ಬೆಂಗಳೂರು: ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಯವು 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. ಕನ್ನಡ ಚಿತ್ರರಂಗಕ್ಕೆ ವರಮಹಾಲಕ್ಷ್ಮಿ ಹಬ್ಬ ಗಿಫ್ಟ್ ಆಗಿ ಕನ್ನಡಕ್ಕೆ 7 ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಲಭಿಸಿದ್ದು ರಾಷ್ಟ್ರೀಯ ಪ್ರಶಸ್ತಿ ಅಖಾಡದಲ್ಲಿ ಪ್ಯಾನ್ ಇಂಡಿಯನ್ ಕನ್ನಡ ಚಿತ್ರಗಳ ಭರಾಟೆ ಪ್ರಶಸ್ತಿ ರಂಗದಲ್ಲೂ ಗೆದ್ದು ಬೀಗಿದ ಕನ್ನಡ ಸಿನಿಮಾಗಳು ಕನ್ನಡಕ್ಕೆ ನಾಲ್ಕನೇ ಬಾರೀ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದ್ದು ಹಾಗೆ ಈ ವರ್ಷ ದೇಶದಾದ್ಯಂತ ಹಲವು ಭಾಷೆಗಳ ಸಿನಿಮಾಗಳು ಪ್ರಶಸ್ತಿಗಾಗಿ ಸೆಣೆಸಾಟದಲ್ಲಿದ್ದವು. ಕಾಂತಾರ’, ‘ಕೆಜಿಎಫ್ 2’ ಸೇರಿದಂತೆ ಇನ್ನೂ ಕೆಲವು ಉತ್ತಮ ಕನ್ನಡ ಸಿನಿಮಾಗಳು ಈ ಬಾರಿ ರಾಷ್ಟ್ರೀಯ ಪ್ರಶಸ್ತಿಗಾಗಿ ವಿವಿಧ ವಿಭಾಗಗಳಲ್ಲಿ ಅರ್ಜಿ ಸಲ್ಲಿಸಿದ್ದವು. ರಿಷಬ್ ಶೆಟ್ಟಿಗೆ ಅವರಿಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ದೊರಕಿದೆ. ‘ಕಾಂತಾರ’ದ ಅತ್ಯುತ್ತಮ ನಟನೆಯನ್ನು ಪರಿಗಣಿಸಿ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ. ಕನ್ನಡದ ‘ತಬರನ ಕತೆ’ ಸಿನಿಮಾದಲ್ಲಿ ನಟಿಸಿದ್ದ ತಮಿಳು ನಟ ಚಾರುಹಾಸನ್ಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ದೊರೆತಿದೆ ನಟನಾ ವಿಭಾಗದಲ್ಲಿ ರಿಷಬ್…
Author: Prajatv Kannada
ಹುಬ್ಬಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಹುಬ್ಬಳ್ಳಿ ತಾಲೂಕಿನ ಹುಬ್ಬಳ್ಳಿ ವಲಯದ ಕೌಲಪೇಟೆಯಲ್ಲಿನ ಪರಮ ಪೂಜ್ಯ ಡಾ,ಡಿ ವೀರೇಂದ್ರ ಹೆಗ್ಗಡೆಯವರ ಮುಂದಾಳತ್ವದಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸಮುದಾಯ ವಿಭಾಗದಿಂದ ಒಂದು ಲಕ್ಷ ರೂಪಾಯಿ ಮೊತ್ತದ ಡಿ,ಡಿ ಯನ್ನು ಮಂಜೂರು ಮಾಡಿದ್ದು, ಧಾರವಾಡ ಜಿಲ್ಲೆಯ ಜನ ಜಾಗೃತಿಯ ವೇದಿಕೆ ಜಿಲ್ಲಾ ಅಧ್ಯಕ್ಷರಾದ ಸಂತೋಷ್ ಆರ್ ಶೆಟ್ಟಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿಯವರಾದ ಶ್ರೀಯುತ ಲಿಲಾಮೂರ್ತಿಯವರು ಶ್ರೀ ದುರ್ಗಾದೇವಿ ದೇವಸ್ಥಾನ ಕಮಿಟಿಯವರಿಗೆ ಡಿ ಡಿ,ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕರಾದ ಓಂಕೇಶ್ ಸೇವಾ ಪ್ರತಿನಿಧಿಗಳಾದ ಶಿಲ್ಪಾ ರವರು ಹಾಗೂ ದೇವಸ್ಥಾನ ಕಮಿಟಿಯ ಎಲ್ಲಾ ಪದಾಧಿಕಾರಿಗಳು ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು
ಕೇಂದ್ರ ರೈಲ್ವೆ ಉಪಮಂತ್ರಿ, ಸಂಸದ ವಿ.ಸೋಮಣ್ಣ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ದರ್ಶನ ಮಾಡಿದ್ದಾರೆ. ಕಳೆದ ರಾತ್ರಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿಗೆ ಬಂದು ವಾಸ್ತವ್ಯ ಹೂಡಿದ್ದ ಅವರು ಪತ್ನಿ ಶೈಲಜಾ ಜೊತೆ ಮೂಕಾಂಬಿಕಾ ದೇವಿಯ ದರ್ಶನ ಮಾಡಿದ್ದಾರೆ. ಮೂಕಾಂಬಿಕಾ ಸನ್ನಿಧಾನದಲ್ಲಿ ವಿಶೇಷ ಸೇವೆ ನೀಡಿದ ಸೋಮಣ್ಣ ಅವರನ್ನು ಕ್ಷೇತ್ರದ ಅರ್ಚಕರು ಪ್ರಸಾದ ನೀಡಿ, ಗೌರವಿಸಿದ್ದಾರೆ.
ಹಾಸನ:- ಮಾಜಿ ಶಾಸಕ ಎ.ಎಸ್ ಬಸವರಾಜು ಅನಾರೋಗ್ಯದಿಂದ ನಿನ್ನೆ ವಿಧಿವಶರಾಗಿದ್ದು, ಇಂದು ಅರಸೀಕೆರೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಬಸವರಾಜ್ ಅವರು ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಇಂದು ನಿಧರಾಗಿದ್ದಾರೆ. 2004-2007 ರವರೆಗೆ BJP ಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1999 ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ, ಕಾಂಗ್ರೆಸ್‍ನ ಜಿ.ವಿ.ಸಿದ್ದಪ್ಪ ಅವರ ವಿರುದ್ಧ ಸೋಲು ಕಂಡಿದ್ದರು. ಇನ್ನೂ ಅವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಪ್ತರಾಗಿದ್ದರು ಎನ್ನಲಾಗಿದೆ. ಮೃತರ ನಿಧನಕ್ಕೆ ಹಾಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಹಾಗೂ ವಿವಿಧ ಪಕ್ಷಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಹುಬ್ಬಳ್ಳಿ: ಶ್ರಾವಣ ಮಾಸದ ಶುಕ್ರವಾರ ಶ್ರೀ ವರ ಮಹಾ ಲಕ್ಷ್ಮೀ ಪೂಜೆಗೆ ಆಚರಣೆ ಬಲು ತಯಾರಿ ನಡೆದಿದ್ದು ಈ ವರಮಹಾಲಕ್ಷ್ಮಿ ಹಬ್ಬಕ್ಕೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಹಬ್ಬದ ಹಿನ್ನೆಲೆಯಲ್ಲಿ ವಾಣಿಜ್ಯ ನಗರಿ ಹುಬ್ಬಳ್ಳಿ ಧಾರವಾಡ ಅವಳಿ ನಗರ ಸೇರಿದಂತೆ ಧಾರವಾಡ ಜಿಲ್ಲಾಧ್ಯಂತ ಜನಜಂಗುಳಿ ಕಂಡುಬಂತು. ಹುಬ್ಬಳ್ಳಿ ನವನಗರದ ಎಪಿಎಂಸಿ ಮಾರುಕಟ್ಟೆ, ಗಾಂಧಿ ಮಾರುಕಟ್ಟೆ, ಹಳೇ ಹುಬ್ಬಳ್ಳಿ ಮಾರುಕಟ್ಟೆ, ಬೆಂಗೇರಿ ಸೇರಿದಂತೆ ಇತರೆ ಮಾರುಕಟ್ಟೆಯಲ್ಲಿ ಬೆಳಿಗ್ಗೆಯಿಂದಲೇ ಜನರು ಹೂವು, ಹಣ್ಣು ಹಾಗೂ ಪೂಜಾ ಸಾಮಗ್ರಿ ಖರೀದಿಸುತ್ತಿದ್ದರು. ಕಳೆದ ವಾರ 90 ರೂಪಾಯಿಗೆ ಸಿಗುತ್ತಿದ್ದ ಹೂವಿನ ಬೆಲೆ ಈಗ 300 ರಿಂದ 350 ರೂಪಾಯಿ ಹೆಚ್ಚಾಗಿದೆ. ಅದರಲ್ಲೂ ಸೇವಂತಿಗೆ, ಮಲ್ಲಿಗೆ ಹೂವಿನ ಬೆಲೆ ಗಗನಕ್ಕೇರಿದೆ. ಸೇಬು ದರ ಕೆಜಿಗೆ 250 -300 ರೂಪಾಯಿ, ಪಚ್ಚಬಾಳೆ ಕೆಜಿಗೆ 50-80 ಏಲಕ್ಕಿ ಬಾಳೆಹಣ್ಣು ಕೆಜಿಗೆ 150-200 ಕಿತ್ತಾಳೆ ಕೆಜಿಗೆ 180 200, ಮೂಸಂಬಿ ಕೆಜಿಗೆ 90-130 ರೂ.ಗೆ ಮಾರಾಟವಾಗುತ್ತಿದೆ. ಈ ಕುರಿತು ಹುಬ್ಬಳ್ಳಿ ಮಹಾತ್ಮ ಗಾಂಧಿ ಮಾರುಕಟ್ಟೆಯಲ್ಲಿ…
ನೆಲಮಂಗಲ:- ʼಚನ್ನಪಟ್ಟಣ ಉಪ ಚುನಾವಣೆಗೆ ನಾನೇ ಅಭ್ಯರ್ಥಿ ಎಂದು DCM ಡಿಕೆಶಿ ಹೇಳಿದ್ದಾರೆ. https://youtu.be/YEP22hkE3ho?si=9Rsj_JhcZ6V_7pWB ನೆಲಮಂಗಲದ ವೀರಭದ್ರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರು ಚನ್ನಪಟ್ಟಣ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಯಾರೆಂದು ತಿಳಿಸಿ ಅಚ್ಚರಿಯಲ್ಲಿ ಕೆಡವಿದರು. ಚನ್ನಪಟ್ಟಣ ಉಪ ಚುನಾವಣೆಗೆ ನಾನೇ ಅಭ್ಯರ್ಥಿʼ ಎಂದು ಡಿಕೆಶಿ ಹೇಳಿದ್ದಾರೆ. ಸಿಪಿ ಯೋಗೇಶ್ವರ ಅವರು ಕ್ಷೇತ್ರದಲ್ಲಿ ದೋಸ್ತಿ ಪಕ್ಷಗಳ ಅಭ್ಯರ್ಥಿಯಾಗಿ ನಿಲ್ಲುವ ಆಸಕ್ತಿ ವ್ಯಕ್ತಪಡಿಸಿದ್ದರು. ಆದರೆ ಬಿಜೆಪಿ ಹಾಗೂ ಜೆಡಿಎಸ್‌ನಿಂದ ಸೂಕ್ತ ಪ್ರತಿಕ್ರಿಯೆ ಬಾರದ ಕಾರಣ, ಅವರು ಕಾಂಗ್ರೆಸ್‌ನಿಂದ ನಿಲ್ಲಲಿದ್ದಾರೆ ಎಂದು ಸುದ್ದಿಯಾಗಿತ್ತು. ಇನ್ನೊಂದೆಡೆ, ಕಾಂಗ್ರೆಸ್‌ನಿಂದ ಡಿಕೆ ಸುರೇಶ್ ಅವರು ಕಣಕ್ಕಿಳಿಯಲಿದ್ದಾರೆ ಎಂದು ಸುದ್ದಿಗಳು ಹಬ್ಬಿದ್ದವು. ಆದರೆ ಇದೀಗ ಚನ್ನಪಟ್ಟಣದ ಅಭ್ಯರ್ಥಿ ನಾನೇ ಎನ್ನುವ ಮೂಲಕ ಡಿಕೆಶಿ ಅಚ್ಚರಿ ಮೂಡಿಸಿದ್ದಾರೆ. ʼಪ್ರಯತ್ನಕ್ಕಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನನಗೆ ನಂಬಿಕೆ ಇದೆ. ದೇಶಕ್ಕೆ, ರಾಜ್ಯಕ್ಕೆ ಒಳ್ಳೆಯ ಮಳೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಇತಿಹಾಸವಿರುವ ವೀರಭದ್ರ ಹಾಗೂ ರುದ್ರೇಶ್ವರ ಸ್ವಾಮಿಗೆ ಪೂಜೆ…
ಇಂದು ಕನ್ನಡ ಸಿನಿ ರಸಿಕರಿಗೆ ಸಂಭ್ರಮ.70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಘೋಷಣೆಯಾಗಿದ್ದು ನಟ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ. ಕಾಂತಾರ ಸಿನಿಮಾದ ನಟನೆಗೆ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿಯನ್ನು ರಿಷಬ್ ಶೆಟ್ಟಿ ಪಡೆದುಕೊಂಡಿದ್ದಾರೆ. ಈ ಸಿನಿಮಾದಲ್ಲಿ ನಟಿಸುವುದರ ಜೊತೆಗೆ ನಿರ್ದೇಶನವನ್ನು ರಿಷಬ್ ಶೆಟ್ಟಿ ಮಾಡಿದ್ದಾರೆ. ಬಾಕ್ಸ್ ಆಫೀಸ್ನಲ್ಲಿ ಸೂಪರ್ ಹಿಟ್ ಆದ ಸಿನಿಮಾಗೆ ಈಗ ಪ್ರತಿಷ್ಠಿತ ಪ್ರಶಸ್ತಿ ಕೂಡ ಸಿಕ್ಕಿರುವುದು ಚಿತ್ರತಂಡಕ್ಕೆ ಖುಷಿ ನೀಡಿದೆ. ಪ್ರಶಸ್ತಿ ಘೋಷಣೆ ಆದ ಬೆನ್ನಲ್ಲೇ ರಿಷಬ್ ಶೆಟ್ಟಿ ಅವರು ಸುದ್ದಿಗೋಷ್ಠಿ ನಡೆಸಿ ಸಂತಸ ಹಂಚಿಕೊಂಡಿದ್ದಾರೆ. ನನಗೆ ಒಲಿದಿರುವ ಈ ರಾಷ್ಟ್ರೀಯ ಪ್ರಶಸ್ತಿಯ ಯಶಸ್ಸು ಅಪ್ಪು, ದೈವ ನರ್ತಕರಿಗೆ ಹಾಗೂ ಕನ್ನಡ ಜನತೆಗೂ ಸಮರ್ಪಿಸುತ್ತಿದ್ದೇನೆ.ಈ ಪ್ರಶಸ್ತಿ ಹಿಂದೆ ನನ್ನ ಇಡೀ ಕಾಂತಾರ ತಂಡದ ಶ್ರಮ ಇದೆ. ನಮ್ಮ ಹೊಂಬಾಳೆ ಫಿಲಿಮ್ಸ್ ಗೆ ಒಟ್ಟು ನಾಲ್ಕು ಪ್ರಶಸ್ತಿ ಬಂದಿದ್ದು ಇದು ಕನ್ನಡ ಚಿತ್ರರಂಗದ ಯಶಸ್ಸು ಎಂದು ರಿಷಬ್ ಶೆಟ್ಟಿ ಹೇಳಿದರು. ಈ ಪ್ರಶಸ್ತಿ ಗೆಲ್ಲುವ…
