Author: Prajatv Kannada

ಚಿನ್ನ ಮತ್ತು ಬೆಳ್ಳಿ ಎರಡೂ ಬೆಲೆಗಳಲ್ಲಿ ವಾರಾಂತ್ಯದಲ್ಲಿ ಏರಿಕೆ ಆಗಿದೆ. ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಈ ಎರಡು ಲೋಹಗಳಿಗೆ ಬೇಡಿಕೆ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 64,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 70,090 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 64,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,075 ರುಪಾಯಿಯಲ್ಲಿ ಇದೆ ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 11ಕ್ಕೆ) 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,250 ರೂ 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,090 ರೂ ಬೆಳ್ಳಿ ಬೆಲೆ 10 ಗ್ರಾಂಗೆ: 830 ರೂ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,250 ರೂ 24 ಕ್ಯಾರಟ್​ನ…

Read More

ಬೆಂಗಳೂರು:- ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸ ಅಲ್ಲ, ಕುರಿ ಮಾಂಸ ಎಂದು ಹೈದರಾಬಾದ್‌ ಲ್ಯಾಬ್‌ ವರದಿ ಹೇಳಿದೆ. ಇದರ ಬೆನ್ನಲ್ಲೇ, ಹೈದರಾಬಾದ್‌ ಲ್ಯಾಬ್‌ ವರದಿ ಕೂಡ ಲಭ್ಯವಾಗಿದ್ದು, ಬಾಕ್ಸ್‌ನಲ್ಲಿದ್ದಿದ್ದು ಕುರಿ ಮಾಂಸವೇ ಎಂದು ಸ್ಪಷ್ಟಪಡಿಸಿದೆ. ಇದು ಕೂಡ ʼನಾಯಿ ಮಾಂಸ ವಿವಾದʼ ಎತ್ತಿರುವ ಪುನೀತ್‌ ಕೆರೆಹಳ್ಳಿ ಬಳಗಕ್ಕೆ ಹಿನ್ನಡೆಯಾಗಿದೆ. ಅಬ್ದುಲ್‌ ರಜಾಕ್‌ ತರಿಸುತ್ತಿದ್ದ ಕುರಿ ಮಾಂಸದಲ್ಲಿ ನಾಯಿ ಮಾಂಸವೂ ಮಿಶ್ರಣವಾಗಿರುತ್ತದೆ ಎಂದು ಪುನೀತ್‌ ಕೆರೆಹಳ್ಳಿ ಸೇರಿ ಹಲವು ಆರೋಪಿಸಿದ್ದರು. ಹಾಗಾಗಿ, ಬಾಕ್ಸ್‌ನಲ್ಲಿದ್ದ ಮಾಂಸದ ಸ್ಯಾಂಪಲ್‌ಅನ್ನು ಹೈದರಾಬಾದ್‌ ಲ್ಯಾಬ್‌ಗೆ ಕಳುಹಿಸಲಾಗಿತ್ತು. ಈಗ ಲ್ಯಾಬ್‌ ವರದಿ ಬಂದಿದ್ದು, ಅದು ಕುರಿ ಮಾಂಸವೇ ಎಂಬುದು ದೃಢವಾಗಿದೆ ಎಂದು ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ತಿಳಿಸಿದೆ. ಅಲ್ಲಿಗೆ, ನಾಯಿ ಮಾಂಸ ವಿವಾದವು ಸತ್ವ ಕಳೆದುಕೊಂಡಂತಾಗಿದೆ. ಜುಲೈ 26ರಂದು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ 86 ಬಾಕ್ಸ್‌ಗಳಷ್ಟು ರಾಜಸ್ಥಾನದಿಂದ ತರಿಸಿದ ಮಾಂಸದ ಬಾಕ್ಸ್‌ಗಳು ಪತ್ತೆಯಾಗಿದ್ದವು. ಇವುಗಳನ್ನು ಹೈದರಾಬಾದ್‌ನ ICAR ನ್ಯಾಷನಲ್ ಮೀಟ್ ರಿಸರ್ಚ್ ಇನ್ಸ್ಟಿಟ್ಯೂಟ್‌ನಲ್ಲಿ ಪರೀಕ್ಷೆ…

Read More

ಬೆಂಗಳೂರು: ಹಣ ಡಬ್ಲಿಂಗ್​ ಹೆಸರಿನಲ್ಲಿ ಬೆಂಗಳೂರಿನ ಟೆಕ್ಕಿ ದಂಪತಿಗೆ ವಂಚಕರು ವಂಚಿಸಿರುವ ಘಟನೆ ನಡೆದಿದೆ. ಲಂಡನ್ ನಲ್ಲಿ ಕುಳಿತು ಈ ಕೃತ್ಯ ಎಸಗಲಾಗಿದೆ. ಫೋನ್ ಕರೆಯಿಂದ ಬೆಂಗಳೂರಿನ ಟೆಕ್ಕಿ ದಂಪತಿ 2,66,75,791 ರೂ. ಹಣ ಕಳೆದುಕೊಂಡಿರುವಂತಹ ಘಟನೆ ನಡೆದಿದೆ. ಬಳಿಕ ಪೂರ್ವ ವಿಭಾಗ ಸಿ.ಇ.ಎನ್​ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕೇಸ್ ದಾಖಲಿಸಿ ತನಿಖೆ ಮಾಡಿದಾಗ ಹಣದ ವರ್ಗಾವಣೆ ಜಾಲ ಪತ್ತೆ ಆಗಿದೆ. ಸುಮಾರು ಐವತ್ತು ಅಕೌಂಟ್​ಗಳಿಗೆ ಹಣ ಹೋಗಿರುವುದು ಪತ್ತೆಯಾಗಿದ್ದು, ಹಂತ ಹಂತವಾಗಿ ಒಟ್ಟು ಒಂದು ಕೋಟಿ ಐದು ಲಕ್ಷ ರೂ. ಪೊಲೀಸರು ಫ್ರೀಜ್ ಮಾಡಿದ್ದು, ನಂತರ ನ್ಯಾಯಾಲಯದ ಅನುಮತಿ ಪಡೆದು ವಾಪಸ್ಸು ನೀಡಿದ್ದಾರೆ. ದಂಪತಿಗೆ ಮೊದಲಿಗೆ ಕರೆ ಮಾಡಿ ಯುಟ್ಯೂಬ್​ನಲ್ಲಿ ವಿಡಿಯೋ ನೋಡಿ ಸಬ್​ಸ್ಕ್ರೈಬ್​ ಮಾಡಿದರೆ 50 ರೂ. ನೀಡುವುದಾಗಿ ಹೇಳಿದ್ದರು. ವಿಡಿಯೋ ಸಬ್​ಸ್ಕ್ರೈಬ್ ಮಾಡಿದ್ದ ಟೆಕ್ಕಿ ದಂಪತಿಗೆ ಹಣ ನೀಡಿದ್ದರು. ನಂತರ ಟೆಲಿಗ್ರಾಂ ಗ್ರೂಪ್​ಗೆ ಆಯಡ್ ಮಾಡಿ ಹೂಡಿಕೆ ಮಾಡಿದರೆ ಡಬಲ್ ಹಣ ನೀಡುವುದಾಗಿ ದಂಪತಿಗೆ ಆಮಿಷ ಒಡಲಾಗಿದೆ.…

