ಬೆಂಗಳೂರು: ಪ್ರಧಾನ ಮಂತ್ರಿ ಉಚ್ಚತರ್ ಶಿಕ್ಷಾ ಅಭಿಯಾನ ಕೇಂದ್ರ ಪ್ರಾಯೋಜಿತ ಕಾರ್ಯಕ್ರಮವಾಗಿದ್ದು, 300-ಕ್ಕೂ ಹೆಚ್ಚು ರಾಜ್ಯ ವಿಶ್ವವಿದ್ಯಾಲಯಗಳು ಮತ್ತು ಅದರ ಸಂಯೋಜಿತ ಕಾಲೇಜುಗಳೊಂದಿಗೆ ಕೆಲಸ ಮಾಡುವ ಗುರಿಯನ್ನು ಹೊಂದಿದೆ. 2013 ರಲ್ಲಿ ಪ್ರಾರಂಭವಾದ PM-USHA ಅರ್ಹ ರಾಜ್ಯ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಕಾರ್ಯತಂತ್ರದ ಹಣವನ್ನು ಒದಗಿಸುವ ಗುರಿಯನ್ನು ಹೊಂದಿದೆ. https://youtu.be/39giEKFiUBg?si=_wfFunnobcyVswTT 12ನೇ ತರಗತಿ / ದ್ವಿತೀಯ ಪಿಯುಸಿ ಶಿಕ್ಷಣವನ್ನು ಶೇಕಡ.80 ಕ್ಕಿಂತ ಹೆಚ್ಚಿನ ಅಂಕ ಪಡೆದಿರುವ & 3 ವರ್ಷಗಳ ಸ್ನಾತಕ ಪದವಿ ಅಧ್ಯಯನ ಮಾಡಲಿಚ್ಚಿಸುವ ವಿದ್ಯಾರ್ಥಿಗಳಿಗೆ ನೀಡಲಾಗುವ ಪಿಎಂ ಉಷಾ ಸ್ಕಾಲರ್‌ಶಿಪ್ ಗೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರದ ಉನ್ನತ ಶಿಕ್ಷಣ ಇಲಾಖೆಯು ಈ ಸ್ಕಾಲರ್‌ಶಿಪ್‌ಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಕರೆದಿದೆ. ಸ್ಕಾಲರ್‌ಶಿಪ್ ಹೆಸರು ಪಿಎಂ ಉಷಾ ವಿದ್ಯಾರ್ಥಿವೇತನ ವಿದ್ಯಾರ್ಥಿವೇತನ ಸೌಲಭ್ಯ Rs.12000-20000. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 31, 2024 ವೆಬ್ ವಿಳಾಸ www.scholarship.gov.in ಅರ್ಹತೆ ದ್ವಿತೀಯ ಪಿಯುಸಿ ಶಿಕ್ಷಣವನ್ನು ಶೇಕಡ.80 ಕ್ಕಿಂತ ಹೆಚ್ಚಿನ ಅಂಕ ಪಡೆದಿರುವವರು. ಪದವಿ…
Author: Prajatv Kannada
ಕುಂದಾಪ್ರ ಕನ್ನಡ ಹಬ್ಬ 2024ರ ಪ್ರಯುಕ್ತ Easy Events ವತಿಯಿಂದ ಜರುಗಿದ ಮೆಗಾ ಡಿಜಿಟಲ್ ಲಕ್ಕಿ ಡ್ರಾ, ಕುಂದಾಪ್ರ ಕನ್ನಡ ಹಬ್ಬದ ಸಮಾರೋಪ ಸಮಾರಂಭದ ಸಂದರ್ಭ ಜರಗಿದ್ದು https://youtu.be/tRLKICRbY44?si=MdAR9Adqk8jr-Sc5 ತಂಡ ಪ್ರಪ್ರಥಮ ಬಾರಿಗೆ ವಿನೂತನ ರೀತಿಯಲ್ಲಿ ಕಾಗದ ಮುಕ್ತ ಮೆಗಾ ಡಿಜಿಟಲ್ ಲಕ್ಕಿ ಡ್ರಾ ನಡೆಸಿದ್ದು, ಕುಂದಾಪ್ರ ಕನ್ನಡ ಹಬ್ಬಕ್ಕೆ ಆಗಮಿಸಿದ ಎಲ್ಲರಿಗೂ ಕೂಡ ಮುಖೇನ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಸುಲಭ ಅವಕಾಶವನ್ನು ಮಾಡಿಕೊಟ್ಟಿದ್ದು ಎಲ್ಲರ ಮೆಚ್ಚುಗೆ ಗಳಿಸಿದೆ. ಸ್ಪರ್ಧೆಯವಿಜೇತರ ವಿವರಗಳು ಈ ರೀತಿಯಾಗಿವೆ. ಮೆಗಾ ಲಕ್ಕಿ ಡ್ರಾ ಪ್ರಥಮ ಬಹುಮಾನ ಗೋಲ್ಡ್ ಸಿಲ್ವರ್ ಪ್ಲೇಟೆಡ್ ಸೀರೆ ಪೂರ್ಣಿಮಾ ಶೆಟ್ಟಿ ದ್ವಿತೀಯ, ಮಣಿಕಂಠ ಪೂಜಾರಿ. ತೃತೀಯ – 1 ಗ್ರಾಂ ಗೋಲ್ಡ್ ಕಾಯಿನ್ ( ನಕ್ಷತ್ರ ಜ್ಯುವೆಲರ್ಸ್ ಕುಂದಾಪ್ರ ) – ವಿಲಾಸ್ ಶೇಖರ್ ಚತುರ್ಥ – ವಾಷಿಂಗ್ ಮಷೀನ್ – ಗೋವರ್ಧನ್ B
ಮಂಗಳೂರು:- ರೈಲ್ವೆ ಭದ್ರತಾ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಆಯತಪ್ಪಿ ಬೀಳುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿರುವ ಘಟನೆ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಜರುಗಿದೆ. ಸಸಾಂಗ್ ಆಯತಪ್ಪಿ ಬಿದ್ದ ವ್ಯಕ್ತಿ ಎನ್ನಲಾಗಿದೆ. ಮಂಗಳೂರಿಂದ ನೇತ್ರಾವತಿ ಎಕ್ಸ್‌ಪ್ರೆಸ್ ರೈಲು ಚಲಿಸುತ್ತಿದ್ದ ವೇಳೆ ರೈಲು ಹತ್ತಲು ಯತ್ನಿಸಿದ್ದ ಪ್ರಯಾಣಿಕ ಸಸಾಂಗ್ ರೈಲು ಹತ್ತುತ್ತಿದ್ದಂತೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ರೈಲು ಮತ್ತು ಪ್ಲಾಟ್ಫಾರ್ಮ್ ಮಧ್ಯೆ ಸಿಲುಕಿಕೊಂಡಿದ್ದಾರೆ. ತಕ್ಷಣ ಸಸಾಂಗ್ನನ್ನ ಆರ್ಪಿಎಫ್ ಹೆಡ್ಕಾನ್ಸ್ಟೇಬಲ್ ಕೈ ಹಿಡಿದು ಎಳೆದು ಪ್ರಾಣ ರಕ್ಷಿಸಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಸಿ.ಸಿ.ಟಿ.ವಿ ಕ್ಯಾಮರಾದಲ್ಲಿ ಸೆರೆ ಆಗಿದೆ.
ಬೆಂಗಳೂರು:- ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ https://youtu.be/eVp1wjzAZxo?si=zxM6Dmv9tmklUsGo ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಸಂಜೆ ವೇಳೆಗೆ ಮಳೆಯಾಗುತ್ತಿದೆ. ಎಚ್ಎಎಲ್ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರು/ಮೈಸೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಅನುಮತಿ ಕೊಟ್ಟ ಬಳಿಕ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಆಗಿದೆ. https://youtu.be/C82i_Z_S2N4?si=CBRqa-oOJdcUegA2 ಅಲ್ಲದೇ ಸಿದ್ದರಾಮಯ್ಯ ಪರ ನಿಂತಿರುವ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದಾದ್ಯಂತ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಇನ್ನೂ ಪ್ರತಿಭಟನೆ ಮತ್ತೊಂದು ಹಂತಕ್ಕೆ ಹೋಗುವ ಸಾಧ್ಯತೆ ಇದ್ದು, ಸಿದ್ದರಾಮಯ್ಯ ಪರ ಪ್ರತಿಭಟನೆಗೆ ಬರದಿದ್ದರೆ ಗೃಹಲಕ್ಷ್ಮಿ, ಅಕ್ಕಿ ದುಡ್ಡು, ಉಚಿತ ಕರೆಂಟ್ ಸೇರಿ ಗ್ಯಾರಂಟಿ ಬಂದ್ ಆಗುವ ಎಚ್ಚರಿಕೆ ನೀಡಲಾಗಿದೆ. ರಾಜಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ರಾಜ್ಯದ ಬಹುತೇಕ ಕಡೆ ಪ್ರತಿಭಟನೆ ನಡೆಸಲಾಗಿದೆ. ಸಿಎಂ ಪರವಾದ ಪ್ರತಿಭಟನೆಯಲ್ಲಿ ಭಾಗವಹಿಸದಿದ್ದರೆ ಸರ್ಕಾರದಿಂದ ನೀಡಲಾಗುತ್ತಿರುವ ಗ್ಯಾರಂಟಿ ಯೋಜನೆಗಳನ್ನು ಬಂದ್ ಮಾಡಲಾಗುವುದು ಎಂದು ಡಂಗೂರ ಸಾರಲಾಗಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಚಿನ್ನದಗುಡಿಹುಂಡಿ ಗ್ರಾಮದಲ್ಲಿ ಡಂಗೂರ ಸಾರಿ ಗ್ರಾಮಸ್ಥರನ್ನು ಪ್ರತಿಭಟನೆಗೆ ಕರೆಯಲಾಗಿದೆ. ಡಂಗೂರ ಸಾರಿ ವ್ಯಕ್ತಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ನಡೆಯುವ ಪ್ರತಿಭಟನೆಗೆ ಬರಬೇಕಂತೆ. ಇಲ್ಲವಾದಲ್ಲಿ ಗೃಹಲಕ್ಷ್ಮಿ ಯೋಜನೆ 2000 ರೂ.,…
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ನಾಯಿಗಳ ಕಾಟ ಹೆಚ್ಚಾಗಿದ್ದು, ಒಂದಷ್ಟು ಕಡೆ ಬೀದಿನಾಯಿಗಳ ದಾಳಿಯಿಂದ ಗಾಯಗೊಳ್ಳುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ಬೀದಿನಾಯಿಗಳ ಕಡಿತದಿಂದ ಆಸ್ಪತ್ರೆಗೆ ಚಿಕಿತ್ಸೆಗೆ ಬರುವವರ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಕೆಸಿ ಜನರಲ್ ಆಸ್ಪತ್ರೆಯಲ್ಲಿ ಕಳೆದ 3 ತಿಂಗಳುಗಳಲ್ಲಿ 600 ರಿಂದ 700 ರಷ್ಟು ಮಂದಿ ನಾಯಿ ಕಡಿತಕ್ಕೊಳಗಾಗಿ ಚಿಕಿತ್ಸೆ ಪಡೆದಿದ್ದಾರೆ. ಇತ್ತ ಬೀದಿನಾಯಿಗಳ ಜೊತೆಗೆ ಸಾಕು ನಾಯಿಗಳು, ಬೆಕ್ಕುಗಳ ಕಡಿತ ಕೂಡ ಕೊಂಚ ಏರಿಕೆಯಾಗುತ್ತಿದೆ. ಬೀದಿ ನಾಯಿಗಳ ಕಾಟಕ್ಕೆ ಬ್ರೇಕ್ ಹಾಕಬೇಕಿದ್ದ ಪಾಲಿಕೆ ನಿದ್ದೆಗೆ ಜಾರಿದೆಯಾ ಎಂದು ಸಾರ್ವಜನಿಕರು ಕಿಡಿಕಾರುತ್ತಿದ್ದಾರೆ. ನಾಯಿ ಕಚ್ಚಿ ಆಸ್ಪತ್ರೆ ಸೇರಿದವರ ಸಂಖ್ಯೆ ಮೇ ತಿಂಗಳಿನಲ್ಲಿ ಒಟ್ಟು 933 ಜನರಿಗೆ ಚಿಕಿತ್ಸೆ ಜೂನ್ ತಿಂಗಳಲ್ಲಿ ಒಟ್ಟು 642 ಜನರಿಗೆ ಚಿಕಿತ್ಸೆ ಜುಲೈ ತಿಂಗಳಲ್ಲಿ 781 ಜನರಿಗೆ ಚಿಕಿತ್ಸೆ ಕೊಡಲಾಗಿದೆ ಇತ್ತ ಬೀದಿನಾಯಿಗಳ ಕಾಟ ಹೆಚ್ಚಾಗಿರುವ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಪಾಲಿಕೆ ಅಧಿಕಾರಿಗಳನ್ನು ಕೇಳಿದರೆ,…
ಬೆಂಗಳೂರು:- ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಸಂಜೆ ವೇಳೆಗೆ ಮಳೆಯಾಗುತ್ತಿದೆ. ಎಚ್ಎಎಲ್ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರು/ಮೈಸೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಅನುಮತಿ ಕೊಟ್ಟ ಬಳಿಕ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಆಗಿದೆ.ಅಲ್ಲದೇ ಸಿದ್ದರಾಮಯ್ಯ ಪರ ನಿಂತಿರುವ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದಾದ್ಯಂತ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಇನ್ನೂ ಪ್ರತಿಭಟನೆ ಮತ್ತೊಂದು ಹಂತಕ್ಕೆ ಹೋಗುವ ಸಾಧ್ಯತೆ ಇದ್ದು, ಸಿದ್ದರಾಮಯ್ಯ ಪರ ಪ್ರತಿಭಟನೆಗೆ ಬರದಿದ್ದರೆ ಗೃಹಲಕ್ಷ್ಮಿ, ಅಕ್ಕಿ ದುಡ್ಡು, ಉಚಿತ ಕರೆಂಟ್ ಸೇರಿ ಗ್ಯಾರಂಟಿ ಬಂದ್ ಆಗುವ ಎಚ್ಚರಿಕೆ ನೀಡಲಾಗಿದೆ. ರಾಜಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ರಾಜ್ಯದ ಬಹುತೇಕ ಕಡೆ ಪ್ರತಿಭಟನೆ ನಡೆಸಲಾಗಿದೆ. ಸಿಎಂ ಪರವಾದ ಪ್ರತಿಭಟನೆಯಲ್ಲಿ ಭಾಗವಹಿಸದಿದ್ದರೆ ಸರ್ಕಾರದಿಂದ ನೀಡಲಾಗುತ್ತಿರುವ ಗ್ಯಾರಂಟಿ ಯೋಜನೆಗಳನ್ನು ಬಂದ್ ಮಾಡಲಾಗುವುದು ಎಂದು ಡಂಗೂರ ಸಾರಲಾಗಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಚಿನ್ನದಗುಡಿಹುಂಡಿ ಗ್ರಾಮದಲ್ಲಿ ಡಂಗೂರ ಸಾರಿ ಗ್ರಾಮಸ್ಥರನ್ನು ಪ್ರತಿಭಟನೆಗೆ ಕರೆಯಲಾಗಿದೆ. ಡಂಗೂರ ಸಾರಿ ವ್ಯಕ್ತಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ನಡೆಯುವ ಪ್ರತಿಭಟನೆಗೆ ಬರಬೇಕಂತೆ. ಇಲ್ಲವಾದಲ್ಲಿ ಗೃಹಲಕ್ಷ್ಮಿ ಯೋಜನೆ 2000 ರೂ., ಉಚಿತ…
ಬೆಂಗಳೂರು:- ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು ಮಾಡಲಾಗಿದ್ದು, ಬಿಡದಿ ಇನ್ಸ್‌ಪೆಕ್ಟರ್ ಶಂಕರ್ ನಾಯಕ್ ಎಸ್ಕೇಪ್ ಆಗಿದ್ದಾರೆ. ಸದ್ಯ ಸಿಸಿಬಿ ತಂಡದಿಂದ ಇನ್ಸ್‌ಪೆಕ್ಟರ್ ಶಂಕರ್ ನಾಯ್ಕ್ಗಾಗಿ ತೀವ್ರ ಶೋಧ ನಡೆಯುತ್ತಿದೆ.ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಇನ್ಸ್‌ಪೆಕ್ಟರ್ ಶಂಕರ್ ನಾಯ್ಕ್ ಪರಾರಿಯಾಗಿದ್ದಾರೆ. ಹೈಕೋರ್ಟ್ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದೆ. ತಡೆಯಾಜ್ಞೆ ತೆರವು ಹಿನ್ನೆಲೆ ಇನ್ಸ್‌ಪೆಕ್ಟರ್ ಶಂಕರ್ ನಾಯ್ಕ್ಗಾಗಿ ಸಿಸಿಬಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಆದರೆ ಬಂಧನ ಭೀತಿಯಿಂದ ಶಂಕರ್ ನಾಯ್ಕ್ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದಾರೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಇನ್ಸ್‌ಪೆಕ್ಟರ್ ಶಂಕರ್ ನಾಯ್ಕ್ ಅವರು ಕಳ್ಳತನ ಪ್ರಕರಣದಲ್ಲಿ ಉದ್ಯಮಿ ಹರೀಶ್ ಎಂಬುವರ ಕಾರು ಚಾಲಕ ಸಂತೋಷ್‌ನನ್ನು ಬಂಧಿಸಿ ₹72 ಲಕ್ಷವನ್ನು ಜಪ್ತಿ ಮಾಡಿದ್ದರು. ಆದರೆ ಈ ಹಣವನ್ನು ಠಾಣೆಯ ಸುಪರ್ದಿಗೆ ಕೊಡದೆ ಸ್ವಂತಕ್ಕೆ ಬಳಸಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಣ ಸಂಬಂಧ ಹಿರಿಯ ಅಧಿಕಾರಿಗಳು ನೋಟಿಸ್ ನೀಡಿದ ಬಳಿಕ…
ರಾಜೀವ್ ಗಾಂಧಿ ಅವರು ದೇಶದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಜನಾದೇಶ ಪಡೆದ ನಾಯಕರಾಗಿದ್ದರು. ಜೊತೆಗೆ ಅವರು 40ನೇ ವಯಸ್ಸಿಗೆ ಭಾರತದ ಯುವ ಪ್ರಧಾನಮಂತ್ರಿಯಾಗುವ ಮೂಲಕ ವಿಶ್ವದ ಅತ್ಯಂತ ಕಿರಿಯ ಪ್ರಧಾನಿ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. ಇನ್ನು ರಾಜೀವ್ ಗಾಂಧಿ ಜನ್ಮ ದಿನದ ಹಿನ್ನಲೆ ರಾಜಕೀಯ ನಾಯಕರು ಟ್ವೀಟ್ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ. ಇಂದು ಮಾಜಿ ಪ್ರಧಾನಿ ಹಾಗೂ ಭಾರತ ರತ್ನ ರಾಜೀವ್ ಗಾಂಧಿ ಅವರ ಜನ್ಮ ದಿನಾಚರಣೆ. ಅವರು ದೇಶದ ಆರನೇ ಪ್ರಧಾನಿಯಾಗಿದ್ದರು. ಆಗಸ್ಟ್ 20, 1944 ರಂದು ಜನಿಸಿದರು. ಶ್ರೀಮತಿ ಇಂದಿರಾ ಗಾಂಧಿ ಹಾಗೂ ಫಿರೋಝ್ ಗಾಂಧಿ ದಂಪತಿಗಳ ಮೊದಲ ಮಗ ರಾಜೀವ್ ಗಾಂಧಿ. 1951 ರಲ್ಲಿ, ರಾಜೀವ್ ಮತ್ತು ಸಂಜಯ್ ಅವರನ್ನು ಶಿವ ನಿಕೇತಾನ್ ಶಾಲೆಯಲ್ಲಿ ದಾಖಲಿಸಲಾಯಿತು. ಅಲ್ಲಿ ಶಿಕ್ಷಕರು ರಾಜೀವ್ ಅವರನ್ನು ನಾಚಿಕೆ ಮತ್ತು ಅಂತರ್ಮುಖಿ ಸ್ವಭಾವದವರು ಎನ್ನುತ್ತಿದ್ದರು. ರಾಹುಲ್ ಚಿತ್ರಕಲೆ ಮತ್ತು ರೇಖಾಚಿತ್ರದಲ್ಲಿ ಬಹಳ ಆಸಕ್ತಿ ಹೊಂದಿದ್ದರು. ಅವರನ್ನು 1954 ರಲ್ಲಿ ವೆಲ್ಹಾಮ್ ಬಾಯ್ಸ್…