Author: Prajatv Kannada

ಪ್ರತಿವರ್ಷ ಆಗಸ್ಟ್‌ 12 ರಂದು ಅಂತರಾಷ್ಟ್ರೀಯ ಯುವ ದಿನವನ್ನು ಆಚರಣೆ ಮಾಡಲಾಗುತ್ತದೆ. ಜಗತ್ತಿನ್ನಲ್ಲಿ ಎಲ್ಲಾ ವಿಭಾಗದಲ್ಲಿ ದುಡಿಯುವ ಕೈಗಳಲ್ಲಿ ಪ್ರಮುಖವಾಗಿ ಯುವ ಜನಾಂಗಕ್ಕೆ ಆದ್ಯತೆ ನೀಡಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಅಂತಹ ದುಡಿಯುವ ಕೈಗಳಿಗೆ ಉದ್ಯೋಗ ಸಿಗುವುದು ಕಷ್ಟವಾಗಿದೆ. ಈ ಹಿನ್ನಲೆಯಲ್ಲಿ ಸ್ಥಳೀಯ ಸರ್ಕಾರಗಳು ಯುವಕರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು, ಅದನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕಾಗುತ್ತದೆ. ಯುವಕರ ಸಮಸ್ಯೆಗಳು, ಸೇರಿ ಹಲವು ಪ್ರಮುಖ ಉದ್ದೇಶಗಳನ್ನಿಟ್ಟುಕೊಂಡು ಪ್ರತಿವರ್ಷ ಆಗಸ್ಟ್‌ 12 ರಂದು ಅಂತರಾಷ್ಟ್ರೀಯ ಯುವ ದಿನವನ್ನು ಆಚರಣೆ ಮಾಡಲಾಗುತ್ತದೆ. ಹೆಸರೇ ಸೂಚಿಸುವಂತೆ, ವಿಶ್ವಾದ್ಯಂತ ಯುವಜನರು ಕೈಗೊಂಡ ಉಪಕ್ರಮಗಳು ಮತ್ತು ಕ್ರಿಯೆಗಳಿಗೆ ಧ್ವನಿ ನೀಡಿದ ಈ ದಿನವನ್ನು ಅಂತರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲಾಗುತ್ತದೆ. ಅಂತರಾಷ್ಟ್ರೀಯ ಯುವ ದಿನವನ್ನು ಯಾವಾಗಿನಿಂದ ಆಚರಿಸಲಾಗುತ್ತಿದೆ: 17 ಡಿಸೆಂಬರ್ 1999 ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಆಗಸ್ಟ್ 12ರಂದು ಅಂತರಾಷ್ಟ್ರೀಯ ಯುವದಿನವನ್ನು ಆಚರಿಸಲು ನಿರ್ಧರಿಸಲಾಯಿತು. 1998ರಲ್ಲಿ ನಡೆದ ವಿಶ್ವ ಸಮ್ಮೇಳನದಲ್ಲಿ ನೀಡಿದ ಸಲಹೆಗಳನ್ನು ಅನುಸರಿಸಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ನಿರ್ಧಾರದ…

