ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಸೇರಿ ನಾಲ್ಕು ತಿಂಗಳು ಕಳೆದಿದೆ. ದರ್ಶನ್ ರನ್ನು ಹೇಗಾದರು ಮಾಡಿ ಹೊರ ತರಬೇಕು ಎಂದು ದರ್ಶನ್ ಪರ ವಕೀಲರು ಹಾಗೂ ಕುಟುಂಬಸ್ಥರು ಪ್ರಯತ್ನಿಸುತ್ತಿದ್ದಾರೆ. ಇದೇ ಸಮಯವನ್ನು ಸದುಪಯೋಗಪಡಿಸಿಕೊಂಡಿರುವ ಕೆಲ ನಿರ್ಮಾಪಕರು, ಅಭಿಮಾನಿಗಳ ಸೆಂಟಿಮೆಂಟ್ ಅನ್ನೇ ಬಂಡವಾಳವಾಗಿಟ್ಟುಕೊಂಡು ದರ್ಶನ್ ನಟನೆಯ ಕೆಲ ಹಳೆಯ ಸಿನಿಮಾಗಳನ್ನು ರೀರಿಲೀಸ್ ಮಾಡುತ್ತಿದ್ದಾರೆ. ಇದೀಗ ಮತ್ತೊಂದು ಸಿನಿಮಾ ಮರು ಬಿಡುಗಡೆಗೆ ಸಜ್ಜಾಗಿದೆ. ದರ್ಶನ್ ಬಂಧನವಾದ ಬಳಿಕ ದರ್ಶನ್ ನಟನೆಯ ‘ಶಾಸ್ತ್ರಿ’, ‘ಕರಿಯ’ ಸೇರಿದಂತೆ ಇನ್ನೂ ಕೆಲ ಸಿನಿಮಾಗಳು ರೀರಿಲೀಸ್ ಆಗಿವೆ. ಇತ್ತೀಚೆಗಷ್ಟೆ ವಿಜಯಲಕ್ಷ್ಮಿ ದರ್ಶನ್ ಅವರು ‘ನವಗ್ರಹ’ ಸಿನಿಮಾ ಶೀಘ್ರವೇ ಮರು ಬಿಡುಗಡೆ ಆಗುವುದಾಗಿ ಇನ್ಸ್ಟಾಗ್ರಾಂನಲ್ಲಿ ಸಂದೇಶ ಹಂಚಿಕೊಂಡಿದ್ದರು. ಇದೀಗ ದರ್ಶನ್ ನಟನೆಯ ‘ನಮ್ಮ ಪ್ರೀತಿಯ ರಾಮು’ ಸಿನಿಮಾ ಸಹ ಮರು ಬಿಡುಗಡೆ ಆಗಲಿದೆ. ನಮ್ಮ ಪ್ರೀತಿಯ ರಾಮು ಚಿತ್ರವನ್ನು ಸಂಜಯ್-ವಿಜಯ್ ನಿರ್ದೇಶನ ಮಾಡಿದ್ದು, ನಂದಕುಮಾರ್ ಮತ್ತು ರಾಮೇಗೌಡ ನಿರ್ಮಾಣ ಮಾಡಿದ್ದರು. ಇಳಯರಾಜ ಸಂಗೀತ ನೀಡಿದ್ದ ಈ…
Author: Prajatv Kannada
ಚಿಕ್ಕಬಳ್ಳಾಪುರ:- ದರ್ಶನ್ ವಿರುದ್ಧದ ಕೊಲೆ ಪ್ರಕರಣದ ಬಗ್ಗೆ ಕೋಡಿಶ್ರೀ ಸ್ಫೋಟಕ ಮಾತುಗಳನ್ನಾಡಿದ್ದಾರೆ.ಪಾಪದ ಪಾಷಣ ಕಳೆಯಬೇಕಿದೆ. ತಾನು ಮಾಡಿದ ಕರ್ಮ ಫಲವತ್ತಾದ್ರೆ ಯಾರೇನು ಮಾಡುವರು. ಪಾಪದ ಕೆಲಸ ಮಾಡುವುದಕ್ಕೆ ಹೆದರಬೇಕಿತ್ತು ಎಂದಿದ್ದಾರೆ. ಇನ್ನೂ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ A-2 ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ ಆಗಿದೆ. ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ಬೆಂಗಳೂರಿನ 57ನೇ CCH ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ. ಹಿನ್ನೆಲೆಯಲ್ಲಿ ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್ಗೆ ಬಿಗ್ ಶಾಕ್ ಆಗಿದೆ. ಇನ್ನು ಜಾಮೀನಿಗಾಗಿ ದರ್ಶನ್ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ದರ್ಶನ್ ಗ್ಯಾಂಗ್ ನಿಂದ ಬರ್ಬರ ಹತ್ಯೆಗೆ ಒಳಗಾಗಿದ್ದ ರೇಣುಕಾಸ್ವಾಮಿ ಮನೆಯಲ್ಲಿ ಇದೀಗ ಸಂತಸದ ವಾತಾವರಣ ಮನೆ ಮಾಡಿದೆ. ರೇಣುಕಾಸ್ವಾಮಿ ಪತ್ನಿ ಸಹನಾ ಗಂಡು ಮಗುವಿಗೆ ಜನ್ಮ ಕೊಟ್ಟಿದ್ದಾರೆ. ರೇಣುಕಾ ಸ್ವಾಮಿ ಕೊಲೆಯ ಬಳಿಕ ಇಡೀ ಕುಟುಂಬ ಕಣ್ಣೀರಲ್ಲೇ ಕೈ ತೊಳೆಯುತ್ತಾ ಬಂದಿದೆ. ‘ಮಗ ಕೈ ಮುಗಿದು ಕೇಳಿಕೊಂಡಾಗ ಅವರು ಬಿಟ್ಟುಬಿಡಬೇಕಿತ್ತು’ ಎಂದು ತಂದೆ-ತಾಯಿ ಕಣ್ಣೀರು ಹಾಕಿದ್ದರು. ಅಲ್ಲದೆ, ದರ್ಶನ್ಗೆ ಒಳ್ಳೆಯದಾಗಲ್ಲ ಎಂದು ಶಾಪ ಕೂಡ ಹಾಕಿದ್ದರು. ಈಗ ನೊಂದಿದ್ದ ಕುಟುಂಬಕ್ಕೆ ಖುಷಿ ಆಗುವಂಥ ಸುದ್ದಿ ಸಿಕ್ಕಿದೆ. ರೇಣುಕಾಸ್ವಾಮಿ ಪತ್ನಿ ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಹನಾಗೆ ಹೆರಿಗೆ ಆಗಿದೆ. ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್ ಅರೆಸ್ಟ್ ಆದರು. ಜೂನ್ 11ರಂದು ದರ್ಶನ್ ಬಂಧನ ನಡೆದಿದೆ. ಅವರು ಕಳೆದ ನಾಲ್ಕು ತಿಂಗಳಿಂದ ಜೈಲಿನಲ್ಲಿಯೇ ಇದ್ದಾರೆ. ಅವರು ಜಾಮೀನಿಗೆ ಅರ್ಜಿ ಹಾಕಿದ್ದರು. ಆದರೆ, ಕೆಳ ಹಂತದ ಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿದೆ.
