Author: Prajatv Kannada

ಹುಬ್ಬಳ್ಳಿ : ಸರಣಿ ರಜೆ ಮುಗಿಸಿ ಕಾರ್ಯಕ್ಷೇತ್ರಗಳಿಗೆ ಹಿಂದಿರುಗುವವರು ಮತ್ತು ಇತರೆ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಯಿತು ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. https://youtu.be/g87rvQApQI4?si=6WsaqS8pc-9nyPDS ಆಗಸ್ಟ 15ರಂದು ಗುರುವಾರ ಸ್ವಾತಂತ್ರ್ಯ ದಿನಾಚರಣೆ, 16ರಂದು ವರಮಹಾಲಕ್ಷ್ಮೀ ಹಬ್ಬ,17ರಂದು ವಾರಾಂತ್ಯ ಶನಿವಾರ ಹಾಗೂ 18ರಂದು ರವಿವಾರದ ಹಿನ್ನೆಲೆಯಲ್ಲಿ ನೌಕರರು ಸೇರಿದಂತೆ ದೂರದ ಊರುಗಳಲ್ಲಿ ನೆಲೆಸಿರುವ ಹಲವರು ಸ್ವಂತ ಊರುಗಳಿಗೆ ಆಗಮಿಸಿದ್ದರು. ಆದ್ದರಿಂದ ಈ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ ಹೆಚ್ಚಾಗಿತ್ತು. ಅದಕ್ಕೆ ತಕ್ಕಂತೆ ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಲಾಯಿತು. ರಜೆ ಮುಗಿಸಿಕೊಂಡು ತಮ್ಮ ಕಾರ್ಯಕ್ಷೇತ್ರಗಳಿಗೆ ಹಿಂದಿರುಗುವವರು ಮತ್ತು ಇತರ ಪ್ರಯಾಣಿಕರಿಂದಾಗಿ ರವಿವಾರ ಹುಬ್ಬಳ್ಳಿಯ ಹೊಸೂರು ಬಸ್ ನಿಲ್ದಾಣ ಹಾಗೂ ಗೋಕುಲ ರಸ್ತೆ ಬಸ್ ನಿಲ್ದಾಣಗಳಿಂದ ಮಧ್ಯಾಹ್ನದಿಂದಲೇ ನೆರೆಯ ಜಿಲ್ಲೆಗಳು ಹಾಗೂ ದೂರದ ಊರುಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿತ್ತು. ಜಿಲ್ಲೆಯೊಳಗೆ ವಿವಿಧ ಸ್ಥಳಗಳು ಸೇರಿದಂತೆ ಬೆಂಗಳೂರು,…

