ಕೊಡಗು: ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳು ರಾಷ್ಟ್ರಕ್ಕೇ ಮಾದರಿಯಾಗಿವೆ, ಇವುಗಳಲ್ಲಿ ಯಾವುದೇ ಬದಲಾವಣೆಯ ಅವಶ್ಯಕತೆಯಿಲ್ಲ ಹಾಗೂ ಆ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತವಾರಿ ಸಚಿವರಾದ ಎನ್.ಎಸ್. ಭೋಸರಾಜು ಪ್ರತಿಕ್ರಿಯಿಸಿದರು. ವಿರಾಜಪೇಟೆ ತಾಲ್ಲೂಕಿನ ಬೊಳ್ಳಮಾಡು ಗ್ರಾಮದಲ್ಲಿ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಲಾಗಿದ್ದ ‘ಬೇಲ್ ನಮ್ಮೆ’ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಸಚಿವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಎಐಸಿಸಿ ವತಿಯಿಂದ ಆಯೋಜಿಸಲಾಗಿರುವ ಎಲ್ಲಾ ರಾಜ್ಯದ ರಾಜ್ಯಾಧ್ಯಕ್ಷರುಗಳ ಸಭೆಯಲ್ಲಿ ಪಾಲ್ಗೊಳ್ಳಲು ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದಾರೆ. ಸಚಿವ ಸಂಪುಟ ಪುನಾರಚನೆಯ ಬಗ್ಗೆ ಚರ್ಚೆ ಮಾಡಲು ಅಲ್ಲ. ಸಚಿವ ಸಂಪುಟ ಪುನಾರಚನೆ ಕೇವಲ ಉಹಾಪೋಹ ಎಂದು ಹೇಳಿದರು.
Author: Prajatv Kannada
ಬಳ್ಳಾರಿ: ಆರ್‌ಟಿಒ ಕಚೇರಿಯ ಸಿಬ್ಬಂದಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ವಶಕ್ಕೆ ಪಡೆದಿದೆ. ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ವಿವೇಕಾನಂದ ನಗರದಲ್ಲಿರುವ ಆರ್‌ಟಿಒ ಕಚೇರಿಯ ಎಸ್‌ಡಿಸಿ ನಾಗೇಶ ಅವರ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಬಳ್ಳಾರಿ ಇನ್‌ಸ್ಪೆಕ್ಟರ್ ಮಹಮ್ಮದ್ ರಫೀಕ್ ನೇತೃತ್ವದಲ್ಲಿ ದಾಳಿ ನಡೆದಿತ್ತು. 3 ಲಕ್ಷ ನಗದು ಸೇರಿ ಬೆಳ್ಳಿ-ಬಂಗಾರ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ.
ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಂಶ ಪತ್ತೆಯಾಗಿದೆ ಎಂದು ಕೆಲ ವರ್ಷಗಳಿಂದ ಆಗಾಗ ಸುದ್ದಿಯಾಗುತ್ತಿರುತ್ತದೆ ಮತ್ತು ಅದು ಅಷ್ಟೇ ವೇಗದಲ್ಲಿ ಮೂಲೆ ಗುಂಪಾಗುತ್ತದೆ. ಆದರೆ ಈ ವರದಿ ಮಾತ್ರ ನಿರ್ಲಕ್ಷ್ಯ ಮಾಡುವಂತಹದ್ದಲ್ಲ. ಹೌದು, ಭಾರತದಲ್ಲಿ ಮಾರಾಟವಾಗುವ ಎಲ್ಲಾ ಬಗೆಯ ಉಪ್ಪು ಮತ್ತು ಸಕ್ಕರೆಗಳಲ್ಲಿ ಪ್ಲಾಸ್ಟಿಕ್ ಕಣಗಳಿರುತ್ತವೆ ಎಂಬ ಆಘಾತಕಾರಿ ಅಂಶ ಅಧ್ಯಯನವೊಂದರಲ್ಲಿ ತಿಳಿದು ಬಂದಿದೆ. ಟಾಕ್ಸಿಕ್ ಲಿಂಕ್ ಎಂಬ ಪರಿಸರ ಸಂಶೋಧನಾ ಸಂಸ್ಥೆಯ ಅಧ್ಯಯನದಿಂದ ಈ ವಿಚಾರ ಬಹಿರಂಗವಾಗಿದೆ. ಭಾರತದಲ್ಲಿ ಮಾರಾಟವಾಗುವ ಎಲ್ಲಾ ಬ್ರಾಂಡ್‌ಗಳ, ಎಲ್ಲಾ ಬಗೆಯ ಉಪ್ಪು ಹಾಗೂ ಸಕ್ಕರೆಯಲ್ಲಿ ಪ್ಲಾಸ್ಟಿಕ್ ಕಣಗಳಿರುತ್ತವೆ (ಮೈಕ್ರೊಪ್ಲಾಸ್ಟಿಕ್) ಎಂದು ಟಾಕ್ಸಿಕ್ಸ್ ಲಿಂಕ್ ಎಂಬ ಪರಿಸರ ಸಂಶೋಧನಾ ಸಂಸ್ಥೆಯ ಅಧ್ಯಯನದಿಂದ ಬಹಿರಂಗವಾಗಿದೆ. ಹೊಸ ಅಧ್ಯಯನದ ಪ್ರಕಾರ, ಭಾರತದಲ್ಲಿರುವ ಎಲ್ಲಾ ಮಾದರಿಯ ಉಪ್ಪು ಹಾಗೂ ಸಕ್ಕರೆಯ ಬ್ರ್ಯಾಂಡ್‌ಗಳಲ್ಲಿ, ಈ ಬ್ರ್ಯಾಂಡ್‌ಗಳು ಎಷ್ಟೇ ದೊಡ್ಡದಾಗಿರಲಿ, ಅಥವಾ ಚಿಕ್ಕದೇ ಆಗಿರಲಿ, ಪ್ಯಾಕ್ ಮಾಡಿರಲಿ ಅಥವಾ ಪ್ಯಾಕ್ ಮಾಡದೇ ಇರಲಿ.. ಅವುಗಳಲ್ಲಿ ಮೈಕ್ರೋಪ್ಲಾಸ್ಟಿಕ್ಸ್‌ಗಳ ಅಂಶ ಕಂಡು ಬಂದಿದೆ ಎಂದು ತಿಳಿಸಿದೆ ‘ಉಪ್ಪು ಮತ್ತು…
ಶುಂಠಿ-ಬೆಳ್ಳುಳ್ಳಿ ಒಟ್ಟಿಗೆ ತಿಂದ್ರೆ ಹಲವು ಲಾಭಗಳು ಸಿಗಲಿದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರಿಂದ ಹಿಡಿದು ಜೀರ್ಣಕ್ರಿಯೆಯವರೆಗೆ ಎಲ್ಲಾ ಸಮಸ್ಯೆಗಳಿಗೂ ಶುಂಠಿ ಮತ್ತು ಬೆಳ್ಳುಳ್ಳಿ ಪರಿಹಾರ ಒದಗಿಸುತ್ತದೆ. ಎರಡನ್ನೂ ಒಟ್ಟಿಗೆ ಸೇವಿಸುವುದರಿಂದ ಅನೇಕ ಪ್ರಯೋಜನಗಳಿವೆ. ಬೆಳ್ಳುಳ್ಳಿ: ಬೆಳ್ಳುಳ್ಳಿಯನ್ನು ಆಹಾರದ ರುಚಿ ಮತ್ತು ಪರಿಮಳವನ್ನು ಹೆಚ್ಚಿಸಲು ಬಳಸಲಾಗುತ್ತದೆ. ಬೆಳ್ಳುಳ್ಳಿಯು ಆರೋಗ್ಯವನ್ನು ಉತ್ತೇಜಿಸುವ ಗುಣಗಳಿಂದ ಸಮೃದ್ಧವಾಗಿದೆ. ಬೆಳ್ಳುಳ್ಳಿಯಲ್ಲಿರುವ ಅಲಿಸಿನ್ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಬೆಳ್ಳುಳ್ಳಿಯಲ್ಲಿರುವ ಆಯಂಟಿ ಬ್ಯಾಕ್ಟೀರಿಯಲ್, ಆಯಂಟಿ ವೈರಲ್, ಆಯಂಟಿ ಫಂಗಲ್ ಗುಣಗಳು ಬಿಪಿ ನಿಯಂತ್ರಿಸಲು, ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸಲು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಶುಂಠಿಯ ಪ್ರಯೋಜನಗಳು: ಜೀರ್ಣಕ್ರಿಯೆಯನ್ನು ಸುಧಾರಿಸಲು ಶುಂಠಿ ಸಹಕಾರಿ ಆಗಿದೆ. ಶುಂಠಿ ಆಹಾರಕ್ಕೆ ಉತ್ತಮ ಸುವಾಸನೆ ಮತ್ತು ರುಚಿಯನ್ನು ನೀಡುತ್ತದೆ. ಇದು ಉತ್ಕರ್ಷಣ ನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳನ್ನು ಹೊಂದಿರುವ ಜೈವಿಕ ಸಕ್ರಿಯ ಸಂಯುಕ್ತಗಳನ್ನು ಹೊಂದಿರುತ್ತದೆ. ಶುಂಠಿ ಸೇವನೆಯು ವಾಕರಿಕೆ, ಸ್ನಾಯು ನೋವು, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.…
ಸಂಸ್ಥಾಪಕ ಶೇಖ್ ಮುಜೀಬುರ್ ರೆಹಮಾನ್ ಅವರ ನಿಧನದ ಸ್ಮರಣಾರ್ಥ ಆಗಸ್ಟ್ 15ರಂದು ಸಾರ್ವಜನಿಕ ರಜೆಯನ್ನು ರದ್ದುಗೊಳಿಸಲಾಗಿದೆ ಎಂದು ಬಾಂಗ್ಲಾದೇಶದ ಮಧ್ಯಂತರ ಸರಕಾರ ಘೋಷಿಸಿದೆ. 1975ರ ಆಗಸ್ಟ್ 15ರಂದು ಹತ್ಯೆಯಾದ ಶೇಖ್ ಮುಜೀಬುರ್ ರಹಮಾನ್ ಅವರ ಸ್ಮರಣಾರ್ಥ ಆಗಸ್ಟ್ 15ನ್ನು ರಾಷ್ಟ್ರೀಯ ಶೋಕಾಚರಣೆ ದಿನವನ್ನಾಗಿ ಆಚರಿಸಲಾಗುತ್ತಿತ್ತು. ಆದರೆ ಸಾಕಷ್ಟು ವರ್ಷಗಳಿಂದ ನೀಡಲಾಗುತ್ತಿದ್ದ ಸಾರ್ವಜನಿಕ ರಜೆಯನ್ನು ಇದೀಗ ರದ್ದು ಪಡಿಸಲಾಗಿದೆ. ರಜಾದಿನವನ್ನು ರದ್ದುಗೊಳಿಸುವ ಬಗ್ಗೆ ಮಧ್ಯಂತರ ಸರಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ನೇತೃತ್ವದ ಸಲಹಾ ಸಮಿತಿ ಹಲವು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಚರ್ಚಿಸಿದ ಬಳಿಕ ನಿರ್ಧರಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ಈ ಮಧ್ಯೆ, ಆಗಸ್ಟ್ 15ನ್ನು ರಾಷ್ಟ್ರೀಯ ಶೋಕಾಚರಣೆ ದಿನವಾಗಿ ಆಚರಿಸುವಂತೆ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ದೇಶದ ಜನರನ್ನು ಆಗ್ರಹಿಸಿದ್ದಾರೆ. ಅಲ್ಲದೆ ಇತ್ತೀಚಿಗೆ ನಡೆದಿದ್ದ ಮೀಸಲಾತಿ ವಿರೋಧಿ ಪ್ರತಿಭಟನೆ ಸಂದರ್ಭ ಹಲವಾರು ಮಂದಿ ಸಾವನ್ನಪ್ಪಿರುವ ಬಗ್ಗೆ ತನಿಖೆ ನಡೆಸುವಂತೆ ಅವರು ಮಧ್ಯಂತರ ಸರಕಾರವನ್ನು ಆಗ್ರಹಿಸಿದ್ದಾರೆ.
