ತನ್ನ ಮಾಜಿ ಪತಿಯನ್ನು ಏಕಾಂತ ಸೆರೆಮನೆಯಲ್ಲಿ ಇರಿಸಲಾಗಿದ್ದು, ಅಧಿಕಾರಿಗಳು ಜೈಲಿನ ಸೆಲ್‌ನಲ್ಲಿ ವಿದ್ಯುತ್ ಪೂರೈಕೆಯನ್ನು ಕಡಿತಗೊಳಿಸಿದ್ದಾರೆ ಮತ್ತು ಪುತ್ರರಿಗೆ ವಾರಕ್ಕೊಮ್ಮೆ ಕರೆ ಮಾಡಲೂ ಅನುಮತಿಸಲಾಗುತ್ತಿಲ್ಲ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪತ್ನಿ ಗಂಭೀರ ಆರೋಪ ಮಾಡಿದ್ದಾರೆ. ಶೆಹಬಾಜ್ ಷರೀಫ್ ನೇತೃತ್ವದ ಸರಕಾರದ ವಿರುದ್ಧ ಕೆಲವು ಗಂಭೀರ ಆರೋಪಗಳನ್ನು ಮ್ರಾನ್ ಖಾನ್ ಪತ್ನಿ ಮಾಡಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ನಡೆಯುತ್ತಿರುವ ಎರಡು ದಿನಗಳ ಶೃಂಗಸಭೆಯ ನಡುವೆಯೇ ಗೋಲ್ಡ್ ಸ್ಮಿತ್ ಅವರು ಆರೋಪಗಳು ಕೇಳಿಬಂದಿವೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಸೇರಿದಂತೆ ಸದಸ್ಯ ರಾಷ್ಟ್ರಗಳ ಉನ್ನತ ನಾಯಕರು SCO ಶೃಂಗಸಭೆಯಲ್ಲಿ ಭಾಗಿಯಾಗಿದ್ದಾರೆ.
Author: Prajatv Kannada
ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಖ್ಯಾತಿ ಘಳಿಸಿದ ನಟಿ ಸಂಯುಕ್ತಾ ಹೆಗ್ಡೆ ಆಗಾಗ ಟ್ರಿಪ್ ಗೆ ಹೋಗುತ್ತಿರುತ್ತಾರೆ. ಸದ್ಯ ಬಾಲಿಗೆ ಪ್ರವಾಸ ಹೋಗಿರುವ ನಟಿ ಅಲ್ಲಿ ಕಳೆದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕಿರಿಕ್ ಪಾರ್ಟಿ ಸಿನಿಮಾದಲ್ಲಿ ಆರ್ಯ ಪಾತ್ರಕ್ಕೆ ಜೀವ ತುಂಬಿದ ಸಂಯುಕ್ತಾ ಹೆಗ್ಡೆ ತಮ್ಮ ನೇರವಾದ ಮಾತು ಹಾಗೂ ಬೋಲ್ಡ್ ಜೀವನ ಶೈಲಿಯಿಂದಲೇ ಸಖತ್ ಖ್ಯಾತಿ ಘಳಿಸಿದ್ದಾರೆ. ಆಗಾಗ ಸಿನಿಮಾಗಳಿಗೆ ಬಣ್ಣ ಹಚ್ಚುವ ನಟಿ ಸೋಶಿಯಲ್ ಮೀಡಿಯಾದಲ್ಲಿ ಮಾತ್ರ ಸಖತ್ ಆಕ್ಟೀವ್ ಆಗಿದ್ದಾರೆ. ಆಗಾಗ ದೇಶ ವಿದೇಶಗಳಿಗೆ ಟ್ರಾವೆಲ್ ಮಾಡುವ ಸಂಯುಕ್ತ ಹೆಗ್ಡೆ ಮಸ್ತ್ ಮಸ್ತ್ ಫೋಟೊಗಳನ್ನು ತಮ್ಮ ಸೋಶಿಯಲ್ ಮಿಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ದುಬೈ, ಅಬುಧಾಬಿ, ಮುಂಬೈ, ಚೆನ್ನೈ ಅಂತ ಟ್ರಾವೆಲ್ ಮಾಡ್ತಾನೆ ಇರೋ ಸಂಯುಕ್ತಾ ಈ ಬಾರಿ ಬಾಲಿಗೆ ತೆರಳಿದ್ದಾರೆ. ಆರೆಂಜ್ ಮಿನಿ ಸ್ಕರ್ಟ್ ಮತ್ತು ಪಿಂಕ್ ಎಂಡ್ ವೈಟ್ ಕ್ರಾಪ್ ಟಾಪ್ ಧರಿಸಿರೋ ಸಂಯುಕ್ತಾ ಬಾಲಿಯ ಬೀಚ್ ನಲ್ಲಿ ಎಂಜಾಯ್ ಮಾಡ್ತಿರೋ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಇದರ…
ಪ್ರೇಗ್‌ನಲ್ಲಿನಡೆದ ಸಂಗೀತ ಕಚೇರಿಯಲ್ಲಿ ಖ್ಯಾತ ಗಾಯಕ ಹಾಗೂ ನಟಿ ಪ್ರಿಯಾಂಕ ಚೋಪ್ರಾ ಪತಿ ನಿಕ್ ಜೋನಾಸ್ ಮೇಲೆ ಪ್ರೇಕ್ಷಕರ ಸಾಲಿನಲ್ಲಿದ್ದ ವ್ಯಕ್ತಿಯೊಬ್ಬ ಲೇಸರ್ ಲೈಟ್ ಹಾಯಿಸಿದ್ದಾನೆ. ಇದರಿಂದ ಗಾಭರಿಗೊಂಡ ನಿಕ್ ಜೋನಾಸ್ ಭಯದಿಂದ ವೇದಿಕೆಯಿಂದ ನಿರ್ಗಮಿಸಿದ್ದಾರೆ. ಲೇಸರ್ ಗುರಿಯಾಗಿಸಿಕೊಂಡ ತತ್ ಕ್ಷಣವೇ ತಮ್ಮ ಭದ್ರತಾ ತಂಡವನ್ನು ಎಚ್ಚರಿಸಿದರು. ಸಂಗೀತ ಕಚೇರಿಯನ್ನು ಸ್ವಲ್ಪ ಸಮಯದವರೆಗೆ ನಿಲ್ಲಿಸಲಾಯಿತು. ನಿಕ್ ಜೋನಾಸ್ ಸಹೋದರರಾದ ಕೆವಿನ್ ಮತ್ತು ಜೋ ಅವರೂ ಬಳಿಕ ವೇದಿಕೆಯಲ್ಲಿ ಹಾಜರಿದ್ದರು. ಭದ್ರತಾ ಸಿಬಂದಿ ಕಾರ್ಯಪ್ರವೃತ್ತರಾಗಿ ನಿಕ್ ಅವರತ್ತ ಲೇಸರ್ ಗುರಿಪಡಿಸಿದ ವ್ಯಕ್ತಿಯನ್ನು ಗುರುತಿಸಿ ಸ್ಥಳದಿಂದ ಹೊರ ಹಾಕಿದ್ದಾರೆ. ನಿಕ್ ಮತ್ತು ಉಳಿದವರೆಲ್ಲರೂ ಸುರಕ್ಷಿತವಾಗಿದ್ದಾರೆ.
ಮಂಡ್ಯ: ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ ನೀಡಿದರು. ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಟಿ.ಕೆ.ಹಳ್ಳಿಯ ಬೆಂಗಳೂರು ಜಲಮಂಡಳಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ಜಂಟಿಯಾಗಿ ಲೋಕಾರ್ಪಣೆಗೊಳಿಸಿದರು. ಯೋಜನೆಯನ್ನು ಲೋಕಾರ್ಪಣೆಗೊಳಿಸುವುದಕ್ಕೂ ಮುನ್ನ ಚಂಡಿಕಾ ಹೋಮ, ಗಣಪತಿ ಪೂಜೆ, ಯಜಮಾನ ಸಂಕಲ್ಪ, ಮಹಾ ಸುದರ್ಶನ ಚಕ್ರ ಪೂಜೆ, ಸುದರ್ಶನ ಹೋಮ, ಮಹಾಚಂಡಿ ಕಳಾಸರಾಧನೆ, ಮಹಮಂಗಳಾರತಿ ನೆರವೇರಿಸಲಾಯಿತು. ಮಹಾಸಂಕಲ್ಪ, ಚಂಡಿ ನವ ಬ್ರಹ್ಮ ಪೂಜೆ, ದುರ್ಗಾ ಸಪ್ತ ಸತಿ ನಾರಾಯಾಣ ಸೇರಿದಂತೆ 13 ಅಧ್ಯಾಯ, ಗಂಗಾ, ಯಮುನಾ, ಸರಸ್ವತಿ, ನರ್ಮದಾ, ಸಿಂಧು, ಕಾವೇರಿ ಮೊದಲಾದ ಸಪ್ತ ನದಿಗಳ ಕಳಸ ಸ್ಥಾಪನೆ ಮಾಡಿ ಪೂಜೆ ಸಲ್ಲಿಸಲಾಯಿತು. ಮಹಾ ಪೂರ್ಣಾವತಿ, ಮಂಗಳ ದ್ರವ್ಯ ಸಮರ್ಪಣೆ ಮಹಾ ಮಂಗಳಾರತಿ ಸೇರಿ ಹೋಮ-ಹವನ ನೆರವೇರಿಸಲಾಯತು. ಶೈವಾಗಮ ವಿಶಾರಾಧ ಜ್ಞಾನ ಸ್ಕಂದ ದೀಕ್ಷಿತರ ನೇತೃತ್ವದಲ್ಲಿ ಪೂಜಾ ಕೈಂಕಾರ್ಯ ನಡೆಯಿತು. ಡಿಸಿಎಂ ಡಿ.ಕೆ ಶಿವಕುಮಾರ್ ಪೂಜಾ…
ಇಸ್ಲಾಮಾಬಾದ್‌ನಲ್ಲಿ ನಡೆಯುತ್ತಿರುವ ಎರಡು ದಿನಗಳ ಎಸ್‌ಸಿಒ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಪಾಕಿಸ್ತಾನಕ್ಕೆ ತೆರಳಿದ್ದಾರೆ. ಈ ವೇಳೆ ಪಾಕಿಸ್ತಾನದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿರುವ ಜೈಶಂಕರ್. ಗಡಿಯಾಚೆಗಿನ ಚಟುವಟಿಕೆಗಳು ಭಯೋತ್ಪಾದನೆ, ಉಗ್ರವಾದ ಮತ್ತು ಪ್ರತ್ಯೇಕತಾವಾದ ದಿಂದ ಕೂಡಿದ್ದರೆ ವ್ಯಾಪಾರವನ್ನು ಉತ್ತೇಜಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಎರಡು ರಾಷ್ಟ್ರಗಳ ನಡುವಿನ ಗಡಿಯಾಚೆಗಿನ ಚಟುವಟಿಕೆಗಳು ಉಗ್ರವಾದ ಮತ್ತು ಪ್ರತ್ಯೇಕತಾವಾದದಿಂದ ಕೂಡಿದ್ದರೆ, ಅದು ದ್ವಿಪಕ್ಷೀಯ ವ್ಯಾಪಾರ, ಸಂಬಂಧಗಳಿಗೆ ಸಹಕಾರಿಯಲ್ಲ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ತಿಳಿಸಿದ್ದಾರೆ. ಪಾಕಿಸ್ತಾನದಲ್ಲಿ ನಡೆಯುತ್ತಿರುವ ಎಸ್‌ಸಿಒ ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಭಿವೃದ್ಧಿ ಮತ್ತು ಬೆಳವಣಿಗೆಗೆ ಶಾಂತಿ ಮತ್ತು ಸ್ಥಿರತೆಯ ಅಗತ್ಯವಿದೆ ಎಂಬುದು ಮೂಲತತ್ವವಾಗಿದೆ ಎಂದರು. ಏಕಪಕ್ಷೀಯ ಅಜೆಂಡಾಗಳ ಮೂಲಕ ಸಂಬಂಧಗಳು ಪ್ರಗತಿ ಹೊಂದಲು ಸಾಧ್ಯವಿಲ್ಲ, ಅಭಿವೃದ್ಧಿ ಮತ್ತು ಪ್ರಗತಿಗೆ ಶಾಂತಿ ಮತ್ತು ಸ್ಥಿರತೆ ಅಗತ್ಯ ಎಂಬುದರಲ್ಲಿ ಸಂದೇಹವಿಲ್ಲ ಎಂದು ಹೇಳಿದ ಅವರು, ಈ ಕೆಲಸಗಳು ಆಗದಿದ್ದರೆ ಅಭಿವೃದ್ಧಿಯ ಮಾತೇ ಇಲ್ಲ ಎಂದು ಹೇಳಿದರು.…