Read More

ರಾಯಚೂರು:- ಪೌರತ್ವ ತಿದ್ದುಪಡಿ ಕಾಯ್ದೆಯಡಿ ಕರ್ನಾಟಕದಲ್ಲಿದ್ದ ಐವರು ಬಾಂಗ್ಲಾ ನಿರಾಶ್ರಿತರಿಗೆ ಭಾರತೀಯ ಪೌರತ್ವ ನೀಡಲಾಗಿದೆ. ಸಿಂಧನೂರು ತಾಲೂಕಿನ ಆರ್.ಎಚ್‌ ಕ್ಯಾಂಪ್‌ಗಳಲ್ಲಿ ವಾಸವಿರುವ ಐವರಿಗೆ ಭಾರತೀಯ ಪೌರತ್ವ ಸಿಕ್ಕಿದೆ. ಆರ್.ಎಚ್‌ಕ್ಯಾಂಪ್‌ಗಳಲ್ಲಿರುವ ರಾಮಕೃಷ್ಣನ್‌ ಅಭಿಕರಿ, ಸುಕುಮಾರ ಮೊಂಡಲ್, ಬಿ. ಪ್ರದಾಸ ಗೋಲ್ದರ್, ಜಯಂತ ಮೊಂಡಲ್, ಅದ್ವಿತ ಕೇಂದ್ರ ಗೃಹ ಇಲಾಖೆಯಿಂದ ಪೌರತ್ವ ಪಡೆದ ಬಾಂಗ್ಲಾ ವಲಸಿಗರಾಗಿದ್ದಾರೆ. ಜನಗಣತಿ ಕಾರ್ಯಾಚರಣೆ ಹಾಗೂ ನಾಗರಿಕ ನೋಂದಣಿ ನಿರ್ದೇಶನಾಲಯದಿಂದ ಅಧಿಕೃತವಾಗಿ ಪೌರತ್ವ ಪತ್ರ ಪಡೆದುಕೊಂಡಿದ್ದಾರೆ. 1971ರ ಬಾಂಗ್ಲಾದೇಶ ವಿಮೋಚನಾ ವೇಳೆ ಬಾಂಗ್ಲಾ ಹಾಗೂ ಬರ್ಮಾ ವಲಸಿಗರಿಗೆ ಭಾರತದಲ್ಲಿ ಆಶ್ರಯ ನೀಡಲಾಗಿತ್ತು. ಈ ವೇಳೆ ಸಿಂಧನೂರು ತಾಲೂಕಿನಲ್ಲಿ ಸುಮಾರು 932 ಕುಟುಂಬಗಳಿಗೆ 5 ಸಾವಿರ ಎಕರೆ ಜಮೀನು ನೀಡಲಾಗಿತ್ತು.

Read More

ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್‍ ಇಂದು ಹಿಂದೂ ಸಂಪ್ರದಾಯದಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.  ಅಂದ ಹಾಗೆ ತರುಣ್ ಸುಧೀರ್ ಹಾಗೂ ಸೋನಲ್ ಅವರನ್ನು ಜೋಡಿ ಮಾಡಿದ್ದ ದರ್ಶನ್. ಆದರೆ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ದರ್ಶನ್ ಜೈಲು ಸೇರಿದ್ದಾರೆ. ಮದುವೆಗೆ ದರ್ಶನ್ ಬರ್ತಾರೆ ಅನ್ನೋ ಮಾತು ಸುಳ್ಳಾಯಿತು ಹಾಗಾಗಿ ಅವರ ಅನುಪಸ್ಥಿತಿ ಬೇಸರ ತರಿಸಿದೆ ಎಂದು ತರುಣ್ ಸುಧೀರ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ತರುಣ್ ಸುಧೀರ್, `ಹೊಸ ಜೀವನ ಹೊಸ ಹುರುಪಿದೆ. ಇಷ್ಟು ದಿನ ಕಾದಿದ್ದಕ್ಕೂ ಬೇಸ್ಟ್ ಕೊಟ್ಟಿದಾರೆ ದೇವ್ರು. ತುಂಬಾ ಜನ ಬಂದು ವಿಶ್ ಮಾಡಿದ್ರು ಎಲ್ಲರೂ ತಮ್ಮನ ಥರ ಕುಟುಂಬದ ಥರ ಬಂದು ಹಾರೈಸಿದ್ರು ಎಂದಿದ್ದಾರೆ. ದರ್ಶನ್ ಅನುಪಸ್ಥಿತಿ ಬಗ್ಗೆಯೂ ಮಾತನಾಡಿದ ತರುಣ್, `ಲಗ್ನ ಪತ್ರಿಕೆ ಬರೆಸುವ ಮುಂಚೆ ಡೇಟ್ ಕನ್ಪರ್ಮ್ ಆಗಿತ್ತು. ಡೇಟ್ ಚೇಂಜ್ ಮಾಡ್ಬೇಡ ಮದ್ವೆ ಮಾಡ್ಕೊ ಅಂದ್ರು ದರ್ಶನ್. ಆಗಸ್ಟ್ 11 ಡೇಟ್ ಕೊಟ್ಟಿದ್ವಿ. ಅವರು ಹೇಳಿದಂತೆ ಮದುವೆ ಆಗ್ತಿದ್ದೇವೆ.…