ದೆಹಲಿ: ಪಂಚ ಗ್ಯಾರಂಟಿಗಳಲ್ಲಿ ಪರಿಷ್ಕರಣೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಸಚಿವ ಮುನಿಯಪ್ಪ ಪ್ರತಿಕ್ರಿಯಿಸಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಅರ್ಹ ಫಲಾನುಭವಿಗಳಿಗೆ ಈ ಯೋಜನೆ ತಲುಪ್ಪುತ್ತದೆ. ಪಂಚ ಗ್ಯಾರಂಟಿಗಳನ್ನು ನಾವು ನಡೆಸುತ್ತೇವೆ ಅಂತಾ ಹೇಳಿ ಜಾರಿಗೆ ತಂದಿದ್ದೇವೆ ಪರಿಷ್ಕರಣೆ ಮಾಡಿದರೇ ಆರ್ಥಿಕ ಹೊರೆಯಲ್ಲಿ ಸ್ವಲ್ಪ ತಗ್ಗಿಸಬಹುದು, ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯದಲ್ಲಿ ಪರಿಷ್ಕರಣೆ ಮಾಡಲು ಅವಕಾಶವಿದೆ, ಸಿಎಂ ಬಳಿ ಅನ್ನಭಾಗ್ಯ ವಿಚಾರದಲ್ಲಿ ಚರ್ಚೆ ಮಾಡ್ತೇನೆ, APL ಮತ್ತು BPL ಕಾರ್ಡ್ ಪರಿಷ್ಕರಣೆ ಮಾಡಿ ಕಡಿತ ಆರ್ಥಿಕ ಹೊರೆ ತಗ್ಗಿಸಲು ಸಹಾಯವಾಗುತ್ತೆ ಎಂದು ತಿಳಿಸಿದ್ದಾರೆ.
28 ವರ್ಷದ ಬೆಲ್ಜಿಯಂ ಮಹಿಳೆಯ ಮೇಲೆ ಐದು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿದ ದುಷ್ಕರ್ಮಿಗಳು ಬಳಿಕ ಆಕೆಯ ಕೈಕಾಲುಗಳನ್ನು ಕಟ್ಟಿ ರಸ್ತೆಗೆ ಎಸೆದು ಹೋದ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಇಸ್ಲಾಮಾಬಾದ್ನಲ್ಲಿ ಆಗಸ್ಟ್ 14ರಂದು ಪಾಕಿಸ್ತಾನದ ಸ್ವಾತಂತ್ರ್ಯಾ ದಿನದಂದು ಮಹಿಳೆ ಗಾಯಗೊಂಡ ಸ್ಥಿತಿಯಲ್ಲಿ ರಸ್ತೆಯಲ್ಲಿ ಪತ್ತೆಯಾಗಿದ್ದಳು. ಆಕೆಯ ಕೈಕಾಲುಗಳನ್ನು ಕಟ್ಟಿ ಹಾಕಲಾಗಿದ್ದು, ದೇಹದ ಮೇಲೆ ಗಾಯದ ಗುರುತುಗಳಿದ್ದವು. ಹಲ್ಲೆ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು ಉಳಿದವರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ. ಪಾಕಿಸ್ತಾನಿ ಮಾಧ್ಯಮಗಳ ಮಾಹಿತಿ ಪ್ರಕಾರ, ಅತ್ಯಾಚಾರವೆಸಗಿದ ನಂತರ ಮಹಿಳೆಯ ಕೈಗಳನ್ನು ಕಟ್ಟಿ ಇಸ್ಲಾಮಾಬಾದ್ನ ಜಿ-6 ಸೆಕ್ಟರ್ನಲ್ಲಿ ಎಸೆಯಲಾಗಿತ್ತು. ಸಂತ್ರಸ್ತೆಯನ್ನು ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ಪೊಲೀಸರು ಆಕೆಯನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ತನ್ನನ್ನು ಒತ್ತೆಯಾಳಾಗಿರಿಸಿಕೊಂಡು ಐದು ದಿನಗಳ ಕಾಲ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮಹಿಳೆಯ ಆರೋಪ ದೃಢಪಟ್ಟಿದೆ. ಹೇಳಿಕೆ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು…
