಾ ವಿಶೇಷ ವಿಮಾನದ ಮೂಲಕ ಬಸವಕಲ್ಯಾಣಕ್ಕೆ ಆಗಮಿಸಲಿದ್ದಾರೆ ಎಂದು ಹೇಳಿದರು. ಅಮಿತ್ ಶಾ 11 ಗಂಟೆಗೆ ಬಸವಕಲ್ಯಾಣ ಭೇಟಿ ನೀಡಿದ ಬಳಿಕ 11:30ಕ್ಕೆ ಅನುಭವ ಮಂಟಪಕ್ಕೆ ಭೇಟಿ ನೀಡಿ, ಅಲ್ಲಿಂದಲ್ಲೇ ವಿಜಯ ಸಂಕಲ್ಪ ಯಾತ್ರೆ ರಥಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಬಸವಕಲ್ಯಾಣ ಪಟ್ಟಣದಲ್ಲಿ ಅದ್ದೂರಿ ರೋಡ್ ಶೋ ಮಾಡಿ ಸಮಾವೇಶದಲ್ಲಿ ಭಾಗಿಯಾಗುತ್ತಾರೆ ಎಂದರು. ಬಸವಕಲ್ಯಾಣ ಪಟ್ಟಣದ ಥೇರು ಮೈದಾನದಲ್ಲಿ ನಡೆಯಲಿರುವ ವಿಜಯ ಸಂಕಲ್ಪ ಯಾತ್ರೆಯ ಬಹಿರಂಗ ಸಮಾವೇಶದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶ್ರೀರಾಮುಲು,…
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿಯು ಕಳೆದ ಜನವರಿ ತಿಂಗಳಿನಲ್ಲಿ ದಂಡದ ರೂಪದಲ್ಲಿ ಒಟ್ಟು 6 ಲಕ್ಷದ 77 ಸಾವಿರದ 190 ರೂ ಹಣವನ್ನು ಸಂಗ್ರಹಿಸಿದ್ದು, ಈ ಬಗ್ಗೆ ಬಿಎಂಟಿಸಿ ಅಧಿಕಾರಿಗಳು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಜನವರಿ ತಿಂಗಳಿನಲ್ಲಿ ಒಟ್ಟು 16,226 ಟ್ರಿಪ್‌ಗಳನ್ನು ತನಿಖೆ ಮಾಡಿ 3591 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು 6,77,190ರೂಗಳನ್ನು ದಂಡ ವಸೂಲಿ ಮಾಡಿ ಹಾಗೂ ಕರ್ತವ್ಯ ಲೋಪ ಆರೋಪದಡಿಯಲ್ಲಿ ಸಂಸ್ಥೆಯ ನಿರ್ವಾಹಕರ ವಿರುದ್ಧ 1521 ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94ರ ಪ್ರಕಾರ 322 ಪುರುಷ ಪ್ರಯಾಣಿಕರಿಂದ ಮಹಿಳಾ ಪ್ರಯಾಣಿಕರಿಗೆ ಮೀಸಲಾಗಿಟ್ಟ ಆಸನಗಳನ್ನು ಅತಿಕ್ರಮಿಸಿ ಕುಳಿತು ಪ್ರಯಾಣ ಮಾಡುತ್ತಿದ್ದ ಆರೋಪದ ಮೇರೆಗೆ ಒಟ್ಟು 32,200 ರೂ ದಂಡ ಸಂಗ್ರಹಿಸಲಾಗಿದೆ. ಇನ್ನು ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೆಟ್/ದಿನದ ಪಾಸು/ಮಾಸಿಕ ಪಾಸುಗಳನ್ನು ಹೊಂದಿ ಪ್ರಯಾಣಿಸುವುದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದಾಗಿದೆ. ಹಾಗೂ…
ಬೆಂಗಳೂರು: ಇದು ನನ್ನ ಕೊನೆಯ ಅಧಿವೇಶನ ಎಂದು ಹೇಳುವ ಮೂಲಕ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಭಾವುಕರಾದ ಪ್ರಸಂಗ ವಿಧಾನಸಭೆಯಲ್ಲಿ ನಡೆಯಿತು. ಇದು ನನ್ನ ಕೊನೆಯ ಅಧಿವೇಶನ. ಕಾಂಗ್ರೆಸ್ ನಾಯಕರು ಪದೇ ಪದೇ ಪಕ್ಷ ನನ್ನನ್ನ ಕಡೆಗಣಿಸಿದೆ ಎನ್ನುತ್ತಾರೆ, ಪ್ರಧಾನಿ ನರೇಂದ್ರ ಮೋದಿ ಅವರು ಎಂದು ನನ್ನ ಕಡೆಗಣಿಸಿಲ್ಲ. ಯಡಿಯೂರಪ್ಪನವರಿಗೆ ಮೋದಿ ಗೌರವ ಕೊಟ್ಟಿದ್ದಾರೆ, ಒಳ್ಳೆಯ ಅವಕಾಶ, ಸ್ಥಾನಮಾನ ಕೊಟ್ಟಿದ್ದಾರೆ. ಅವರನ್ನ ನಾನು ಮರೆಯಲು ಸಾಧ್ಯವಿಲ್ಲ. ಪಕ್ಷದ ಅವಕಾಶದಿಂದ 4 ಬಾರಿ ಮುಖ್ಯಮಂತ್ರು ಆಗಿದ್ದೇನೆ. ಸೂರ್ಯ,ಚಂದ್ರ ಇರುವುದು ಎಷ್ಟು ಸತ್ಯವೋ, ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ. ಇದು ನಾನು ಭವಿಷ್ಯ ಹೇಳ್ತೇನೆ ಅಂದು ಕೊಳ್ಳಬೇಡಿ, ನಾಳೆಯಿಂದ ನಾನು ರಾಜ್ಯ ಪ್ರವಾಸ ಮಾಡ್ತೇನೆ. ಇನ್ನೆರಡು ತಿಂಗಳಲ್ಲಿ ನೀವೇ ನೋಡಿ, ಯಾವ ರೀತಿ ಗಾಳಿ ಬೀಸುತ್ತೆ ಅಂತ ನಾವು ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಹೇಳಿದರು.