Read More

ರಾಮನಗರ: ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್‌ ಗೊಂದಲಕ್ಕೆ ಇಂದು ಬಿಜೆಪಿ ಹೈಕಮಾಂಡ್‌ ತೆರೆ ಎಳೆಯುವ ಸಾಧ್ಯತೆಯಿದೆ. ದೆಹಲಿಯಲ್ಲಿ ಚನ್ನಪಟ್ಟಣ ಉಪಚುನಾವಣೆ ಮೈತ್ರಿ ಅಭ್ಯರ್ಥಿ ಆಯ್ಕೆ ಸಂಬಂಧ ಇಂದು ಸಭೆ ನಡೆಯಲಿದೆ. ಅಧ್ಯಕ್ಷ ಜಿ.ಪಿ.ನಡ್ಡಾ ನೇತೃತ್ವದಲ್ಲಿ ನಡೆಯುವ ಸಭೆ ಮಾಜಿ ಸಚಿವ ಸಿಪಿ ಯೋಗೇಶ್ವರ್‌ ಅವರಿಗೆ ಬಿಜೆಪಿ ಹೈಕಮಾಂಡ್‌ ಬುಲಾವ್‌ ನೀಡಿದೆ. ಉಪಚುನಾವಣೆಯಲ್ಲಿ ಟಿಕೆಟ್ ಸಿಗದಿದ್ದರೆ ಸ್ವತಂತ್ರ ಸ್ಪರ್ಧೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಸಮಾವೇಶ ನಡೆಸಲು ಸಿಪಿವೈ ಮುಂದಾಗಿದ್ದರು. ಸಿಪಿವೈ ಬಂಡಾಯಕ್ಕೂ ಮುನ್ನ ಎಚ್ಚೆತ್ತ ಬಿಜೆಪಿ ಹೈಕಮಾಂಡ್‌ ದೆಹಲಿಗೆ ಬರುವಂತೆ ಸೂಚನೆ ನೀಡಿದೆ. ಸಿಪಿವೈಗೆ ಟಿಕೆಟ್ ನೀಡಿ ಡಿಸಿಎಂ ಡಿಕೆ ಶಿವಕುಮಾರ್‌ ಠಕ್ಕರ್ ಕೊಡಲು ಬಿಜೆಪಿ ಹೈಕಮಾಂಡ್ ತಂತ್ರಗಾರಿಕೆ ನಡೆಸಿದೆ ಎನ್ನಲಾಗಿದೆ. ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ಕೆಲ ಷರತ್ತುಗಳ ಮೇಲೆ ಸಿಪಿವೈಗೆ ಟಿಕೆಟ್‌ ಸಿಗುವ ಸಾಧ್ಯತೆಯಿದೆ. ಉಪಚುನಾವಣೆಯಲ್ಲಿ ಸಿಪಿವೈ,  ವಿಧಾನಸಭಾ ಚುನಾವಣೆಯಲ್ಲಿ ನಿಖಿಲ್‌ಗೆ ಅವಕಾಶ ಸಿಗಬಹುದು ಎನ್ನಲಾಗುತ್ತಿದೆ.

Read More

ಪಾಟ್ನಾ:  ಬಿಹಾರದ ಜಿಹಾನಾಬಾದ್‌ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಜನಸಂದಣಿ ನಿಯಂತ್ರಿಸಲು ಭದ್ರತಾ ಸಿಬ್ಬಂದಿ ಲಘು ಲಾಠಿ ಪ್ರಹಾರ ಮಾಡಿದ ಪರಿಣಾಮ ಕಾಲ್ತುಳಿತ ಉಂಟಾಗಿ 3 ಮಹಿಳೆಯರು ಸೇರಿ 7 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಶ್ರಾವಣ ಮಾಸದ 4ನೇ ಸೋಮವಾರದಂದು ಬರಾವರ್ ಬೆಟ್ಟದ ಬಾಬಾ ಸಿದ್ಧೇಶ್ವರನಾಥ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದ್ದರು. ಈ ಅವಘಡದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಸುಮಾರು 35 ಮಂದಿ ಗಾಯಗೊಂಡಿದ್ದಾರೆ. ಜೆಹಾನಾಬಾದ್‌ನ ಟೌನ್ ಇನ್ಸ್‌ಪೆಕ್ಟರ್ ದಿವಾಕರ್ ಕುಮಾರ್ ವಿಶ್ವಕರ್ಮ ಹೇಳುವಂತೆ, 7 ಮೃತದೇಹಗಳನ್ನು ಜೆಹಾನಾಬಾದ್‌ ಶವಾಗಾರಕ್ಕೆ ರವಾನಿಸಲಾಗಿದೆ. ಪ್ರತಿ ವರ್ಷ ಪವಿತ್ರ ಶ್ರಾವಣ ಮಾಸದಲ್ಲಿ ನಡೆಯುವ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸುತ್ತಾರೆ. ಅದೇ ರೀತಿ ಭಾನುವಾರ ತಡರಾತ್ರಿಯಿಂದಲೇ ಭಕ್ತರು ಜಮಾಯಿಸಿದ್ದರು. ಈ ಸಂದರ್ಭದಲ್ಲಿ ಶಿವನಿಗೆ ಜಲಾಭಿಷೇಕ ಅರ್ಪಿಸಲು ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ನೂಕುನುಗ್ಗಲು ಶುರುವಾಗಿತ್ತು. ಜನಸಂದಣಿ ನಿಯಂತ್ರಿಸಲು ಭದ್ರತಾ ಸಿಬ್ಬಂದಿ ಬಲಪ್ರಯೋಗ ನಡೆಸಿದ್ದರಿಂದ ಕಾಲ್ತುಳಿತ ಉಂಟಾಗಿದೆ ಎಂದು ಪ್ರಾಥಮಿಕ…

Read More

ಮೀಸಲಾತಿಯ ಕಾರಣದಿಂದಾಗಿ ಬಾಂಗ್ಲಾದೇಶದಲ್ಲಿ ಶುರುವಾದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದು 500ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಪ್ರಧಾನಿ ಶೇಖ್ ಹಸೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾರತಕ್ಕೆ ಬಂದಿದ್ದಾರೆ. ಈ ಮಧ್ಯೆ ಬಾಂಗ್ಲಾದೇಶದಲ್ಲಿ ಅರಾಜಕತೆ ಸೃಷ್ಟಿಯಾಗಲು ಅಮೆರಿಕಾ ಷಡ್ಯಂತ್ರ ಕಾರಣ ಅಂತ ಹಸೀನಾ ಆರೋಪ ಮಾಡಿದ್ದಾರೆ. ಪ್ರಧಾನಿ ಸ್ಥಾನದಿಂದ ಕೆಳಗಿಳಿದಿರುವ, ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾ ಮಾಜಿ ಪ್ರಧಾನಿ ಶೇಖ್​ ಹಸೀನಾ, ಅಮೆರಿಕ ವಿರುದ್ಧ ದೊಡ್ಡ ಆರೋಪ ಮಾಡಿದ್ದಾರೆ. ಬಾಂಗ್ಲಾದಲ್ಲಿ ಅರಾಜಕತೆ ಸೃಷ್ಟಿಯಾಗಲು ಹಾಗೂ ಪ್ರಧಾನಿ ಸ್ಥಾನದಿಂದ ತಾವು ಕೆಳಗಿಳಿಯಲು ಅಮೆರಿಕಾ ಷಡ್ಯಂತ್ರವೇ ಕಾರಣ ಎಂದಿದ್ದಾರೆ. ಎಕನಾಮಿಕ್‌ ಟೈಮ್ಸ್‌ಗೆ ಪ್ರತಿಕ್ರಿಯಿಸಿರೋ ಶೇಕ್‌ ಹಸೀನಾ, ನಾನು ಸೇಂಟ್​​ ಮಾರ್ಟಿನ್​ ದ್ವೀಪವನ್ನು ಬಿಟ್ಟುಕೊಟ್ಟಿದ್ದರೆ ಮತ್ತು ಬಂಗಾಳಕೊಲ್ಲಿಯ ಮೇಲೆ ಅಮೆರಿಕದ ಹಿಡಿತಕ್ಕೆ ಅವಕಾಶ ನೀಡಿದ್ದರೇ ನಾನು ಅಧಿಕಾರದಲ್ಲಿ ಉಳಿಯಬಹುದಿತ್ತು ಎಂದಿದ್ದಾರೆ. ಜೊತೆಗೆ . ನಾನು ದೇಶದಲ್ಲಿಯೇ ಉಳಿದಿದ್ದರೇ ಮತ್ತಷ್ಟು ಹಿಂಸಾಚಾರ ನಡೆಯುತ್ತಿತ್ತು. ಆದ್ದರಿಂದ ರಾಜೀನಾಮೆ ನೀಡಿದೆ ಎಂದು ಶೇಖ್​​ ಹಸೀನಾ ದೇಶದ ಜನರ…

