ಕೆಂಪು ಗ್ರಹ ಎಂದು ಕರೆಯಲ್ಪಡುವ ಮಂಗಳವು ಆಕ್ರಮಣಶೀಲತೆಯನ್ನು ಪ್ರತಿನಿಧಿಸುತ್ತದೆ. ಸಾಮಾನ್ಯವಾಗಿ ಮಂಗಳನ ಸ್ವಭಾವವು ಉಗ್ರವಾಗಿರುತ್ತದೆ ಅಥವಾ ಪಾಪದ ಅಧಿಪತಿಯಾಗಿದ್ದರೆ ಅದು ಅಶುಭವಾಗಬಹುದು ಎಂದು ಹೇಳುತ್ತಾರೆ. ಆದರೆ ಮಂಗಳವಾರದಂದು ಹನುಮಂತನನ್ನು ಪೂಜಿಸುವುದರಿಂದ ಎಲ್ಲಾ ದುರಾದೃಷ್ಟಗಳು ದೂರವಾಗಿ ಮನೆಯಲ್ಲಿ ಸುಖ ಶಾಂತಿ ನೆಲೆಸುತ್ತದೆ. ಅದೇ ರೀತಿ ಮಂಗಳವಾರದಂದು ಕೆಲವು ಕೆಲಸಗಳನ್ನು ಮಾಡಿದರೆ ಅಶುಭ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಮಂಗಳವಾರದಂದು ಯಾವ ಕಾರ್ಯವನ್ನು ಮಾಡಬಾರದು? ಇದರಿಂದ ಏನೆಲ್ಲಾ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಎಂಬುದರ ವಿವರ ಇಲ್ಲಿದೆ ನೋಡಿ. ಸಾಲದ ವಹಿವಾಟು ಮಾಡಬೇಡಿ ಮಂಗಳವಾರದಂದು ಸಾಲದ ವಹಿವಾಟು ಮಾಡಬಾರದು. ಅಲ್ಲದೆ, ಯಾವುದೇ ರೀತಿಯ ಹೂಡಿಕೆಯನ್ನು ತಪ್ಪಿಸಬೇಕು. ಮಂಗಳವಾರದ ಬದಲು ಬುಧವಾರ ಹೂಡಿಕೆ ಮಾಡಬಹುದು. ಮಂಗಳವಾರ ಹಣದ ವ್ಯವಹಾರವನ್ನು ಅಶುಭವೆಂದು ಪರಿಗಣಿಸಲಾಗುತ್ತದೆ. ಈ ದಿನ ಮಾಡಿದ ಸಾಲವನ್ನು ತೀರಿಸಲು ಕಷ್ಟವಾಗುತ್ತದೆ ಮತ್ತು ಹಣವನ್ನು ಹಿಂತಿರುಗಿಸಲು ಕಷ್ಟವಾಗುತ್ತದೆ. ಆದ್ದರಿಂದ, ಮಂಗಳವಾರ ಯಾವುದೇ ರೀತಿಯ ವಹಿವಾಟು ಮತ್ತು ಹಣದ ಹೂಡಿಕೆಯನ್ನು ಮಾಡಬೇಡಿ. ಮಾಂಸ ಮತ್ತು ಮದ್ಯ ಸೇವನೆ ಮಾಡಬಾರದು ಮಂಗಳವಾರ ಪವನಪುತ್ರ ಹನುಮಂತನ…
Author: Prajatv Kannada
ಬಾಳೆಹಣ್ಣು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದರಲ್ಲಿರುವ ವಿಟಮಿನ್‌ಗಳು ಮತ್ತು ಪೊಟ್ಯಾಸಿಯಮ್ ದೇಹಕ್ಕೆ ಅವಶ್ಯಕವಾಗಿದೆ ಮತ್ತು ಆದ್ದರಿಂದ ಬಾಳೆಹಣ್ಣನ್ನು ಪ್ರತಿದಿನ ಸೇವಿಸುವುದು ಒಳ್ಳೆಯದು. ಆದರೆ ಮಾರುಕಟ್ಟೆಯಿಂದ ತಂದ ಬಾಳೆಹಣ್ಣು ಗಳನ್ನು ಹೆಚ್ಚು ದಿನಗಳ ಕಾಲ ಇಡುವುದಕ್ಕೆ ಆಗುವುದಿಲ್ಲ. ಬೇಗನೇ ಹಣ್ಣಾಗಿ ಕೊಳೆತು ಹೋಗುತ್ತದೆ. ಹೆಚ್ಚು ದಿನಗಳ ಕಾಲ ಬಾಳೆಹಣ್ಣನ್ನು ಇಟ್ಟರೆ ಕಾಂಡ ಭಾಗ ಮೊದಲು ಕೊಳೆಯಲು ಶುರುವಾಗಿ, ಹಣ್ಣು ಕಪ್ಪಾಗುತ್ತದೆ. ಬಾಳೆ ಹಣ್ಣನ್ನು ಕಪ್ಪಾಗದಂತೆ ಇಡೋದು ಒಂದು ಸವಾಲು ಎನ್ನುವವರಿಗೆ ಒಂದಿಷ್ಟು ಸಲಹೆ ಇಲ್ಲಿದೆ. ಬಾಳೆ ಹಣ್ಣು ಕಪ್ಪಾಗದಂತೆ ಏನು ಮಾಡ್ಬೇಕು
ಬೆಂಗಳೂರು: ಗ್ರಾಮೀಣಾಭಿವೃದ್ಧಿಗಾಗಿ ಮೀಸಲಿರುವ ಪ್ರತಿಷ್ಠಿತ ರಾಷ್ಟ್ರೀಕೃತ ನಬಾರ್ಡ್ ಬ್ಯಾಂಕ್ʼನಲ್ಲಿ ಅರ್ಹ ಅಭ್ಯರ್ಥಿಗಳಿಂದ ನಾನಾ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. NABARD ಕಚೇರಿ ಸಹಾಯಕ (‘C’ ಗುಂಪು) ಹುದ್ದೆಗಳನ್ನು ಭರ್ತಿ ಮಾಡಲು 108 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನ ಅಧಿಕೃತ ವೆಬ್‌ಸೈಟ್ nabard.org ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮೊದಲು, ಅಭ್ಯರ್ಥಿಗಳು ಅಗತ್ಯವಿರುವ ಮಾಹಿತಿಯನ್ನು ಎಚ್ಚರಿಕೆಯಿಂದ ಓದಬೇಕು ಮತ್ತು ಅವರು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಅರ್ಜಿ ಶುಲ್ಕ ಮತ್ತು ಅರ್ಹತೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ಪಾಸಾಗಿರಬೇಕು. ಮಾಜಿ ಸೈನಿಕರಿಗೆ ಕನಿಷ್ಠ 15 ವರ್ಷಗಳ ರಕ್ಷಣಾ ಸೇವೆಯೊಂದಿಗೆ SSLC ಪಾಸ್ ಕಡ್ಡಾಯವಾಗಿದೆ, ಆದರೆ ಇದು ಸಶಸ್ತ್ರ ಪಡೆಗಳಿಂದ ಹೊರಗುಳಿದ ನಂತರ ಪದವಿ ಪಡೆಯದವರಿಗೆ ಮಾತ್ರ ಅನ್ವಯಿಸುತ್ತದೆ. ನ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 30…
ಬಾಲಿವುಡ್ ನಟ ಶಾರುಖ್ ಖಾನ್ ಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಛತ್ತೀಸ್ಗಢದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾರುಖ್ ಖಾನ್ ಗೆ ಕರೆ ಮಾಡಿ 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಕ್ಕಾಗಿ ಮೊಹಮ್ಮದ್ ಫೈಜಾನ್ ಖಾನ್ ಎಂಬ ವಕೀಲನನ್ನು ಛತ್ತೀಸ್‌ಗಢದ ರಾಯ್‌ಪುರದ ಆತನ ನಿವಾಸದಲ್ಲಿ ಬಂಧಿಸಲಾಗಿದೆ. ಫೈಜಾನ್ ಖಾನ್ ಗೆ ಈ ಹಿಂದೆ ಪೊಲೀಸರ ಮುಂದೆ ಹಾಜರಾಗಲು ಸೂಚಿಸಲಾಗಿತ್ತು. ಆದರೆ ಆತ ಹಾಜರಾಗದ ಕಾರಣ ಇದೀಗ ಆತನನ್ನು ಬಂಧಿಸಲಾಗಿದೆ. ಕಳೆದ ವಾರ ಬೆದರಿಕೆ ಕರೆ ಮಾಡಲು ಬಳಸಲಾದ ತನ್ನ ಮೊಬೈಲ್ ಫೋನ್ನ್ನು ಯಾರೋ ಕದ್ದಿದ್ದಾರೆ ಎಂದು ಅವರು ಹೇಳಿದ್ದರು. ನವೆಂಬರ್ 2 ರಂದು ಪೊಲೀಸ್ ಕೇಸ್ ದಾಖಲಿಸಿದ್ದೇನೆ ಎಂದಿದ್ದರು. ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 308(4) (ಸಾವಿನ ಬೆದರಿಕೆ ಅಥವಾ ಗಂಭೀರ ಗಾಯದ ಬೆದರಿಕೆಗಳನ್ನು ಒಳಗೊಂಡ ಸುಲಿಗೆ) ಮತ್ತು 351(3)(4) (ಅಪರಾಧ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕಳೆದ ಅಕ್ಟೋಬರ್‌ನಲ್ಲಿ ಕೊಲೆ ಬೆದರಿಕೆ ಬಂದಿತ್ತು, ಇದಾದ ಬಳಿಕ…
ರೆಬೆಲೆ ಸ್ಟಾರ್ ಅಂಬರೀಷ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದಪ್ಪ ಪೋಷಕರಾಗಿದ್ದು ಅವಿವಾ ಅವರು ಗಂಡುಮಗುವಿಗೆ ಜನ್ಮನೀಡಿದ್ದಾರೆ. ಇಂದು (ನವೆಂಬರ್ 12) ಮಗು ಜನಿಸಿದ್ದು, ಮಗುವಿನ ಜೊತೆ ಸುಮಲತಾ ಅಂಬರೀಷ್ ಫೋಟೋ ತೆಗೆಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ. ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಅಭಿಷೇಕ್ ಹಾಗೂ ಅವಿವಾ ಅವರು 2023ರಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದಾರೆ. ಮದುವೆಯಾದ ಒಂದು ವರ್ಷದಲ್ಲೇ ಮನೆಗೆ ಮುದ್ದು ಕಂದನ ಆಗಮನವಾಗಿದೆ. ಇಂದು ಬೆಳಿಗ್ಗೆ 8.30 ಸುಮಾರಿಗೆ ಅವಿವಾ ಮಗುವಿಗೆ ಜನ್ಮ ನೀಡಿದ್ದಾರೆ. ಅವಿವಾ ಅವರು ಪ್ರೆಗ್ನೆಂಟ್ ಎನ್ನುವ ವಿಚಾರ ಇತ್ತೀಚೆಗೆ ರಿವೀಲ್ ಆಯಿತು. ಅದ್ದೂರಿಯಾಗಿ ಅವರ ಸೀಮಂತಶಾಸ್ತ್ರ ಕೂಡ ನೆರವೇರಿತ್ತು. ಈಗ ಅವರು ಗಂಡು ಮಗುವಿನ ತಾಯಿ ಆಗಿದ್ದಾರೆ. ‘ಅಂಬಿ ಮತ್ತೆ ಹುಟ್ಟಿ ಬಂದ’ ಎಂದು ಅಂಬರೀಷ್ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಅವಿವಾ ಅವರ ಸೀಮಂತ ಕಾರ್ಯಕ್ರಮ ನೆರವೇರಿತ್ತು. ಸೀಮಂತ ಕಾರ್ಯಕ್ರಮದಲ್ಲಿ ಚಿತ್ರರಂಗದ ಕೆಲವು ಗಣ್ಯರು ಆಗಮಿಸಿದ್ದರು.…
ಬೆಂಗಳೂರು: ಅತಿ ಹೆಚ್ಚಿನ ಪ್ರಮಾಣದ ವಿಟಮಿನ್ ಎ ಹಾಗೂ ಕಣ್ಣಿನ ದೃಷ್ಟಿ ದೋಷ ನಿವಾರಿಸುವ ಗುಣ ಹೊಂದಿರುವ ತರಕಾರಿಗಳಲ್ಲಿ ಕ್ಯಾರೆಟ್ ಅತಿ ಫೇಮಸ್. ಕ್ಯಾರೆಟ್ ಒಂದು ಪ್ರಮುಖ ಮೂಲ ತರಕಾರಿ ಬೆಳೆ. ಕ್ಯಾರೆಟ್ ಅನ್ನು ಭಾರತದಾದ್ಯಂತ ಬೆಳೆಯಲಾಗುತ್ತದೆ, ಜನರು ಕ್ಯಾರೆಟ್ ಅನ್ನು ಹೆಚ್ಚು ಬಳಸುತ್ತಾರೆ. https://youtu.be/a9-RN7X-060?si=iD61z7FHmIMsXuSt ಕ್ಯಾರೋಟಿನ್ ಮತ್ತು ವಿಟಮಿನ್ ಎ ಕ್ಯಾರೆಟ್‌ನಲ್ಲಿ ಕಂಡುಬರುತ್ತವೆ, ಇದು ಮಾನವ ದೇಹಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಕ್ಯಾರೋಟಿನ್ ಪ್ರಮಾಣವು ಕಿತ್ತಳೆ ಬಣ್ಣದ ಕ್ಯಾರೆಟ್‌ನಲ್ಲಿ ಕಂಡುಬರುತ್ತದೆ, ಬಹಳಷ್ಟು ಪೋಷಕಾಂಶಗಳು ಕ್ಯಾರೆಟ್‌ನ ಹಸಿರು ಎಲೆಗಳಲ್ಲಿ ಕಂಡುಬರುತ್ತವೆ, ಉದಾಹರಣೆಗೆ ಪ್ರೋಟೀನ್‌ಗಳು, ಖನಿಜಗಳು ಮತ್ತು ವಿಟಮಿನ್‌ಗಳು ಇತ್ಯಾದಿ. ಕ್ಯಾರೆಟ್‌ನ ಹಸಿರು ಎಲೆಗಳನ್ನು ಮೇವು ತಯಾರಿಸಲು ಬಳಸಲಾಗುತ್ತದೆ. ಕ್ಯಾರೆಟ್ ಮುಖ್ಯವಾಗಿ ಉತ್ತರ ಪ್ರದೇಶ, ಅಸ್ಸಾಂ, ಕರ್ನಾಟಕ, ಆಂಧ್ರಪ್ರದೇಶ, ಪಂಜಾಬ್ ಮತ್ತು ಹರಿಯಾಣಗಳಲ್ಲಿ ಉಪಯುಕ್ತವಾಗಿದೆ. ಹವಾಮಾನ ಕ್ಯಾರೆಟ್ ಮೂಲತಃ ಶೀತ ಹವಾಮಾನದ ಬೆಳೆ, ಇದರ ಬೀಜಗಳು 7.5 ರಿಂದ 28 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ ಯಶಸ್ವಿಯಾಗಿ ಬೆಳೆಯುತ್ತವೆ.ಬೇರಿನ ಬೆಳವಣಿಗೆ ಮತ್ತು ಬಣ್ಣವು ತಾಪಮಾನದಿಂದ ಹೆಚ್ಚು ಪರಿಣಾಮ…
ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕಳೆದ ವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು ಈ ವೇಳೆ ಉಕ್ರೇನ್ ಸಂಘರ್ಷದ ಕುರಿತು ಪ್ರಸ್ತಾಪಿಸಲಾಗಿತ್ತು ಎಂದು ಹೇಳಲಾಗಿತ್ತು. ಆದ್ರೆ ಇದೀಗ ಅಮೆರಿಕ ಮಾಧ್ಯಮಗಳ ವರದಿಯನ್ನು ರಷ್ಯಾ ತಳ್ಳಿಹಾಕಿದೆ. ಟ್ರಂಪ್ ಅವರು ಗುರುವಾರ ಪುಟಿನ್ ಅವರೊಂದಿಗೆ ಫೋನ್ ಮೂಲಕ ಮಾತನಾಡಿದ್ದು, ಉಕ್ರೇನ್ ಜೊತೆಗಿನ ಸಂಘರ್ಷ ಮತ್ತಷ್ಟು ಉಲ್ಬಣಗೊಳ್ಳದಂತೆ ನೋಡಿಕೊಳ್ಳಬೇಕು ಎಂದು ಹೇಳಿರುವುದಾಗಿ ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಅವರು, ಟ್ರಪ್, ಪುಟಿನ್ ಅವರಿಗೆ ಯಾವುದೇ ಫೋನ್ ಕರೆ ಮಾಡಿಲ್ಲ. ವಾಷಿಂಗ್ಟನ್ ಪೋಸ್ಟ್ ವರದಿಯು “ಸುಳ್ಳು ಮಾಹಿತಿ, ಇದು ಶುದ್ಧ ಕಾಲ್ಪನಿಕ” ಎಂದಿದ್ದಾರೆ.
ಕೆನಡಾದಲ್ಲಿ ಖಾಲಿಸ್ತಾನಿಗಳ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೀಗ ಹಿಂದೂಗಳ ನಂಬಿಕೆಯ ಅತಿದೊಡ್ಡ ಕೇಂದ್ರವಾದ ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸುವ ಬೆದರಿಕೆಯನ್ನು ಹಾಕಲಾಗಿದೆ. ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನು ವಿಡಿಯೋ ಬಿಡುಗಡೆ ಮಾಡಿದ್ದು, ರಾಮಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೆ ಪನ್ನು ಕೆನಡಾದ ಹಿಂದೂ ಸಂಸದ ಚಂದ್ರ ಆರ್ಯಗೂ ಜೀವ ಬೆದರಿಕೆ ಹಾಕಿದ್ದಾನೆ. ‘ನವೆಂಬರ್ 16 ಮತ್ತು 17ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಹಿಂಸಾಚಾರ ನಡೆಯಲಿದೆ’ ಎಂದು ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥ ಸಿಖ್ ಫಾರ್ ಜಸ್ಟಿಸ್ (ಎಸ್‌ಎಫ್‌ಜೆ) ಪನ್ನು ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಹೇಳಲಾಗಿದೆ. ಕೆನಡಾದ ಬ್ರಾಂಪ್ಟನ್ ನಲ್ಲಿ ಪನ್ನು ಈ ವಿಡಿಯೋ ರೆಕಾರ್ಡ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವಿಡಿಯೋದಲ್ಲಿ ರಾಮ ಮಂದಿರ ಹಾಗೂ ಇತರ ಹಲವು ಹಿಂದೂ ಧಾರ್ಮಿಕ ಸ್ಥಳಗಳ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಬೆದರಿಕೆಯನ್ನೂ ಹಾಕಲಾಗಿದೆ. ‘ಹಿಂದುತ್ವ ಸಿದ್ಧಾಂತದ ಜನ್ಮಸ್ಥಳವಾದ ಅಯೋಧ್ಯೆಯ ಅಡಿಪಾಯವನ್ನು ನಾವು ಅಲ್ಲಾಡಿಸುತ್ತೇವೆ’ ಎಂದು ಪನ್ನು ವಿಡಿಯೋದಲ್ಲಿ ಹೇಳಿದ್ದಾನೆ. ಪನ್ನುವಿನ ಈ ಬೆದರಿಕೆಯನ್ನು ಭಾರತದ ಅತ್ಯಂತ…
ಉತ್ತರಪ್ರದೇಶದ ಮೀರತ್ ಜಿಲ್ಲೆಯ ಕಂಕರ್ ಖೇರಾದ ಸಂತ ನಗರ ಕಾಲೋನಿಯಲ್ಲಿ ನಾಯಿ ಮರಿಗಳ ಶಬ್ದ ಕೇಳೋಕಾಗದೇ ಇಬ್ಬರು ಮಹಿಳೆಯರು ಹಾಗೂ ಸಿಐಎಸ್‌ಎಫ್ ಸಿಬ್ಬಂದಿ ಸೇರಿ 5 ನಾಯಿ ಮರಿಗಳನ್ನು ಸಜೀವ ದಹನ ಮಾಡಿರುವ ಘಟನೆ ನಡೆದಿದೆ. ಕೃತ್ಯ ಎಸಗಿದ ಇಬ್ಬರು ಮಹಿಳೆಯರನ್ನು ಶೋಭಾ ಮತ್ತು ಆರತಿ ಎಂದು ಗುರುತಿಸಲಾಗಿದೆ. https://youtu.be/BkpeeywcDYg?si=s8zIn027uo8upmhq ಮಂಗಳವಾರ ರಾತ್ರಿ ನಾಯಿಮರಿಗಳು ಬೊಗಳುತ್ತಿದ್ದು, ಅದನ್ನು ಸಹಿಸಲಾಗದೇ ಇದ್ದ ಜಾಗದಿಂದ ಕಳುಹಿಸಿದ್ದಾರೆ. ಅದಾದ ಮೂರು ದಿನಗಳ ಬಳಿಕ ಪೆಟ್ರೋಲ್ ಸುರಿದು ನಾಯಿಮರಿಗಳನ್ನು ಜೀವಂತವಾಗಿ ಸುಟ್ಟು ಹಾಕಿದ್ದಾರೆ. ಸ್ಥಳೀಯರಿಗೆ ವಿಷಯದ ತಿಳಿದಿದ್ದು, ನಂತರ ಪೊಲೀಸರಿಗೆ ಗಮನಕ್ಕೆ ತಂದ್ದಿದ್ದಾರೆ. ಆದರೆ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ವಿಷಯ ತಿಳಿದ ಅನಿಮಲ್ಸ್ ಕೇರ್ ಸೊಸೈಟಿಯ ಕಾರ್ಯದರ್ಶಿ ಅಂಶುಮಾಲಿ ವಶಿಷ್ಠ ಪ್ರತಿಭಟನೆ ನಡೆಸಿದ್ದು, ಬಳಿಕ ಮಹಿಳೆಯರ ವಿರುದ್ಧ ಎಫ್‌ಐಆರ್ ದಾಖಲಿಸಲಾಯಿತು. ಈ ಕುರಿತು ಅಂಶುಮಾಲಿ ವಶಿಷ್ಠ ಮಾತನಾಡಿ, ಈ ವಿಷಯವನ್ನು ಗುರುವಾರ ಎಸ್‌ಎಸ್‌ಪಿ ವಿಪಿನ್ ತಾಡಾ ಅವರ ಗಮನಕ್ಕೆ ತಂದಿದ್ದು, ತನಿಖೆಗೆ ಆದೇಶಿಸಿದ್ದರು. ಆದರೆ ಪೊಲೀಸರು…