Read More

ಟಾಲಿವುಡ್​ ನಟ ಅಕ್ಕಿನೇನಿ ನಾಗ ಚೈತನ್ಯ ಕಳೆದ ಎರಡು ದಿನಗಳ ಹಿಂದೆ ನಟಿ ಶೋಭಿತಾ ಜೊತೆ ಎಂಗೇಜ್ ಮೆಂಟ್ ಆಗಿದ್ದಾರೆ. ಇದು ಸಮಂತಾ ಅಭಿಮಾನಿಗಳಿಗೆ ಬೇಸರವಾಗಿದೆ. ಸಾಕಷ್ಟು ವರ್ಷಗಳ ಕಾಲ ಪ್ರೀತಿಸುತ್ತಿದ್ದ ನಾಗಚೈತನ್ಯ ಹಾಗೂ ಸಮಂತಾ ಮದುವೆಯಾದ ನಾಲ್ಕೇ ವರ್ಷಕ್ಕೆ ದೂರವಾಗಿದ್ದರು. ಆ ಬಳಿಕ ಸಮಂತಾ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ರು. ಇನ್ನೂ ನಟ ನಾಗಚೈತನ್ಯ ಜೀವನಕ್ಕೆ ಶೋಭಿತಾ ಎಂಟ್ರಿಕೊಟ್ಟದ್ದರು. ಈ ಬಗ್ಗೆ ಅವರ ತಂದೆ ಅಕ್ಕಿನೇನಿ ನಾಗಾರ್ಜುನ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. 2017ರಲ್ಲಿ ಸಮಂತಾ ರುತ್​ ಪ್ರಭು ಮತ್ತು ನಾಗ ಚೈತನ್ಯ ಅವರು ಮದುವೆ ಆಗಿದ್ದರು. ಆದರೆ 2021ರಲ್ಲಿ ಅವರಿಬ್ಬರು ವಿಚ್ಚೇದನ ಪಡೆದುಕೊಂಡರು. ‘ಡಿವೋರ್ಸ್​ ಆದಾಗ ನಾಗ ಚೈತನ್ಯ ಖಿನ್ನತೆಗೆ ಒಳಗಾಗಿದ್ದ. ಅದು ಅವನಿಗೆ ಮತ್ತು ಕುಟುಂಬಕ್ಕೆ ಕಷ್ಟದ ಸಮಯ ಆಗಿತ್ತು. ನನ್ನ ಮಗ ಯಾರ ಎದುರಲ್ಲೂ ಫೀಲಿಂಗ್ಸ್​ ತೋರಿಸಿಕೊಳ್ಳುವುದಿಲ್ಲ. ಆದರೆ ನನಗೆ ಗೊತ್ತು, ಆತ ದುಃಖದಲ್ಲಿದ್ದ. ಈಗ ಅವನು ಖುಷಿಯಾಗಿರುವುದು ಕಾಣುತ್ತಿದ್ದೇನೆ. ಶೋಭಿತಾ ಮತ್ತು ನಾಗ ಚೈತನ್ಯ ಒಳ್ಳೆಯ ಜೋಡಿ.…

