ಮುಂಬೈ:- ಥಾಣೆಯ ಬದ್ಲಾಪುರದ ಹೆಸರಾಂತ ಶಾಲೆಯೊಂದರಲ್ಲಿ ಇಬ್ಬರು ಬಾಲಕಿಯರು ಲೈಂಗಿಕ ಶೋಷಣೆಗೆ ಒಳಗಾಗಿದ ಘಟನೆ ಜರುಗಿದೆ. ಈ ಹುಡುಗಿಯರ ವಯಸ್ಸು ಕೇವಲ ನಾಲ್ಕು ವರ್ಷಗಳು. ಅವರಿಗೆ ಇನ್ನೂ ಪ್ರಾಪಂಚಿಕತೆ ಅರ್ಥವಾಗದಿದ್ದರೂ ಈ ಕ್ರೂರ ಸಮಾಜದ ಕೊಳಕು ಮುಖವನ್ನು ಕಂಡಿದ್ದಾರೆ. ಅವರು ಮಾನವ ರೂಪದಲ್ಲಿದ್ದ ಕಾಮುಕ ಭಕ್ಷಕರನ್ನು ಎದುರಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಂಗಳವಾರ ಮುಂಬೈನಲ್ಲಿ ಭಾರೀ ಪ್ರತಿಭಟನೆಗಳು ಕಂಡುಬಂದವು. ಇದರಿಂದಾಗಿ ಮುಂಬೈನ ಲೈಫ್ ಲೈನ್ ಲೋಕಲ್ ರೈಲು ಸಂಚಾರ ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ಘಟನೆಯ ನಂತರ, ಪೊಲೀಸರು ಮತ್ತು ಶಾಲಾ ಆಡಳಿತ ಮಂಡಳಿಯ ನಿರ್ಲಕ್ಷ್ಯ ಮಿತಿ ಮೀರಿರುವುದು ಬೆಳಕಿಗೆ ಬಂದಿದೆ. ಇದೀಗ ಈ ಬಾಲಕಿಯರ ಸಂಕಷ್ಟ ಬೆಳಕಿಗೆ ಬರುತ್ತಿದೆ. ಈ ಸಂಬಂಧ ದಾಖಲಾದ ಎಫ್‌ಐಆರ್ ಪ್ರಕಾರ ಬಾಲಕಿಯ ಪೋಷಕರು ತಮ್ಮ ಮಗಳ ಜೊತೆ ನಡೆದ ಘಟನೆಯನ್ನು ಪೊಲೀಸರಿಗೆ ತಿಳಿಸಿದ್ದಾರೆ. ಎಫ್‌ಐಆರ್ ಪ್ರಕಾರ, ಈ ಘಟನೆ ಆಗಸ್ಟ್ 13 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರ ನಡುವೆ ನಡೆದಿದೆ. ಆರಂಭದಲ್ಲಿ ಬಾಲಕಿಯರ ಪೋಷಕರಿಬ್ಬರೂ…
Author: Prajatv Kannada
ಸೂರ್ಯೋದಯ: 06:04, ಸೂರ್ಯಾಸ್ತ : 06:33 ಶಾಲಿವಾಹನ ಶಕೆ :1946, ಸಂವತ್ :2080, ಸಂವತ್ಸರ :ಕ್ರೋಧಿ ನಾಮ, ಋತು: ವರ್ಷ ಋತು ಅಯಣ: ದಕ್ಷಿಣ ಮಾಸ: ಶ್ರಾವಣ ಪಕ್ಷ :ಶುಕ್ಲ ತಿಥಿ: ತೃತೀಯ, ನಕ್ಷತ್ರ: ಉತ್ತರಭದ್ರಪದ ರಾಹು ಕಾಲ: 01:30 ನಿಂದ 03:00 ತನಕ ಯಮಗಂಡ:06:00 ನಿಂದ 07:30 ತನಕ ಗುಳಿಕ ಕಾಲ: 09:00 ನಿಂದ 10:30 ತನಕ ಅಮೃತಕಾಲ: ಸಂ.5:47 ನಿಂದ ರಾ .7:13 ತನಕ ಅಭಿಜಿತ್ ಮುಹುರ್ತ: ಬೆ.11:54 ನಿಂದ ಮ.12:43 ತನಕ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು. Mob. 93534 88403 ಮೇಷ:ಈ ದಿನ ನಿಮಗೆ ಸಂಬಂಧಿಗಳಿಂದ ಕುತಂತ್ರ. ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವ ಸಾಧ್ಯತೆ. ಮಾನಸಿಕ ವೇದನೆ ಕಡಿಮೆ ಆಗಲಿದೆ. ಮಾತಿನ ಮೇಲೆ ನಿಗಾವಿರಲಿ.ಈ ದಿನ ಗೌರವಕ್ಕೆ ಧಕ್ಕೆ,ಹಾಗೂ ಆರೋಗ್ಯದಲ್ಲಿ ಏರುಪೇರು.ಮಾತೃವಿನೊಂದಿಗೆ ಕಲಹ.ಇಂದು ಹಿರಿಯರಿಂದ ಉಪದೇಶ. ಈ ದಿನ ಕುಟುಂಬದಲ್ಲಿ…
