ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಸಂಗಡಿಗರು ಜೈಲು ಸೇರಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ ಎಂಬ ಕಾರಣಕ್ಕೆ ರೇಣುಕಾಸ್ವಾಮಿ ಎಂಬಾತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಭೀಕರವಾಗಿ ಹತ್ಯೆ ಮಾಡಿದ ಆರೋಪ ಕೇಳಿ ಬಂದಿದೆ. ದರ್ಶನ್ ಎಂಡ್ ಗ್ಯಾಂಗ್ ಸದಸ್ಯರು ಜೈಲು ಸೇರಿ ಎರಡು ತಿಂಗಳು ಕಳೆದಿದೆ. ನೋವಿನಲ್ಲಿರುವ ರೇಣುಕಾಸ್ವಾಮಿ ಕುಟುಂಬಕ್ಕೆ ಆಗಾಗ ಸೆಲೆಬ್ರಿಟಿಗಳು ಭೇಟಿ ನೀಡಿ ಸಾಂತ್ವಾನ ಹೇಳುತ್ತಿರುತ್ತಾರೆ. ಇದೀಗ ನಟ ಪ್ರಥಮ್ ಕೂಡ ಚಿತ್ರದುರ್ಗಕ್ಕೆ ತೆರಳಿ ರೇಣುಕಾ ಸ್ವಾಮಿಯ ಮನೆಯವರಿಗೆ ಧೈರ್ಯ ತುಂಬಲು ಪ್ರಯತ್ನಿಸಿದ್ದಾರೆ. ಕಣ್ಣೀರು ಹಾಕುತ್ತಿರುವ ರೇಣುಕಾಸ್ವಾಮಿ ತಂದೆ-ತಾಯಿ ಜೊತೆ ಮಾತನಾಡಿದ ಬಳಿಕ ಪ್ರಥಮ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುತ್ತಳಿ ಉದ್ಘಾಟನೆಗೆ ಬಂದಿದ್ದೆ. ಮನಸ್ಸು ನೋಯಿಸಲು ಅಥವಾ ಯಾರನ್ನೋ ಸಮರ್ಥನೆ ಮಾಡಿಕೊಳ್ಳಲು ನಾನು ಇಲ್ಲಿಗೆ ಬಂದಿಲ್ಲ. ನನ್ನ ಮನಸ್ಸಿನಲ್ಲಿ ಒಂದು ವಿಚಾರ ಕಾಡುತ್ತಿತ್ತು. ತುಂಬಾ ಹೀನಾಯವಾಗಿ ಸಾವಾಗಿತ್ತು. ಸಹನಾ ಅವರನ್ನು ಮಾತನಾಡಿಸಬೇಕು ಎಂಬುದು ನನ್ನ ತಲೆಯಲ್ಲಿತ್ತು’ ಎಂದು ಪ್ರಥಮ್…
Author: Prajatv Kannada
ಟಾಲಿವುಡ್ ಬ್ಯೂಟಿ ನಟಿ ಸಮಂತಾ ರುತ್ ಪ್ರಭು ಸಿನಿಮಾಗಳ ಜೊತೆಗೆ ವೈಯಕ್ತಿಕ ಕಾರಣಗಳಿಂದಲೂ ಸಖತ್ ಸುದ್ದಿಯಾಗ್ತಿರ್ತಾರೆ. ಇತ್ತೀಚೆಗೆ ಸಮಂತಾ ಮಾಜಿ ಪತಿ ನಾಗ ಚೈತನ್ಯ ಎಂಗೇಜ್ಮೆಂಟ್ ಮಾಡಿಕೊಂಡಿದ್ದು ಸಹಜವಾಗಿಯೇ ನಟಿಗೆ ನೋವುಂಟಾಗಿದೆ ಈ ಬೆನ್ನಲ್ಲೇ ಸಮಂತಾ ಬಗ್ಗೆ ಅಪಪ್ರಚಾರ ಮಾಡುವ ಕೆಲಸವೂ ನಡೆದಿದೆ. ಸಮಂತಾ ಅವರು ನಿರ್ದೇಶಕ ರಾಜ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡಿತು. ಇದಕ್ಕೆ ಸಮಂತಾ ಅವರು ಖಡಕ್ ಆಗಿ ಉತ್ತರಿಸಿದ್ದಾರೆ. ಪರೋಕ್ಷವಾಗಿ ಅವರು ಈ ವಿಚಾರದ ಬಗ್ಗೆ ಸಮಂತಾ ಪ್ರತಿಕ್ರಿಯಿಸಿದ್ದಾರೆ. ಸಮಂತಾ ಅವರು ಹೂಡಿ ಧರಿಸಿ ಪೋಸ್ ಕೊಟ್ಟಿದ್ದಾರೆ. ಈ ಹೂಡಿ ಮೇಲೆ ಅವರು ‘ಶಾಂತಿ ಸಂಗ್ರಹಾಲಯ’ ಎಂಬರ್ಥ ಬರೋ ಸಾಲುಗಳು ಬರೆದುಕೊಂಡಿದೆ. ಇದನ್ನು ಅನೇಕರು ನಾನಾ ರೀತಿಯಲ್ಲಿ ಬಣ್ಣಿಸುತ್ತಿದ್ದಾರೆ. ಯಾರು ಎಷ್ಟೇ ವದಂತಿ ಹಬ್ಬಿಸಿದರೂ ತಾವು ಕೂಲ್ ಆಗಿ ಇರೋದಾಗಿ ಅವರು ಹೇಳಿರಬಹುದು ಎಂದು ಅನೇಕರು ಊಹಿಸಿದ್ದಾರೆ. ಸಮಂತಾ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಪಡೆದಿದ್ದಾರೆ. ಇದರ ಜೊತೆಗೆ ಅವರಿಗೆ ಒಂದಷ್ಟು…
ಟಾಲಿವುಡ್ ಬ್ಯೂಟಿ ನಟಿ ಸಮಂತಾ ರುತ್ ಪ್ರಭು ಸಿನಿಮಾಗಳ ಜೊತೆಗೆ ವೈಯಕ್ತಿಕ ಕಾರಣಗಳಿಂದಲೂ ಸಖತ್ ಸುದ್ದಿಯಾಗ್ತಿರ್ತಾರೆ. ಇತ್ತೀಚೆಗೆ ಸಮಂತಾ ಮಾಜಿ ಪತಿ ನಾಗ ಚೈತನ್ಯ ಎಂಗೇಜ್ಮೆಂಟ್ ಮಾಡಿಕೊಂಡಿದ್ದು ಸಹಜವಾಗಿಯೇ ನಟಿಗೆ ನೋವುಂಟಾಗಿದೆ ಈ ಬೆನ್ನಲ್ಲೇ ಸಮಂತಾ ಬಗ್ಗೆ ಅಪಪ್ರಚಾರ ಮಾಡುವ ಕೆಲಸವೂ ನಡೆದಿದೆ. ಸಮಂತಾ ಅವರು ನಿರ್ದೇಶಕ ರಾಜ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡಿತು. ಇದಕ್ಕೆ ಸಮಂತಾ ಅವರು ಖಡಕ್ ಆಗಿ ಉತ್ತರಿಸಿದ್ದಾರೆ. ಪರೋಕ್ಷವಾಗಿ ಅವರು ಈ ವಿಚಾರದ ಬಗ್ಗೆ ಸಮಂತಾ ಪ್ರತಿಕ್ರಿಯಿಸಿದ್ದಾರೆ. ಸಮಂತಾ ಅವರು ಹೂಡಿ ಧರಿಸಿ ಪೋಸ್ ಕೊಟ್ಟಿದ್ದಾರೆ. ಈ ಹೂಡಿ ಮೇಲೆ ಅವರು ‘ಶಾಂತಿ ಸಂಗ್ರಹಾಲಯ’ ಎಂಬರ್ಥ ಬರೋ ಸಾಲುಗಳು ಬರೆದುಕೊಂಡಿದೆ. ಇದನ್ನು ಅನೇಕರು ನಾನಾ ರೀತಿಯಲ್ಲಿ ಬಣ್ಣಿಸುತ್ತಿದ್ದಾರೆ. ಯಾರು ಎಷ್ಟೇ ವದಂತಿ ಹಬ್ಬಿಸಿದರೂ ತಾವು ಕೂಲ್ ಆಗಿ ಇರೋದಾಗಿ ಅವರು ಹೇಳಿರಬಹುದು ಎಂದು ಅನೇಕರು ಊಹಿಸಿದ್ದಾರೆ. ಸಮಂತಾ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಪಡೆದಿದ್ದಾರೆ. ಇದರ ಜೊತೆಗೆ ಅವರಿಗೆ ಒಂದಷ್ಟು…
ಬೆಂಗಳೂರು: ಕಳೆದ 13 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪ್ರಯಾಣಿಕರ ಸಂಖ್ಯೆ 9 ಲಕ್ಷ ದಾಟಿದೆ. ಜೊತೆಗೆ ಒಂದೇ ದಿನ ಅತೀ ಹೆಚ್ಚು ಪ್ರಯಾಣಿಕರು ಸಂಚರಿಸಿರುವುದು ನಮ್ಮ ಮೆಟ್ರೋಗೆ ಖುಷಿಯ ವಿಚಾರವಾಗಿದೆ. https://youtu.be/ZSWc0j-znEs?si=53M11JUyE0EM-O1B ಸಾವಿರಾರು ಜನರು ತಮ್ಮ ದಿನನಿತ್ಯದ ಓಡಾಟಕ್ಕಾಗಿ ಮೆಟ್ರೋವನ್ನೇ ಅವಲಂಬಿಸಿದ್ದಾರೆ.ಇದು ಕ್ಷಿಪ್ರ ಸಾರಿಗೆ ವ್ಯವಸ್ಥೆಯಾಗಿರುವುದರಿಂದ, ಜನರು ಯಾವುದೇ ವಿಳಂಬವಿಲ್ಲದೇ ನಿರ್ದಿಷ್ಟ ಸಮಯಕ್ಕೆ ತಮ್ಮ ಡೆಸ್ಟಿನೇಶನ್ ತಲುಪಬಹುದಾಗಿದೆ.ನಮ್ಮ ಮೆಟ್ರೋ ಪ್ರಯಾಣಿಕರ ಸಂಚಾರದಲ್ಲಿ ಹೊಸ ದಾಖಲೆ ಬರೆದಿದ್ದು ಆಗಸ್ಟ್ 14, 2024 ರಂದು ಒಂದೇ ದಿನ ಲಕ್ಷ ಲಕ್ಷ ಪ್ರಯಾಣಿಕರು ಸಂಚಾರ ಮಾಡಿದ್ದಾರೆ. ಹೌದು … ನಿನ್ನೆ ಒಂದೇ ದಿನ ನಮ್ಮ ಮೆಟ್ರೋದಲ್ಲಿ 9.17 ಲಕ್ಷ ಪ್ರಯಾಣಿಕರ ಸಂಚಾರ ಮಾಡಿದ್ದು ಮೆಟ್ರೋ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ 9 ಲಕ್ಷ ದಾಟಿದ ಪ್ರಯಾಣಿಕರ ಸಂಖ್ಯೆಕಳೆದ 13 ವರ್ಷಗಳಲ್ಲಿ ಇದೆ ಮೊದಲ ಭಾರಿಗೆ ಒಂದೇ ದಿನ ಅತೀ ಹೆಚ್ಚು ಪ್ರಯಾಣಿಕರು ಸಂಚಾರ ಮಾಡಿದ್ದು ಎಲ್ಲಾ ಪ್ರಯಾಣಿಕರಿಗೆ ನಮ್ಮ ಮೆಟ್ರೋದ ಧನ್ಯವಾದ ತಿಳಿಸಿದ BMRCL…
ಬೆಂಗಳೂರು:- ವಿದ್ಯುತ್ ಅವಘಡದಿಂದ ಕಳೆದ 2 ವರ್ಷದಲ್ಲಿ ರಾಜ್ಯದಲ್ಲಿ ಒಟ್ಟು 290 ಮಂದಿ ಮೃತಪಟ್ಟಿದ್ದು, ಈ ಪೈಕಿ ಬೆಂಗಳೂರು ನಗರದಲ್ಲಿಯೇ ಬರೋಬ್ಬರಿ 42 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ https://youtu.be/BKO91RANvKE?si=7f6AFdrAsGXluM7G ಕಳೆದ ಐದು ವರ್ಷಗಳಿಂದ ವಿದ್ಯುತ್ ತಂತಿ ತಗುಲಿ ಮೃತ ಪಡುವವರ ಸಂಖ್ಯೆ ಹೆಚ್ಚಾಗಿದೆ. ಅದ್ರಲ್ಲಿ ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಒಟ್ಟು 290 ಮೃತರಾಗಿದ್ದು, ಬೆಂಗಳೂರಿನಲ್ಲಿಯೇ ಒಟ್ಟು 42 ಮಂದಿ ಮೃತಪಟ್ಟಿದ್ದಾರೆ. ಇನ್ಮು 290ರ ಪೈಕಿ 38 ಮಂದಿ ಪ್ರಾಣಾಪಾಯದಿಂದ ಪರಾರಿಯಾಗಿದ್ದಾರೆ. ಇದಲ್ಲದೇ ಸಿಲಿಕಾನ್ ಸಿಟಿಯಲ್ಲಿ ಬಿಡಾಡಿ ಧನಗಳ ಹಾವಳಿ ಹೆಚ್ಚಾಗಿದ್ದು, ಒಟ್ಟು 166 ಜಾನುವಾರುಗಳು ಅಸುನೀಗಿವೆ. ಇದಕ್ಕೆಲ್ಲ ಪ್ರಮುಖ ಕಾರಣಗಳು ಎಂದ್ರೆ ಅಧಿಕೃತವಾಗಿ ವಿದ್ಯುತ್ ಮಾರ್ಗಗಳ ಕೆಳಗೆ ಮನೆಗಳನ್ನ ನಿರ್ಮಾಣ ಮಾಡಿರುವುದು. ಸಧ್ಯ ವಿದ್ಯುತ್ ಕೇಬಲ್ಗಳು ಹಾದು ಹೋಗಿರುವ ಒಟ್ಟು 7722 ಕಟ್ಟಡಗಳಿವೆ. ಈ ಕಟ್ಟಡಗಳ ಬೆಸ್ಕಾಂ ಇಲ್ಲಿಯವರೆಗೂ ಕ್ರಮಕ್ಕೆ ಮುಂದಾಗಿಲ್ಲ. ಇನ್ನು ಸಧ್ಯ ಮೃತರಾಗಿರುವ 42 ಜನರ ಪೈಕಿ ಕೇವಲ 7 ಜನರಿಗೆ ಮಾತ್ರ ಪರಿಹಾರ ನೀಡಿದ್ದು, ಇನ್ನು 35…
ತುಮಕೂರು:- ಗಣೇಶೋತ್ಸವ ಹೆಸರಲ್ಲಿ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಸಾರ್ವಜನಿಕರಲ್ಲಿ ಜಿ ಪರಮೇಶ್ವರ್ ಮನವಿ ಮಾಡಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗಣೇಶೋತ್ಸವ ಹೆಸರೇಳಿಕೊಂಡು ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ಯಾರಾದರೂ ಅಂತಹ ಪ್ರಯತ್ನ ಮಾಡಿದರೆ ಕ್ರಮ ಗ್ಯಾರಂಟಿ. ರಾಜ್ಯದ ಜನತೆಗೆ ನಾನು ಮನವಿ ಮಾಡಿಕೊಳುತ್ತೇನೆ. ಶಾಂತಿಯಿಂದ ಗಣೇಶೋತ್ಸವ ಆಚರಿಸೋಣ. ಅದಕ್ಕೆ ಬೇಕಾದಂತಹ ವಾತಾವರಣ ನಾವು ತಮಗೆ ಸೃಷ್ಟಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಕಳೆದ ಬಾರಿ ಸೆಪ್ಟೆಂಬರ್ನಲ್ಲಿ ಗಣೇಶೋತ್ಸವ ಆಚರಣೆ ಮಾಡಲಾಗಿತ್ತು. ಈ ಬಾರಿಯೂ ಸೆ.7ರಂದು ಗಣಪತಿಯ ಉತ್ಸವ ಪ್ರಾರಂಭ ಆಗುತ್ತೇವೆ. ನನಗೆ ವಿಶ್ವಾಸ ಇದೆ, ನಮ್ಮ ಕರ್ನಾಟಕದ ಜನತೆ ಶಾಂತಿ ಪ್ರಿಯರು. ಅಂತಹ ಘಟನೆಗಳು ನಡೆಯೋದಕ್ಕೆ ಬಿಡಲ್ಲ. ಎಲ್ಲಾ ಸಹಕಾರ ಇರಲಿ ಎಂದಿದ್ದಾರೆ. ರಾಜ್ಯದ ಜನರಿಗೆ ನಮ್ಮ ಸರ್ಕಾರ ಪ್ರಣಾಳಿಕೆಯಲ್ಲಿ ಭರವಸೆ ಕೊಟ್ಟಿತ್ತು. ಯಾವುದೇ ಅಹಿತಕರವಾದ ಘಟನೆಗಳು ನಡೆಯೋದಕ್ಕೆ ನಾವು ಬಿಡಲ್ಲ. ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ ಆಗಬೇಕು. ಎಲ್ಲಾ ಸಮುದಾಯಗಳು ಶಾಂತಿಯಿಂದ ಬಾಳಬೇಕೆಂದು ನಾವು ಹೇಳಿದ್ದೇವೆ. ರಾಜ್ಯದಲ್ಲಿ…
ಕೊಡಗು: ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳು ರಾಷ್ಟ್ರಕ್ಕೇ ಮಾದರಿಯಾಗಿವೆ, ಇವುಗಳಲ್ಲಿ ಯಾವುದೇ ಬದಲಾವಣೆಯ ಅವಶ್ಯಕತೆಯಿಲ್ಲ ಹಾಗೂ ಆ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತವಾರಿ ಸಚಿವರಾದ ಎನ್. ಎಸ್. ಭೋಸರಾಜು ಪ್ರತಿಕ್ರಿಯಿಸಿದರು. https://youtu.be/bKPttwn_hTU?si=V7VbKZowxVNlfC_Q ವಿರಾಜಪೇಟೆ ತಾಲ್ಲೂಕಿನ ಬೊಳ್ಳಮಾಡು ಗ್ರಾಮದಲ್ಲಿ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಲಾಗಿದ್ದ ‘ಬೇಲ್ ನಮ್ಮೆ’ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಸಚಿವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಎಐಸಿಸಿ ವತಿಯಿಂದ ಆಯೋಜಿಸಲಾಗಿರುವ ಎಲ್ಲಾ ರಾಜ್ಯದ ರಾಜ್ಯಾಧ್ಯಕ್ಷರುಗಳ ಸಭೆಯಲ್ಲಿ ಪಾಲ್ಗೊಳ್ಳಲು ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದಾರೆ. ಸಚಿವ ಸಂಪುಟ ಪುನಾರಚನೆಯ ಬಗ್ಗೆ ಚರ್ಚೆ ಮಾಡಲು ಅಲ್ಲ. ಸಚಿವ ಸಂಪುಟ ಪುನಾರಚನೆ ಕೇವಲ ಉಹಾಪೋಹ ಎಂದು ಹೇಳಿದರು.C
ಗದಗ ಜಿಲ್ಲೆಯಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಮನೆ ಮಾಡಿದೆ. ತೆರೆದ ವಾಹನದಲ್ಲಿ ಗೌರವ ವಂದನೆ ಸ್ವೀಕಾರ ಮಾಡಿ ಗದಗನ ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವ ಎಚ್ ಕೆ ಪಾಟೀಲ್ ರಿಂದ ರಾಷ್ಟ್ರ ಧ್ವಜಾರೋಹಣ ಮಾಡಲಾಯಿತು. ಪೊಲೀಸ್, ಹೋಮ್ ಗಾರ್ಡ, ಎನ್ ಸಿ ಸಿ, ಅಗ್ನಿಶಾಮಕ ದಳ, ಮಾಜಿ ಸೈನಿಕರಿಂದ ಆಕರ್ಷಕ ಕವಾಯತು ಮಾಡಲಾಯಿತು. ವಿಧಾನ ಪರಿಷತ್ ಸದಸ್ಯ ಎಸ್ ವಿ ಸಂಕನೂರ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಎಸ್ಪಿ ಬಿ ಎಸ್ ನೇಮಗೌಡ, ಸಾವಿರಾರು ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗಿಯಾಗಿದ್ದರು.
ತುಮಕೂರು: ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತಂತೆ ಶಾಸಕರು ಮತ್ತು ಕಾರ್ಯಕರ್ತರ ಮಟ್ಟದಲ್ಲಿ ಚರ್ಚೆ ನಡೆದಿದೆಯಾದರೂ ಸರಕಾರದ ಮಟ್ಟ ಹಾಗೂ ಪಕ್ಷದ ವೇದಿಕೆಯಲ್ಲಿ ಇನ್ನೂ ಚರ್ಚೆಯಾಗಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಡವರಿಗೆ ಮಾತ್ರವೇ ಗ್ಯಾರಂಟಿಗಳು ತಲುಪಬೇಕು ಎಂಬುದು ಬಹುತೇಕರ ಅಭಿಪ್ರಾಯವಾಗಿದೆ. ಪಕ್ಷದ ಶಾಸಕರು ಮತ್ತು ಕಾರ್ಯಕರ್ತರು ಸಾರ್ವಜನಿಕವಾಗಿ ಅಲ್ಲಲ್ಲಿ ಮಾತನಾಡುತ್ತಿದ್ದಾರೆ. ಆದರೆ, ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ರೂ. ಮೀಸಲಿಡಲಾಗಿದ್ದು, ಸದ್ಯಕ್ಕೆ ಪರಿಷ್ಕರಣೆ ಸಾಧ್ಯವಿಲ್ಲ’ ಎಂದು ಅಭಿಪ್ರಾಯಪಟ್ಟರು. ‘ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶೇ.13ರಷ್ಟು ಮತಗಳು ಹೆಚ್ಚಾಗಿವೆ. ಗ್ಯಾರಂಟಿ ಯೋಜನೆಗಳಿಂದಾಗಿಯೇ ಈ ಮತಗಳ ಪ್ರಮಾಣ ಹೆಚ್ಚಿದೆ ಎಂದು ಏಕೆ ಭಾವಿಸಬಾರದು? ಗ್ಯಾರಂಟಿಗಳ ಪರಿಷ್ಕರಣೆ ವಿಚಾರದಲ್ಲಿ ನನ್ನ ಅಭಿಪ್ರಾಯವೊಂದೇ ಮುಖ್ಯವಾಗುವುದಿಲ್ಲ. ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದರೆ ಗೊಂದಲ ಉಂಟಾಗುತ್ತದೆ. ಅದಕ್ಕೆ ಅವಕಾಶ ಆಗಬಾರದು’ ಎಂದು ಹೇಳಿದರು.
ಮೈಸೂರು: ಚಾಮುಂಡಿ ಬೆಟ್ಟ ತಮ್ಮ ಆಸ್ತಿ ಎಂದು ಮೈಸೂರು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟ ಈಗ ಹೇಗಿದೆಯೋ ಮುಂದೆಯೂ ಹಾಗೆಯೇ ಇರಲಿ. ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರಾಧಿಕಾರದ ರಚನೆ ಅಗತ್ಯವಿಲ್ಲ. ದೇವಸ್ಥಾನದ ಜೊತೆ ಯಾವ ಸಂಸ್ಥಾನದ ಸಂಬಂಧ ಇದೆಯೋ ಆ ಸಂಸ್ಥಾನಕ್ಕೆ ದೇವಸ್ಥಾನ ಸೇರಬೇಕು ಎಂದು ಪರೋಕ್ಷವಾಗಿ ಚಾಮುಂಡಿ ಬೆಟ್ಟ ತಮ್ಮ ಆಸ್ತಿ ಎಂದು ಹೇಳಿದರು. ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಅಮೆರಿಕ ವೀಸಾ ನಿರಾಕರಣೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಈಗಾಗಲೇ ಅರುಣ್ ಜೊತೆ ಮಾತನಾಡಿದ್ದೇನೆ. ಯಾವ ಕಾರಣಕ್ಕೆ ವೀಸಾ ತಿರಸ್ಕೃತವಾಗಿದೆ ಎನ್ನುವುದು ಗೊತ್ತಿಲ್ಲ. ಈ ಬಗ್ಗೆ ಮಾಹಿತಿ ಪಡೆದು ಕೇಂದ್ರ ಸಚಿವರ ಜೊತೆಯೂ ಮಾತನಾಡುತ್ತೇನೆ ಎಂದಿದ್ದಾರೆ.