ಬಿಗ್ ಬಾಸ್ ಮನೆಯಲ್ಲಿರುವ ಜಗದೀಶ್ ಪದೇ ಪದೇ ತಮ್ಮ ಹೇಳಿಕೆಗಳ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಇತ್ತೀಚೆಗಿನ ಟಾಸ್ಕ್ನಲ್ಲಿ ನಟ ತ್ರಿವಿಕ್ರಮ್ ಅವರಿಗೆ ಪೆಟ್ಟಾಗಿದ್ದರಿಂದ ಅವರನ್ನು ವೈದ್ಯರ ಬಳಿ ಕಳಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ತ್ರಿವಿಕ್ರಮ್ ಮಾಡಿದ್ದೆಲ್ಲ ನಾಟಕ ಎಂದು ಲಾಯರ್ ಜಗದೀಶ್ ಹೇಳಿದ್ದಾರೆ. ಸ್ವರ್ಗ ವಾಸಿಗಳು ಮತ್ತು ನರಕವಾಸಿಗಳು ಎಂದು ಎರಡು ತಂಡಗಳಾಗಿ ಬಿಗ್ ಬಾಸ್ ಮನೆ ಭಾಗ ಆಗಿದೆ. ಸ್ವರ್ಗದಲ್ಲಿ ಕೆಲವು ಸವಲತ್ತುಗಳು ಇವೆ. ಆದರೆ ನರಕದಲ್ಲಿ ಇರುವವರಿಗೆ ಬೇಸಿಕ್ ಸೌಕರ್ಯಗಳು ಮಾತ್ರ ಇವೆ. ಹಾಗಾಗಿ ನರಕದಲ್ಲಿ ಇರುವವರು ಸ್ವರ್ಗಕ್ಕೆ ಬರಲು ಪ್ರಯತ್ನಿಸುತ್ತಿದ್ದಾರೆ. ಟಾಸ್ಕ್ ಆಡುವಾಗ ಸಿಕ್ಕಾಪಟ್ಟೆ ಆಗ್ರೆಸಿವ್ ಆಗಿ ಸ್ಪರ್ಧಿಗಳು ನಡೆದುಕೊಳ್ಳುತ್ತಿದ್ದಾರೆ. ಈ ವೇಳೆ ತ್ರಿವಿಕ್ರಮ್ ಅವರಿಗೆ ಪೆಟ್ಟಾಗಿತ್ತು. ಲಾಯರ್ ಜಗದೀಶ್ ಅವರು ಸ್ವರ್ಗದಲ್ಲಿ ಇದ್ದಾರೆ. 5ನೇ ದಿನ ಬೆಳ್ಳಂಬೆಳಗ್ಗೆ ನರಕದ ಬಳಿ ಬಂದ ಅವರು ಗೋಲ್ಡ್ ಸುರೇಶ್ ಎದುರು ನಿಂತು ಈ ಮಾತುಗಳನ್ನು ಹೇಳಿದ್ದಾರೆ. ‘ತ್ರಿವಿಕ್ರಮ್ ಆಸ್ಪತ್ರೆಗೆ ಹೋಗಿದ್ದು ನಾಟಕ. ಅವನಿಗೆ ಪೆಟ್ಟಾಗಿದೆ ಎಂಬುದು ನಿಜ. ಆದರೆ ಆಸ್ಪತ್ರೆಗೆ…
Author: Prajatv Kannada
ಹೃದಯ ಸಂಬಂಧಿ ಸಮಸ್ಯೆಯಿಂದ ‘ಸೂಪರ್ ಸ್ಟಾರ್’ ರಜನಿಕಾಂತ್ ಇತ್ತೀಚೆಗೆ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ತಲೈವನ ಆರೋಗ್ಯ ಸುಧಾರಿಸಿದ್ದು ಮನೆಗೆ ಮರಳಿದ್ದಾರೆ. ರಜನಿಕಾಂತ್ ಆಸ್ಪತ್ರೆಗೆ ಸೇರಿದಾಗ ಅವರ ಆರೋಗ್ಯಕ್ಕಾಗಿ ಅನೇಕರು ಪ್ರಾರ್ಥಿಸಿದ್ದರು. ಅವರೆಲ್ಲರಿಗೂ ಈಗ ರಜನಿ ಧನ್ಯವಾದ ತಿಳಿಸಿದ್ದಾರೆ. ನರೇಂದ್ರ ಮೋದಿ, ಅಮಿತಾಭ್ ಬಚ್ಚನ್ ಸೇರಿದಂತೆ ಹಲವರಿಗೆ ತಲೈವ ಧನ್ಯವಾದ ತಿಳಿಸಿದ್ದಾರೆ. ಅ.3 ರಂದು ರಾತ್ರಿ ರಜನಿಕಾಂತ್ ಅವರ ಡಿಸ್ಚಾರ್ಜ್ ಆಗಿದೆ. ಮನೆಗೆ ಮರಳಿದ ಬಳಿಕ ಸ್ವಲ್ಪ ಚೇತರಿಸಿಕೊಂಡ ಅವರು ಸೋಶಿಯಲ್ ಮೀಡಿಯಾದಲ್ಲಿ ಸರಣಿ ಪೋಸ್ಟ್ ಮಾಡಿದ್ದಾರೆ. ತಮ್ಮ ಬಗ್ಗೆ ಕಾಳಜಿ ತೋರಿಸಿ ರಾಜಕೀಯದ ಗಣ್ಯರು, ಅಭಿಮಾನಿಗಳು, ಮಾಧ್ಯಮದವರು, ಸಿನಿಮಾದ ಸೆಲೆಬ್ರಿಟಿಗಳು ಹಾಗೂ ಆಪ್ತರಿಗೆ ಧನ್ಯವಾದ ಎಂದು ತಮಿಳಿನಲ್ಲಿ ಪೋಸ್ಟ್ ಮಾಡಿದ್ದಾರೆ. ವಿಶೇಷವಾಗಿ ನರೇಂದ್ರ, ಅಮಿತಾಭ್ ಬಚ್ಚನ್, ಚಂದ್ರಬಾಬು ನಾಯ್ಡು, ತಮಿಳುನಾಡು ಗವರ್ನರ್ ರವಿ ಅವರಿಗೆ ರಜನಿಕಾಂತ್ ಧನ್ಯವಾದ ತಿಳಿಸಿದ್ದಾರೆ. ‘ನನ್ನ ಆರೋಗ್ಯದ ಬಗ್ಗೆ ಕಾಳಜಿ ತೋರಿಸಿದ್ದಕ್ಕೆ ಮತ್ತು ವೈಯಕ್ತಿಕವಾಗಿ ವಿಚಾರಿಸಿದ್ದಕ್ಕಾಗಿ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು’…
ಥಿಯೇಟರ್ ನಲ್ಲಿ ಹಿಟ್ ಆದ ಸಿನಿಮಾಗಳು ಬಳಿಕ ಒಟಿಟಿಯಲ್ಲೂ ಕಮಾಲ್ ಮಾಡ್ತಾರೆ. ಕೆಲವೊಂದು ಸಿನಿಮಾಗಳು ನೇರವಾಗಿಯೇ ಒಟಿಟಿಗೆ ಎಂಟ್ರಿಕೊಡ್ತಾವೆ. ಕೆಲವೊಮ್ಮೆ ಒಟಿಟಿಯವರು ಕೂಡ ಸಿನಿಮಾನ ಖರೀದಿಸುವುದಿಲ್ಲ. ಆದರೆ, ಖ್ಯಾತ ನಿರ್ದೇಶಕ ಶಂಕರ್ ಅವರ ಚಿತ್ರವೊಂದು ನೇರವಾಗಿ ಒಟಿಟಿಗೆ ಬರುತ್ತಿದ್ದು ಇದು ಖ್ಯಾತ ನಿರ್ದೇಶಕನಿಗೆ ದೊಡ್ಡ ಅವಮಾನವಾಗಿದೆ. ‘ಇಂಡಿಯನ್ 2’ ಸೋಲಿನ ಬಳಿಕ ‘ಇಂಡಿಯನ್ 3’ ಚಿತ್ರವನ್ನು ಥಿಯೇಟರ್ಲ್ಲಿ ರಿಲೀಸ್ ಮಾಡದೆ ಒಟಿಟಿಯಲ್ಲಿ ಬಿಡುಗಡೆ ಮಾಡುವ ನಿರ್ಣಯ ಕೈಗೊಳ್ಳಲಾಗಿದೆ. ತಮಿಳು ಚಿತ್ರ ನಿರ್ದೇಶಕ ಶಂಕರ್ ಗರಂ ಆಗಿದ್ದಾರೆ. ಸೂಪರ್ ಹಿಟ್ ಸಿನಿಮಾಗಳ ಸರದಾರ ಇದೀಗ ಸೋಲಿನ ಸುಳಿಗೆ ಸಿಲುಕಿದ್ದಾರೆ. ತಾನಾಯ್ತು ತನ್ನ ಸಿನಿಮಾ ಆಯ್ತು ಎಂದು ಇರುವ ಶಂಕರ್ ಗೆ ಇಂಡಿಯನ್ ಸಿನಿಮಾದ ಸೋಲನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.ಭಾರೀ ನಿರೀಕ್ಷೆ ಮೂಡಿಸಿದ್ದ ‘ಇಂಡಿಯನ್-2’ ಸಿನಿಮಾ ನೆಲಕಚ್ಚಿತ್ತು. ಸದ್ಯ ‘ಇಂಡಿಯನ್-3’ ಹಾಗೂ ತೆಲುಗಿ ‘ಗೇಮ್ ಚೇಂಜರ್’ ಸಿನಿಮಾಗಳನ್ನು ತೆರೆಗೆ ತರುವ ಸನ್ನಾಹದಲ್ಲಿದ್ದಾರೆ. ‘ಇಂಡಿಯನ್ 2’ ಸಿನಿಮಾದಲ್ಲಿ ಖ್ಯಾತ ನಟ ಕಮಲ್ ಹಾಸನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು…
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಸದ್ಯದ ಮಟ್ಟಿಗೆ ಹೊರ ಬರುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ನಿನ್ನೆ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಮತ್ತೆ ಮುಂದೂಡಿದೆ. ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರು. ಪೊಲೀಸರ ತನಿಖೆಯನ್ನು ತೀವ್ರವಾಗಿ ಟೀಕಿಸಿದ ನಾಗೇಶ್, ಪ್ರಕರಣದಲ್ಲಿ ಪೊಲೀಸರೇ ಸಾಕ್ಷ್ಯಗಳನ್ನು ಸೃಷ್ಟಿಸಿದ್ದಾರೆಂದು ವಾದಿಸಿದರು. ಆರೋಪ ಪಟ್ಟಿಯಲ್ಲಿ ದಾಖಲಿಸಿರುವ ಪ್ರಕರಣದ ಮಾಹಿತಿಗೂ, ಸಾಕ್ಷ್ಯಗಳು ನೀಡಿರುವ ಹೇಳಿಕೆಗೂ ಸಾಕಷ್ಟು ವ್ಯತ್ಯಾಸ ಇದೆಯೆಂದು ವಾದಿಸಿದ ಸಿವಿ ನಾಗೇಶ್, ರಸ್ತೆ ಬದಿ ಮ್ಯಾಜಿಕ್ ಮಾಡುವವರು ಖಾಲಿ ಡಬ್ಬ ತೋರಿಸಿ ಮೊಲ ಇದೆ ಎನ್ನುತ್ತಾರಲ್ಲ, ಪೊಲೀಸರ ಈ ತನಿಖೆ ಸಹ ಹಾಗೆಯೇ ಇದೆ ಎಂದರು. ದರ್ಶನ್ ಮನೆಯಿಂದ ವಶಪಡಿಸಿಕೊಳ್ಳಲಾದ ಬಟ್ಟೆ, ಶೂಗಳ ವಿಷಯವಾಗಿ ನ್ಯಾಯಾಲಯದ ಗಮನ ಸೆಳೆದ ಸಿವಿ ನಾಗೇಶ್, ‘ನಾನು ಕೃತ್ಯ ನಡೆದ ದಿನದಂದು ಧರಿಸಿದ್ದ ವಸ್ತುಗಳನ್ನು ತೋರಿಸುತ್ತೇನೆ’, ಹೀಗೆಂದು ದರ್ಶನ್ ಹೇಳಿದ್ದಾಗಿ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಆದರೆ ಪಂಚನಾಮೆಯಲ್ಲಿ ದರ್ಶನ್ ಚಪ್ಪಲಿ ಧರಿಸಿದ್ದರೆಂದು ಹೇಳಿದ್ದಾಗಿ ಉಲ್ಲೇಖಿಸಿದ್ದಾರೆ.…
ಬೆಂಗಳೂರು: ಡೆತ್ನೋಟ್ ಬರೆದಿಟ್ಟು ಪಿಜಿಯ ಐದನೇ ಮಹಡಿಯಿಂದ ಹಾರಿ ಆಂಧ್ರ ಪ್ರದೇಶದ ಕಡಪ ಮೂಲದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವೈಟ್ ಫೀಲ್ಡ್ ನ ಪ್ರಶಾಂತ್ ಲೇಔಟ್ ನಲ್ಲಿ ನಡೆದಿದೆ. https://youtu.be/D7MBhnC7XeI?si=2JFJ-h6U0_G1PMgW ಬೆಂಗಳೂರಿನಲ್ಲಿ ನೆಲಸಿದ್ದ ಮೃತ ಯುವತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಇನ್ನು