Author: Prajatv Kannada

ಸ್ಯಾಂಡಲ್‌ವುಡ್ ನಟ ಶ್ರೀಮುರಳಿ ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದುಕೊಂಡು ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕ್ಷೇತ್ರದ ವತಿಯಿಂದ ಶ್ರೀಮುರಳಿಗೆ ವೆಂಕಟರಮಣ ಆಸ್ರಣ್ಣ ಅವರು ದೇವರ ಶೇಷ ವಸ್ತ್ರ ಪ್ರಸಾದ ನೀಡಿ ಗೌರವಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಟ, ನವರಾತ್ರಿ ಶುಭ ಸಂದರ್ಭದಲ್ಲಿ ಕರಾವಳಿಯ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದೇನೆ. ನಾನು ಬಾಲ್ಯದಲ್ಲಿ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿದ್ದೇನೆ. ಇದೀಗ ಮತ್ತೆ ಇಲ್ಲಿಗೆ ಬರುವ ಅವಕಾಶ ಸಿಕ್ಕಿದೆ. ಸದ್ಯದಲ್ಲೇ ನಾನು ನಟಿಸಿರುವ ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿದೆ ಎಂದರು. ಕರಾವಳಿಯ ನಟರು ಕನ್ನಡ ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ಈ ಬಗ್ಗೆ ಖುಷಿಯಿದೆ, ತುಳು ಚಿತ್ರರಂಗ ಬೆಳೆಯುತ್ತಿದೆ. ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು ಕನ್ನಡ ಚಿತ್ರರಂಗದಂತೆ ತುಳು ಚಿತ್ರರಂಗವು ಮುಂದುವರಿಯಬೇಕು ಎಂದು ಶ್ರೀಮುರಳಿ ಹೇಳಿದರು.

Read More

ವಿಜಯಪುರ: ವಿವಿಧ ಬೇಡಿಕೆ ಇಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯತಿ ಪಿಡಿಒ ಸೇರಿದಂತೆ ಸಿಬ್ಬಂದಿಗಳು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಸಚಿವ ಶಿವಾನಂದ ಪಾಟೀಲ ಹಾಗೂ ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರು ಭೇಟಿ ನೀಡಿ ಪ್ರತಿಭಟನಾ ನಿರತರ ಬೇಡಿಕೆ ಆಲಿಸಿದರು. https://youtu.be/SslVc7mNBOQ?si=5iOzqSNmDWjogGq2 ವಿಜಯಪುರ ನಗರದ ಜಿಲ್ಲಾ ಪಂಚಾಯತಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ಗ್ರಾಮ ಪಂಚಾಯತಿ ಸಿಬ್ಬಂದಿಗಳು ನಡೆಸುತ್ತಿದ್ದಾರೆ. ಇದೇ ವೇಳೆ ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ ಸಮಸ್ಯೆಗಳು ಜೊತೆಗೆ ಸಾಮರಸ್ಯದಿಂದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ನಿಮ್ಮಲ್ಲಿ ಸಾಕಷ್ಟು ಬೇಡಿಕೆಗಳಿವೆ ಇವುಗಳನ್ನು ಸಾಮರಸ್ಯದಿಂದ ಬಗೆ ಹರಿಸಿಕೊಳ್ಳಬೇಕು. ಈಗ ಸರ್ಕಾರ ಪಂಚ ಗ್ಯಾರಂಟಿ ತಂದ ಪ್ರಯುಕ್ತ ಅದರಲ್ಲಿ ಜಾಸ್ತಿ ಹಣ ಹೋಗಿದೆ, ಅದರಿಂದ 4 ಕೋಟಿ 20 ಲಕ್ಷ ಜನರಿಗೆ ಸಹಾಯವಾಗುತ್ತಿದೆ. ಇದರ ಮದ್ಯೆ ತಮ್ಮ ಬೇಡಿಕೆ ಕೂಡಾ ಅನಿವಾರ್ಯ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು. ಇನ್ನೂ ಇದೇ ವೇಳೆ ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರು ಮಾತನಾಡಿ ನಿಮಗೆ ನೈತಿಕ ಬೆಂಬಲ…

