ಬಹುತಾರಾಗಣದ ‘ಕಲ್ಕಿ 2898 ಎಡಿ’ ಸಿನಿಮಾ ನಿರ್ದೇಶನ ಮಾಡಿ ಫೇಮಸ್ ಆದ ನಾಗ್ ಅಶ್ವಿನ್ ಅವರು ಸದ್ಯ ಈ ಚಿತ್ರದ ಸೀಕ್ವೆಲ್ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ‘ಕಲ್ಕಿ 2898 ಎಡಿ’ ಚಿತ್ರದ ನಿರ್ದೇಶಕ ಈಗ ಆಲಿಯಾ ಭಟ್ ಜೊತೆ ಸಿನಿಮಾ ಮಾಡುತ್ತಾರೆ ಎಂದು ವರದಿ ಆಗಿತ್ತು. ಆದರೆ ಈ ಸುದ್ದಿಯನ್ನು ನಾಗ್ ಅಶ್ವಿನ್ ನಿರಾಕರಿಸಿದ್ದಾರೆ. ಟಾಲಿವುಡ್ ನಲ್ಲಿ ಬೇಡಿಕೆ ಕಾಯ್ದುಕೊಂಡಿರುವ ನಾಗ್ ಅಶ್ವಿನ್ ಆಲಿಯಾ ಭಟ್ ಜೊತೆ ನಟಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ನಾಗ್ ಅಶ್ವಿನ್ ಅವರು ಸಿನಿಮಾಗಳನ್ನು ಮಾಡುತ್ತಿರುವುದು ತೆಲುಗಿನಲ್ಲಿ. ಆಲಿಯಾ ಭಟ್ ಅವರಿಗೆ ತೆಲುಗು ಚಿತ್ರರಂಗ ಹೊಸದೇನು ಅಲ್ಲ. ಅವರು ಈಗಾಗಲೇ ‘ಆರ್ಆರ್ಆರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈಗ ನಾಗ್ ಅಶ್ವಿನ್ ಅವರು ಮಹಿಳಾ ಪ್ರಧಾನ ಪಾತ್ರ ಮಾಡಲು ಹೊರಟಿದ್ದಾರೆ ಎಂದು ವರದಿ ಆಗಿತ್ತು. ಇದಕ್ಕೆ ಆಲಿಯಾ ಹೀರೋಯಿನ್ ಎಂದು ಹೇಳಲಾಗಿತ್ತು. ಆಲಿಯಾ ಭಟ್ ಅವರು ಹಲವು ಮಹಿಳಾ ಪ್ರಧಾನ ಸಿನಿಮಾ ಮಾಡಿ ಗಮನ ಸೆಳೆದಿದ್ದಾರೆ. ‘ರಾಜಿ’ ಚಿತ್ರದಲ್ಲಿ…
Author: Prajatv Kannada
ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದೆ. ರಾಜ್ಯದ 43 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು ಶಾಂತಿಯುತ ಮತ್ತು ನ್ಯಾಯಸಮ್ಮತ ಮತದಾನಕ್ಕೆ ಸಮಗ್ರ ವ್ಯವಸ್ಥೆ ಮಾಡಿರುವುದಾಗಿ ಚುನಾವಣಾ ಆಯೋಗ ಹೇಳಿಕೊಂಡಿದೆ ಇಂದು ಜಾರ್ಖಂಡ್‌ನ ವಿಧಾನಸಭೆಗೆ ಮೊದಲ ಹಂತದ ಚುನಾವಣೆ ನಡೆಯಲಿದ್ದು, 24 ಜಿಲ್ಲೆಗಳ ಒಟ್ಟು 81 ಕ್ಷೇತ್ರಗಳ ಪೈಕಿ 43 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮೊದಲ ಹಂತದ ಮತದಾನದ ಕ್ಷೇತ್ರಗಳಲ್ಲಿ 685 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನವೆಂಬರ್ 20ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, 38 ಕ್ಷೇತ್ರಗಳಲ್ಲಿ ಉಳಿದ 528 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಇಂಡಿಯಾ ಮೈತ್ರಿಕೂಟದಲ್ಲಿ ಜೆಎಂಎಂ, ಕಾಂಗ್ರೆಸ್, ಆರ್ ಜೆಡಿ ಇದೆ. ಎನ್ಡಿಎ ಮೈತ್ರಿಕೂಟದಲ್ಲಿ ಬಿಜೆಪಿ, ಜೆಡಿಯು, ಎಲ್‌ಜೆಪಿ ಮತ್ತು ಎಜೆಎಸ್‌ಯು ಒಂದಾಗಿ ಸ್ಪರ್ಧಿಸಲಿವೆ. ಜಾರ್ಖಂಡ್ ಚುನಾವಣೆಯ ಮೊದಲ ಹಂತದ ಪ್ರಮುಖ ಅಭ್ಯರ್ಥಿಗಳೆಂದರೆ, ಚಂಪೈ ಸೊರೆನ್, ಮಹುವಾ ಮಜಿ, ಗೀತಾ ಕೋಡಾ, ಅಜೋಯ್ ಕುಮಾರ್, ಬನ್ನಾ ಗುಪ್ತಾ ಮತ್ತು ಸುಖರಾಮ್ ಓರಾನ್. ಮೊದಲ ಹಂತದ…
ಹುಬ್ಬಳ್ಳಿ:- ಶಿಗ್ಗಾವಿ ಸವಣೂರು ಕ್ಷೇತ್ರದ ಉಪ ಚುನಾವಣೆ ಕಾವು ಜೋರಾಗಿದೆ. https://youtu.be/PfTWiZa1qZQ?si=wWRK8iKMbG67wVPg ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಇಂದು ಶಿಗ್ಗಾವಿಗೆ ಮತದಾನಕ್ಕೆ ತೆರಳುವ ಮುನ್ನ ಹುಬ್ಬಳ್ಳಿಯ ಗಬ್ಬೂರು ಕ್ರಾಸ್ ಬಳಿ ಇರುವ ಪಾರ್ಶ್ವ ಪದ್ಮಾಲಯ ಧಾಮ ಜೈನ ಮಂದಿರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು
ಬಳ್ಳಾರಿ:- ಸಂಡೂರು ವಿಧಾನಸಭಾ ಚುನಾವಣೆ ಹಿನ್ನೆಲೆ, ಕುಟುಂಬ ಸಮೇತರಾಗಿ ಬಂದು ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಮತ ಚಲಾಯಿಸಿದ್ದಾರೆ. https://youtu.be/qtF8Igh966I?si=nHOgO8B4MkA34n1M ಸಂಸದ ತುಕಾರಾಂ ಪತ್ನಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು, ಮತಗಟ್ಟೆ ಸಂಖ್ಯೆ 67ರಲ್ಲಿ ಮತದಾನ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಜನರು, ನಿರ್ಭೀತಿಯಿಂದ ಮತ ಚಲಾಯಿಸಬೇಕು. ಪ್ರಜಾಪ್ರಭುತ್ವ ಕೊಟ್ಟಿರುವ ನಮ್ಮ ಹಕ್ಕು ಬಳಸಿ ಉತ್ತಮ ಅಭ್ಯರ್ಥಿ ಆಯ್ಕೆ ಮಾಡಬೇಕು. ಕ್ಷೇತ್ರದಲ್ಲಿ ಜನರು ನನ್ನ ಕೈ ಹಿಡಿಯುವ ವಿಶ್ವಾಸ ಇದೆ. ಇದುವರೆಗೂ ಪತಿಯ ಪರವಾಗಿ ಚುನಾವಣೆ ಕೆಲಸ ಮಾಡ್ತಿದ್ದೆ. ಈ ಬಾರಿ ನೇರ ಚುನಾವಣೆಯಲ್ಲಿ ನಿಂತಿರೋದು ಖುಷಿ ಇದೆ. ಗೆದ್ದೇ ಗೆಲ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಹೇಳಿದ್ದಾರೆ
ನವದೆಹಲಿ: ಪ್ರಕರಣಗಳ ತುರ್ತು ಪಟ್ಟಿಗೆ ಮತ್ತು ವಿಚಾರಣೆಗೆ ಇನ್ನು ಮುಂದೆ ಮೌಖಿಕ ಮನವಿಗಳನ್ನು ಅನುಮತಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಘೋಷಿಸಿದ್ದಾರೆ. ಅಂತಹ ಪ್ರಕರಣಗಳಿಗಾಗಿ ವಕೀಲರು ಇ-ಮೇಲ್ ಅಥವಾ ಲಿಖಿತ ಪತ್ರಗಳ ಮೂಲಕ ವಿನಂತಿಗಳನ್ನು ಸಲ್ಲಿಸಬೇಕಾಗುತ್ತದೆ ಎಂದು ಸೂಚಿಸಿದ್ದಾರೆ. ಸಾಂಪ್ರದಾಯಿಕವಾಗಿ, ವಕೀಲರು ತಮ್ಮ ಪ್ರಕರಣಗಳನ್ನು ಸಿಜೆಐ ನೇತೃತ್ವದ ಪೀಠದ ಮುಂದೆ ಪ್ರತಿನಿತ್ಯದ ವಿಚಾರಣೆಯ ಪ್ರಾರಂಭದಲ್ಲಿ ತುರ್ತು ಆಧಾರದ ಮೇಲೆ ಔಟ್-ಆಫ್-ಟರ್ನ್ ಪಟ್ಟಿಗಳು ಮತ್ತು ವಿಚಾರಣೆಗಳನ್ನು ಕೋರುತ್ತಿದ್ದರು. ಇನ್ನು ಮುಂದೆ ಯಾವುದೇ ಲಿಖಿತ ಅಥವಾ ಮೌಖಿಕ ಉಲ್ಲೇಖಗಳನ್ನು ಪರಿಗಣಿಸುವುದಿಲ್ಲ. ತುರ್ತು ಕಾರಣಗಳನ್ನು ತಿಳಿಸಿ ಇ-ಮೇಲ್‌ಗಳು ಅಥವಾ ಲಿಖಿತ ಸ್ಲಿಪ್‌ಗಳು ಅಥವಾ ಪತ್ರಗಳನ್ನು ಸಲ್ಲಿಸಿದರೆ ಮಾತ್ರ ಅದನ್ನು ಸ್ವೀಕರಿಸಲಾಗುತ್ತದೆ ಎಂದು ಸಿಜೆಐ ಹೇಳಿದ್ದಾರೆ. ಸೋಮವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ 51ನೇ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಖನ್ನಾ, ನ್ಯಾಯಾಂಗ ಸುಧಾರಣೆಗಳಿಗೆ ಜನಕೇಂದ್ರಿತ ಕಾರ್ಯಸೂಚಿಯ ಮಹತ್ವವನ್ನು ಪುನರುಚ್ಚರಿಸಿದ್ದಾರೆ. ಜನರ ಸ್ಥಾನಮಾನವನ್ನು ಲೆಕ್ಕಿಸದೆ ಅವರಿಗೆ…
ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದೆ. ರಾಜ್ಯದ 43 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು ಶಾಂತಿಯುತ ಮತ್ತು ನ್ಯಾಯಸಮ್ಮತ ಮತದಾನಕ್ಕೆ ಸಮಗ್ರ ವ್ಯವಸ್ಥೆ ಮಾಡಿರುವುದಾಗಿ ಚುನಾವಣಾ ಆಯೋಗ ಹೇಳಿಕೊಂಡಿದೆ.ಇಂದು ಜಾರ್ಖಂಡ್‌ನ ವಿಧಾನಸಭೆಗೆ ಮೊದಲ ಹಂತದ ಚುನಾವಣೆ ನಡೆಯಲಿದ್ದು, 24 ಜಿಲ್ಲೆಗಳ ಒಟ್ಟು 81 ಕ್ಷೇತ್ರಗಳ ಪೈಕಿ 43 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮೊದಲ ಹಂತದ ಮತದಾನದ ಕ್ಷೇತ್ರಗಳಲ್ಲಿ 685 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನವೆಂಬರ್ 20ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, 38 ಕ್ಷೇತ್ರಗಳಲ್ಲಿ ಉಳಿದ 528 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಇಂಡಿಯಾ ಮೈತ್ರಿಕೂಟದಲ್ಲಿ ಜೆಎಂಎಂ, ಕಾಂಗ್ರೆಸ್, ಆರ್ ಜೆಡಿ ಇದೆ. ಎನ್ಡಿಎ ಮೈತ್ರಿಕೂಟದಲ್ಲಿ ಬಿಜೆಪಿ, ಜೆಡಿಯು, ಎಲ್‌ಜೆಪಿ ಮತ್ತು ಎಜೆಎಸ್‌ಯು ಒಂದಾಗಿ ಸ್ಪರ್ಧಿಸಲಿವೆ. ಜಾರ್ಖಂಡ್ ಚುನಾವಣೆಯ ಮೊದಲ ಹಂತದ ಪ್ರಮುಖ ಅಭ್ಯರ್ಥಿಗಳೆಂದರೆ, ಚಂಪೈ ಸೊರೆನ್, ಮಹುವಾ ಮಜಿ, ಗೀತಾ ಕೋಡಾ, ಅಜೋಯ್ ಕುಮಾರ್, ಬನ್ನಾ ಗುಪ್ತಾ ಮತ್ತು ಸುಖರಾಮ್ ಓರಾನ್. ಮೊದಲ ಹಂತದ ಮತದಾನದಲ್ಲಿ…
ಶಿಗ್ಗಾವಿ:- ಉಪ ಚುನಾವಣೆ ಹಿನ್ನೆಲೆ, ಮತದಾನಕ್ಕೂ ಮುನ್ನ ಶಿಗ್ಗಾಂವಿಯಲ್ಲಿ “ಕೈ” ಅಭ್ಯರ್ಥಿಗೆ ಬಿಗ್ ಶಾಕ್ ಎದುರಾಗಿದ್ದು, ಚುನಾವಣಾ ಆಯುಕ್ತರಿಗೆ ಬಿಜೆಪಿ ದೂರು ಕೊಟ್ಟಿದೆ.ಕೈ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ರೌಡಿ ಶೀಟ್ ಪ್ರಕರಣ ಇದೆ. ಆದ್ರೆ, ಅವರು ನಾಮಪತ್ರದ ಅಫಡವಿಟ್ ನಲ್ಲಿ ತಮ್ಮ ವಿರುದ್ಧ ಯಾವುದೇ ಕೇಸ್ ಗಳಿಲ್ಲ ಎಂದು ಘೋಷಿಸಿಕೊಂಡಿದ್ದಾರೆ. ಹೀಗಾಗಿ ಈ ಬಗ್ಗೆ ಕ್ರಮಕೈಗೊಳ್ಳಬೇಕೆಂದು ಬಿಜೆಪಿ ಚುನಾವಣಾ ಏಜೆಂಟ್ ಎಸ್ ಕೆ ಅಕ್ಕಿ ಅವರು ಇ – ಮೇಲ್ ಮೂಲಕ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿದ್ದಾರೆ. ಯಾಸೀರ್ ಖಾನ್ ಪಠಾಣ್ ಮೇಲೆ ರೌಡಿ ಶೀಟರ್ ಸ್ಟೇಟಸ್ ಇದೆ ಎಂದು ಹಾವೇರಿ ಎಸ್ ಪಿ ಹೇಳಿಕೆ ನೀಡಿದ್ದಾರೆ. ಆದ್ರೆ, ಪಠಾಣ್ ಅಫಡವಿಟ್ ನಲ್ಲಿ ತಮ್ಮ ವಿರುದ್ಧ ಯಾವುದೇ ಕೇಸ್ ಗಳಿಲ್ಲ ಎಂದು ಘೋಷಿಸಿಕೊಂಡಿದ್ದಾರೆ. ಕಳೆದ ಚುನಾವಣೆ ವೇಳೆ ಅವರ ಮೇಲೆ ಹಲವು ಕೇಸ್ ಇದ್ದವು. ಆದರೆ ಆಶ್ಚರ್ಯ ಅಂದರೆ ಉಪ ಚುನಾವಣೆಗೆ ಸಲ್ಲಿಸಿರುವ ಅಪಡವಿಟ್ ನಲ್ಲಿ ಕೇಸ್ ಗಳು…
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬೆಳ್ಳಂ ಬೆಳಗ್ಗೆ ತುಂತುರು ಮಳೆ ಶುರುವಾಗಿದೆ. ಬಂಗಾಳ ಕೊಲ್ಲಿಯ ನೈರುತ್ಯ ಭಾಗದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ತುಂತುರು ಮಳೆ ಶುರುವಾಗಿದೆ. https://youtu.be/8IfslRZ8xxM?si=0M3mbFlQq_DLyDpG ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕೆಲವು ಜಿಲ್ಲೆಗಳಿಗೆ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಿದೆ. ಇಂದು ಮತ್ತು ನಾಳೆ ಮಳೆಯ ಮುನ್ಸೂಚನೆ ನೀಡಿದ್ದು, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಿದೆ.
ಚನ್ನಪಟ್ಟಣ:- ಉಪಚುನಾವಣೆ ಹಿನ್ನೆಲೆ, ಚನ್ನಪಟ್ಟಣದಲ್ಲಿ ಸಾಂಪ್ರದಾಯಿಕ ಗೊಂಬೆ ಮತಗಟ್ಟೆ ಗಮನ ಸೆಳೆದಿದೆ. ಬೆಳಗಿನ ಜಾವ 7 ಗಂಟೆಯಿಂದಲೇ ಮತದಾನ ಆರಂಭವಾಗಿದ್ದು, ಉತ್ತಮ ಪ್ರತಿಕ್ರಿಯೆ ಇದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 276 ಮತಗಟ್ಟೆಗಳ ಸ್ಥಾಪನೆ ಮಾಡಗಿದೆ. ನಗರ ಪ್ರದೇಶದಲ್ಲಿ 62, ಗ್ರಾಮೀಣ ಪ್ರದೇಶದಲ್ಲಿ 214 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. 276 ಮತಗಟ್ಟೆಗಳಲ್ಲಿ ಆಯೋಗ ವೆಬ್ಕಾಸ್ಟಿಂಗ್ ವ್ಯವಸ್ಥೆ ಮಾಡಿದೆ. 