ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ನಟ ದರ್ಶನ್ ಗೆ ಅನಾರೋಗ್ಯದ ಕಾರಣದಿಂದ ಆರು ವಾರಗಳ ಶರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಈಗಾಗಲೇ ಮೂರು ವಾರ ಕಳೆದಿದ್ದು ಇದುವರೆಗೂ ದರ್ಶನ್ ಗೆ ಶಸ್ತ್ರ ಚಿಕಿತ್ಸೆ ನಡೆದಿಲ್ಲ. ಈ ಬಗ್ಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಿರುವ ದರ್ಶನ್ ಪರ ವಕೀಲರು ದರ್ಶನ್ ಇನ್ನೂ ಮಾನಸಿಕವಾಗಿ ಸಿದ್ಧವಾಗದ ಕಾರಣ ಶಸ್ತ್ರಚಿಕಿತ್ಸೆ ನಡೆಸಿಲ್ಲ ಎಂದಿದ್ದಾರೆ. ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಜಾಮೀನು ನೀಡಿತ್ತು. ಜಾಮೀನು ನೀಡಿದರೂ ದರ್ಶನ್ ಅವರಿಗೆ ಇನ್ನೂ ಶಸ್ತ್ರಚಿಕಿತ್ಸೆ ನಡೆದಿಲ್ಲ. ಹೀಗಾಗಿ ಶಸ್ತ್ರ ಚಿಕಿತ್ಸೆ ಯಾಕೆ ನಡೆದಿಲ್ಲ ಎಂಬ ಪ್ರಶ್ನೆಗೆ ದರ್ಶನ್ ಪರ ವಕೀಲರು ಆರೋಗ್ಯಕ್ಕೆ ಸಂಬಂಧಿಸಿದ ವರದಿಯಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ. ದರ್ಶನ್ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡುವುದಕ್ಕೆ ತಯಾರಿ ಮಾಡಲಾಗುತ್ತಿದೆ. ದರ್ಶನ್ ಕೂಡ ಶಸ್ತ್ರಚಿಕಿತ್ಸೆಗೆ ತಯಾರಾಗುತ್ತಿದ್ದಾರೆ. ಆದರೆ ಅತಿಯಾದ ರಕ್ತದೊತ್ತಡ ಸಮಸ್ಯೆ ಎದುರಾಗಿದೆ. ಆಪರೇಷನ್ ಮಾಡಬೇಕಾದರೆ ರಕ್ತದೊತ್ತಡ ಸಮತೋಲನ ಆಗಿರಬೇಕು. ದರ್ಶನ್ ರಕ್ತದೊತ್ತಡದ…
Author: Prajatv Kannada
ಸ್ಯಾಂಡಲ್‌ವುಡ್ ನಟಿ ರಕ್ಷಿತಾ ಪ್ರೇಮ್ ಸಹೋದರ ರಾಣಾ ಇತ್ತೀಚೆಗೆ ಸಿಂಪಲ್ ಆಗಿ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ. ಸಹೋದರನ ನಿಶ್ಚಿತಾರ್ಥದ ಫೋಟೋವನ್ನು ಶೇರ್ ಮಾಡಿರುವ ರಕ್ಷಿತಾ ಪ್ರೇಮ್ ನವ ಜೋಡಿಗೆ ಶುಭ ಹಾರೈಸಿದ್ದಾರೆ. ‘ಏಕ್ ಲವ್ ಯಾ’ ಸಿನಿಮಾ ಮೂಲಕ ನಾಯಕ ನಟನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ರಾಣಾ ಇದೀಗ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಸರಳವಾಗಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ಸಂಭ್ರಮದಲ್ಲಿ ರಕ್ಷಿತಾ ಪ್ರೇಮ್ ಮತ್ತು ಕುಟುಂಬಸ್ಥರು ಭಾಗಿಯಾಗಿದ್ದಾರೆ. ಭಾವಿ ಪತ್ನಿ ಜೊತೆಗಿನ ರಾಣಾ ಫೋಟೋ ನೋಡಿ ಅಭಿಮಾನಿಗಳು ನವ ಜೋಡಿಗೆ ಶುಭ ಕೋರಿದ್ದಾರೆ. ಇನ್ನೂ ರಾಣಾ ಮದುವೆಯಾಗುತ್ತಿರುವ ಹುಡುಗಿ ಯಾರು, ಯಾವ ಊರು ಎಂಬುದು ರಿವೀಲ್ ಆಗಿಲ್ಲ. ಸದ್ಯದಲ್ಲೇ ಈ ಜೋಡಿ ಹಸೆಮಣೆ ಏರಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ ಮದುವೆ ಯಾವಾಗ, ಎಲ್ಲಿ ಎಂಬುದು ಕುಟುಂಬ ಸದಸ್ಯರು ಮಾಹಿತಿ ನೀಡಿಲ್ಲ.
