ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಜಿದ್ದಾಜಿದ್ದಿ ಕಣದಲ್ಲಿ ಭಾರತ ಮಹಿಳಾ ತಂಡವು ಪಾಕಿಸ್ತಾನ (Ind vs Pak) ಮಹಿಳಾ ತಂಡದ ವಿರುದ್ಧ 6 ವಿಕೆಟ್‌ಗಳ ಅಮೋ ಗೆಲುವು ಸಾಧಿಸಿದೆ. ಇದರೊಂದಿಗೆ ಟಿ20 ವಿಶ್ವಕಪ್ (Women’s T20 World Cup) ಪ್ರಸಕ್ತ ಆವೃತ್ತಿಯಲ್ಲಿ ಗೆಲುವಿನ ಖಾತೆ ತೆರೆದು ಸೆಮಿಸ್ ಕನಸು ಜೀವಂತವಾಗಿರಿಸಿಕೊಂಡಿದೆ. ಟಾಸ್ ಗೆದ್ದು ಮೊದಲು ಬ್ಯಾಟ್ ಬೀಸಿದ ಪಾಕಿಸ್ತಾನ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 105 ರನ್ ಗಳಿಸಿತ್ತು. ಅಲ್ಪಮೊತ್ತದ ಗುರಿ ಬೆನ್ನಟ್ಟಿದ್ದ ಭಾರತ 18.5 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಅಲ್ಪ ಮೊತ್ತದ ಗುರಿ ಪಡೆದು ಇನ್ನಿಂಗ್ಸ್ ಆರಂಭಿಸಿದ ಭಾರತ ನಿಧಾನಗತಿಯ ಬ್ಯಾಟಿಂಗ್ ಆರಂಭಿಸಿತ್ತು. ಒಂದೆಡೆ ರನ್ ಕಲೆಹಾಕುತ್ತಿದ್ದರೂ ಮತ್ತೊಂದು ಕಡೆ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತ್ತು. ಆದ್ರೆ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ, ಜೆಮಿಮಾ ರೊಡ್ರಿಗ್ಸ್, ನಾಯಕಿ ಹರ್ಮನ್ ಪ್ರೀತ್ ಕೌರ್ ಅವರ ಸಂಘಟಿತ ಪ್ರದರ್ಶನ ಗೆಲುವು ತಂದುಕೊಡುವಲ್ಲಿ…
Author: Prajatv Kannada
ಮುಂಬೈ: ಖ್ಯಾತ ಹಿರಿಯ ಉದ್ಯಮಿ ರತನ್ ಟಾಟಾ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಟಾಟಾ ಸನ್ಸ್ ಮಾಜಿ ಅಧ್ಯಕ್ಷ ರತನ್ ಟಾಟಾ (86) ಬಿಪಿಯಲ್ಲಿ ಗಣನೀಯವಾಗಿ ಕುಸಿದ ಹಿನ್ನೆಲೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ . ರತನ್ ಟಾಟಾ ಅವರನ್ನು ಮುಂಜಾನೆ 12.30 ರಿಂದ 1.00 ರ ನಡುವೆ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆತರಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ರತನ್ ಟಾಟಾ ಲೋ ಬಿಪಿಯಿಂದ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ರತನ್ ಟಾಟಾ ಚಿಕಿತ್ಸೆಗೆ ಸ್ಪಂಧಿಸುತ್ತಿದ್ದಾರೆ ಅಂತ ಹೇಳಲಾಗ್ತಿದೆ. ಶೀಘ್ರವೇ ಅವರು ಗುಣಮುಖರಾಗಲಿ ಅಂತ ಭಾರತೀಯರು ಪ್ರಾರ್ಥಿಸುತ್ತಿದ್ದಾರೆ.
ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಮುರುಘಾಶ್ರೀಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ ಮುರುಘಾಶ್ರೀ ಅವರಿಗೆ ಕೋರ್ಟ್ ಜಾಮೀನು ನೀಡಿದೆ. ಪ್ರಕರಣದಲ್ಲಿ ಎ೧ ಆರೋಪಿಯಾಗಿರುವ ಮುರುಘಾಶ್ರೀಗೆ ಈ ಹಿಂದೆ ಹೈಕೋರ್ಟ್ ಜಾಮೀನು ನೀಡಿತ್ತು. ಜಾಮೀನು ಪ್ರಶ್ನಿಸಿ ಸುಪ್ರೀಂನಲ್ಲಿ ಪ್ರಶ್ನೆ ಮಾಡಲಾಗಿತ್ತು. ಆರೋಪಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಜಾಮೀನು ರದ್ದುಗೊಳಿಸಬೇಕೆಂದು ಮನವಿ ಮಾಡಲಾಗಿತ್ತು.ಈ ಅರ್ಜಿಯನ್ನು ಪುರಸ್ಕರಿಸಿದ್ದ ಸುಪ್ರೀಂ ಕೋರ್ಟ್ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಳಿಸಬೇಕು. ಅಷ್ಟೇ ಅಲ್ಲದೇ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಳಿಸುವವರೆಗೆ ಬಂಧನದಲ್ಲಿಡುವಂತೆ ಆದೇಶಿಸಿತ್ತು. ಇದೀಗ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕೋರ್ಟ್ ಇಂದೇ ಬಿಡುಗಡೆಗೆ ಆದೇಶ ಹೊರಡಿಸಿದೆ. ಸಂತ್ರಸ್ತೆಯರಿಬ್ಬರು ಸೇರಿ ೧೨ ಜನ ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದ್ದು, ಕೋರ್ಟ್ನಿಂದ ಜಿಲ್ಲಾ ಕಾರಾಗೃಹಕ್ಕೆ ತೆರಳಿ ಬಳಿಕ ಮುರುಘಾಶ್ರೀ ಬಿಡುಗಡೆಯಾಗಿ ದಾವಣಗೆರೆಗೆ ತೆರಳುವ ಸಾಧ್ಯತೆಯಿದೆ.
ಗದಗ: ರಾಜ್ಯದಲ್ಲಿ ಯಾವುದೇ ಅಭಿವೃದ್ಧಿಗೆ ಹಣ ಬಿಡುಗಡೆ ಆಗುತ್ತಿಲ್ಲ. ರಾಜ್ಯಕ್ಕೆ ಸಾಕಷ್ಟು ಹಿನ್ನಡೆಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಅಭಿವೃದ್ಧಿಗೆ ಹಣ ಬಿಡುಗಡೆ ಆಗುತ್ತಿಲ್ಲ. ರಾಜ್ಯಕ್ಕೆ ಸಾಕಷ್ಟು ಹಿನ್ನಡೆಯಾಗುತ್ತಿದೆ. ಇಂತಹ ಸರ್ಕಾರದ ಪಡೆದಿರುವುದು ಕರ್ನಾಟಕದ ದೌರ್ಭಾಗ್ಯ, ಆದರೆ, ಈ ಸರ್ಕಾರವನ್ನು ಅಭದ್ರಗೊಳಿಸುವ ಕೆಲಸವನ್ನು ನಾವು ಮಾಡುವುದಿಲ್ಲ ಎಂದು ಹೇಳಿದರು. ಇನ್ನೂ ಮುಖ್ಯಮಂತ್ರಿ ಬದಲಾವಣೆಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಬಹಳಷ್ಟು ಚಟವಟಿಕೆ ನಡೆಯುತ್ತಿದೆ. ವಿಶೇಷವಾಗಿ ಹಿರಿಯ ಸಚಿವರು ದೆಹಲಿ ಭೇಟಿ ಮಾಡುವುದು ನೋಡಿದರೆ ಗೊತ್ತಾಗುತ್ತದೆ. ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರೆ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ. ಸಿಎಂ ರಾಜೀನಾಮೆ ನೀಡಿದರೆ ಮುಂದೆ ಕಾಂಗ್ರೆಸ್ ಸರ್ಕಾರ ಬರುವುದಿಲ್ಲ, ನಮಗೆ ಅವಕಾಶ ಇದೆ. ಹೀಗಾಗಿ ಸರ್ಕಾರ ಉಳಿಸಿಕೊಳ್ಳಲು ಸತತ, ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಆಡಳಿತ ಸ್ಥಗಿತವಾಗಿದೆ ಎಂದರು. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ…