ಕೋಲಾರ: ಪುಂಡರ ಬೈಕ್ ವೀಲಿಂಗ್ ಗೆ ದೇವಾಲಯದ ಅರ್ಚಕ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ಪಟ್ಟಣದ ಸಂತೆಗೇಟ್ ನಲ್ಲಿ ನಡೆದಿದೆ. ಗಣೇಶ ದೇವಸ್ಥಾನದ ಅರ್ಚಕ ಗೋಪಾಲ್ ರಾವ್ (೪೫) ಮೃತ ದುರ್ಧೈವಿಯಾಗಿದ್ದು ಗಾಂಧಿನಗರ ಗಣೇಶ ದೇವಾಲಯದ ಪೂಜೆ ಮುಗಿಸಿ ದೇವಾಲಯಕ್ಕೆ ಬೀಗ ಹಾಕಿ ಮನೆಗೆ ವಾಪಸ್ ಆಗುವ ವೇಳೆ ಬೈಕ್ ವೀಲಿಂಗ್ ಮಾಡಿಕೊಂಡು ಬಂದ ಪುಂಡರ ಗ್ಯಾಂಗ್ ನಿಂದ ಡಿಕ್ಕಿ ಹೊಡೆಯಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಗೋಪಾಲರಾವ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಇಂದು ಭಾರೀ ಮಳೆ ಸುರಿಯುತ್ತಿದೆ. ಚಾರ್ಮಾಡಿ ಘಾಟ್ ತಪ್ಪಲಿನಲ್ಲಿ ಭಾರೀ ಮಳೆಯಾಗುತ್ತಿದ್ದು ಇಂದು ಮತ್ತೆ ಗುಡ್ಡ ಕುಸಿದಿದೆ. ಘಾಟಿಯ 8 ಮತ್ತು 9ನೇ ತಿರುವಿನಲ್ಲಿ ಗುಡ್ಡ ಮತ್ತು ಬಂಡೆಗಳು ಕುಸಿದಿದೆ. ಮಳೆ ನೀರಿನ ಜೊತೆ ರಸ್ತೆಗೆ ಕಲ್ಲುಗಳು ತೇಲಿಕೊಂಡು ಬಂದಿವೆ. ಚಾರ್ಮಾಡಿ ಘಾಟಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಹನ ಸಂಚಾರ ಎಂದಿನಂತೆ ಇದ್ದು ಯಾವುದೇ ತೊಂದರೆ ಇಲ್ಲ. ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಯಾಗುತ್ತಿದ್ದು ರಸ್ತೆಯಲ್ಲಿ ಅಡಿಗಟ್ಟಲೇ ನೀರು ಹರಿಯುತ್ತಿದೆ. ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಯನ್ನು ಚಾರ್ಮಾಡಿ ಘಾಟ್ ಸಂಪರ್ಕಿಸುತ್ತದೆ. ಬೆಂಗಳೂರಿನಿಂದ ದಕ್ಷಿಣ ಕನ್ನಡ, ಉಡುಪಿ ಭಾಗಗಳಿಗೆ ತೆರಳುವ ಮಂದಿ ಶಿರಾಡಿ ಮೂಲಕ ತೆರಳುತ್ತಿದ್ದರು. ಆದರೆ ಶಿರಾಡಿ ಘಾಟಿಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿತದ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದೆ.
