ಸಾಕಷ್ಟು ಮಂದಿಗೆ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹೋಗಬೇಕು ಅನ್ನೋ ಆಸೆ ಇರುತ್ತೆ. ಆದರೆ ಕೆಲವರಿಗೆ ಮಾತ್ರ ಇದರ ಸಹವಾಸವೇ ಬೇಡ ಎನ್ನುತ್ತಾರೆ. ಯಾಕಂದ್ರೆ ಮನೆಯ ಹೊರಗೆ ಸಂಪಾದಿಸಿದ ಗೌರವ ಮನೆಯಲ್ಲಿ ಸಿಗಲ್ಲ ಅನ್ನೋದು ಹಲವರ ವಾದ. ಇದೀಗ ಬಿಗ್ ಬಾಸ್ ಮನೆಯಲ್ಲಿ ತಮಗೆ ಅಸಭ್ಯವಾಗಿ ಬೈದರು, ಮನೆಯಲ್ಲಿ ಗೌರವ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಮನೆಯಿಂದ ಹೊರ ಹೋಗಲು ಗೋಲ್ಡ್ ಸುರೇಶ್ ನಿರ್ಧಾರ ಮಾಡಿದ್ದಾರೆ. 50 ದಿನ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿಕೊಟ್ಟಿರುವ ರಜತ್ ಮನೆಗೆ ಬರ್ತಿದ್ದಂಗೆ ಕಿರಿಕ್ ಮಾಡ್ಕೊಂಡಿದ್ದಾರೆ. ಗೋಲ್ಡ್ ಸುರೇಶ್ ಗೆ ‘ವೇಸ್ಟ್ ನನ್ ಮಗ’ ಎಂದು ಬೈಯ್ದಿದ್ದಾರೆ. ಜೊತೆಗೆ ಕೆಲವು ಅವಾಚ್ಯ ಪದಗಳಿಂದಲೂ ನಿಂದಿಸಿದ್ದಾರೆ. ಟಾಸ್ಕ್ ಆಡುವಾಗ ಗೋಲ್ಡ್ ಸುರೇಶ್ ಮತ್ತು ರಜತ್ ನಡುವೆ ಕಿರಿಕ್ ಆಯಿತು. ಇಬ್ಬರೂ ಪರಸ್ಪರ ಬೈಯ್ದುಕೊಂಡರು. ಆದರೆ ರಜತ್ ಅವರ ಮಿತಿ ಮೀರಿ, ಅವಾಚ್ಯ ಪದಗಳನ್ನು ಬಳಸಿದರು. ಇದರಿಂದ ಕೋಪಗೊಂಡ ಸುರೇಶ್ಕ್ಯಾಮೆರಾ ಎದುರು ಬಂದು ಬಿಗ್ ಬಾಸ್ಗೆ ದೂರು ನೀಡಿದರು. ‘ಇಂಥ…
Author: Prajatv Kannada
ನೆರೆಯ ಪಾಕಿಸ್ತಾನವು ಪದೇ ಪದೇ ನಾಚಿಕೆಗೇಡಿಕ ಕೆಲಸವನ್ನು ಮಾಡುವ ಮೂಲಕ ಇತರ ದೇಶಗಳಿಂದ ಛೀಮಾರಿ ಹಾಕಿಸಿಕೊಳ್ಳುತ್ತಿದೆ. ಇದೀಗ ತನ್ನ ದೇಶಕ್ಕಾಗಿ ಪ್ರಾಣ ಕೊಟ್ಟ ಸೈನಿಕರ ಮೃತದೇಹವನ್ನು ಕತ್ತೆಗಳ ಮೇಲೆ ಹೊತ್ತೊಯ್ಯುವ ಮೂಲಕ ಮತ್ತೆ ಟೀಕೆಗೆ ಗುರಿಯಾಗಿದೆ. ಭಯೋತ್ಪಾದಕರ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ ಯೋಧರಿಗೆ ಗೌರವಯುತ ಬೀಳ್ಕೊಡುಗೆ ನೀಡುವುದು ಸಾಮಾನ್ಯ. ಆದರೆ ಪಾಕಿಸ್ತಾನ ಸರ್ಕಾರಕ್ಕೆ ಮಾತ್ರ ಮೃತದೇಹಗಳನ್ನು ಸರಿಯಾಗಿ ತೆಗೆದುಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ. ಪಾಕಿಸ್ತಾನದ ಆಡಳಿತವು ಖೈಬರ್ ಪಖ್ತುಂಖ್ವಾದಲ್ಲಿ ಸೈನಿಕರ ದೇಹಗಳನ್ನು ಕತ್ತೆಗಳ ಮೇಲೆ ಸಾಗಿಸಿದ್ದು ಈ ವಿಡಿಯೋ ವೈರಲ್ ಆಗಿದೆ. ಪಾಕಿಸ್ತಾನದ ಬಲೂಚಿಸ್ತಾನ ಮತ್ತು ಖೈಬರ್ ಪಖ್ತುಂಖ್ವಾ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಲ್ಲಿ ಪಾಕಿಸ್ತಾನ ಸೇನೆಯ 100ಕ್ಕೂ ಹೆಚ್ಚು ಸೈನಿಕರು ಹತರಾಗಿದ್ದಾರೆ. ಭಯೋತ್ಪಾದಕರ ವಿರುದ್ಧ ಹೋರಾಡುವಾಗ ಈ ಸೈನಿಕರು ಸಾವನ್ನಪ್ಪಿದ್ದು ಪಾಕಿಸ್ತಾನಿ ಸೇನೆಯು ಈ ಎಲ್ಲಾ ಅಂಕಿಅಂಶಗಳನ್ನು ಮರೆಮಾಡಲು ಪ್ರಯತ್ನಿಸುತ್ತಿದೆ. ಈ ಬಾರಿಯೂ ಪಾಕಿಸ್ತಾನಿ ಸೇನೆ ಅದನ್ನೆ ಮಾಡಲು ಮುಂದಾಗಿತ್ತು. ಆದರೆ ವಿಡಿಯೋ ವೈರಲ್ ನಿಂದಾಗಿ ವಿಷಯ ಜಗಜ್ಜಾಹಿರಾಗಿದೆ. ಭಯೋತ್ಪಾದಕರು ಪಾಕಿಸ್ತಾನ…
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ಬಂಧನದ ವಾರೆಂಟ್ ಜಾರಿಗೊಳಿಸಿದೆ. ಗಾಜಾದಲ್ಲಿನ ಯುದ್ಧ ಹಾಗೂ 2023 ರ ಅಕ್ಟೋಬರ್ ನಲ್ಲಿ ನಡೆದ ಘರ್ಷಣೆಗಳಲ್ಲಿ ಯುದ್ಧಾಪರಾಧ ಹಾಗೂ ಮಾನವಕುಲ ಮೇಲೆ ಅಪರಾಧ ನಡೆದಿದೆ ಎಂಬ ಆರೋಪದ ಮೇಲೆ ನೆತನ್ಯಾಹು ಹಾಗೂ ಅವರ ಮಾಜಿ ರಕ್ಷಣಾ ಸಚಿವ ಗ್ಯಾಲಂಟ್ ಮತ್ತು ಹಮಾಸ್ ಅಧಿಕಾರಿಗಳ ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ಬಂಧನ ವಾರೆಂಟ್ ಹೊರಡಿಸಿದೆ. ಈ ನಿರ್ಧಾರ ನೆತನ್ಯಾಹು ಮತ್ತು ಇತರರನ್ನು ಅಂತಾರಾಷ್ಟ್ರೀಯವಾಗಿ ಬೇಕಾಗಿರುವ ಶಂಕಿತರನ್ನಾಗಿ ಪರಿವರ್ತಿಸುತ್ತದೆ, ಅವರನ್ನು ಮತ್ತಷ್ಟು ಪ್ರತ್ಯೇಕಿಸುವ ಸಾಧ್ಯತೆಯಿದೆ ಮತ್ತು 13 ತಿಂಗಳ ಸಂಘರ್ಷವನ್ನು ಕೊನೆಗೊಳಿಸಲು ಕದನ ವಿರಾಮದ ಮಾತುಕತೆಯ ಪ್ರಯತ್ನಗಳನ್ನು ಸಂಕೀರ್ಣಗೊಳಿಸುತ್ತದೆ. ಆದರೆ ಇಸ್ರೇಲ್ ಮತ್ತು ಅದರ ಪ್ರಮುಖ ಮಿತ್ರರಾಷ್ಟ್ರವಾದ ಯುನೈಟೆಡ್ ಸ್ಟೇಟ್ಸ್ ನ್ಯಾಯಾಲಯದ ಸದಸ್ಯರಲ್ಲದ ಕಾರಣ ಬಂಧನ ವಾರೆಂಟ್ ನ ಪ್ರಾಯೋಗಿಕ ಪರಿಣಾಮಗಳು ಸೀಮಿತವಾಗಬಹುದು ಎಂದು ಹೇಳಲಾಗುತ್ತಿದೆ. ನೆತನ್ಯಾಹು ಮತ್ತು ಇತರ ಇಸ್ರೇಲಿ ನಾಯಕರು ICC ಮುಖ್ಯ ಪ್ರಾಸಿಕ್ಯೂಟರ್ ಕರೀಮ್ ಖಾನ್ ಅವರ ವಾರಂಟ್‌ಗಳ…
