Author: Prajatv Kannada

ನವದೆಹಲಿ: ಗ್ರಾಹಕರ ದಾರಿ ತಪ್ಪಿಸುವ ಜಾಹೀರಾತು ಪ್ರಕಟಿಸುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಆಯುರ್ವೇದ ಮತ್ತು ಅದರ ಸಂಸ್ಥಾಪಕ ಬಾಬಾ ರಾಮ್‍ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರ ವಿರುದ್ಧದ ನ್ಯಾಯಾಂಗ ನಿಂದನೆ ಆರೋಪವನ್ನು ಸುಪ್ರೀಂ ಕೋರ್ಟ್ ಕೈಬಿಟ್ಟಿದೆ. ನ್ಯಾಯಮೂರ್ತಿ ಹಿಮಾ ಕೊಹ್ಲಿ ಮತ್ತು ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ ಅವರಿದ್ದ ದ್ವಿಸದಸ್ಯ ಪೀಠವು ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಿ, ತೀರ್ಪು ಪ್ರಕಟಿಸಿದೆ. ಕಂಪನಿ ಮತ್ತು ಅದರ ಸಂಸ್ಥಾಪಕ ನ್ಯಾಯಾಲಯದ ಆದೇಶದ ಉಲ್ಲಂಘನೆ ಹಿನ್ನಲೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿತ್ತು. ಬಳಿಕ ರಾಮ್‍ದೇವ್ ಅವರು ನವೆಂಬರ್ 2023ರ ಸುದ್ದಿಗೋಷ್ಠಿಯಲ್ಲಿ ಕ್ಷಮೆಯಾಚಿಸಿದ್ದರು. ಈ ಬಗ್ಗೆ ಪತ್ರಿಕೆಗಳಲ್ಲಿಯೂ ಕ್ಷಮಾಪಣೆ ಪ್ರಕಟಿಸಿದ್ದರು. ಕೋವಿಡ್-19 ವ್ಯಾಕ್ಸಿನೇಷನ್ ಮತ್ತು ಆಧುನಿಕ ಔಷಧದ ವಿರುದ್ಧ ಪತಂಜಲಿ ಟೀಕೆ ಮಾಡಿತ್ತು. ಪತಂಜಲಿ ಉತ್ಪನ್ನಗಳು ಕೊರೊನಾ ಗುಣಪಡಿಸುತ್ತದೆ ಎಂದು ಜಾಹೀರಾತು ನೀಡಿತ್ತು. ಈ ಜಾಹೀರಾತಿನ ವಿರುದ್ಧ ಭಾರತೀಯ ವೈದ್ಯಕೀಯ ಸಂಘ ಸಲ್ಲಿಸಿದ ಅರ್ಜಿಯ ಆಧಾರದ ಮೇಲೆ ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆ ಪ್ರಾರಂಭಿಸಿತ್ತು. ಈ ವರ್ಷ ಫೆಬ್ರವರಿಯಲ್ಲಿ,…