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಘೋಷಣೆಯಾಗಿದ್ದು, ಈ ಬಾರಿ ಕನ್ನಡ ಚಿತ್ರರಂಗಕ್ಕೆ ಹಲವು ಪ್ರಶಸ್ತಿಗಳು ಅರಸಿ ಬಂದಿದೆ. ಕಾಂತಾರ ನಟ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಬಂದಿದ್ರೆ, ಯಶ್ ನಟನೆಯ ಕೆಜಿಎಫ್-2 ಸಿನಿಮಾಗೆ ಅತ್ಯುತ್ತಮ ಕನ್ನಡ ಚಿತ್ರದ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಕೇಂದ್ರ ಸರ್ಕಾರದ ವಾರ್ತಾ, ಪ್ರಸಾರ ಇಲಾಖೆಯಿಂದ ರಾಷ್ಟ್ರೀಯ ಪ್ರಶಸ್ತಿ ಘೋಷಣೆಯಾಗಿದೆ. 2022ರ ಜನವರಿ 1 ರಿಂದ ಡಿಸೆಂಬರ್ 31ರವರೆಗೆ ಬಿಡುಗಡೆಯಾದ ಸಿನಿಮಾಗಳಿಗೆ ಇಂದು ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕನ್ನಡದ ಕೆಜಿಎಫ್-2 ಚಿತ್ರಕ್ಕೆ ಎರಡು ಪ್ರಶಸ್ತಿ ಒಲಿದು ಬಂದಿದೆ. ಕೆಜಿಎಫ್-2 ಸಿನಿಮಾಗೆ ಕನ್ನಡದ ಅತ್ಯುತ್ತಮ ಚಿತ್ರ ಪ್ರಶಸ್ತಿ ಹಾಗೂ ಸಾಹಸ ವಿಭಾಗದಲ್ಲೂ ಕೆಜಿಎಫ್-2 ಚಿತ್ರಕ್ಕೆ ರಾಷ್ಟ್ರೀಯ ಮನ್ನಣೆ ಸಿಕ್ಕಿದೆ. ಕಾಂತಾರ ಸಿನಿಮಾದ ನಟನೆಗಾಗಿ ರಿಷಬ್ ಶೆಟ್ಟಿಗೆ ಅತ್ತುತ್ತಮ ನಟ ಪ್ರಶಸ್ತಿ ಘೋಷಣೆಯಾಗಿದೆ. ಜನಮೆಚ್ಚುಗೆ ಗಳಿಸಿದ್ದ ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅಭಿನಯ ಅಮೋಘವಾಗಿತ್ತು. ಅತ್ಯುತ್ತಮ ನಟ ಜೊತೆಗೆ ಅತ್ಯುತ್ತಮ ಮನೋರಂಜನಾ ಪ್ರಶಸ್ತಿಗೆ ಕಾಂತಾರ ಸಿನಿಮಾ ಆಯ್ಕೆಯಾಗಿದೆ. ಕಾಂತಾರ ಖ್ಯಾತಿಯ…
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟವಾಗಿದೆ. ಕಾಂತಾರ ಸಿನಿಮಾದಲ್ಲಿನ ಅತ್ಯುತ್ತಮ ನಟನೆಗೆ ನಟ ರಿಷಭ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅತ್ಯುತ್ತಮ ಜನಪ್ರಿಯ ಹಾಗೂ ಮನರಂಜನಾ ಚಿತ್ರವಾಗಿ ಎರಡು ವಿಭಾಗದಲ್ಲಿ ‘ಕಾಂತಾರ’ ಪ್ರಶಸ್ತಿ ಬಾಚಿಕೊಂಡಿದೆ. 