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ದೊಡ್ಡದಾಗಿ ಫೈಟ್ ನಡೆದಿದೆ ಎಂದು ಹೇಳಲಾಗುತ್ತಿದೆ. ಇದು ಕೇವಲ ಮಾತಿನ ಫೈಟ್ ಆಗದೆ ಇಬ್ಬರು ಸ್ಪರ್ಧಿಗಳು ಕೈ ಕೈ ಮಿಲಾಯಿಸಿಕೊಂಡಿದ್ದರು. ಈ ಕಾರಣದಿಂದ ಬಿಗ್ ಬಾಸ್ ಸ್ಪರ್ಧಿ ರಂಜಿತ್ ಹಾಗೂ ಜಗದೀಶ್ ಅವರು ದೊಡ್ಮನೆಯಿಂದ ಔಟ್ ಆಗಿದ್ದಾರೆ ಎಂದು ಸುದ್ದಿ ಹರಿದಾಡುತ್ತಿದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಶುರುವಾಗಿದೆ. ‘ಬಿಗ್ ಬಾಸ್’ ಮನೆಯಲ್ಲಿ ದಿನದಿಂದ ದಿನಕ್ಕೆ ವಾತಾವರಣ ಹದಗೆಡುತ್ತಿದೆ. ಅಕ್ಟೋಬರ್ 17ರ ಎಪಿಸೋಡ್ನಲ್ಲಿ ಎಲ್ಲರೂ ಜಗದೀಶ್ ವಿರುದ್ಧ ಒಂದಾಗಿದ್ದರು. ಇದರಿಂದ ಸಿಡುಕುತ್ತಿದ್ದ ಜಗದೀಶ್ ಬಿಗ್ ಬಾಸ್ ವಿರುದ್ಧವೇ ಅವಾಚ್ಯ ಶಬ್ದ ಬಳಕೆ ಮಾಡುತ್ತಿದ್ದರು. ಇನ್ನು, ರಂಜಿತ್ ಅವರು ‘ಹೀಗೆ ಮುಂದುವರಿದರೆ ಜಗದೀಶ್ ಅವರ ಎದಮೇಲೆ ಕಾಲಿಟ್ಟು ಹೋಗೋತ್ತೇನೆ’ ಎಂದು ಎಚ್ಚರಿಕೆ ನೀಡಿದ್ದರು. ಕೆಲವು ವರದಿಗಳ ಪ್ರಕಾರ ದೊಡ್ಮನೆಯಲ್ಲಿ ಜಗದೀಶ್ ಹಾಗೂ ರಂಜಿತ್ ಮಧ್ಯೆ ಫೈಟ್ ನಡೆದಿದೆ ಎಂದು ಹೇಳಲಾಗುತ್ತಿದೆ. ಬಿಗ್ ಬಾಸ್ ನಿಯಮಗಳ ಪ್ರಕಾರ ಮನೆಯಲ್ಲಿ ಫೈಟ್ ಆದರೆ ಅದರ ಭಾಗಿದಾರರನ್ನು…
ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಹುಲಿ ಹೆಜ್ಜೆಕಂಡು ರೈತರು ಭಾರೀ ಅತಂಕಕ್ಕೆ ಒಳಗಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.ಚಾಮರಾಜನಗರ ಜಿಲ್ಲೆಯ ಹರವೆ ಹೋಬಳಿಯ ಸುತ್ತಾಮುತ್ತಾ ಹುಲಿ ಪ್ರತ್ಯಕ್ಷ ಘರ್ಜನೆ ರೈತರಲ್ಲಿ ಆತಂಕ ಸೃಷ್ಟಿಸಿದೆ. ಚಾಮರಾಜನಗರ ಜಿಲ್ಲೆಯ ಹರವೆ ಹೋಬಳಿಯ ನಂಜೇದೇವನಪುರ, ವೀರನಪುರ ಹಾಗೂ ಯಡಬೆಟ್ಟ ಸುತ್ತಾಮುತ್ತಾ ಹುಲಿಸಂಚರಿಸಿ ರೈತರ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿ ಆತಂಕ ಸೃಷ್ಟಿಸಿದೆ. ಆ ಭಾಗದಲ್ಲಿ ಕಳೆದ ಮೂರು ತಿಂಗಳಿಂದ ಜಾನುವಾರುಗಳನ್ನು ಕೊಂದು ಅಟ್ಟಹಾಸ ಮೆರೆದಿರುವ ವ್ಯಾಘ್ರವು ಕಲ್ಲು ಕ್ವಾರಿ ಜಮೀನುಗಳ ಪಾಳು ಬಿದ್ದ ಗುತ್ತಿಗಳಲ್ಲಿ ಆಶ್ರಯಿಸಿ ಜಾನುವಾರುಗಳಮೇಲೆದಾಳಿ ನಡೆಸಿದೆ. ಹಲ ದಿನಗಳಿಂದ ಜಾನುವಾರುಗಳ ಮೇಲೆ ಹುಲಿ ನಡೆಸಿ ಕೊಂದು ಆತಂಕ ಸೃಷ್ಟಿಸಿತ್ತು. ಆಗ ದಾಳಿನಡೆಸಿರುವುದು ಹುಲಿಯಲ್ಲ ಎಂದೆ ಅರಣ್ಯ ಇಲಾಖೆ ಸಬೂಬು ಹೇಳುತ್ತಿತ್ತು. ನಂತರ ಯಡಬೆಟ್ಟ ಸಮೀಪದ ಎಣ್ಣೆಹೊಳೆ ಬಳಿ ಹಾಡುಹಗಲೆ ಹುಲಿ ಅಡ್ಡಾಡಿ ಹಸುವೊಂದನ್ನು ಕೊಂದು ಹಾಕಿತ್ತು. ಆಗ ದನಗಾಯಿಗಳು ಹುಲಿ ಸಂಚರಿಸುವ ವಿಡಿಯೋ ಮಾಡಿ ಸಾಮಾಜಿಕ ಜಾಲ ತಾಣದಲ್ಲಿ ಹರಿ ಬಿಟ್ಟಿದ್ರು. ಇದೀಗ ಮಳೆಹೆಚ್ಚಾಗಿರುವ…
ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಸೇರಿ ನಾಲ್ಕು ತಿಂಗಳು ಕಳೆದಿದೆ. ದರ್ಶನ್ ರನ್ನು ಹೇಗಾದರು ಮಾಡಿ ಹೊರ ತರಬೇಕು ಎಂದು ದರ್ಶನ್ ಪರ ವಕೀಲರು ಹಾಗೂ ಕುಟುಂಬಸ್ಥರು ಪ್ರಯತ್ನಿಸುತ್ತಿದ್ದಾರೆ. ಇದೇ ಸಮಯವನ್ನು ಸದುಪಯೋಗಪಡಿಸಿಕೊಂಡಿರುವ ಕೆಲ ನಿರ್ಮಾಪಕರು, ಅಭಿಮಾನಿಗಳ ಸೆಂಟಿಮೆಂಟ್ ಅನ್ನೇ ಬಂಡವಾಳವಾಗಿಟ್ಟುಕೊಂಡು ದರ್ಶನ್ ನಟನೆಯ ಕೆಲ ಹಳೆಯ ಸಿನಿಮಾಗಳನ್ನು ರೀರಿಲೀಸ್ ಮಾಡುತ್ತಿದ್ದಾರೆ. ಇದೀಗ ಮತ್ತೊಂದು ಸಿನಿಮಾ ಮರು ಬಿಡುಗಡೆಗೆ ಸಜ್ಜಾಗಿದೆ. ದರ್ಶನ್ ಬಂಧನವಾದ ಬಳಿಕ ದರ್ಶನ್ ನಟನೆಯ ‘ಶಾಸ್ತ್ರಿ’, ‘ಕರಿಯ’ ಸೇರಿದಂತೆ ಇನ್ನೂ ಕೆಲ ಸಿನಿಮಾಗಳು ರೀರಿಲೀಸ್ ಆಗಿವೆ. ಇತ್ತೀಚೆಗಷ್ಟೆ ವಿಜಯಲಕ್ಷ್ಮಿ ದರ್ಶನ್ ಅವರು ‘ನವಗ್ರಹ’ ಸಿನಿಮಾ ಶೀಘ್ರವೇ ಮರು ಬಿಡುಗಡೆ ಆಗುವುದಾಗಿ ಇನ್ಸ್ಟಾಗ್ರಾಂನಲ್ಲಿ ಸಂದೇಶ ಹಂಚಿಕೊಂಡಿದ್ದರು. ಇದೀಗ ದರ್ಶನ್ ನಟನೆಯ ‘ನಮ್ಮ ಪ್ರೀತಿಯ ರಾಮು’ ಸಿನಿಮಾ ಸಹ ಮರು ಬಿಡುಗಡೆ ಆಗಲಿದೆ. ನಮ್ಮ ಪ್ರೀತಿಯ ರಾಮು ಚಿತ್ರವನ್ನು ಸಂಜಯ್-ವಿಜಯ್ ನಿರ್ದೇಶನ ಮಾಡಿದ್ದು, ನಂದಕುಮಾರ್ ಮತ್ತು ರಾಮೇಗೌಡ ನಿರ್ಮಾಣ ಮಾಡಿದ್ದರು. ಇಳಯರಾಜ ಸಂಗೀತ ನೀಡಿದ್ದ ಈ…
ಚಿಕ್ಕಬಳ್ಳಾಪುರ:- ದರ್ಶನ್ ವಿರುದ್ಧದ ಕೊಲೆ ಪ್ರಕರಣದ ಬಗ್ಗೆ ಕೋಡಿಶ್ರೀ ಸ್ಫೋಟಕ ಮಾತುಗಳನ್ನಾಡಿದ್ದಾರೆ.ಪಾಪದ ಪಾಷಣ ಕಳೆಯಬೇಕಿದೆ. ತಾನು ಮಾಡಿದ ಕರ್ಮ ಫಲವತ್ತಾದ್ರೆ ಯಾರೇನು ಮಾಡುವರು. ಪಾಪದ ಕೆಲಸ ಮಾಡುವುದಕ್ಕೆ ಹೆದರಬೇಕಿತ್ತು ಎಂದಿದ್ದಾರೆ. ಇನ್ನೂ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ A-2 ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ ಆಗಿದೆ. ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ಬೆಂಗಳೂರಿನ 57ನೇ CCH ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ. ಹಿನ್ನೆಲೆಯಲ್ಲಿ ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್ಗೆ ಬಿಗ್ ಶಾಕ್ ಆಗಿದೆ. ಇನ್ನು ಜಾಮೀನಿಗಾಗಿ ದರ್ಶನ್ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ದರ್ಶನ್ ಗ್ಯಾಂಗ್ ನಿಂದ ಬರ್ಬರ ಹತ್ಯೆಗೆ ಒಳಗಾಗಿದ್ದ ರೇಣುಕಾಸ್ವಾಮಿ ಮನೆಯಲ್ಲಿ ಇದೀಗ ಸಂತಸದ ವಾತಾವರಣ ಮನೆ ಮಾಡಿದೆ. ರೇಣುಕಾಸ್ವಾಮಿ ಪತ್ನಿ ಸಹನಾ ಗಂಡು ಮಗುವಿಗೆ ಜನ್ಮ ಕೊಟ್ಟಿದ್ದಾರೆ. ರೇಣುಕಾ ಸ್ವಾಮಿ ಕೊಲೆಯ ಬಳಿಕ ಇಡೀ ಕುಟುಂಬ ಕಣ್ಣೀರಲ್ಲೇ ಕೈ ತೊಳೆಯುತ್ತಾ ಬಂದಿದೆ. ‘ಮಗ ಕೈ ಮುಗಿದು ಕೇಳಿಕೊಂಡಾಗ ಅವರು ಬಿಟ್ಟುಬಿಡಬೇಕಿತ್ತು’ ಎಂದು ತಂದೆ-ತಾಯಿ ಕಣ್ಣೀರು ಹಾಕಿದ್ದರು. ಅಲ್ಲದೆ, ದರ್ಶನ್ಗೆ ಒಳ್ಳೆಯದಾಗಲ್ಲ ಎಂದು ಶಾಪ ಕೂಡ ಹಾಕಿದ್ದರು. ಈಗ ನೊಂದಿದ್ದ ಕುಟುಂಬಕ್ಕೆ ಖುಷಿ ಆಗುವಂಥ ಸುದ್ದಿ ಸಿಕ್ಕಿದೆ. ರೇಣುಕಾಸ್ವಾಮಿ ಪತ್ನಿ ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಹನಾಗೆ ಹೆರಿಗೆ ಆಗಿದೆ. ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್ ಅರೆಸ್ಟ್ ಆದರು. ಜೂನ್ 11ರಂದು ದರ್ಶನ್ ಬಂಧನ ನಡೆದಿದೆ. ಅವರು ಕಳೆದ ನಾಲ್ಕು ತಿಂಗಳಿಂದ ಜೈಲಿನಲ್ಲಿಯೇ ಇದ್ದಾರೆ. ಅವರು ಜಾಮೀನಿಗೆ ಅರ್ಜಿ ಹಾಕಿದ್ದರು. ಆದರೆ, ಕೆಳ ಹಂತದ ಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿದೆ.