ಭಾರತದ ಮೋಸ್ಟ್ ವಾಂಟೆಡ್ ಇಸ್ಲಾಮಿಕ್ ಬೋಧಕ ಜಾಕಿರ್ ನಾಯ್ಕ್ ಮತ್ತೊಮ್ಮೆ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಪಾಕಿಸ್ತಾನ ಪ್ರವಾಸದಲ್ಲಿರುವ ಜಾಕಿರ್ ನಾಯ್ಕ್ ಮತ್ತು ಯುವತಿಯ ನಡುವೆ ಕಾರ್ಯಕ್ರಮವೊಂದರಲ್ಲಿ ಮಾತಿನ ಚಕಮಕಿ ನಡೆದಿದೆ. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜಾಕೀರ್ ನಾಯ್ಕ್ ಅವರಿಗೆ ಯುವತಿಯರು ಇಸ್ಲಾಂ ಸಮಾಜದಲ್ಲಿ ಬೇರೂರಿರುವ ಶಿಶುಕಾಮ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಇದರಿಂದ ಕೋಪಗೊಂಡ ಜಾಕೀರ್ ನಾಯ್ಕ್ ಆಕೆಯನ್ನು ತಕ್ಷಣ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಏನಿದು ಘಟನೆ? ಸೆ.28ರಿಂದ ಪಾಕಿಸ್ತಾನ ಪ್ರವಾಸದಲ್ಲಿರುವ ಜಾಕೀರ್ ನಾಯ್ಕ್, ಕರಾಚಿಯಲ್ಲಿ ನಡೆದ ಧಾರ್ಮಿಕ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ. ಪಶ್ತೂನ್ ಹುಡುಗಿಯೊಬ್ಬಳು, ನಾನು ಸಂಪೂರ್ಣವಾಗಿ ಇಸ್ಲಾಮಿಕ್ ಹಿನ್ನೆಲೆಯಿಂದ ಬಂದವಳು. ಅಲ್ಲಿ ಮಹಿಳೆಯರು ಯಾವುದೇ ಕಾರಣವಿಲ್ಲದೆ ಮನೆಯಿಂದ ಹೊರಗೆ ಬರುವಂತಿಲ್ಲ. ಪ್ರತಿ ಜುಮ್ಮಾ (ಶುಕ್ರವಾರ) ತಬ್ಲೀಘಿ ಜಮಾತ್‌ನ ಜನರ ಹೇಳಿಕೆ ಇರುತ್ತದೆ. ಸ್ವಲ್ಪ ಸಮಯದ ಹಿಂದೆ ದೊಡ್ಡ ತಬ್ಲೀಘಿ ಇಜ್ತಿಮಾ ಕೂಡ ಅಲ್ಲಿ ನಡೆಯಿತು. ನಮ್ಮ ಪ್ರದೇಶದ ಜನರು…
Author: Prajatv Kannada
ಇರಾನ್ ಹಾಗೂ ಇಸ್ರೇಲ್ ನಡುವಿನ ದಾಳಿ ಮುಂದುವರೆದಿದೆ. ದಾಳಿಯಲ್ಲಿ ಈಗಾಗಲೇ ಸಾಕಷ್ಟು ಮಂದಿ ಮೃತಪಟ್ಟಿದ್ದಾರೆ. ಒಬ್ಬರ ಹಿಂದೊಬ್ಬರಂತೆ ಹೆಜ್ಬೊಲ್ಲಾ ನಾಯಕರು ಕೊನೆಯುಸಿರೆಳೆಯುತ್ತಿದ್ದಾರೆ. ಇದೀಗ ಹೆಜ್ಬೊಲ್ಲಾ ನಾಯಕ ನೆಮ್ ಖಾಸಿಮ್ ತನಗೆ ಒಲಿದು ಬಂದ ಸಂಘಟನೆಯ ಸರ್ವೋಚ್ಛ ನಾಯಕನ ಸ್ಥಾನ ತೊರೆದಿದ್ದು ಮಾತ್ರವಲ್ಲದೇ ತನಗೆ ಹೆಜ್ಬೊಲ್ಲಾ ಸಂಘಟನೆಯ ಸಹವಾಸವೇ ಬೇಡ ಎಂದಿದ್ದಾರೆ. ಹೆಜ್ಬೊಲ್ಲಾ ನಾಯಕ ಸಯ್ಯದ್ ಹಸನ್ ನಸ್ರಲ್ಲಾಹ್ ಇಸ್ರೇಲ್ ವಾಯುದಾಳಿಯಲ್ಲಿ ಸಾವನ್ನಪ್ಪಿದ ಬೆನ್ನಲ್ಲೇ ಆತನ ಉತ್ತರಾಧಿಕಾರಿಗಳೂ ಕೂಡ ಒಬ್ಬರ ನಂತರ ಒಬ್ಬರು ನಾಪತ್ತೆಯಾಗುತ್ತಿದ್ದಾರೆ. ಈ ಹಿಂದೆ ಹೆಜ್ಬೊಲ್ಲಾ ಕಮಾಂಡರ್ ನಬಿಲ್ ಕೌಕ್, ಹೆಜ್ಬೊಲ್ಲಾ ಸಂಘಟನೆಯ ಸಂವಹನ ಘಟಕದ ಕಮಾಂಡರ್ ಮೊಹಮ್ಮದ್ ರಶೀದ್ ಸಕಾಫಿ, ನಸ್ರಲ್ಲಾಹ್ ಉತ್ತರಾಧಿಕಾರಿ ಎಂದೇ ಹೇಳಲಾಗುತ್ತಿದ್ದ ಹಶೆಮ್ ಸಫೀದ್ದೀನ್ ಇಸ್ರೇಲ್ ವಾಯುದಾಳಿಯಲ್ಲಿ ಹತರಾಗಿದ್ದರು. ಇದೀಗ ಹೆಜ್ಬೊಲ್ಲಾದ ಮತ್ತೋರ್ವ ಕಮಾಂಡರ್ ಹಾಗೂ ನಸ್ರಲ್ಲಾಹ್ ನ ಸಂಭಾವ್ಯ ಉತ್ತರಾಧಿಕಾರಿ ಕೂಡ ಕಣ್ಮರೆಯಾಗಿದ್ದು, ಆತ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ವರದಿಯಾಗಿದೆ. ಶುಕ್ರವಾರದಿಂದಲೇ ಅಂದರೆ ಇಸ್ರೇಲಿ ವೈಮಾನಿಕ ದಾಳಿಯ ಆತನ ಸಂಪರ್ಕ ಸಾಧ್ಯವಾಗುತ್ತಿಲ್ಲ ಎಂದು ಲೆಬನಾನಿನ ಭದ್ರತಾ…
70ನೇ ರಾಷ್ಟ್ರ ಪ್ರಶಸ್ತಿ ಪ್ರದಾನ ಸಮಾರಂಭ ಇಂದು ದೆಹಲಿಯಲ್ಲಿ ನಡೆಯಲಿದೆ. ದಾದಾ ಸಾಹೇಬ್ ಫಾಲ್ಕೆ ಹಾಗೂ ರಾಷ್ಟ್ರ ಪ್ರಶಸ್ತಿಗಳ ಪ್ರದಾನ ಕಾರ್ಯಕ್ರಮ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. 70ನೇ ಸಾಲಿನ ರಾಷ್ಟ್ರ ಪ್ರಶಸ್ತಿಯನ್ನು ಆಗಸ್ಟ್ 16ರಂದು ಘೋಷಣೆ ಮಾಡಲಾಗಿದ್ದು, ಇಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ದೆಹಲಿಯ ವಿಜ್ಞಾನ್ ಭವನದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಅವಾರ್ಡ್ ವಿನ್ನರ್ಗಳ ಜೊತೆ ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಈ ಅವಾರ್ಡ್ ಕಾರ್ಯಕ್ರಮ ಆರಂಭ ಆಗಲಿದೆ. ಡಿಡಿ ನ್ಯೂಸ್ ಚಾನೆಲ್ನ ಈ ಕಾರ್ಯಕ್ರಮದ ಲೈವ್ ಪ್ರಸಾರವಾಗಲಿದೆ. ಕನ್ನಡದ ಪಾಲಿಗೆ ಈ ಬಾರಿಯ ರಾಷ್ಟ್ರೀಯ ಪ್ರಶಸ್ತಿ ವಿಶೇಷ ಎನಿಸಿಕೊಂಡಿದೆ. ರಿಷಬ್ ಶೆಟ್ಟಿ ಅವರಿಗೆ ‘ಕಾಂತಾರ’ ಸಿನಿಮಾದ ನಟನೆಗೆ ‘ಅತ್ಯುತ್ತಮ ನಟ’ ಅವಾರ್ಡ್ ಸಿಕ್ಕಿದೆ. ಅದೇ ರೀತಿ ‘ಕಾಂತಾರ’ ಚಿತ್ರಕ್ಕೆ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಸಿಕ್ಕಿದೆ. ರಿಷಬ್ ಶೆಟ್ಟಿ ಸಮಾರಂಭದಲ್ಲಿ ಭಾಗಿ ಆಗಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಉಳಿದಂತೆ ಮಾನಸಿ…
ಬೆಂಗಳೂರು: ಕ್ರೈಸ್ಟ್ ವಿಶ್ವವಿದ್ಯಾಲಯದ ಸಾಮಾಜಿಕ ವಿಜ್ಞಾನಗಳ ವಿಭಾಗದ ಸಂಶೋಧನಾ ವಿದ್ಯಾರ್ಥಿ ಮತ್ತು ಬೆಂಗಳೂರು ಮೂಲದ ಎಂ.ಎಸ್. ರಾಮಯ್ಯ ತಂತ್ರಜ್ಞಾನ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಿದ್ದ ದಿವಾಕರ್ ಪಿ ಅವರು ಸಂಶೋಧನೆಯನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. 2024ರ ಸೆಪ್ಟೆಂಬರ್ 9 ರಂದು ʼʼಬೆಂಗಳೂರು ಶಿಕ್ಷಕರ ತರಬೇತಿ ಪಡೆಯವರಿಗೆ ಇಂಗ್ಲಿಷ್ ಉಚ್ಚಾರಣೆ ಮತ್ತು ಓದುವಿಕೆಯಲ್ಲಿ ಪ್ರಾಬಲ್ಯದಲ್ಲಿ ಧ್ವನಿತಾತ್ವಿಕ ಮತ್ತು ಧ್ವನ್ಯಾತ್ಮಕ ಹಸ್ತಕ್ಷೇಪದ ಪರಿಣಾಮ” ಕುರಿತು ದಿವಾಕರ್ ಪಿ ಅವರು ತನ್ನ ಥೀಸಿಸ್ ಅನ್ನು ಯಶಸ್ವಿಯಾಗಿ ಸಮರ್ಥಿಸಿಕೊಂಡಿದ್ದಾರೆ ಅವರ ಸಂಶೋಧನೆ ಡಾ. ಕೆನೆಡಿ ಆಂಡ್ರೂ ಥಾಮಸ್ ಅವರ ಮಾರ್ಗದರ್ಶನದಲ್ಲಿ ನಡೆದಿದ್ದು, ವೈವಾ ಪರೀಕ್ಷಕರಾಗಿ ಹೈದರಾಬಾದ್‌ನ ವಿದೇಶಿ ಭಾಷೆಗಳ ವಿಶ್ವವಿದ್ಯಾಲಯದ ಡಾ. ಸುಧಾಕರ್ ವಿ ಮತ್ತು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಡಾ. ನಸ್ರಿನ್ ಕಾರ್ಯನಿರ್ವಹಿಸಿದ್ದರು.
ಕಳೆದ ವರ್ಷ ಅಕ್ಟೋಬರ್ 7ರಂದು ಗಾಝಾದಲ್ಲಿ ಆರಂಭಗೊಂಡ ಹತ್ಯಾಕಾಂಡ ಇಂದಿಗೂ ಮುಂದುವರೆದಿದೆ. ಯುದ್ಧಕ್ಕೆ ಕದನ ವಿರಾಮ ಘೋಷಿಸಲು ವಿಶ್ವಾದ್ಯಂತ ಕರೆ ನೀಡಲಾಗಿದೆ. ಇದೀಗ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಹಮಾಸ್ ನ ಮಾಜಿ ಮುಖಂಡ ಖಲೀದ್ ಮಶಾಲ್, ಎಲ್ಲಾ ರಾಜಕೀಯ ಕ್ಷಿತಿಜಗಳು ಮುಚ್ಚಿಹೋದ ಬಳಿಕ ಅಕ್ಟೋಬರ್ 7ರ ದಾಳಿ ನಡೆದಿದೆ ಮತ್ತು ಇದು ಕಾರ್ಯತಂತ್ರದ ಫಲಿತಾಂಶವನ್ನು ಸಾಧಿಸಿದೆ ಎಂದಿದ್ದಾರೆ. ಹಮಾಸ್ ಗೆ ಬೆಂಬಲ ನೀಡಿದ ಹಿಜ್ಬುಲ್ಲಾ, ಹೌದಿ ಮತ್ತು ಇರಾನ್ಗೆ ಧನ್ಯವಾದ ಅರ್ಪಿಸಿದ ಅವರು ಗಾಝಾಕ್ಕೆ ಆರ್ಥಿಕ ನೆರವು ಒದಗಿಸುವಂತೆ ಅರಬ್ ದೇಶಗಳನ್ನು ವಿನಂತಿಸಿದರು. `ಗಾಝಾದಲ್ಲಿ ಗುರಿ ಸಾಧನೆಗೆ ವಿಫಲವಾದ ಬಳಿಕ ಇಸ್ರೇಲ್ ಲೆಬನಾನ್ ನಲ್ಲಿ ಯುದ್ಧದ ಕ್ಷೇತ್ರವನ್ನು ತೆರೆದಿದೆ ಮತ್ತು ಜೋರ್ಡಾನ್ ಹಾಗೂ ಈಜಿಪ್ಟ್ ವಿರುದ್ಧ ಪಿತೂರಿ ನಡೆಸುತ್ತಿದೆ. ಗಾಝಾದ ಜನರು ಹತಾಶರಾಗಬಾರದು. ಶೀಘ್ರದಲ್ಲೇ ಗೆಲುವು ನಿಮ್ಮದಾಗಲಿದೆ’ ಎಂದು ಭರವಸೆ ನೀಡಿದರು.
ಕಳೆದ ವರ್ಷ ಇಸ್ರೇಲ್ ನಡೆಸಿದ್ದ ಫೆಲೆಸ್ತೀನಿಗಳ ಮಾರಣ ಹೋಮ ಸೋಮವಾರಕ್ಕೆ ಒಂದು ವರ್ಷ ಪೂರ್ಣಗೊಳಿಸಿದೆ. ಯುದ್ಧದಲ್ಲಿ ಈಗಾಗಲೇ ಹಲವಾರು ಅಮಾಯಕ ಜೀವಗಳು ಬಲಿಯಾಗಿದ್ದು ಇದರಿಂದ ಜನ ಮತ್ತಷ್ಟು ಕಂಗಾಲಾಗಿದ್ದಾರೆ. ಇದೇ ವೇಳೆ ವಿಶ್ವಾದ್ಯಂತ ಸಾವಿರಾರು ಜನ ಬೃಹತ್ ರ್ಯಾಲಿಗಳಲ್ಲಿ ಭಾಗಿಯಾಗಿ ಗಾಝಾ ಮತ್ತು ಲೆಬನಾನ್‌ಗಳಲ್ಲಿ ಕದನ ವಿರಾಮಕ್ಕೆ ಆಗ್ರಹಿಸಿದರು. ಇಸ್ರೇಲ್ ಮೇಲೆ ಹಮಾಸ್ ನೇತೃತ್ವದ ದಾಳಿಯ ಮೊದಲ ವರ್ಷಾಚರಣೆಯ ಅಂಗವಾಗಿ ಸೋಮವಾರ ಹಲವು ನಗರಗಳಲ್ಲಿ ಪ್ರತಿಭಟನಾಕಾರರು ಸಮಾವೇಶ ನಡೆಸಿದರು. ಇಸ್ರೇಲ್ ಗಾಝಾ ಮತ್ತು ಲೆಬನಾನ್‌ಗಳಲ್ಲಿ ತನ್ನ ದಾಳಿಗಳನ್ನು ಮುಂದುವರಿಸಿದ್ದು,ಇದು ವ್ಯಾಪಕ ಪ್ರಾದೇಶಿಕ ಯುದ್ಧದ ಭೀತಿಯನ್ನು ಹೆಚ್ಚಿಸಿದೆ. ಸೋಮವಾರ ನ್ಯೂಜಿಲಂಡ್‌ನ ಆಕ್ಲಂಡ್‌ನಲ್ಲಿ ಸರಕಾರಿ ಟಿವಿಎನ್‌ಝಡ್ ಟಿವಿ ಕೇಂದ್ರದ ಎದುರು ಸೇರಿ ಕದನ ವಿರಾಮಕ್ಕೆ ಆಗ್ರಹಿಸಿದ ಫೆಲೆಸ್ತೀನ್ ಪರ ಪ್ರತಿಭಟನಾಕಾರರು ತೀವ್ರ ಬಲಪಂಥೀಯ ಮೂಲಭೂತವಾದಿ ಕ್ರಿಶ್ಚಿಯನ್ ಗುಂಪು ಡೆಸ್ಟಿನ ಚರ್ಚ್‌ನ ಅನುಯಾಯಿಗಳೊಂದಿಗೆ ಘರ್ಷಣೆ ನಡೆಸಿದರು. ಎದುರಾಳಿ ಗುಂಪುಗಳನ್ನು ಪ್ರತ್ಯೇಕಿಸಲು 35 ಪೋಲಿಸ್ ಅಧಿಕಾರಿಗಳು ಸ್ಥಳದಲ್ಲಿದ್ದರು. ಟಿವಿಎನ್‌ಝಡ್ ಸಮೀಪದ ರಸ್ತೆಗೂ ಹಬ್ಬಿದ ಗಲಭೆಯನ್ನು ನಿಯಂತ್ರಿಸಲು ಪೋಲಿಸರು…
ಸ್ಯಾಂಡಲ್ ವುಡ್ ಸ್ಟಾರ್ ಡೈರೆಕ್ಟರ್ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮೊಂಥೆರೋ ಮದುವೆಯಾಗಿ ಎರಡು ತಿಂಗಳು ಕಳೆದಿದೆ. ಇದೀಗ ಈ ಜೋಡಿ ಹನಿಮೂನ್ ಗೆ ಮಾಲ್ಡೀವ್ಸ್ ಗೆ ತೆರಳಿದ್ದಾರೆ. ಕಪಲ್ಸ್ ಗಳ ಫೇವರೆಟ್ ಸ್ಪಾಟ್ ಮಾಲ್ಡೀವ್ಸ್ ನಲ್ಲಿ ಸೋನಲ್ ಹಾಗೂ ತರುಣ್ ಕೈ ಕೈ ಹಿಡಿದು ಸುತ್ತಾಡಿದ್ದಾರೆ. ಮಾಲ್ಡೀವ್ಸ್ ನಲ್ಲಿ ಪತಿಯೊಂದಿಗೆ ಎಂಜಾಯ್ ಮಾಡುತ್ತಿರುವ ಫೋಟೋವನ್ನು ಸೋನಲ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋ ಹಂಚಿಕೊಂಡಿರುವ ಸೋನಲ್. ನನ್ನ ವ್ಯಕ್ತಿಯೊಂದಿಗೆ ಸ್ವರ್ಗವನ್ನು ಹುಡುಕುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ತರುಣ್ಸುಧೀರ್ ಹಾಗೂ ಸೋನಲ್ ಮೊಂಥೆರೋ ಆಗಸ್ಟ್ 11ರಂದು ಬೆಂಗಳೂರಿನಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದರು. ಬಳಿಕ ಮಂಗಳೂರಿನ ಚರ್ಚ್ ನಲ್ಲಿ ಕ್ರೈಸ್ತ ಸಂಪ್ರದಾಯದಂತೆ ಉಗುರು ಬದಲಾಯಿಸಿಕೊಂಡಿದ್ದರು. ಹಿರಿಯರ ಸಮ್ಮುಖದಲ್ಲಿ ನಡೆದ ಮದುವೆ ಸಮಾರಂಭಕ್ಕೆ ಅನೇಕ ಗಣ್ಯರು ಸಾಕ್ಷಿಯಾಗಿದ್ದರು. ಸೋನಲ್ ಹಾಗೂ ತರುಣ್ ಹನಿಮೂನ್ ಗೆ ಎಲ್ಲಿಗೆ ಹೋಗ್ತಾರೆ ಎಂಬ ಪ್ರಶ್ನೆ ಫ್ಯಾನ್ಸ್ ಕಾಡಿತ್ತು. ಅದಕ್ಕೆ ಮಾಲ್ಡೀವ್ಸ್ ಎನ್ನುವ ಉತ್ತರ ಸಿಕ್ಕಿದ್ರೂ, ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡು…
ಮೆಗಾಸ್ಟಾರ್ ಚಿರಂಜೀವಿ ಕಳೆದ 30 ವರ್ಷಗಳಿಂದಲೂ ತೆಲುಗು ಚಿತ್ರರಂಗದಲ್ಲಿ ಸ್ಟಾರ್ ನಟನಾಗಿ ಗುರುತಿಸಿಕೊಂಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡುತ್ತಿರುವ ಚಿರಂಜೀವಿ ವಾಲ್ಟೇರ್ ವೀರಯ್ಯ ಚಿತ್ರದ ಭರ್ಜರಿ ಯಶಸ್ಸಿನ ಬಳಿಕ ವಿಶ್ವಂಭರ ಚಿತ್ರದೊಂದಿಗೆ ಮತ್ತೆ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಅದೇ ವೇಳೆ ನಟ ತಮ್ಮ ಆದಾಯವನ್ನು ಹೂಡಿಕೆ ಮಾಡುತ್ತಿದ್ದಾರೆ. ರಿಯಲ್ ಎಸ್ಟೇಟ್‌ನಲ್ಲಿ ಗಣನೀಯ ಹೂಡಿಕೆಗಳನ್ನು ಮಾಡುತ್ತಿರುವ ಚಿರಂಜೀವಿ ಹೈದರಾಬಾದ್‌ನಲ್ಲಿರುವ ಅತ್ಯಂತ ದುಬಾರಿ ಆಸ್ತಿಗಳನ್ನು ಹೊಂದಿದ್ದಾರೆ. ಇದೀಗ ಊಟಿಯಲ್ಲಿ 5.5 ಎಕರೆಯ ಬರೋಬ್ಬರಿ 16 ಕೋಟಿ ಮೌಲ್ಯದ ಆಸ್ತಿ ಖರೀದಿ ಮಾಡಿದ್ದಾರೆ. ಚಿರಂಜೀವಿ ಅವರು ಈಗಾಗಲೇ ಹೈದರಾಬಾದ್, ಬೆಂಗಳೂರು ಸೇರಿದಂತೆ ಹಲವೆಡೆ ಆಸ್ತಿ ಹೊಂದಿದ್ದಾರೆ. ಇದೀಗ ಊಟಿಯ ಗುಡ್ಡದ ಪ್ರದೇಶದಲ್ಲಿ 5.5 ಎಕರೆ ಜಾಗವನ್ನು ಖರೀದಿಸಿದ್ದು, ನೋಂದಣಿ ಪ್ರಕ್ರಿಯೆ ಕೂಡ ಪೂರ್ಣಗೊಂಡಿದೆ. ಈ ಜಾಗಕ್ಕೆ ಅವರು 16 ಕೋಟಿ ರೂ. ನೀಡಿದ್ದಾರೆ ಎನ್ನಲಾಗುತ್ತಿದೆ. ಚಿರಂಜೀವಿ ಖರೀದಿಸಿದ ಊಟಿಯ ಪ್ರಾಪರ್ಟಿಗೆ ಇತ್ತೀಚೆಗೆ ರಾಮ್ ಚರಣ್ ಮತ್ತು ಉಪಾಸನಾ ಕೂಡ ಭೇಟಿ ನೀಡಿದರು. ಅವರು…
ಬೆಂಗಳೂರು: ಇಸ್ರೋದಲ್ಲಿ ಕೆಲಸ ಮಾಡುವ ಭಾಗ್ಯ ನಿಮ್ಮದಾಗಬೇಕೆ? ಇಲ್ಲಿದೆ ನೋಡಿ ಬಂಪರ್ ಅವಕಾಶ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 103 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. https://youtu.be/8iKhY1Tvg5M?si=xv3CgBhnI9LOkkvv ಇದು ಭಾರತದ ಪ್ರಮುಖ ಬಾಹ್ಯಾಕಾಶ ಸಂಸ್ಥೆಯೊಂದಿಗೆ ಕೆಲಸ ಮಾಡಲು ಆಸಕ್ತಿ ಹೊಂದಿರುವವರಿಗೆ ಅನನ್ಯ ಅವಕಾಶವನ್ನು ಒದಗಿಸುತ್ತದೆ. ಲಭ್ಯವಿರುವ ಪಾತ್ರಗಳಲ್ಲಿ ವೈದ್ಯಕೀಯ ಅಧಿಕಾರಿ-SD, ವಿಜ್ಞಾನಿ/ ಇಂಜಿನಿಯರ್-SC, ತಾಂತ್ರಿಕ ಸಹಾಯಕ, ವಿಜ್ಞಾನಿ ಸಹಾಯಕ ಮತ್ತು ಇತರರು. ಆಸಕ್ತ ಅಭ್ಯರ್ಥಿಗಳು ಇಸ್ರೋದ ಅಧಿಕೃತ ವೆಬ್‌ಸೈಟ್ isro.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 9 ಅಕ್ಟೋಬರ್. ಹುದ್ದೆಗಳ ಸಂಪೂರ್ಣ ಪಟ್ಟಿ ಹೀಗಿದೆ: ವೈದ್ಯಕೀಯ ಅಧಿಕಾರಿ-ಎಸ್‌ಡಿ, ವೈದ್ಯಕೀಯ ಅಧಿಕಾರಿ-ಎಸ್‌ಸಿ, ಸೈಂಟಿಸ್ಟ್ ಇಂಜಿನಿಯರ್-ಎಸ್‌ಸಿ, ತಾಂತ್ರಿಕ ಸಹಾಯಕ, ವಿಜ್ಞಾನಿ ಸಹಾಯಕ, ತಂತ್ರಜ್ಞ-ಬಿ, ಡ್ರಾಫ್ಟ್ಸ್ಮನ್-ಬಿ ಮತ್ತು ಸಹಾಯಕ (ಅಧಿಕೃತ ಭಾಷೆ) ಒಳಗೊಂಡಿದೆ. ವೈದ್ಯಕೀಯ ಅಧಿಕಾರಿ (SD): 18 ರಿಂದ 35 ವರ್ಷಗಳು ವೈದ್ಯಕೀಯ ಅಧಿಕಾರಿ (SC): 18 ರಿಂದ 35…