Read More

ಬಾಂಗ್ಲಾದೇಶದ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಸೈಯದ್ ರೆಫಾತ್ ಅಹ್ಮದ್ ಪ್ರಮಾಣವಚನ ಸ್ವೀಕರಿಸಿದರು. ಒಬೈದುಲ್ ಹಸನ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ದಿನದ ದಿನದ ಬಳಿಕ ಸೈಯದ್ ರೆಫಾತ್ ಅಹ್ಮದ್ ದೇಶದ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಮುಖ್ಯ ನ್ಯಾಯಾಧೀಶರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಸಂಪುಟ ಕಾರ್ಯದರ್ಶಿ ಮಹೆಬೂಬ್ ಹೊಸೈನ್ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ನಡೆಸಿಕೊಟ್ಟರು ಎಂದು ವರದಿ ತಿಳಿಸಿದೆ. ಶೇಕ್ ಹಸೀನಾ ಪದಚ್ಯುತಿ ನಂತರ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ ಪ್ರೊ.ಮುಹಮ್ಮದ್ ಯೂನಸ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ. ಅಧ್ಯಕ್ಷ ಶಹಾಬುದ್ದೀನ್ ಶನಿವಾರ ನ್ಯಾಯಮೂರ್ತಿ ಅಹ್ಮದ್ ಅವರನ್ನು ಬಾಂಗ್ಲಾದೇಶದ 25 ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿದ್ದಾರೆ. ವಿದ್ಯಾರ್ಥಿಗಳು ಮತ್ತು ಇತರ ಪ್ರತಿಭಟನಾಕಾರರ ಹೊಸ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಢಾಕಾ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊಫೆಸರ್ ಡಾ ಮಕ್ಸುದ್ ಕಮಾಲ್ ಮತ್ತು ಬಾಂಗ್ಲಾ ಅಕಾಡೆಮಿ ಮಹಾನಿರ್ದೇಶಕ ಪ್ರೊಫೆಸರ್ ಡಾ ಎಂಡಿ…

Read More

ಟಾಲಿವುಡ್ ಬ್ಯೂಟಿ ನಟಿ ಸಮಂತಾ ಮಾಜಿ ಪತಿ ನಾಗಚೈತನ್ಯ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಟಿ ಶೋಭಿತಾ ಧೂಲಿಪಾಲ ಅವರೊಂದಿಗೆ ಕಳೆದ ಎರಡು ಮೂರು ದಿನಗಳ ಹಿಂದೆ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ. ಈ ಬೆನ್ನಲ್ಲೇ ನಟಿ ಸಮಂತಾಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಪೋಸ್ ಮಾಡಿದ ಸಾಮಾನ್ಯ ಮಧ್ಯಮ ವರ್ಗದ ಹುಡುಗನನ್ನು ಮದುವೆ ಮಾಡಿಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆ. ನಟಿ ಸಮಂತಾ ಹಾಗೂ ನಟ ನಾಗಚೈತನ್ಯ ಡಿವೋರ್ಸ್ ಆಗಿ ಇಲ್ಲಿದೆ ಮೂರು ವರ್ಷಗಳು ಕಳೆದಿವೆ. ಇದೀಗ ಪುನಃ ನಾಗಚೈತನ್ಯ ಅವರು ನಟಿ ಶೋಭಿತಾ ಧೂಲಿಪಾಲ ಅವರೊಂದಿಗೆ ಆ.8ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇದಕ್ಕೆ ಕೌಂಟರ್ ಕೊಡಲು ಮುಂದಾದ ನಟಿ ಸಮಂತಾ ಕೂಡ ಮಧ್ಯಮ ವರ್ಗದ ಯುವಕನನ್ನು ಮುದುವೆಯಾಗಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಅದು ಕೂಡ ಸಾಮಾಜಿಕ ಜಾಲತಾಣದಲ್ಲಿ ಕೇವಲ ಜಿಮ್ ಅನ್ನು ತೋರಿಸಿ ಮದುವೆಯ ಪ್ರಸ್ತಾಪ ಮಾಡಿಕೊಂಡವನಿಗೆ ನಾನು ನಿನ್ನ ಮದುವೆ ಪ್ರಸ್ತಾಪಕ್ಕೆ ಒಪ್ಪಿಕೊಂಡಿದ್ದೇನೆ ಎಂದಿದ್ದಾರೆ. ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಮುಖೇಶ್ ಚಿಂತಾಲ ಎನ್ನುವ ವ್ಯಕ್ತಿ ಮೂಕೇಶ್ ಎಂಬ ಖಾತೆಯ ಮೂಲಕ…

