Author: Prajatv Kannada

ಬೆಂಗಳೂರು:- 60 ಪರ್ಸೆಂಟ್​​​ ಲಂಚ ಪಡೆದು ಕರ್ನಾಟಕವನ್ನು ಕಾಂಗ್ರೆಸ್ ಲೂಟಿ ಮಾಡ್ತಿದೆ ಎಂದು ಆರ್ ಅಶೋಕ್ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಟ್ವಿಟ್​ ಮಾಡಿ ಕಾಂಗ್ರೆಸ್​ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. https://youtu.be/qNjXH1MRfMs?si=AIp-j22GpezN13KT 40 ಪರ್ಸೆಂಟ್​ ಲಂಚ ಆರೋಪ ಮಾಡಿದ್ದ ಕಾಂಗ್ರೆಸ್​ಗೆ ವಿಪಕ್ಷ ನಾಯಕ ಆರ್​ ಅಶೋಕ್ ತಿರುಗೇಟು ನೀಡಿದ್ದಾರೆ. “ನಮ್ಮ ಸರ್ಕಾರದ ಮೇಲೆ 40 ಪರ್ಸೆಂಟ್​ ಲಂಚ ಆರೋಪ ಮಾಡಿದ್ದ ಕಾಂಗ್ರೆಸ್​ ಅಧಿಕಾರಕ್ಕೆ ಬಂದು ಒಂದೂವರೆ ವರ್ಷದ ಒಳಗೆ 60 ಪರ್ಸೆಂಟ್​​​ ಲಂಚ ಪಡೆದು ರಾಜ್ಯವನ್ನು ಲೂಟಿ ಮಾಡುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ. 40 ಪರ್ಸೆಂಟ್​​ ಸರ್ಕಾರ ಎಂದು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಸುಳ್ಳು, ಅಪಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್​ ಪಕ್ಷ, 60 ಪರ್ಸೆಂಟ್​ ಲಂಚ ಹೊಡೆದು ರಾಜ್ಯವನ್ನ ಲೂಟಿ ಮಾಡುತ್ತಿದೆ” ಎಂದು ತಿರುಗೇಟು ನೀಡಿದ್ದಾರೆ. ನಗರಾಭಿವೃದ್ದಿ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಿಗೆ ಖಾಸಗಿ ಕಂಪನಿಯೊಂದು ಏಪ್ರಿಲ್ 22 ರಂದು ಬರೆದಿರುವ ಪತ್ರದಲ್ಲಿ ಕಾಂಗ್ರೆಸ್ ಸರ್ಕಾರದ 60 ಪರ್ಸೆಂಟ್​…

Read More

ಬೆಂಗಳೂರು:- ಲವರ್ ತಾಯಿಗೆ ಚಿಕಿತ್ಸೆ ಕೊಡಲು ಕಳ್ಳತನಕ್ಕಿಳಿದ ಡ್ಯಾನ್ಸ್ ಮಾಸ್ಟರ್ ನನ್ನು ಅರೆಸ್ಟ್ ಮಾಡಲಾಗಿದೆ. ಪ್ರೇಯಸಿಯ ತಾಯಿಯ ಚಿಕಿತ್ಸೆಗಾಗಿ ಚೈನ್ ಕದಿಯುತ್ತಿದ್ದ ಡ್ಯಾನ್ಸ್ ಮಾಸ್ಟರ್‌ನನ್ನು ಜಿಗಣಿ ಠಾಣೆ ಪೊಲೀಸರು ಬಂಧಿಸಿದ್ದಾರೆ. https://youtu.be/sU5w6zlKvUs?si=LXsZgVuqndqMkHny ನಡಾಫ್ ಬಂಧಿತ ಆರೋಪಿ. ನಡಾಫ್‍ನ ಪ್ರೇಯಸಿಯ ತಾಯಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಅವರ ಚಿಕಿತ್ಸೆಗಾಗಿ ಆರೋಪಿ ಚೈನ್ ಕಳ್ಳತನಕ್ಕೆ ಇಳಿದಿದ್ದ ಎಂದು ತಿಳಿದು ಬಂದಿದೆ. ಕಳೆದ ಆಗಸ್ಟ್‌ನಲ್ಲಿ ಆರೋಪಿ ಜಿಗಣಿಯ ರತ್ನಮ್ಮ ಎಂಬವರ ಸರವನ್ನು ಕಳ್ಳತನ ಮಾಡಿದ್ದ. ಬುಲೆಟ್ ಬೈಕ್‍ನಲ್ಲಿ ಬಂದು ಸಿಗರೇಟ್ ಖರೀದಿಸುವ ನೆಪದಲ್ಲಿ ಮಾಂಗಲ್ಯದ ಸರ ಎಗರಿಸಿದ್ದ. ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಬಂಧಿತ ಆರೋಪಿಯಿಂದ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 2 ಬೈಕ್‍ಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಹಿಂದೆ ಆರೋಪಿ ಕಳ್ಳತನ ಕೇಸ್‍ನಲ್ಲಿ ಗದಗದಲ್ಲಿ ಬಂಧಿತನಾಗಿದ್ದು, ಪೊಲೀಸ್ ಕಸ್ಟಡಿಯಿಂದ ಪರಾರಿಯಾಗಿದ್ದ ಎನ್ನಲಾಗಿದೆ.