Read More

ಯುವಕನೊಬ್ಬನ ಕೊಲೆ ಮಾಡಿ ಬಸ್ ನಿಲ್ದಾಣದಲ್ಲಿ ಶವ ಎಸೆದು ಹೋಗಿರುವ ಘಟನೆಯೊಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಗ್ರಾಮದಲ್ಲಿ ನಡೆದಿದೆ. ಗಡಿ ತಾಲೂಕಿನಲ್ಲಿ ಕಳೆದ ಎರಡು ಮೂರು ತಿಂಗಳ ಅವಧಿಯಲ್ಲಿ ನಾಲ್ಕು ಕೊಲೆಗಳಾಗಿದ್ದು ಸದ್ಯ ತಾಲೂಕಿನ ಜನರು ಭಯಭೀತರಾಗಿದ್ದಾರೆ. ಅಥಣಿ ತಾಲೂಕಿನ ಅನಂತಪುರ ಗ್ರಾಮದ ಹೊರವಲಯದ ಚೆನ್ನಮ್ಮ ವೃತ್ತದಲ್ಲಿರುವ ಬಸ್ ನಿಲ್ದಾಣದಲ್ಲಿ ಕೊಲೆ ಮಾಡಿರುವ ಸ್ಥಿತಿಯಲ್ಲಿ ಯುವಕನ ವ್ಯಕ್ತಿಯ ಶವ ಪತ್ತೆಯಾಗಿದ್ದು ಯುವಕನ್ನ ಮದಭಾವಿ ಗ್ರಾಮದ ಅಪ್ಪಾಸಾಬ ಸಿದ್ದಪ್ಪ ಕಾಂಬಳೆ(37) ಎಂದು ಗುರುತಿಸಿಲಾಗಿದೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬರಬೇಕಿದ್ದು ಅಥಣಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಬಾಗಲಕೋಟೆ:- ಆ. 19 ರಿಂದ ಆ. 21 ವರೆಗೆ ರಬಕವಿಯ ಮಲ್ಲಿಕಾರ್ಜುನ ದೇವರ ಐತಿಹಾಸಿಕ ಜಾತ್ರೆ ನಡೆಯಲಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಶ್ರೀ ಮಲ್ಲಿಕಾರ್ಜುನ್ ಸಮುದಾಯ ಭವನದಲ್ಲಿ ಮುಖಂಡರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಮಧ್ಯಾಹ್ನ ೪ ಗಂಟೆಗೆ ಶಂಕರಲಿಂಗ ದೇವಸ್ಥಾನದಲ್ಲಿ ವಿವಿಧ ತಂಡಗಳಿಂದ ಕರಡಿ ಮತ್ತು ಸಂಬಾಳ ವಾದನದ ಪ್ರದರ್ಶನ ನಡೆಯಲಿದೆ. ೫.೩೦ ಕ್ಕೆ ಕಳಸಾರೋಹಣ ನಡೆಯಲಿದ್ದು, ಸಂಜೆ ೬ ಕ್ಕೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ನಡೆಯಲಿದೆ. ಆ. ೨೦ ರಂದು ಮಧ್ಯಾಹ್ನ ಅಂದಾಜು ರೂ. ೫೦ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕುಸ್ತಿ ಮೈದಾನದಲ್ಲಿ ರಾಷ್ಟ್ರ ಮಟ್ಟದ ಜಂಗಿ ನಿಕಾಲಿ ಕುಸ್ತಿಗಳು ನಡೆಯಲಿದೆ. ಆ. ೨೧ ರಂದು ಕಳಸ ಇಳಿಸುವ ಮತ್ತು ಕರಡಿ ಮಜಲು ಕಾರ್ಯಕ್ರಮ ನಡೆಯಲಿದೆ. ಈ ಭಾಗದಲ್ಲಿ ಶ್ರಾವಣ ತಿಂಗಳಲ್ಲಿ ಜರುಗುವ ಅತಿ ದೊಡ್ಡ ಜಾತ್ರೆಗಳಲ್ಲಿ ಇದು ಮೊದಲ ಜಾತ್ರೆ ಇದಾಗಿರುವುದರಿಂದ ಲಕ್ಷಾಂತರ ಭಕ್ತರು ಜಾತ್ರೆ ವಿಕ್ಷೀಸಲು ಬರುತ್ತಾರೆ. ಪ್ರತಿ ವರ್ಷ ಶ್ರಾವಣ ಮಾಸದ ಮೂರನೆಯ…

Read More

ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಶ್ರೀರಾಮಸೇನೆ ಖಂಡನೆ ವ್ಯಕ್ತಪಡಿಸಿದೆ. ಬಾಂಗ್ಲಾದಲ್ಲಿ ಸಂಭವಿಸಿದ ಆಂತರಿಕ ಮೀಸಲಾತಿ ಕಿಚ್ಚು ಇಡೀ ದೇಶವನ್ನೇ ಸುಡ್ತಿದೆ. ಪ್ರಧಾನಿ ಮನೆಯನ್ನೇ ಧ್ವಂಸ ಮಾಡಿದ ಕಿಡಿಗೇಡಿಗಳು ಕಂಡ ಕಂಡಲ್ಲಿ ಕೇಕೆ ಹಾಕ್ತಿದ್ದಾರೆ. ಇದರ ನಡುವೆ ಹಿಂದೂ ಕುಟುಂಬಗಳನ್ನೇ ಟಾರ್ಗೆಟ್ ಮಾಡಿಕೊಂಡಿರೋ ಪ್ರಕರಣ ಮತ್ತೊಂದು ಸ್ವರೂಪ ಪಡೆದುಕೊಂಡಿದೆ. ಇದು ಹಿಂದೂ ಸಮಾಜದವರ ರಕ್ತ ಕುದಿಯುವಂತೆ ಮಾಡಿದೆ. ಹಾಗಾಗಿ ಕರ್ನಾಟಕದಲ್ಲಿರುವ ಅಕ್ರಮ‌ ಬಾಂಗ್ಲಾ ನುಸುಳುಕೋರರನ್ನು ಹೆಮ್ಮೆಟ್ಟಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಮನವಿ ಮಾಡಲಾಗಿದೆ. ನಗರದಲ್ಲಿ ಅಕ್ರಮವಾಗಿ ಬಾಂಗ್ಲಾ ನುಸುಳುಕೋರರು ನೆಲಸಿರುವ ಬಗ್ಗೆ ಈಗಾಗಲೇ ಪೊಲೀಸರಿಗೂ ಮಾಹಿತಿ ಇದೆ. ಹಾಗಾಗಿ ಅಕ್ರಮ ವಲಸಿಗರ ಮೇಲೆ ದಾಳಿ ಕೂಡ ನಡೆದು ಕೆಲವರನ್ನು ವಾಪಸ್ಸು ಕಳುಹಿಸಲಾಗಿದೆ. ಆದರೆ ಈಗ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಗಲಭೆ ಹಾಗು ಹಿಂದೂಗಳ ಹತ್ಯೆಯಿಂದಾಗಿ ಈ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಶ್ರೀರಾಮಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಅವರು ಪೊಲೀಸ್ ಆಯುಕ್ತ ಬಿ ದಯಾನಂದ್ ಅವರನ್ನ ಭೇಟಿ ಮಾಡಿ ನಗರದಲ್ಲಿ ಅಕ್ರಮವಾಗಿ ನೆಲಸಿರುವ ಅಕ್ರಮ…

Read More

ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಾಂಕ ನಿಗದಿಯಾಗಿದೆ. ಇದೇ ಅ.3 ರಿಂದ ಅ.12 ರ ವರೆಗೆ ಮೈಸೂರು ದಸರಾ ಮಹೋತ್ಸವ ಜರುಗಲಿದೆ. ಮೈಸೂರು ದಸರಾ 2024 ಉನ್ನತ ಮಟ್ಟದ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ  ಅಕ್ಟೋಬರ್‌ 3 ರಂದು ದಸರಾ ಉದ್ಘಾಟನೆಯಾಗಲಿದ್ದು, ಅ.12 ರಂದು ಜಂಬೂಸವಾರಿಗೆ ನಡೆಯಲಿದೆ ಎಂದು ತಿಳಿಸಿದ್ದಾರೆ. ದಸರಾ ಉದ್ಘಾಟನೆ ಯಾರಿಂದ ಮಾಡಿಸಬೇಕು ಎನ್ನುವ ನಿರ್ಧಾರ ತೆಗೆದುಕೊಳ್ಳಲು ಸಭೆ ನನಗೆ ಸರ್ವಾನುಮತದಿಂದ ಅನುಮತಿ ನೀಡಿದೆ. 3-4 ದಿನಗಳಲ್ಲಿ ನಾನು ಯಾರು ಅಂತಾ ಘೋಷಣೆ ಮಾಡ್ತೀನಿ. ಈ ಬಾರಿ ದಸರಾವನ್ನ ವಿಜೃಂಭಣೆಯಿಂದ, ಆಕರ್ಷಣೆಯಾಗಿ, ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಈ‌ ಬಾರಿ ವಾಡಿಕೆಗಿಂತ ಹೆಚ್ಚು ಮಳೆ, ಬಿತ್ತನೆ ಆಗಿದೆ‌. ರೈತರು ಹರ್ಷದಿಂದ ಇದ್ದಾರೆ‌. ಬೆಳೆ ಚೆನ್ನಾಗಿ ಬರ್ತಿದೆ‌. ಎಲ್ಲಾ ಜಲಾಶಯಗಳು ತುಂಬಿವೆ. ಕಳೆದ ವರ್ಷ ಬರ ಇತ್ತು. ಹೀಗಾಗಿ ಸರಳವಾಗಿ ಆಚರಣೆ ಮಾಡಿದ್ವಿ. ಈ‌ ಬಾರಿ ವಿಜೃಂಭಣೆಯಿಂದ ಆಚರಣೆಗೆ ತೀರ್ಮಾನ ಮಾಡಲಾಗಿದೆ ಎಂದರು.

