ಮೈಸೂರು: ಮುಡಾ ಅಕ್ರಮದಲ್ಲಿ ಸಿಎಂ ಹಾದಿಯಾಗಿ ಪ್ರಭಾವಿ ರಾಜಕಾರಣಿಗಳ ಹೆಸರು ಕೇಳಿ ಬಂದಿದೆ, ಈಗಾಗಿ ಮುಡಾದಲ್ಲಿ ಕಡತಗಳನ್ನ ನಾಶಪಡಿಸಲಾಗಿದೆ ಎಂದು ದೂರದಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. https://youtu.be/bx-X_4uSoqw?si=lwqsmucEyskvXuHv ಮೈಸೂರಿನಲ್ಲಿ ಮಾತನಾಡಿದ ಅವರು ನಾನು ಮುಡಾ ಅಕ್ರಮ ಬಗ್ಗೆ ದೂರು ನೀಡುವ ಮುನ್ನವೇ ಲೋಕಾಯುಕ್ತ ಅಧಿಕಾರಿಗಳು ಮುಡಾ ಅಕ್ರಮ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ರು. ಮುಡಾ ಮೇಲೆ ದಾಳಿ ಮಾಡಿ ದಾಖಲೆ ವಶಪಡಿಸಿಕೊಳ್ಳಲಿಕ್ಕೆ ಮುಂದಾಗಿದ್ರು. ಹಿಂದಿನ ಲೋಕಾಯುಕ್ತ ಅಧಿಕಾರಿ ಸಜಿತ್ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಗೆ ಇದರ ಮಾಹಿತಿ ನೀಡುತ್ತಾರೆ. ಆಗ ಭೈರತಿ ಸುರೇಶ್ ರವರು ಮುಡಾದಲ್ಲಿನ ಕಡತಗಳನ್ನ ತೆಗೆದುಕೊಂಡು ಹೋಗಿದ್ದಾರೆ. ಈ ಬಗ್ಗೆ ಈಡಿ ಅಧಿಕಾರಿಗಳಿಗೆ ಮಾಹಿತಿ ನೀಡುತ್ತೇನೆ. ಮುಡಾ ದಲ್ಲಿನ ಕಡತ ನಾಪತ್ತೆ ಮಾಡಿರೋ ಅಧಿಕಾರಿಗಳು, ಜನಪ್ರತಿನಿದಿನಗಳ ವಿರುದ್ಧ ಕಾನೂನು ಕ್ರಮ ಆಗಬೇಕು ಎಂದು ಆಗ್ರಹಿಸಿದರು.
Author: Prajatv Kannada
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಬಡವರ ಬಿಪಿಎಲ್ ಕಾರ್ಡ್ ದರೋಡೆ ಮಾಡುವ ಸರ್ಕಾರ ಎಂದು ಬಿಜೆಪಿ ವಿಧಾನ ಪರಿಷತ್ ಎನ್. ರವಿಕುಮಾರ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಬರೀ ಸೈಟ್ ದರೋಡೆ ಮಾಡುವಂತಹ ಸರ್ಕಾರ ಅಲ್ಲ, https://youtu.be/hV7bFxtWpHc?si=uIKunpRxuCVOs0dn ಬಡವರ ಬಿಪಿಎಲ್ ಕಾರ್ಡ್ ದರೋಡೆ ಮಾಡುವ ಸರ್ಕಾರ ಕೂಡ ಹೌದು. ಲಕ್ಷಾಂತರ ಬಡವರ ಬಿಪಿಎಲ್ ಕಾರ್ಡ್‌ಗಳನ್ನ ರದ್ದು ಮಾಡಿದ್ದಾರೆ, ಅವರ ಊಟದ ಕಥೆ ಏನು? ಅರ್ಹ ಬಿಪಿಎಲ್ ರದ್ದು ಮಾಡಲ್ಲ ಅಂದಿದ್ರು, ಈಗ ರದ್ದು ಮಾಡಿದ್ಯಾಕೆ? ಕೊಡ್ತೀವಿ ಅಂತಿರೋದ್ಯಾಕೆ? ಇದೇನು ವಾಪಸ್ ಸರ್ಕಾರನಾ? ಅಂತ ಪ್ರಶ್ನೆ ಮಾಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 89 ಕೋಟಿ ರೂ. ಹಗರಣ ಆಗಿರೋದನ್ನ ಸದನದಲ್ಲೇ ಒಪ್ಪಿಕೊಂಡಿದ್ದರು. ಯಾರಾದರೂ ಕಪಾಳಮೋಕ್ಷ ಮಾಡಿ ಹೇಳಿದರೆ ತಪ್ಪು ತಿದ್ದಿಕೊಂಡು ಹೋಗೋದು, ಇಲ್ಲವೇ ತಪ್ಪನ್ನೇ ಮುಂದೂಡಿಸಿಕೊಂಡು ಹೋಗೋದು ಈ ಸರ್ಕಾರದ ವರ್ತನೆ. ವಕ್ಫ್ ಬೋರ್ಡ್‌ನಿಂದ ನೋಟಿಸ್ ಕೊಟ್ರು ಈಗ ವಾಪಸ್ ತಗೋತಿದ್ದಾರೆ. ಇದೊಂದು ಬುದ್ಧಿಗೇಡಿ ಸರ್ಕಾರ ಕಿಡಿ…
ಬೆಂಗಳೂರು: ಬಿಪಿಎಲ್ ಕಾರ್ಡ್ ರದ್ದಾದರೆ ಕೇವಲ ಅಕ್ಕಿ ಮಾತ್ರ ರದ್ದಾಗುವುದಿಲ್ಲ. ಔಷಧಿ, ಆಸ್ಪತ್ರೆ ಸೌಲಭ್ಯ ಎಲ್ಲವೂ ಸ್ಥಗಿತಗೊಳ್ಳುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್ ರದ್ದಾದರೆ ಕೇವಲ ಅಕ್ಕಿ ಮಾತ್ರ ರದ್ದಾಗುವುದಿಲ್ಲ. ಔಷಧಿ, ಆಸ್ಪತ್ರೆ ಸೌಲಭ್ಯ ಎಲ್ಲವೂ ಸ್ಥಗಿತಗೊಳ್ಳುತ್ತವೆ. https://youtu.be/bx-X_4uSoqw?si=bMqRZbfiOPp5dTDs ಜನರ ಕಷ್ಟ ಅವರಿಗೆ ಅರ್ಥ ಆಗುತ್ತಿಲ್ಲ. ಮುಡಾ ಎಂದು ಹೇಳಿ ಸೈಟ್ ವಾಪಸ್ ನೀಡಿದ್ದರು. ಈಗ ಬಿಪಿಎಲ್ ಕಾರ್ಡ್ ಪಡೆಯಲು ಮತ್ತೆ ಅರ್ಜಿ ಹಾಕಬೇಕಂತೆ ಇದೇನು ಮುಖ್ಯಮಂತ್ರಿಗಳೆ? ಇದು ಅತ್ಯಂತ ಜನ ವಿರೋಧಿ ಸರ್ಕಾರ. ಇದು ಯೂಟರ್ನ್ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. ಕಾರ್ಡ್ ರದ್ದು ಮಾಡಿರುವುದನ್ನು ವಿರೋಧಿಸಿದ ಮೇಲೆ ಈಗ ವಾಪಸ್ ತೆಗೆದುಕೊಳ್ಳುವ ಕೆಲಸ ಮಾಡುತ್ತಾರೆ. ರೇಷನ್ ಕಾರ್ಡ್ ರದ್ದಾದವರು ಅರ್ಜಿ ಹಾಕಿದರೆ ತಕ್ಷಣ ವಾಪಸ್ ಕೊಡಲಾಗುವುದು ಎಂದು ಹೇಳುತ್ತಾರೆ. ಅರ್ಜಿ ಹಾಕಿದ ಮೇಲೆ ಕಾರ್ಡ್ ಬರುವುದು ಯಾವಾಗ? ಅಲ್ಲಿಯ ತನಕ ಕಾರ್ಡ್ ರದ್ದಾಗಿರುವ ಬಡವರು ಏನು ತಿನ್ನಬೇಕು…