ಮಹಾರಾಷ್ಟ್ರ:- ಇಬ್ಬರು ಅಪ್ರಾಪ್ತ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯ ಮನೆಯನ್ನು ಸ್ಥಳೀಯರು ಧ್ವಂಸಗೊಳಿಸಿದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರದಲ್ಲಿ ಜರುಗಿದೆ. ಸ್ಥಳೀಯರು ಅಕ್ಷಯ್ ಶಿಂಧೆ ಅವರ ಮನೆಗೆ ನುಗ್ಗಿ ಗಾಜು ಒಡೆದು, ಎಲೆಕ್ಟ್ರಾನಿಕ್ ಉಪಕರಣಗಳನ್ನು ಒಡೆದು ಧ್ವಂಸಗೊಳಿಸಿದ್ದಾರೆ. ಇದಕ್ಕೂ ಮೊದಲು ಥಾಣೆ ನ್ಯಾಯಾಲಯವು ಶಿಂಧೆಯ ಪೊಲೀಸ್ ಕಸ್ಟಡಿಯನ್ನು ಆಗಸ್ಟ್ 26 ರವರೆಗೆ ವಿಸ್ತರಿಸಿತ್ತು. ಶಾಲೆಯ ಅಟೆಂಡರ್ ಆಗಿರುವ ಆರೋಪಿಯನ್ನು ಥಾಣೆ ಜಿಲ್ಲೆಯ ಕಲ್ಯಾಣ್‌ನಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ವ್ಯಾಪಕ ಭದ್ರತಾ ವ್ಯವಸ್ಥೆಗಳ ನಡುವೆ ಹಾಜರುಪಡಿಸಲಾಯಿತು. ಶಾಲೆಯ ವಿಶ್ರಾಂತಿ ಕೊಠಡಿಯಲ್ಲಿ ನಾಲ್ಕು ವರ್ಷದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಕಳೆದ ವಾರ ಬಾಲಕಿಯೊಬ್ಬಳು ತನ್ನ ಅನುಭವವನ್ನು ಪೋಷಕರ ಬಳಿ ಹೇಳಿಕೊಂಡ ನಂತರ ಘಟನೆ ಬೆಳಕಿಗೆ ಬಂದಿದೆ. ಆರೋಪಿಯನ್ನು ಆಗಸ್ಟ್ 17 ರಂದು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದರು. ಇದು ರಾಜ್ಯಾದ್ಯಂತ ಕೋಲಾಹಲಕ್ಕೆ ಕಾರಣವಾಗಿದ್ದು, ಹಲವಾರು ಪ್ರತಿಭಟನಾಕಾರರು ಬೀದಿಗಿಳಿದು ಸಾರ್ವಜನಿಕ ಆಸ್ತಿಗಳನ್ನು ಧ್ವಂಸಗೊಳಿಸಿದರು ಮತ್ತು ಅಧಿಕಾರಿಗಳ ಮೇಲೆ ದಾಳಿ…
ಗದಗ:- ಜಿಲ್ಲೆ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದ ಬಳಿ ಆಟೋ ಕಂದಕಕ್ಕೆ ಉರುಳಿದ ಪರಿಣಾಮ ಸ್ಥಳದಲ್ಲೇ ಚಾಲಕ ಸಾವನ್ನಪ್ಪಿರುವ ಘಟನೆ ಜರುಗಿದೆ. 28 ವರ್ಷದ ಪ್ರಭುಲಿಂಗ ಹಿರೇಮಠ ಮೃತ ದುರ್ದೈವಿ ಎನ್ನಲಾಗಿದೆ. ಘಟನೆಯಿಂದ ಆರು ಜನರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕನ ನಿರ್ಲಕ್ಷ್ಯದಿಂದಲೇ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಶಿಂಗಟಾಲೂರು ವೀರಭದ್ರೇಶ್ವರ ದೇವಸ್ಥಾನಕ್ಕೆ ಭಕ್ತರು ಹೋಗಿದ್ದರು. ಈ ವೇಳೆ ದುರಂತ ಸಂಭವಿಸಿದ್ದು, ಆಟೋದಲ್ಲಿದ್ದ ಆರು ಜನರಿಗೆ ಗಾಯಗಳಾಗಿವೆ. ಅವರನ್ನು ಗದಗ ಜಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಮುಂಡರಗಿ ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ್ ಕುಸುಗಲ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಮಂಡ್ಯ:- ಕೌಟುಂಬಿಕ ಕಲಹದ ಹಿನ್ನೆಲೆ ಕೊಡಲಿಯಿಂದ ಕೊಚ್ಚಿ ತನ್ನ ಹೆಂಡತಿಯನ್ನೇ ಪಾಪಿ ಗಂಡ ಕೊಲೆ ಮಾಡಿದ ಘಟನೆ ಜರುಗಿದೆ. 