ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೊಳಿಸಿದ ಪಿಎಂ ಕಿಸಾನ್ ಸಮ್ಮಾನ್ ಯೋಜನೆ ರೈತರ ಸಂಜೀವಿನಿ ಆಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಕೇಂದ್ರ ಸರ್ಕಾರ ಪಿಎಂ ಕಿಸಾನ್ ಸಮ್ಮಾನ್ 18ನೇ ಕಂತಿನ ನಿಧಿ ರೈತರ ಖಾತೆಗೆ ನೇರ ವರ್ಗಾವಣೆಯಾದ ಬಳಿಕ ಪ್ರತಿಕ್ರಿಯಿಸಿರುವ ಸಚಿವರು, ಈ ಯೋಜನೆ ರೈತರಿಗೆ ಉತ್ತೇಜನ ನೀಡಿದೆ ಎಂದಿದ್ದಾರೆ. https://youtu.be/MmJnZsyIDOc?si=6rtnZQSjilY1oEFy ಕಿಸಾನ್ ಸಮ್ಮಾನ್ ಯೋಜನೆಯಡಿ ವರ್ಷಕ್ಕೆ 6,000 ರೂ. ಧನಸಹಾಯ ನೀಡುವ ಮೂಲಕ ದೇಶದ 11 ಕೋಟಿ ರೈತರಿಗೆ ಸಂಜೀವಿನಿಯಾಗಿದೆ ಎಂದಿದ್ದಾರೆ. ಈ ಯೋಜನೆಯಿಂದಾಗಿ ದೇಶದಲ್ಲಿ ಕೃಷಿಗೆ ಅಪೂರ್ವ ಉತ್ತೇಜನ ದೊರಕಿದೆ. ರೈತರ ಸಾಲವನ್ನು ಕಡಿಮೆ ಮಾಡಿದೆ. ಅಲ್ಲದೇ, ಗ್ರಾಮೀಣ ಪ್ರದೇಶದ ಸಮುದಾಯಗಳನ್ನು ಸಶಕ್ತರನ್ನಾಗಿಸಿದೆ. ಅಲ್ಲದೇ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯು ಭಾರತದ ಕೃಷಿಕರನ್ನು ಮಾತ್ರವಲ್ಲ ದೇಶವನ್ನೇ ಸ್ವಾವಲಂಬಿ ಮಾಡುವತ್ತ ಒಂದು ಮಹತ್ತರ ಹೆಜ್ಜೆಯಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಡಿ 18ನೇ ಕಂತಿನಲ್ಲಿ ಒಟ್ಟು 9.4 ಕೋಟಿ ರೈತರಿಗೆ 20,000 ಕೋಟಿ ರೂ. ನೇರ…
Author: Prajatv Kannada
ಹುಬ್ಬಳ್ಳಿ : ಹುಬ್ಬಳ್ಳಿಯ ದೇಶಪಾಂಡೆ ನಗರದ ಶ್ರೀ ದತ್ತಾತ್ರೇಯ ಮಂದಿರದ ಮೂರ್ತಿ ಭಗ್ನವಾಗಿದ್ದಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಗ್ನವಾದ ದೇವಾಲಯ ಪರಿಶೀಲನೆ ಮಾಡಿ ಹೇಳಿಕೆ ನೀಡಿರುವ ಶಾಸಕ, ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಯಾರೇ ಹಾಳು ಮಾಡಿದರೂ 24 ಗಂಟೆ ಒಳಗೆ ಬಂಧಿಸಬೇಕು. https://youtu.be/RTPrukxFGKw?si=rI-GW7w8XIXiiL1I ವಿಜ್ರಂಭಣೆಯಿಂದ ನವರಾತ್ರಿ ಹಬ್ಬವನ್ನು ಆಚರಿಸಲಾಗುತ್ತದೆ. ಈ ವೇಳೆ ದುಷ್ಕರ್ಮಿಗಳು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದ್ದಾರೆ. ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಯಾರು ತಪ್ಪು ಮಾಡಿದ್ದಾರೆ ಎಂದು ತನಿಖೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ಇನ್ನು ಹಿಂದು ಹಬ್ಬ ದಿನಗಳಲ್ಲಿಯೇ ರಜೆ ಕಡಿತ ಮಾಡುವ ವಿಚಾರ ಯಾವುದೇ ಸರ್ಕಾರಿ ರಜೆ ಇದ್ದಾಗ ಚಾಟ್ ಇರುತ್ತದೆ. ಹೀಗಿದ್ದಾಗ ರಜೆಯನ್ನು ಕಡತ ಮಾಡಬಾರದು. ಮುಸ್ಲಿಂ ಹಬ್ಬ ದಿನಗಳಲ್ಲಿ ನಮಾಜ್ ಇರುತ್ತದೆ. ಕ್ಯಾಲೆಂಡರ್ ಇವೆಂಟ್ ಅನೌನ್ಸ್ ಆದ ಮೇಲೆ ಹಾಗೆ ಮಾಡಬೇಕು ದಿನಾಂಕ ಅದಲು ಬದಲು ಮಾಡುತ್ತಾರೆ. ಚಂದಪ್ಪ ಕಾಣಿಸಿದಾಗ ದಿನಾಂಕ ಚೇಂಜ್ ಮಾಡ್ತೀರಿ, ಧರ್ಮದ ಹಬ್ಬದಲ್ಲಿ ಹೀಗೆ…
ಹಾಸನ: ನಗರದ ಲಾಡ್ಜ್ ಒಂದರಲ್ಲಿ ಸರ್ಕಾರಿ ಶಾಲೆ ಶಿಕ್ಷಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ರಂಗಸ್ವಾಮಿ (57) ಎಂದು ಗುರುತಿಸಲಾಗಿದೆ. ಹಾಸನ ನಗರದ ಬಿ.ಎಂ ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ಅವರು ನೇಣಿಗೆ ಶರಣಾಗಿದ್ದಾರೆ. https://youtu.be/Fot3SD7-ygQ?si=MtSI9TUEiEp56DBZ ಶನಿವಾರ ಅವರು ಲಾಡ್ಜ್‌ನಲ್ಲಿ ರೂಮ್ ಪಡೆದು ಉಳಿದುಕೊಂಡಿದ್ದರು.ಬೇಲೂರು ತಾಲೂಕಿನ ತೊಳಲು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅವರು ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ನಿವೃತ್ತಿಯಾಗಲು ಕೇವಲ ಮೂರು ವರ್ಷಗಳು ಮಾತ್ರ ಬಾಕಿ ಇತ್ತು. ರಂಗಸ್ವಾಮಿಯವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು: ಮಾಜಿ ಕಾಂಗ್ರೆಸ್ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ ಅವರ ಶವ ಇಂದು ಬೆಳಗ್ಗೆ ಪತ್ತೆಯಾಗಿದೆ. ಕೂಳೂರಿನ ಸೇತುವೆ ಬಳಿ ಇರುವ ಮತ್ತೊಂದು ಸೇತುವೆ ಬಳಿ ಇಂದು ನೀರಿನಲ್ಲಿ ವ್ಯಕ್ತಿಯೊಬ್ಬರ ತಲೆ ಕಾಣುತ್ತಿತ್ತು. ಸಮೀಪಕ್ಕೆ ತೆರಳಿದಾಗ ಇದು ಮುಮ್ತಾಜ್ ಅಲಿ ಅವರ ದೇಹ ಎನ್ನುವುದು ಖಚಿತವಾಗಿದೆ. https://youtu.be/2xSKuZxtdZ8?si=9Z3UlhAypgyglodk ಫಲ್ಗುಣಿ ನದಿಯ ನೀರಿನಿಂದ ಶವವನ್ನು ಈಗ ಮೇಲಕ್ಕೆ ಎತ್ತಲಾಗಿದೆ. ಮುಮ್ತಾಜ್ ಅಲಿ ಅವರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರಬಹುದು ಎನ್ನಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ನಂತರ ಇದು ದೃಢಪಡಲಿದೆ. ಬಾವಾ ಅವರ ತಮ್ಮ 52 ವರ್ಷದ ಮುಮ್ತಾಜ್ ಅಲಿ ಭಾನುವಾರ ಬೆಳಗ್ಗೆ ದಿಢೀರ್ ನಾಪತ್ತೆಯಾಗಿದ್ದರು. ಕೂಳೂರಿನ ಸೇತುವೆ ಬಳಿ ಅಪಘಾತ ನಡೆದ ಸ್ಥಿತಿಯಲ್ಲಿ ಕಾರು ಪತ್ತೆಯಾಗಿತ್ತು. ಇದು ಹಲವು ಅನುಮಾನಗಳನ್ನು ಹುಟ್ಟುಹಾಕಿತ್ತು. ಮುಮ್ತಾಜ್ ಅಲಿ ಫಿಶ್‌ಮಿಲ್ , ಕಾಲೇಜು ಸೇರಿದಂತೆ ಹಲವು ಉದ್ಯಮ ನಡೆಸಿಕೊಂಡಿದ್ದರು. ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ನೊಂದಿದ್ದ ಮುಮ್ತಾಜ್ ಅಲಿ ಶನಿವಾರ ರಾತ್ರಿ ಮನೆಯವರೊಂದಿಗೆ ಮುನಿಸಿಕೊಂಡು…
ನಟಿ ಪ್ರಿಯಾಮಣಿ ಮತ್ತು ಮುಸ್ತಫಾ ರಾಜ್ 2017 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಪ್ರಿಯಾಮಣಿ ಮದುವೆಯಾದ ಬಳಿಕವೂ ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಹಿಂದಿ, ಕನ್ನಡ, ತಮಿಳು, ತೆಲುಗು ಚಿತ್ರರಂಗದಲ್ಲಿ ಭೇಡಿಕೆ ಕಾಯ್ದುಕೊಂಡಿರುವ ಪ್ರಿಯಾಮಣಿ ಮದುವೆ ಸಂದರ್ಭದಲ್ಲಿ ಸಾಕಷ್ಟು ಟ್ರೋಲ್ ಗೆ ಗುರಿಯಾಗಿದ್ದರು. ಪ್ರಿಯಾಮಣಿ ಮದುವೆಯಾಗಿರುವುದು ಮುಸ್ಲಿಂ ಹುಡುಗ ಮುಸ್ತಫಾ ರಾಜ್ ಅವರನ್ನು. ಬೆಂಗಳೂರಿನಲ್ಲಿ ನಡೆದ ಐಪಿಎಲ್ ಪಂದ್ಯದ ವೇಳೆ ಭೇಟಿಯಾದ ಇವರಿಬ್ಬರು ಸ್ನೇಹಿತರಾಗಿ ಪ್ರೇಮಿಗಳಾಗಿ ಕೊನೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಹಿಂದೂ ಯುವತಿ ಮುಸ್ಲಿಂ ಯುವಕನ್ನು ಮದುವೆಯಾಗುತ್ತಿದ್ದಾರೆ ಎಂದು ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಇದೀಗ ಪ್ರಿಯಾಮಣಿ ಮದುವೆಯ ನಂತರ ತಾನು ಎದುರಿಸಿದ ಸೈಬರ್ ದಾಳಿಯ ಬಗ್ಗೆ ಮಾತನಾಡಿದ್ದಾರೆ. ತನಗೂ ಮತ್ತು ಮುಸ್ತಫಾಗೂ ಹುಟ್ಟುವ ಮಕ್ಕಳು “ಭಯೋತ್ಪಾದಕರು” ಆಗುತ್ತಾರೆ ಎಂದು ಕೆಲವರು ಹೇಳಿದ್ದರು. ಟ್ರೋಲ್ ಮಾಡಿದ್ದರು ಎಂದು ಪ್ರಿಯಾಮಣಿ ಹೇಳಿದ್ದಾರೆ. ಮದುವೆ ಘೋಷಣೆಯಾದಾಗಿನಿಂದಲೂ ಪ್ರಾರಂಭವಾದ ಈ ದ್ವೇಷ ಅಭಿಯಾನ ಮದುವೆಯ ನಂತರವೂ ಮುಂದುವರೆಯಿತು ಎಂದು ಪ್ರಿಯಾಮಣಿ ಬೇಸರ ಹೊರ ಹಾಕಿದ್ದಾರೆ. ಇತ್ತೀಚೆಗೆ ನೀಡಿದ…