Read More

ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಅವರಿಗೆ ನೆನಪಿನ ಶಕ್ತಿ ಕುಂದುತ್ತಿರುವ ಬಗ್ಗೆ ಹಲವು ವರದಿಗಳು ಪ್ರಕಟವಾಗಿತ್ತು. ಇದೇ ಕಾರಣಕ್ಕೆ ಅವರನ್ನು ಅಧ್ಯಕ್ಷ ಸ್ಥಾನದಿಂದ ಹೊರಗುಳಿಯುವಂತೆ ಒತ್ತಡ ಕೇಳಿ ಬಂದಿತ್ತು. ಆ ಬಳಿಕ ಬೈಡನ್ 2024ರ ಅಮೆರಿಕಾ ಅಧ್ಯಕ್ಷಿಯ ಚುನಾವಣೆಯಿಂದ ಹಿಂದೆ ಸರಿದಿದ್ದರು. ಇದೀಗ ಬೈಡನ್ ಗೆ ನೆನಪಿನ ಶಕ್ತಿ ಕುಗ್ಗಿರುವ ಅನುಮಾನಕ್ಕೆ ಮತ್ತೊಂದು ಘಟನೆ ಕಾರಣ ಕಾರಣವಾಗಿದೆ. ಶ್ವೇತ ಭವನದಲ್ಲಿ ಟೆಕ್ಸಾಸ್ ರೇಂಜರ್ಸ್ ವರ್ಲ್ಡ್ ಸೀರಿಸ್ ವಿಕ್ಟರಿ ಕಾರ್ಯಕ್ರಮ ನಡೆಯುತ್ತಿತ್ತು. ಇದರಲ್ಲಿ ಜೋ ಬೈಡನ್ ಭಾಗಿಯಾಗಿದ್ದರು. ಅಮೇರಿಕಾ ಅಧ್ಯಕ್ಷರಿಗೆ ಟೆಕ್ಸಾಸ್ ರೇಂಜರ್ಸ್ ತಂಡ ನೆನಪಿನ ಕಾಣಿಕೆಯಾಗಿ ಪರ್ಸನಲೈಸ್ಡ್ ಜೆರ್ಸಿ ಹಾಗೂ ಕೌ ಬಾಯ್ ಬೂಟ್ ಗಳನ್ನು ಉಡುಗೊರೆಯಾಗಿ ನೀಡಿತ್ತು. ಉಡುಗೊರೆ ಸ್ವೀಕರಿಸಿದ ಬಳಿಕ ಜೋ ಬೈಡನ್ ಏನು ಮಾಡಬೇಕೆಂಬುದು ತೋಚದೆ, ಈಗ ನಾನೇನು ಮಾಡಬೇಕು? ಎಂದು ಪ್ರಶ್ನಿಸಿದ್ದಾರೆ. ಇನ್ನು ಬೈಡನ್ ಸ್ವೀಕರಿಸಿದ್ದ ಜೆರ್ಸಿಯನ್ನು ತೆಗೆದುಕೊಂಡು ಹೋಗಲು ಬಂದ ಸಹಾಯಕ ಸಿಬ್ಬಂದಿ ಬೈಡನ್ ಆಡಿದ ಮಾತು ಕೇಳಿ ಕಕ್ಕಾಬಿಕ್ಕಿಯಾದ ಘಟನೆಯೂ ನಡೆದಿದೆ. ಜೆರ್ಸಿಯನ್ನು…