ಸಾಯುವ ಮುನ್ನ ಡೆತ್ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ ಡೆತ್ನೋಟ್ನಲ್ಲಿ ಏನಿದೆ? ಇನ್ನು ಸಾಯುವ ಮುನ್ನ ಡೆತ್ನೋಟ್ ಬರೆದಿಟ್ಟಿರುವ ಯುವತಿ, ‘ನನ್ನ ಮೃತ ದೇಹವನ್ನು ಪಿಎಂ(ಪೋಸ್ಟ್ ಮಾರ್ಟಂ) ಮಾಡಬೇಡಿ. ಯಾವುದೇ ರೀತಿಯ ತನಿಖೆ ಸಹ ನಡೆಸಬೇಡಿ. ನನ್ನ ಪೋಷಕರಿಗೆ ನನ್ನ ಮೃತ ದೇಹ ನೀಡಿ ಎಂದು ಡೆತ್ ನೋಟ್ನಲ್ಲಿ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ನಡದ ಖ್ಯಾತ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ಆರಂಭವಾಗಿ ಕೆಲ ದಿನಗಳು ಮಾತ್ರವೇ ಆಗಿದೆ. ಆದರೆ ಆಗಲೆ ಬಿಗ್ ಬಾಸ್ ವಿರುದ್ಧ ದೂರು ದಾಖಲಾಗಿದೆ. ಬಿಗ್ ಬಾಸ್ ಸೀಸನ್ 11 ಓಪನಿಂಗ್ ಪಡೆದುಕೊಂಡಿದ್ದು ಒಟ್ಟು 17 ಸ್ಪರ್ಧಿಗಳು ದೊಡ್ಮನೆ ಒಳಿಗೆ ಎಂಟ್ರಿ ಕೊಟ್ಟಿದ್ದಾರೆ. ಅದರಲ್ಲೂ ಹೊಸ ಅಧ್ಯಾಯದೊಂದಿಗೆ ಶುರುವಾದ ಈ ಶೋನಲ್ಲಿ ಸ್ವರ್ಗ ಹಾಗೂ ನರಕ ಎಂಬ ಎರಡು ಕಾನ್ಸೆಪ್ಟ್ ಇಟ್ಟುಕೊಂಡಿದೆ. ಆದರೆ ಶುರುವಾಗಿ ಒಂದೇ ವಾರಕ್ಕೆ ಬಿಗ್ಬಾಸ್ ಶೋ ವಿರುದ್ಧ ವಕೀಲೆಯೊಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ವಕೀಲೆ ದೂರು ನೀಡಿದ್ದಾರೆ. ಬಿಗ್ಬಾಸ್ 11ರ ಕಾರ್ಯಕ್ರಮದಲ್ಲಿ ಸ್ವರ್ಗ ಮತ್ತು ನರಕ ಎಂಬ ಎರಡು ವಿಚಾರದ ಮೇಲೆ ಸ್ಪರ್ಧಿಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಭಾರತದ ನಾಗರಿಕರನ್ನು ಖಾಸಗಿ ವ್ಯಕ್ತಿಗಳು ಬಂಧನದಲ್ಲಿರಿಸುವ ಹಕ್ಕನ್ನು ಹೊಂದಿರುವುದಿಲ್ಲ. ಪ್ರಸ್ತುತ ಪ್ರಸಾರವಾಗುತ್ತಿರುವ ಈ ಕಾರ್ಯಕ್ರಮದಲ್ಲಿ ಪುರುಷ ಮತ್ತು ಮಹಿಳೆಯರನ್ನು ಒಂದು ಜೈಲಿನ ರೂಪದಲ್ಲಿರುವ ಬಂದಿಖಾನೆಯಂತಹ ಕೊಠಡಿಯಲ್ಲಿ ನೂರಾರು ಕ್ಯಾಮೆರಾಗಳಲ್ಲಿ ರೆಕಾರ್ಡ್ ಆಗುವಂತೆ ಅಕ್ರಮ ಬಂಧನದಲ್ಲಿ ಇರಿಸಲಾಗಿದೆ. ಆ ಸ್ಪರ್ಧಿಗಳಿಗೆ…
ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ ಸಿನಿಮಾ ರಂಗಕ್ಕೆ ಗುಡ್ ಬಾಯ್ ಹೇಳ್ತಿದ್ದಾರೆ. ರಾಜಕೀಯಕ್ಕೆ ಎಂಟ್ರಿಕೊಡ್ತಿರುವ ಹಿನ್ನೆಲೆಯಲ್ಲಿ ನಟನೆಯಿಂದ ದೂರ ಉಳಿಯಲು ಮುಂದಾಗಿದ್ದಾರೆ. ಸದ್ಯ ವಿಜಯ್ ನಟನೆಯ ಕೊನೆಯ ಸಿನಿಮಾದ ಮುಹೂರ್ತ ಅದ್ದೂರಿಯಾಗಿ ನಡೆದಿದೆ. ಬಾಲಿವುಡ್ನ ಸ್ಟಾರ್ ನಟ ಬಾಬಿ ಡಿಯೋಲ್ ಈ ಸಿನಿಮಾದ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಬಾಬಿಗೆ ಇದು ಎರಡನೇ ತಮಿಳು ಸಿನಿಮಾ ಆಗಿದೆ. ಇದೇ ಸಿನಿಮಾದಲ್ಲಿ ಕನ್ನಡತಿ ಪ್ರಿಯಾಮಣಿ ಸಹ ನಟಿಸಲಿದ್ದಾರೆ. ಭಾರಿ ಬಜೆಟ್ ಸಿನಿಮಾ ಇದಾಗಿದ್ದು, ಕೆಲವೇ ದಿನಗಳಲ್ಲಿ ಶೂಟಿಂಗ್ ಪ್ರಾರಂಭ ಆಗಲಿದೆ. ವಿಜಯ್ ಇದೀಗ ತಮ್ಮ ಕೊನೆಯ ಸಿನಿಮಾದಲ್ಲಿ ನಟಿಸಲಿದ್ದು, ಆ ಸಿನಿಮಾವನ್ನು ಕರ್ನಾಟಕದ ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಮಾಡಲಿದೆ. ಇದು ವಿಜಯ್ರ 69ನೇ ಸಿನಿಮಾ ಆಗಿರಲಿದೆ. ಕೆವಿಎನ್ ನಿರ್ಮಿಸಿ, ವಿಜಯ್ ನಟಿಸಲಿರುವ 69ನೇ ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನೆರವೇರಿದ್ದು, ಸಿನಿಮಾದ ನಿರ್ಮಾಪಕರು, ನಟ, ನಿರ್ದೇಶಕರು, ನಟಿಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮುಹೂರ್ತ ಕಾರ್ಯಕ್ರಮದಲ್ಲಿ ವಿಜಯ್, ಬಾಬಿ ಡಿಯೋಲ್, ಪೂಜಾ ಹೆಗ್ಡೆ, ನಟಿ…
ಮೈಸೂರು ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವನ್ಯಜೀವಿ ವಲಯ ವ್ಯಾಪ್ತಿಯ ಮಲ್ಲಹಳ್ಳಿ ಅರಣ್ಯ ಪ್ರದೇಶದಲ್ಲಿ 45 ವರ್ಷ ವಯಸ್ಸಿನ ಗಂಡಾನೆ ಕಂದಕಕ್ಕೆ ಬಿದ್ದು ಮೃತಪಟ್ಟಿದೆ. ಈ ಭಾಗದಲ್ಲಿ ಕಾಡಾನೆಗಳ ಹಾವಳಿ ತಪ್ಪಿಸಲು ಗ್ರಾಮಸ್ಥರು ಕಂದಕ ನಿರ್ಮಿಸಿದ್ದರು. https://youtu.be/v5UIVA0zfhs?si=bte3MHfrHuniWcox ಆಹಾರ ಅರಸಿ ಗ್ರಾಮದ ಕಡೆ ಬರುವಾಗ ಕಾಡಾನೆ ಕಂದಕಕ್ಕೆ ಬಿದ್ದಿದೆ. ಕಂದಕದಲ್ಲಿ ಸಾವು-ಬದುಕಿನ ನಡುವೆ ನರಳಾಡುತ್ತಿದ್ದ ಕಾಡಾನೆಯನ್ನು ಕಂಡ ಜನ ಕೂಡಲೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಆದರೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಕಾಡಾನೆ ಕೊನೆಯುಸಿರೆಳೆದಿದೆ. ಸದ್ಯ ಜೆಸಿಬಿ ಮೂಲಕ ಮೃತ ಕಾಡಾನೆಯನ್ನು ಅರಣ್ಯ ಸಿಬ್ಬಂದಿ ಹೊರತೆಗೆದಿದ್ದಾರೆ. ಆನೆಯ ಒಂದು ಕಣ್ಣು ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡಿತ್ತು. ಮತ್ತೊಂದು ಕಣ್ಣಿಗೂ ಪೊರೆ ಬಂದಿತ್ತು. ಕರಳಿನ ಕಾಯಿಲೆಯಿಂದಲೂ ಬಳಲುತ್ತಿತ್ತು. ಆನೆ ಹೃದಯಾಘಾತದಿಂದ ಅಸುನೀಗಿದೆ ಎಂದು ವಲಯ ಅರಣ್ಯಾಧಿಕಾರಿ ಸತೀಶ್ ಕುಮಾರ್ ತಿಳಿಸಿದ್ದಾರೆ
ಮೈಸೂರು: ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿರುವುದರ ಹಿಂದೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಕೈವಾಡವಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪಿಸಿದರು. https://youtu.be/s5JQ-BdPePM?si=LdcgGXfn0YKWYux3 ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೇಗಾದರೂ ಮಾಡಿ ಸಿಎಂ ಸ್ಥಾನದಿಂದ ಕೆಳಗಿಳಿಸಬೇಕೆಂಬ ಉದ್ದೇಶದಿಂದ ಬಿಜೆಪಿ- ಜೆಡಿಎಸ್ ಇನ್ನಿಲ್ಲದ ಆರೋಪಗಳನ್ನು ಮಾಡುತ್ತಿವೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಡಾಗೆ ಸಂಬಂಧಿಸಿದಂತೆ ಸೆ. 29ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದರು. ಅವರ ಪತ್ರದ ಆಧಾರದ ಮೇಲೆ ಅಮಿತ್ ಶಾ ಸೂಚನೆ ಮೇರೆಗೆ ಇ.ಡಿ ಪಿಎಂಎಲ್ ಆಕ್ಟ್ ಅಡಿ ಇಸಿಐಆರ್ ದಾಖಲಿಸಿಕೊಂಡಿದೆ. ಅದೇ ದಿನ ಸ್ನೇಹಮಯಿ ಕೃಷ್ಣ ಕೂಡ ಕುಮಾರಸ್ವಾಮಿ ಪತ್ರದ ಮಾದರಿಯಲ್ಲೇ ಇ.ಡಿಗೆ ಇ- ಮೇಲ್ ಮೂಲಕ ದೂರು ಸಲ್ಲಿಸಿದ್ದಾರೆ. ಇದನ್ನೆಲ್ಲ ನೋಡಿದರೆ ವ್ಯವಸ್ಥಿತವಾಗಿ ಬಿಜೆಪಿ ಹಾಗೂ ಜೆಡಿಎಸ್‌ನವರು ಮಾಡುತ್ತಿರುವುದು ಎಂಬುದು ತಿಳಿಯುತ್ತದೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.