ರಾತ್ರಿ ಹೊತ್ತು ಕಾಲುಗಳಲ್ಲಿ ಸೆಳೆತ ಕಾಣಿಸಿಕೊಳ್ಳುತ್ತಿದೆಯೇ?, ಈ ಕಾರಣದಿಂದ ನಿದ್ರೆಗೆ ಅಡಚಣೆಯುಮಟಾಗುತ್ತಿದೆಯೇ?, ದಿನವಿಡೀ ಓಡಾಟುವುದು, ಅಥವಾ ಇಡೀ ದಿನ ನಿಂತು ಕೆಲಸ ಮಾಡುವುದು ಅಥವಾ ಒಂದೆಡೆ ಕುಳಿತು ಕೆಲಸ ಮಾಡುವುದರಿಂದ ಕಾಲು ಸೆಳೆತ ಉಂಟಾಗುವುದು. ಈ ಮನೆಮದ್ದುಗಳು ಕಾಲು ನೋವನ್ನು ಹೋಗಲಾಡಿಸುತ್ತದೆ ಸಾಸಿವೆ ಎಣ್ಣೆ ಕಾಲು ನೋವಿನ ಸಮಸ್ಯೆಯಿಂದ ನೀವು ತೊಂದರೆಗೊಳಗಾಗಿದ್ದರೆ ಸಾಸಿವೆ ಎಣ್ಣೆಯಿಂದ ಮಸಾಜ್ ಮಾಡುವುದರಿಂದ ಪರಿಹಾರ ದೊರೆಯುತ್ತದೆ. ಇದು ತುಂಬಾ ಪರಿಣಾಮಕಾರಿ ಮನೆಮದ್ದು. ಇದು ಅತ್ಯುತ್ತಮ ಮತ್ತು ಅತ್ಯುತ್ತಮ ಪಾಕವಿಧಾನವೆಂದು ಪರಿಗಣಿಸಲಾಗಿದೆ. ಇದು ಪ್ರತಿ ಮನೆಯಲ್ಲೂ ಸುಲಭವಾಗಿ ದೊರೆಯುತ್ತದೆ. ನಮ್ಮ ದೇಹದಲ್ಲಿ ಆಗುವ ಬದಲಾವಣೆಗಳು ನಮಗೆ ತಿಳಿಯುತ್ತದೆ. ಆದರೆ ನಿರ್ಲಕ್ಷ್ಯದಿಂದ ಅಪಾಯದ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಸಾಮಾನ್ಯವಾಗಿ ಕೈ ಸೆಳೆತ, ಕಾಲು ಸೆಳೆತ ಕಾಣಿಸಿಕೊಳ್ಳುವುದು ಸಹಜ. ಕೆಲಸ ಮಾಡಿ ಸುಸ್ತಾದಾಗ ಅಥವಾ ನರಗಳಲ್ಲಿ ರಕ್ತಪರಿಚಲನೆಗೆ ಅಡ್ಡಿಯುಂಟಾದಾಗ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಆದರೆ ಪದೇ ಪದೇ ಕಾಣಿಸಿಕೊಳ್ಳುವ ಕೈಕಾಲು ಸೆಳೆತದಿಂದ ಅಪಾಯ ಇನ್ನಷ್ಟು ಹೆಚ್ಚಬಹುದು. ಪೊಟ್ಯಾಶಿಯಂ ಅಂಶದ ಕೊರತೆ ಉಂಟಾದರೆ, ಆಗಾಗ ಕಾಲುಗಳ ಸೆಳೆತ ಕಂಡು…