Read More

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಸೇವಾನಗರದಲ್ಲಿ ಬೃಹತ್ ಮರದ ಕೊಂಬೆ ಪಾದಚಾರಿಗಳ ಮೇಲೆ ಬಿದ್ದು ಶಾಲೆಗೆ ತೆರಳುತ್ತಿದ್ದ ಬಾಲಕಿ ಸೇರಿ 6 ಮಂದಿ ಗಾಯಗೊಂಡ ಘಟನೆ ಜರುಗಿದೆ. ಘಟನೆ ಪರಿಣಾಮ ಮಹಿಳೆಯೊಬ್ಬರ ಕಾಲು ಮುರಿದಿದ್ದು, ಓರ್ವ ವ್ಯಕ್ತಿಯ ಎದೆಗೆ ಪೆಟ್ಟಾಗಿದ್ದು ಬೆನ್ನುಮೂಳೆ ಮುರಿದಿದೆ. ಡಿಸಿಎಂ ಡಿಕೆ ಶಿವಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಆರೋಗ್ಯ ವಿಚಾರಿಸಿದ್ದಾರೆ. ಕುಂದಲಹಳ್ಳಿಯಿಂದ ವರ್ತೂರು ಸಂಪರ್ಕಿಸುವ ರಸ್ತೆ ಕೆಸರು ಗದ್ದೆಯಂತೆ ಆಗಿತ್ತು. ರಸ್ತೆಯಲ್ಲಿ 2 ಅಡಿ ನೀರು ನಿಂತು 2 ಕಿಲೋ ಮೀಟರ್​ವರೆಗೆ ವಾಹನ ಸವಾರರು ಸರ್ಕಸ್ ಮಾಡಿದರು. ಇತ್ತ ಸಿಲ್ಕ್​ಬೋರ್ಡ್ ಜಂಕ್ಷನ್​ನಲ್ಲಿ ರಾಜಕಾಲುವೆ ತುಂಬಿ ನೀರು ರಸ್ತೆಗೆ ನುಗ್ಗಿತ್ತು. ಟ್ರಾಫಿಕ್ ಜಾಮ್​ನಲ್ಲಿ ಸವಾರರು ಹೈರಾಣಾದರು. ಇನ್ನೂ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ರಾಮನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ ಆಗೋ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಯಲ್ಲೋ ಅಲರ್ಟ್​ ಘೋಷಣೆ…

Read More

ನವಿಲನ್ನೇ ಕೊಂದು ಅದರ ಮಾಂಸದ ಸಾರು ಮಾಡುವ ರೆಸಿಪಿಯನ್ನು ಯೂಟ್ಯೂಬ್‌ನಲ್ಲಿ ಪ್ರಕಟಿಸಿದ ಯೂಟ್ಯೂಬರ್‌ನನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ತೆಲಂಗಾಣದ ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ತಂಗಲಪಲ್ಲಿ ಗ್ರಾಮದ ಕೊಡಂ ಪ್ರಣಯ್‌ ಕುಮಾರ್ ಎಂದು ಗುರುತಿಸಲಾಗಿದೆ. ಈತ ಯೂಟ್ಯೂಬನಲ್ಲಿ ನವಿಲು ಸಾಂಬಾರಿನ ಸಂಪ್ರದಾಯಿಕ ವಿಧಾನ ಎಂದು ಶೀರ್ಷಿಕೆ ನೀಡಿ ಯೂಟ್ಯೂಬ್‌ನಲ್ಲಿ ವೀಡಿಯೋ ಪೋಸ್ಟ್ ಮಾಡಿದ್ದ. ಈ ವೀಡಿಯೋ  ನಂತರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಈತನ ಕೃತ್ಯದ ಬಗ್ಗೆ ವ್ಯಾಪಕ ಆಕ್ರೋಶ ಕೇಳಿ ಬಂದಿತ್ತು. ಇದಾದ ನಂತರ ವಿಚಾರ ತಿಳಿದ ಪೊಲೀಸರು ಆತನ ವಿರುದ್ಧ ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ರೀತಿ ಕೃತ್ಯವೆಸಗುವ ಯಾರೇ ಆಗಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯ ಎಸ್‌ಪಿ ಅಖಿಲ್ ಮಹಾಜನ್ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

Read More

ಬೆಂಗಳೂರು:- ಇಂದಿನಿಂದ ಮೂರು ದಿನ ಹಸಿರು ಮಾರ್ಗದ ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ. https://youtu.be/e1Y8h6OhqM8?si=B-WNFz0iecE_7CDZ ಇಂದಿನಿಂದ ಆ.15ರವರೆಗೆ ಪೀಣ್ಯ ಇಂಡಸ್ಟ್ರಿ ಹಾಗೂ ನಾಗಸಂದ್ರ ನಿಲ್ದಾಣಗಳ ನಡುವೆ ಮೆಟ್ರೋ ವ್ಯತ್ಯಯವಾಗಲಿದೆ. ಆಗಸ್ಟ್ 13ರಂದು ರಾತ್ರಿ 11ರ ಬದಲು ರಾತ್ರಿ 10 ಗಂಟೆವರೆಗೆ ಮೆಟ್ರೋ ಸಂಚಾರ ಸೇವೆ ಇರಲಿದೆ. ಇನ್ನು ಆ.14ರಂದು ಬೆಳಗ್ಗೆ 5ರ ಬದಲು 6 ಗಂಟೆಗೆ ಮೆಟ್ರೋ ಸೇವೆ ಆರಂಭವಾಗಲಿದೆ. ಆಗಸ್ಟ್ 14 ಮತ್ತು 15 ರಂದು ನಾಗಸಂದ್ರದಿಂದ ಮೊದಲ ರೈಲು ಸೇವೆಯು, ಬೆಳಿಗ್ಗೆ 5ರ ಬದಲಾಗಿ 6ಕ್ಕೆ ಪ್ರಾರಂಭವಾಗುತ್ತದೆ. ಆದಾಗ್ಯೂ, ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಆಗಸ್ಟ್ 13 ಮತ್ತು 14 ರಂದು ರಾತ್ರಿ 11.12 ಗಂಟೆಯವರೆಗೆ ಕೊನೆಯ ರೈಲು ಸೇವೆ ಲಭ್ಯವಿರುತ್ತದೆ. ಪೀಣ್ಯ ಇಂಡಸ್ಟ್ರಿಯಿಂದ, ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಮೊದಲ ರೈಲು ಸೇವೆಯು ಆಗಸ್ಟ್ 14 ಮತ್ತು 15 ರಂದು ಬೆಳಿಗ್ಗೆ 5 ಗಂಟೆಗೆ ಸಂಚಾರ ಪ್ರಾರಂಭವಾಗುತ್ತದೆ. ಇನ್ನು ನೇರಳೆ ಮಾರ್ಗದ…

Read More

ಬೆಂಗಳೂರು:- ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ನೀಡಲು ನಮ್ಮ ಮೆಟ್ರೋ ಸಜ್ಜಾಗಿರುವ ಸಂಗತಿ ಬೆಳಕಿಗೆ ಬಂದಿದೆ. https://youtu.be/e1Y8h6OhqM8?si=MoM-Nq-4tB01bNAZ ಬಿಎಂಆರ್​​ಸಿಎಲ್ ಮುಂದಾಗಿದೆ. ಹೊಸ ಮಾರ್ಗಗಳಾದ ಗೊಟ್ಟಿಗೆರೆಯಿಂದ ನಾಗವಾರ, ಸಿಲ್ಕ್ ಬೋರ್ಡ್​ನಿಂದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬ್ಲೂ ಲೈನ್​ನಲ್ಲಿ ಪಿಎಸ್​ಡಿ ಡೋರ್ ಅಳವಡಿಸಲು ಖಾಸಗಿ ಕಂಪನಿಗೆ 152 ಕೋಟಿ ರುಪಾಯಿ ವೆಚ್ಚದಲ್ಲಿ ಗುತ್ತಿಗೆ ನೀಡಲಾಗಿದೆ. ಹೀಗಿರುವಾಗ ಹಳೆಯ ಮೆಟ್ರೋ ಸ್ಟೇಷನ್​ಗಳಿಗೂ ಪಿಎಸ್​ಡಿ ಡೋರ್ ಅಳವಡಿಸಲು ಪ್ರಯಾಣಿಕರ ಒತ್ತಡ ಹೆಚ್ಚಾಗಿದೆ. ಎಲ್ಲಾ ಮೆಟ್ರೋ ಸ್ಟೇಷನ್​ಗಳಿಗೂ ಪಿಎಸ್​ಡಿ ಅಳವಡಿಸಲು 700 ರಿಂದ 800 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೆಟ್ರೋ ಟಿಕೆಟ್ ದರ ಹೆಚ್ಚಿಸುವ ಕುರಿತು ಬಿಎಂಆರ್​ಸಿಎಲ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಬಗ್ಗೆ ಬಿಎಂಆರ್​ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶ್ವಂತ್ ಚೌವ್ಹಾಣ್ ಸುಳಿವು ನೀಡಿದ್ದಾರೆ. ಒಂದು ಮೆಟ್ರೋ ಸ್ಟೇಷನ್​ಗೆ ಪಿಎಸ್​ಡಿ ಅಳವಡಿಸಲು 8 ರಿಂದ 10 ಕೋಟಿ ವೆಚ್ಚವಾಗಲಿದೆ. ಸದ್ಯ ಕಾರ್ಯಾಚರಣೆಯಲ್ಲಿರುವ ಹಸಿರು ಮತ್ತು ನೇರಳೆ ಮಾರ್ಗದ ಎಲ್ಲಾ ಮೆಟ್ರೋ…