Read More

ಮಂಡ್ಯ: ಸವರ್ಣಿಯರ ವಿರೋಧದ ನಡುವೆಯೂ ಆ ಗ್ರಾಮದ ದಲಿತರು ದೇವಸ್ಥಾನ ಪ್ರವೇಶ ಮಾಡಿದ್ರು. ಇದ್ರಿಂದ ರೊಚ್ಚಿಗೆದ್ದ ಸವರ್ಣಿಯರು ದೇವಸ್ಥಾನದ ಉತ್ಸವ ಮೂರ್ತಿಯನ್ನೆ ಹೊತ್ತು ತಂದು, ಇನ್ಮುಂದೆ ನಮಗೆ ದೇವಸ್ಥಾನವೇ ಬೇಡ ಅಂತ ದೇವಸ್ಥಾನದ ಸಂಬಂಧವನ್ನೆ ಕಡಿದುಕೊಂಡಿದ್ದಾರೆ.‌ ಇಷ್ಟಕ್ಕೂ ಈ ಘಟನೆ ನಡೆದಿದ್ದು ಎಲ್ಲಿ ಅಂತ ಯೋಚಿಸ್ಥಿದ್ದೀರಾ? ಇದ್ರ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ. https://youtu.be/GLyaGbsQ9fc?si=OdNow_66cjaUmuIo ಹೌದು.., ಇಂತಾದ್ದೊಂದು ಘಟನೆ ನಡೆದಿರೋದು ಮಂಡ್ಯ ಜಿಲ್ಲೆಯ ಹನಕರೆ ಗ್ರಾಮದಲ್ಲಿ. ಹನಕೆರೆ ಗ್ರಾಮದ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನವನ್ನ ಗ್ರಾಮಸ್ಥರು ಕಳೆದ ಎರಡುವರೆ ವರ್ಷದ ಹಿಂದೆ ಪುನಶ್ಚೇತನಗೊಳಿಸಿದ್ದರು. ಇದಾದ ಬಳಿಕ ಈ ದೇವಾಲಯ ಮುಜುರಾಯಿ ಇಲಾಖೆ ವ್ಯಾಪ್ತಿಗೆ ಒಳಪಡಿಸಲಾಗಿತ್ತು. ನಂತ್ರ ಕಾನೂನಿನ ಪ್ರಕಾರ ಗ್ರಾಮದ ದಲಿತರು ದೇವಸ್ಥಾನ ಪ್ರವೇಶಕ್ಕೆ ಅನುಮತಿ ಕೋರಿದ್ದರು. ಆದ್ರೆ ದೇವಸ್ಥಾನ ಪ್ರವೇಶ ನೀರಾಕಣೆ ತೋರಿದ ಹಿನ್ನೆಲೆ 2 ಬಾರಿ ಶಾಂತಿ ಸಭೆಗಳನ್ನ ನಡೆಸಲಾಗಿತ್ತು. ಆದ್ರೆ ಆ ಸಭೆಗಳು ವಿಫಲವಾದ ಹಿನ್ನೆಲೆ ಇಂದು ಪೊಲೀಸರ ಭದ್ರತೆಯಲ್ಲಿ ದಲಿತರು ದೇವಾಲಯ ಪ್ರವೇಶಿಸಿದ್ರು. ಇನ್ನು ದಲಿತರ ದೇವಾಲಯ…