Read More

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಗ್ರಾಜುಯೇಟ್‌ ಅಪ್ರೆಂಟಿಸ್‌ಗಳು, ಟೆಕ್ನೀಷಿಯನ್‌ ಅಪ್ರೆಂಟಿಸ್‌ ಹುದ್ದೆಗಳನ್ನು ಭರ್ತಿ ಮಾಡಲು ಎಂಪ್ಲಾಯ್ಮೆಂಟ್‌ ನೋಟಿಫಿಕೇಶನ್‌ ಅನ್ನು ಬಿಡುಗಡೆ ಮಾಡಲಾಗಿದೆ. ಡಿಪ್ಲೊಮ, ಡಿಗ್ರಿ ಇಂಜಿನಿಯರಿಂಗ್‌ ಶಿಕ್ಷಣವನ್ನು 2020, 2021, 2022, 2023, 2024 ನೇ ಸಾಲಿನಲ್ಲಿ ಪಾಸಾದವರು ಅರ್ಜಿ ಸಲ್ಲಿಸಬಹುದು. https://youtu.be/cKrYSRQhk3o?si=PqT7405aOylPgAB3 ಹುದ್ದೆಗಳ ಕುರಿತ ಇನ್ನಷ್ಟು ಮಾಹಿತಿಗಳು ಕೆಳಗಿನಂತಿದ್ದು, ಆಸಕ್ತರು ಅರ್ಜಿ ಸಲ್ಲಿಸಿ. ನೇಮಕಾತಿ ಪ್ರಾಧಿಕಾರ : ಕೊಚ್ಚಿನ್ ಶಿಪ್‌ಯಾರ್ಡ್‌ ಲಿಮಿಟೆಡ್‌. ಹುದ್ದೆ ಹೆಸರು : ಗ್ರಾಜುಯೇಟ್, ಡಿಪ್ಲೊಮ ಅಪ್ರೆಂಟಿಸ್. ಹುದ್ದೆಗಳ ಸಂಖ್ಯೆ : 140 ಕೊಚ್ಚಿನ್‌ ಶಿಪ್‌ಯಾರ್ಡ್‌ ಲಿಮಿಟೆಡ್‌ ನೀಡುವ ಮಾಸಿಕ ಸ್ಟೈಫಂಡ್‌ ವಿವರ ಟೆಕ್ನೀಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಮಾಸಿಕ ಸ್ಟೈಫಂಡ್‌ : ರೂ.11,200. ಗ್ರಾಜುಯೇಟ್‌ ಅಪ್ರೆಂಟಿಸ್‌ ಹುದ್ದೆಗಳಿಗೆ ಮಾಸಿಕ ಸ್ಟೈಫಂಡ್‌ : ರೂ.12,000. ಅರ್ಹತೆಗಳು ಟೆಕ್ನೀಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಡಿಪ್ಲೊಮ ಪಾಸಾದವರು, ಗ್ರಾಜುಯೇಟ್‌ ಅಪ್ರೆಂಟಿಸ್‌ ಹುದ್ದೆಗಳಿಗೆ ಇಂಜಿನಿಯರಿಂಗ್ ಪದವಿ ಪಾಸ್ ಮಾಡಿರಬೇಕು. ಈ ವಿದ್ಯಾರ್ಹತೆಗಳನ್ನು 2020, 2021, 2022, 2023, 2024 ನೇ ಸಾಲಿನಲ್ಲಿ…

Read More

ಬೆಂಗಳೂರು: ಎಚ್ ಎಸ್ ಆರ್ ಲೇಔಟ್ ನಲ್ಲಿ ಯುವತಿ ಮೇಲೆ‌ ಅತ್ಯಾಚಾರ ವೆಸಗಿದ್ದ ಆರೋಪಿಯನ್ನು ಬಂಧಿಸಿದ ಆಡುಗೋಡಿ ಪೊಲೀಸರು https://youtu.be/aS_hb7EKut8?si=sEHQ4tz3Dy1hm3FV ಹೌದು .. ನಗರದ ಆಡುಗೋಡಿಯಲ್ಲಿ ಆರೋಪಿಯನ್ನ ಬಂಧನ ಮಾಡಲಾಗಿದ್ದು ಮುಕೇಶ್ವರನ್ ಬಂಧಿತ ಆರೋಪಿ. ಸಂತ್ರಸ್ತ ಯುವತಿಗೆ ಡ್ರಾಪ್ ನೀಡುವ ನೆಪದಲ್ಲಿ ಅತ್ಯಾಚಾರ ವೆಸಗಿ ಎಸ್ಕೇಪ್‌ ಆಗಿದ್ದ ಆರೋಪಿಯನ್ನ ಪೊಲೀಸರು ಹಿಡಿದು ಜಾಡಿಸಿದ್ದಾರೆ. ಡ್ಯಾನ್ಸ್ ಕೊರಿಯೋಗ್ರಫರ್ ಆಗಿರುವ ಅತ್ಯಾಚಾರ ಪ್ರಕರಣದ ಆರೋಪಿ ಮೂಲತ: ತಮಿಳುನಾಡು ಮೂಲದವನು ಆಡುಗೋಡಿಯ ಚಂದ್ರಪ್ಪನಗರದಲ್ಲಿ ವಾಸವಾಗಿದ್ದ ಆರೋಪಿ ಬೈಕ್ ನಂಬರ್ ಅಧಾರಿಸಿ ಆರೋಪಿಯ ಬಂಧನ ಮಾಡಲಾಗಿದ್ದು ಸದ್ಯ ಆರೋಪಿಯನ್ನು ಬಂಧಿಸಿ ವಿಚಾರಣೆ ಗೆ ಒಳಪಡಿಸಿರುವ ಪೊಲೀಸರು ಮುಂದಿನ ವಿಚಾರಣೆಯನ್ನು ಕೈಗೆತ್ತಿಕೊಳ್ಳುತ್ತಾರೆ.

Read More

ಮುಂಬೈ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಕೆಕೆಟ್ ಜಲಗಾಂವ್ ಗ್ರಾಮದ ಶಾಲೆಯಲ್ಲಿ ಬಿಸ್ಕೆಟ್ ತಿಂದು 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಶನಿವಾರ ಶಾಲೆಯಲ್ಲಿ ಪೌಷ್ಠಿಕ ಆಹಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಬಿಸ್ಕೆಟ್ ವಿತರಿಸಲಾಗಿತ್ತು. ಬಿಸ್ಕೆಟ್ ತಿಂದ ನಂತರ ವಿದ್ಯಾರ್ಥಿಗಳಲ್ಲಿ ವಾಕರಿಕೆ ಮತ್ತು ವಾಂತಿಯಾಗಿ, ಕೆಲವೇ ಕ್ಷಣಗಳಲ್ಲಿ ಅಸ್ವಸ್ಥರಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಗ್ರಾಮದ ಮುಖ್ಯಸ್ಥರು ತಕ್ಷಣ ವಾಹನದ ವ್ಯವಸ್ಥೆ ಮಾಡಿ ವಿದ್ಯಾರ್ಥಿಗಳನ್ನು ನಗರದ ಆಸ್ಪತ್ರೆಗೆ ದಾಖಲಿಸದ್ದಾರೆ. ಮುಂಜಾನೆ ಸುಮಾರು 8:30ಕ್ಕೆ ವಿದ್ಯಾರ್ಥಿಗಳನ್ನ ಆಸ್ಪತ್ರೆಗೆ ದಾಖಲಿಸಲಾಯಿತು. 257 ವಿದ್ಯಾರ್ಥಿಗಳಲ್ಲಿ ಫುಡ್ ಪಾಯಿಸನ್ ಆಗಿತ್ತು. ಅದರಲ್ಲಿ 153 ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ. 7 ವಿದ್ಯಾರ್ಥಿಗಳ ಸ್ಥಿತಿ ಗಂಭೀರವಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಛತ್ರಪತಿ ಶಂಭಾಜಿನಗರದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ನಗರದ ವೈದ್ಯಾಧಿಕಾರಿ ಡಾ. ಬಾಬಾಸಾಹೇಬ್ ಘುಘೆ ತಿಳಿಸಿದ್ದಾರೆ. ಶಾಲೆಯಲ್ಲಿ ಒಟ್ಟು 296 ವಿದ್ಯಾರ್ಥಿಗಳಿದ್ದಾರೆ. ಸದ್ಯ ಪ್ರಕರಣ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