Read More

ಸ್ಯಾಂಡಲ್ ವುಡ್ ಸಿನಿಮಾ ರಂಗದ ಉಳಿವಿಗಾಗಿ, ಏಳ್ಗೆಗಾಗಿ ಇದೇ ಆಗಸ್ಟ್ 13,14 ರಂದು ಕಲಾವಿದರ ಸಂಘದಲ್ಲಿ ಪೂಜೆ, ಹೋಮ, ಹವನ ಮಾಡುತ್ತಿದ್ದೇವೆ. ಅಂದು ಒಳ್ಳೆಯ ದಿನ ಹಾಗಾಗಿ ಅವತ್ತು ಹೋಮ ಹವನ ಮಾಡಲು ನಿರ್ಧರಿಸಿದ್ದೇವೆ ಎಂದು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ತಿಳಿಸಿದರು. ಕಲಾವಿದರ ಸಂಘದಲ್ಲಿ ಪೂಜೆ ಕಾರ್ಯಕ್ರಮ ನಡೆಯುವ ಕುರಿತು ಧಿಡೀರ್ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, ಕೊರೊನಾ ಬಳಿಕ ಸಾಕಷ್ಟು ಸಾವು ನೋವು ಸಂಭವಿಸಿವೆ. ಚಿತ್ರರಂಗದಲ್ಲೂ ಹಲವರನ್ನು ನಾವು ಕಳೆದುಕೊಂಡಿದ್ದೇವೆ. ಹೀಗಾಗಿ ಚಿತ್ರರಂಗದ ಉಳಿವಿಗಾಗಿ, ಏಳಿಗೆಗಾಗಿ ಪೂಜೆ ಮಾಡಲು ತೀರ್ಮಾನ ಮಾಡಿದ್ದೇವೆ. ಸಾಮಾನ್ಯವಾಗಿ ಎಲ್ಲರಿಗೂ ಒಂದು ಆಮಂತ್ರಣ ಕೊಡ್ತೀವಿ. ಆದರೆ ಇಲ್ಲಿ ಯಾರಿಗೂ ಇನ್ವಿಟೇಷನ್ ಕೊಡಲ್ಲ ಎಂದು ಸ್ಪಷ್ಟಪಡಿಸಿದರು. ಸದ್ಯದ ಪರಿಸ್ಥಿತಿಯಲ್ಲಿ ನಮಗೆ ಒಂದು ಸಲ್ಯೂಷನ್ ಬೇಕಾಗಿದೆ. ನಾವು ಅನೇಕ ಸಲ ಜನರ ಬಳಿ ಮನವಿ ಮಾಡಿದ್ದೇವೆ. ಇವತ್ತಿನ ಕನ್ನಡ ಚಿತ್ರರಂಗದ ಪರಿಸ್ಥಿತಿ ಏನಾಗ್ತಿದೆ ಅನ್ನೋದು ಗೊತ್ತಿದೆ. ಹಿಂದೆ ಎಲ್ಲಾ ಭಾಷೆಯ ಚಿತ್ರ ಬಿಡುಗಡೆ ಆಗ್ತಿದ್ದವು, ಅದು ಕಡಿಮೆ…

