ಸೂರ್ಯೋದಯ: 06:03, ಸೂರ್ಯಾಸ್ತ : 06:38 ಶಾಲಿವಾಹನ ಶಕೆ1946, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2080,ಗ್ರಿಷ್ಮ ಋತು, ದಕ್ಷಿಣಾಯಣ , ಶ್ರಾವಣ ಮಾಸ , ಶುಕ್ಲ ಪಕ್ಷ, ತಿಥಿ: ದಸಮಿ, ನಕ್ಷತ್ರ: ಜೇಷ್ಠ ರಾಹು ಕಾಲ:01:30 ನಿಂದ 03:00 ತನಕ ಯಮಗಂಡ:06:00 ನಿಂದ 07:30 ತನಕ ಗುಳಿಕ ಕಾಲ: 09:00 ನಿಂದ 10:30 ತನಕ ಅಮೃತಕಾಲ:ಇಲ್ಲ ಅಭಿಜಿತ್ ಮುಹುರ್ತ: ಬೆ.11:55 ನಿಂದ ಮ.12:45 ತನಕ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು. Mob. 93534 88403 ಮೇಷ ರಾಶಿ ಸಣ್ಣ ಕೈಗಾರಿಕೆ ಮರುಚಾಲನೆ ಮಾಡಲು ಬ್ಯಾಂಕಲ್ಲಿ ಸಾಲ ಸಿಗಲಿದೆ. ಟೆಕ್ಸ್ಟೈಲ್ ಉದ್ಯಮದಾರರಿಗೆ ಆರ್ಥಿಕ ಚೇತರಿಕೆ ಭಾಗ್ಯ.ಹೂಗುಚ್ಚ, ಪ್ಲಿವುಡ್, ಬ್ಯೂಟಿ ಪಾರ್ಲರ್ ಪುಸ್ತಕದ ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಮುಂದುವರಿಯುವ ಎಲ್ಲ ಲಕ್ಷಣಗಳು ಕಂಡು ಬರುತ್ತದೆ. ಕೆಲಸವನ್ನು ಬೇಗನೆ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವ ಮನೋಭಾವನೆಯಲ್ಲಿ…
Author: Prajatv Kannada
ದುನಿಯಾ ವಿಜಯ್ ನಟನೆಯ ‘ಭೀಮ’ ಸಿನಿಮಾ ನಿರೀಕ್ಷೆಗೂ ಮೀರಿ ಯಶಸ್ಸು ಕಾಣುತ್ತಿದೆ. ಈ ಖುಷಿಯಲ್ಲೇ ಚಿತ್ರತಂಡ ಸಂಭ್ರಮಾಚರಿಸಿದ್ದು ಈ ವೇಳೆ ನಟ ದುನಿಯಾ ವಿಜಯ್ ‘ನನಗೆ ಸ್ವತಂತ್ರವಾಗಿ ಸಿನಿಮಾ ಮಾಡುವ ಅವಕಾಶ ಕೊಟ್ಟ ನಿರ್ಮಾಪಕರಾದ ಜಗದೀಶ್ ಗೌಡ ಹಾಗೂ ಕೃಷ್ಣಸಾರ್ಥಕ್ ಅವರಿಗೆ ಋಣಿಯಾಗಿದ್ದೇನೆ. ನಮ್ಮನ್ನು ಕೆಣಕಿ, ಹಂಗಿಸಿದವರಿಗೆ ಈ ಚಿತ್ರದ ಯಶಸ್ಸು ಉತ್ತರ ಕೊಟ್ಟಿದೆ ಎಂದರು. ಎಲ್ಲರೂ ಇಂಥ ಚಿತ್ರಗಳನ್ನು ನೋಡಬೇಕು, ಮಕ್ಕಳು, ಪೋಷಕರು ಎಲ್ಲರೂ ಕೂತು ನೋಡುವ ಚಿತ್ರವಿದು ಎಂದು ಮೆಚ್ಚಿಕೊಳ್ಳುತ್ತಿದ್ದಾರೆ. ಒಳ್ಳೆಯ ವಿಚಾರ- ಸಂದೇಶ ಹೇಳುವುದಕ್ಕೆ ನಾನು ರಗಡ್ ದಾರಿಯನ್ನು ಆಯ್ಕೆ ಮಾಡಿಕೊಂಡೆ. ಇರೋ ಸಂಗತಿಗಳನ್ನು ಯಥಾವತ್ತಾಗಿ ಹೇಳಿದ್ದೇನೆ. ಭೀಮ ಚಿತ್ರದಲ್ಲಿರುವ ಕತೆ ಸಮಾಜಕ್ಕೆ ಎಚ್ಚರಿಕೆಯ ಗಂಟೆ’ ಎಂದರು. ಕೃಷ್ಣಸಾರ್ಥಕ್, ಜಗದೀಶ್ ಗೌಡ, ‘ಪ್ರೀ ರಿಲೀಸ್ ಬಿಸಿನೆಸ್ ಇಲ್ಲದೆ ಇರುವ ಹೊತ್ತಿನಲ್ಲಿ ಶೇ.99ರಷ್ಟು ರಿಸ್ಕ್‌ನಲ್ಲಿ ಪ್ರೇಕ್ಷಕರ ಮೇಲೆ ನಂಬಿಕೆ ಇಟ್ಟು ನಮ್ಮ ಚಿತ್ರವನ್ನು ಬಿಡುಗಡೆ ಮಾಡಿದ್ದೆವು. ಆ ನಂಬಿಕೆ ಈಗ ನಿಜವಾಗಿದೆ. ನಮ್ಮ ಚಿತ್ರದ ಓಟಿಟಿ, ಟೀವಿ ಹಕ್ಕು…