ಕ್ಸೇವಿಯರ್ ಸಿ.ಬಿ.ಎಸ್.ಇ ಶಾಲೆ ಮಾನವಿಯಲ್ಲಿ ವಿಜ್ಞಾನ ಮತ್ತು ಕಲಾ ವಸ್ತು ಪ್ರದರ್ಶನ ಎಕ್ಸ್ ಫ್ಲೋರ್ – 2024 ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ, ರಾಯಚೂರು ಕೃಷಿ ವಿಶ್ವವಿದ್ಯಾಲಯದ ಸಹಾಯಕ ಕಾರ್ಯನಿರ್ವಹಿಕ ಇಂಜಿನಿಯರ್, ಶ್ರೀ ವಿದ್ಯಾಸಾಗರ್ ವ್ಯಾಲೆನ್ಸ್ ರವರು ಭಾಗವಹಿಸಿದ್ದರು. https://youtu.be/KBFKeLwi8dI?si=cOWqjjlN2IESjrHy ದೇಶದ ಸಾಮಾಜಿಕ ಆರ್ಥಿಕ ಭದ್ರತೆಗೆ ಅಚಲ ಗುರಿಗಳನ್ನು ಇಟ್ಟುಕೊಂಡ ಯುವ ಸಮುದಾಯ ಅತ್ಯಗತ್ಯ, ಇಂದಿನ ಮಕ್ಕಳು ಸಮರ್ಪಕ ವೈಜ್ಞಾನಿಕ ದೃಷ್ಟಿಕೋನ ಹೊಂದಿದ್ದರೆ ಸಮಾಜದ ಹಲವಾರು ಸಮಸ್ಯೆಗಳಿಗೆ ಅದು ಅಂತಿಮ ಪರಿಹಾರ ನೀಡಬಲ್ಲದು, ಈ ನಿಟ್ಟಿನಲ್ಲಿ ಮಕ್ಕಳನ್ನು ಸಿದ್ಧಗೊಳಿಸುವಲ್ಲಿ ವಿಜ್ಞಾನ ಹಾಗೂ ಕಲೆಯ ಅಭಿವ್ಯಕ್ತಿಗೆ ಅವಕಾಶ ನೀಡುವ ಶಾಲಾ ವಸ್ತು ಪ್ರದರ್ಶನಗಳು ಅತಿ ಮುಖ್ಯ ವೇದಿಕೆಗಳಾಗಿವೆ ಎಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಹಾಗೂ ಈ ಕಾರ್ಯಕ್ರಮದಲ್ಲಿ ವ.ಫಾ.ಲಿಯೋ ಪಿರೇರಾ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ವೈಜ್ಞಾನಿಕ ದೃಷ್ಟಿಕೋನ ಕೇವಲ ಒಂದು ಪರಿಕಲ್ಪನೆ ಅಲ್ಲ, ನಮ್ಮ ಸಂವಿಧಾನದ ಆಶಯವು ಹೌದು ಎಂದು ಅಭಿಪ್ರಾಯಪಟ್ಟರು ಮತ್ತು ಶಾಲೆಯ ಪ್ರಾಚಾರ್ಯರಾದ ವ.ಫಾ. ವಿಲ್ಸನ್ ಬೆನ್ನಿಸ್…
ಗದಗ: 2A ಮೀಸಲಾತಿ ಜಾರಿಗಾಗಿ ಈ ಬಾರಿ ಕಠೋರ ಹೋರಾಟ ಮಾಡುತ್ತೇವೆ ಮಾಜಿ ಸಚಿವ ಸಿ ಸಿ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ಗದಗದಲ್ಲಿ ಮಾತನಾಡಿದ ಅವರು, ಬಸನಗೌಡ ಪಾಟೀಲ್ ಯತ್ನಾಳ್ ಅವರ ನೇತೃತ್ವದಲ್ಲಿ ಜಯ ಮೃತ್ಯುಂಜಯ ಶ್ರೀಗಳ ಸಾನಿಧ್ಯದಲ್ಲಿ ಕಠೋರ ಹೋರಾಟ ಮಾಡುತ್ತೇವೆ. ಸಾವಿರಾರು ಟ್ರಾಕ್ಟರ್ ತೆಗೆದುಕೊಂಡು