ಬಾಗಲಕೋಟೆ:- KSRTC ಬಸ್ ಪಲ್ಟಿ ಹೊಡೆದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಮಾಲಿಂಗಪುರ ಪಟ್ಟಣದಲ್ಲಿ ಜರುಗಿದೆ. ಚಾಲಕನ ನಿಯಂತ್ರಣ ತಪ್ಪಿ ಬಿಜಾಪುರ ಹಾಗೂ ಗೋಕಾಕ ಬಸ್ ಪಲ್ಟಿ ಹೊಡೆದಿದೆ. ಗೋಕಾಕ ದಿಂದ ಬರುವಾಗ ಕಪಲಗುದ್ದಿ ಹತ್ತಿರ ಇರುವ ಅಂಗಡಿ ಅವರ ತೋಟದ ಬಳಿ ಘಟನೆ ಜರುಗಿದೆ. ಬಸನಲ್ಲಿ ಪ್ರಯಾಣ ಮಾಡುತ್ತಿರುವ ಪ್ರಯಾಣಿಕರಿಗೆ ಯಾವುದೇ ರೀತಿಯ ಪ್ರಾಣ ಹಾನಿ ಯಾಗಿಲ್ಲ ಇಲ್ಲ.ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರನ್ನು ಮಾಹಾಲಿಂಗಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾಲಿಂಗಪುರ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ
ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಲೈನ್ ದುರಸ್ತಿ ಮತ್ತು ನಿರ್ವಹಣಾ ಕಾಮಗಾರಿ ಸಲುವಾಗಿ ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ. ವಿದ್ಯುತ್ ಅಡಚಣೆಗಾಗಿ ವಿಷಾದಿಸುತ್ತೇವೆ. ರಾಜಾಜಿನಗರ ವ್ಯಾಪ್ತಿಯ ಬಸವೇಶ್ವರ ನಗರ, ವಿಜಯನಗರ, ಗೋವಿಂದರಾಜ ನಗರ, ಕಾಮಾಕ್ಷಿಪಾಳ್ಯ, ಆರ್‌ಪಿಇ ಲೇಔಟ್, ಬಿನ್ನಿ ಲೇಔಟ್, ಪ್ರಶಾಂತ್ ನಗರ, ಹೊಸಹಳ್ಳಿ ವಿಜಯನಗರ, ಆರ್‌ಪಿಸಿ ಲೇಔಟ್, ಸರ್ವಿಸ್ ರಸ್ತೆ, ವಿಜಯನಗರ 7ನೇ ಮೇನ್ನಿಂದ 13ನೇ ಮೇನ್ವರೆಗೆ, ಈಸ್ಟ್ ಸ್ಟೇಜ್ ತಿಮ್ಮೇನಹಳ್ಳಿ. ಎಮ್ಸಿ ಲೇಔಟ್‌ನ ಭಾಗ, ಬಿನ್ನಿ ಲೇಔಟ್, ಮಾರೇನಹಳ್ಳಿ, ವಿನಾಯಕ ಲೇಔಟ್. ಬಲ್ಲಯ್ಯನ ಕೆರೆ, ಸಿಂಡಿಕೇಟ್ ಬ್ಯಾಂಕ್ ಕಾಲೋನಿ, ಕಾವೇರಿಪುರ 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, 5ನೇ ಬ್ಲಾಕ್, 6ನೇ ಬ್ಲಾಕ್, 7ನೇ ಬ್ಲಾಕ್, 8ನೇ ಬ್ಲಾಕ್, ನಾಗರಭಾವಿ 11ನೇ ಬ್ಲಾಕ್, ಕೆಎಚ್‌ಬಿ ಕಾಲೋನಿ, ಹೆಚ್ವಿಆರ್ ಲೇಔಟ್, ಸಿಂಡಿಕೇಟ್ ಕಾಲೋನಿ, ಸಿಂಡಿಕೇಟ್ ಬ್ಯಾಂಕಿಂಗ್ ಸುತ್ತಮುತ್ತಲಿನ…