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿಂದು ವರುಣನ ಆರ್ಭಟ ಮುಂದುವರಿಯಲಿದೆ.ಮಲೆನಾಡಿನಲ್ಲಿ ಮತ್ತೆ ಮಳೆಯ ಪ್ರಮಾಣ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ತುಮಕೂರು, ಮೈಸೂರು, ಮಂಡ್ಯ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಗದಗ, ಧಾರವಾಡ, ಉತ್ತರ ಕನ್ನಡಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಕೋಲಾರ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕೊಪ್ಪ, ಅರಕಲಗೂಡು, ಕಳಸ, ಬೆಳ್ಳೂರು,…
ಮೈಸೂರು: ವಾಲ್ಮೀಕಿ ಹಗರಣದ ವಿರುದ್ಧ ಸರಿಯಾದ ಹೋರಾಟ ನಡೆದರೆ ಸಿಎಂ ಕುರ್ಚಿ ಅಲ್ಲಾಡುತ್ತೆ ಎಂದು ಮಾಜಿ ಸಂಸದ ಪ್ರತಾಪ್ಸಿಂಹ ಹೇಳಿದ್ದಾರೆ. ವಾಲ್ಮೀಕಿ ಹಗರಣದ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸೆ.17ಕ್ಕೆ ವಾಲ್ಮೀಕಿ ಹಗರಣ ವಿಚಾರದಲ್ಲಿ ಪಾದಯಾತ್ರೆ ಮಾಡಲು ನಿರ್ಧಾರವಾಗಿದೆ. ಬೆಳಗಾವಿಯಲ್ಲಿ ನಡೆದದ್ದು ಬಿಜೆಪಿ ಅತೃಪ್ತರ ಬಂಡಾಯಗಾರರ ಸಭೆಯಲ್ಲ. ಬಿಜೆಪಿಯ ಜನಪ್ರಿಯ ನೇತಾರ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ನಡೆದ ಸಭೆ ಎಂದರು. ನಾವು ಮೈಸೂರು ಚಲೋ ಪಾದಯಾತ್ರೆ ಅನುಭವದ ಹಂಚಿಕೊಂಡಿದ್ದೇವೆ. ವಾಲ್ಮೀಕಿ ಹಗರಣದ ವಿರುದ್ಧ ಸರಿಯಾದ ಹೋರಾಟ ನಡೆದರೆ ಸಿಎಂ ಕುರ್ಚಿ ಅಲ್ಲಾಡುತ್ತೆ. ಬಸನಗೌಡ ಪಾಟೀಲ್ ಯತ್ನಾಳ್‌ರಂತ ಬಹು ದೊಡ್ಡ ನಾಯಕರು ಕರೆದ ಕಾರಣ ನಾನು ಹೋಗಿದ್ದೆ ಎಂದು ಹೇಳಿದರು. ಈ ಪಾದಯಾತ್ರೆ ಯಾರ ಮೇಲಾಟದ ಕಾರ್ಯಕ್ರಮವಲ್ಲ. ಯಾರ ನಾಯಕತ್ವ ಪ್ರದರ್ಶನವೂ ಅಲ್ಲ. ಪಾದಯಾತ್ರೆಗೆ ಹೈಕಮಾಂಡ್ ಅನುಮತಿ ಕೊಡುತ್ತದೆ. ಅನುಮತಿಯೊಂದಿಗೆ ಪಾದಯಾತ್ರೆ ಮಾಡುತ್ತೇವೆ. ಬಿಜೆಪಿ ರಾಜ್ಯಾಧ್ಯಕ್ಷರ ಹಾದಿಯಾಗಿ ಎಲ್ಲರನ್ನು ಪಾದಯಾತ್ರೆಗೆ ಕರೆಯುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿಕೆ ನೀಡಿದ್ದಾರೆ.
