ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರವಾಗಿ ತನಿಖೆಗೆ ತಡೆಯಾಜ್ಞೆ ಕೊರಿ CM ಸಿದ್ದರಾಮಯ್ಯ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ಇಂದು ಮದ್ಯಾಹ್ನ ವಿಚಾರಣೆ ನಡೆಯಲಿದೆ. https://youtu.be/3CDi8l-GJ8w?si=FSkq5h3mdxeDocca ಪ್ರಾಸಿಕ್ಯೂಶನ್‌ಗೆ ತಡೆ ಕೋರಿ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಪೀಠದ ಮುಂದೆ ಸಿಎಂ ಪರ ವಕೀಲ ಶತಭೀಷ್ ಶಿವಣ್ಣ ಅವರಿಂದ ಅರ್ಜಿ ಸಲ್ಲಿಕೆಯಾಯಿತು. ತ್ವರಿತವಾಗಿ ಅರ್ಜಿ ವಿಚಾರಣೆ ನಡೆಸುವಂತೆ ವಕೀಲರು ಮನವಿ ಮಾಡಿಕೊಂಡರು. ನ್ಯಾಯಮೂರ್ತಿಗಳು ವಿಚಾರಣೆಯನ್ನು ಮಧ್ಯಾಹ್ನ 2.30ಕ್ಕೆ ಮುಂದೂಡಿದರು. ರಾಜ್ಯಪಾಲರ ಅನುಮತಿ ರದ್ದುಪಡಿಸಲು ಕೋರಿ ಸಿದ್ದರಾಮಯ್ಯ ಅವರ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿ ಹಾಗೂ ಮೂವರು ದೂರುದಾರರನ್ನು ಪ್ರತಿವಾದಿಗಳನ್ನಾಗಿಸಿ ಅರ್ಜಿ ಸಲ್ಲಿಸಲಾಗಿದೆ. ರಾಜ್ಯಪಾಲರು ಅನುಮತಿ ನೀಡುವ ಮುನ್ನ ಕಾನೂನಿನ ಪ್ರಕ್ರಿಯೆ ಪಾಲಿಸಿಲ್ಲ. ಸಚಿವ ಸಂಪುಟದ ಶಿಫಾರಸಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಸಂವಿಧಾನದ 163ನೇ ವಿಧಿಯಂತೆ ಸಚಿವ ಸಂಪುಟದ ಶಿಫಾರಸು ಪಾಲಿಸಬೇಕು. ಅನುಮತಿಗೆ ಮುನ್ನ ದಾಖಲೆಗಳನ್ನು ಪರಿಶೀಲಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ…
Author: Prajatv Kannada
ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣರ ತುಮಕೂರು ಕಾರ್ಯಾಲಯದ ವಿವಾದ ಕೊನೆಗೂ ಸುಖಾಂತ್ಯಗೊಂಡಿದೆ. ಆಡಳಿತಾತ್ಮಕ ಒಪ್ಪಿಗೆಯೊಂದಿಗೆ ಭಾನುವಾರ ವಿದ್ಯುಕ್ತವಾಗಿ ನೂತನ ಕಚೇರಿ ಉದ್ಘಾಟನೆಗೊಂಡಿದೆ. ಮೈತ್ರಿ ಪಕ್ಷದ ಸಾವಿರಾರು ಕಾರ್ಯಕರ್ತರು, ಮುಖಂಡರ ಜಮಾವಣೆಯೊಂದಿಗೆ ಶಕ್ತಿ ಪ್ರದರ್ಶನ ಮಾಡಿ ನೂತನ ಕಾರ್ಯಾಲಯ ಆರಂಭಗೊಂಡಿದೆ. ತುಮಕೂರಿನ ಹಳೇ ಪ್ರವಾಸಿ ಮಂದಿರದಲ್ಲಿ ಕಾರ್ಯಾಲಯ ಆರಂಭಿಸಲು ರಾಜ್ಯ ಸರ್ಕಾರ ಮೊದಲು ಅನುಮತಿ ಕೊಟ್ಟಿತ್ತು. ನವೀಕರಣಗೊಂಡು ಉದ್ಘಾಟನೆಗೆ ಸಿದ್ಧಗೊಂಡ ಬಳಿಕ ಅನುಮತಿ ರದ್ದುಗೊಳಿಸಿತ್ತು. ಸರ್ಕಾರದ ಈ ಧೋರಣೆಗೆ ಮೈತ್ರಿ ನಾಯಕರು ಕೆಂಡಾಮಂಡಲವಾಗಿದ್ದರು. ಈ ನಡುವೆ ಸ್ವತಃ ಸಿಎಂ ಸಿದ್ದರಾಮಯ್ಯ ವಿ.ಸೋಮಣ್ಣರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ಬಳಿಕ ಸಿಎಂ ಸಲಹೆ ಮೇರೆಗೆ ವಿ.ಸೋಮಣ್ಣ ಗೃಹ ಸಚಿವ ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಗೊಂದಲ ಪರಿಹರಿಸಿದ್ದಾರೆ. ಹೀಗಾಗಿ ಯಾವುದೇ ಅಡ್ಡಿ ಆತಂಕ ಇಲ್ಲದೇ ಭಾನುವಾರ ಸುಸೂತ್ರವಾಗಿ ಕಚೇರಿ ಉದ್ಘಾಟನೆ ನಡೆದಿದೆ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿ ಮಂದಿರದ ಸುತ್ತಲೂ ಬಿಗಿ ಪೊಲೀಸ್ ಬಂದೋ ಬಸ್ತ್ ಒದಗಿಸಲಾಗಿತ್ತು.
ಹುಬ್ಬಳ್ಳಿ: ೪೧ ಕ್ಲಬ್‌ಗಳ ಸಂಘವು ತನ್ನ ದೀರ್ಘಾವಧಿಯ ಯೋಜನೆಯಾದ ಫ್ರೀಡಂ ಥ್ರೂ ಡಿಜಿಟಲ್ ಎಜುಕೇಶನ್ ಅಡಿಯಲ್ಲಿ ಆಗಸ್ಟ್ ೨೦೨೪ ರ ಅಂತ್ಯದ ಹೊತ್ತಿಗೆ ದೇಶದಾದ್ಯಂತ ೩೦೦ ಶಾಲೆಗಳನ್ನು ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಕೊಠಡಿಗಳೊಂದಿಗೆ ಸಜ್ಜುಗೊಳಿಸಲಿದೆ. ಇದು ೧.೫೦ ಲಕ್ಷ ವಿದ್ಯಾರ್ಥಿಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದೆ `೧ ಈ ಸಂದರ್ಭದಲ್ಲಿ ಶಾಸಕ ಪ್ರಕಾಶ್ ಕೋಳಿವಾಡ ಮಾತನಾಡಿದರು “ರಾಣೆಬೆನ್ನೂರಿನಲ್ಲಿ ೧೦೦ ಶಾಲೆಗಳನ್ನು ಸಜ್ಜುಗೊಳಿಸುವ ಮೂಲಕ, ಯಾವುದೇ ದೊಡ್ಡ ನಗರಕ್ಕೆ ಸಮಾನವಾಗಿ ದೂರದ ಊರುಗಳಲ್ಲಿನ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಪೂರೈಸುವುದು ನನ್ನ ಗುರಿಯಾಗಿದೆ. ನಮ್ಮಲ್ಲಿ ಒಬ್ಬರು ಅಥವಾ ಇಬ್ಬರು ಡಾ.