Read More

ಗುಲ್ಬರ್ಗಾ: ವಕ್ಫ್ ವಿರುದ್ಧದ ಪ್ರತಿಭಟನೆ ವೇಳೆ ಅಫಜಲಪುರದಲ್ಲಿ ಮರುಳಾರಾಧ್ಯ ಶಿವಾಚಾರ್ಯ ಶ್ರೀಗಳು ನೀಡಿರುವ ಪೆನ್ನು, ತಲ್ವಾರ್ ಹೇಳಿಕೆಗೆ ಈಗ ವಿರೋಧ ವ್ಯಕ್ತವಾಗುತ್ತಿದೆ. ಹೌದು ಮಕ್ಕಳ ಕೈಯಲ್ಲಿ ಪೆನ್ನು ಬದಲು ತಲ್ವಾರ್ ಕೊಡಿ ಎಂದು ವಕ್ಫ್ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. https://youtu.be/gSK10KBSgas?si=QoS67yPYRa-gc09X ಪ್ರತಿಭಟನೆಯಲ್ಲಿ ಪೊಲೀಸರ ಮುಂದೆಯೇ, ‘ಜೀವ ಕೊಡುವುದಕ್ಕೂ, ಜೀವ ತೆಗೆಯುವುದಕ್ಕೂ ಸಿದ್ಧರಿದ್ದೀವಿ ಹುಷಾರ್.. ಯುವಕರ ಮನೆಯಲ್ಲಿ ತಲ್ವಾರ್ ಇವೆ. ಎಲ್ಲರ ಮನೆಯಲ್ಲಿ ಎಲ್ಲ ಇದೆ. ಯಾರ್ ಬರುತ್ತಾರೆ ಅವರನ್ನು ತಲ್ವಾರ್‌ನಿಂದ ಕಡಿಯುತ್ತೇವೆ. ಇನ್ಮುಂದೆ ನಾವು ಮಕ್ಕಳ ಕೈಯಲ್ಲಿ ಪೆನ್ನು ಕೊಡುವುದರ ಬದಲು ತಲ್ವಾರ್ ಕೊಡೋಣ’ ಎಂದು ಸ್ವಾಮೀಜಿ ಹೇಳಿಕೆ ನೀಡಿದ್ದರು. ಸ್ವಾಮೀಜಿಯ ಹೇಳಿಕೆಯ ಆಧಾರದ ಮೇಲೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತೆ ಕಾಯಿದೆ 299, 353/2 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ…

