ಅಮೆರಿಕ ಅಧ್ಯಕ್ಷ ಜೋ ಬೈಡನ್ ಶ್ವೇತಭವನದಲ್ಲಿ ಸೋಮವಾರ ದೀಪಾವಳಿ ಆಚರಣೆ ಆಯೋಜಿಸಿದ್ದರು. ಕಾರ್ಯಕ್ರಮದಲ್ಲಿ ದೇಶದಲ್ಲಿನ ಕಾಂಗ್ರೆಸಿಗರು, ಅಧಿಕಾರಿಗಳು ಮತ್ತು ಕಾರ್ಪೊರೇಟ್ ಅಧಿಕಾರಿಗಳು ಸೇರಿದಂತೆ 600ಕ್ಕೂ ಹೆಚ್ಚು ಅನಿವಾಸಿ ಭಾರತೀಯರು ಬೆಳಕಿನ ಹಬ್ಬದಲ್ಲಿ ಭಾಗಿಯಾಗಿ ಸಂಭ್ರಮಿಸಿದರು. ಸಂಪ್ರದಾಯದಂತೆ ಬೈಡನ್ ಭಾಷಣಕ್ಕೂ ಮುನ್ನ ಬ್ಲೂ ರೂಮ್‌ನಲ್ಲಿ ದೀಪವನ್ನು ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಬೈಡನ್, ‘ಶ್ವೇತ ಭವನದಲ್ಲಿ ಅತಿದೊಡ್ಡ ದೀಪಾವಳಿ ಆಚರಣೆ ಆಯೋಜಿಸಿರುವುದಕ್ಕೆ ಹೆಮ್ಮೆಯಿದೆ’ ಎಂದರು. ಇದೇ ವೇಳೆ, ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ನಾಸಾ ಗಗನಯಾತ್ರಿ ಮತ್ತು ನಿವೃತ್ತ ನೌಕಾಪಡೆಯ ಕ್ಯಾಪ್ಟನ್ ಸುನಿತಾ ವಿಲಿಯಮ್ಸ್ ಅವರ ವೀಡಿಯೊ ಸಂದೇಶವನ್ನು ಪ್ರಸ್ತುತಪಡಿಸಲಾಯಿತು. ಚುನಾವಣಾ ಪ್ರಚಾರದಲ್ಲಿ ನಿರತರಾಗಿರುವ ಕಾರಣ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮತ್ತು ಪ್ರಥಮ ಮಹಿಳೆ ಡಾ. ಜಿಲ್ ಬೈಡನ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ.
Author: Prajatv Kannada
ಆಫ್ರಿಕಾ ಖಂಡದ ಉತ್ತರ ಭಾಗದ ದೇಶವಾದ ಚಾಡ್‌ನಲ್ಲಿ ಬೋಕೊ ಹರಾಮ್ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಚಾಡ್ ಸೇನೆಯ 40 ಸೈನಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನ್ಯೂಗೌಬೊವಾ ಹೆಸರಿನ ಸೇನಾ ನೆಲೆಯ ಮೇಲೆ ಸೋಮವಾರ ನಸುಕಿನ ಜಾವ ಉಗ್ರರು ಏಕಾಏಕಿ ಮನಸೋ ಇಚ್ಚೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಯುನಿಟ್ ಕಮಾಂಡರ್ ಸೇರಿದಂತೆ ಸೈನಿಕರು ಮೃತಪಟ್ಟಿದ್ದಾರೆ ಎಂದು ಚಾಡ್ ಸೇನಾ ವಕ್ತಾರರು ತಿಳಿಸಿದ್ದಾರೆ. ಘಟನೆ ಬಗ್ಗೆ ಚಾಡ್ ಅಧ್ಯಕ್ಷ ಮಹಮತ್ ಇಡ್ರಿಸ್ ಡೆಬಿ ಇಟ್ನೊ ಆಘಾತ ವ್ಯಕ್ತಪಡಿಸಿದ್ದಾರೆ. ನಮ್ಮ ಮೇಲೆ ದಾಳಿ ಮಾಡಿದ ಉಗ್ರರನ್ನು ಪ್ರತಿ ದಾಳಿ ಮಾಡಿ ಹತ್ಯೆ ಮಾಡಿದ್ದೇವೆ. ಸ್ಥಳದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಬಂದಿದೆ’ ಎಂದು ಅವರು ತಿಳಿಸಿದ್ದಾರೆ. ಪಕ್ಕದ ನೈಜೀರಿಯಾ ಜೊತೆ ಗಡಿ ಸಂಘರ್ಷ ಹೊಂದಿರುವ ಚಾಡ್ ಮೇಲೆ ನೈಜಿರಿಯಾ ಮೂಲದ ಬೊಕೊ ಹರಾಮ್ ಉಗ್ರರೂ ಸಹ ಕೆಂಗೆಣ್ಣು ಬೀರಿದ್ದಾರೆ.