ಕಲಾಮ್‌ಗಳು ಈ ಶಾಲೆಗಳಿಂದ ಬಂದರೂ, ನಮ್ಮ ಉದ್ದೇಶ ಈಡೇರುತ್ತದೆ. ಡಿಜಿಟಲ್ ಶಿಕ್ಷಣದ ಕ್ಷೇತ್ರದಲ್ಲಿ ೪೧ ಕ್ಲಬ್‌ಗಳ ಅಸೋಸಿಯೇಷನ್‌ನ ಕೆಲಸದಿಂದ ನನಗೆ ಸಂತೋಷವಾಗಿದೆ” ಎಂದರು ೪೧ ಕ್ಲಬ್ ಆಫ್ ಇಂಡಿಯಾದ ಅಧ್ಯಕ್ಷ ಅಸೋಸಿಯೇಶನ್ ೪೧ಎಆರ್ ಶ್ರೀನಿವಾಸ ಸರಸ್ವತುಲ ಮಾತನಾಡಿ, “ಫ್ರೀಡಂ ಥ್ರೂ ಡಿಜಿಟಲ್ ಎಜುಕೇಶನ್ ಎಂಬುದು ನಮ್ಮ ದೀರ್ಘಾವಧಿಯ ಯೋಜನೆಯಾಗಿದ್ದು, ಹಿಂದುಳಿದ ಹಿನ್ನೆಲೆ ಮತ್ತು ಗ್ರಾಮೀಣ…
ಲಕ್ನೋ: ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ ನಿಯಂತ್ರಿಸಲು ಭಾರತೀಯರು ಸಾಕಷ್ಟು ಗಮನ ಹರಿಸುತ್ತಿಲ್ಲ ಎಂದು ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್ ನಾರಾಯಣ ಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ಪ್ರಯಾಗ್‌ರಾಜ್‌ದ ಮೋತಿಲಾಲ್ ನೆಹರು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಏರುತ್ತಿರುವ ಜನಸಂಖ್ಯೆ ದೇಶಕ್ಕೆ ಸವಾಲಾಗಿದೆ. ಜನಸಂಖ್ಯೆ ನಿಯಂತ್ರಿಸಲು ಭಾರತೀಯರು ಹೆಚ್ಚು ಗಮನ ಹರಿಸಬೇಕು. ಇದರಿಂದ ತಲಾದಾಯ ಮತ್ತು ಆರೋಗ್ಯ ಸುಧಾರಣೆಯಾಗಬಹುದು ಎಂದು ತಿಳಿಸಿದರು. ಭಾರತೀಯರು ತುರ್ತು ಪರಿಸ್ಥಿತಿಯ ಸಮಯದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯ ಬಗ್ಗೆ ಗಮನ ಹರಿಸಲಿಲ್ಲ ಎಂದು ಕಳವಳವ್ಯಕ್ತಪಡಿಸಿದ ಅವರು ಅಮೆರಿಕ, ಬ್ರೆಜಿಲ್ ಮತ್ತು ಚೀನಾಕ್ಕೆ ಹೋಲಿಸಿದರೆ ಭಾರತದ ತಲಾದಾಯ ತುಂಬಾ ಕಡಿಮೆ ಇದೆ ಎಂದು ಹೇಳಿದರು. ನಾವು ದೊಡ್ಡ ಗುರಿಯನ್ನು ಹೊಂದಿರಬೇಕು. ಹಾಗೆಯೇ ಕಷ್ಟಪಟ್ಟು ದುಡಿಯುವ ಮೂಲಕ ನಮ್ಮ ಗುರಿಯನ್ನು ತಲುಪಬೇಕು ಎಂದರು. ಘಟಿಕೋತ್ಸವದಲ್ಲಿ ಸ್ನಾತಕೋತ್ತರ ಪದವಿಯ 34 ಮತ್ತು ಪದವಿಯಲ್ಲಿ 13 ಚಿನ್ನದ ಪದಕ ವಿತರಣೆ ಮಾಡಲಾಯಿತು.
ಬೆಂಗಳೂರು:- ಟ್ರಾಫಿಕ್ ಪೊಲೀಸರೇ ನೀವು ನೋಡಲೇಬೇಕಾದ ಸ್ಟೋರಿ. ನಗರದಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ ಹೆಚ್ಚುತ್ತಿದ್ದು, ಟ್ರಾಫಿಕ್ ಪೊಲೀಸರು ಎಮಿಷನ್ ಟೆಸ್ಟ್ ಸರ್ಟಿಫಿಕೇಟ್ ತಪಾಸಣೆ ಯಾಕೆ ಮಾಡುತ್ತಿಲ್ಲ ಎಂಬ ಪ್ರಶ್ನೆ ಎದ್ದಿದೆ. https://youtu.be/PZ1jZ5zI21Y?si=n3eIi5fIR-SHrFhO ನಗರದಲ್ಲಿ ಯಾವುದೇ ಬಸ್, ಲಾರಿ, ಕ್ಯಾಬ್ ಆಟೋ ಹಾಗೂ ಬೈಕ್ಗಳಲ್ಲಿ ವಾಯುಮಾಲಿನ್ಯ ತಪಾಸಣಾ ಸರ್ಟಿಫಿಕೇಟ್ಗಳೇ ಇಲ್ಲ. ಪೋಲಿಸರು, ಆರ್ಟಿಒ ಅಧಿಕಾರಿಗಳು ಎಮಿಷನ್ ಟೆಸ್ಟ್ ಸರ್ಟಿಫಿಕೇಟ್ ಇಲ್ಲಾಂದರೆ, ಈ ಮೊದಲು 500 ರುಪಾಯಿ ದಂಡ ವಿಧಿಸುತ್ತಿದ್ದರು. ಆದರೆ ಈಗ ಇಬ್ಬರೂ ವಾಹನಗಳನ್ನು ತಪಾಸಣೆ ಮಾಡುತ್ತಿಲ್ಲ, ದಂಡವನ್ನು ವಿಧಿಸುತ್ತಿಲ್ಲ. ಹಾಗಾಗಿ ವಾಹನಗಳ ಮಾಲೀಕರು ಎಮಿಷನ್ ಟೆಸ್ಟ್ ಮಾಡಿಸಲು ಮುಂದಾಗುತ್ತಿಲ್ಲ. ಈ ಬಗ್ಗೆ ಪರಿಸರ ತಜ್ಞ ಪ್ರಸಾದ್ ಆತಂಕ ವ್ಯಕ್ತಪಡಿಸಿದ್ದಾರೆ. ಪೋಲಿಸರು ಮತ್ತು ಟ್ರಾಫಿಕ್ ಪೋಲಿಸರು ಎಮಿಷನ್ ಟೆಸ್ಟ್ ಸರ್ಟಿಫಿಕೇಟ್ ತಪಾಸಣೆ ಮಾಡದಿರಲು ಕಾರಣ, ಪ್ರಮಾಣ ಪತ್ರ ಇಲ್ಲ ಎಂದಾದರೆ, ಆ ನಿಯಮ ಉಲ್ಲಂಘನೆಗೆ ಸ್ಥಳದಲ್ಲಿಯೇ ದಂಡ ವಿಧಿಸುವ ಅವಕಾಶ ಈಗಿಲ್ಲ. ನ್ಯಾಯಾಲಯದಲ್ಲಿ ದಂಡ ಪಾವತಿ ಮಾಡಬೇಕು. ಇದರಿಂದ ಆರ್ಟಿಓ ಮತ್ತು ಟ್ರಾಫಿಕ್…
ಬೆಂಗಳೂರು:- ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಬೆಂಗಳೂರಿನಿಂದ ಬೆಳಗಾವಿ, ವಿಜಯಪುರಕ್ಕೆ ವಿಶೇಷ ರೈಲುಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಬರುವ ಹಬ್ಬದ ಸೀಸನ್‌ಗಾಗಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ಬೆಳಗಾವಿ ನಡುವೆ ಮತ್ತು ಎಸ್‌ಎಂವಿಟಿ ಬೆಂಗಳೂರಿನಿಂದ ವಿಜಯಪುರ ನಿಲ್ದಾಣಗಳ ನಡುವೆ ಸೆಪ್ಟೆಂಬರ್ 5 ರಿಂದ ವಿಶೇಷ ರೈಲುಗಳ ವ್ಯವಸ್ಥೆ ಮಾಡಿದೆ. https://youtu.be/PZ1jZ5zI21Y?si=Dgl0hVrNCI24-tyn ರೈಲು ಸಂಖ್ಯೆ 06555 ಯಶವಂತಪುರ-ಬೆಳಗಾವಿ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್, ಸೆಪ್ಟೆಂಬರ್ 5 ರಂದು ಸಂಜೆ 7.30 ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 7.15 ಕ್ಕೆ ಬೆಳಗಾವಿ ತಲುಪಲಿದೆ. ರೈಲು ಸಂಖ್ಯೆ 06556 ಸೆಪ್ಟೆಂಬರ್ 6 ರಂದು ಬೆಳಿಗ್ಗೆ 8.45 ಕ್ಕೆ ಬೆಳಗಾವಿಯಿಂದ ಹೊರಟು ಅದೇ ದಿನ ರಾತ್ರಿ 8 ಗಂಟೆಗೆ ಯಶವಂತಪುರವನ್ನು ತಲುಪಲಿದೆ. ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ಎರಡೂ ನಿಲ್ದಾಣಗಳಲ್ಲಿ ಈ ರೈಲು ನಿಲುಗಡೆ ಹೊಂದಿದೆ. ರೈಲು ಸಂಖ್ಯೆ 06557 ಯಶವಂತಪುರ-ಬೆಳಗಾವಿ-ಯಶವಂತಪುರ…
ಭುವನೇಶ್ವರ: ಒಡಿಶಾದ ಐದು ಜಿಲ್ಲೆಗಳಲ್ಲಿ ಭಾನುವಾರ ಸಿಡಿಲು ಬಡಿದು 6 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ 2 ದಿನದಲ್ಲಿ ಸಿಡಿಲಿನಿಂದ ಬಲಿಯಾದವರ ಸಂಖ್ಯೆ 15ಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ರಾಜ್ಯದ ವಿವಿಧ ಭಾಗಗಳಲ್ಲಿ 9 ಮಂದಿ ಸಾವನ್ನಪ್ಪಿದ್ದರು. ಸರ್ಕಾರದ ಅಂಕಿ ಅಂಶಗಳ ಪ್ರಕಾರ ಕೇಂದ್ರಪಾರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದರೆ, ಬಾಲಸೋರ್, ಭದ್ರಕ್, ಜಾಜ್‍ಪುರ ಮತ್ತು ಸುವರ್ಣಪುರದಲ್ಲಿ ಸಿಡಿಲು ಬಡಿದು ತಲಾ ಒಬ್ಬರು ಬಲಿಯಾಗಿದ್ದಾರೆ. ಅಲ್ಲದೇ ಹಲವರು ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಈ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಸಿಡಿಲು ಬಡಿದು ಹಲವರು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಸಿಡಿಲಿನಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಅಲ್ಲದೇ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಅವರು ತಿಳಿಸಿದ್ದಾರೆ.