ರೇಣುಕಾಸ್ವಾಮಿ ಕೊಲೆ ಕೇಸ್ ನ ಎ2 ಆರೋಪಿ ದರ್ಶನ್ ಗೆ ಸದ್ಯ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ. ಆರು ವಾರಗಳ ಕಾಲ ಜಾಮೀನು ನೀಡಲಾಗಿದ್ದು ಈಗಾಗಲೇ 3 ವಾರ ಕಳೆದು ಹೋಗಿದೆ. ಬೆನ್ನು ನೋವಿಂದ ಬಳಲುತ್ತಿರುವ ದರ್ಶನ್, ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ನಿನ್ನೆ ಹೈಕೋರ್ಟ್ ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು ವಿಚಾರಣೆಯನ್ನು ಮತ್ತೆ ಮುಂದಾಡಲಾಗಿದೆ. ಇತ್ತ ದರ್ಶನ್ ಕೇಸ್ ಬಗ್ಗೆ ಮಾತಾಡಿದ ಗೃಹ ಸಚಿವ ಪರಮೇಶ್ವರ್ ದರ್ಶನ್ಗೆ ಬೇಲ್ ಕೊಡಬಾರದು ಎಂದಿದ್ದಾರೆ. ನಟ ದರ್ಶನ್ ಕೇಸ್ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಜಿ ಪರಮೇಶ್ವರ್, ದರ್ಶನ್ ಅವರು ಚಿಕಿತ್ಸೆ ಪಡೆಯಲೆಂದು ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. 3 ವಾರಗಳ ಕಾಲಾವಕಾಶದಲ್ಲಿ ಚಿಕಿತ್ಸೆ ಪಡೆದು ಮತ್ತೆ ದರ್ಶನ್ ಜೈಲು ಸೇರಬೇಕಾಗುತ್ತದೆ ಎಂದು ಪರಮೇಶ್ವರ್ ಹೇಳಿದ್ರು. ಅದಕ್ಕೂ ಮುನ್ನ ಮತ್ತೆ ದರ್ಶನ್ ಬೇಲ್ ಕೇಳಬಹುದು, ವಿಚಾರಣೆ ನಡೆಯಬಹುದು. ನಾವು ಕೂಡ ದರ್ಶನ್ಗೆ…
ಗಾಝಾ ಪಟ್ಟಿಯ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ರಕ್ಷಣಾ ಕಾರ್ಯಕರ್ತನ ಸಹಿತ ಕನಿಷ್ಠ 15 ಮಂದಿ ಸಾವನ್ನಪ್ಪಿದ್ದು ಇತರ 10 ಮಂದಿ ನಾಪತ್ತೆಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇಸ್ರೇಲ್ ಟ್ಯಾಂಕ್‍ಗಳು ಕಾರ್ಯಾಚರಣೆ ತೀವ್ರಗೊಳಿಸಿದ್ದು ಹಲವು ಮನೆಗಳನ್ನು ಧ್ವಂಸಗೊಳಿಸಿವೆ. ಘಟನೆಯಲ್ಲಿ ಕನಿಷ್ಠ 10 ಮಂದಿ ನಾಪತ್ತೆಯಾಗಿದ್ದಾರೆ. ಜಬಲಿಯಾ ಪ್ರದೇಶದಲ್ಲಿ ಮನೆಯೊಂದರ ಮೇಲೆ ನಡೆದ ಕ್ಷಿಪಣಿ ದಾಳಿಯಲ್ಲಿ 12 ಮಂದಿ ಸಾವನ್ನಪ್ಪಿದ್ದರೆ, ಮನೆಯ ಸಮೀಪದಲ್ಲಿ ಟ್ಯಾಂಕ್ ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಮೃತಪಟ್ಟಿದ್ದಾನೆ. ಗಾಝಾ ನಗರದ ಹೊರವಲಯದಲ್ಲಿರುವ ಸಬ್ರಾದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದ ಫೆಲೆಸ್ತೀನ್‍ನ ನಾಗರಿಕ ತುರ್ತು ಸೇವಾ ತಂಡವನ್ನು ಗುರಿಯಾಗಿಸಿ ನಡೆದ ಕ್ಷಿಪಣಿ ದಾಳಿಯಲ್ಲಿ ಓರ್ವ ಸಿಬ್ಬಂದಿ ಮೃತಪಟ್ಟಿದ್ದು ಇತರ ಮೂವರು ಗಾಯಗೊಂಡಿದ್ದಾರೆ. ದಕ್ಷಿಣ ಗಾಝಾ ಪಟ್ಟಿಯ ರಫಾ ನಗರದ ಪೂರ್ವ ಭಾಗದಲ್ಲಿ ಇಸ್ರೇಲ್‍ನ ವೈಮಾನಿಕ ದಾಳಿಯಲ್ಲಿ ಒಬ್ಬ ಸಾವನ್ನಪ್ಪಿದ್ದು ಇತರ ಮೂವರು ಗಾಯಗೊಂಡಿರುವುದಾಗಿ ವರದಿಯಾಗಿದೆ. ಜಬಲಿಯಾ, ಬೈತ್ ಲಾಹಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಇಸ್ರೇಲ್ ಸೇನೆ ಸುಮಾರು…
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ಹೈಕೋರ್ಟ್ನಲ್ಲಿ ನಡೆಯಿತು. ವಾದ, ಪ್ರತಿವಾದದ ಬಳಿಕ ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್ 26ಕ್ಕೆ ಮುಂದೂಡಲಾಯ್ತು. ವಿಚಾರಣೆ ವೇಳೆ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಅವರು ದರ್ಶನ್ಗೆ ಮಧ್ಯಂತರ ಜಾಮೀನಿನ ನೀಡಿದ ವೇಳೆ ಸೂಚಿಸಲಾಗಿದ್ದ ಕೆಲ ನಿಯಮಗಳನ್ನು ಪಾಲಿಸಿಲ್ಲವ ಎಂದು ವಾದ ಮಂಡಿಸಿದರು. ದರ್ಶನ್ ಪರ ವಕೀಲರು ಹೊಸ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಅರ್ಹತೆ ಮೇಲೆ ಮುಂದಿನ ದಿನಾಂಕದಂದು ವಿಚಾರಣೆ ನಡೆಸಬಹುದು ಎಂದು ನ್ಯಾಯಮೂರ್ತಿಗಳು ಸೂಚಿಸಿದರು. ಇದೇ ವೇಳೆ ವೈದ್ಯಕೀಯ ವರದಿಯ ಪ್ರತಿ ತಮಗೆ ನೀಡಿಲ್ಲವೆಂದು ಎಸ್ಪಿಪಿ ಆಕ್ಷೇಪಣೆ ಸಲ್ಲಿಸಿದರು. 