ಉಗುರುಗಳನ್ನು ಕತ್ತರಿಸುವುದು ಆರೋಗ್ಯಕರವಾದ ಅಭ್ಯಾಸ. ಬೆರಳು ಹಾಗೂ ಉಗುರಿನ ಸಂಧಿಯಲ್ಲಿ ಸಿಲುಕಿಕೊಳ್ಳುವ ಕೊಳಕು ಮತ್ತು ಸೂಕ್ಷ್ಮ ಜೀವಿಗಳು ಸಂಗ್ರಹವಾಗುವುದನ್ನು ಸುಲಭವಾಗಿ ತಡೆಗಟ್ಟಬಹುದು. ಹಿಂದೂ ನಂಬಿಕೆ ಹಾಗೂ ಕೆಲವು ಸಂಪ್ರದಾಯಗಳ ಪ್ರಕಾರ ಉಗುರು ಎಲ್ಲಾ ಸಮಯದಲ್ಲೂ ಮಾಡಬಾರದು. ಅದು ವ್ಯಕ್ತಿಗೆ ನಕಾರಾತ್ಮಕ ಫಲವನ್ನು ನೀಡುವುದು ಎಂದು ಹೇಳಲಾಗುವುದು. ಅದರಲ್ಲೂ ಶುಭಕರವಾದ ದಿನಗಳಲ್ಲಿ, ಹಬ್ಬ ಹರಿದಿನಗಳಲ್ಲಿ, ಕೆಲವು ತಿಥಿಗಳಲ್ಲಿ, ವಿಶೇಷವಾದ ವಾರಗಳಲ್ಲಿ ದಿನದ ಎಲ್ಲಾ ಸಮಯದಲ್ಲಿ ಉಗುರು ಕತ್ತರಿಸುವುದು ಮಾಡಬಾರದು. ಮಂಗಳವಾರ ಮತ್ತು ಶನಿವಾರ ಮಂಗಳವಾರ, ಶನಿವಾರ ಮತ್ತು ಗುರುವಾರ ಉಗುರುಗಳನ್ನು ಕತ್ತರಿಸಬಾರದು. ಈ ದಿನ ನಿಮ್ಮ ಉಗುರುಗಳನ್ನು ಕತ್ತರಿಸಿದರೆ, ಅದರ ಕೆಟ್ಟ ಪರಿಣಾಮಗಳನ್ನು ನೀವು ಅನುಭವಿಸಬೇಕಾಗುತ್ತದೆ. ಇದರಿಂದಾಗಿ ಹಣ ಮತ್ತು ಮದುವೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಮಂಗಳವಾರ ಕತ್ತರಿ, ನೇಲ್ ಕಟರ್‌ನಂಥ ಚೂಪು ವಸ್ತುಗಳ ಬಳಕೆಗೇ ಶಾಸ್ತ್ರದಲ್ಲಿ ನಿಷೇಧವಿದೆ. ಈ ದಿನ ಯುದ್ಧಕಾರಕ ಮಂಗಳನು ಇವುಗಳ ಬಳಕೆಗೆ ತೊಡಗಿದರೆ ಹೆಚ್ಚಿನ ದೈಹಿಕ ಹಾನಿಗೆ ಕಾರಣನಾಗುತ್ತಾನೆ. ಇದಲ್ಲದೇ ಅಮವಾಸ್ಯೆ ಮತ್ತು ಚತುರ್ದಶಿ ತಿಥಿಯಂದು…
ಸೂರ್ಯೋದಯ: 06:29, ಸೂರ್ಯಾಸ್ತ : 05:35 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ ಅಯಣ, ಶುಕ್ಲ ಪಕ್ಷ, ಶರದ ಋತು, ಕಾರ್ತಿಕ್ ಮಾಸ, ತಿಥಿ: ಸಪ್ತಮಿ ನಕ್ಷತ್ರ:ಆಶ್ಲೇಷ ರಾಹು ಕಾಲ: 10:30 ನಿಂದ 12:00 ತನಕ ಯಮಗಂಡ: 03:00 ನಿಂದ 04:30 ತನಕ ಗುಳಿಕ ಕಾಲ: 07:30 ನಿಂದ 09:00 ತನಕ ಅಮೃತಕಾಲ: ಮ.3:27 ನಿಂದ ಸಂ.5:10 ತನಕ ಅಭಿಜಿತ್ ಮುಹುರ್ತ: ಬೆ.11:40 ನಿಂದ ಮ.12:24 ತನಕ ಮೇಷ ರಾಶಿ ( ಅಶ್ವಿನಿ ಭರಣಿ ಕೃತಿಕ 1) ನಿರ್ವಹಣಾ ಅಧಿಕಾರಿಗಳಿಗೆ ಧನ ಲಾಭ ಮತ್ತು