ಹಸನ್ ನಸ್ರಲ್ಲಾ ಹತ್ಯೆಯಾದ ಒಂದು ತಿಂಗಳ ಬಳಿಕ ಹಿಜ್ಬುಲ್ಲಾ ಮುಖ್ಯಸ್ಥನಾಗಿ ನೈಮ್ ಖಾಸಿಮ್’ನನ್ನು ನೇಮಕ ಮಾಡಲಾಗಿದೆ. ಇಸ್ರೇಲಿ ರಕ್ಷಣಾ ಪಡೆಗಳು ನಸ್ರಲ್ಲಾನನ್ನ ಹತ್ಯೆ ಮಾಡಿದ ಬಳಿಕ ನೈಮ್ ಖಾಸಿಮ್ ಭಯೋತ್ಪಾದಕ ಸಂಘಟನೆಯ ಉಪ ಮುಖ್ಯಸ್ಥನಾಗಿದ್ದಾನೆ. ಇದೀಗ ಆತನನ್ನು ಮುಖ್ಯಸ್ಥನಾಗಿ ನೇಮಕ ಮಾಡಲಾಗಿದೆ. ಕಳೆದ ತಿಂಗಳು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕೊಲ್ಲಲ್ಪಟ್ಟ ತನ್ನ ನಾಯಕ ಹಸನ್ ನಸ್ರಲ್ಲಾ ಸ್ಥಾನಕ್ಕೆ ನೈಮ್ ಕಾಸ್ಸೆಮ್’ನನ್ನು ಆಯ್ಕೆ ಮಾಡಲಾಗಿದೆ ಎಂದು ಲೆಬನಾನ್’ನ ಹಿಜ್ಬುಲ್ಲಾ ಉಗ್ರಗಾಮಿ ಗುಂಪು ತಿಳಿಸಿದೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದಿಗೂ ಮೂರು ವರ್ಷ ಕಳೆದಿದೆ. ಅಪ್ಪು ಇಲ್ಲದೆ ಕಳೆದ ಈ ಮೂರು ವರ್ಷಗಳು ಒಂದೊಂದು ಯುಗದಂತೆ ಆಗಿದೆ. ಪುನೀತ್ ರಾಜ್ ಕುಮಾರ್ ಎಂದರೆ ಪ್ರತಿಯೊಬ್ಬರಿಗೂ ವಿಶೇಷ ಪ್ರೀತಿ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರು ಕೂಡ ಪುನೀತ್ ರನ್ನು ಪ್ರೀತಿಯಿಂದ ಕಾಣುತ್ತಿದ್ದರು. ಅಂತೆಯೇ ರಾಘವೇಂದ್ರ ರಾಜ್ ಕುಮಾರ್ ಸೊಸೆ, ಯುವರಾಜ್ ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ ಅವರು ಪುನೀತ್ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು. ಅಪ್ಪು ಪುಣ್ಯಸ್ಮರಣೆಯಂದು ಅವರನ್ನು ಶ್ರೀದೇವಿ ಸ್ಮರಿಸಿದ್ದಾರೆ. ಅಪ್ಪು ಈ ಹಿಂದೆ ಹಾಡಿರುವ ವಿಶೇಷ ವಿಡಿಯೋ ಶೇರ್ ಮಾಡಿ, ಭಾವುಕ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಕುಟುಂಬದ ಕಾರ್ಯಕ್ರಮದಲ್ಲಿ ಕವಿರತ್ನ ಕಾಳಿದಾಸ ಚಿತ್ರದ ‘ಸದಾ ಕಣ್ಣಲ್ಲಿ’ ಹಾಡನ್ನು ಅಪ್ಪು ಹಾಡಿದ್ದರು. ಅದನ್ನು ಸ್ವತಃ ಶ್ರೀದೇವಿ ಅವರು ಚಿತ್ರೀಕರಿಸಿದ್ದರು. ಆ ವಿಡಿಯೋವನ್ನು ಹಂಚಿಕೊಂಡು, ಚಿಕ್ಕಂದಿನಿಂದಲೂ ಅಪ್ಪು ಸಿನಿಮಾ ನೋಡುತ್ತಾ ಬೆಳೆದಿದ್ದೇನೆ. ಆದರೆ ಕಳೆದ 3 ವರ್ಷಗಳಿಂದ ನಾನು ಯಾವುದೇ ಚಿತ್ರವನ್ನು ನೋಡಿಲ್ಲ. ನಿಮ್ಮ ಸಿನಿಮಾಗಳಿಲ್ಲದೆ…
ಪುನೀತ್ ರಾಜ್‌ಕುಮಾರ್ ನಿಧನರಾಗಿ ಇಂದಿಗೆ ಮೂರು ವರ್ಷ ಕಳೆದಿದೆ. ಈ ಹಿನ್ನೆಲೆಯಲ್ಲಿ ರಾಜ್ ಕುಮಾರ್ ಕುಟುಂಬಸ್ಥರು ಸಮಾಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಯುವ ರಾಜ್‌ಕುಮಾರ್, ಚಿಕ್ಕಪ್ಪ ಪುನೀತ್ ಜೊತೆಗಿನ ಒಡನಾಟವನ್ನು ಸ್ಮರಿಸಿದರು. ನಾವೆಲ್ಲರೂ ಅವರ ತರ ಬದುಕೋಕೆ ಪ್ರಯತ್ನಿಸೋಣ ಎಂದು ಯುವ ರಾಜ್ ಕುಮಾರ್ ಕರೆ ನೀಡಿದರು. ಅವರಿಲ್ಲದೇ ಮೂರು ವರ್ಷ ಹೇಗಾಯ್ತು ಅಂತ ಗೊತ್ತಾಗುತ್ತಿಲ್ಲ. ಅವರ ಜೊತೆ ಮಾತನಾಡದೇ ಕಷ್ಟ, ಸುಖ ಹಂಚಿಕೊಳ್ಳದ ದಿನಾನೇ ಇರಲಿಲ್ಲ. ಪ್ರತಿದಿನ ಅವರು ನಮ್ಮ ಜೊತೆ ಇರುತ್ತಾರೆ. ಅವರ ಹಾರೈಕೆ ನಮ್ಮೆಲರ ಮೇಲಿದೆ ಎಂದರು. ಪುನೀತ್ ಚಿಕ್ಕಪ್ಪ ತರಹ ಯಾರು ಆಗೋಕೆ ಆಗಲ್ಲ. ನನ್ನ ಪ್ರಕಾರ, ಅವರು ಒಂದು ಉದಾಹರಣೆ ತೋರಿಸಿ ಕೊಟ್ಟು ಹೋಗಿದ್ದಾರೆ. ಒಬ್ಬ ವ್ಯಕ್ತಿ ಯಾವ ರೀತಿ ಬದುಕಬೇಕು, ಇನ್ನೊಬ್ಬರಿಗೆ ಯಾವ ರೀತಿ ಸಹಾಯ ಮಾಡಬೇಕು ಅನ್ನೋದನ್ನು ತೋರಿಸಿದ್ದಾರೆ. ಆ ಜವಾಬ್ದಾರಿ ನಮ್ಮೆಲ್ಲರ ಮೇಲೂ ಇದೆ ಎಂದಿದ್ದಾರೆ. ಈ ವೇಳೆ,…
ನಗುವಿನ ಸರದಾರ, ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಮೂರು ವರ್ಷ ಕಳೆದಿದೆ. ಅಪ್ಪು ಇಲ್ಲದೆ ಒಂದೊಂದು ಕ್ಷಣವು ಅವರ ಅಭಿಮಾನಿಗಳ ನೋವಿನಲ್ಲೇ ಕಳೆಯುತ್ತಿದ್ದಾರೆ. ಅಪ್ಪು ಅವರ 3ನೇ ವರ್ಷದ ಅಪ್ಪು ಪುಣ್ಯ ಸ್ಮರಣೆಯಲ್ಲಿ ಹಿನ್ನೆಲೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ರಾಜ್ ಕುಮಾರ್ ಸಮಾಧಿಗೆ ಭೇಟಿ ನೀಡಿ ಅಪ್ಪು ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಪ್ಪು 3ನೇ ವರ್ಷದ ಪುಣ್ಯಸ್ಮರಣೆಯಲ್ಲಿ ಪತ್ನಿ ಅಶ್ವಿನಿ, ರಾಘವೇಂದ್ರ ರಾಜ್‌ಕುಮಾರ್, ವಿನಯ್ ರಾಜ್‌ಕುಮಾರ್, ಯುವರಾಜ್ ಕುಮಾರ್, ಅಪ್ಪು ಪುತ್ರಿಯರು ಭಾಗಿಯಾಗಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿ ಬಳಿ ಇಷ್ಟದ ತಿನಿಸುಗಳನ್ನಿಟ್ಟು ಪೂಜೆ ಸಲ್ಲಿಸಿದ್ದಾರೆ. ಸಮಾಧಿಯನ್ನ ವಿಶೇಷವಾಗಿ ಹೂವುಗಳಿಂದ, ದೀಪಗಳಿಂದ ಅಲಂಕಾರ ಮಾಡಲಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳ ದಂಡು ಅಪ್ಪು ಸಮಾಧಿ ಬಳಿ ಜಮಾಯಿಸಿ ನೆಚ್ಚಿನ ನಟನಿಗೆ ನಮನ ಸಲ್ಲಿಸುತ್ತಿದ್ದಾರೆ. ಅಪ್ಪು ಇಲ್ಲ ಎಂದು ಅವರ ಅಭಿಮಾನಿಗಳು ಸುಮ್ಮನೆ ಕುಳಿತಿಲ್ಲ. ಅವರ ಹೆಸರಿನಲ್ಲಿ ಸಾಕಷ್ಟು ಪುಣ್ಯದ ಕೆಲಸಗಳನ್ನು…
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ ಮೂರು ವರ್ಷ. ಪ್ರತಿ ವರ್ಷದಂತೆ ಪುನೀತ್ ಸಮಾಧಿಗೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪುನೀತ್ ರಾಜ್‌ಕುಮಾರ್ ಕುಟುಂಬದವರು ಸಹ ಅಪ್ಪು ಅವರ ಸಮಾಧಿಗೆ ಭೇಟಿ ನೀಡಿ ವಿಶೇಷ ಪೂಜೆ ಮಾಡಿದ್ದಾರೆ. ಅಶ್ವಿನಿ ಪುನೀತ್ ರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಇನ್ನೂ ಹಲವು ಕುಟುಂಬ ಸದಸ್ಯರು ಅಪ್ಪು ಸಮಾಧಿಗೆ ಇಂದು ಪೂಜೆ ಮಾಡಿದ್ದಾರೆ. ಪೂಜೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ರಾಘವೇಂದ್ರ ರಾಜ್‌ಕುಮಾರ್ ಅಪ್ಪು ಅಭಿಮಾನಿಗಳ ಬಳಿ ಮನವಿಯೊಂದನ್ನು ಮಾಡಿದ್ದಾರೆ. ‘ಅಪ್ಪು ನೆನಯದೇ ಇರುವ ದಿನವಿಲ್ಲ. ದಿನಗಳು ಬೇಗ-ಬೇಗ ಹೋಗುತ್ತಲೇ ಇವೆ, ಆದರೆ ನಾವು ಮಾತ್ರ ಪ್ರತಿದಿನವೂ ಪುನೀತ್ ಅನ್ನು ನೆನಪಿಸಿಕೊಳ್ಳುತ್ತಲೇ ಇದ್ದೀವಿ. ಜನಗಳ ಪ್ರೀತಿ-ವಿಶ್ವಾಸ ಕಡಿಮೆ ಆಗುತ್ತಲೇ ಇಲ್ಲ. ವರ್ಷದಿಂದ ವರ್ಷಕ್ಕೆ ಅದು ಹೆಚ್ಚಾಗುತ್ತಲೇ ಇದೆ. ಪ್ರತಿ ವರ್ಷ ಎಲ್ಲರೂ ಬಂದು ಇಲ್ಲಿ ಪೂಜೆ ಮಾಡುತ್ತಿದ್ದಾರೆ. ಅಭಿಮಾನಿಗಳಿಗೆ ಒಂದು ಮನವಿ ಎಂದರೆ, ಅಪ್ಪು ಮಾಡಿದ ಸೇವೆಗಳನ್ನು ನೀವು ಮಾಡಿ,…
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದಿಗೆ ಮೂರು ವರ್ಷ. ಅಪ್ಪು ಅಗಲಿ ಮೂರು ವರ್ಷ ಕಳೆದರು ಇಂದಿಗೂ ಪ್ರತಿಯೊಬ್ಬರ ಹೃದಯದಲ್ಲಿ ಅಜರಾಮರವಾಗಿದ್ದಾರೆ. ಪುನೀತ್ ಅವರ ಆಪ್ತ ಬಳಗದಲ್ಲಿ ಇದ್ದವರಲ್ಲಿ ಜಗ್ಗೇಶ್ ಕೂಡ ಒಬ್ಬರು. ಪುನೀತ್ ಜನಿಸಿದಾಗಿನಿಂದ ಅವರು ನಿಧನ ಹೊಂದುವವರೆಗೆ ಪುನೀತ್ ಜೊತೆಗೆ ಇದ್ದರು. ಪುನೀತ್ ಅವರನ್ನು ಪ್ರತಿ ಹಂತದಲ್ಲಿ ಕಂಡವರು. ಈಗ ಪುನೀತ್ ಬಗ್ಗೆ ಜಗ್ಗೇಶ್ ಭಾವುಕ ಸಾಲುಗಳನ್ನು ಬರೆದುಕೊಂಡಿದ್ದಾರೆ. ಜಗ್ಗೇಶ್ ಅವರು ಚಿತ್ರರಂಗದಲ್ಲಿ, ರಾಜಕೀಯದಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆಗೆ ಅವರು ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡುತ್ತಾ ಇರುತ್ತಾರೆ. ಪುನೀತ್ ಇಲ್ಲ ಎಂಬ ನೋವಿನಲ್ಲಿ ಭಾವುಕ ಸಾಲುಗಳನ್ನು ಜಗ್ಗೇಶ್ ಬರೆದಿದ್ದಾರೆ. ಈ ಸಾಲುಗಳ ಅರ್ಥವನ್ನು ನೋಡಿ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ. ನೀ ಮಗುವಾಗಿದ್ದಾಗ ಅಪ್ಪನ ಮಡಿಲಲ್ಲಿ ಕಂಡಿದ್ದೆ.. ಅಪ್ಪನ ಭುಜದವರೆಗೆ ಬೆಳೆದಾಗ ಅಪ್ಪನ ಪಕ್ಕದಲ್ಲಿ ಕಂಡಿದ್ದೆ.. ಮದುವೆಯಾದಾಗ ಮಡದಿಯ ಪಕ್ಕದಲ್ಲಿ ಕಂಡಿದ್ದೆ.. ನಟನಾಗಿ ಬೆಳದಾಗ ಅಭಿಮಾನಿಗಳ ಹೃದಯದಲ್ಲಿ…
ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ ಇದೀಗ ರಾಜಕೀಯ ಇನ್ನಿಂಗ್ಸ್ ಶುರು ಮಾಡಿದ್ದಾರೆ. 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಬೇಕೆಂಬ ಗುರಿ ಹೊಂದಿರುವ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷದ ವಿರುದ್ಧ ಡಿಎಂಕೆ ಹಾಗೂ ಎಐಡಿಎಂಕೆ ನಾಯಕರು ಮುಗಿಬಿದ್ದಿದ್ದಾರೆ. ವಿಜಯ್ ನಾಯಕತ್ವದ ಟಿವಿಕೆ ಪಕ್ಷವು ಬಿಜೆಪಿಯ ʻಸಿʼಟೀಂ ಎಂದು ಡಿಎಂಕೆ ಕರೆದರೆ, ಎಐಡಿಎಂಕೆ ಹೊಸ ಬಾಟಲಿಯಲ್ಲಿ ಹಳೆಯ ವೈನ್ ಮಿಕ್ಸ್ ಮಾಡಿದಂತಿದೆ ಎಂದು ಟೀಕಿಸಿದ್ದಾರೆ. ತಮಿಳಿಗ ವೆಟ್ರಿಕಳಗಂ ಪಕ್ಷದ ತತ್ವ ಸಿದ್ಧಾಂತಗಳು ವಿವಿಧ ಪಕ್ಷಗಳ ಪ್ರಸ್ತುತ ರಾಜಕೀಯ ನಿಲುವುಗಳ ಕಾಕ್‌ಟೈಲ್ ಆಗಿದೆ ಎಂದು ಗುಡುಗಿರುವ ಎಐಎಡಿಎಂಕೆ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಟ ಕಮಲ್ ಹಾಸನ್ ಅವರ ಮಕ್ಕಳ ನೀಡಿ ಮೈಯಮ್ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಭಾನುವಾರ ನಡೆದ ಪಕ್ಷದ ಮೊದಲ ರಾಜ್ಯಮಟ್ಟದ ಸಮಾವೇಶದಲ್ಲಿ ಮಾತನಾಡಿದ್ದ ವಿಜಯ್, ಬಿಜೆಪಿ ಹಾಗೂ ಭ್ರಷ್ಟ ಡಿಎಂಕೆಯು ನಮ್ಮ ಸೈದ್ಧಾಂತಿಕ ಮತ್ತು ರಾಜಕೀಯ ವಿರೋಧಿಗಳು ಎಂದು ಘೋಷಿಸಿದ್ದರು.…
ಆಡಿಷನ್ ನೆಪದಲ್ಲಿ ನನ್ನನ್ನು ಹೋಟೆಲ್ ಗೆ ಕರೆದು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ 31 ವರ್ಷದ ನಟರೊಬ್ಬರು ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ರಂಜಿತ್ ಬಾಲಕೃಷ್ಣನ್ ವಿರುದ್ಧ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ್ಯಾ.ಹೇಮಾ ಸಮಿತಿ ವರದಿ ಬಿಡುಗಡೆಯಾದ ನಂತರ ರಂಜಿತ್ ಬಂಗಾಳಿ ನಟಿಯೊಬ್ಬರಿಂದ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿದ್ದರು. ಈ ಬೆನ್ನಲ್ಲೇ ರಂಜಿತ್ ವಿರುದ್ಧ ಮತ್ತೊಂದು ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ನಟನೊಬ್ಬನನ್ನ ಐಷಾರಾಮಿ ಹೋಟೆಲ್‌ಗೆ ಕರೆಸಿ, ವಿವಸ್ತ್ರಗೊಳಿಸಿ ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ಉಲ್ಲೇಖವಾಗಿದೆ. ಈ ಕುರಿತು ಬೆಂಗಳೂರು ಈಶಾನ್ಯ ವಿಭಾಗದ ಬಿಐಎಎಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಕೇರಳ ಪೊಲೀಸರು ಪ್ರಕರಣವನ್ನು ಬೆಂಗಳೂರು ಪೊಲೀಸರಿಗೆ ವರ್ಗಾಯಿಸಿದ ನಂತರ ರಂಜಿತ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ರಂಜಿತ್ ವಿರುದ್ಧ ಐಟಿ ಕಾಯ್ದೆಯ ಐಪಿಸಿ ಸೆಕ್ಷನ್…