6 ವಾರಗಳ ಅವಧಿಗೆ ಷರತ್ತಿನ ಮೇಲೆ ಮಧ್ಯಂತರ ಜಾಮೀನು ನೀಡಲಾಗಿದೆ, ಆದರೆ ಸರ್ಜರಿಯ ದಿನಾಂಕ ತಿಳಿಸಿಲ್ಲವೆಂದು ಎಸ್ಪಿಪಿ ಪ್ರಸನ್ನಕುಮಾರ್ ವಾದ ಮಂಡಿಸಿದರು. ಅದೇ ವೇಳೆಗೆ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ಮತ್ತೊಂದು ವೈದ್ಯಕೀಯ ವರದಿಯನ್ನು ಹೈಕೋರ್ಟ್ಗೆ ಸಲ್ಲಿಕೆ ಮಾಡಿದರು. ಅದೇ ವೈದ್ಯಕೀಯ…
ತಮಿಳುನಾಡು: ಮದುವೆ ಪ್ರಸ್ತಾಪ ನಿರಾಕರಿಸಿದ್ದಕ್ಕೆ ತರಗತಿಗೆ ನುಗ್ಗಿ ಮಕ್ಕಳ ಎದುರೇ ಶಿಕ್ಷಕಿಯ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ. ರಮಣಿ (26) ಕೊಲೆಯಾದ ಶಿಕ್ಷಕಿಯಾಗಿದ್ದು, ಹತ್ಯೆಗೈದ ಆರೋಪಿಯನ್ನು ಮದನ್ (30) ಎಂದು ಗುರುತಿಸಲಾಗಿದೆ. https://youtu.be/0Zd-F6VB4ec?si=lPfNR0oANrW9MnY4 ಆತ ರಮಣಿಯವರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಅವರ ಕುತ್ತಿಗೆಗೆ ಆಳವಾದ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ರಮಣಿಯವರು ತಂಜಾವೂರು ಜಿಲ್ಲೆಯ ಮಲ್ಲಿಪಟ್ಟಣಂ ಸರ್ಕಾರಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ರಮಣಿ ಹಾಗೂ ಮದನ್ ಕುಟುಂಬ ಭೇಟಿಯಾಗಿ ಮದುವೆಯ ವಿಚಾರ ಚರ್ಚಿಸಿದ್ದರು. ಈ ವೇಳೆ ಮದುವೆ ಪ್ರಸ್ತಾಪವನ್ನು ರಮಣಿಯವರು ತಿರಸ್ಕರಿಸಿದ್ದರು ಎಂದು ವಿಚಾರಣೆಯಿಂದ ತಿಳಿದುಬಂದಿದೆ. ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮಿಳಿ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ತಕ್ಷಣವೇ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ನಡೆಸುವಂತೆ ಆದೇಶಿಸಿದ್ದಾರೆ. ಅಲ್ಲದೇ ಶಾಲೆಯ ಭೇಟಿಗೆ ತೆರಳಿದ್ದಾರೆ. ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ.