38 ವರ್ಷದ ತೇಜಸ್ವಿನಿ ಕೊಲೆಯಾದ ಮಹಿಳೆ ಎನ್ನಲಾಗಿದೆ. ಜಯರಾಮು, ಪತ್ನಿಯನ್ನು ಕೊಲೆಗೈದ ಪತಿರಾಯ. ಕೌಟುಂಬಿಕ ವಿಚಾರವಾಗಿ ದಂಪತಿ ನಡುವೆ ಜಗಳ ನಡೆಯುತ್ತಿತ್ತು. ಜಗಳ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ. ತೇಜಸ್ವಿನಿ ಕುತ್ತಿಗೆಗೆ ಜಯರಾಮು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಬಳಿಕ ಕೊಡಲಿಯಿಂದ ತಲೆ ಮೇಲೆ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ತೇಜಸ್ವಿನಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಹುಬ್ಬಳ್ಳಿ: ರಸ್ತೆ, ಒಳಚರಂಡಿ, ಗಟಾರು, ಕುಡಿಯುವ ನೀರು ಇವು ನಗರ ನಾಗರಿಕರ ಮೂಲಭೂತ ಅಗತ್ಯಗಳು. ಆದರೆ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಇವುಗಳನ್ನು ಪೂರೈಸುವುದಕ್ಕೆ ಆಗುತ್ತಿಲ್ಲ, ಮೂಲ ಸಮಸ್ಯೆಗಳೇ ಜನರನ್ನು ಹೈರಾಣಾಗಿಸುತ್ತಿವೆ. ಯಾವಾಗ ಇವುಗಳಿಗೆ ಶಾಶ್ವತ ಪರಿಹಾರ ಕೊಡುತ್ತೀರಿ? ಇಲ್ಲಿಯ ಪಾಲಿಕೆ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಮೇಯರ್ ರಾಮಪ್ಪ ಬಡಿಗೇರ ಅಧ್ಯಕ್ಷತೆಯಲ್ಲಿ ಹುಬ್ಬಳ್ಳಿ ವಿಭಾಗದ ವಾರ್ಡ್ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನೆ ಹಾಗೂ ಸದಸ್ಯರ ಸಮಸ್ಯೆ ಆಲಿಕೆಗೆ ಆಯೋಜಿಸಿದ್ದ ಸಭೆಯಲ್ಲಿ ಕೇಳಿ ಬಂದ ಪ್ರಶ್ನೆಗಳಿವು ಮೊದಲ ಬಾರಿ ಪ್ರತಿ ವಾರ್ಡ್ ಸಮಸ್ಯೆ ಆಲಿಕೆಗೆ ಮೇಯರ್ ಅವರು ಸಭೆ ನಡೆಸುತ್ತಿರುವುದಕ್ಕೆ ಅನೇಕ ಸದಸ್ಯರು ಅಭಿನಂದನೆ ಸಲ್ಲಿಸಿದರು. ಪ್ರತಿಯೊಬ್ಬರು ತಮ್ಮ ವಾಡಿರ್ನಲ್ಲಿ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಹೇಳಿಕೊಂಡರು. ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಅಧಿಕಾರಿಗಳಿಂದ ಉತ್ತರ ಕೊಡಿಸುವ ಪ್ರಯತ್ನ ಮಾಡಿದರು. ಕೆಲವು ತೊಂದರೆಗಳಿಗೆ ಸ್ಥಳದಲ್ಲೇ ಪರಿಹಾರ ಸಿಕ್ಕರೆ ಇನ್ನೂ ಕೆಲವು ನಂತರದಲ್ಲಿ ಮಾಡಿಕೊಡುವ ಭರವಸೆಯನ್ನು ಅಧಿಕಾರಿಗಳು ನೀಡಿದರು. ಇದು ಕಾಟಾಚಾರದ ಸಭೆಯಾಗಬಾರದು. ಸಮಸ್ಯೆಗಳಿಗೆ ಪರಿಹಾರ…
ಕೋಲಾರ: ಪುಂಡರ ಬೈಕ್ ವೀಲಿಂಗ್ ಗೆ ದೇವಾಲಯದ ಅರ್ಚಕ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ಪಟ್ಟಣದ ಸಂತೆಗೇಟ್ ನಲ್ಲಿ ನಡೆದಿದೆ. ಗಣೇಶ ದೇವಸ್ಥಾನದ ಅರ್ಚಕ ಗೋಪಾಲ್ ರಾವ್ (೪೫) ಮೃತ ದುರ್ಧೈವಿಯಾಗಿದ್ದು, ಗಾಂಧಿನಗರ ಗಣೇಶ ದೇವಾಲಯದ ಪೂಜೆ ಮುಗಿಸಿ ದೇವಾಲಯಕ್ಕೆ ಬೀಗ ಹಾಕಿ ಮನೆಗೆ ವಾಪಸ್ ಆಗುವ ವೇಳೆ ಬೈಕ್ ವೀಲಿಂಗ್ ಮಾಡಿಕೊಂಡು ಬಂದ ಪುಂಡರ ಗ್ಯಾಂಗ್ ನಿಂದ ಡಿಕ್ಕಿ ಹೊಡೆಯಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಗೋಪಾಲರಾವ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬೆಂಗಳೂರು:- ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಲ್ಪಿಸಿ ಎಂದು DCM ಡಿಕೆಶಿಗೆ ಸಂಸದ ತೇಜಸ್ವಿ ಸೂರ್ಯ ಮನವಿ ಮಾಡಿದ್ದಾರೆ. ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ತೇಜಸ್ವಿ ಸೂರ್ಯ, ಬೆಂಗಳೂರಿನ ಟ್ರಾಫಿಕ್ ಪರಿಸ್ಥಿತಿ ಮತ್ತು ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಶೋಚನೀಯ ಸ್ಥಿತಿಯನ್ನು ಟೀಕಿಸಿದ್ದಾರೆ. ಬೆಂಗಳೂರಿನ ಟ್ರಾಫಿಕ್ ದೃಶ್ಯವು ಪ್ರತಿ ದಿನವೂ ಮತ್ತಷ್ಟು ಯಾತನಾಮಯವಾಗಿರುತ್ತದೆ. ಸಾಧಾರಣವಾಗಿ ಭಾನುವಾರ ಸ್ವಲ್ಪ ಕಡಿಮೆಯಿದ್ದರೆ ವಾರದ ಇತರ ದಿನಗಳಲ್ಲಿ ದುಸ್ವಪ್ನದಂತಿರುತ್ತವೆ ಎಂದಿದ್ದಾರೆ. ಭಾರತದ ಐಟಿ ಹಬ್‌ನಲ್ಲಿ ಸಾವಿರಾರು ಹೊಸ ಖಾಸಗಿ ವಾಹನಗಳು ರಸ್ತೆಗಿಳಿಯುತ್ತಿರುವುದೇ ಸಂಚಾರ ದಟ್ಟಣೆಯ ಸಮಸ್ಯೆಯನ್ನು ಉಲ್ಬಣಗೊಳಿಸುತ್ತಿದೆ ಎಂದು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರು ಆರೋಪಿಸಿದ್ದಾರೆ. “ಬೆಂಗಳೂರು ನಗರದಲ್ಲಿನ ರಸ್ತೆಗಳು, ವಸತಿ ಪ್ರದೇಶಗಳಲ್ಲಿನ ಸಣ್ಣ ಲೈನ್‌ಗಳು ವಾಹನ ನಿರ್ವಹಣೆಯ ಸಾಮರ್ಥ್ಯವನ್ನು ಮೀರಿವೆ. ಹೆಚ್ಚಿನ ಹೊಸ ರಸ್ತೆಗಳನ್ನು ನಿರ್ಮಾಣ ಮಾಡಲು ಈಗ ಸ್ಥಳದ ಅಭಾವವಿದೆ. ರಸ್ತೆಯಲ್ಲಿ ಖಾಸಗಿ ವಾಹನಗಳ ಸಂಖ್ಯೆಯನ್ನು ಕಡಿಮೆ ಮಾಡಲು ಮತ್ತು ಸಾರ್ವಜನಿಕ ಸಾರಿಗೆ ಆಯ್ಕೆಗಳ ಸಂಖ್ಯೆಯನ್ನು ಹೆಚ್ಚಿಸಲು ಸರ್ಕಾರವು ಕ್ರಮ…