Read More

ದಾವಣಗೆರೆ: ರಾಜ್ಯದಲ್ಲಿ ವಕ್ಫ್‌ ವಿವಾದ ದಿನದಿನಕ್ಕೂ ಹೆಚ್ಚಾಗುತ್ತಲೇ ಇದೆ. ರೈತರ ಆಸ್ತಿಯನ್ನು‌ ಕಬಳಿಸಿದೆ.. ಮಠ, ಮಂದಿರಗಳು, ಶಾಲಾ ಜಾಗಗಳು, ಕೋಟೆಗಳು ವಕ್ಫ್‌ ತೆಕ್ಕೆಗೆ ಸೇರಿವೆ ಅನ್ನೋ ಎಂಬ ಆರೋಪಗಳು ಕೇಳಿ ಬಂದಿದ್ದವು. ಆದರೆ ಇದೀಗ ಇಡೀ ಬಡಾವಣೆಗೆ ಬಡಾವಣೆಯೇ ವಕ್ಫ್‌ ಹೆಸರಿಗೆ ಸೇರಿಸಲಾಗಿದೆ. https://youtu.be/uyI-hOLZM3o?si=ekpa2fXDlC4wOmc1 ದಾವಣಗೆರೆ ನಗರದಲ್ಲಿರುವ ಪ್ರತಿಷ್ಠಿತ ಬಡಾವಣೆ ಪಹಣಿಯಲ್ಲೂ ವಕ್ಫ್‌ ಹೆಸರು ಸೇರ್ಪಡೆಯಾಗಿದೆ. ಪಿ.ಜೆ ಬಡಾವಣೆಯ ಒಂದು ಏರಿಯಾ ಪೂರ್ತಿ ಈಗ ವಕ್ಫ್ ಆಸ್ತಿ ಎಂದು ಮಾಡಲಾಗಿದೆ. 9 ವರ್ಷಗಳ ಹಿಂದೆ ಸರ್ವೆ ನಂ.53ರ ಪಹಣಿಯಲ್ಲಿ ವಕ್ಫ್ ಹೆಸರು ಸೇರ್ಪಡಿಸಲಾಗಿದೆ. ಖಬರಸ್ತಾನ ಸುನ್ನಿ ವಕ್ಫ್ ಸಂಸ್ಥೆ ಹೆಸರಲ್ಲಿ 4.13 ಎಕರೆ ಜಮೀನು ವಕ್ಫ್ ಹೆಸರಿಗೆ ನೊಂದಣಿ ಮಾಡಲಾಗಿದೆ. 2015 ರಲ್ಲಿ ಮ್ಯೂಟೇಷನ್ ರಿಜಿಸ್ಟರ್ ಕೋರ್ಟ್ ಆದೇಶದಂತೆ ಮ್ಯೂಟೇಷನ್ ಅಂತ ಉಲ್ಲೇಖ ಮಾಡಿ, ಎಂ.ಆರ್. ನಂಬರ್ ಅದಲು ಬದಲು ಮಾಡಿ ಆದೇಶ ಹೊರಡಿಸಲಾಗಿದೆ. ಒಂದೆಡೆ ಪಾಲಿಕೆ ನಿವಾಸಿಗಳಿಂದ ಕಂದಾಯ ಕಟ್ಟಿಸಿಕೊಳ್ಳುತ್ತಿದೆ. ಇನ್ನೊಂದು ಕಡೆ ವಕ್ಪ್ ಹೆಸರಿಗೆ ಪಹಣೆ ಬಂದಿರುವುದು ಸ್ಥಳೀಯರಲ್ಲಿ ಅತಂಕ…