ಬೆಂಗಳೂರು:- ರಾಜಧಾನಿ ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಇಂದೂ ಸಂಚಾರಕ್ಕೆ ಅಡಚಣೆ ಸಾಧ್ಯತೆ ಇದೆ. ಈ ಕುರಿತು ಬೆಂಗಳೂರು ನಗರ ಸಂಚಾರ ಪೊಲೀಸರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸುವ ಮೂಲಕ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರದಿಂದ ಬಿಟ್ಟೂಬಿಡದೆ ಸುರಿದ ಮಳೆಯಿಂದಾಗಿ ಸೋಮವಾರ ಸಾಕಷ್ಟು ಅಧ್ವಾನ ಸೃಷ್ಟಿಯಾಯಿತು. ಅನೇಕ ರಸ್ತೆಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆ, ಟ್ರಾಫಿಕ್ ಜಾಮ್ ಉಂಟಾಯಿತು. ಸೋಮವಾರ ರಾತ್ರಿ ವೇಳೆಗೆ ಅನೇಕ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಪೊಲೀಸರು ಅನುವು ಮಾಡಿಕೊಟ್ಟಿದ್ದಾರೆ. ಅದರಂತೆ ಇಂದು ಯಶವಂತಪುರ ಠಾಣಾ ವ್ಯಾಪ್ತಿಯ ರಾಜಕುಮಾರ್ ಸಮಾಧಿ ರಸ್ತೆಯಲ್ಲಿ ಮರ ಬಿದ್ದಿರುವ ಕಾರಣ ಎರಡು ಬದಿಯ ಸಂಚಾರ ಸ್ಥಗಿತವಾಗಿದೆ. ನಮ್ಮ ಸಿಬ್ಬಂದಿಗಳು ತೆರವು ಕಾರ್ಯಾಚರಣೆಯಲ್ಲಿ ನಿರತರಾಗಿರುತ್ತಾರೆ. ತುಮಕೂರು ರಸ್ತೆಯಿಂದ ಮೈಸೂರು ರಸ್ತೆ ಕಡೆಗೆ ಹೋಗುವ ವಾಹನ ಸವಾರರು SRS ರಸ್ತೆ & ಸುರಾನಾ ಕಾಲೇಜ್ ರಸ್ತೆಯನ್ನು ಬಳಸಲು ಕೋರಲಾಗಿದೆ ಎಂದು ಸಂಚಾರ ಪೊಲೀಸರು ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ. ಸಿಎಂಟಿಐ ಜಂಕ್ಷನ್ ಬಳಿ ಎಫ್‌ಟಿಐ ರಸ್ತೆಯಲ್ಲಿ ಮರ…
ಬೆಂಗಳೂರು:- ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಬೆಂಗಳೂರಿಗೆ ದೊಡ್ಡ ಮಳೆಯನ್ನೇ ಹೊತ್ತುತಂದಿದೆ. ಭಾನುವಾರ ಸಂಜೆಯಿಂದಲೂ ಶುರುವಾಗಿದ್ದ ಮಳೆ ಸೋಮವಾರ ಸಂಜೆವರೆಗೂ ಒಂದೇ ಸಮನೇ ಧಾರಾಕಾರವಾಗಿ ಸುರಿದಿದೆ. ಆಗೋಮ್ಮೆ ಈಗೊಮ್ಮೆ ಬಿಡುವು ಕೊಟ್ಟರೂ ಬರೋಬ್ಬರಿ 59.8 ಮಿ.ಮೀ ಮಳೆಯಾಗಿದೆ. ಅದರಲ್ಲೂ ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ 80.01 ಮಿ.ಮೀ ಮಳೆ ದಾಖಲಾಗಿದೆ. ಈ ವರುಣಾರ್ಭಟ ಬೆಂಗಳೂರಿನಲ್ಲಿ ಸೃಷ್ಟಿಸಿರೋ ಅವಾಂತರಗಳು ಒಂದೆರಡಲ್ಲ. ಗೊರಗುಂಟೆಪಾಳ್ಯ ಬಳಿಯ ರಾಜಕುಮಾರ್ ರಸ್ತೆಯಲ್ಲಿ ಬೃಹತ್ ಮರವೊಂದು ಉರುಳಿ ಬಿದ್ದಿದ್ದು, ಟೆಂಪೊ, ಕಾರು ಜಖಂ ಆಗಿದ್ದವು. ಮರ ಬಿದ್ದಿದ್ದರಿಂದ ಟ್ರಾಫಿಕ್‌ಜಾಮ್ ಉಂಟಾಗಿ ಸವಾರರು ಪರದಾಡಿದರು. ಬೆಂಗಳೂರು ನಗರದ ಹೆಚ್ಎಂಟಿ ಲೇಔಟ್, ವಿದ್ಯಾರಣ್ಯಪುರದಲ್ಲಿ ಮರಗಳು ನೆಲಕ್ಕುರುಳಿದವು. ಇದರಿಂದ ಕೆಲಕಾಲ ಸವಾರರು ಪರದಾಡುವಂತಾಯಿತು. ಬಳಿಕ ಬಿಬಿಎಂಪಿ ಸಿಬ್ಬಂದಿ ನೆಲಕ್ಕುರುಳಿದ್ದ ಮರ ತೆರವು ಮಾಡಿದರು. ಮಾನ್ಯತಾ ಟೆಕ್‌ಪಾರ್ಕ್ ಬಳಿ ರಸ್ತೆ ಬದಿಯೇ ಬೃಹತ್ ಕಟ್ಟಡ ಕಾಮಗಾರಿ ನಡೆಯುತ್ತಿದೆ. 30 ಅಡಿಯಷ್ಟು ನೆಲ ಅಗೆಯಲಾಗಿದ್ದು, ರಸ್ತೆ ಪಕ್ಕದಲ್ಲೇ ಕ್ಷಣಕ್ಷಣ ಭೂಮಿ ಕುಸಿಯುತ್ತಿದೆ. ನೋಡ ನೋಡುತ್ತಿದ್ದಂತೆಯೇ ಕಾಂಪೌಂಡ್ ಕೂಡಾ ಕುಸಿದು ಬಿದ್ದಿದ್ದು,…
ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಚಂಡಮಾರುತದ ಪ್ರಭಾವದಿಂದಾಗಿ ತಮಿಳುನಾಡು, ಆಂಧ್ರದ ದಕ್ಷಿಣ ಭಾಗ ಹಾಗೂ ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿದೆ. ತಮಿಳುನಾಡಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಚೆನ್ನೈನಿಂದ ಬೆಂಗಳೂರಿಗೆ ಸಂಚರಿಸುವ ಕೆಲವು ರೈಲುಗಳನ್ನು ರೈಲ್ವೇ ಇಲಾಖೆ ರದ್ದುಗೊಳಿಸಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡಿನ ಕೆಲವು ಕಡೆ ಭಾರೀ ಮಳೆ ಸುರಿಯುತ್ತಿದೆ. ಚೆನ್ನೈನಲ್ಲಿ ಕಳೆದ ಎರಡು ದಿನಗಳಿಂದ ಬಿಟ್ಟುಬಿಡದೇ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇದರಿಂದಾಗಿ ಭಾರತೀಯ ಹವಾಮಾನ ಇಲಾಖೆ (IMD) ತಮಿಳುನಾಡು ರಾಜ್ಯಾದ್ಯಂತ ಹೆಚ್ಚು ಮಳೆಯಾಗುವ ಮೂನ್ಸುಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ತ್ರೀವ ಮಳೆಯ ಪರಿಣಾಮ ರೈಲ್ವೆ ಇಲಾಖೆ ಇಂದು (ಅ.16) ಚೆನ್ನೈನಿಂದ ಬೆಂಗಳೂರು ಹಾಗೂ ಮೈಸೂರಿಗೆ ಸಂಚರಿಸುವ ಕೆಲವು ರೈಲುಗಳನ್ನು ರದ್ದುಗೊಳಿಸಿದೆ. ಮಳೆಯಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ರೈಲುಗಳನ್ನು ರದ್ದುಗೊಳಿಸಿದೆ. ಯಾವ್ಯಾವ ರೈಲುಗಳು ರದ್ದು: (ರೈಲು ಸಂಖ್ಯೆ) ಚೆನ್ನೈ-ಬೆಂಗಳೂರು – 12657 ಚೆನ್ನೈ-ಬೆಂಗಳೂರು – 12607, 12608 ಚೆನ್ನೈ-ಮೈಸೂರು – 12609 ಮೈಸೂರು-ಚೆನ್ನೈ – 12610 ಚೆನ್ನೈ-ಬೆಂಗಳೂರು – 12027…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಟ್ರ್ಯಾಕ್‌ಗೆ ಮರ ಉರುಳಿ, ನೇರಳ ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲು (Namma Metro) ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಸಿಬ್ಬಂದಿ ಮರ ತೆರವುಗೊಳಿಸಿದ ಬಳಿಕ ಮೆಟ್ರೋ ಸಂಚಾರ ಮತ್ತೆ ಆರಂಭವಾಯಿತು. ಎರಡು ದಿನಗಳಿಂದ ಬೆಂಗಳೂರಿನಲ್ಲಿ ವರುಣ ಅಬ್ಬರಿಸುತ್ತಿದ್ದು, ಮಳೆಯ ಪರಿಣಾಮ ನಮ್ಮ ಮೆಟ್ರೋ ರೈಲಿನ ನೇರಳೆ ಬಣ್ಣದ (Purple Line Metro) ಮಾರ್ಗದಲ್ಲಿ ಮರವೊಂದು ಟ್ರ್ಯಾಕ್‌ಗೆ ಉರುಳಿ, ಎಸ್‌ವಿ ರೋಡ್ ಹಾಗೂ ಇಂದಿರಾನಗರ ನಡುವೆ ಮೆಟ್ರೋ ಸಂಚಾರ ಸ್ಥಗಿತಗೊಂಡು ವ್ಯತ್ಯಯ ಉಂಟಾಗಿತ್ತು. ಬುಧವಾರ ಬೆಳಗ್ಗೆ 6:05ರಿಂದ 8 ಗಂಟೆಯವರೆಗೆ ಮೆಟ್ರೋ ಸಂಚಾರ ಸ್ಥಗಿತಗೊಂಡಿತ್ತು. ಬಿಎಂಆರ್‌ಸಿಎಲ್ (BMRCL) ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಮರವನ್ನು ತೆರವುಗೊಳಿಸಿದರು. ಈ ವೇಳೆ ಇಂದಿರಾನಗರ -ಚಲಘಟ್ಟ ಹಾಗೂ ಬೈಯಪ್ಪನಹಳ್ಳಿ – ವೈಟ್‌ಫೀಲ್ಡ್ ನಿಲ್ದಾಣದವರೆಗೆ ಮೆಟ್ರೋ ಸುಗಮ ಸಂಚಾರಗೊಂಡಿದ್ದು, ಈ ಎರಡು ಮೆಟ್ರೋ ನಿಲ್ದಾಣಗಳ ಮಧ್ಯೆ ರೈಲು ಸಂಚಾರ ಸ್ಥಗಿತಗೊಂಡಿತ್ತು. ಬುಧವಾರ ಬೆಳಗ್ಗೆ 6:05 ಸ್ಥಗಿತಗೊಂಡ ಮೆಟ್ರೋ, ಮರವು…
‘ಬಿಗ್ ಬಾಸ್ ಕನ್ನಡ ಸೀಸನ್ 11’ ಆರಂಭವಾಗಿ ಎರಡು ವಾರಗಳಾಗಿದೆ. ಮೊದಲ ವಾರದಲ್ಲಿ ಯಮನ ಶ್ರೀನಿಧಿ ಮನೆಯಿಂದ ಹೊರ ಹೋಗಿದ್ದರು. ಎರಡನೇ ವಾರದಲ್ಲಿ ಯಾವುದೇ ಎಲಿಮಿನೇಷನ್ ಆಗಿಲ್ಲ. ಈ ರೀತಿಯ ಘಟನೆ ನಡೆದಾಗ ಬಿಗ್ ಬಾಸ್ ಏನಾದರೊಂದು ಟ್ವಿಸ್ಟ್ ನೀಡುತ್ತಾರೆ. ಇದೀಗ ಅದೇ ರೀತಿಯ ಎಚ್ಚರಿಕೆಯನ್ನು ಬಿಗ್ ಬಾಸ್ ನೀಡಿದ್ದಾರೆ. ಈ ವಾರ ಯಾರು ಯಾವಾಗ ಬೇಕಿದ್ದರೂ ಮನೆಯಿಂದ ಹೊರಕ್ಕೆ ಹೋಗಬಹುದು ಎಂದು ಹೇಳುವ ಮೂಲಕ ಸ್ಪರ್ಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಕಳೆದ ವರ್ಷದಂತೆ ಈ ವರ್ಷವೂ ನವರಾತ್ರಿಯ ಸಮಯದಲ್ಲಿ ಯಾರನ್ನೂ ಹೊರಕ್ಕೆ ಕಳುಹಿಸಿಲ್ಲ. ಈ ವಾರ ಯಾವುದೇ ಎಲಿಮಿನೇಷನ್ ನಡೆದಿಲ್ಲ. ಈ ವಾರ ಎರಡು ಎಲಿಮಿನೇಷನ್ ನಡೆಯೋದು ಪಕ್ಕಾ ಎಂದು ಹೇಳಲಾಗುತ್ತಿದೆ. ಈ ವಿಚಾರದಿಂದ ಮನೆ ಮಂದಿಗೆ ಈಗಾಗಲೇ ಟೆನ್ಷನ್ ಶುರುವಾಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಎರಡನೇ ಕ್ಯಾಪ್ಟನ್ ಆಗಿ ಶಿಶಿರ್ ಆಯ್ಕೆಗೊಂಡಿದ್ದಾರೆ. ಅವರು ಪ್ರತಿ ನಿರ್ಧಾರವನ್ನು ಸಾಕಷ್ಟು ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕಿದೆ. ಅದೇ ರೀತಿ ನೇರ ನಾಮಿನೇಷನ್ಗೆ ಅವರಿಗೆ…