ಮಂಗಳೂರು: ನಾನು ಯಾವುದೇ ರೀತಿಯಲ್ಲಿ ಭ್ರಷ್ಟಾಚಾರ ಎಸಗಿಲ್ಲ ಎಂದು ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ದೇವರ ಮುಂದೆ ಪ್ರಮಾಣ ಮಾಡಿದ್ದಾರೆ. ನಾನು ಒಂದು ರೂಪಾಯಿ ಮುಟ್ಟಿಲ್ಲ, ಭ್ರಷ್ಟಾಚಾರ ಮಾಡಿಲ್ಲ, ಒಂದು ವೇಳೆ ತಪ್ಪುಮಾಡಿದ್ದರೆ ತಕ್ಕ ಶಿಕ್ಷೆಯನ್ನು ಮಾರಿಗುಡಿಯ ಮಹಾದೇವಿ ನೀಡಲಿ ಎಂದು ಬೆಳ್ತಂಗಡಿ ಮಾರಿಗುಡಿ ದೇವಿ ದೇವಸ್ಥಾನದಲ್ಲಿ ಪ್ರಮಾಣ ಮಾಡಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಆರೋಪಿಸಿದ್ದರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ- ಬೆಳ್ತಂಗಡಿ ಪ್ರವಾಸಿ ಬಂಗಲೆ ಹಾಗೂ ಹೆದ್ದಾರಿ ಕಾಮಗಾರಿಯಲ್ಲಿ ಹರೀಶ್ ಪೂಂಜಾ ಭ್ರಷ್ಟಾಚಾರ ಎಸಗಿದ್ದಾರೆ. ಹೆದ್ದಾರಿಯ ಕಾಮಗಾರಿಯಲ್ಲಿ ಶಾಸಕ 3 ಕೋಟಿ ಕಿಕ್ ಬ್ಯಾಕ್ ಮಾಡಿದ್ದಾರೆ. ಕಾಮಗಾರಿ ಪೂರ್ಣಗೊಂಡರೂ 2 ಕೋಟಿ ಹೆಚ್ಚುವರಿ ಅನುದಾನಕ್ಕೆ ಬೇಡಿಕೆ ಮಾಡಿದ್ದಾರೆ ಎಂದು ದೂರಿದ್ದರು ಮಾರ್ಚ್ 28, 2023 ರಲ್ಲಿ ಬೆಳ್ತಂಗಡಿಲ್ಲಿ ಪ್ರವಾಸಿ ಮಂದಿರ ಉದ್ಘಾಟನೆಯಾಗಿತ್ತು. ಈ ಪ್ರವಾಸಿ ಮಂದಿರ 7 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿತ್ತು. ಪ್ರವಾಸಿ…
ಬೆಂಗಳೂರು: ಇಂದು ದೇಶಾದ್ಯಂತ 78 ನೇ ಸ್ವಾತಂತ್ರತ್ಸೋವದ ಸಂಭ್ರಮದ ಸಡಗರ ಹಾಗೆ ರಾಜ್ಯಾದ್ಯಂತ ಸ್ವಾತಂತ್ರತ್ಸೋವ ಆಚರಣೆ ಮಾಡಲಿದ್ದು ರಾಜ್ಯ ಸರ್ಕಾರದಿಂದ ರಾಜ್ಯಮಟ್ಟದ ಆಚರಣೆಗೆ ಸಿದ್ಧತೆ ನಡೆಸಲಾಗಿದ್ದು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಕಲ ಸಿದ್ಧತೆ ನಡೆದಿದ್ದು ಸಿಎಂ ಸಿದ್ದರಾಮಯ್ಯ ಅವರು ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಿದ್ದಾರೆ. https://youtu.be/HqcWB1BmFTQ?si=ggD1vE7mxDevk1uH ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಕೆ.ಎಸ್.ಆರ್.ಪಿ, ಸಿ.ಆರ್.ಪಿ.ಎಫ್, ಬಿ.ಎಸ್.ಎಫ್, ಸಿ.ಎ.ಆರ್, ಗೋವಾ ಪೊಲೀಸ್, ಕೆ.ಎಸ್.ಐ.ಎಸ್.ಎಫ್, ಟ್ರಾಫಿಕ್ ಪೊಲೀಸ್, ಮಹಿಳಾ ಪೊಲೀಸ್, ಹೋಂ ಗಾರ್ಡ್ಸ್, ಟ್ರಾಪಿಕ್ ವಾರ್ಡನ್, ಅಗ್ನಿ ಶಾಮಕ ದಳದ ಸಿಬ್ಬಂದಿ,ಡಾಗ್ ಸ್ಕ್ವಾಡ್ ಬ್ಯಾಂಡ್ ಸೇರಿದಂತೆ 35 ತುಕುಡಿಗಳಲ್ಲಿ ಸುಮಾರು 1,150 ಮಂದಿ ಭಾಗಿ ಮೈದಾನದ ಸುತ್ತ ಭದ್ರತೆಗಾಗಿ 10 ಡಿಸಿಪಿ, 09 ಎಸಿಪಿ, 112 ಪಿಎಸ್‌ಐ 510 ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಿದ್ದು, 100 ಸಿಸಿ ಕ್ಯಾಮೆರಾಗಳ ವ್ಯವಸ್ಥೆ ಹಾಗೂ ಎರಡು ಬ್ಯಾಗೇಜ್ ಸ್ಕ್ಯಾನರ್ ಅಳವಡಿಸಲಾಗಿದೆ. 2 ಅಗ್ನಿ ಶಾಮಕ ವಾಹನ, ಎರಡು ಅಂಬುಲೈನ್ಸ್, 1 ಕ್ಷಿಪ್ರ ಕಾರ್ಯಾಚರಣೆ…
ಬೆಂಗಳೂರು: ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದೆ. ಸಮಸ್ತ ಭಾರತೀಯರು ದೇಶಭಕ್ತಿ ಭಾವ ಮೆರೆದಿದ್ದಾರೆ. ಇದರ ಭಾಗವಾಗಿ ಇತ್ತ ರಾಜ್ಯದ ಸಿಎಂ ನಿವಾಸದಲ್ಲಿ ಸ್ವಾತಂತ್ರ ದಿನ ಆಚರಿಸಲಾಯಿತು. https://youtu.be/2G2uFa9VgNQ?si=BEpnykX9rPnj_–k ಸಿಎಂ ಸಿದ್ದರಾಮಯ್ಯ ತಮ್ಮ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದರು. ಇದೇ ವೇಳೆ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು. ನಂತರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಧ್ವಜಾರೋಹಣ ನೆರವೇರಿಸಿದರು
78 ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ದೇಶಾದ್ಯಂತ ಸಡಗರ-ಸಂಭ್ರಮ ಮನೆ ಮಾಡಿದೆ. ಆಗಸ್ಟ್ 15ರಂದು ದೇಶದಲ್ಲೆಡೆ 78ನೇ ಸ್ವಾತಂತ್ರೋತ್ಸವದ ಹಬ್ಬ ನಡೆಯುತ್ತಿದೆ. ಸ್ವಾತಂತ್ರೋತ್ಸವ ಅಂದರೆ ತ್ಯಾಗ ಬಲಿದಾನವನ್ನ ಸ್ಮರಿಸುವ ದಿನ. ಕನಸಿನ ಭಾರತದ ತೇರನ್ನ ಎಳೆಯುವ ಸುದಿನ. 90 ವರ್ಷಗಳ ನಿರಂತರ ಹೋರಾಟದ ಫಲವೇ 1947ರ ಆಗಸ್ಟ್ 15ರಂದು ಭಾರತಕ್ಕೆ ಬ್ರಿಟಿಷರಿಂದ ಸ್ವಾತಂತ್ರ್ಯ ಸಿಕ್ಕಿತ್ತು. ಈ ಶುಭ ದಿನದಂದು ತ್ರಿವರ್ಣ ಧ್ವಜವನ್ನು ಬಾನೆತ್ತರಕ್ಕೆ ಹಾರಿಸಲಾಗುತ್ತದೆ. ಈ ದಿನವನ್ನು ರಾಷ್ಟ್ರದಾದ್ಯಂತ ವೈಭವದಿಂದ ಆಚರಿಸಲಾಗುತ್ತದೆ. ಭಾರತದ ರಾಷ್ಟ್ರೀಯ ಧ್ವಜ ಅಥವಾ ತ್ರಿವರ್ಣ ಧ್ವಜವು ನಮ್ಮ ರಾಷ್ಟ್ರೀಯ ಹೆಮ್ಮೆಯ ಸಂಕೇತವಾಗಿದೆ. ತ್ರಿವರ್ಣ ಧ್ವಜವು ಭಾರತದ ಜನರ ಭರವಸೆ ಮತ್ತು ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತದೆ. ಆದ್ದರಿಂದ, ಭಾರತೀಯರಾದ ನಾವು ತ್ರಿವರ್ಣ ಧ್ವಜದ ಇತಿಹಾಸ ಮತ್ತು ಮಹತ್ವವನ್ನು ತಿಳಿದುಕೊಂಡಿರಬೇಕು. ತ್ರಿವರ್ಣ ಧ್ವಜದ ಇತಿಹಾಸ ಮತ್ತು ಮಹತ್ವ ಪ್ರಪಂಚದ ಪ್ರತಿಯೊಂದು ಸ್ವತಂತ್ರ ರಾಷ್ಟ್ರವೂ ತನ್ನದೇ ಆದ ಧ್ವಜವನ್ನು ಹೊಂದಿದ್ದು, ಅದು ಸ್ವತಂತ್ರದ ಸಂಕೇತವಾಗಿದೆ. ಆಗಸ್ಟ್ 15, 1947 ರಂದು ಭಾರತವು ಬ್ರಿಟಿಷರಿಂದ ಸ್ವಾತಂತ್ರ್ಯ ಪಡೆಯುವ…
ನಟ, ನಟಿಯರಂತೆ ಹಾಸ್ಯ ಕಲಾವಿದರು ದೊಡ್ಡ ಮಟ್ಟದಲ್ಲಿ ಹೆಸರು ಹಾಗೂ ಜನಪ್ರಿಯತೆ ಗಳಿಸುವುದು ತೀರಾ ಕಡಿಮೆ. ಆದರೆ ಕೆಲವೇ ಕೆಲವು ಹಾಸ್ಯ ನಟರು ಸ್ಟಾರ್ ನಟರಷ್ಟೆ ಜನಪ್ರಿಯತೆ, ಅಭಿಮಾನಿಗಳನ್ನು ಹೊಂದಿದ್ದಾರೆ ಅವರಲ್ಲಿ ಬಾಲಿವುಡ್ ಹಾಸ್ಯ ನಟ ರಾಜ್ಪಾಲ್ ಯಾದವ್ ಕೂಡ ಒಬ್ಬರು. ದಶಕಗಳಿಂದಲೂ ಚಿತ್ರರಂಗದಲ್ಲಿ ತಮ್ಮ ಅದ್ಭುತ ನಟನೆ, ದೇಹಭಾಷೆ, ಡೈಲಾಗ್ ಡೆಲಿವರಿಯಿಂದ ಪ್ರೇಕ್ಷಕರನ್ನೂ ರಂಜಿಸುತ್ತಾ ಬಂದಿರುವ ರಾಜ್ಪಾಲ್ ಯಾದವ್ ಇದೀಗ ಸಂಕಷ್ಟಕ್ಕೆ ಸಿಲುಕಿದ್ದು, ಕೋಟ್ಯಂತರ ರೂಪಾಯಿ ಸಾಲ ಮಾಡಿಕೊಂಡಿದ್ದಾರೆ. ಸಾಲದ ಬದಲಾಗಿ ಸಿಬಿಐ ನವರು ರಾಜ್ಪಾಲ್ ಯಾದವ್ಗೆ ಸೇರಿದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ರಾಜ್ಪಾಲ್ ಯಾದವ್ ಅವರಿಗೆ ಸೇರಿದ್ದು ಎನ್ನಲಾಗಿರುವ ಉತ್ತರ ಪ್ರದೇಶದ ಶಹಜಾನ್ಪುರದಲ್ಲಿರುವ ಆಸ್ತಿಯನ್ನು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಸಿಬ್ಬಂದಿ ಜಪ್ತಿ ಮಾಡಿದ್ದಾರೆ. ಹಲವು ವರ್ಷಗಳ ಹಿಂದೆ ರಾಜ್ಪಾಲ್ ಯಾದವ್ ಈ ಜಮೀನನ್ನು ಖರೀದಿ ಮಾಡಿದ್ದರು. ಅಸಲಿಗೆ ರಾಜ್ಪಾಲ್ ಯಾದವ್ ಬಹಳ ವರ್ಷಗಳ ಹಿಂದೆ ತಮ್ಮ ಪೋಷಕರಾದ ನೌರಂಗ್ ಮತ್ತು ಗೋಧಾವರಿ ಅವರುಗಳ ಹೆಸರಲ್ಲಿ ನಿರ್ಮಾಣ ಸಂಸ್ಥೆಯೊಂದನ್ನು…
ಸ್ಯಾಂಡಲ್ ವುಡ್ ಸಿನಿಮಾ ರಂಗಕ್ಕೆ ಆಗಾಗ ಹೊಸ ಹೊಸ ಪ್ರತಿಭೆಗಳು ಆಗಮನವಾಗುತ್ತಿರುತ್ತದೆ. ಇದೀಗ ಆ ಸಾಲಿಗೆ ಪತ್ರಕರ್ತ ಹರೀಶ್ ಸೀನಪ್ಪ ಸೇರ್ಪಡೆಗೊಂಡಿದ್ದಾರೆ. ಪತ್ರಕರ್ತನಾಗಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ್ದ ಹರೀಶ್ ಸೀನಪ್ಪ ಇದೀಗ ನಾಯಕನಾಗಿ ಚಂದನ ವನಕ್ಕೆ ಎಂಟ್ರಿಕೊಟ್ಟಿದ್ದಾರೆ. ಹರೀಶ್ ಗೆ ನಾಯಕಿಯಾಗಿ ಪಾಯಲ್ ಚಂಗಪ್ಪ ಕಾಣಿಸಿಕೊಳ್ಳಲಿದ್ದಾರೆ. ಹರೀಶ್ ಸೀನಪ್ಪ ಹಾಗೂ ಪಾಯಲ್ ಚಂಗಪ್ಪ ನಟನೆಯ ಸಿನಿಮಾಗೆ ‘ಕ್ರೆಡಿಟ್ ಕುಮಾರ’ ಎಂದು ಶೀರ್ಷಿಕೆ ಇಡಲಾಗಿದ್ದು ಇತ್ತೀಚೆಗಷ್ಟೇ ಚಿತ್ರದ ಮುಹೂರ್ತ ನೆರವೇರಿದೆ. ಕಂಠೀರವ ಸ್ಟುಡಿಯೋದಲ್ಲಿ ನಡೆದ ಮುಹೂರ್ತ ಸಮಾರಂಭಕ್ಕೆ ಆಗಮಿಸಿದ ನಟಿ ಧ್ರುವ ಸರ್ಜಾ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಹಿಂದೆ ‘ಬಾಂಡ್ ರವಿ’ ಸಿನಿಮಾ ಮಾಡಿ ಸೈ ಎನಿಸಿಕೊಂಡಿದ್ದ ಡೈರೆಕ್ಟರ್ ಪ್ರಜ್ವಲ್ ಕ್ರೆಡಿಟ್ ಕುಮಾರ್ ಗೆ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಇದು ಅವರ ಎರಡನೇ ಸಿನಿಮಾವಾಗಿದೆ.‘ಆಕ್ಷನ್ ಪ್ರಿನ್ಸ್’ ಧ್ರುವ ಸರ್ಜಾ ಮಾತ್ರವಲ್ಲದೇ ಹಿರಿಯ ನಿರ್ದೇಶಕ ಎಸ್. ಮಹೇಂದರ್, ನಟ ಪ್ರಮೋದ್, ‘ಮಾರ್ಟಿನ್’ ನಿರ್ಮಾಪಕ ಉದಯ್ ಮೆಹ್ತಾ, ನಿರ್ಮಾಪಕ ನರಸಿಂಹ, ಸೆಲೆಬ್ರಿಟಿ…