ನವದೆಹಲಿ: ಲ್ಯಾಟರಲ್ ಎಂಟ್ರಿ ಮೂಲಕ ಸರ್ಕಾರಿ ನೌಕರರನ್ನು ನೇಮಕ ಮಾಡಿಕೊಳ್ಳುವ ಮೂಲಕ ಕೇಂದ್ರ ಸರ್ಕಾರ ದೇಶ ವಿರೋಧಿ ನಿರ್ಧಾರ ಕೈಗೊಂಡಿದೆ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿಕೆಯ ಬೆನ್ನಲ್ಲೇ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ತಿರುಗೇಟು ನೀಡಿದ್ದಾರೆ. ಲ್ಯಾಟರಲ್ ಎಂಟ್ರಿ ವಿಷಯದಲ್ಲಿ ಕಾಂಗ್ರೆಸ್ ಬುಟಾಟಿಕೆ ಪ್ರದರ್ಶಿಸುತ್ತಿವುದು ಸ್ಪಷ್ಟವಾಗಿದೆ. ಲ್ಯಾಟರಲ್ ಎಂಟ್ರಿ ಪರಿಕಲ್ಪನೆಯನ್ನು ಪರಿಚಯಿಸಿದ್ದೇ ಯುಪಿಎ ಸರ್ಕಾರ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ ಅವರು, 2005 ರಲ್ಲಿ ಯುಪಿಎ ಸರ್ಕಾರ ವೀರಪ್ಪ ಮೊಯ್ಲಿ ಅಧ್ಯಕ್ಷತೆಯಲ್ಲಿ ಎರಡನೇ ಆಡಳಿತ ಸುಧಾರಣಾ ಆಯೋಗವನ್ನು ಸ್ಥಾಪಿಸಲಾಗಿತ್ತು. ಆಡಳಿತ ಸುಧಾರಣಾ ಆಯೋಗ ಮಹತ್ವದ ಹುದ್ದೆಗಳಿಗೆ ಪರಿಣಿತಿ ಹೊಂದಿರುವ ತಜ್ಞರ ನೇಮಕಾತಿಯನ್ನು ಮಾಡುವಂತೆ ಶಿಫಾರಸು ಮಾಡಿತ್ತು. ಈ ಶಿಫಾರಸನ್ನು ಜಾರಿಗೊಳಿಸಲು ಎನ್‌ಡಿಎ ಸರ್ಕಾರ ಪಾರದರ್ಶಕ ವಿಧಾನವನ್ನು ರಚಿಸಿದೆ. ಯುಪಿಎಸ್‌ಸಿ ಮೂಲಕ ಪಾರದರ್ಶಕವಾಗಿ ಮತ್ತು ನ್ಯಾಯಯುತವಾಗಿ ನೇಮಕಾತಿ ನಡೆಯಲಿದೆ. ಈ ಸುಧಾರಣೆಯು ಆಡಳಿತವನ್ನು ಸುಧಾರಿಸುತ್ತದೆ ಎಂದು ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.
ರಕ್ಷಾ ಬಂಧನ(ರಾಖಿ) ಗಾಯತ್ರಿ ಜಯಂತಿ ಸೂರ್ಯೋದಯ: 06:03, ಸೂರ್ಯಾsta : 06:35 ಶಾಲಿವಾಹನ ಶಕೆ1946, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2080,ಗ್ರಿಷ್ಮ ಋತು, ದಕ್ಷಿಣಾಯಣ , ಶ್ರಾವಣ ಮಾಸ, ಶುಕ್ಲ ಪಕ್ಷ, ತಿಥಿ: ಹುಣ್ಣಿಮೆ ನಕ್ಷತ್ರ: ಶ್ರವಣ ರಾಹು ಕಾಲ: 07:30 ನಿಂದ 09:00 ತನಕ ಯಮಗಂಡ: 10:30 ನಿಂದ 12:00 ತನಕ ಗುಳಿಕ ಕಾಲ:03:00 ನಿಂದ 04:30 ತನಕ ಅಮೃತಕಾಲ: ರಾ 8:24 ನಿಂದ ರಾ.9:50 ತನಕ ಅಭಿಜಿತ್ ಮುಹುರ್ತ: ಬೆ.11:54 ನಿಂದ ಮ.12:44 ತನಕ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು. Mob. 93534 88403 ಮೇಷ : ಕೃಷಿ ಭೂಮಿ ಖರೀದಿಸುವ ಚಿಂತನೆ, ಭೂಮಿ ವಿಚಾರಕ್ಕಾಗಿ ವಾಗ್ವಾದ, ರಾಜೀ ಮಾಡಿಕೊಳ್ಳುವುದು ಉತ್ತಮ,ಸಂಗಾತಿಯಿಂದ ಒಲವಿನ ಉಡುಗೊರೆ,ಸ್ನೇಹಿತರ ಸಹಕಾರದಿಂದ ಉದ್ಯೋಗ ಲಭಿಸಲಿದೆ. ಕಠಿಣ ಶ್ರಮದಿಂದ ಸರಕಾರಿ ಉದ್ಯೋಗ ಸಿಗುತ್ತದೆ.ಕೃಷಿಕರಿಗೆ…