Read More

ಉಕ್ರೇನ್‌ನಲ್ಲಿ ರಷ್ಯಾ ನಡೆಸುತ್ತಿರುವ ವಿಶೇಷ ಸೇನಾ ಕಾರ್ಯಾಚರಣೆಯಲ್ಲಿ ಭಾರತೀಯ ಪ್ರಜೆಗಳು ಮೃತಪಟ್ಟಿರುವುದು ದುರದೃಷ್ಟಕರ ಎಂದು ರಷ್ಯಾದ ರಾಯಭಾರ ಕಚೇರಿ ಸಂತಾಪ ಸೂಚಿಸಿದ್ದು, ಏಪ್ರಿಲ್‌ನಿಂದ ರಷ್ಯಾದ ಸಶಸ್ತ್ರ ಪಡೆಗಳಿಗೆ ಭಾರತೀಯರ ನೇಮಕಾತಿಯನ್ನು ನಿಲ್ಲಿಸಲಾಗಿದೆ ಎಂದು ಹೇಳಿದೆ. ರಷ್ಯಾ ಸೇನೆಗೆ ಸೇರಲು ಸ್ವಯಂಪ್ರೇರಣೆಯಿಂದ ಒಪ್ಪಂದಕ್ಕೆ ಸಹಿ ಹಾಕಿರುವ ಮತ್ತು ಭಾರತಕ್ಕೆ ಮರಳಲು ಬಯಸುವ ಭಾರತೀಯ ಪ್ರಜೆಗಳ ಗುರುತಿಸುವಿಕೆ ಮತ್ತು ಬಿಡುಗಡೆಗೊಳಿಸುವಿಕೆಗೆ ಸಂಬಂಧಿಸಿ ಉಭಯ ದೇಶಗಳು ನಿಕಟ ಸಮನ್ವಯದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ರಾಯಭಾರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ರಷ್ಯಾದ ರಕ್ಷಣಾ ಸಚಿವಾಲಯವು ಈ ವರ್ಷದ ಏಪ್ರಿಲ್‌ನಿಂದ ಭಾರತ ಸೇರಿದಂತೆ ಇತರೆ ದೇಶಗಳ ನಾಗರಿಕರನ್ನು ಸೇನೆಗೆ ನೇಮಕ ಮಾಡಿಕೊಳ್ಳುವುದನ್ನು ನಿಲ್ಲಿಸಿದೆ ಎಂದು ಅಲ್ಲಿನ ರಾಯಭಾರ ಕಚೇರಿ ಮಾಹಿತಿ ನೀಡಿದ್ದಾರೆ. ರಷ್ಯಾ ರಾಯಭಾರ ಕಚೇರಿಯು ಭಾರತ ಸರ್ಕಾರ ಮತ್ತು ಮೃತರ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತಪಡಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಸ್ತುತ 69 ಭಾರತೀಯ ಪ್ರಜೆಗಳು ರಷ್ಯಾದ ಸೇನೆಯಿಂದ ಬಿಡುಗಡೆಗಾಗಿ ಕಾಯುತ್ತಿದ್ದಾರೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಶುಕ್ರವಾರ…

Read More

ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದಿರುವ ಬಾಂಗ್ಲಾದೇಶದ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಾಧೀಶ ಉಬೈದುಲ್ ಹಸನ್ ತಮ್ಮ ರಾಜೀನಾಮೆ ನೀಡಲು ಒಪ್ಪಿದ್ದಾರೆ ಎಂದು ಸ್ಥಳೀಯ ವಾಹಿನಿ ವರದಿ ಮಾಡಿದೆ. ಕಳೆದ ವರ್ಷ ಸಿಜೆ ಆಗಿ ನೇಮಕಗೊಂಡಿದ್ದ ಹಸನ್, ಹಸೀನಾ ಪ್ರಧಾನಿಯಾಗಿದ್ದ ಅವಧಿಯಲ್ಲಿ ವಿರೋಧಿಗಳನ್ನು ಗಲ್ಲಿಗೇರಿಸುವ ಆದೇಶ ನೀಡಿದ್ದ ಯುದ್ಧಾಪರಾಧಗಳ ನ್ಯಾಯಮಂಡಳಿಯ ಮೇಲುಸ್ತುವಾರಿ ವಹಿಸಿದ್ದರು. ಶನಿವಾರ ಢಾಕಾದಲ್ಲಿ ಸುಪ್ರೀಂಕೋರ್ಟ್ ಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು, ಸಿಜೆ ಹಾಗೂ ಇತರ ನ್ಯಾಯಾಧೀಶರು ಮಧ್ಯಾಹ್ನ 1 ಗಂಟೆಯೊಳಗೆ ರಾಜೀನಾಮೆ ನೀಡಲು ಗಡು ವಿಧಿಸಿದ್ದರು. ಅಧ್ಯಕ್ಷ ಮುಹಮ್ಮದ್ ಶಹಾಬುದ್ದೀನ್ ಜತೆ ಸಮಾಲೋಚಿಸಿದ ಬಳಿಕ ಸಿಜೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