ಜಾಗ್ರತೆ ಇರಲಿ, ಪುರೋಹಿತರಿಗೆ ಧನ ಲಾಭ, ತಾತ್ಕಾಲಿಕ ಸಿಬ್ಬಂದಿ ಉದ್ಯೋಗಿಗಳಿಗೆ ಖಾಯಂ ಸೇವೆ ಆಗುವ ಸಮಯ ಬಂದಿದೆ, ವಕೀಲರಿಗೆ ಉನ್ನತ ಹುದ್ದೆ ದೊರೆಯಲಿದೆ, ಗ್ಲಾಸ್ ಪ್ರೇಮ ವರ್ಕರ್ ಉದ್ದಿಮೆದಾರರಿಗೆ ಆರ್ಥಿಕ ಚೇತರಿಕೆ,ಆಸ್ತಿ ದಾಖಲಾತಿಗಳ ಬಗ್ಗೆ ಗೊಂದಲ.ಆರೋಗ್ಯದಲ್ಲಿ ಚೇತರಿಕೆ. ವ್ಯಾಪಾರ ವಹಿವಾಟದಲ್ಲಿ ಕ್ರಿಯಾಶೀಲರಾಗಿರುವಿರಿ. ವ್ಯಾಪಾರಗಳಲ್ಲಿ ಹೆಚ್ಚು ಮುಂದಾಲೋಚನೆ ವಹಿಸಿ ಲಾಭದತ್ತ ಹೆಜ್ಜೆ ಹಾಕುವಿರಿ. ಸೃಜನಶೀಲ…
ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ ಹೊಸ ನಿಯಮವನ್ನು ತಂದಿದೆ. ಈ ಹೊಸ ನಿಯಮದ ಪ್ರಕಾರ, ಟೆಲಿಕಾಂ ಕಂಪನಿಗಳು ತಮ್ಮ ನೆಟ್‌ವರ್ಕ್ ಯಾವ ಪ್ರದೇಶಗಳಲ್ಲಿ ಲಭ್ಯವಿದೆ ಎಂಬ ವಿವರಗಳನ್ನು ನೀಡಬೇಕು. ಅದೇ ಸಮಯದಲ್ಲಿ, ಸ್ಪ್ಯಾಮ್ ಕರೆಗಳನ್ನು ತಡೆಯಲು ಹೊಸ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಂದಿದೆ ಟ್ರಾಯ್ ಸಹಯೋಗದಲ್ಲಿ ದೇಶದ ಟೆಲಿಕಾಂ ಇಲಾಖೆ ಸುಮಾರು 122 ಕೋಟಿ ಮೊಬೈಲ್ ಬಳಕೆದಾರರ ರಕ್ಷಿಸಲು ಕಠಿಣ ಕ್ರಮ ತೆಗೆದುಕೊಂಡಿದೆ. ಟ್ರಾಯ್ ಮತ್ತು ಟೆಲಿಕಾಮ್ ಇಲಾಖೆ ಇತ್ತೀಚೆಗೆ 1.77 ಕೋಟಿ ಮೊಬೈಲ್ ಸಂಖ್ಯೆಗಳನ್ನು ರದ್ದು ಮಾಡಿದೆ. ಟೆಲಿಕಾಂ ಆಪರೇಟರ್‌ಗಳ ಸುಮಾರು 1.7 ಕೋಟಿ ಸಿಮ್ ಕಾರ್ಡ್‌ಗಳನ್ನು ಸರ್ಕಾರ ಬ್ಲಾಕ್ ಮಾಡಿದೆ. ಟ್ರಾಯ್ ಮತ್ತು ಟೆಲಿಕಾಮ್ ಇಲಾಖೆ ಇತ್ತೀಚೆಗೆ 1.77 ಕೋಟಿ ಮೊಬೈಲ್ ಸಂಖ್ಯೆಗಳನ್ನು ರದ್ದು ಮಾಡಿದೆ. ಕ್ಯಾನ್ಸಲ್ ಆಗಿರುವ ಸಿಮ್ ಕಾರ್ಡ್ಗಳಿಂದ ನಕಲಿ ಫೋನ್ ಕರೆ ಮಾಡಲು ಬಳಕೆ ಆಗುತ್ತಿತ್ತು. ಟೆಲಿಕಾಂ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಪ್ರತಿದಿನ ಸುಮಾರು 1.35 ಕೋಟಿ ನಕಲಿ ಕರೆಗಳನ್ನು ತಡೆಹಿಡಿಯಲಾಗುತ್ತಿದೆ. ಟ್ರಾಯ್…