ಸುವರ್ಣ ಸೌಧ ಮುತ್ತಿಗೆ ಹಾಕೋದು ಅಂತಾ ಬಸವ ಜಯ ಮೃತ್ಯುಂಜಯ ಶ್ರೀಗಳು ಹೇಳಿದ್ದಾರೆ. https://youtu.be/Xe-tTxQqvn4?si=dSwYhrHgoCi4-P-h ದೆಹಲಿ ಮಾದರಿಯಲ್ಲಿ ನಾವು ಸಹ ಮಾಡು ಇಲ್ಲವೇ ಮಡಿ ಹೋರಾಟ ಮಾಡ್ತೇವೆ ಎಂದರು. ಇನ್ನೂ ಇದೇ ವೇಳೆ ಕೋವಿಡ್ ಹಗರಣದ ಬಗ್ಗೆ ನ್ಯಾಯಮೂರ್ತಿ ಖನ್ನಾ ವರದಿ ವಿಚಾರವಾಗಿ ಮಾತನಾಡಿ, ನ್ಯಾಯಮೂರ್ತಿ ಖನ್ನಾ ನೇಮಕ ಮಾಡಿದಾಗಲೇ ಅವರು ಏನು ವರದಿ ಕೊಡ್ತಾರೆ ಅನ್ನೋದು ಎಲ್ಲರಿಗೂ ಗೊತ್ತಿತ್ತು. ಅವರು ಯಾವ ಕಮ್ಯೂನಿಟಿ ಪ್ರತಿನಿಧಿಸ್ತಾರೆ..? ವರದಿ ಪೂರ್ಣ ಪ್ರಮಾಣದ್ದಲ್ಲ, ಮಧ್ಯಂತರ ವರದಿಯಷ್ಟೇ.. ಮಧ್ಯಂತರ ವರದಿ ಮೇಲೆ ಯಡಿಯೂರಪ್ಪ ಮೇಲೆ ಎಸ್‌ಐಟಿ ಬೇಡ, ಸಿದ್ದರಾಮಯ್ಯನವರೇ ಸೇಡಿನ ರಾಜಕಾರಣ ಬೇಡ ಎಂದಿದ್ದಾರೆ. ಸೂರ್ಯ ಚಂದ್ರರು ಇರೋವರೆಗೂ ಅಂತಾ ಡಿ…
ಬೆಂಗಳೂರು: ಗ್ಯಾರಂಟಿ ಯೋಜನೆಯನ್ನೂ ಜಾರಿ ಮಾಡಿದ್ದೇವೆ, ಇದೆಲ್ಲ ಅಭಿವೃದ್ಧಿ ಅಲ್ಲವೇ? ಎಂದು ಸಚಿವ ಮಧು ಬಂಗಾರಪ್ಪ ಪ್ರಶ್ನೆ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಯನ್ನೂ ಜಾರಿ ಮಾಡಿದ್ದೇವೆ. https://youtu.be/6tPNFITLG4s?si=wdRqS-_p2rj0jNRN ಇದೆಲ್ಲ ಅಭಿವೃದ್ಧಿ ಅಲ್ಲವೇ? ಗ್ಯಾರಂಟಿಗಳಿಗೆ ನಮಗೆ ಎಷ್ಟು ಹಣ ಕೊರತೆ ಆಗಬಹುದು ಅಂತ ನಾವು ಹೈಕಮಾಂಡ್ ನಾಯಕರಿಗೂ, ಸಿದ್ದರಾಮಯ್ಯ ಅವರಿಗೆ ಮೊದಲೇ ಹೇಳಿದ್ದೆವು. ಎಷ್ಟು ಅನುದಾನ ಕಡಿಮೆ ಬರಬಹುದು ಅಂತ ಹೇಳಿದ್ದೆವು. ಹಳೆ ಬಿಜೆಪಿ ಸರ್ಕಾರದ ಬ್ಯಾಕ್ ಲ್ಯಾಗ್ ಹಣದಿಂದ ನಮಗೆ ಸಮಸ್ಯೆ ಆಗಿದೆ. ಶಾಸಕರ ಅಳಲನ್ನು ಪಕ್ಷದ ಸಭೆಯಲ್ಲಿ ನಾನು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರ ಬಳಿ ಇದರ ಬಗ್ಗೆ ಚರ್ಚೆ ಮಾಡುತ್ತೇನೆ. ಕಲ್ಯಾಣ ಕರ್ನಾಟಕ ಭಾಗಕ್ಕೆ 1250 ಕೋಟಿ ರೂ. ಹಣ ಕೊಟ್ಟಿದ್ದೇವೆ.ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಆಗುತ್ತಿದೆ ಎಂದು ಹೇಳಿದರು. ಸರ್ಕಾರದ ಭವಿಷ್ಯದ ಬಗ್ಗೆ ಪರಮೇಶ್ವರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇನ್ನು ಅದ್ಬುತವಾಗಿ ಸರ್ಕಾರ ಆಗಬಹುದು ಅಂತ ಪರಮೇಶ್ವರ್ ಹೇಳಿರಬಹುದು ಅಂತ ಅನಿಸುತ್ತಿದೆ. ಗ್ಯಾರಂಟಿ…
ಬೆಂಗಳೂರು: ಪ್ರತಿ ಮನೆಗಳಿಗೂ ಬಿಪಿ ಹಾಗೂ ಶುಗರ್ ಚೆಕ್ ಮಾಡಿಕೊಳ್ಳುವ ಕಿಟ್ ವಿತರಣೆ ಮಾಡುತ್ತೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗಂಡೂರಾವ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮನುಷ್ಯರಿಗೆ ಸಕ್ಕರೆ ಕಾಯಿಲೆ ಹಾಗೂ ಬಿಪಿ ಸಾಮಾನ್ಯ ಆರೋಗ್ಯ ಸಮಸ್ಯೆಗಳಾಗಿದ್ದು, https://youtu.be/EjJwRpqjuH0?si=5L5gfX37uWDGIWFe ಅವುಗಳನ್ನು ನಿತ್ಯವೂ ಸರಿಯಾಗಿ ಎದುರಿಸಿದರೆ ಮಾತ್ರ ನೆಮ್ಮದಿಯಾಗಿ ಜೀವನ ನಡೆಸಬಹುದು ಅಥವಾ ವೃದ್ಧಾಪ್ಯದಲ್ಲಿ ಯಾವುದೇ ಸಮಸ್ಯೆ ಉಂಟಾಗದು. ಅದಕ್ಕಾಗಿ, ಜನರಿಗೆ ಸಹಾಯ ಮಾಡುವ ಉದ್ದೇಶದಿಂದ ಪ್ರತಿ ಮನೆಗೆ ಬಿಪಿ ಹಾಗೂ ಶುಗರ್ ಚೆಕ್ ಮಾಡಿಕೊಳ್ಳುವ ಕಿಟ್ ವಿತರಣೆ ಮಾಡುವುದಾಗಿ ಹೇಳಿದರು. ಇನ್ನೂ ರಾಜ್ಯದ 5 ಸಾವಿರ ಆರೋಗ್ಯ ಕೇಂದ್ರಗಳಲ್ಲಿ ಸೋಲಾರ್ ವಿದ್ಯುತ್ ವ್ಯವಸ್ಥೆಯ ಯೋಜನೆಯನ್ನು ಅನುಷ್ಠಾನ ಮಾಡಲು ಸಿದ್ಧತೆ ಮಾಡಲಾಗಿದೆ. ಆರೋಗ್ಯ ಇಲಾಖೆ ವ್ಯಾಪ್ತಿ ದೊಡ್ಡದಿದ್ದು, ಸಿಬ್ಬಂದಿ ಕೊರತೆ, ವೇತನ ಹೆಚ್ಚಳ ಹಾಗೂ ನಿರ್ವಹಣೆ ಮಾಡಲು ಎಲ್ಲರ ಸಹಕಾರ ಅಗತ್ಯವಿದೆ. ಮಾಯಕೊಂಡ ಗ್ರಾಮಕ್ಕೆ ಸಮುದಾಯ ಆಸ್ಪತ್ರೆ ಮಂಜೂರು ಮಾಡುವುದಾಗಿ’ ಭರವಸೆ ನೀಡಿದರು.
ಬೆಂಗಳೂರು: ನಿನ್ನೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದರು. ನಾಲ್ವರು ಭ್ರಷ್ಟಾಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ಬೆಳ್ಳಗ್ಗೆ ಏಳು ಗಂಟೆಗಳಿಂದ್ಲೂ ಪರಿಶೀಲನೆ ನಡೆಸಿದ್ದರು. ಬೆಂಗಳೂರು, ಮಂಡ್ಯ, ಚಿಕ್ಕಬಳ್ಳಾಪುರ, ಮಂಗಳೂರಿನ 25ಕಡೆ ದಾಳಿ ನಡೆಸಿರೋ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಭೇಟಿಯಾಡಿದ್ದಾರೆ.. ಇನ್ನು ಯಲಹಂಕದಲ್ಲಿರೋ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆಯಲ್ಲೂ ಕೂಡ ಕ್ಯಾಶ್, ಚಿನ್ನಾಭರಣ, ಆಸ್ತಿ ಪತ್ರಗಳು ಸಿಕ್ಕಿವೆ.. ಹಲವು ಗಂಟೆಗಳ ಕಾಲ ಪರಿಶೀಲನೆ ನಡೆಸಿರೋ ಲೋಕಾಯುಕ್ತ ತಂಡ ಪರಿಶೀಲನೆ ನಡೆಸಿದೆ. https://youtu.be/EjJwRpqjuH0?si=FyoZlOh9gmhZ9JCZ ಮಂಗಳೂರಿನ ಹಿರಿಯ ಭೂ ವಿಜ್ಞಾನಿ ಕೃಷ್ಣವೇಣಿ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಅವರ ಬಳಿ 11.93 ಕೋಟಿ ಮೌಲ್ಯದ ಆಸ್ತಿ ಇರುವುದು ಪತ್ತೆಯಾಗಿದೆ. ಅವರಿಗೆ ಸೇರಿದ ಒಟ್ಟು 5 ಸ್ಥಳಗಳಲ್ಲಿ ಶೋಧ ನಡೆಸಲಾಯಿತು. 3 ನಿವೇಶನಗಳು, ಬೆಂಗಳೂರಿನ ಯಲಹಂಕದಲ್ಲಿ 1 ಫ್ಲಾಟ್ಸ್, ನಿರ್ಮಾಣ ಹಂತದಲ್ಲಿರುವ ವಾಣಿಜ್ಯ ಸಂಕೀರ್ಣ, 26 ಎಕರೆ ಕೃಷಿ ಜಮೀನು (ಕಾಫಿ ಪ್ಲಾಂಟೇಷನ್) ಆಸ್ತಿಯನ್ನು ಕೃಷ್ಣವೇಣಿ…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಹೆಗ್ಗನಹಳ್ಳಿ ಗ್ರಾಮದ ಬಳಿ ಸೆಕ್ಯೂರಿಟಿ ಗಾರ್ಡ್ ನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. https://youtu.be/EjJwRpqjuH0?si=WTvSvYA1HKDk2jEQ ಗ್ರಾಮದ ಹೊರವಲಯದಲ್ಲಿನ ಎಂಬಸ್ಸಿ ಸ್ಪ್ರಿಂಗ್ ಗೆ ಸೇರಿದ ಸೆಕ್ಯೂರಿಟಿ ಶೆಡ್ ನಲ್ಲಿ ಕೊಲೆ ನಡೆದಿದ್ದು, ದೇವನಹಳ್ಳಿ ತಾಲ್ಲೂಕು ಬೋವಿಪಾಳ್ಯದ ನಿವಾಸಿ ಶ್ರೀನಿವಾಸ್ ಕೊಲೆಯಾಗಿರುವ ವ್ಯಕ್ತಿಯಾಗಿದ್ದಾನೆಹಳೇ ದ್ವೇಷದ ಹಿನ್ನೆಲೆ ಮಚ್ಚು, ಚಾಕು ಮತ್ತು ಕಬ್ಬಿಣದ ರಾಡ್ ನಿಂದ ಹೊಡೆದು ಈ ಹತ್ಯೆ ಮಾಡಲಾಗಿದೆ. ಬೋವಿಪಾಳ್ಯದ ಗೋವಿಂದರಾಜು, ಮನೋಜ್, ತಿಮ್ಮರಾಜು ಮತ್ತು ಮಂಜುನಾಥ್ ಕೊಲೆ ಮಾಡಿರುವ ಆರೋಪಿಗಳಾಗಿದ್ದಾರೆ. ಈ ಹಿಂದೆ ಗಣೇಶ ವಿಸರ್ಜನೆ ಸಮಯದಲ್ಲಿ ಇವರ ನಡುವೆ ಜಗಳವಾಗಿತ್ತು ಎನ್ನಲಾಗಿದ್ದು, ಈ ಸಂಬಂಧ ವಿಶ್ವನಾಥಪುರ ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ಮುಂದುವರೆಸಿದ್ದಾರೆ
ಕಾರವಾರ: ಉತ್ತರ ಕನ್ನಡದಲ್ಲಿ ಮಂಗನಬಾವು ಕಾಯಿಲೆ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆ ಕಂಡಿದ್ದು, ಇಂದಿರಾ ಗಾಂದಿ ವಸತಿ ಶಾಲೆಗೆ ಮೂರು ದಿನಗಳ ಕಾಲ ರಜೆ ನೀಡಲಾಗಿದೆ. https://youtu.be/WopUSFDDAy0?si=yNdDVdkS37umhnsi ಕಾರವಾರದ ಇಂದಿರಾಗಾಂದಿ ವಸತಿ ಶಾಲೆಯಲ್ಲಿ ಸೋಂಕಿತರ ಸಂಖ್ಯೆ125ಕ್ಕೆ ಏರಿಕೆ ಕಂಡು ಬಂದಿದೆ. ಬೃಂದಾವನ ವಸತಿ ಬಡಾವಣೆಯ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಸತಿ ಶಾಲೆಯಲ್ಲಿ 6 ರಿಂದ 10 ನೇ ತರಗತಿ ಓದುತ್ತಿರುವ 210 ವಿದ್ಯಾರ್ಥಿಗಳಿದ್ದಾರೆ. ಕಳೆದ ನವೆಂಬರ್ 16ರಂದು ಮೊದಲ ಬಾರಿಗೆ ಮಂಗನ ಬಾವು ಸೋಕು ಕಾಣಿಸಿಕೊಂಡಿತ್ತು. ಮೊದಲಿಗೆ ಐದು ವಿದ್ಯಾರ್ಥಿಗಳಲ್ಲಿ ಈ ಸೋಂಕು ಕಾಣಿಸಿಕೊಂಡಿತ್ತು. ಅದಾದ ಮೂರನೇ ದಿನದಲ್ಲಿ ಸೋಂಕಿತರ ಸಂಖ್ಯೆ 50ಕ್ಕೇ ಏರಿತ್ತು. ಆದರೆ, ಇದೀಗ 125ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಸೋಂಕಿಗೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಡಗೋಡು ವಸತಿ ನಿಲಯಕ್ಕೆ ವೈದ್ಯರ ತಂಡ ನಿಯೋಜಿಸಲಾಗಿದ್ದು, ರಕ್ತದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ.
