ಕಲಬುರ್ಗಿ:- ಗ್ರಾಮೀಣ ಭಾಗದಲ್ಲಿ ಇತ್ತೀಚೆಗೆ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಂತೆ ಕಲುಷಿತ ನೀರು ಕುಡಿದು ಮಗು ದುರ್ಮರಣ ಹೊಂದಿದ್ದು, ಹಲವರು ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ಸೇಡಂ ತಾಲ್ಲೂಕಿನ ಹೂಡಾ ಗ್ರಾಮದಲ್ಲಿ ಜರುಗಿದೆ. ಮೃತ ಬಾಲಕಿಯನ್ನು ಮಮತಾ ಹಣಮಂತ ಜೋಗುರ ಎಂದು ಗುರುತಿಸಲಾಗಿದೆ. ಹೂಡಾ ಗ್ರಾಮಕ್ಕೆ ಪೂರೈಕೆಯಾದ ನೀರು ಕುಡಿದು ಅಸ್ವಸ್ಥರಾಗಿ ಅನೇಕರು ವಾಂತಿ ಬೇಧಿಯಿಂದ ಬಳಲುತ್ತಿದ್ದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಲಕ್ಷ್ಮೀಬಾಯಿ, ಐವರು ಮಕ್ಕಳು ಸೇರಿ ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಸ್ವಸ್ಥರು ಮಳಖೇಡ ಸರ್ಕಾರಿ ಆಸ್ಪತ್ರೆ ಮತ್ತು ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Author: Prajatv Kannada
ಧಾರವಾಡ: ತಾಲೂಕಿನ ನರೇಂದ್ರ ಗ್ರಾಮದಲ್ಲಿ ನಾಪತ್ತೆಯಾಗಿದ್ದ ಬಾಲಕನ ಶವ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಜರುಗಿದೆ. ಮೃತ ಬಾಲಕನನ್ನು 12 ವರ್ಷದ ಮೈಲಾರ ಹುಲಮನಿ ಎಂದು ಗುರುತಿಸಲಾಗಿದೆ. ಮಂಗಳವಾರ ಮೈಲಾರ ಮನೆಯಿಂದ ಬಾಲಕ ನಾಪತ್ತೆಯಾಗಿದ್ದ. ಆತನಿಗಾಗಿ ಹುಡುಕಾಟ ಸಹ ನಡೆಸಲಾಗಿತ್ತು. ಆದರೆ, ನಿನ್ನೆ ಬೆಳಗಿನಜಾವ ಬಾಲಕ ಮೈಲಾರ, ನರೇಂದ್ರ ಗ್ರಾಮದ ದ್ಯಾಮಡ್ಡಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಬಳಿಕ ಬಾಲಕನ ಶವವನ್ನು ಹೊರತೆಗೆದಿದ್ದಾರೆ.
ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಮಂಡ್ಯ, ಚಿಕ್ಕಮಗಳೂರು, ಚಿತ್ರದುರ್ಗ, ಉತ್ತರ ಕನ್ನಡ, ಧಾರವಾಡ, ಬೀದರ್, ಮೈಸೂರು, ದಾವಣಗೆರೆ, ಬೆಳಗಾವಿ, ಕಲಬುರಗಿ, ರಾಮನಗರ, ಮಂಡ್ಯ, ಹಾವೇರಿ, ಗದಗ, ಹಾವೇರಿ, ಗದಗ, ಶಿವಮೊಗ್ಗ ಜಿಲ್ಲೆಗಳ ಹಲವೆಡೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಚಾಮರಾಜನಗರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮತ್ತು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು,…
ಬೆಂಗಳೂರು: ದರ್ಶನ್ ಗೆ ಬೆನ್ನುನೋವು ಚಿಕಿತ್ಸೆಗೆ ಅಂತ ಮಧ್ಯಂತರ ಜಾಮೀನು ಸಿಕ್ಕಿದೆ. ಆದ್ರೂ ದರ್ಶನ್ ಗೆ ಸಂಕಷ್ಟ ತಪ್ಪಿದ್ದಲ್ಲ. ಸ್ವಲ್ಪ ಯಾಮಾರಿದ್ರೂ ಜಾಮೀನು ರದ್ದಾಗೋ ಚಾನ್ಸ್ ಇದೆ. ಯಾಕಂದ್ರೆ ಪೊಲೀಸರು ದರ್ಶನ್ ನ ಅಷ್ಟೊಂದು ಅಬ್ಸರ್ವ್ ಮಾಡ್ತಾ ಇದ್ದಾರೆ. ಇದ್ರ ಮಧ್ಯೆ ಹೈಕೋರ್ಟ್ ಮಧ್ಯಂತರ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಕದತಟ್ಟಲೂ ಪೊಲೀಸರು ಚರ್ಚೆ ನಡೆಸ್ತಾ ಇದ್ದಾರೆ. ನಟ ದರ್ಶನ್ ಗೆ ಬೆನ್ನುನೋವು ಚಿಕಿತ್ಸೆಗೆ ಅಂತ ಹೈಕೋರ್ಟ್ 45 ದಿನಗಳ ಕಾಲ ಮಧ್ಯಂತರ ಜಾಮೀನು ಕೊಟ್ಟಿದೆ. ಜಾಮೀನು ಕೊಡೋದ್ರ ಜೊತೆಗೆ 8 ಷರತ್ತುಗಳನ್ನು ಹೈಕೋರ್ಟ್ ವಿಧಿಸಿದೆ. ಅದ್ರಲ್ಲಿ ಯಾವುದೇ ಒಂದು ಷರತ್ತುಉಲ್ಲಂಘನೆ ಆದ್ರೂ ನಟ ದರ್ಶನ್ ಗೆ ಸಂಕಷ್ಟ ತಪ್ಪಿದ್ದಲ್ಲ. ಬದಲಾಗಿ ಜಾಮೀನು ರದ್ದಾಗೋ ಸಾಧ್ಯತೆಯೂ ಇರುತ್ತೆ. ಯಾಕಂದ್ರೆ ದರ್ಶನ್ ಹೊರಗಡೆ ಇರೋ ವೇಳೆಯಲ್ಲಿ ಪೊಲೀಸರು ನಟ ದರ್ಶನ್ ಪ್ರತಿ ಹೆಜ್ಜೆಯನ್ನು ಅಬ್ಸರ್ವ್ ಮಾಡ್ತಾನೆ ಇರುತ್ತೆ. ಹೀಗಾಗಿ ನಟ ದರ್ಶನ್ ಇಡೋ ಪ್ರತಿ ಹೆಜ್ಜೆಯೂ ಸೂಕ್ಷ್ಮವಾಗಿ ಇರಬೇಕಾಗುತ್ತೆ. ಒಂದು ವೇಳೆ ಯಾವುದೇ ಒಂದು…
ಇದೇ ಮೊದಲ ಬಾರಿಗೆ ನ್ಯೂಯಾರ್ಕ್ ನಗರದಲ್ಲಿ ದೀಪಾವಳಿ ಹಬ್ಬಕ್ಕೆ ಅಧಿಕೃತ ರಜೆ ಘೋಷಣೆ ಮಾಡುವ ಮೂಲಕ ಐತಿಹಾಸ ನಿರ್ಮಿಸಲಾಗಿದೆ. ನ್ಯೂಯಾರ್ಕ್ ನಗರದಲ್ಲಿ 1.1 ಮಿಲಿಯನ್ ವಿದ್ಯಾರ್ಥಿಗಳು ಈ ಬೆಳಕಿನ ಹಬ್ಬದ ಆಚರಣೆ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯೂಯಾರ್ಕ್ನ ಸಾರ್ವಜನಿಕ ಶಾಲೆಗಳಲ್ಲಿ ದೀಪಾವಳಿಗೆ ರಜೆ ಘೋಷಣೆ ಮಾಡುವ ಸಂಬಂದ ಕಳೆದ ವರ್ಷ ಗವರ್ನರ್ ಕ್ಯಾತಿ ಹೊಚುಲ್ ಶಾಸನಕ್ಕೆ ಸಹಿ ಹಾಕಿದ್ದರು. ಇದು ಈ ವರ್ಷದಿಂದ ಜಾರಿಯಾಗಿದ್ದು, ದೀಪಾವಳಿ ಹಿನ್ನೆಲೆ ನವೆಂಬರ್ 1 ಶಾಲೆಗಳಿಗೆ ರಜೆ ನೀಡಲಾಗಿದೆ. ನ್ಯೂಯಾರ್ಕ್ ನಗರದ ಮೇಯರ್ ಕಚೇರಿಯ ಡೆಪ್ಯುಟಿ ಕಮಿಷನರ್ ದಿಲೀಪ್ ಚೌಹಾಣ್ ಮಾತನಾಡಿ, ನ್ಯೂಯಾರ್ಕ್ ನಗರದಲ್ಲಿ ಮೊದಲ ಬಾರಿಗೆ ದೀಪಾವಳಿ ದಿನದಂದು ಅಧಿಕೃತವಾಗಿ ಶಾಲೆಗಳಿಗೆ ರಜೆ ನೀಡಲಾಗಿದೆ. ಇದು ನಮ್ಮ ನಗರದ ವೈವಿಧ್ಯತೆ ಮತ್ತು ನಮ್ಮ ಸಮುದಾಯ ಮತ್ತು ನಾಯಕರ ದಣಿವರಿಯದ ಪ್ರಯತ್ನಗಳಿಂದಾಗಿ ಹಬ್ಬವನ್ನು ಆಚರಿಸುತ್ತಿರುವುದು ಒಂದು ಮೈಲಿಗಲ್ಲಾಗಿದೆ. 1.1 ಮಿಲಿಯನ್ ವಿದ್ಯಾರ್ಥಿಗಳು ಈ ಹಬ್ಬವನ್ನು ಸಂಭ್ರಮಿಸಲಿದ್ದಾರೆ. ದೀಪಾವಳಿಯು ಏಕತೆಯ ಸಂಕೇತವಾಗಿದ್ದು, ಕತ್ತಲೆಯ ಮೇಲೆ ಬೆಳಕು ಮತ್ತು…
ಬೆಂಗಳೂರು: ದೇಶದ ಜನತೆಗೆ ನವೆಂಬರ್ ತಿಂಗಳ ಮೊದಲ ದಿನವೇ ಭರ್ಜರಿ ಶಾಕ್ ತಟ್ಟಿದೆ. ಗ್ಯಾಸ್ ಸಿಲಿಂಡರ್ ಬೆಲೆ ಇಂದಿನಿಂದ ಭರ್ಜರಿ ಏರಿಕೆಯಾಗಿದ್ದು, ತೈಲ ಮಾರುಕಟ್ಟೆ ಕಂಪನಿಗಳು ಸಿಲಿಂಡರ್ ಬೆಲೆ ಏರಿಕೆ ಮಾಡಲು ನಿರ್ಧರಿಸಿರುವುದರಿಂದ ಜನರ ಜೇಬಿಗೆ ಕತ್ತರಿ ಬೀಳಲಿದೆ. ಹೌದು ದೇಶಾದ್ಯಂತ ದೀಪಾವಳಿ ಸಂಭ್ರಮ ಮನೆ ಮಾಡಿದೆ. ಆದರೆ ಸದ್ದಿಲ್ಲದೆ ಸತತ 3ನೇ ತಿಂಗಳು ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿದೆ. 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ಇದೀಗ 62 ರೂಪಾಯಿ ಏರಿಕೆ ಮಾಡಲಾಗಿದೆ. ಇದರಿಂದ ವಾಣಿಜ್ಯ ಉದ್ದೇಶಕ್ಕೆ ಬಳಸುವ ಸಿಲಿಂಡರ್ ಬೆಲೆ ದುಬಾರಿಯಾಗಿದೆ. ಶೀಘ್ರದಲ್ಲೇ ಹೊಟೆಲ್ ತಿನಿಸು ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆಯಾಗಿದೆ.14 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬೆಲೆ ಏರಿಕೆ ಮಾಡಿಲ್ಲ. ಬೆಲೆ ಏರಿಕೆ ಬಳಿಕ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 1802 ರೂಪಾಯಿಗೆ ಏರಿಕೆಯಾಗಿದೆ. ಸೆಪ್ಟೆಂಬರ್, ಅಕ್ಟೋಬರ್ ಇದೀಗ ನವೆಂಬರ್ ಸತತ ಮೂರು ತಿಂಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ…
ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಇನ್ನೂ ಐದು ದಿನಗಳು ಮಾತ್ರವೇ ಭಾಕಿ ಇದೆ. ಟ್ರಂಪ್ ಹಾಗೂ ಕಮಲಾ ನಡುವೆ ತೀವ್ರ ಪೈಪೋಟಿ ನಡೆಯುತ್ತಿದ್ದು ಇಬ್ಬರು ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ವಿಸ್ಕಾನ್ಸಿನ್‌ನಲ್ಲಿ ಇಬ್ಬರೂ ಬಿರುಸಿನ ರ್ಯಾಲಿಯಲ್ಲಿ ನಡೆಸಿದ್ದಾರೆ. ಇಬ್ಬರ ನಡುವೆ ರಾಜಕೀಯ ವಾಕ್ಸಮರವೂ ಜೋರಾಗಿದ್ದು ಮತದಾರರು ಯಾರ ಪರ ಒಲವು ತೋರಿಸುತ್ತಾರೆ ಎಂಬ ಕುತೂಹಲ ಶುರವಾಗಿದೆ. ಚುನಾವಣೆ ನವೆಂಬರ್ 5ರಂದು ನಡೆಯಲಿದೆ. ಬುಧವಾರದ ವೇಳೆಗೆ ಸುಮಾರು 6 ಕೋಟಿ ಮತದಾರರು ಇ-ಮೇಲ್ ಮೂಲಕ ಅಥವಾ ನೇರ ಮತದಾನದ ಮೂಲಕ ಮತ ಚಲಾವಣೆ ಮಾಡಿದ್ದಾರೆ. ಏಕಕಾಲದಲ್ಲಿ ಚುನಾವಣಾ ಪ್ರಚಾರ ಮತ್ತು ಮತದಾನ ಪ್ರಕ್ರಿಯೆ ನಡೆಯುವುದು ಅಮೆರಿಕ ಪ್ರಜಾಪ್ರಭುತ್ವದ ವೈಶಿಷ್ಟ್ಯವೆನಿಸಿದೆ. ಶ್ವೇತಭವನದ ಗದ್ದುಗೆ ಏರಲು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮತ್ತು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಡುವೆ ನೇರಾನೇರಾ ಹಣಾಹಣಿ ಏರ್ಪಟ್ಟಿರುವುದನ್ನು ಇತ್ತೀಚಿನ ಸಮೀಕ್ಷೆಗಳು ತೆರೆದಿಟ್ಟಿವೆ. ಸಿಎನ್‌ಎನ್ ನಡೆಸಿರುವ ಇತ್ತೀಚಿನ ಸಮೀಕ್ಷೆಗಳು, ಹ್ಯಾರಿಸ್ ಅವರಿಗೆ ಮಿಷಿಗನ್ ಮತ್ತು ವಿಸ್ಕಾನ್ಸಿನ್‌ನಲ್ಲಿ ಪರಿಸ್ಥಿತಿ ಕೊಂಚ ಅನುಕೂಲಕರವಾಗಿದೆ. ಆದರೆ, ಪೆನ್ಸಿಲ್ವೇನಿಯಾದಲ್ಲಿ…
ಪಾಕಿಸ್ತಾನದ ಭದ್ರತಾ ಪಡೆಗಳು ಬನ್ನು ಜಿಲ್ಲೆಯಲ್ಲಿ ಗುಪ್ತಚರ ಕಾರ್ಯಚರಣೆ ನಡೆಸಿದ್ದು, ಎಂಟು ಉಗ್ರರನ್ನು ಹತ್ಯೆಗೈದಿದೆ ಎಂದು ಸೇನೆಯ ಮಾಧ್ಯಮ ವಿಭಾಗ ಐಎಸ್‌ಪಿಆರ್ ತಿಳಿಸಿದೆ. ಉಗ್ರರ ಸುಳಿವಿನ ಆಧಾರದ ಮೇಲೆ ಬನ್ನು ಜಿಲ್ಲೆಯ ಬಕಾ ಖೇಲ್ ಪ್ರದೇಶದಲ್ಲಿ ಕಾರ್ಯಚರಣೆಯು ನಡೆದಿದ್ದು, ಈ ಕಾರ್ಯಚರಣೆಯಲ್ಲಿ ಎಂಟು ಉಗ್ರರು ಮೃತಪಟ್ಟಿದ್ದು, ಏಳು ಜನರು ಗಾಯಗೊಂಡಿದ್ದಾರೆ ಎಂದು ಐಎಸ್‌ಪಿಆರ್ ತಿಳಿಸಿದೆ. ಕಾರ್ಯಚರಣೆಯಲ್ಲಿ ಭದ್ರತಾ ಪಡೆಯನ್ನು ಮುನ್ನಡೆಸುತ್ತಿದ್ದ ಮೇಜರ್ ಅತೀಫ್ ಖಲೀಲ್ ಮತ್ತು ಇಬ್ಬರು ಮೃತಪಟ್ಟಿದ್ದಾರೆ ಎಂದು ಐಎಸ್‌ಆರ್ ಹೇಳಿಕೆ ತಿಳಿಸಿದೆ. ಈ ಕಾರ್ಯಚರಣೆಯಲ್ಲಿ ಸ್ಥಳೀಯ ಉಗ್ರಗಾಮಿ ಕಮಾಂಡರ್ ಮೃತಪಟ್ಟಿದ್ದಾನೆ ಎಂದು ಮಾಧ್ಯಮಗಳು ವರದಿಯಲ್ಲಿ ಉಲ್ಲೇಖಿಸಿವೆ.
ಕಳೆದ ಕೆಲ ದಿನಗಳಿಂದ ಸ್ಪೇನ್ ನಲ್ಲಿ ಸುರಿಯುತ್ತಿರುವ ಧಾರಾಕಾರಕ ಮಳೆ ಮುಂದುವರೆದಿದೆ. ಭೀಕರ ಪ್ರವಾಹದಲ್ಲಿ ಕನಿಷ್ಠ 158 ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಧಾರಾಕಾರ ಮಳೆ ಮತ್ತು ಪ್ರವಾಹದಿಂದ ತತ್ತರಿಸಿರುವ ಪೂರ್ವ ಸ್ಪೇನ್‍ನ ವಲೆನ್ಸಿಯಾ ಪ್ರಾಂತದಲ್ಲಿ ಹಲವು ಕಟ್ಟಡಗಳು, ಸೇತುವೆಗಳು ಮತ್ತು ಕಾರುಗಳು ನೆರೆನೀರಲ್ಲಿ ಕೊಚ್ಚಿಹೋಗಿವೆ. ಮಣ್ಣಿನ ಕಟ್ಟಡಗಳ ಅವಶೇಷಗಳಡಿ ಸಿಲುಕಿರುವವರ ಶೋಧಕ್ಕಾಗಿ ರಕ್ಷಣ ಸಿಬ್ಬಂದಿ ಶೋಧ ನಡೆಸುತ್ತಿದ್ದಾರೆ. ಸ್ಪೇನ್ನಲ್ಲಿ ಈ ಶತಮಾನದಲ್ಲಿ ಸಂಭವಿಸಿದ ಭೀಕರ ದುರಂತ ಇದಾಗಿದ್ದು, ವ್ಯಾಪಕ ಹಾನಿಯು ಚಂಡಮಾರುತ ಅಥವಾ ಸುನಾಮಿಯಂತಹ ಪರಿಣಾಮವನ್ನು ನೆನಪಿಸುತ್ತದೆ. ನೂರಾರು ಕಾರುಗಳು ಮಣ್ಣಿನಡಿ ಸಿಲುಕಿದ್ದು, ಅದರೊಳಗೆ ಸಿಲುಕಿರುವ ಮೃತದೇಹಗಳನ್ನು ಹೊರತೆಗೆಯಲಾಗುತ್ತಿದೆ. ನೂರಾರು ವಾಹನಗಳು ನೀರಿನಲ್ಲಿ ಕೊಚ್ಚಿ ಹೋಗಿದ್ದು, ದೊಡ್ಡ ದೊಡ್ಡ ಮರಗಳು ಸಹ ಬೇರು ಸಹಿತ ಬುಡಮೇಲಾಗಿವೆ ಮತ್ತು ವಿದ್ಯುತ್ ಕಂಬಗಳು ಧರೆಗುರುಳಿವೆ. “ದುರದೃಷ್ಟವಶಾತ್, ಕೆಲವು ವಾಹನಗಳಲ್ಲಿ ಮೃತದೇಹಗಳಿವೆ” ಎಂದು ಸ್ಪೇನ್‌ನ ಸಾರಿಗೆ ಸಚಿವ ಆಸ್ಕರ್ ಪುಯೆಂಟೆ ಅವರು ಹೇಳಿದ್ದಾರೆ. ಭಾರಿ…
ಮದುವೆಗೆ ವಯಸ್ಸಿನ ಹಂಗಿಲ್ಲ ಅನ್ನೋದು ಇತ್ತೀಚೆಗೆ ಮತ್ತೆ ಮತ್ತೆ ಸಾಭೀತಾಗುತ್ತಿದೆ. ಇತ್ತೀಚೆಗಷ್ಟೇ ವಯಸ್ಸಾದ ಮತ್ತೊಬ್ಬ ನಟ ಮದುವೆಯಾಗಿ ಸುದ್ದಿಯಾಗಿದ್ದಾರೆ. ಮಲಯಾಳಂನ ಜನಪ್ರಿಯ ಕಿರುತೆರೆ ನಟ ಕ್ರಿಸ್ ವೇಣುಗೋಪಾಲ್ (49) ಇತ್ತೀಚೆಗೆ ಕಿರುತೆರೆ ನಟಿ ದಿವ್ಯಾ ಶ್ರೀಧರ್ ಅವರನ್ನು ವಿವಾಹವಾಗಿದ್ದು ಇವರ ಮದುವೆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಕ್ಟೋಬರ್ 30 ರಂದು ಕ್ರಿಸ್ ವೇಣುಗೋಪಾಲ್ ಹಾಗೂ ದಿವ್ಯಾ ಶ್ರೀಧರ್ ಹಸೆಮಣೆ ಏರಿದ್ದಾರೆ. ಇಳಿವಯಸ್ಸಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಜೋಡಿಗೆ ಅಭಿಮಾನಿಗಳು ಅಭಿನಂದನೆಗಳನ್ನು ತಿಳಿಸಿದ್ದಾರೆ. ಜನಪ್ರಿಯ ಮಲಯಾಳಂ ಧಾರಾವಾಹಿ “ಪಥರಮಟ್ಟು” ಸೆಟ್‌ನಲ್ಲಿ ಭೇಟಿಯಾದ ವೇಣುಗೋಪಾಲ್ ಹಾಗೂ ದಿವ್ಯಾ ನಡುವೆ ಮೊದಲು ಸ್ನೇಹ ಶುರುವಾಗಿದೆ. ಆ ಬಳಿಕ ಇಬ್ಬರ ನಡುವೆ ಆತ್ಮೀಯತೆ ಹೆಚ್ಚಾಗಿ ಪರಸ್ಪರ ಪ್ರೀತಿಸಲು ಆರಂಭವಿಸಿದ್ದಾರೆ. ಇದೀಗ ಮನೆಯವರ ಒಪ್ಪಿಗೆ ಪಡೆದು ಇಬ್ಬರು ಸತಿ ಪತಿಗಳಾಗಿದ್ದಾರೆ. ತಮ್ಮ ಪ್ರೀತಿಪಾತ್ರರ ಸಮ್ಮುಖದಲ್ಲಿ ಗುರುವಾಯೂರು ದೇವಸ್ಥಾನದಲ್ಲಿ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಲಯಾಳಂ ಮತ್ತು ತಮಿಳು ಧಾರಾವಾಹಿಗಳಲ್ಲಿ ನೆಗೆಟಿವ್ ಶೇಡ್ ಇರುವ ಪಾತ್ರಗಳಲ್ಲಿ…