ದೆಹಲಿ: ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿ, ದೇಶದ ಜನತೆಗೆ ಸ್ವಾತಂತ್ರೋತ್ಸವದ ಶುಭಕೋರಿದರು.2024ರಲ್ಲಿ ಪ್ರಧಾನಿ ಮೋದಿ ಬಿಳಿಯ ಬಣ್ಣ ಕುರ್ತಾ ಹಾಗೂ ಪ್ಯಾಂಟ್ ಧರಿಸಿದ್ದರು, ಅದರ ಮೇಲೆ ನೀಲಿ ಬಣ್ಣದ ಓವರ್ಕೋಟ್ ಧರಿಸಿದ್ದರು. ಕಿತ್ತಳೆ, ಹಸಿರು ಪಟ್ಟಿ ಇರುವ ರಾಜಸ್ಥಾನಿ ಪೇಟ ಧರಿಸಿದ್ದರು ಬಳಿಕ ಸ್ವಾತಂತ್ರ್ಯ ದಿನವನ್ನುದ್ದೇಶಿಸಿ ಮಾತನಾಡಿದ ಮೋದಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳನ್ನು ಸ್ಮರಿಸಿದರು. ಈ ವೇಳೆ ಗಮನ ಸೆಳೆದಿದ್ದು ಅವರ ಪೇಟ. ಪ್ರತಿ ವರ್ಷವೂ ವೇಷಭೂಷಣಗಳಿಂದಲೇ ಗಮನ ಸೆಳೆಯುವ ನಮೋ, ಗುರುವಾರ ಕೆಂಪು ಕೋಟೆಯಲ್ಲಿ ರಾಜಸ್ಥಾನಿ ಲೆಹರಿಯಾ ಪ್ರಿಂಟ್ ಪೇಟಾ ಧರಿಸಿ ಗಮನ ಸೆಳೆದರು. ಶಿರಸ್ತ್ರಾಣವು ಉದ್ದವಾದ ಬಾಲದೊಂದಿಗೆ ಕಿತ್ತಳೆ, ಹಳದಿ ಮತ್ತು ಹಸಿರು ಬಣ್ಣಗಳ ಮಿಶ್ರಣದಿಂದ ಕೂಡಿದ ಪೇಟ ಧರಿಸಿದ್ದರು. ಇದರೊಂದಿಗೆ ಬಿಳಿ ಕುರ್ತಾ, ತಿಳಿ ನೀಲಿ ಬಣ್ಣದ ಬಂಧಗಾಲಾ ಜಾಕೆಟ್ ಹೆಚ್ಚು ಗಮನ ಸೆಳೆಯಿತು. ಲೆಹರಿಯಾ, ಜವಳಿ ಟೈಡೈ ವಿನ್ಯಾಸವು ರಾಜಸ್ಥಾನದ ಸಾಂಪ್ರದಾಯಿಕ ವೈಭವಕ್ಕೆ ಮತ್ತೊಂದು ಹೆಸರಾಗಿದೆ. ಥಾರ್…
ಒಂದು ಮೊಟ್ಟೆಯ ಕಥೆ ಸಿನಿಮಾ ಮೂಲಕ ಖ್ಯಾತಿ ಘಳಿಸಿರುವ ನಟ ರಾಜ್ ಬಿ ಶೆಟ್ಟಿ ಸಿನಿಮಾ ರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ರಾಜ್ ಬಿ ಶೆಟ್ಟಿ ಪ್ರತಿಭೆಯನ್ನು ಗುರುತಿಸಿ ಸಾಕಷ್ಟು ಭಾಷೆಗಳಿಂದ ಆಫರ್ ಬರ್ತಿದೆ. ಸ್ಯಾಂಡಲ್ ವುಡ್ ಬಳಿಕ ಮಾಲಿವುಡ್ ಗೆ ಎಂಟ್ರಿಕೊಟ್ಟಿದ್ದ ರಾಜ್ ಬಿ ಶೆಟ್ಟಿ ಇದೀಗ ಬಾಲಿವುಡ್ ಗೂ ಎಂಟ್ರಿಕೊಟ್ಟಿದ್ದಾರೆ. ಅನುರಾಗ್ ಕಶ್ಯಪ್ ನಿರ್ದೇಶನದ ಹಿಂದಿ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ನಟಿಸಲಿದ್ದಾರೆ. ಈ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ಕ್ಯಾಮಿಯೋ ಪಾತ್ರದಲ್ಲಿ ನಟಿಸಲಿದ್ದು, ಮಲಯಾಳಂನ ಖ್ಯಾತ ನಟ ಜೋಜು ಜಾರ್ಜ್ ಕೂಡ ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ಬಾಬಿ ಡಿಯೋಲ್ ಕೂಡ ಇದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜ್ ಬಿ ಶೆಟ್ಟಿ, ‘ಅನುರಾಗ್ ಕಶ್ಯಪ್ ಸಿನಿಮಾಗಳನ್ನು ನೋಡಿ ಬೆಳೆದವನು ನಾನು. ನನಗೆ ಅವರ ಸಿನಿಮಾಗಳು ಇಷ್ಟ. ಅವು ನನ್ನ ಆಪ್ತರು ಕೂಡ. ಕ್ಯಾಮಿಯೋ ಪಾತ್ರದಲ್ಲಿ ನಟಿಸುತ್ತೀಯಾ ಎಂದು ಕೇಳಿದರು. ನಾನು ಒಪ್ಪಿದೆ. ಮುಂದಿನ ವಿವರಗಳನ್ನು ಅವರೇ ಅಧಿಕೃತವಾಗಿ…