ಕೆರಿಬಿಯನ್ ರಾಷ್ಟ್ರ ಗಯಾನಾಕ್ಕೆ ಭಾರತವು ತನ್ನ ಔಷಧೀಯ ಉತ್ಪನ್ನಗಳ ರಫ್ತನ್ನು ಇನ್ನಷ್ಟು ಹೆಚ್ಚಿಸಲಿದೆ ಜೊತೆಗೆ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲು ಯೋಜಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಎರಡು ದಿನದ ಪ್ರವಾಸದ ಅಂಗವಾಗಿ ಗಯಾನಾದ ಜಾರ್ಜ್‍ಟೌನ್ ತಲುಪಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗಯಾನಾದ ಅಧ್ಯಕ್ಷ ಮುಹಮ್ಮದ್ ಇರ್ಫಾನ್ ಆಲಿ ಭರಮಾಡಿಕೊಂಡರು. ಗಯಾನಾದ ಅಧ್ಯಕ್ಷ ಇರ್ಫಾನ್ ಆಲಿ ಜತೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಉಭಯ ದೇಶಗಳ ನಡುವೆ ರಕ್ಷಣೆ, ಆಹಾರ ಮತ್ತು ಇಂಧನ ಭದ್ರತೆ ಕ್ಷೇತ್ರಗಳಲ್ಲಿ ಎರಡೂ ದೇಶಗಳ ನಡುವಿನ ಸಹಕಾರವನ್ನು ಉಲ್ಲೇಖಿಸಿದರು. ಜಾಗತಿಕ ಸಂಸ್ಥೆಗಳ ಸುಧಾರಣೆಯ ಅಗತ್ಯವಿರುವುದಾಗಿ ಎರಡೂ ದೇಶಗಳು ಒಪ್ಪಿಕೊಂಡಿವೆ ಎಂದು ಮೋದಿ ತಿಳಿಸಿದರು. ನಮ್ಮ ಸಂಬಂಧಗಳನ್ನು ಬಲಿಷ್ಠಗೊಳಿಸುವ ಹಲವು ಹೊಸ ಉಪಕ್ರಮಗಳನ್ನು ನಾವು ಗುರುತಿಸಿದ್ದೇವೆ. ಗಯಾನಾದಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಸಾಮರ್ಥ್ಯ ವೃದ್ಧಿಗೆ ಭಾರತ ಮಹತ್ವದ ಕೊಡುಗೆ ನೀಡಿದೆ. ಕಳೆದ ವರ್ಷ ರಾಗಿ ನೀಡುವ ಮೂಲಕ ಆಹಾರ ಭದ್ರತೆಗೆ ಕೊಡುಗೆ ನೀಡಿದ್ದೇವೆ. ಇತರ ಬೆಳೆಗಳ ಕೃಷಿಯಲ್ಲೂ ನಾವು…