Read More

ಚಿಕ್ಕಮಗಳೂರು: ಆಧುನಿಕ ಭಸ್ಮಾಸುರನನ್ನ ನಾಶ ಮಾಡಲು ಇಡೀ ಹಿಂದೂ ಸಮಾಜವೇ ಒಂದಾಗಬೇಕು ಎಂದು ಸಿ.ಟಿ.ರವಿ ಹೇಳಿದ್ದಾರೆ. ಈ ಸಂಬಂಧ ಧರ್ಮ ಸಭೆಯಲ್ಲಿ ಮಾತನಾಡಿದ ಅವರು, ಆಧುನಿಕ ಭಸ್ಮಾಸುರನನ್ನ ನಾಶ ಮಾಡೋದಕ್ಕೆ ಒಬ್ಬ ಮೋಹಿನಿ ಸಾಲಲ್ಲ, ಇಡೀ ಹಿಂದೂ ಸಮಾಜವೇ ಒಂದಾಗಬೇಕು ಎಂದು ದತ್ತಮಾಲಾ ಧರ್ಮ ಸಭೆಯಲ್ಲಿ ವಕ್ಫ್ ವಿರುದ್ಧ ಸಿ.ಟಿ.ರವಿ ಕಿಡಿಕಾರಿದ್ದಾರೆ. https://youtu.be/onhc-zuFhmc?si=hmkiH2IGfNmq8gf5 ವಕ್ಫ್ ಬೋರ್ಡ್ ಅನ್ನೋದು ಆಧುನಿಕ ಭಸ್ಮಾಸುರ. ವೋಟಿನ ಆಸೆಗೆ ಅವರಿಗೆ ನಮ್ಮವರೇ ವರ ಕೊಟ್ಟರು. ಹಿಂದಿನ ಭಸ್ಮಾಸುರನಂತೆ ಇಂದಿನ ಭಸ್ಮಾಸುರ ಎಲ್ಲರ ತಲೆ ಮೇಲೆ ಕೈ ಇಡಲು ಬಂದಿದ್ದಾನೆ. ಭಗವಂತ ಮತ್ತೊಮ್ಮೆ ಮೋಹಿನಿ ರೂಪದಲ್ಲಿ ಭಸ್ಮಾಸುರನನ್ನ ನಾಶ ಮಾಡಬೇಕಾದ ಅವಶ್ಯಕತೆ ಇದೆ. ಆ ಭಸ್ಮಾಸುರ ವರ ಕೊಟ್ಟ ಶಿವನನ್ನೇ ಅಟ್ಟಿಸಿಕೊಂಡು ಹೋದನಂತೆ. ಆಗ ವಿಷ್ಣು ಮೋಹಿನಿ ರೂಪ ತಾಳಿ ಭಸ್ಮಾಸುರನನ್ನ ನಾಶ ಮಾಡಿದ ಕಥೆ ಕೇಳಿದ್ದೇವೆ. ಆಧುನಿಕ ಭಸ್ಮಾಸುರನನ್ನ ನಾಶ ಮಾಡೋದಕ್ಕೆ ಒಬ್ಬ ಮೋಹಿನಿ ಸಾಲಲ್ಲ, ಇಡೀ ಹಿಂದೂ ಸಮಾಜವೇ ಒಂದಾಗಬೇಕು ಎಂದು ಹರಿಹಾಯ್ದರು. ವಕ್ಫ್ ಬೋರ್ಡಿಗೆ…

Read More

ಬೆಂಗಳೂರು: ಮಕ್ಕಳ ಜೀವದ ಜೊತೆಗೆ ಶಾಲಾ ವಾಹನ ಚಾಲಕರು ಚೆಲ್ಲಾಟವಾಡುತ್ತಿದ್ದಾರೆ.. ಹೀಗೊಂದು ಪ್ರಶ್ನೆ ಹುಟ್ಟುಹಾಕಿದೆ ಸಂಚಾರಿ ಪೊಲೀಸರು ನೀಡಿರುವ ಡೇಟಾ.. ಹೌದು, ಬೆಂಗಳೂರಿನಲ್ಲಿ ಶಾಲಾ ವಾಹನ ಚಾಲಕರ ಡ್ರಿಂಕ್‌ ಅಂಡ್‌ ಡ್ರೈವ್‌ ಕೇಸ್‌ ದಿನೇ ದಿನೇ ಜಾಸ್ತಿಯೇ ಆಗ್ತಿದೆ. https://youtu.be/fGgcHK85gTk?si=s66YrXTqgZ-Se160 ಮಕ್ಕಳನ್ನು ಸುರಕ್ಷತೆಯಿಂದ ಶಾಲೆಗಳಿಗೆ ಕರೆದೊಯ್ಯಬೇಕಾಗಿರುವ ಚಾಲಕರು ತಮ್ಮ ನಿರ್ಲಕ್ಷ್ಯದಿಂದಾಗಿ ಮಕ್ಕಳ ಜೀವದ ಜೊತೆಗೆ ಆಟವಾಡುತ್ತಿದ್ದಾರೆ. ಸಂಚಾರಿ ಪೊಲೀಸರು ಎಷ್ಟೇ ಕೇಸ್ ಹಾಕಿದ್ರೂ ಕೂಡ ಮತ್ತೆ ಮತ್ತೆ ಕುಡಿದು ವಾಹನ ಚಲಾಯಿಸಿ ಸಿಕ್ಕಿಬೀಳ್ತಿದ್ದಾರೆ. ಡಿಎಲ್ ಸಸ್ಪೆಂಡ್ ವಾರ್ನಿಂಗ್ ಗೂ ಸಹ ಚಾಲಕರು ಡೋಂಟ್ ಕೇರ್ ಎನ್ನದೇ ಮಕ್ಕಳಿದ್ದರು ಸಹ ಪಾನಮತ್ತರಾಗಿ ಡ್ರೈವ್‌ ಮಾಡುತ್ತಿದ್ದಾರೆ. ಕೇವಲ ಹತ್ತು ತಿಂಗಳ ಅವಧಿಯಲ್ಲಿ ಬರೋಬ್ಬರಿ 118 ಚಾಲಕರು ಕುಡಿದು ಶಾಲಾ ವಾಹನ ಚಲಾಯಿಸಿ ಸಂಚಾರಿ ಪೊಲೀಸರಿಗೆ ಸಿಕ್ಕಿಬಿದಿದ್ದಾರೆ. ಜನವರಿ ತಿಂಗಳಿನಲ್ಲಿ 16, ಫೆಬ್ರವರಿಯಲ್ಲಿ 7, ಜುಲೈನಲ್ಲಿ 23, ಆಗಸ್ಟ್ 26, ಸೆಪ್ಟೆಂಬರ್ 22, ನವೆಂಬರ್ ನಲ್ಲಿ 24 ಶಾಲಾ ವಾಹನ ಚಾಲಕರ ವಿರುದ್ದ ಡಿಡಿ ಕೇಸ್ ದಾಖಲಿಸಿಲಾಗಿದ್ದು,…