Read More

ಅಲ್ಪಸಂಖ್ಯಾತರಿಗೆ ಸೇರಿದ ಮನೆಗಳು, ಮಳಿಗೆಗಳು ಹಾಗೂ ಪ್ರಾರ್ಥನಾ ಸ್ಥಳಗಳ ಮೇಲೆ ನಡೆಯುತ್ತಿರುವ ಹಿಂಸಾತ್ಮಕ ದಾಳಿಗಳನ್ನು ಖಂಡಿಸಿ ಹಿಂದೂ ಸಮುದಾಯದೊಂದಿಗೆ ಮುಸ್ಲಿಮರೂ ಬಾಂಗ್ಲಾದೇಶದ ಬೀದಿಗಳಲ್ಲಿ ವ್ಯಾಪಕ ಪ್ರತಿಭಟನೆ ನಡೆಸಿದ್ದಾರೆ. ಆಗಸ್ಟ್ 5ರಂದು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡ ಭಾರತಕ್ಕೆ ಪಲಾಯನಮಾಡಿದ್ದಾರೆ. ತಮ್ಮ ಹುದ್ದೆಗೆ ಹಸೀನಾ ರಾಜೀನಾಮೆ ನೀಡಿದ ಬಳಿಕ ಈ ಘಟನೆಗಳು ಪ್ರಾರಂಭಗೊಂಡಿವೆ ಎಂದು ವರದಿಯಾಗಿದೆ. ಶೇಖ್ ಹಸೀನಾ ನೇತೃತ್ವದ ಸರಕಾರ ಪತನಗೊಂಡ ನಂತರ ಬಾಂಗ್ಲಾದೇಶದ 52 ಜಿಲ್ಲೆಗಳಲ್ಲಿ 205 ದಾಳಿಗಳು ನಡೆದಿವೆ ಎಂದು ವರದಿಯಾಗಿದ್ದು, ಈ ದಾಳಿಗಳಲ್ಲಿ ನೂರಾರು ಮಂದಿ ಗಾಯಗೊಂಡಿದ್ದಾರೆ. ಈ ಹಿಂಸಾಚಾರವನ್ನು ವಿರೋಧಿಸಿ ಢಾಕಾ ಹಾಗೂ ಚಿತ್ತಗಾಂಗ್ ನಂತಹ ಪ್ರಮುಖ ನಗರಗಳಲ್ಲಿ ಲಕ್ಷಾಂತರ ಹಿಂದೂಗಳು ನ್ಯಾಯ ಹಾಗೂ ರಕ್ಷಣೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಎಸಗುವವರನ್ನು ಶಿಕ್ಷಿಸಲು ತ್ವರಿತ ವಿಚಾರಣೆ ನಡೆಸಲು ವಿಶೇಷ ನ್ಯಾಯಾಧಿಕರಣಗಳನ್ನು ಸ್ಥಾಪಿಸಬೇಕು, ಸಂಸತ್ ಸ್ಥಾನಗಳ ಪೈಕಿ ಶೇ. 10ರಷ್ಟನ್ನು ಅಲ್ಪಸಂಖ್ಯಾತರಿಗೆ ಮೀಸಲಿಡಬೇಕು ಹಾಗೂ ಅಲ್ಪಸಂಖ್ಯಾತರ ರಕ್ಷಣಾ ಕಾಯ್ದೆಯನ್ನು…

Read More