Read More

ನವದೆಹಲಿ: ಹಿಂದಿನ ಸರ್ಕಾರಗಳ ತುಷ್ಟೀಕರಣ ನೀತಿಯಿಂದಾಗಿ ಭಾರತದಲ್ಲಿ ಪೌರತ್ವ ಬಯಸುತ್ತಿರುವ ಹಿಂದೂ, ಬೌದ್ಧ, ಸಿಖ್‌, ಜೈನ ನಿರಾಶ್ರಿತರಿಗೆ ನ್ಯಾಯ ಒದಗಿಸಲಿಲ್ಲ ಎಂದು ಇಂಡಿಯಾ ಒಕ್ಕೂಟದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕಿಡಿಕಾರಿದ್ದಾರೆ. ಅಮಿತ್ ಶಾ ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ 188 ಹಿಂದೂ ನಿರಾಶ್ರಿತರಿಗೆ ಸಿಎಎ ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳನ್ನು ವಿತರಿಸಿದರು. ಸಿಎಎ ಕೇವಲ ಜನರಿಗೆ ಪೌರತ್ವ ನೀಡುವುದಕ್ಕಾಗಿ ಅಲ್ಲ. ಇದು ಲಕ್ಷಾಂತರ ಜನರಿಗೆ ನ್ಯಾಯ ಮತ್ತು ಹಕ್ಕುಗಳನ್ನು ನೀಡುತ್ತದೆ. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳ ತುಷ್ಟೀಕರಣದ ರಾಜಕೀಯದಿಂದಾಗಿ, ದೇಶದಲ್ಲಿ ಆಶ್ರಯ ಪಡೆದ ಜನರಿಗೆ 1947 ರಿಂದ 2014 ರವರೆಗೆ ನ್ಯಾಯ ಸಿಗಲಿಲ್ಲ. ಅವರು ಚಿತ್ರಹಿಂಸೆಗೊಳಗಾದರು. ನೆರೆಯ ದೇಶಗಳಲ್ಲಿ ಅವರು ಹಿಂದೂ, ಬೌದ್ಧ, ಸಿಖ್ ಅಥವಾ ಜೈನರಾಗಿದ್ದರು. ಆದರೆ ಅವರ ದೇಶದಲ್ಲಿಯೂ ಸಹ ಅವರನ್ನು ಹಿಂಸಿಸಲಾಯಿತು. ಇಂಡಿಯಾ ಮೈತ್ರಿಕೂಟದ ತುಷ್ಟೀಕರಣ ರಾಜಕೀಯವು ಅವರಿಗೆ ನ್ಯಾಯವನ್ನು ನೀಡಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ವಿಭಜನೆಯಾದಾಗ ಗಲಭೆಗಳು ನಡೆದವು. ಪಾಕಿಸ್ತಾನ,…

Read More

ಬೆಂಗಳೂರು:- ರಾಜ್ಯಪಾಲರು ಕುಮಾರಸ್ವಾಮಿ ಮನೆ ಕ್ಲರ್ಕಾ!? ಎಂದು ಹೇಳುವ ಮೂಲಕ CM ಇಬ್ರಾಹಿಂ ವಾಗ್ದಾಳಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ವಿಚಾರವಾಗಿ ಮಾತನಾಡಿದ ಅವರು, ಸಾಮಾನ್ಯ ಮನುಷ್ಯನ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ರಾಜ್ಯಪಾಲರ ನಿರ್ಧಾರದ ವಿರುದ್ಧ ನಾನೂ ಪ್ರತಿಭಟನೆ ಮಾಡುತ್ತೇನೆ. ಸುಪ್ರೀಂಕೋರ್ಟ್​ಗೆ ಹೋಗಲು ಹೆಚ್​ಡಿಕೆ ಹೇಳ್ತಾರೆ, ‘ರಾಜ್ಯಪಾಲರು ಇವರ ಮನೆ ಕ್ಲರ್ಕಾ. ಅಮಿತ್ ಶಾ ಮನೆ ಮುಂದೆ ಹೋಗಿ ಅಪ್ಪ, ಮಗ ಏಕೆ ಕುಳಿತಿದ್ದರು?. ಸುಪ್ರೀಂಕೋರ್ಟ್‌ಗೆ ಹೋಗಿ ಎಂದು ಕುಮಾರಸ್ವಾಮಿ ಹೇಳುತ್ತಾರೆ. ರಾಜ್ಯಪಾಲರು ಟಿ.ಜೆ.ಅಬ್ರಹಾಂಗೂ ಇದೇ ರೀತಿ ಹೇಳಬೇಕಿತ್ತು. ಮಾಜಿ ಸಿಎಂ ಕುಮಾರಸ್ವಾಮಿ ಅವರದ್ದು ನಿತ್ಯ ತೆಗೆದು ಇಡುತ್ತೇನೆ. ನಾನು ಹಳೇ ಭೂ ಕೈಲಾಸ ನಾಟಕ ಬರೆದವನು, ಎಲ್ಲಾ ಗೊತ್ತಿದೆ. ಬಸ್ ಸ್ಟ್ಯಾಂಡ್ ಬಸವಿಯರು ಪತಿವ್ರತೆ ಪಾಠ ಹೇಳುವಂಗೆ ಆಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Read More

