ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಪದೇ ಪದೇ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಇಷ್ಟು ದಿನ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ನಿಂದ ಕೊಲೆ ಬೆದರಿಕೆಗಳನ್ನು ಎದುರಿಸುತ್ತಿದ್ದ ಸಲ್ಮಾನ್ ಖಾನ್ ಗೆ ಇದೀಗ ಲಾರೆನ್ಸ್ ಬಿಷ್ಣೋಯ್ ಸಹೋದರ ಬೆದರಿಕೆ ಹಾಕಿದ್ದಾನೆ. ಕಳೆದ 10 ದಿನಗಳಲ್ಲಿ ಮೂರು ಬೆದರಿಕೆಗಳು ಬಂದಿವೆ. ಈ ಬಗ್ಗೆ ಮುಂಬೈ ಸಂಚಾರ ಪೊಲೀಸರಿಗೆ ಕರೆ ಬಂದಿದ್ದು, ಸಲ್ಮಾನ್ ಖಾನ್ ದೇವಸ್ಥಾನಕ್ಕೆ ಹೋಗಿ ತಪ್ಪಾಯ್ತು ಎಂದು ಕ್ಷಮೆ ಕೇಳಬೇಕು ಅಥವಾ 5 ಕೋಟಿ ರೂ. ಕೊಡಬೇಕು ಇಲ್ಲವಾದಲ್ಲಿ ಕೊಲ್ಲುವುದೊಂದೇ ಭಾಕಿ ಎಂದು ಹೇಳಿದ್ದಾನೆ. ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಎಂದು ಹೇಳಿಕೊಳ್ಳುವ ವ್ಯಕ್ತಿಯಿಂದ ಬೆದರಿಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಕ್ಟೋಬರ್ 30ರಂದು ಮುಂಬೈ ಟ್ರಾಫಿಕ್ ಪೊಲೀಸರಿಗೆ ಕರೆ ಮಾಡಿ 2 ಕೋಟಿ ರೂ. ಕೊಡದಿದ್ದರೆ ಸಲ್ಮಾನ್ ಖಾನ್ರನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು. ಬೆದರಿಕೆ ಸಂದೇಶ ಬಂದ ನಂತರ ಮುಂಬೈನ ವರ್ಲಿ ಜಿಲ್ಲೆಯ ಪೊಲೀಸರು ಅಪರಿಚಿತ ವ್ಯಕ್ತಿಯ…
Author: Prajatv Kannada
ಮಂಗಳೂರು: ದೇಶದ ಮೊದಲ ಜಲ ಮೆಟ್ರೋ ಸೇವೆ ಕೇರಳದಲ್ಲಿ ಕಳೆದ ವರ್ಷ ಆರಂಭವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ವಾಟರ್ ಮೆಟ್ರೋ ಯೋಜನೆಯನ್ನು ಏಪ್ರಿಲ್ 25ರಂದು ಉದ್ಘಾಟಿಸಿದ್ದರು. ಅದರಂತೆ ಕೇರಳದ ಕೊಚ್ಚಿ ಮಾದರಿಯಲ್ಲಿ ಕರ್ನಾಟಕದ ಕರಾವಳಿ ನಗರ ಮಂಗಳೂರಿನಲ್ಲೂ ವಾಟರ್ ಮೆಟ್ರೋ ಸೇವೆ ಸಿಗುವ ಸಾಧ್ಯತೆಯಿದೆ. ಕರ್ನಾಟಕ ಮಾರಿಟೈಮ್ ಬೋರ್ಡ್ ಮಂಗಳೂರು ವಾಟರ್ ಮೆಟ್ರೋ ಯೋಜನೆಗೆ ಸಮಗ್ರವಾದ ಯೋಜನಾ ವರದಿಯನ್ನು ತಯಾರಿಸಲು ನಿರ್ಧರಿಸಿದ್ದು ಟೆಂಡರ್ ಆಹ್ವಾನಿಸಿದೆ. ಈ ಸಾರಿಗೆ ಜಾಲ ನೇತ್ರಾವತಿ ಮತ್ತು ಗುರುಪುರ ನದಿಗಳ ಎರಡೂ ದಡಗಳಲ್ಲಿ ಬಜಾಲ್‌ನಿಂದ ಮರವೂರುವರೆಗೆ ಸಂಪರ್ಕ ಕಲ್ಪಿಸಲಿದೆ. ಹಂತ ಹಂತವಾಗಿ ಯೋಜನೆ ಅನುಷ್ಠಾನಗೊಳ್ಳಲಿದೆ. ಆರಂಭದಲ್ಲಿ ನೇತ್ರಾವತಿ-ಗುರುಪುರ ನದಿ ಹಿನ್ನೀರಿನ ಉದ್ದಕ್ಕೂ ಸುಮಾರು 30 ಕಿಲೋಮೀಟರ್ ದೂರದವರೆಗೆ ಬೋಟ್ ಸಂಚರಿಸಲಿದೆ. ಈ ಮಾರ್ಗದಲ್ಲಿ ಒಟ್ಟು 17 ನಿಲ್ದಾಣಗಳಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ. ಕೊಚ್ಚಿಯ ನಂತರ ಮಂಗಳೂರು ವಾಟರ್ ಮೆಟ್ರೋ ಯೋಜನೆ ಎರಡನೇ ಅತಿದೊಡ್ಡ ಜಲ ಸಾರಿಗೆ ವ್ಯವಸ್ಥೆಯಾಗಿದೆ. ಸಂಪರ್ಕವನ್ನು ಹೆಚ್ಚಿಸುವುದು ಮತ್ತು ಸಂಪರ್ಕಿತ ಪ್ರದೇಶಗಳಲ್ಲಿ ಸಮಗ್ರ ಅಭಿವೃದ್ಧಿಯನ್ನು ರಚಿಸುವುದು ಇದರ…
ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಎಡಗೈ ಸ್ಪಿನ್ನರ್ ಗಳು ಹೊಸ ಇತಿಹಾಸ ಬರೆದಿದ್ದಾರೆ. ಭಾರತ ಮತ್ತು ನ್ಯೂಝಿಲೆಂಡ್ ಟೆಸ್ಟ್ ಪಂದ್ಯವೊಂದರ ನಾಲ್ಕು ಇನಿಂಗ್ಸ್ಗಳಲ್ಲಿ ಐದೈದು ವಿಕೆಟ್ ಕಬಳಿಸಿದ ಎಡಗೈ ಸ್ಪಿನ್ನರ್ಗಳು ಕೇವಲ ಇಬ್ಬರು. ಅವರೇ ರವೀಂದ್ರ ಜಡೇಜಾ ಹಾಗೂ ಎಜಾಝ್ ಪಟೇಲ್. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾ 65 ರನ್ ನೀಡಿ 5 ವಿಕೆಟ್ ಕಬಳಿಸಿದರೆ, ನ್ಯೂಝಿಲೆಂಡ್ ಎಡಗೈ ಸ್ಪಿನ್ನರ್ ಎಜಾಝ್ ಪಟೇಲ್ 103 ರನ್ ನೀಡಿ 5 ವಿಕೆಟ್ ಪಡೆದಿದ್ದರು. ಇನ್ನು ಎರಡನೇ ಇನಿಂಗ್ಸ್ನಲ್ಲಿ ರವೀಂದ್ರ ಜಡೇಜಾ 55 ರನ್ ನೀಡಿ 5 ವಿಕೆಟ್ ಪಡೆದರೆ, ಎಜಾಝ್ ಪಟೇಲ್ 57 ರನ್ ನೀಡಿ 6 ವಿಕೆಟ್ ಕಬಳಿಸಿದ್ದರು. ಇದರೊಂದಿಗೆ ಟೆಸ್ಟ್ ಪಂದ್ಯವೊಂದರ 4 ಇನಿಂಗ್ಸ್ಗಳಲ್ಲಿ 5 ವಿಕೆಟ್ ಪಡೆದ ಎಡಗೈ ಸ್ಪಿನ್ನರ್ಗಳೆಂಬ ವಿಶೇಷ ದಾಖಲೆ ಎಜಾಝ್ ಪಟೇಲ್ ಹಾಗೂ…
ಮುಂಬೈ: 10 ದಿನದೊಳಗಾಗಿ ಸಿಎಂ ಸ್ಥಾನದಿಂದ ಕೆಳಗಿಳಿಯದಿದ್ದರೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ರನ್ನ ಬಾಬಾ ಸಿದ್ದಿಕಿಯಂತೆ ಹತ್ಯೆ ಮಾಡುವುದಾಗಿ ಬೆದರಿಕೆಯ ಸಂದೇಶ ಕಳುಹಿಸಿದ್ದ ಮಹಿಳೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಮುಂಬೈ ಟ್ರಾಫಿಕ್ ಪೊಲೀಸ್ ನಿಯಂತ್ರಣ ಕೊಠಡಿಯ ವಾಟ್ಸಪ್ ಸಹಾಯವಾಣಿ ಸಂಖ್ಯೆಗೆ ಶನಿವಾರ ಸಂಜೆ ಅಪರಿಚಿತ ನಂಬರ್‌ನಿಂದ ಜೀವ ಬೆದರಿಕೆ ಸಂದೇಶ ಬಂದಿದೆ. ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡದಿದ್ದರೆ ಬಾಬಾ ಸಿದ್ದಿಕಿಯಂತೆ ಹತ್ಯೆ ಮಾಡಲಾಗುವುದು ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿತ್ತು. ಈ ಬಗ್ಗೆ ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದರು. ಯುಪಿ ಸಿಎಂ ಕೊಲೆ ಬೆದರಿಕೆ ಹಿಂದಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ನಟ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆಯ ಸರಮಾಲೆಯ ನಡುವೆಯೇ ಉತ್ತರ ಪ್ರದೇಶ ಮುಖ್ಯಮಂತ್ರಿಗೂ ಬೆದರಿಕೆ ಬಂದಿದೆ. ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಬಣದ ನಾಯಕ ಬಾಬಾ ಸಿದ್ದಿಕಿ ಅವರನ್ನು ಮುಂಬೈನ ಬಾಂದ್ರಾದಲ್ಲಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿತ್ತು.
ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ವಿರುದ್ದ ರಾಜ್ಯಾದ್ಯಂತ ಜನರು ತಿರುಗಿ ಬಿದ್ದಿದ್ದಾರೆ, ಈ ಅಲೆಗೆ ಮೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುವುದು ಗ್ಯಾರೆಂಟಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರಿಗೆ ವಕ್ಪ್ ಆಸ್ತಿ ಹೆಸರಿನಲ್ಲಿ ನೊಟೀಸ್ ಕೊಟ್ಟಿರುವುದಕ್ಕೆ ರಾಜ್ಯಾದ್ಯಂತ ಜನರು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ಮುಖ್ಯಮಂತ್ರಿಗಳಿಗೆ ತಮ್ಮ ತಪ್ಪಿನ ಅರಿವಾಗಿ ನೊಟೀಸ್ ವಾಪಸ್ ತೆಗೆದುಕೊಳ್ಳಲು ಹೇಳಿದ್ದಾರೆ. ಸರ್ಕಾರ ತಪ್ಪು ಮಾಡದಿದ್ದರೆ ರೈತರಿಗೆ ನೀಡಿದ್ದ ನೋಟಿಸ್ ಯಾಕೆ ವಾಪಸ್ ಪಡೆಯುತ್ತಿದ್ದರು ಎಂದು ಪ್ರಶ್ನಿಸಿದರು. ವಕ್ಪ್ ಸಚಿವ ಜಮೀರ್ ಅವರು ಮುಖ್ಯಮಂತ್ರಿಗಳ ಆದೇಶದ ಮೇರೆಗೆ ನೊಟೀಸ್ ನೀಡಲಾಗಿದೆ ಎಂದು ಹೇಳಿದ್ದಾರೆ. ಡಿಸಿಗಳು ಸಚಿವರ ಆದೇಶದ ಮೇರೆಗೆ ನೊಟೀಸ್ ನೀಡಿರುವುದಾಗಿ ಹೇಳಿದ್ದಾರೆ. ಈಗ ಜನ ತಿರುಗಿ ಬೀಳುತ್ತಾರೆ ಎನ್ನುವುದು ಗೊತ್ತಾದ ತಕ್ಷಣ ಯು ಟರ್ನ್ ಹೊಡೆಯುತ್ತಿದ್ದಾರೆ. ಇದೊಂದು ರೀತಿ ಯು ಟರ್ನ್ ಸರ್ಕಾರ ಮುಡಾದಲ್ಲಿ ಸೈಟ್ ಪಡೆದು ವಾಪಸ್ ಕೊಡುತ್ತಾರೆ. ವಾಲ್ಮೀಕಿ ನಿಗಮದ…