ತುಮಕೂರು: ನಗರದಲ್ಲಿ ನಡೆಯುತ್ತಿದ್ದ ಡಿಎಸ್‍ಎಸ್ ಸಭೆಯಲ್ಲಿ ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂಬ ಘೋಷಣೆ ಕೇಳಿಬಂದಿದೆ. ಸತೀಶ್ ಜಾರಕಿಹೊಳಿಯವರ ಸಮ್ಮುಖದಲ್ಲೇ ಈ ಘೋಷಣೆ ಹೊರಬಿದ್ದಿದೆ. ಇದನ್ನು ತಡೆಯುವ ಪ್ರಯತ್ನವನ್ನು ಜಾರಕಿಹೊಳಿ ಮಾಡಲಿಲ್ಲ. ಈ ಮೂಲಕ ಕಾಂಗ್ರೆಸ್‍ನಲ್ಲಿ ಮತ್ತೆ ದಲಿತ ಸಿಎಂ ಕೂಗು ಕೇಳಿ ಬಂದಿದೆ ಎಂಬ ಚರ್ಚೆ ಶುರುವಾಗಿದೆ. https://youtu.be/WnUGPRDe96o?si=SeEdZg8eHlr-sSvY ದಲಿತ ಸಿಎಂ ಗಾದಿಯ ಚರ್ಚೆ ಹೊತ್ತಲ್ಲೇ ಎಐಸಿಸಿ ಅಧ್ಯಕ್ಷರನ್ನು ಸಚಿವ ಸತೀಶ್ ಜಾರಕಿಹೊಳಿ ಭೇಟಿ ಮಾಡಿದ್ದರು. ಈ ಬೆನ್ನಲ್ಲೇ ತುಮಕೂರಿನಲ್ಲಿ ಗೃಹ ಸಚಿವ ಪರಮೇಶ್ವರ್ ಅವರನ್ನು ಸತೀಶ್ ಜಾರಕಿಹೊಳಿ ಪ್ರತ್ಯೇಕವಾಗಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಇತ್ತೀಚಿಗೆ ಪರಮೇಶ್ವರ್-ಸತೀಶ್ ಜಾರಕಿಹೊಳಿ ನಡುವೆ 4-5 ಬಾರಿ ಭೇಟಿ ನಡೆದಿದೆ. ಈ ಕುರಿತು ಸುದ್ದಿಗಾರರ ಪ್ರಶ್ನೆಗೆ ಜಾರಕಿಹೊಳಿಯವರು ಪ್ರತಿಕ್ರಿಯಿಸಿ, ಕೂಗು ಶುರು ಮಾಡಿದರೆ ನಾನೇನು ಮಾಡಲಿ? ಈ ಭೇಟಿಯಲ್ಲಿ ಏನು ವಿಶೇಷ ಇಲ್ಲ. ಪರಮೇಶ್ವರ್ ಊಟ ಮಾಡಿಸಿದ್ರು ಅಷ್ಟೇ. ನನ್ನದು ಬೇರೆ ಕಾರ್ಯಕ್ರಮ ಇತ್ತು. ಅಲ್ಲಿಗೆ ಬಂದಿದ್ದೆ, ಹಾಗೆ ಇಲ್ಲಿಗೂ ಬಂದಿದ್ದೆ ಅಷ್ಟೇ. ನಾವು…
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಜಾಮೀನಿಗಾಗಿ ಎದುರು ನೋಡ್ತಿದ್ದಾರೆ. ದರ್ಶನ್ ಜಾಮೀನು ಅರ್ಜಿ ವಿಚಾರಣೆ ಪದೇ ಪದೇ ಮುಂದೂಡಲಾಗುತ್ತಿದೆ. ಈ ಮಧ್ಯೆ ದರ್ಶನ್ ಗೆ ಬೆನ್ನು ನೋವಿನ ಸಮಸ್ಯೆ ಹೆಚ್ಚಾಗಿದ್ದು ಈ ಹಿನ್ನೆಲೆಯಲ್ಲಿ ಪತ್ನಿ ವಿಜಯಲಕ್ಷ್ಮಿ ಪತಿಯನ್ನು ನೋಡಲು ಜೈಲಿಗೆ ಆಗಮಿಸಿದ್ದಾರೆ. ದರ್ಶನ್ ಭೇಟಿಗೆ ಬಂದ ವಿಜಯಲಕ್ಷ್ಮಿ ಜೊತೆ ಸುಶಂತ್ ನಾಯ್ಡು,ಅನುಷಾ ಶೆಟ್ಟಿ, ರೋಹಿತ್ ಗ್ರೇಸ್ ಮರ್ಸಿ ಕೂಡಾ ಆಗಮಿಸಿದ್ದಾರೆ. ಸುಶಾಂತ್ ನಾಯ್ಡು ಅವರು ಎರಡು ಬ್ಯಾಗ್ ತೆಗೆದುಕೊಂಡು ಬಂದಿದ್ದರು. ಪತ್ನಿ ವಿಜಯಲಕ್ಷ್ಮಿ ಅವರು ದರ್ಶನ್ ಅವರಿಗೆ ಬೇಕಾದ ಬಟ್ಟೆ, ಡ್ರೈ ಫ್ರೂಟ್ಸ್, ಬೇಕರಿ ತಿನಿಸು ತಂದಿದ್ದರು. ಸಂದರ್ಶಕರ ಕೊಠಡಿಗೆ ವಿಜಯಲಕ್ಷ್ಮಿ ಹಾಗೂ ಇತರರು ತೆರಳಿದ್ದಾರೆ. ದರ್ಶನ್ ಗೆ ಬೆನ್ನುನೋವು ಹಿನ್ನಲೆ ಆರೋಗ್ಯ ವಿಚಾರಣೆ ಮಾಡಲು ಪತ್ನಿ ವಿಜಯಲಕ್ಷ್ಮಿ ಅವರು ಜೈಲಿಗೆ ಭೇಟಿ ನೋಡಿ ವಾಪಾಸಾಗಿದ್ದಾರೆ. ದರ್ಶನ್ ಜೈಲು ಸೇರಿದಾಗಿನಿಂದಲೂ ಅವರ ಬೆನ್ನು ನೋವಿನ ಸಮಸ್ಯೆ ಎದುರಿಸುತ್ತಲೆ ಇದ್ದಾರೆ. ಇದಕ್ಕಾಗಿಯೇ ನಟನಿಗೆ ಸರ್ಜಿಕಲ್ ಚೇರ್ ವ್ಯವಸ್ಥೆಯನ್ನು ಮಾಡಲಾಗಿತ್ತು. ತೀವ್ರ…
ಬೆಂಗಳೂರು: ಜಾತಿ ಜನಗಣತಿ ವರದಿಯನ್ನು ಮುಂದಿನ ಬಾರಿ ಕ್ಯಾಬಿನೆಟ್‌ನಲ್ಲಿ ಚರ್ಚೆಗೆ ತರಲಾಗುವುದು. ಕ್ಯಾಬಿನೆಟ್‌ನಲ್ಲಿ ಚರ್ಚೆ ಆದಮೇಲೆ ನೋಡೋಣ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. https://youtu.be/Q4jlfR7OcVA?si=nOmJr-ozd2coQdhl ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅನ್ನೋದಾದ್ರೆ ಹೋಗಲಿ ಎಂಬ ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಯಾವಾಗಲೂ ಕೇಂದ್ರ ಸರ್ಕಾರದ ಜನಗಣತಿಯನ್ನೇ ಎಲ್ಲರೂ ಪರಿಗಣಿಸುತ್ತಾರೆ. ಒಂದು ಸಾರಿ ಕ್ಯಾಬಿನೆಟ್‌ನಲ್ಲಿ ಚರ್ಚೆಯಾಗಲಿ. ಆಮೇಲೆ ನೋಡೋಣ. ರಾಜ್ಯ ಸರ್ಕಾರ 160 ಕೋಟಿ ರೂ. ಖರ್ಚು ಮಾಡಿದೆ, ಅದಕ್ಕೂ ಲೆಕ್ಕ ಕೊಡಬೇಕು. ನಾಳೆ ಸಿಎಜಿ ಕೂಡ ಇದಕ್ಕೆ ಆಕ್ಷೇಪ ಮಾಡಬಹುದು. ಹೀಗಾಗಿ ರಾಜ್ಯದ ಜನಗಣತಿ ಕ್ಯಾಬಿನೆಟ್‌ಗೆ ತರುತ್ತೇವೆ ಎಂದಿದ್ದಾರೆ. ಜನಗಣತಿ ಸ್ವೀಕಾರ ವಿಳಂಬಕ್ಕೂ ಕಾರಣಗಳಿವೆ. ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿ ಅಸೆಂಬ್ಲಿಗೆ ತರಬೇಕಾ? ಬೇಡವಾ? ಎನ್ನುವುದನ್ನು ಕ್ಯಾಬಿನೆಟ್‌ನಲ್ಲಿ ತೀರ್ಮಾನ ಮಾಡಲಾಗುವುದು. ಆದರೆ ಇದೊಂದು ವಿಚಿತ್ರ ಸಂದರ್ಭ ಜಾತಿ ಜನಗಣತಿ ಸ್ವೀಕಾರ ಮಾಡಿಲ್ಲ ಅಂದರೆ ಮಾಡಿಲ್ಲ ಅಂತಾರೆ, ಮಾಡಿದ್ರೆ…
ಶಿವಮೊಗ್ಗ:- ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ಬಿ ಎಸ್ ಯಡಿಯೂರಪ್ಪ ಅವರು ತಾಯಿ ದರ್ಶನ ಪಡೆದಿದ್ದಾರೆ https://youtu.be/MRVKgfqI_sc?si=KY546ZU-5LJr_863 ನಾಡಿನ ಸಮೃದ್ಧಿ ಹಾಗೂ ಸರ್ವಾಂಗೀಣ ಅಭಿವೃದ್ಧಿ ಆಗುವಂತೆ ಚೌಡೇಶ್ವರಿ ದೇವಿಯಲ್ಲಿ ಬಿಎಸ್ ವೈ ಪ್ರಾರ್ಥಿಸಿದರು. ಇದೇ ವೇಳೆ ಸಿಗಂದೂರಿಗೆ ಸಂಪರ್ಕ ಕಲ್ಪಿಸಲು ಶರಾವತಿ ನದಿಗೆ ಕಟ್ಟುತ್ತಿರುವ ಸೇತುವೆ ಕಾಮಗಾರಿ ವೀಕ್ಷಣೆ ನಡೆಸಿದರು. ದೇವಿಯ ಆಶೀರ್ವಾದ ಪಡೆದು ಬಳಿಕ ತೆರಳಿದ್ದಾರೆ. ಈ ವೇಳೆ ಸಂಸದ ರಾಘವೇಂದ್ರ ಹಾಗೂ ಸ್ಥಳೀಯ ಮುಖಂಡರು ಬಿಎಸ್‍ವೈಗೆ ಸಾಥ್ ನೀಡಿದ್ದಾರೆ. ಈ ಸೇತುವೆ ಕಾಮಗಾರಿ ಶೀಘ್ರವಾಗಿ ಮುಗಿದರೆ ಭಕ್ತರಿಗೆ ದೇವಸ್ಥಾನಕ್ಕೆ ಬಂದು ಹೋಗಲು ಅನುಕೂಲ ಆಗುತ್ತದೆ. ಕಾಮಗಾರಿ ಶೀಘ್ರವಾಗಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ತಿಳಿಸಿದರು
ಟೀಮ್ ಇಂಡಿಯಾಗೆ ಆಘಾತ ಎದುರಾಗಿದ್ದು, ಪ್ರಮುಖ ಆಲ್ರೌಂಡರ್ ಶಿವಂ ದುಬೆ ತಂಡದಿಂದ ಹೊರಗುಳಿದಿದ್ದಾರೆ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಶಿವಂ ದುಬೆ ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿಯಿಂದ ಹಿಂದೆ ಸರಿದಿದ್ದಾರೆ. ಇದಕ್ಕೂ ಮುನ್ನ ಅವರು ಇರಾನಿ ಕಪ್ ಪಂದ್ಯಕ್ಕೆ ಆಯ್ಕೆಯಾಗಿದ್ದರು. ಆದರೆ ಬೆನ್ನು ನೋವಿನ ಕಾರಣ ಅವರು ಶೇಷ ಭಾರತ ತಂಡದ ಪರ ಕಣಕ್ಕಿಳಿದಿರಲಿಲ್ಲ. ಇದೀಗ ಈ ನೋವಿನ ಸಮಸ್ಯೆಯಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಮೂರು ಪಂದ್ಯಗಳ ಟಿ20 ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿಯಲ್ಲಿ ಶಿವಂ ದುಬೆ ಕಾಣಿಸಿಕೊಳ್ಳುವುದಿಲ್ಲ. ಇನ್ನು ಶಿವಂ ದುಬೆ ಅವರ ಬದಲಿಯಾಗಿ ಟೀಮ್ ಇಂಡಿಯಾಗೆ ತಿಲಕ್ ವರ್ಮಾ ಆಯ್ಕೆಯಾಗಿದ್ದಾರೆ. ಭಾರತದ ಪರ 16 ಟಿ20 ಪಂದ್ಯಗಳನ್ನಾಡಿರುವ ತಿಲಕ್ 2 ಅರ್ಧಶತಕಗಳೊಂದಿಗೆ 336 ರನ್ ಕಲೆಹಾಕಿದ್ದಾರೆ. ಹೀಗಾಗಿ ಎಡಗೈ ದಾಂಡಿಗನನ್ನು ಬಾಂಗ್ಲಾದೇಶ್ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾಗಿದೆ.