ಬೆಂಗಳೂರು:- ಬ್ಯಾನ್ ಆದ್ರೂ ನಗರದಲ್ಲಿ ಪಿಒಪಿ ಗಣೇಶ ಮೂರ್ತಿಗಳು ಭರ್ಜರಿ ಸೇಲ್ ಆಗ್ತಿದೆ. ನಗರದ ರಸ್ತೆಗಳಲ್ಲಿ ರಾಜಾರೋಷವಾಗಿ ಪಿಒಪಿ ಗಣೇಶ ಮೂರ್ತಿಗಳನ್ನ ವ್ಯಾಪಾರ ಮಾಡುತ್ತಿದ್ದು, ಕ್ರಮ ತೆಗೆದುಕೊಳ್ಳಬೇಕಾದ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಕೈಕಟ್ಟಿ ಕುಳಿತಿದ್ದಾರೆ. https://youtu.be/LrJPcZTSWZI?si=I-QmtRY6GvSL1J7N ನಗರದಲ್ಲಿ ಹಬ್ಬಕ್ಕೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಪಿಒಪಿ ಗಣೇಶ ಮೂರ್ತಿಗಳು ರಾರಾಜಿಸುತ್ತಿವೆ. ಅದ್ರಲ್ಲಿ ಪಿಒಪಿ ಗಣೇಶ ಮೂರ್ತಿಗಳೇ ಹೆಚ್ಚು ಕಂಡುಬರುತ್ತಿದ್ದು, ರಾಜಾರೋಷವಾಗಿ ಗ್ರಾಹಕರು ಕೂಡ ಪಿಒಪಿ ಗಣೇಶ ಮೂರ್ತಿಗಳನ್ನ ತೆಗೆದುಕೊಳ್ಳುತ್ತಿದ್ದಾರೆ. ಈ ಕುರಿತಾಗಿ ಕ್ರಮ ತಗೆದುಕೊಳ್ಳಬೇಕಾದ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಒಂದು ಗೈಡ್ ಲೈನ್ಸ್ ಹೊರಡಿಸಿ ಸುಮ್ಮನಾಗಿದ್ದಾರೆ. ಇನ್ನು ಪಿಒಪಿ ಗಣೇಶ ಮೂರ್ತಿಗಳನ್ನ ಬ್ಯಾನ್ ಮಾಡಿದ್ರೆ ಎಲ್ಲಾ ಏರಿಯಾಗಳಲ್ಲೊ ಮಾಡ್ಬೇಕು. ಒಂದು ಏರಿಯಾದಲ್ಲಿ ಮಾಡಿ ವ್ಯಾಪಾರಸ್ಥರ ಹೊಟ್ಟೆ ಮೇಲೆ ಹೊಡೆಯಬೇಡಿ. ನಗರದ ಅತ್ತಿಬೆಲೆ, ನಾಗಸಂದ್ರ, ಟ್ಯಾನಿರೋಡ್, ದೊಡ್ಡ ಬಳ್ಳಾಪುರ ಸೇರಿದಂತೆ ಎಲ್ಲಾ ಕಡೆ ಪಿಒಪಿ ಗಣೇಶ ಮೂರ್ತಿಗಳೇ ಇದೆ. ಆದ್ರೆ ಇದುವರೆಗೂ ಕ್ರಮ ತೆಗೆದುಕೊಂಡಿಲ್ಲ.…
Author: Prajatv Kannada
ಮಹಾರಾಷ್ಟ್ರ:- ಅಶ್ಲೀಲ ಚಿತ್ರ ತೋರಿಸಿ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಶಿಕ್ಷಕನನ್ನು ಅರೆಸ್ಟ್ ಮಾಡಲಾಗಿದೆ ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಹೆಣ್ಣು ಮಕ್ಕಳ ಸುರಕ್ಷತೆ ಬಗ್ಗೆ ಕಳವಳಗಳನ್ನು