Read More

ಗುಲ್ಬರ್ಗಾ: ವಕ್ಫ್ ವಿರುದ್ಧದ ಪ್ರತಿಭಟನೆ ವೇಳೆ ಅಫಜಲಪುರದಲ್ಲಿ ಮರುಳಾರಾಧ್ಯ ಶಿವಾಚಾರ್ಯ ಶ್ರೀಗಳು ನೀಡಿರುವ ಪೆನ್ನು, ತಲ್ವಾರ್ ಹೇಳಿಕೆಗೆ ಈಗ ವಿರೋಧ ವ್ಯಕ್ತವಾಗುತ್ತಿದೆ. ಹೌದು ಮಕ್ಕಳ ಕೈಯಲ್ಲಿ ಪೆನ್ನು ಬದಲು ತಲ್ವಾರ್ ಕೊಡಿ ಎಂದು ವಕ್ಫ್ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರತಿಭಟನೆಯಲ್ಲಿ ಪೊಲೀಸರ ಮುಂದೆಯೇ, ‘ಜೀವ ಕೊಡುವುದಕ್ಕೂ, ಜೀವ ತೆಗೆಯುವುದಕ್ಕೂ ಸಿದ್ಧರಿದ್ದೀವಿ ಹುಷಾರ್.. ಯುವಕರ ಮನೆಯಲ್ಲಿ ತಲ್ವಾರ್ ಇವೆ. ಎಲ್ಲರ ಮನೆಯಲ್ಲಿ ಎಲ್ಲ ಇದೆ. ಯಾರ್ ಬರುತ್ತಾರೆ ಅವರನ್ನು ತಲ್ವಾರ್‌ನಿಂದ ಕಡಿಯುತ್ತೇವೆ. ಇನ್ಮುಂದೆ ನಾವು ಮಕ್ಕಳ ಕೈಯಲ್ಲಿ ಪೆನ್ನು ಕೊಡುವುದರ ಬದಲು ತಲ್ವಾರ್ ಕೊಡೋಣ’ ಎಂದು ಸ್ವಾಮೀಜಿ ಹೇಳಿಕೆ ನೀಡಿದ್ದರು. ಸ್ವಾಮೀಜಿಯ ಹೇಳಿಕೆಯ ಆಧಾರದ ಮೇಲೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತೆ ಕಾಯಿದೆ 299, 353/2 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶವಿಟ್ಟುಕೊಂಡಿದ್ದಾರೆ ಎಂದು…

Read More

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ರೋಡ್ ರೇಜ್ ಪ್ರಕರಣ ಹೆಚ್ಚಳವಾಗುತ್ತಿದ್ದು, ಸೂಕ್ತ ತನಿಖೆಗಾಗಿ ಗೃಹ ಇಲಾಖೆಗೆ ಪತ್ರ ಬರೆಯಲಾಗಿದೆ. https://youtu.be/dCJkB1XHHA4?si=65IHTbkgVt68Tx8n ತನಿಖೆಗಾಗಿ ಟ್ರಾಫಿಕ್ ಪೊಲೀಸರಿಗೆ ಅವಕಾಶ ನೀಡುವಂತೆ ಪೊಲೀಸ್ ಇಲಾಖೆಯು ಗೃಹ ಇಲಾಖೆಗೆ ಪತ್ರ ಬರೆದಿದೆ. ರೋಡ್ ರೇಜ್ ಪ್ರಕರಣಗಳನ್ನು ತಡೆಯಲು ಪೊಲೀಸ್ ಇಲಾಖೆ ಕೂಡ ಶತಪ್ರಯತ್ನ ಮಾಡುತ್ತಿದೆ. ಜೊತೆಗೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಇದನ್ನು ಗೂಂಡಾ ಆಕ್ಟ್ ಎಂದು ಪರಿಗಣನೆ ಮಾಡುತ್ತೇವೆ ಎಂದು ಹೇಳಿದ್ದರು. ಆದರೂ ದಿನಕ್ಕೆ ಐದಾರು ಪ್ರಕರಣಗಳು ವರದಿಯಾಗುತ್ತಿದೆ. ನಗರದಲ್ಲಿರುವ ಭಾರೀ ಟ್ರಾಫಿಕ್ ಜಾಮ್ ಇದಕ್ಕೆ ಪ್ರಮುಖ ಕಾರಣವಾಗಿದೆ. ಸದ್ಯ ರೋಡ್ ರೇಜ್ ಪ್ರಕರಣಗಳನ್ನು ತಡೆಯುವ ಕೆಲಸವನ್ನು ಟ್ರಾಫಿಕ್ ಪೊಲೀಸರಿಗೆ ಕೊಡುವ ಬಗ್ಗೆ ಚಿಂತನೆ ನಡೆದಿದೆ. ಲಾ ಅಂಡ್ ಆರ್ಡರ್ ಪೊಲೀಸರಿಗೆ ದೂರು ಕೊಟ್ಟರೆ ಅವರು ಎಫ್‌ಐಆರ್ ದಾಖಲಿಸಿ, ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಬೇಕು. ಸಾಕ್ಷ್ಯಗಳು, ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ತನಿಖೆ ನಡೆಸಬೇಕಿದೆ. ಇದಕ್ಕೆಲ್ಲಾ ಅಲ್ಲಿನ ಟ್ರಾಫಿಕ್ ಪೊಲೀಸರ ಸಹಾಯಬೇಕಾಗುತ್ತದೆ.…

Read More

ನವದೆಹಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾ.ಖನ್ನಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. ನ್ಯಾ.ಖನ್ನಾ ಅವರ ಹೆಸರನ್ನು ನ್ಯಾ.ಡಿವೈ ಚಂದ್ರಚೂಡ್ ಅವರು ಶಿಫಾರಸು ಮಾಡಿದ್ದರು. ಇವರು ಮುಂದಿನ ವರ್ಷ ಮೇ 13 ರವರೆಗೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ನ್ಯಾ.ಚಂದ್ರಚೂಡ್ ಅವರು ನ.10 ರಂದು ಹುದ್ದೆಯಿಂದ ನಿವೃತ್ತರಾದರು. ಪ್ರಮಾಣವಚನ ಸ್ವೀಕಾರದ ವೇಳೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧಂಖರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಮಾಜಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಉಪಸ್ಥಿತರಿದ್ದರು. ಮೇ 14, 1960 ರಲ್ಲಿ ಜನಿಸಿದ್ದ ನ್ಯಾ.ಸಂಜೀವ್ ಖನ್ನಾ ಅವರು, ದೆಹಲಿ ವಿಶ್ವವಿದ್ಯಾಲಯದಲ್ಲಿ ಕಾನೂನು ಅಧ್ಯಯನ ಮಾಡಿದ್ದರು. ಕೆಲವು ಕಾಲ ವಕೀಲರಾಗಿ, ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾಗಿಯೂ ಸೇವೆ…

Read More