ಬೆಂಗಳೂರು: ನೀವು ಮಾಡಿರುವ ತಪ್ಪಿಗೆ ಬಡವರಿಗೆ ಯಾಕೆ ತೊಂದರೆ ಕೊಡುತ್ತೀರಿ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. https://youtu.be/yY_FaCT_cEg?si=Z8xM3YUG3pMsXAM9 ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೊಸದಾಗಿ ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಸಬಹುದು ಎಂದು ಆಹಾರ ಸಚಿವರು ಹೇಳುತ್ತಾರೆ. ಬಿಪಿಎಲ್ ಕಾರ್ಡ್ ರದ್ದು ಮಾಡುವಾಗ ಅರ್ಜಿ ಕೊಟ್ಟಿದ್ದೀರಾ? ನೋಟಿಸ್ ಕೊಟ್ಟಿದ್ದೀರಾ? ನೀವು ಮಾಡಿರುವ ತಪ್ಪಿಗೆ ಬಡವರಿಗೆ ಯಾಕೆ ತೊಂದರೆ ಕೊಡುತ್ತೀರಿ ಎಂದು ಅಶೋಕ್ ಕಿಡಿಕಾರಿದರು. ಅಲ್ಲದೆ, ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಸಿದವರಿಂದ ಲಂಚ ಪಡೆಯಲು ಇದು ಪಿತೂರಿ ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರಿ ನೌಕರರ ಬಿಪಿಎಲ್ ಕಾರ್ಡ್ ರದ್ದುಮಾಡಲಾಗಿದೆ ಎಂದು ಸಿಎಂ ಹೇಳುತ್ತಾರೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, 250 ಸರ್ಕಾರಿ ನೌಕರರ ಬಳಿ ಕಾರ್ಡ್ ಇತ್ತು ಎಂದರೂ ಅದ್ಹೇಗೆ 12 ಲಕ್ಷ ಬಿಪಿಎಲ್ ಕಾರ್ಡ್ ರದ್ದು ಮಾಡುವುದು ಎಂದು ಅಶೋಕ್ ಪ್ರಶ್ನಿಸಿದರು.
ಬೆಂಗಳೂರು:- ಆದಾಯಕ್ಕಿಂತ ಅತಿ ಹೆಚ್ಚು ಆಸ್ತಿ ಗಳಿಕೆ ಮಾಡಿದ ಹಿನ್ನೆಲೆ ಇಂದು ಸರ್ಕಾರಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ ಲೋಕಾಯುಕ್ತ ಅಧಿಕಾರಿಗಳು. ಬೆಳ್ಳಂಬೆಳಗ್ಗೆ ಕರ್ನಾಟಕದ ಸುಮಾರು 25 ಕಡೆ ದಾಳಿ ಮಾಡಿದೆ. ರಾಜ್ಯದ ಮಂಡ್ಯ, ಚಿಕ್ಕಬಳ್ಳಾಪುರ ಸೇರಿ 25 ಕಡೆ ಲೋಕಾಯುಕ್ತ ದಾಳಿಯಾಗಿದೆ. ಭ್ರಷ್ಟಾಚಾರ ಆರೋಪ ಹೊತ್ತ ನಾಲ್ವರು ಅಧಿಕಾರಿಗಳಿಗೆ ಸಂಬಂಧಿಸಿ 25 ಕಡೆಗಳಲ್ಲಿ ದಾಳಿ ಮಾಡಲಾಗಿದೆ. ಯಾರ ಮೇಲೆ ದಾಳಿ..? ಚಿಕ್ಕಬಳ್ಳಾಪುರದಲ್ಲಿ ಭೂ ಹಾಗೂ ಗಣಿ ವಿಜ್ಞಾನ ಇಲಾಖೆಯ ಕೃಷ್ಣವೇಣಿ ಮಂಡ್ಯದಲ್ಲಿ ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಬೆಂಗಳೂರಿನ ಟೌನ್ ಅಂಡ್ ಫ್ಲಾನಿಂಗ್ ಡೈರೆಕ್ಟರ್ ತಿಪ್ಪೇಸ್ವಾಮಿ ಬೆಂಗಳೂರಿನ ಅಬಕಾರಿ ಇಲಾಖೆಯ ಎಸ್ಪಿ ಮಹೇಶ್
ಬಳ್ಲಾರಿ: ತಾಲೂಕಿನ ಬೆಣಕಲ್ ಗ್ರಾಮದಲ್ಲಿ ಸಮಯಕ್ಕೆ ಸರಿಯಾಗಿ ಬಸ್ ಬರುತ್ತಿಲ್ಲ ಎಂದು ಆಕ್ರೋಶಗೊಂಡ ವಿದ್ಯಾರ್ಥಿಗಳು ಶಾಲಾ, ಕಾಲೇಜು ಬಿಟ್ಟು ಜಿಲ್ಲಾಧಿಕಾರಿ ಕಚೇರಿಗೆ ಬಂದ ಘಟನೆ ಗುರುವಾರ ನಡೆದಿದೆ. ಹಲವು ದಿನಗಳಿಂದ ಬೆಣಕಲ್ ಗ್ರಾಮಕ್ಕೆ ಸಾರಿಗೆ ಇಲಾಖೆ ಬಸ್ ಬರುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು, ಪ್ರಯಾಣಿಕರಿಗೆ ತೊಂದರೆಯಾಗಿದೆ. ಬಸ್ ಇರದ ಕಾರಣ ವಿದ್ಯಾರ್ಥಿಗಳು ಶಾಲಾ, ಕಾಲೇಜಿಗೆ ಹೋಗಲು ಸಮಸ್ಯೆ ಆಗಿದೆ. ಇದರಿಂದ ಶೈಕ್ಷಣಿಕವಾಗಿ ಪೆಟ್ಟು ಬೀಳುತ್ತಿದೆ. https://youtu.be/NUNt8842Agg?si=x4Z9D6uxEoP5MkzS ಸಾಕಷ್ಟು ವಿದ್ಯಾರ್ಥಿಗಳು ಬಸ್ ಸಮಸ್ಯೆಯಿಂದ ಕಾಲೇಜು ತೊರೆಯುವ ಪರಿಸ್ಥಿತಿ ಉಂಟಾಗಿದೆ. ಈ ಬಗ್ಗೆ ಸಾರಿಗೆ ಘಟಕದ ಅಧಿಕಾರಿಗಳಿಗೆ ಹಲವು ಬಾರಿ ಮನವಿ ನೀಡಿ ಸಾಕಾಗಿದೆ. ಸಾರಿಗೆ ಇಲಾಖೆ ಅಧಿಕಾರಿಗಳು ಗಮನ ಹರಿಸದ ಕಾರಣ ಬೇಸತ್ತು ಶಾಲಾ ಕಾಲೇಜು ಬಿಟ್ಟು ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದೇವೆ ಎಂದು ಅಲವತ್ತುಕೊಂಡರು. ಮನವಿ ಆಲಿಸಿದ ಎಡಿಸಿ ಮಹ್ಮದ್ ಜುಬೇರ್ ಸಾರಿಗೆ ಇಲಾಖೆಯ ಜಿಲ್ಲಾಧಿಕಾರಿಗೆ ದೂರವಾಣಿಯಲ್ಲಿ ಮಾತನಾಡಿ, ಸಮಸ್ಯೆ ಪರಿಹರಿಸುವಂತೆ ಸೂಚಿಸಿದರು. ವಿದ್ಯಾರ್ಥಿಗಳಾದ ಅಶ್ವಿನಿ, ತ್ರೀವೇಣಿ, ರವಿ ತೇಜ, ತಿರುಮಲ, ಶಿವಕುಮಾರ್, ಸರ್ಪಲಿಂಗ್, ಶಾಂತಿ…