Read More

ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್‌ಗೆ ಬೈಕ್‌ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 25 ವಯಸ್ಸಿನ ಮೋನಿಕಾ ಮೃತ ಮಹಿಳೆ. ಬಿಎಂಟಿಸಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಜೊತೆಗೆ ಮಹಿಳೆ ಬಸ್‌ನ ಬಲಭಾಗಕ್ಕೆ ಬಿದ್ದಿದ್ದಾರೆ. ಪರಿಣಾಮ ಎದುರುಗಡೆಯಿಂದ ಬರುತ್ತಿದ್ದ ಕಾರು ಬಸ್‌ಗೆ ಗುದ್ದಿ ರಸ್ತೆಯಲ್ಲಿ ಬಿದ್ದ ಮಹಿಳೆಯ ಮೇಲೆ ಹರಿದಿದೆ. ಘಟನೆಯಲ್ಲಿ ಬೈಕ್ ನಜ್ಜುಗುಜ್ಜಾಗಿದ್ದು, ಮಹಿಳೆ ಮೃತಪಟ್ಟಿದ್ದಾರೆ ಮೋನಿಕಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಕೆಲಕ್ಕೆ ಹೋಗುವಾಗ ಘಟನೆ ಸಂಭವಿಸಿದೆ. ಬಿಎಂಟಿಸಿ ಬಸ್ ಉಲ್ಲಾಳ ಉಪನಗರ ಬಸ್ ನಿಲ್ದಾಣದಿಂದ ಮೆಜೆಸ್ಟಿಕ್ ಕಡೆ ಹೋಗುವಾಗ ಉಲ್ಲಾಳ ಕೆರೆಯ ಬಳಿ ಅಪಘಾತ ಸಂಭವಿಸಿದೆ. ಸಿಂಗಲ್ ರೋಡ್‌ನಲ್ಲಿ ಆತುರವಾಗಿ ಬಂದ ಮಹಿಳೆ ಎದುರುಗಡೆಯಿಂದ ಬರುತ್ತಿದ್ದ ನಮ್ಮ ಬಸ್‌ ಮುಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾರೆ. ರಸ್ತೆ ಮೇಲೆ ಬಿದ್ದಾಗ ಎದುರುಗಡೆ ಬರುತ್ತಿದ್ದ ಕಾರು ಹರಿದು ಮಹಿಳೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಮ್ಮದೇನು ತಪ್ಪಿಲ್ಲ ಎಂದ ಚಾಲಕ ಸುರೇಶ್ ಹೇಳಿದ್ದಾರೆ. ಘಟನೆ ಸಂಬಂದ ಮೃತ ಮಹಿಳೆ ಮೋನಿಕಾ ಸಂಬಂಧಿಕರು ಕೊಟ್ಟ…

Read More

ಚಿತ್ರದುರ್ಗ: ಕೆಲವು ಬಾರಿ ಜನರಿಗೆ ಬಿಜೆಪಿ ‌ಮಾತು ಇಂಪಾಗಿ ಕೇಳಿಸುತ್ತದೆ ಜನರು ಬಿಜೆಪಿ‌ ಸುಳ್ಳನ್ನು ಬೇಗ ನಂಬುತ್ತಾರೆ. ಸುಳ್ಳು ಹೇಳುವುದರಲ್ಲಿ ಬಿಜೆಪಿ ಎಕ್ಸಪರ್ಟ್ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ವಿರುದ್ಧ ವಾಗ್ದಾಳಿ‌ ನಡೆಸಿದರು. ಅವರು ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತಾಡಿದರು.ಈ ಬಾರಿಯೂ ಬಿಜೆಪಿಗರ ಮಾತು ಇಂಪಾಗಿ‌ ಕೇಳಿಸಿದೆ. https://youtu.be/lBRLEMeNUbk?si=GMXUSbPBT4pz28zJ ಸಿಎಂ‌ ಸಿದ್ದರಾಮಯ್ಯ ಐದು ವರ್ಷ ಇರ್ತಾರೆ ಅಂತ ಸತೀಶ್ ಜಾರಕಿಹೊಳಿ ಹೇಳಿದ್ದಾರೆ, ನಾನು ಇರ್ತಾರೆ ಅಂತ ಹೇಳ್ತಿನಿ. ವಿಜಯೇಂದ್ರ ಅವರಿಗೆ ಮಲಗಿದ್ದಾಗ ಕನಸು ಬೀಳುತ್ತದೆ. ಅದನ್ನೆ ನಿಜ ಎಂದು ಎಲ್ರಿಗು ಹೇಳಿಕೊಂಡು ಬರ್ತಾರೆ. ಜಾತಿ ಗಣತಿ ಬಹಳ ದಿನಗಳಿಂದ ಬಾಕಿ ಇತ್ತು. ಯಾವಾತ್ತಿದ್ರು ಅದು ಬರಬೇಕಿತ್ತು. ಇನ್ನು ಮುಡಾ ಕೇಸ್ ಅದರ ಪಾಡಿಗೆ ಅದು ನಡೆಯುತ್ತದೆ. ಬಿಜೆಪಿ ಜೆಡಿಎಸ್ ನ ನೂರಾರು ಹಗರಣಗಳಿವೆ. ಅದರ ಬಗ್ಗೆ ಮಾತಾಡೋಣ ಆಮೇಲೆ ಇದರ ಬಗ್ಗೆ ಮಾತಾಡೋಣ, ಜಾತಿ ಗಣತಿಯನ್ನು ಯಾರು ಓದಿಲ್ಲ. ವರದಿ ಬಂದ ಮೇಲೆ ಏನಿದೆ ಎಂದು ಗೊತ್ತಾಗುತ್ತದೆ. ಒಳ್ಳೆದು ಇದ್ರೆ ಸರಿ, ತಪ್ಪಿದ್ರೆ…

Read More

ಬಳ್ಳಾರಿ: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಬಂಧನವಾಗಿ ನಾಲ್ಕು ತಿಂಗಳಾಗುತ್ತಾ ಬಂದಿದೆ. ಜೂನ್ 11 ರಂದು ದರ್ಶನ್, ಪವಿತ್ರಾ ಮತ್ತು ಇತರೆ ಆರೋಪಿಗಳನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಇನ್ನೂ ನಟ ದರ್ಶನ್‌ಗೆ ತೀವ್ರ ಬೆನ್ನು ನೋವು ಕಾಡ್ತಿದೆ. ಬೆನ್ನು ನೋವಿನ ಬಳಲಿಕೆಯಿಂದ ಬೆಂಡಾಗಿರುವ ಆರೋಪಿ ದರ್ಶನ್‌ರನ್ನು ಪತ್ನಿ ವಿಜಯಲಕ್ಷ್ಮಿ ಭೇಟಿಯಾಗಿ ಧೈರ್ಯ ತುಂಬಿದ್ದಾರೆ. https://youtu.be/SRVLaq0PmcQ?si=tMEj_khryHSIjgV2 ದಸರಾ ಮುಗಿಯೋದ್ರಲ್ಲಿ ಜಾಮೀನು ಆಗತ್ತದೆ, ತಾಯಿ ಚಾಮುಂಡಿಶ್ವೇರಿ ತಾಯಿಯ ಆಶೀರ್ವಾದ ಇದೆ. ಜೈಲು ಆಧಿಕಾರಿಗಳು, ವೈದ್ಯರು ಹೇಳಿದಂತೆ ಚಿಕಿತ್ಸೆ ಪಡೆದುಕೊಳ್ಳಿ ಎಂದು ಪತಿಗೆ ವಿಜಯಲಕ್ಷ್ಮಿ ಮನವಿ ಮಾಡಿದ್ದಾರೆ. ಇನ್ನೂ ಮಗನ ವಿಚಾರ ಪ್ರಸ್ತಾಪಿಸಿದ ದರ್ಶನ್‌ಗೆ ನಿಮ್ಮ ಬೆನ್ನು ನೋವಿನ ಸಮಸ್ಯೆ ಬಗ್ಗೆ ಪುತ್ರ ಪದೇ ಪದೇ ಕೇಳ್ತಿದ್ದಾನೆ. ನಾನು ಬರುತ್ತೀನಿ ಅಂತ ಹಠ ಮಾಡ್ತಿದ್ದ, ಆದರೆ ಬಿಸಿಲು ಜಾಸ್ತಿ ಇದೆ ಬೇಡ ಅಂತಾ ಹೇಳಿದೆ. ವಕೀಲರು ಜಾಮೀನು ವಿಚಾರವಾಗಿ ಪಾಸಿಟಿವ್ ಆಗಿದ್ದಾರೆ. ಆದಷ್ಟು ಬೇಗ ಜಾಮೀನು ಸಿಗುತ್ತೆ ಧೈರ್ಯವಾಗಿರಿ ಎಂದು ಹೇಳಿದ್ದಾರೆ ಪತ್ನಿ ವಿಜಯಲಕ್ಷ್ಮಿ.…

Read More

ಬೆಂಗಳೂರು: ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಡಾ.ಎಂ.ಎಸ್.ರಾಮಯ್ಯ ಆಸ್ಪತ್ರೆ ಯಲ್ಲಿ ಇತ್ತೀಚೆಗೆ ಬೆಂಕಿ ಅನಾಹುತಕ್ಕೆ ತ್ತುತ್ತಾಗಿ ಮೃತಪಟ್ಟ ಪನಿಕರ್ ಸುಜಯ್ ಅವರ ಕುಟುಂಬಕ್ಕೆ ಮತ್ತು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬಿ.ಎಸ್.ಸುರೇಶ(ಬೈರತಿ) ಅವರು ವೈಯಕ್ತಿಕವಾಗಿ ತಮ್ಮ 10 ಲಕ್ಷ ರೂಪಾಯಿಗಳ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ‌ಮೂಲಕ ಮೃತರ ಕುಟುಂಬದ ಸದಸ್ಯರಿಗೆ ‌ಕೂಡಿಸಿದರು https://youtu.be/WFyheRcp2J4?si=s5CtPBy_0iXqn1Lj ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಶ್ರೀ ಎ.ಎಸ್. ಪೂನ್ನಣ್ಣ, ಕರ್ನಾಟಕ ಬಾಲ ಭವನದ ಅಧ್ಯಕ್ಷರಾದ ಶ್ರೀ ಬಿ.ಆರ್.ನಾಯ್ಡು ಇದೆ ಸಂದರ್ಭದಲ್ಲಿ ಉಪಸ್ಥಿತರಿದ್ದರು

Read More

ಗದಗ: ಕಾಂಗ್ರೆಸ್ ಆಡಳಿತ ಪಕ್ಷದಲ್ಲಿ ಸಾಕಷ್ಟು ಚಟುವಟಿಕೆಗಳು ನಡೆಯುತ್ತಿವೆ. ಕಳೆದ 1 ತಿಂಗಳಿಂದ ಹಿರಿಯ ಸಚಿವರ ಚಟುವಟಿಕೆ ಗಮನಿಸಿದಾಗ, ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರು ಮುಖ್ಯಮಂತ್ರಿಗಳ ಬದಲಾವಣೆ ಅವಸರದಲ್ಲಿದ್ದಾರೆ ಅಂತ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. https://youtu.be/WFyheRcp2J4?si=hKHHSseh1jf0cEz0 ನಗರದ ಸರಾಫ್ ಬಜಾರ್‌ನಲ್ಲಿರುವ ಅಂಬಾಭವಾನಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಿನ ಮುಖ್ಯಮಂತ್ರಿಯನ್ನು ತೆಗೆದರೆ ತಮಗೆ ಅವಕಾಶ ಇದೆ ಎಂದು ಅವರದ್ದೇ ಪಕ್ಷದ ಬಹಳ ಹಿರಿಯ ಸಚಿವರು ಅಂದುಕೊಂಡಿದ್ದಾರೆ. ಮುಂದೆ ನಮ್ಮ ಸರ್ಕಾರ ಬರೋದಿಲ್ಲ ಎಂಬುದು ಅವರಿಗೆ ಗೊತ್ತಿದೆ. ಈ ನಿಟ್ಟಿನಲ್ಲಿ ಅವರು ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಇದರ ಒಟ್ಟು ಪರಿಣಾಮದಿಂದ ರಾಜ್ಯದಲ್ಲಿ ಆಡಳಿತ ಸಂಪೂರ್ಣವಾಗಿ ಸ್ಥಗಿತವಾಗಿದೆ ಎಂದರು. ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಯಾವುದಕ್ಕೂ ಹಣ ಬಿಡುಗಡೆ ಆಗುತ್ತಿಲ್ಲ. ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳು ನಿಂತು ಹೋಗಿವೆ. ಇದರಿಂದ ರಾಜ್ಯ ಇನ್ನಷ್ಟು ಹಿನ್ನಡೆ ಆಗುತ್ತಿದೆ. ಕಳೆದ 2-3 ತಿಂಗಳಿಂದ ಹಗರಣಗಳ ಸುರಿಮಳೆ…

Read More

ವಿಜಯಪುರ: ವಕ್ಫ್ ಆಸ್ತಿ ದೇವರ ಆಸ್ತಿ, ಅದರ ಕಬಳಿಕೆ ಅಥವಾ ಹಗರಣ ಆಗಬಾರದು, ರಕ್ಷಿಸುವ ಕೆಲಸವಾಗಬೇಕು. ಸದ್ಯ ರಾಜ್ಯದಲ್ಲಿರುವ ಒಟ್ಟು 1.12 ಲಕ್ಷ ಎಕರೆ ವಕ್ಫ್ ಆಸ್ತಿಯಲ್ಲಿ 85,000 ಎಕರೆ ಅತಿಕ್ರಮಣವಾಗಿ ಕೇವಲ 23,000 ಎಕರೆ ಮಾತ್ರ ಉಳಿದಿದೆ. https://youtu.be/WFyheRcp2J4?si=eB0vAA1EUwUUIBzA ಆದ್ದರಿಂದ ಪ್ರತಿಯೊಬ್ಬರೂ ವಕ್ಫ್ ಆಸ್ತಿ ಸಂರಕ್ಷಣೆಗೆ ಮುಂದಾಗಬೇಕು ಎಂದು ಸಚಿವ ಜಮೀರ್‌ ಅಹ್ಮದ್‌ ಖಾನ್‌ ಕರೆ ನೀಡಿದರು. ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ವಕ್ಫ್ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಸಹಯೋಗದಲ್ಲಿ ಜಿಲ್ಲೆಯ ಮುತ್ತವಲ್ಲಿಗಳ ಸಮ್ಮೇಳನ ಹಾಗೂ ವಕ್ಫ್ ಅದಾಲತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ ವಕ್ಫ್‌ ಆಸ್ತಿ ಸಂರಕ್ಷಣೆ ಹಾಗೂ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಈವರೆಗೆ ರಾಜ್ಯದಾದ್ಯಂತೆ 10 ಜಿಲ್ಲೆಗಳಲ್ಲಿ ವಕ್ಫ್ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಅದರಂತೆ ಸೋಮವಾರ ವಿಜಯಪುರದಲ್ಲಿ 11ನೇ ಅದಾಲತ್ ನಡೆಯಿತು. ಕಳೆದ 10-15 ವರ್ಷಗಳಿಂದ ಬಾಕಿ ಉಳಿದ ವಕ್ಫ್ ಖಾತೆ ಬದಲಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ…

Read More

ಕಲಘಟಗಿ: ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪ ದಲ್ಲಿ ಅ. 7ರ ಸೋಮವಾರ ಬೆಳಗ್ಗೆ 11ಕ್ಕೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧಿಸ್ಕೃತಿ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೃಹತ್ ಜಾಥಾ ಹಾಗೂ ವ್ಯಸನಮುಕ್ತ ಸಾಧಕರ ಸಮಾವೇಶದ ವೇದಿಕೆ ಕಾರ್ಯಕ್ರಮ ಜರುಗಿತು. https://youtu.be/1-Uoh5jYQEw?si=v54I4cRJXMrbvQHJ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಧಾರವಾಡ ಜಿಲ್ಲೆಯ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹಾಗೂ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿಗಳ ಕಾರ್ಯ ಕ್ಷೇತ್ರದ ಎಲ್ಲ ಸಿಬ್ಬಂದಿ, ಒಕ್ಕೂಟ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರ ಸಹಯೋಗದಲ್ಲಿ ಕಾರ್ಯಕ್ರಮ ಜರುಗಿತು. ಬೆಳಗ್ಗೆ 10ಕ್ಕೆ ಪಟ್ಟಣದ ಯುವಶಕ್ತಿ ಸರ್ಕಲ್‌ನಲ್ಲಿ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಆಗ್ರಹಿಸಲು ಆಯೋಜಿಸಿದ್ದ ಬೃಹತ್ ಜಾಥಾಕ್ಕೆ ಹಿರಿಯ ನ್ಯಾಯಾಧೀಶ ರವೀಂದ್ರ ಹೊನೋಲೆ ಅವರು ಅನೇಕ ಗಣ್ಯರ ಜೊತೆ ಚಾಲನೆ ನೀಡಿದರು. ಜಾಥಾ ಬಾಲ ಮಾರುತಿ ಮಂದಿರದ ಮುಖೇನ ಬೆಂಡಿಗೇರಿ ಓಣಿ ಮಾರ್ಗವಾಗಿ ಬಸವೇಶ್ವರ ಕಲ್ಯಾಣ ಮಂಟಪ ತಲುಪಿತ್ತು.

Read More