ಚಾಮರಾಜನಗರ: ಕೊಳ್ಳೇಗಾಲದಲ್ಲಿ ತಿಮಿಂಗಲ ವಾಂತಿ ಸಾಗಾಟ: 15 ಕೆಜಿ ಮಾಲು ಸಮೇತ ನಾಲ್ವರ ಬಂಧನ ಒಂದು ಕೆ.ಜಿ.ಗೆ ಕೋಟಿ ಬೆಳೆಬಾಳಲಿದೆ ಎನ್ನುವ ತಿಮಿಂಗಲ ವಾಂತಿ(ಆಂಬರ್ ಗ್ರೀಸ್) ನ್ನು ಕೆಜಿಗಟ್ಟಲೇ ವಶಪಡಿಸಿಕೊಂಡಿರುವ ಘಟನೆ ಕೊಳ್ಳೇಗಾಲ ಬಸ್ ನಿಲ್ದಾಣ ಸಮೀಪ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಅಲ್ಲಮಜ್ಜಿ ರಸ್ತೆಯ ಕೆ.ಬಿ.ವಿರೂಪಾಕ್ಷ(62), ಕೇರಳ ಮೂಲದ ಶಂಸುದ್ಧೀನ್ ಒತಿಯೋತ್(48), ತ್ರೆಸೀಮಾ ವರ್ಘಸೆ@ ಸುಜಾ(55) ಹಾಗೂ ಸಜಿ ಸುಬಾಸ್ (41) ಬಂಧಿತ ಆರೋಪಿಗಳು. ಇವರುಗಳು ಬೆಂಗಳೂರಿನ ಕಡೆಯ ಕಾಳಸಂತೆಯಲ್ಲಿ ಆಂಬರ್ ಗ್ರಿಸ್(ತಿಮಿಂಗಿಲ ವಾಂತಿ) ಮಾರಾಟ ಮಾಡುವ ಸಲುವಾಗಿ ಕಾರಿನಲ್ಲಿ ಸಾಗಾಣಿಕೆ ಮಾಡುತ್ತಿರುವುದು ಖಚಿತ ಪಡಿಸಿಕೊಂಡ ಅರಣ್ಯ ಸಂಚಾರಿ ದಳದ ಪೊಲೀಸರು ಕೊಳ್ಳೇಗಾಲದ ಬಸ್ ನಿಲ್ದಾಣದ ಸಮೀಪ ಮಾಲು ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 14 ಕೆ.ಜಿ 950 ಗ್ರಾಂ ಆಂಬರ್ ಗ್ರಿಸ್ ಹಾಗೂ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.
ಶ್ರೀನಗರ: ಉಗ್ರರ (Terrorists) ಗುಂಡಿನ ದಾಳಿಗೆ ಕಾಶ್ಮೀರಿ ಪಂಡಿತ್ ಸಾವನ್ನಪ್ಪಿದ ಘಟನೆ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪುಲ್ವಾಮಾದಲ್ಲಿ (Pulwama) ನಡೆದಿದೆ. ಸಂಜಯ್ ಶರ್ಮಾ (40) ಮಾರುಕಟ್ಟೆಗೆ ತೆರಳುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದರು. ಸಂಜಯ್ ಶರ್ಮಾ ಅವರು ಜಮ್ಮು ಮತ್ತು ಕಾಶ್ಮೀರದ ಬ್ಯಾಂಕ್‍ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಈ ಬಗ್ಗೆ ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದು, ಉಗ್ರರ ದಾಳಿಯಲ್ಲಿ ಹಿಂದೂ ವ್ಯಕ್ತಿಯೊಬ್ಬ ಸಾವನ್ನಪ್ಪಿರುವುದನ್ನು ಸ್ಪಷ್ಟಪಡಿಸಿದ್ದಾರೆ. ಟ್ವೀಟ್‍ನಲ್ಲಿ ಏನಿದೆ?: ಸ್ಥಳೀಯ ಮಾರುಕಟ್ಟೆಗೆ ತೆರಳುತ್ತಿದ್ದಾಗ ಸಂಜಯ್ ಶರ್ಮಾ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. ಅವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಸಾಗಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಕಳೆದ ನಾಲ್ಕು ತಿಂಗಳಲ್ಲಿ ಹಿಂದೂ ನಾಗರಿಕರ ಮೇಲೆ ನಡೆದ ಮೊದಲ ದಾಳಿ ಇದಾಗಿದೆ. ಕಳೆದ ವರ್ಷ ಕಾಶ್ಮೀರಿ ಪಂಡಿತರು ಮತ್ತು ಸ್ಥಳೀಯರಲ್ಲದವರ ಮೇಲೆ ಸರಣಿ ಉದ್ದೇಶಿತ ದಾಳಿಗಳು ನಡೆದಿವೆ.