ಬಾಗಲಕೋಟೆ: ಜನಪದ ಕಲಾವಿದ, ಚಿತ್ರನಟ ಗುರುರಾಜ ಹೊಸಕೋಟೆ ಅವರ ಕಾರು ಅಪಘಾತಕ್ಕೀಡಾದ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಸೋರಗಾವಿ ಬಳಿ ನಡೆದಿದೆ. https://youtu.be/veXcpArHzAk?si=acKhMICut405S7oO ಎದುರು ಬಂದ ವಾಹನ ತಪ್ಪಿಸಲು ಹೋಗಿ ರಸ್ತೆ ಪಕ್ಕದಲ್ಲಿದ್ದ ಕಲ್ಲಿಗೆ ಕಾರು ಡಿಕ್ಕಿ ಹೊಡೆದಿದೆ. ಘಟನೆಯ ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಇನ್ನು ಕಾರಿನಲ್ಲಿದ್ದ ಗುರುರಾಜ ಹೊಸಕೋಟೆ ಅವರು ಪ್ರಾಣಾಪಾದಿಂದ ಪಾರಾಗಿದ್ದು, ಯಾರಿಗೂ ಯಾವುದೇ ಗಾಯ ಹಾಗೂ ಪ್ರಾಣಹಾನಿ ಉಂಟಾಗಿಲ್ಲ. ಸಿಂಧನೂರಿನಿಂದ ಮಹಾಲಿಂಗಪುರಕ್ಕೆ ಹೊರಟಿದ್ದ ಸಂದರ್ಭ ಅಪಘಾತ ಸಂಭವಿಸಿದೆ.
ಹುಬ್ಬಳ್ಳಿ:- ಹುಬ್ಬಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು ಕೇಳಿ ಬಂದಿದ್ದು, ಡಕಾಯಿತನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. https://youtu.be/Vbb_e33aGMM?si=P9GPRS51aS7yqIdc ಮಹೇಶ್ ಸೀತಾರಾಮ್ ಕಾಳೆ ಬಂಧಿತ ವ್ಯಕ್ತಿ ಆಗಿದ್ದು, ಗೋಕುಲ ರೋಡ್ ಪೊಲೀಸರಿಂದ ಗುಂಡು ಹಾರಿಸಲಾಗಿದೆ. ಇಂದು ಬೆಳಿಗ್ಗೆ ಮಹೇಶ್ ಮತ್ತು ಈತನ ಗ್ಯಾಂಗ್ ಮನೆ ಕಳ್ಳತನಕ್ಕೆ ಇಳಿದಿತ್ತು. ವಿಚಾರ ತಿಳಿದು ಕಾರ್ಯಾಚರಣೆಗೆ ಇಳಿದ ಪೊಲೀಸರು ಆರೋಪಿ ಮಹೇಶ್ ಸೀತಾರಾಮ್ನನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಉಳಿದವರು ಪರಾರಿಯಾದರು. ಉಳಿದ ಡಕಾಯಿತರು ಇರುವ ಜಾಗ ತೋರಿಸುತ್ತೇನೆ ಅಂತ ಮಹೇಶ್ ಪೊಲೀಸರನ್ನು ಕರೆದುಕೊಂಡು ಹೋಗಿದ್ದಾನೆ. ಡಕಾಯಿತರು ಇದ್ದ ಸ್ಥಳಕ್ಕೆ ಹೋದ ಬಳಿಕ ಮಹೇಶ್ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದಾನೆ. ಪ್ರಾಣ ರಕ್ಷಣೆಗಾಗಿ ಗೋಕುಲ ರೋಡ್ ಪೊಲೀಸ್ ಠಾಣೆಯ ಪಿಎಸ್ಐ ಸಚಿನ ದಾಸರೆಡ್ಡಿ ಮಹೇಶ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡು ತಿಂದು ನೋವಿನಿಂದ ಒದ್ದಾಡುತ್ತಿದ್ದ ಮಹೇಶ್ನನ್ನು ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿದೆ.
ಪ್ರತೀ ಮನೆಯಲ್ಲೂ ಆಹಾರ, ಆರೋಗ್ಯ ಎಲ್ಲದಕ್ಕೂ ಬಳಕೆಯಾಗುವ ಸಾಂಬಾರು ಪದಾರ್ಥ ಎಂದರೆ ಅದು ಕರಿ ಮೆಣಸಿನ ಕಾಳು. ಕರಿಮೆಣಸನ್ನು ಸಂಸ್ಕೃತದಲ್ಲಿ ಮಾರಿಚ್ ಎಂದು ಕರೆಯಲಾಗುತ್ತದೆ, ಇದು ಸೂರ್ಯನ ಸಮಾನಾರ್ಥಕವಾಗಿದೆ. ಸೂರ್ಯನಂತೆ ಕಾಳು ಮೆಣಸು ಕೂಡ ದೇಹಕ್ಕೆ ಬಿಸಿ ಅನುಭವವನ್ನು ನೀಡುತ್ತದೆ. ಹೀಗಾಗಿ ಕಾಳುಮೆಣಸನ್ನು ಮಸಾಲೆಗಳ ರಾಜ ಎಂದೇ ಕರೆಯುತ್ತಾರೆ. ಈ ಕಾಳು ಮೆಣಸು ಅಥವಾ ಕರಿ ಮೆಣಸಿನ ಕಾಳು ಕಟು (ಖಾರ) ರಸವನ್ನು ಹೊಂದಿದ್ದು, ತೀಕ್ಷಣವಾಗಿರುತ್ತದೆ. ಜೀರ್ಣಕ್ರಿಯೆಗೆ ಸುಲಭವಾಗುವ ಈ ಮಸಾಲೆ ದೇಹಕ್ಕೆ ಉಷ್ಣವಾಗಿದೆ. ಹೀಗಾಗಿ ಮಿತವಾಗಿ ತಿಂದಷ್ಟೂ ಒಳ್ಳೆಯದು. ಕಫ, ವಾತದಿಂದಾಗುವ ಅನಾರೋಗ್ಯಕ್ಕೆ ಬಹಳ ಒಳ್ಳೆಯದು. ಕಾಳು ಮೆಣಸಿನ್ನು ಹೆಚ್ಚು ಸೇವನೆ ಮಾಡಿದರೆ ದೇಹದಲ್ಲಿ ಪಿತ್ತದ ಅಂಶ ಜಾಸ್ತಿಯಾಗಿ ಇನ್ನೊಂದು ಅನಾರೋಗ್ಯ ಕಾಡಬಹುದು. ಆದ್ದರಿಂದ ಕಡಿಮೆ ಸೇವನೆ ಮಾಡುವುದು ಉತ್ತಮ. ಕಾಳು ಮೆಣಸು ಹೊಟ್ಟೆಯ ಸಮಸ್ಯೆಗೆ ಪರಿಣಾಮಕಾರಿಯಾಗಿದೆ. ಕರಿ ಮೆಣಸಿನ ಕಾಳಿನ ಪುಡಿಯನ್ನು ಬಿಸಿ ನೀರಿಗೆ ಹಾಕಿ ಅದಕ್ಕೆ ಒಂದು ಸಣ್ಣ ಚೂರು ಶುಂಠಿಯನ್ನು ಹಾಕಿ ಸೇವನೆ ಮಾಡಿದರೆ ವಾಂತಿಯ…
ಹಿಂದೂಗಳ ಹಬ್ಬಗಳಲ್ಲಿ ನವರಾತ್ರಿಯೂ ಒಂದು. ಒಂಬತ್ತು ದಿನಗಳ ಕಾಲ ಆಚರಿಸುವ ಈ ಹಬ್ಬದಲ್ಲಿ ಪ್ರತಿ ದಿನವೂ ವಿಶೇಷ ಪೂಜೆಗಳನ್ನು ಕೈಗೊಳ್ಳಲಾಗುತ್ತದೆ. ಅವುಗಳಲ್ಲಿ ನವರಾತ್ರಿಯ ಕೊನೆಯ ದಿನ ಆಚರಿಸುವ ಆಯುಧ ಪೂಜೆಗೆ ಹೆಚ್ಚಿನ ಮಹತ್ವವಿದೆ. ಅಶ್ವಿನ್ ಮಾಸದ ಶುಕ್ಲ ಪಕ್ಷದ ಒಂಬತ್ತನೇ ದಿನದಂದು ಅಂದರೆ ಶಾರದೀಯ ನವರಾತ್ರಿಯ ಕೊನೆಯ ದಿನದಂದು ಭಾರತದ ವಿವಿಧ ರಾಜ್ಯಗಳಲ್ಲಿ ಅನೇಕ ಸಂಪ್ರದಾಯಗಳನ್ನು ನಡೆಸಲಾಗುತ್ತದೆ. ಇವುಗಳಲ್ಲಿ ಒಂದು ಆಯುಧ ಪೂಜೆ. ಇದು ಹಿಂದೂ ಧರ್ಮದಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿರುವ ಹಬ್ಬ. ಆಯುಧ ಪೂಜೆಯಂದು ಮನೆಯಲ್ಲಿ ಉಪಯೋಗಿಸುವ ಚೂರಿಯಿಂದ ಹಿಡಿದು ಎಲ್ಲಾ ವಿಧದ ಆಯುಧಗಳನ್ನು ಪೂಜಿಸಲಾಗುತ್ತಿದೆ. ಈ ದಿನ ವಸ್ತುಗಳನ್ನು ತೊಳೆದು, ಹೂಗಳಿಂದ ಅಲಂಕರಿಸಿ ಪೂಜೆ ನೆರವೇರಿಸಲಾಗುತ್ತಿದೆ. ರೈತರು ನೇಗಿಲು ಕೃಷಿಗೆ ಬಳಸುವ ವಸ್ತುಗಳಿಗೆ ಪೂಜೆ ಮಾಡಿದರೆ ಸೈನಿಕರು ಬಂದೂಕು, ಫಿರಂಗಿ, ಯುದ್ಧ ಟ್ಯಾಂಕರ್, ವಿಮಾನಗಳಿಗೆ ಪೂಜೆ ಮಾಡುತ್ತಾರೆ. ಮನೆಯಲ್ಲಿರುವ ಪುಟಾಣಿ ಸೈಕಲಿನಿಂದ ಹಿಡಿದು ದೊಡ್ಡ ವಾಹನಗಳಿಗೆ ಪೂಜೆ ನಡೆದರೆ ಕಚೇರಿಗಳಲ್ಲಿ ಕಂಪ್ಯೂಟರ್, ಉತ್ಪಾದನಾ ಯಂತ್ರಗಳಿಗೆ ಪೂಜೆ ನಡೆಯುತ್ತದೆ. ಆಯುಧ…
ಬೆಂಗಳೂರು:- ವಿದ್ಯಾರಣ್ಯಪುರದ ಬಾರ್ನಲ್ಲಿ ಡೆಡ್ಲಿ ಮರ್ಡರ್ ಅಟ್ಯಾಕ್ ನಡೆದಿದೆ. ಕೇವಲ 20ರೂಪಾಯಿಗೆ ಕಿಡಿಗೇಡಿಗಳು ಕ್ಯಾಷಿಯರ್ ಗೆ ಚಾಕು ಇರಿದಿದ್ದು, ಇದೀಗ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. https://youtu.be/aevXlahnbGI?si=gVjVZBFlaIRtcsiS ಚೇತನ್ ಹಾಗು ಕಾರ್ತಿಕ್ ಬಂಧಿತ ಆರೋಪಿಗಳು ಎನ್ನಲಾಗಿದೆ. ಮತ್ತೋರ್ವ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ. ವಿದ್ಯಾರಣ್ಯಪುರ ನರಸೀಪುರದ ಜಯಶ್ರೀ ಬಾರ್ನಲ್ಲಿ ಕುಡಿಯಲು ಬಂದಿದ್ದ ಚೇತನ್, ಕಾರ್ತಿಕ್ ಹಾಗೂ ಮತ್ತೋರ್ವ ವ್ಯಕ್ತಿ ಸೇರಿ ಮೂವರು ಗಲಾಟೆ ಮಾಡಿಕೊಂಡಿದ್ದಾರೆ. ಬಾರ್ ಕ್ಯಾಷಿಯರ್ 20 ರೂಪಾಯಿ ಹೆಚ್ಚಿಗೆ ಬಿಲ್ ಹಾಕಿದ ಎಂಬ ಕಾರಣಕ್ಕೆ ಚಾಕು, ಬಾಟಲ್ನಿಂದ ಕ್ಯಾಷಿಯರ್ ರಂಜಿತ್ ಎಂಬಾತನ ಮೇಲೆ ಮೂವರು ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಈ ವೇಳೆ ಚಾಕು ಇರಿತವೂ ಆಗಿದೆ. ಘಟನೆ ಸಂಬಂಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಕೊಲೆಗೆ ಯತ್ನಿಸಿದ ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೋರ್ವ ಎಸ್ಕೇಪ್ ಆಗಿದ್ದು, ಆತನಿಗಾಗಿ ಶೋಧ ಮುಂದುವರಿದಿದೆ.
ಬೆಂಗಳೂರು:- ಬೆಂಗಳೂರಿನಲ್ಲಿ ಅಕ್ರಮ ವಾಸ ಮಾಡಿದ್ದ ಪಾಕ್ ಪ್ರಜೆಗಳಿಗೆ ಸಹಾಯ ಮಾಡಿದ್ದ UP ಮೂಲದ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ ಪಾಕಿಸ್ತಾನ ಪ್ರಜೆಗಳು ಬೆಂಗಳೂರಿನಲ್ಲಿ ನೆಲೆಸಲು ಸಹಾಯ ಮಾಡಿದ್ದ ಆರೋಪಿಯನ್ಬ ಅರೆಸ್ಟ್ ಮಾಡಲಾಗಿದೆ. https://youtu.be/Vbb_e33aGMM?si=n1k6cUA2P3FeI2I- ಬಂಧಿತ ವ್ಯಕ್ತಿಯನ್ನು ಪರ್ವೇಜ್ ಅಹ್ಮದ್ ಎಂದು ಗುರುತಿಸಲಾಗಿದೆ. ಹಿಂದೂ ಹೆಸರುಗಳನ್ನಿಟ್ಟುಕೊಂಡು ಬೆಂಗಳೂರಿನಲ್ಲಿ ನೆಲಸಿದ್ದ ಐದಕ್ಕೂ ಹೆಚ್ಚು ಮಂದಿ ಪಾಕಿಸ್ತಾನಿ ಪ್ರಜೆಗಳನ್ನು ಕಳೆದ ವಾರ ಬೆಂಗಳೂರು ಪೊಲೀಸರು ಬಂಧಿಸಿದ್ದರು. ಆನೆಕಲ್ ತಾಲೂಕಿನ ಜಿಗಣಿಯಲ್ಲಿ ವಾಸವಾಗಿದ್ದ ರಷೀದ್ ಅಲಿ ಸಿದ್ದಕಿ ಕುಟುಂಬ ಮತ್ತು ಪೀಣ್ಯದಲ್ಲಿ ವಾಸವಾಗಿದ್ದ ಕುಟುಂಬವನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಅಕ್ರಮವಾಗಿ ಭಾರತದ ಒಳಗೆ ನುಸುಳಿ, ಇಲ್ಲಿಯ ಆಧಾರ ಕಾರ್ಡ್, ಪ್ಯಾನ್ ಕಾರ್ಡ್ ಮತ್ತು ಪಾಸಪೋರ್ಟ್ ಮಾಡಿಸಿಕೊಂಡಿದ್ದಾರೆ. ಆರೋಪಿಗಳು ದಾಖಲಾತಿಗಳನ್ನು ಹೊಂದಲು ಸಹಾಯ ಮಾಡಿದವರನ್ನು ಪತ್ತೆ ಹಚ್ಚಲು ಜಿಗಣಿ ಪೊಲೀಸರು ಎರಡು ತಂಡಗಳಾಗಿ ಮುಂಬೈ ಮತ್ತು ದೆಹಲಿಗೆ ತೆರಳಿದ್ದರು. ಇದೀಗ, ಜಿಗಣಿ ಪೊಲೀಸರು ಪಾಕಿಸ್ತಾನಿ ಪ್ರಜೆಗಳು ಭಾರತೀಯ ದಾಖಲಾತಿ ಹೊಂದಲು ಸಹಾಯ ಮಾಡಿದ ಪರ್ವೇಜ್ ಅಹ್ಮದ್ನನ್ನು ಮುಂಬೈನಲ್ಲಿ ಬಂಧಿಸಿದ್ದಾರೆ. ಬಂಧಿತ…