276 ಮತಗಟ್ಟೆಗಳ ಪೈಕಿ 119 ಮತಗಟ್ಟೆಗಳನ್ನು ಸೂಕ್ಷ್ಮವೆಂದು ಗುರುತಿಸಲಾಗಿದೆ. ಚುನಾವಣಾ ಆಯೋಗ 119 ಮೈಕ್ರೋ ಅಬ್ಸರ್ವರ್ಸ್ ನಿಯೋಜಿಸಲಾಗಿದೆ. ಚನ್ನಪಟ್ಟಣ ಗೊಂಬೆಗಳಿಗೆ ವಿಶ್ವ ವಿಖ್ಯಾತಿ ಪಡೆದಿದೆ. ಇಲ್ಲಿನ ಗೊಂಬೆಗಳಿಗೆ ಭಾರಿ ಬೇಡಿಕೆ ಇದೆ. ಹೀಗಾಗಿ ಚುನಾವಣಾ ಆಯೋಗ ಗೊಂಬೆ ಮತಗಟ್ಟೆ ನಿರ್ಮಾಣ ಮಾಡಿದೆ. ಈ ಮೂಲಕ ಚನ್ನಪಟ್ಟಣ ಗೊಂಬೆಗಳ ವಿಶೇಷ ಪ್ರಾಶಸ್ತ್ಯ ನೀಡಿದೆ. ಚನ್ನಪಟ್ಟಣದ ಕೋಟೆ ಬಡಾವಣೆಯಲ್ಲಿ ವಿಶೇಷ ಸಾಂಪ್ರದಾಯಿಕ ಗೊಂಬೆ ಮತಗಟ್ಟೆ ನಿರ್ಮಿಸಲಾಗಿದೆ. ಮತಗಟ್ಟೆ ಹೊರಭಾಗದಲ್ಲಿ ಆಕರ್ಷಕ ಬಲೂನ್ ಕಮಾನು, ಗೊಂಬೆಗಳ ಫ್ಲೆಕ್ಸ್ ಅಳವಡಿಸಲಾಗಿದೆ. ಮತದಾನ ಮಾಡಲು ಬಂದಿರುವ ಮತದಾರರು ಗೊಂಬೆ ಮತಗಟ್ಟೆ…
ಬೆಂಗಳೂರು:- ಗಾಡಿಗೆ ಸೈಡ್ ಬಿಡದಿದ್ದಕ್ಕೆ ಬಿಎಂಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆದಿರುವ ಘಟನೆ ಬೆಂಗಳೂರಿನ ಕಾರ್ಪೋರೇಷನ್ ಬಳಿ ಜರುಗಿದೆ. ಬಸ್ ವಿಂಡೋವನ್ನ ಪುಡಿ ಪುಡಿ ಮಾಡಿ ಬಸ್ ಚಾಲಕನನ್ನ ಕೆಳಗಿಳಿಸಿ ಹಲ್ಲೆ ಮಾಡಲಾಗಿದೆ. ದ್ವಿಚಕ್ರ ವಾಹನದಲ್ಲಿ ಯುವಕ ಹೋಗುತ್ತಿದ್ದ. ಈ ವೇಳೆ ಬಸ್ ಹಾಗೂ ಡಿವೈಡರ್ ಮಧ್ಯೆ ಯುವಕ ಗಾಡಿ ನುಗ್ಗಿಸಿದ್ದಾನೆ. ಬಳಿಕ ಬಸ್ ಡ್ರೈವರ್ ಗೆ ಸೈಡ್ ಕೊಡುವಂತೆ ಅವಾಜ್ ಹಾಕಿದ್ದಾನೆ. ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಆರೋಪ ಕೇಳಿ ಬಂದಿದೆ. ಗ್ಯಾರೇಜ್ ಯುವಕ ನಲ್ಲಿ ಕೆಲಸ ಮಾಡುತ್ತಿದ್ದ. ಟೂಲ್ಸ್ ಸಮೇತ ಗಾಡಿಯಲ್ಲಿ ಹೋಗ್ತಿದ್ದ. ಸಿಗ್ನಲ್ ಬಳಿ ಬಸ್ ನಿಲ್ಲಿಸ್ತಿದ್ದಂತೆ ಬಸ್ ಚಾಲಕನ ಮೇಲೆ ದಾಳಿ ನಡೆದಿದೆ. ಟೂಲ್ಸ್ ನಿಂದ ಬಿಎಂಟಿಸಿ ಬಸ್ ಡ್ರೈವರ್ ಮೇಲೆ ಹಲ್ಲೆ ನಡೆದಿದೆ. ಕೂಡಲೇ ಆರೋಪಿಯನ್ನ ಹಿಡಿದು ಸ್ಥಳೀಯರು ಥಳಿಸಿದ್ದಾರೆ. ಆರೋಪಿ ಥಳಿಸಿ ಪೊಲೀಸ್ರಿಗೆ ಒಪ್ಪಿಸಿದ್ದಾರೆ. ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.