Read More

ವಿಜಯವಾಡ: ಹೊಸದಾಗಿ ಮದುವೆಯಾಗಿ ಮೊದಲ ಬಾರಿಗೆ ಮಾವನ ಮನೆಗೆ ಬಂದ ಅಳಿಯನಿಗೆ ನೂರು ಬಗೆಯ ಖಾದ್ಯಗಳನ್ನು ಮುಂದಿಟ್ಟು ಶಾಕ್​ ನೀಡಿದ್ದಾರೆ. ಈ ಘಟನೆ ನಡೆದಿರುವುದು ನೆರೆಯ ಆಂಧ್ರಪ್ರದೇಶದ ವಿಜಯವಾಡದಲ್ಲಿ. ಆಂಧ್ರಪ್ರದೇಶದಲ್ಲಿ ಬಹಳ ಹಿಂದಿನಿಂದ ಒಂದು ವಿಶೇಷ ಸಂಪ್ರದಾಯ ನಡೆದುಕೊಂಡು ಬರುತ್ತಿದೆ. ಅದೇನೆಂದರೆ, ಮದುವೆಯಾಗಿ ಮೊದಲ ಬಾರಿಗೆ ಮನೆಗೆ ಬಂದ ಅಳಿಯನಿಗೆ ವಿವಿಧ ಬಗೆಯ ಭಕ್ಷ್ಯಗಳನ್ನು ತಯಾರಿಸಿ ಉಣಬಡಿಸುವುದು. ಆಂಧ್ರದ ಕಾಕಿನಾಡದಲ್ಲಿ ಮನೆಗೆ ಬಂದ ಹೊಸ ಅಳಿಯನಿಗೆ ಅತ್ತೆ 100 ಬಗೆಯ ಖಾದ್ಯಗಳನ್ನು ತಯಾರಿಸಿ ಬಡಿಸಿದ್ದಾರೆ  ಇದಕ್ಕೆ ಸಂಬಂಧಿಸಿದ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಕಾಕಿನಾಡ ಜಿಲ್ಲೆಯ ಕಿರ್ಲಂಪುಡಿ ಮಂಡಲದ ತಾಮರದ ಗ್ರಾಮದ ರತ್ನಕುಮಾರಿ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕಾಕಿನಾಡ ನಗರದ ರವಿತೇಜ ಅವರನ್ನು ವಿವಾಹವಾಗಿದ್ದರು. ಆದರೆ, ಮದುವೆಯ ನಂತರ ಆಷಾಢ ಮಾಸ ಮುಗಿದು ಅಳಿಯ ಮೊದಲಬಾರಿಗೆ ಅತ್ತೆಯ ಮನೆಗೆ ಬಂದಾಗ ಅತ್ತೆಯು ತನ್ನ ಅಳಿಯನಿಗೆ ಭರ್ಜರಿ ಊಟವನ್ನು ಸಿದ್ಧಪಡಿಸಿದರು. ಬರೋಬ್ಬರಿ ನೂರು ಬಗೆಯ ತಿನಿಸುಗಳನ್ನು ಅಳಿಯನ ಮುಂದೆ ಉಣಬಡಿಸಲಾಗಿತ್ತು.…

Read More