Read More

ಬೆಂಗಳೂರು, ಮಳೆಯಿಂದಾಗಿ ನಗರದಲ್ಲಿ ನೂರಾರು ಮರಗಳು ಧರೆಗುರುವೆ, ಮತ್ತೊಂದೆಡೆ ನಗರದ ಪ್ರಮುಖ ಬೀದಿಗಳಲ್ಲಿ ಒಣಗಿದ ಮರಗಳು ಜನರ ಬಲಿಗಾಗಿ ಕಾದು ನಿಂತಿದ್ರೆ, ಜಯನಗರ 4 ನೇ ಬ್ಲಾಕ್‌ನ ಬಿಬಿಎಂಪಿ ಸಾರ್ವಜನಿಕ ಪಾರ್ಕ್‌ನಲ್ಲಿ15 ಕ್ಕೂ ಅಧಿಕ ಮರಗಳು ಒಣಗಿ ಹೋಗಿದ್ದು ಆಗಲೋ ಈಗಲೋ ಬೀಳುವ ಸ್ಥಿತಿಯಲ್ಲಿದ್ದು, ಬೆಳಿಗ್ಗೆ ಸಾಯಂಕಾಲ ವಾಕಿಂಗ್‌ಗೆ ಬರೋ ಜನರು ವಾಕಿಂಗ್ ಮಾಡಲು ಭಯ ಪಡುವಂತಾಗಿದ್ದು, ವಾಕಿಂಗ್ ಮಾರೋರು ಜೀವಕಳೆದುಕೊಳ್ಳೊಕೆ ಬರ್ತಾರಾ ಹೀಗಾಗಿ ಒಣಗಿದ ಮರಗಳನ್ನ ತೆರವುಗೊಳಿಸುವಂತೆ ಆಗ್ರಹಿಸುತ್ತಿದ್ದಾರೆ. ಯಾವುದೇ ಮರಗಳನ್ನ ಪಾಲಿಕೆ ಅನುಮತಿ ಇಲ್ಲದೇ ತೆರವಿಗೊಳಿಸುವಂತಿಲ್ಲ. ಇನ್ನೂ ಈ ಪಾರ್ಕ್‌ನ್ನ ತುಂಬಾ ಚೆನ್ನಾಗಿ ನಿರ್ವಹಣೆ ಮಾಡಲಾಗುತ್ತಿದೆಯಾದರೆ ಅವರು ಮರಗಳನ್ನ ತೆರವುಗೊಳಿಸುವಂತಿಲ್ಲ. ಇಲ್ಲಿರುವಂತಹ ಮರಗಳ ಒಣಗಿದ ರೆಂಬೆಕೊಂಬೆ ಹಾಗೂ ಸಂಪೂರ್ಣವಾಗಿ ಒಣಗಿದ ಮರಗಳನ್ನ ಪಾಲಿಕೆಯ ಅರಣ್ಯ ವಿಭಾಗದ ಅಧಿಕಾರಿಗಳು ತೆರವುಗೊಳಿಸಬೇಕು. ಆದರೆ ಪಾಲಿಕೆ ಅಧಿಕಾರಿಗಳು ಮಾತ್ರ ಈ ಬಗ್ಗೆ ತಲೆ ಕೆಡಸಿಕೊಳ್ಳದೇ ನಿರ್ಲಕ್ಷ ವಹಿಸುತ್ತಿದ್ದಾರೆ. ಪರಿಣಾಮ ಪಾರ್ಕ್‌ನಲ್ಲಿ ಕುಳಿತುಕೊಳ್ಳಲು ಓಡಾಡಲು ಭಯ ಪಡುತ್ತಿರೋ ಜನರು ಮತ್ತೊಂದೆಡೆಗೆ ಒಣಗಿದ ಮರಗಳಿಂದ ಪಾರ್ಕ್‌…

Read More

ಚಿನ್ನ ಮತ್ತು ಬೆಳ್ಳಿ ಎರಡೂ ಬೆಲೆಗಳಲ್ಲಿ ವಾರಾಂತ್ಯದಲ್ಲಿ ಏರಿಕೆ ಆಗಿದೆ. ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಈ ಎರಡು ಲೋಹಗಳಿಗೆ ಬೇಡಿಕೆ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 64,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 70,090 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 64,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,075 ರುಪಾಯಿಯಲ್ಲಿ ಇದೆ ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 11ಕ್ಕೆ) 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,250 ರೂ 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,090 ರೂ ಬೆಳ್ಳಿ ಬೆಲೆ 10 ಗ್ರಾಂಗೆ: 830 ರೂ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,250 ರೂ 24 ಕ್ಯಾರಟ್​ನ…

Read More