ಬೆಂಗಳೂರು:- ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿರುವ ಹೊತ್ತಲ್ಲೇ ಸಿದ್ದರಾಮಯ್ಯ ಅವರು ಆಗಸ್ಟ್ 23ರಂದು ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಇದು ಭಾರೀ ಸಂಚಲನ ಮೂಡಿಸಿದೆ. ಮುಡಾ ಹಗರಣದಲ್ಲಿ ಸಿಲುಕಿಕೊಂಡಿರುವ ಸಿದ್ದರಾಮಯ್ಯ ಅವರು ಆಗಸ್ಟ್ 23ರಂದು ದೆಹಲಿಗೆ ತೆರಳಲಿದ್ದು, ಪ್ರಾಸಿಕ್ಯೂಷನ್ ವಿಚಾರದ ಬಗ್ಗೆ ಹೈಕಮಾಂಡ್​ ನಾಯಕರ ಜೊತೆ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಹೈಕಮಾಂಡ್ ಮಟ್ಟದಲ್ಲಿ ಹಿರಿಯ ವಕೀಲರ ಭೇಟಿಗೆ ಸಿಎಂ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ರಾಜ್ಯಪಾಲರ ನಡೆ ವಿರುದ್ಧ ದೂರು ನೀಡುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ದೆಹಲಿಗೆ ತೆರಳುವ ಒಂದು ದಿನ ಮುನ್ನ ಅಂದರೆ ಆಗಸ್ಟ್ 22ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಸಭೆಯಲ್ಲಿ ಕೆಲ ರಾಜ್ಯ ರಾಜಕಾರಣದ ಬೆಳವಣಿಗಳ ಬಗ್ಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ. ಅಲ್ಲದೇ ಎಲ್ಲಾ ಶಾಸಕರು ತಮ್ಮ ಬೆಂಬಲಕ್ಕಿರುವಂತೆ ಮನವಿ ಮಾಡಲಿದ್ದಾರೆ. ರಾಜ್ಯಪಾಲರ ಆದೇಶದಕ್ಕೆ ತಡೆ ನೀಡುವಂತೆ ಹೈಕೋರ್ಟ್​ ನಾಳೆ ಅರ್ಜಿ ಸಲ್ಲಿಸಲಿದ್ದಾರೆ. ಒಂದು ವೇಳೆ ಹೈಕೋರ್ಟ್​ ನಿರಾಕರಿಸಿದರೆ…