ವ್ಯಕ್ತಪಡಿಸಿ ದೇಶವ್ಯಾಪಿ ಪ್ರತಿಭಟನೆಗಳು ನಡೆಯುತ್ತಿರುವ ನಡುವೆಯೇ ಮತ್ತೊಂದು ಇದೇ ಮಾದರಿಯ ಘಟನೆ ವರದಿಯಾಗಿದೆ. ಶಿಕ್ಷಕನನ್ನು 47 ವರ್ಷದ ಪ್ರಮೋದ್ ಸರ್ದಾರ್ ಎಂದು ಗುರುತಿಸಲಾಗಿದೆ/ ವಿದ್ಯಾರ್ಥಿನಿಯರು ತಮ್ಮ ಪೋಷಕರಿಗೆ ದೂರು ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. 8 ನೇ ತರಗತಿಯ ವಿದ್ಯಾರ್ಥಿಗಳಲ್ಲಿ ಒಬ್ಬಾಕೆ ಮಕ್ಕಳ ಕಲ್ಯಾಣ ಕೇಂದ್ರದ ಟೋಲ್ ಫ್ರೀ ಸಹಾಯವಾಣಿಗೆ ಕರೆ ಮಾಡಿ ಘಟನೆಯ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಳು. ಅಧಿಕಾರಿಗಳು ಶಾಲೆಗೆ ಹೋಗಿ ತನಿಖೆಯನ್ನು ನಡೆಸಿ ಶಿಕ್ಷಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅತನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದ ವಿವರಗಳ ಪ್ರಕಾರ, ಶಿಕ್ಷಕ ಕಳೆದ ನಾಲ್ಕು ತಿಂಗಳಿನಿಂದ ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೊಗಳನ್ನು ತೋರಿಸುತ್ತಿದ್ದ. ವಿಡಿಯೊ ತೋರಿಸುತ್ತಾ ಅನುಚಿತವಾಗಿ ಸ್ಪರ್ಶಿಸುತ್ತಿದ್ದ. ಆರು ವಿದ್ಯಾರ್ಥಿನಿಯರು ದೂರು…
ಶಿವಮೊಗ್ಗ:- ಶಾಲಾ ಬಿಸಿ ಊಟ ಕೊಠಡಿಯಲ್ಲಿ ಕಾಳಿಂಗ ಸರ್ಪ ಪತ್ತೆಯಾದ ಘಟನೆ ಹೊಸನಗರ ತಾಲೂಕಿನ ಸಂಪೇಕಟ್ಟೆ ಸಮೀಪದ ಮತ್ತಿಕೈ ಶಾಲೆಯ ಬಿಸಿ ಊಟದ ದಾಸ್ತಾನು ಕೊಠಡಿಯಲ್ಲಿ ಜರುಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪೆಕಟ್ಟೆ ಸಮೀಪದ ಶಾಲೆಯಲ್ಲಿ ಎರಡು ದಿನ ಕಾಳಿಂಗ ಸರ್ಪ ಬಂದಿಯಾಗಿತ್ತು. ಉರಗತಜ್ಞ ಅಜಯಗಿರಿ ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಈ ಸಂದರ್ಭದಲ್ಲಿ ನಗರ ವಲಯ ಅರಣ್ಯಾಧಿಕಾರಿ ಸಂತೋಷ್ ಮಲ್ಲನಗೌಡ ಸೇರಿದಂತೆ ಅರಣ್ಯ ಅಧಿಕಾರಿಗಳು ಹಾಜರಿದ್ದರು.
ತುಮಕೂರು ಪಾವಗಡ ತಾಲೂಕಿನ ಶ್ರೀರಂಗಪುರ ತಾಂಡಾದಲ್ಲಿ ಬೀಗರೂಟ ಸೇವಿಸಿದ್ದ 24 ಜನರು ವಾಂತಿ, ಭೇದಿಯಿಂದ ಅಸ್ವಸ್ಥಗೊಂಡಿರುವ ಘಟನೆ ಜರುಗಿದೆ. ಸದ್ಯ ಅಸ್ವಸ್ಥಗೊಂಡವರು ಸ್ಥಳೀಯ ಆಸ್ಪತ್ರೆ ಹಾಗೂ ಬೆಂಗಳೂರು, ಪಾವಗಡ, ಹಿಂದೂಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳ್ಳಬಟ್ಟಿ ಸೇವಿಸಿ ಈ ರೀತಿ ಆಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 14 ಮತ್ತು 15ರಂದು ಪಾವಗಡ ತಾಲೂಕಿನ ನಾಗೇನಹಳ್ಳಿ ತಾಂಡಾದಲ್ಲಿ ಮದುವೆ ನಡೆದಿತ್ತು. ಮರು ದಿನ ಆಗಸ್ಟ್ 16ರಂದು ಶ್ರೀರಂಗಪುರ ತಾಂಡಾದಲ್ಲಿ ಬೀಗರ ಊಟ ಆಯೋಜಿಸಲಾಗಿತ್ತು. ಊಟ ಮಾಡಿ ವಾಪಸ್ ತೆರಳಿದ ನಾಗೇನಹಳ್ಳಿ ತಾಂಡಾದ ಜನರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ. 24 ಮಂದಿಗೆ ಕಾರ್ಯಕ್ರಮ ನಡೆದ ದಿನದಿಂದ ವಾಂತಿ, ಭೇದಿಯಾಗಿ ಅಸ್ವಸ್ಥರಾಗಿದ್ದಾರೆ. ಕಳ್ಳಬಟ್ಟಿ ಸೇವನೆಯಿಂದಲೇ ಹೀಗಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಅಸ್ವಸ್ಥಗೊಂಡವರು ಹೊಟ್ಟೆ ನೋವು, ಭೇದಿಯಾಗಿ ಶುಕ್ರವಾರ ರಾತ್ರಿ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಗೇನಹಳ್ಳಿ ತಾಂಡಾಗೆ ಉಪವಿಭಾಗಧಿಕಾರಿ ತಹಶೀಲ್ದಾರ್, ಇಓ, ಟಿಹೆಚ್ಒ ಸೇರಿದಂತೆ ಹಲವು ಅಧಿಕಾರಿಗಳ ತಂಡ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದದೆ.…
ಚಿಕ್ಕಮಗಳೂರು:- ರೇಸ್ಗೆ ಇಳಿದವರಂತೆ ಎರಡು ದ್ವಿಚಕ್ರ ವಾಹನಗಳೂ ವೇಗವಾಗಿ ಬಂದಿದ್ದು ಅದರಲ್ಲಿ ಒಂದು ಬೈಕ್ ಓವರ್ ಟೇಕ್ ಮಾಡಲು ಹೋಗಿ ಪಲ್ಟಿಯಾದ ಘಟನೆ ಜಿಲ್ಲೆಯ ಚಿಕ್ಕಮಾಗರವಳ್ಳಿ ಗ್ರಾಮದಲ್ಲಿ ಜರುಗಿದೆ. ರೋಡ್ ಎಡ್ಜ್ ಗೆ ಬಂದು ಓವರ್ ಟೇಕ್ ಮಾಡಲು ಯತ್ನಿಸುವಾಗ ಆಯಾತಪ್ಪಿ 4 ಬಾರಿ ಬೈಕ್ ಪಲ್ಟಿ ಹೊಡೆದಿದೆ. ವೇಗವಾಗಿ ಬಂದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ನಾಲ್ಕು ಬಾರಿ ಬೈಕ್ ಪಲ್ಟಿಯಾಗಿ, ಚಾಲಕ ಹಾರಿ ಬಿದ್ದಿದ್ದಾನೆ. ಪವಾಡ ಸದೃಶದ ರೀತಿ ಚಾಲಕ ಎದ್ದು ನಿಂತಿದ್ದು ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆ:- ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ದಿಢೀರನೆ ಸುರಿದ ಭಾರಿ ಮಳೆಗೆ ಟೊಮೇಟೊ ಹಣ್ಣುಗಳು ಕೊಚ್ಚಿಕೊಂಡು ಹೋದ ಘಟನೆ ಜರುಗಿದೆ. ಆರುಂಡಿ ಗ್ರಾಮದ ಜವಳಿ ಸುರೇಶ್ ಎಂಬುವರಿಗೆ ಸೇರಿದ ಟೊಮೇಟೊಗಳು ನೀರುಪಾಲಾಗಿದ್ದು ರೈತನಿಗೆ ಸುಮಾರು 25 ಸಾವಿರಕ್ಕೂ ಹೆಚ್ಚು ನಷ್ಟುವಾಗಿದೆ. ಇನ್ನು ಈ ದೃಶ್ಯವನ್ನು ಕೆಲ ಸ್ಥಳೀಯರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಜಮೀನಿನಲ್ಲಿ ಟೊಮೇಟೊ ಬಾಕ್ಸ್ಗೆ ತುಂಬುತ್ತಿದ್ದಾಗ ಭಾರಿ ಮಳೆಯಾಗಿದ್ದು. ಏಕಾಏಕಿ ಒಂದು ಘಂಟೆಗೂ ಹೆಚ್ಚು ಕಾಲ ಮಳೆ ಬಂದಿದೆ. ಇದರಿಂದ ಬಾಕ್ಸ್ ಗೆ ತುಂಬಲು ರಾಶಿ ಹಾಕಿದ್ದ ಟೊಮೇಟೊ ನೀರು ಪಾಲಾಗಿದೆ.
ಸೂರ್ಯೋದಯ: 06:04, ಸೂರ್ಯಾಸ್ತ : 06:34 ಶಾಲಿವಾಹನ ಶಕೆ1946, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2080,ಗ್ರಿಷ್ಮ ಋತು, ದಕ್ಷಿಣಾಯಣ , ಶ್ರಾವಣ ಮಾಸ, ಕೃಷ್ಣ ಪಕ್ಷ, ತಿಥಿ: ದ್ವಿತೀಯ, ನಕ್ಷತ್ರ: ಪೂ.ಭಾದ್ರಪದ ರಾಹು ಕಾಲ: 12:00 ನಿಂದ 01:30 ತನಕ ಯಮಗಂಡ: 10:30 ನಿಂದ 12:00 ತನಕ ಗುಳಿಕ ಕಾಲ: 07:30 ನಿಂದ 09:00 ತನಕ ಅಮೃತಕಾಲ: ಸಂ.5:25 ನಿಂದ ಸಂ.6:51 ತನಕ ಅಭಿಜಿತ್ ಮುಹುರ್ತ: ಇಲ್ಲ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು. ಮೇಷ ರಾಶಿ: ಕುಟುಂಬ ಕಲಹ ಬಂಧು ಬಳಗದವರ ಸಹಕಾರದಿಂದ ಬಗೆಹರಿಯಲಿವೆ, ಪ್ರತಿಷ್ಠೆಯ ವ್ಯಕ್ತಿಯ ಸಂಪರ್ಕದಿಂದ ಒಂದು ಖುಷಿ ಸಂದೇಶ ಪಡೆಯಲಿದ್ದೀರಿ,ಮಕ್ಕಳ ಮಂಗಳ ಕಾರ್ಯ ಮಾತುಕತೆ ಸಾಧ್ಯತೆ. ಆಸ್ತಿ ಖರೀದಿ ಬಗ್ಗೆ ಮಾತುಕತೆ ನಡೆಯಲಿದೆ. ವ್ಯಾಪಾರದಿಂದ ಆರ್ಥಿಕ ಸ್ಥಿತಿ ಉತ್ತಮವಾಗಿದೆ. ನಿಮ್ಮ ಆಲಸ್ಯದ ಕಾರಣ ಕೆಲಸಕಾರ್ಯಗಳಲ್ಲಿ ಮೇಲಾಧಿಕಾರಿ ಇಂದ…
ಉತ್ತರ ಕನ್ನಡ:- ಆಲಮಟ್ಟಿ ಜಲಾಶಯ ಉತ್ತರ ಕರ್ನಾಟಕದ ಜೀವನಾಡಿಯಾಗಿದ್ದು, ಭಾರೀ ಮಳೆಯಿಂದ ಭರ್ತಿಯಾಗಿದೆ. ಈ ಜಲಾಶಯ 9 ಜಿಲ್ಲೆಗಳಿಗೆ ನೀರು ಒದಗಿಸುತ್ತದೆ. ಈ ಜಲಾಶಯದಲ್ಲಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾನದಿಗೆ ಅಡ್ಡಲಾಗಿ ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರ ನಿರ್ಮಾಣ ಮಾಡಲಾಗಿದೆ. 519.60 ಮೀಟರ್ ಎತ್ತರದಲ್ಲಿ 123.08 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಆಲಮಟ್ಟಿ ಜಲಾಶಯದಲ್ಲಿ ಇಂದು ಬೆಳಗ್ಗೆ 123.08 ಟಿಎಂಸಿ ನೀರು ಸಂಗ್ರಹವಾಗಿದೆ. ಒಳ ಹರಿವು: 19968 ಕ್ಯೂಸೆಕ್, ಹೊರ ಹರಿವು: 19968 ಕ್ಯೂಸೆಕ್ ಇದೆ. ಭರ್ತಿಯಾಗಿರುವ ಆಲಮಟ್ಟಿ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಇಂದು ಆಲಮಟ್ಟಿಯಲ್ಲಿ ಕೃಷ್ಣಾ ನದಿಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಸಿಎಂ ಕೊಪ್ಪಳ ಜಿಲ್ಲೆಯಿಂದ ಆಲಮಟ್ಟಿಗೆ ಆಗಮಿಸಿ ಬಾಗೀನ ಅರ್ಪಣೆ ಮಾಡಲಿದ್ದಾರೆ. ಬಾಗಿನ ಅರ್ಪಣೆ ಹಿನ್ನೆಲೆ ಜಲಾಶಯಕ್ಕೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಹಾಲಿನ ನೊರೆಯಂತೆ…
ಬೆಂಗಳೂರು:- ಗ್ರೀನ್ ಲೈನ್ನ ವಿಸ್ತರಿತ ಮಾರ್ಗದ ಟೆಸ್ಟಿಂಗ್ ಕಾರ್ಯಾದ ಹಿನ್ನೆಲೆಯಲ್ಲಿ ಇಡೀ ದಿನ ಮೆಟ್ರೋ ಸಂಚಾರವಿರಲಿಲ್ಲ. ಇದರಿಂದ ಜನರು ಪರದಾಡಿದ್ರೆ, ಇದನ್ನು ಬಂಡವಾಳ ಮಾಡಿಕೊಂಡ ಕೆಲ ಆಟೋ, ಕ್ಯಾಬ್ ಚಾಲಕರು ಜನರಿಂದ ದುಪ್ಪಟ್ಟು ಹಣ ವಸೂಲಿ ಮಾಡಿದ್ದಾರೆ https://youtu.be/LrJPcZTSWZI?si=I7Y9aZE0u8R4DXb5 ನಾಗಸಂದ್ರ ಟು ಮಾದಾವರ ವರೆಗೆ ಮೆಟ್ರೋ ಸಂಚಾರವನ್ನು ವಿಸ್ತರಣೆ ಮಾಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಆ ಮಾರ್ಗದಲ್ಲಿ ಸಿಗ್ನಲ್ ಟೆಸ್ಟಿಂಗ್ ಮಾಡಲಾಗ್ತಿದೆ. ಆದ್ದರಿಂದ ನಾಗಸಂದ್ರ ಟು ಪೀಣ್ಯ ಇಂಡಸ್ಟ್ರಿ ಮೆಟ್ರೋ ಸ್ಟೇಷನ್ ವರೆಗೆ ದಿನಪೂರ್ತಿ ಮೆಟ್ರೋ ಸಂಚಾರವಿಲ್ಲ. ಇದರಿಂದ ಬೆಳಗ್ಗೆ ಕೆಲಸಕ್ಕೆ ಹೋಗಬೇಕಾದ ಪ್ರಯಾಣಿಕರು ಪರದಾಡ್ರಿದ್ದಾರೆ. ಮೆಟ್ರೋ ಸ್ಟೇಷನ್ ಬಳಿ ನಿಂತು ಓಲಾ, ಉಬರ್ ಮೂಲಕ ಆಟೋ ಕ್ಯಾಬ್ ಬುಕ್ ಮಾಡಲು ಮುಂದಾಗಿದ್ದಾರೆ. ಆದರೆ ಇದನ್ನು ಬಂಡವಾಳ ಮಾಡಿಕೊಂಡ ಆಟೋ, ಕ್ಯಾಬ್ ಚಾಲಕರು ಜನರಿಂದ ದುಪ್ಪಟ್ಟು ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ನಾಗಸಂದ್ರ ದಿಂದ ಪೀಣ್ಯ ಇಂಡಸ್ಟ್ರಿಗೆ ನಾರ್ಮಲ್ ಆಗಿ ಆಟೋದಲ್ಲಿ 50 ರುಪಾಯಿ ಆಗುತ್ತೆ. ಆದರೆ ಚಾಲಕರು 150 ರಿಂದ 200…
ನವದೆಹಲಿ: ಎಸ್‌ಸಿ/ಎಸ್‌ಟಿ ಮೀಸಲಾತಿ ಕುರಿತು ಸುಪ್ರೀಂಕೋರ್ಟ್‌ನ ತೀರ್ಪಿನ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ರಿಸರ್ವೇಶನ್ ಬಚಾವೋ ಸಂಘರ್ಷ್ ಸಮಿತಿಯು ಇಂದು (ಆಗಸ್ಟ್ 21 ರಂದು) ಭಾರತ್ ಬಂದ್‌ಗೆ ಕರೆ ನೀಡಿದೆ. ರಾಜಸ್ಥಾನದ ಎಸ್‌ಸಿ/ಎಸ್‌ಟಿ ಗುಂಪುಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ. https://youtu.be/Ei9KmcEdQ7k?si=epkAjDtbjj0n1tHK ಅಂದ ಹಾಗೆ ಕರ್ನಾಟಕದಲ್ಲಿ ಈ ಬಂದ್ ಪರಿಣಾಮ ಬೀರಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಯಾವುದೇ ಉದ್ವಿಗ್ನತೆಯನ್ನು ತಪ್ಪಿಸಲು ಎಲ್ಲಾ ಜಿಲ್ಲೆಗಳಾದ್ಯಂತ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗುವುದು. ಭಾರತ್ ಬಂದ್‌ಗೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಎಸ್‌ಪಿಗಳಿಗೂ ಸೂಚನೆ ನೀಡಲಾಗಿದೆ ಎಂದು ಡಿಜಿಪಿ ಯುಆರ್ ಸಾಹೂ ಹೇಳಿದ್ದಾರೆ. ಉತ್ತಮ ಸಹಕಾರಕ್ಕೆ ಅನುಕೂಲವಾಗುವಂತೆ ಬಂದ್‌ಗೆ ಕರೆ ನೀಡುವ ಗುಂಪುಗಳೊಂದಿಗೆ ಮತ್ತು ಮಾರುಕಟ್ಟೆ ಸಂಘಗಳೊಂದಿಗೆ ಸಭೆಗಳನ್ನು ಆಯೋಜಿಸಲು ನಾವು ನಮ್ಮ ಅಧಿಕಾರಿಗಳನ್ನು ಕೇಳಿದ್ದೇವೆ “ಎಂದು ಡಿಜಿಪಿ ಹೇಳಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಭಾರತ್ ಬಂದ್ 2024: ಭದ್ರತಾ ಕ್ರಮಗಳು ಏನೇನು? ಬಂದ್ ವೇಳೆ ಹಿಂಸಾಚಾರದ ಸಾಧ್ಯತೆಯ ಹಿನ್ನೆಲೆಯಲ್ಲಿ ಉನ್ನತ ಪೊಲೀಸ್…