ಹಾಸನ:- ಮದುವೆಗೆ ಒಂದು ವಾರ ಇರುವಾಗಲೇ ಭೀಕರವಾಗಿ ಕಾನ್ಸ್‌ಟೇಬಲ್ ಕೊಲೆಯಾದ ಘಟನೆ ಜರುಗಿದೆ. ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ ಈ ಘಟನೆ ಜರುಗಿದ್ದು, ಹರೀಶ್.ವಿ ಕೊಲೆಯಾದ ಪೊಲೀಸ್ ಕಾನ್ಸ್‌ಟೇಬಲ್. ಹರೀಶ್ ಬೆಂಗಳೂರಿನ KSISFನಲ್ಲಿ ಕಾನ್ಸ್‌ಟೇಬಲ್ ಆಗಿದ್ದರು. ಇದೇ ತಿಂಗಳು 11 ರಂದು ಹರೀಶ್ ವಿವಾಹ ನಿಶ್ಚಯವಾಗಿತ್ತು. ಸೋಮವಾರ ರಾತ್ರಿ ಮದುವೆ ಆಮಂತ್ರಣ ಪತ್ರ ಹಂಚಿ ಮನೆಗೆ ವಾಪಾಸ್ ಆಗುತ್ತಿದ್ದ ವೇಳೆ ದುದ್ದ ಗ್ರಾಮದ ಹೊರವಲಯದಲ್ಲಿರುವ ಡಾಬಾ ಸರ್ಕಲ್‌ನಲ್ಲಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಬೆಂಗಳೂರು/ನವದೆಹಲಿ:- ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ DCM ಡಿಕೆಶಿಗೆ ಸುಪ್ರೀಂ ಕೋರ್ಟ್ ಕೊಂಚ ರಿಲೀಫ್ ಕೊಟ್ಟಿದ್ದು, 4 ವಾರ ವಿಚಾರಣೆ ಮುಂದೂಡಿಕೆ ಮಾಡಿದೆ. ಇತ್ತೀಚೆಗೆ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿತ್ತು. ಸರ್ಕಾರದ ಈ ನಡೆ ಪ್ರಶ್ನಿಸಿ ಸಿಬಿಐ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಸೋಮವಾರ ಸುಪ್ರೀಂಕೋರ್ಟ್ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದು, ಸದ್ಯ ನಾಲ್ಕು ವಾರಗಳ ಕಾಲ ಮುಂದೂಡಿದೆ. ಇನ್ನೂ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಕರ್ನಾಟಕದ ಹಿಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿತ್ತು. ಹಾಗಾಗಿ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿತ್ತು. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಸಿಬಿಐ ತನಿಖೆ ಆದೇಶ ವಾಪಸ್ ಪಡೆಯುವ ನಿರ್ಧಾರ ಕೈಗೊಂಡಿತ್ತು.
ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದ ಮೇಲೆ ಖಲಿಸ್ತಾನಿ ಉಗ್ರಗಾಮಿಗಳು ನಡೆಸಿದ ದಾಳಿಯನ್ನು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಖಂಡಿಸಿದ್ದು ಪ್ರತಿಯೊಬ್ಬ ಕೆನಡಾದವರಿಗೆ ತಮ್ಮ ನಂಬಿಕೆಯನ್ನು ಮುಕ್ತವಾಗಿ ಮತ್ತು ಸುರಕ್ಷಿತವಾಗಿ ಆಚರಿಸುವ ಹಕ್ಕಿದೆ ಎಂದಿದ್ದಾರೆ. ಬ್ರಾಂಪ್ಟನ್‌ನಲ್ಲಿರುವ ಹಿಂದೂ ಸಭಾ ಮಂದಿರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕತ್ಯಗಳು ಸ್ವೀಕಾರಾರ್ಹವಲ್ಲ. ಪ್ರತಿಯೊಬ್ಬ ಕೆನಡಾದವರು ತಮ ನಂಬಿಕೆಯನ್ನು ಮುಕ್ತವಾಗಿ ಮತ್ತು ಸುರಕ್ಷಿತವಾಗಿ ಆಚರಿಸುವ ಹಕ್ಕನ್ನು ಹೊಂದಿದ್ದಾರೆ. ಸಮುದಾಯವನ್ನು ರಕ್ಷಿಸಲು ಮತ್ತು ಈ ಘಟನೆಯ ತನಿಖೆಗೆ ತ್ವರಿತವಾಗಿ ಪ್ರತಿಕ್ರಿಯಿಸಿದ್ದಕ್ಕಾಗಿ ಪೀಲ್ ಪ್ರಾದೇಶಿಕ ಪೊಲೀಸರಿಗೆ ಧನ್ಯವಾದಗಳು ಎಂದು ಟ್ರುಡೋ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ವೈರಲ್ ಆಗಿರುವ ವೀಡಿಯೊಗಳಲ್ಲಿ ಗುಂಪೊಂದು ದೇವಾಲಯದ ಆವರಣವನ್ನು ಪ್ರವೇಶಿಸಿ ಭಕ್ತರ ಮೇಲೆ ಹಲ್ಲೆ ನಡೆಸುವುದು ಕಂಡು ಬಂದಿದೆ. ಘಟನೆಗೆ ಸಂಬಂಧಿಸಿ ಯಾರನ್ನು ಕೂಡ ಬಂಧಿಸಲಾಗಿಲ್ಲ. ಕೆನಡಾ ಸಂಸದ ಚಂದ್ರ ಆರ್ಯ ಈ ಕುರಿತು ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಕೆನಡಾದಲ್ಲಿ ಹಿಂಸಾತ್ಮಕ ಮನಸ್ಥಿತಿಯು ಎಷ್ಟು ಆಳವಾಗಿದೆ ಎನ್ನುವುದನ್ನು ಈ ಘಟನೆಯು ತೋರಿಸುತ್ತದೆ ಎಂದು ಹೇಳಿದ್ದಾರೆ. ಕೆನಡಾದ ವಿರೋಧ ಪಕ್ಷದ ನಾಯಕ ಪಿಯರೆ ಪೊಯ್ಲಿವ್ರೆ…
ಪಾಕಿಸ್ತಾನದ ಲಾಹೋರ್ ನಗರದಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ ಹೆಚ್ಚುತ್ತಿದೆ. ಇದರಿಂದ 1.4 ಕೋಟಿ ಜನರು ತತ್ತರಿಸಿ ಹೋಗಿದ್ದಾರೆ. ನಗರದ ತುಂಬೆಲ್ಲಾ ದಟ್ಟ ಹೊಗೆ ಆವರಿಸಿಕೊಂಡಿದ್ದು ಈ ದುಃಸ್ಥಿತಿಗೆ ಭಾರತವನ್ನು ಪಾಕಿಸ್ತಾನದ ಸಚಿವರೊಬ್ಬರು ದೂಷಿಸಿದ್ದಾರೆ. ಭಾನುವಾರ ಎರಡನೇ ಬಾರಿಗೆ ವಿಶ್ವದ ಅತ್ಯಂತ ಕಲುಷಿತ ನಗರ ಎಂಬ ಕುಖ್ಯಾತಿಗೆ ಲಾಹೋರ್ ಪಾತ್ರವಾಗಿದೆ. ಭಾನುವಾರ ಲಾಹೋರ್‌ನ ವಾಯುಗುಣಮಟ್ಟ ಸೂಚ್ಯಂಕವು(ಎಕ್ಯುಐ) ಭೀಕರ 1,067 ಅಂಶಗಳಿಗೆ ಏರಿಕೆಯಾಗಿದೆ. ಶೂನ್ಯದಿಂದ 50ರ ನಡುವಿನ ಎಕ್ಯುಐ ಮಟ್ಟವನ್ನು ಉತ್ತಮ ಎಂದು ಪರಿಗಣಿಸಲಾಗುತ್ತದೆ. 51ರಿಂದ 100ರವರೆಗೆ ತೃಪ್ತಿದಾಯಕ, 101ರಿಂದ 200ರವರೆಗೆ ಮಧ್ಯಮ, 201ರಿಂದ 300ರವರೆಗೆ ಕಳಪೆ, 301ರಿಂದ 400 ಅತ್ಯಂತ ಕಳಪೆ ಮತ್ತು 401ರಿಂದ ಮೇಲ್ಪಟ್ಟ ಎಕ್ಯುಐ ಅತ್ಯಂತ ಅಪಾಯಕಾರಿ ಎಂದು ಪರಿಗಣಿಸಲಾಗುತ್ತದೆ. ಭೀಕರ ಮಾಲಿನ್ಯದ ಪರಿಣಾಮವಾಗಿ, ಲಾಹೋರ್‌ನ ಅಧಿಕಾರಿಗಳು ಇಂದಿನಿಂದ ಒಂದು ವಾರದವರೆಗೆ ಶಾಲೆಗೆ ರಜೆ ಘೋಷಿಸಿದ್ದಾರೆ. ಗ್ರೀನ್ ಲಾಕ್‌ಡೌನ್ ಭಾಗವಾಗಿ ಸರ್ಕಾರಿ ಮತ್ತು ಖಾಸಗಿ ಕಂಪನಿಗಳ ಶೇಕಡ 50ರಷ್ಟು ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ನೀಡಲಾಗಿದೆ. ಮಾಲಿನ್ಯ ಉಂಟುಮಾಡುವ ಉಪಕರಣ…
ಕಳೆದ 6 ತಿಂಗಳಿಂದ ಚೀನಾದ ಕೆಳಕಕ್ಷೆಯ ಬಾಹ್ಯಾಕಾಶ ನಿಲ್ದಾಣದ ಅಭಿವೃದ್ಧಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಚೀನಾದ ಮೂವರು ಗಗನಯಾತ್ರಿಗಳು ಸುರಕ್ಷಿತವಾಗಿ ಭೂಮಿಗೆ ಮರಳಿರುವುದಾಗಿ ಚೀನಾದ ಮಾನವ ಸಹಿತ ಬಾಹ್ಯಾಕಾಶ ಏಜೆನ್ಸಿ(ಸಿಎಂಸಿಎ) ಮಾಹಿತಿ ನೀಡಿದೆ. ಅಂತರಿಕ್ಷದಲ್ಲಿ 192 ದಿನಗಳನ್ನು ಕಳೆದ ಬಳಿಕ ಗಗನ ಯಾತ್ರಿಗಳಾದ ಯೆ ಗ್ವಾಂಗ್ಫು, ಲಿ ಕಾಂಗ್ ಮತ್ತು ಲಿ ಗ್ವಾಂಗ್ಸುರನ್ನು ಕರೆತಂದ ಶೆಂಝೌ-18 ಬಾಹ್ಯಾಕಾಶ ನೌಕೆಯು ಉತ್ತರ ಚೀನಾದ ಇನ್ನರ್ ಮಂಗೋಲಿಯಾ ಸ್ವಾಯತ್ತ ಪ್ರದೇಶದಲ್ಲಿನ ಡಾಂಗ್ಫೆಂಗ್ ಕೇಂದ್ರದಲ್ಲಿ ಸೋಮವಾರ ಬೆಳಿಗ್ಗೆ 1:24 ಗಂಟೆಗೆ ಸುರಕ್ಷಿತವಾಗಿ ಭೂಮಿಯನ್ನು ತಲುಪಿದರು. ಮೂವರೂ ಗಗನಯಾತ್ರಿಗಳು ಆರೋಗ್ಯವಾಗಿದ್ದಾರೆ ಎಂದು ಸಿಎಂಎಸ್‌ಎ ಹೇಳಿದೆ. ಎಪ್ರಿಲ್ನಲ್ಲಿ ಶೆಂಝೌ-18 ಗಗನ ನೌಕೆ ಬಾಹ್ಯಾಕಾಶಕ್ಕೆ ಹಾರಿತ್ತು. ಈ ಕಾರ್ಯಕ್ರಮದ ಸಂದರ್ಭ ಗಗನಯಾತ್ರಿಗಳು ವೈಜ್ಞಾನಿಕ ಪ್ರಯೋಗದ ಕ್ಯಾಬಿನೆಟ್ಗಳು ಮತ್ತು ಇತರ ಸಾಧನಗಳನ್ನು ಬಳಸಿ ಬಾಹ್ಯಾಕಾಶ ಜೀವ ವಿಜ್ಞಾನ, ಬಾಹ್ಯಾಕಾಶ ವಸ್ತುವಿಜ್ಞಾನ, ಬಾಹ್ಯಾಕಾಶ ಔಷಧ, ಬಾಹ್ಯಾಕಾಶ ತಂತ್ರಜ್ಞಾನ, ಬಾಹ್ಯಾಕಾಶದಲ್ಲಿನ ಗುರುತ್ವಾಕರ್ಷಣೆಯ ಪರಿಸ್ಥಿತಿಗಳ ಕ್ಷೇತ್ರದಲ್ಲಿ ಹಲವು ಪ್ರಯೋಗಗಳನ್ನು ನಡೆಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಕ್ಸಿನ್ಹುವಾ ಸುದ್ದಿಸಂಸ್ಥೆ…