Read More

ಆನೇಕಲ್:- ಬೆಂಗಳೂರು ಹೊರ ವಲಯದ ಆನೇಕಲ್ ನ ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಆರು ಮಂದಿ ರೋಗಿಗಳಲ್ಲಿ ಝಿಕಾ ವೈರಸ್ ಪತ್ತೆಯಾಗಿದೆ. ಆರು‌ ಮಂದಿಗೆ ಚಳಿ, ಜ್ವರ ಮತ್ತು ಮೈಕೈ ನೋವಿನಿಂದ ಡೆಂಗ್ಯೂ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದವು. ಡೆಂಗ್ಯೂ ರ‍್ಯಾಂಡಮ್‌ ಟೆಸ್ಟ್ ವೇಳೆ ಝಿಕಾ ವೈರಸ್ ಪತ್ತೆಯಾಗಿದೆ. ಸದ್ಯ ಮನೆಯಲ್ಲಿ ಎಲ್ಲರೂ ವಿಶ್ರಾಂತಿ ಪಡೆಯುತ್ತಿದ್ದಾರೆ. ಝಿಕಾ ವೈರಸ್ ಪತ್ತೆ ಹಿನ್ನೆಲೆ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ. ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರದ 3 ಕಿ.ಮೀ ರೇಡಿಯಸ್ ಕಂಟೋನ್ಮೆಂಟ್ ಝೋನ್ ಎಂದು ಘೋಷಣೆ ಮಾಡಲಾಗಿದೆ. ಸೊಳ್ಳೆಗಳ ಸಂತಾನೋತ್ಪತ್ತಿ ಆಗದಂತೆ ಕ್ರಮವಹಿಸಲಾಗಿದ್ದು, ಫಾಗಿಂಗ್, ಲಾರ್ವ ನಾಶ ಸೇರಿದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ.

Read More

ಬೆಂಗಳೂರು:- ಚಂದ್ರಲೇಔಟ್ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ತಾಯಿ-ಮಗನನ್ನು ಕಿಡ್ನ್ಯಾಪ್‌ ಮಾಡಿ ಕಿರುಕುಳ ನೀಡಿದ ಆರೋಪದಲ್ಲಿ 9 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹಣ ವಸೂಲಿ ಮಾಡಲು ಯುವಕ ಹಾಗೂ ಆತನ ತಾಯಿಯನ್ನು ಆರೋಪಿಗಳು ಅಪಹರಿಸಿ, ಕಿರುಕುಳ ನೀಡಿದ್ದರು ಎನ್ನಲಾಗಿದೆ. ವರುಣ್ ಮತ್ತು ಆತನ ತಾಯಿಯನ್ನು ಅಪಹರಣ ಮಾಡಲಾಗಿತ್ತು. ರೌಡಿ ಶೀಟರ್‌ಗಳಾದ ಜೋಸೆಫ್, ಶ್ರೀನಿವಾಸ್ @ ಪಾಗಲ್ ಸೀನಾ, ಸೌಮ್ಯಾ, ಪ್ರತಾಪ್, ಜತಿನ್, ವಿಘ್ನೇಶ್, ಸೈಯದ್ ಶಹಬುದ್ದೀನ್, ಸ್ವಾತಿ, ಮಾದೇಶ ಬಂಧಿತ ಆರೋಪಿಗಳು ಎನ್ನಲಾಗಿದೆ. ವರುಣ್ ಹಾಗೂ ತಾಯಿ ಇಬ್ಬರು ಸೇರಿ ಕಳ್ಳತನ ಮಾಡಿರುವ ವಿಚಾರ ಆರೋಪಿಗಳಿಗೆ ತಿಳಿದಿತ್ತು. ಹಾಗಾಗಿ ಕಳ್ಳತನ ಮಾಡಿರುವ ಹಣ ನೀಡುವಂತೆ ತಾಯಿ-ಮಗನನ್ನು ಆರೋಪಿಗಳು ಬೆದರಿಸಿದ್ದರು. ಆದರೆ, ಅವರು ಹಣ ನೀಡದ ಹಿನ್ನೆಲೆ ತಾಯಿ- ಮಗನನ್ನು ಆರೋಪಿಗಳು ಕಿಡ್ನ್ಯಾಪ್ ಮಾಡಿದ್ದರು. ಆ. 13ರಂದು ತಾಯಿ-ಮಗನನ್ನು ಆರೋಪಿಗಳಾದ ಜೋಸೇಫ್ ಮತ್ತು ಶ್ರೀನಿವಾಸ್@ಪಾಗಲ್ ಸೀನಾ ಕಿಡ್ನ್ಯಾಪ್‌ ಮಾಡಿದ್ದರು. ನಂತರ ಪರಿಚಯಸ್ಥ ಪ್ರತಾಪ್ ಮನೆಯಲ್ಲಿ ಅಕ್ರಮವಾಗಿ ಇರಿಸಿ ಟಾರ್ಚರ್ ನೀಡಲಾಗಿದೆ. ಈ ವೇಳೆ…

Read More

ಪ್ರತಿ ಶ್ರಾವಣ ಮಾಸದಲ್ಲಿ ರಕ್ಷಾ ಬಂಧನ (Raksha Bandhan 2024) ಹಬ್ಬವನ್ನು ಆಚರಿಸಲಾಗುತ್ತದೆ. ಈ ದಿನ ಸಹೋದರಿಯರು ತಮ್ಮ ಸಹೋದರರಿಗೆ ರಾಖಿಯನ್ನು ಕಟ್ಟುತ್ತಾರೆ. ಅನಾದಿ ಕಾಲದಿಂದಲೂ ಈ ಹಬ್ಬವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ವೈದಿಕ ಕಾಲದಲ್ಲೂ ರಕ್ಷಾ ಬಂಧನ ಆಚರಣೆಯಲ್ಲಿತ್ತು ಎಂದು ಹೇಳಬಹುದು. ಈ ಹಬ್ಬವು ಸಹೋದರ ಮತ್ತು ಸಹೋದರಿಯ ನಡುವಿನ ಧಾರ್ಮಿಕ ಬಾಂಧವ್ಯಕ್ಕೆ ಹೆಸರಾಗಿದೆ. ರಕ್ಷಾ ಎಂದರೆ ಸುರಕ್ಷತೆ ಮತ್ತು ಬಂಧನ ಎಂದರೆ ಬಂಧ ಅಥವಾ ಬಾಂಧವ್ಯ. ಸಹೋದರಿಯರು ತಮ್ಮ ಸಹೋದರರ ಕೈಗೆ ಪವಿತ್ರ ದಾರವನ್ನು ಕಟ್ಟುತ್ತಾರೆ. ಪ್ರತಿಯಾಗಿ ಅವನ ರಕ್ಷಣೆಯನ್ನು ಬಯಸುತ್ತಾರೆ. ಈ ಹಬ್ಬವನ್ನು ಶ್ರಾವಣ ಮಾಸದಲ್ಲಿ ಹುಣ್ಣಿಮೆಯ ದಿನ ಅಥವಾ ಪೂರ್ಣಿಮಾ ದಿನದಂದು ಆಚರಿಸಲಾಗುತ್ತದೆ. ರಕ್ಷಾ ಬಂಧನ ಹಬ್ಬವನ್ನು ಆಗಸ್ಟ್‌ 19 ರಂದು ಸೋಮವಾರದಂದು ಆಚರಿಸಲಾಗುವುದು. ಇದು ಸಹೋದರ ಸಹೋದರಿಯರ ನಡುವಿನ ಪವಿತ್ರ ಸಂಬಂಧವನ್ನು ಸಂಕೇತಿಸುವ ಹಬ್ಬವಾಗಿದೆ. ಶ್ರಾವಣ ಮಾಸದ ಸೋಮವಾರದಂದು ರಕ್ಷಾಬಂಧನ ಬರುವುದರಿಂದ ಇದರ ಮಹತ್ವ ಮತ್ತಷ್ಟು ಹೆಚ್ಚಾಗಿದೆ. ಈ ಬಾರಿ ಶ್ರಾವಣ ಮಾಸದ ಹುಣ್ಣಿಮೆಯಂದು ಸಹೋದರಿಯರು…

Read More