ಬೆಂಗಳೂರು: ಮೋದಿ ಸರಕಾರ ರೈತರಿಗಾಗಿ ಅತ್ಯಂತ ಮಹತ್ವಾಕಾಂಕ್ಷೆಯ ಪಿಎಂ ಕಿಸಾನ್ ಯೋಜನೆಯನ್ನು ತಂದಿದೆ. ಪ್ರಧಾನ ಮಂತ್ರಿ ಕಿಸಾನ್ ಟ್ರ್ಯಾಕ್ಟರ್ ಯೋಜನೆಯು, ಭಾರತೀಯ ರೈತರಿಗೆ ಟ್ರ್ಯಾಕ್ಟರ್‌ಗಳನ್ನು ಖರೀದಿಸಲು ಸಾಲವನ್ನು ನೀಡುತ್ತದೆ. ಈ ಯೋಜನೆಯು ರೈತರ ಕೃಷಿಗೆ ಅವಶ್ಯವಿರುವ ಟ್ರ್ಯಾಕ್ಟರ್‌ಗಳನ್ನು ಬಳಸಲು ಧನ ಸಹಾಯ ಮಾಡಿಕೊಡುತ್ತದೆ. ಈ ಯೋಜನೆಯಿಂದ ರೈತರ ಜೀವನವನ್ನು ಸುಧಾರಿಸುತ್ತದೆ. ಟ್ರಾಕ್ಟರ್ ಅನ್ನು ಸರಿಯಾಗಿ ಬಳಸುವುದರಿಂದ ಉತ್ಪನ್ನದ ಗುಣಮಟ್ಟ, ಬೆಳೆ ಉತ್ಪಾದಕತೆಯನ್ನು ಹೆಚ್ಚಿಸಲು ಈ ಯೋಜನೆಯು ಸಹಾಯ ಮಾಡುತ್ತದೆ. ಪಿಎಂ ಕಿಸಾನ್ ಟ್ರಾಕ್ಟರ್ ಯೋಜನಯಡಿ ಟ್ರಾಕ್ಟರ್ ಖರೀದಿಸಲು ಇಚ್ಚಿಸುವ ರೈತರು ಆನ್‌ಲೈನ್ ಅಥವಾ ಸಂಬಂಧ ಪಟ್ಟ ಸ್ಛಳೀಯ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಹ ರೈತರು ಟ್ರಾಕ್ಟರ್ ಬೆಲೆಯ ಅರ್ಧದಷ್ಟು ಮಾತ್ರ ಪಾವತಿ ಮಾಡಿದರೆ ಸಾಕು. ಇನ್ನುಳಿದ ಅರ್ಧದಷ್ಟು ಹಣವನ್ನು ಕೇಂದ್ರ ಸರ್ಕಾರ ಪಾವತಿಸಲಿದೆ. ಶೇಕಡಾ 50 ರಷ್ಟು ಸಬ್ಸಡಿ ಇರುವುದರಿಂದ ರೈತರು ಅರ್ಧದಷ್ಟು ಹಣ ಪಾವತಿಸಿದರೆ ಟ್ರಾಕ್ಟರ್ ಲಭ್ಯವಾಗಲಿದೆ. ಈ ಅರ್ಧ ಹಣಪಾವತಿಗೂ ಸಾಲ ಸೌಲಭ್ಯವಿದೆ. ಕೆಲ ರಾಜ್ಯಗಳು ಕೇಂದ್ರ ಸರ್ಕಾರದ ಸಬ್ಸಿಡಿ…
ತುಮಕೂರು : ನೂತನವಾಗಿ ಬೆಳಗುಂಬ ಗ್ರಾಮ ಪಂಚಾಯ್ತಿ ಗೆ ಅಧ್ಯಕ್ಷರಾಗಿ ಆಯ್ಕೆಯಾದ ಮಂಗಳಮ್ಮ ಚೌಡಪ್ಪ (ಕುಂದೂರು) ರವರು ಸನ್ಮಾನ್ಯ ಜನಪ್ರಿಯ ನಿಕಟಪೂರ್ವ ಶಾಸಕರಾದ ಶ್ರೀ ಡಿ ಸಿ ಗೌರಿಶಂಕರ್ ಅಣ್ಣ ನವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. https://youtu.be/XW4kKvfDFhM?si=ndSZA8Yd4CS43y1Q ಈ ಸಂದರ್ಭದಲ್ಲಿ ಸನ್ಮಾನ್ಯ ಗೌರಿಶಂಕರಣ್ಣನವರು ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಮಂಗಳಮ್ಮ ಚೌಡಪ್ಪ ನವರಿಗೆ ಸನ್ಮಾನ ಮಾಡಿ ಸಾರ್ವಜನಿಕರ ಪರವಾಗಿ ಕೆಲಸ ಮಾಡಬೇಕು ಎಂದು ಹಾರೈಸಿದರು ಇದೇ ಸಂದರ್ಭದಲ್ಲಿ ಹಲವಾರು ಗ್ರಾಮ ಪಂಚಾಯಿತಿ ಸದಸ್ಯರುಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರುಗಳು ಭಾಗವಹಿಸಿದ್ದರು.
ಶ್ರೀಮಂತ ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ವಂಚನೆಯ ಆರೋಪ ಕೇಳಿಬಂದಿದೆ. ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಸೇರಿದಂತೆ ಇತರ ಏಳು ಅಧಿಕಾರಿಗಳು ಸೌರ ಶಕ್ತಿಯ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ 265 ಮಿಲಿಯನ್ ಡಾಲರ್‌ಗೂ ಹೆಚ್ಚು ಲಂಚದ ಭರವಸೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬೆನ್ನಲ್ಲೇ ಕೀನ್ಯಾ ಅಧ್ಯಕ್ಷ ವಿಲಿಯಂ ರುಟೊ ದೇಶದ ಪ್ರಮುಖ ವಿಮಾನ ನಿಲ್ದಾಣದ ನಿಯಂತ್ರಣವನ್ನು ಅದಾನಿ ಗ್ರೂಪ್ ಗೆ ಹಸ್ತಾಂತರಿಸುವ ಆದೇಶವನ್ನು ರದ್ದುಗೊಳಿಸಿಸುವ ಮೂಲಕ ಅದಾನಿ ಗ್ರೂಪ್ ಗೆ ಮತ್ತೊಂದು ಶಾಕ್ ನೀಡಿದೆ.. ಇದಲ್ಲದೆ ವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿ ಕೀನ್ಯಾ ಇಂಧನ ಸಚಿವಾಲಯ ಅದಾನಿ ಗ್ರೂಪ್ ಜೊತೆ ಮಾಡಿಕೊಂಡಿದ್ದ 30 ವರ್ಷಗಳ 736 ಮಿಲಿಯನ್ ಡಾಲರ್ ಮೊತ್ತದ ಒಪ್ಪಂದವನ್ನು ರದ್ದುಗೊಳಿಸುವಂತೆ ಕೀನ್ಯಾ ಅಧ್ಯಕ್ಷ ವಿಲಿಯಂ ರುಟೊ ಆದೇಶ ಹೊರಡಿಸಿದ್ದಾರೆ. ಕೀನ್ಯಾದ ನೈರೋಬಿಯ ಜೋಮೊ ಕೆನ್ಯಾಟ್ಟಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಸಮೂಹಕ್ಕೆ ಗುತ್ತಿಗೆ ನೀಡುವ ಕೀನ್ಯಾ ಸರ್ಕಾರದ ನಿರ್ಧಾರದ…