2022ನೇ ಸಾಲಿನಲ್ಲಿ ಚಿತ್ರರಂಗದಲ್ಲಿ ಅತ್ಯುತ್ತಮ ಸಾಧನೆಗೈದ ಚಿತ್ರಗಳ ಪಟ್ಟಿಯನ್ನು ಕೇಂದ್ರ ವಾರ್ತಾ ಪ್ರಸಾರ ಮತ್ತು ಮಾಹಿತಿ ಸಚಿವಾಲಯ ಘೋಷಿಸಿದೆ. ಅತ್ಯುತ್ತಮ ನಟರ ಪಟ್ಟಿಯಲ್ಲಿ ರಿಷಬ್ ಶೆಟ್ಟಿ ಹಾಗೂ ಮಲೆಯಾಳಂ ನಟ ಮಮ್ಮುಟ್ಟಿ ನಡುವೆ ಭಾರಿ ಸ್ಪರ್ಧೆ ಏರ್ಪಟ್ಟಿದ್ದು ಕೊನೆಗೂ ಕನ್ನಡದ ನಟ ರಿಷಬ್ ಶೆಟ್ಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-2 ಅತ್ಯುತ್ತಮ ಕನ್ನಡ ಚಿತ್ರವಾಗಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದೆ. ಸಾಹಸ ನಿರ್ದೇಶನ ವಿಭಾಗದಲ್ಲೂ ಕೆಜಿಎಫ್-2 ಪ್ರಶಸ್ತಿ ಗೆದ್ದಿದೆ. ಜನವರಿ 1, 2022 ರಿಂದ ಡಿಸೆಂಬರ್ 31,2022ರ ಸಾಲಿನಲ್ಲಿ ಬಿಡುಗಡೆಯಾದ ಚಿತ್ರಗಳನ್ನು ಪರಿಗಣಿಸಿ ಇದೀಗ ರಾಷ್ಟ್ರೀಯ ಪ್ರಶಸ್ತಿ ಘೋಷಿಸಲಾಗಿದೆ. 2023ರ ಮೇ ತಿಂಗಳಲ್ಲಿ ಈ ಪ್ರಶಸ್ತಿಗಳ ಘೋಷಣೆಯಾಗಬೇಕಿತ್ತು. ಆದರೆ…
ಬಳ್ಳಾರಿ:-:- ತುಂಗಭದ್ರಾ ಡ್ಯಾಂ ಗೇಟ್ ಕಾರ್ಯ ಯಶಸ್ವಿಯಾದರೆ ಪ್ರತಿ ಕಾರ್ಮಿಕನಿಗೆ 50 ಸಾವಿರ ಕೊಡುವುದಾಗಿ ವಸತಿ ಸಚಿವ ಜಮೀರ್ ಘೋಷಣೆ ಮಾಡಿದ್ದಾರೆ. ತುಂಗಭದ್ರಾ ಜಲಾಶಯ ಸ್ಟಾಪ್‌ಲಾಗ್ ಗೇಟ್ ಅಳವಡಿಸುವ ಜಾಗಕ್ಕೆ ನಿನ್ನೆ ವಿಜಯನಗರ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಭೇಟಿ ನೀಡಿ ಕೆಲಸಗಾರರ ಜೊತೆ ಮಾತನಾಡಿ ಧೈರ್ಯ ತುಂಬಿದ್ದಾರೆ. ಧೈರ್ಯ ಕಳೆದುಕೊಳ್ಳದೇ ಕೆಲಸ ಮಾಡಿ. ನಾಳೆ ಗೇಟ್ ಕೂಡಿಸಿ ಕಾರ್ಯ ಯಶಸ್ವಿ ಮಾಡಿ. ನನ್ನ ಕಡೆಯಿಂದ ಪ್ರತಿ ಕಾರ್ಮಿಕನಿಗೆ 50 ಸಾವಿರ ರೂ. ಕೊಡುತ್ತೇನೆ. ಧೈರ್ಯವಾಗಿ ಕೆಲಸ ಮಾಡಿ ಎಂದು ಹೇಳಿದರು. ಸ್ಟಾಪ್ ಲಾಗ್ ಗೇಟ್ ಕೂರಿಸಲು ಕನ್ನಯ್ಯ ಮತ್ತು ತಂಡದ ಸದಸ್ಯರು ಇಂದು ಹರಸಾಹಸ ಪಟ್ಟಿದ್ದಾರೆ. ಸಚಿವ ಜಮೀರ್ ಅಹ್ಮದ್ 50 ಸಾವಿರ ರೂ. ಕೊಡುತ್ತೇನೆ ಎಂದಿದ್ದಕ್ಕೆ ಕಾರ್ಮಿಕರು ಸಂತಸಪಟ್ಟಿದ್ದಾರೆ. ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿ ಐದು ದಿನಗಳಾಗಿದೆ. ಅದರ ಜಾಗದಲ್ಲಿ ಇಂದು ತಾತ್ಕಾಲಿಕ ಗೇಟ್ ಕೂರಿಸುವ ಪ್ರಯತ್ನ ಫಲ ಕೊಡಲಿಲ್ಲ. ಗೇಟ್ ಎಲಿಮೆಂಟ್‌ನಲ್ಲಿ ವ್ಯತ್ಯಾಸ…