ಬೆಂಗಳೂರು:- ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಡುನಿಟ್ಡಿನ ಸೂಚನೆ ನೀಡಿದ್ದಾರೆ. https://youtu.be/2gyM0mjG0sY?si=7s2Z5nJBS4k5AgXF ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ. ಬಡ ಕುಟುಂಗಳವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿಗಳು ಎಚ್ವರಿಕೆ ನೀಡಿದ್ದಾರೆ. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಡುನಿಟ್ಡಿನ ಸೂಚನೆ ನೀಡಿದ್ದಾರೆ. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್…
Author: Prajatv Kannada
ಸಂಗೀತ ಮಾಂತ್ರಿಕ ಎಆರ್ ರೆಹಮಾನ್ ಅವರು ಪತ್ನಿ ಸೈರಾ ಭಾನು ಅವರಿಗೆ ವಿಚ್ಚೇಧನ ಘೋಷಿಸಿದ್ದಾರೆ. ಈ ಮೂಲಕ 29 ವರ್ಷಗಳ ಸಂಸಾರಿಕ ಜೀವನಕ್ಕೆ ಅಂತ್ಯ ಹಾಡಿದ್ದಾರೆ. ರೆಹಮಾನ್ ವಿಚ್ಚೇಧನದ ಸುದ್ದಿ ಸದ್ದು ಮಾಡುತ್ತಿದ್ದಂತೆ ಅವರದ್ದೇ ತಂಡದಲ್ಲಿದ್ದ ಮೋಹಿನಿ ಡೇ ಕೂಡ ತಮ್ಮ ಪತಿಗೆ ವಿಚ್ಚೇದನ ನೀಡಿದ್ದು ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದರು. ಕೆಲವೇ ಗಂಟೆಗಳ ಅಂತರದಲ್ಲಿ ಈ ಎರಡೂ ಡಿವೋರ್ಸ್ ಘೋಷಣೆ ಆಗಿದ್ದು, ಅನೇಕರು ಈ ಎರಡು ಪ್ರಕರಣಗಳ ಮಧ್ಯೆ ಲಿಂಕ್ ಮಾಡಲು ಶುರು ಮಾಡಿದ್ದಾರೆ. ಈ ಬಗ್ಗೆ ಸೈರಾ ಬಾನು ವಕೀಲರು ಸ್ಪಷ್ಟನೆ ನೀಡಿದ್ದು, ಎರಡೂ ಪ್ರಕರಣಗಳ ಮಧ್ಯೆ ಯಾವುದೇ ಲಿಂಕ್ ಇಲ್ಲ ಎಂದಿದ್ದಾರೆ. ಸೈರಾ ಬಾನು ರೆಹಮಾನ್ ರಿಂದ ದೂರವಾಗುತ್ತಿರುವ ಘೋಷಣೆ ಮಾಡಿದ ಕೆಲವೇ ಗಂಟೆಗಳಲ್ಲಿ ಮೋಹಿನಿ ಡೇ ಕೂಡ ತಮ್ಮ ಪತಿ ಮಾರ್ಕ್ ಅವರಿಂದ ಬೇರೆ ಆಗುತ್ತಿರುವುದಾಗಿ ಹೇಳಿದ್ದಾರೆ. ಇದನ್ನು ಕೆಲವರು ಲಿಂಕ್ ಮಾಡಿದ್ದಾರೆ. ಇಬ್ಬರ ಮಧ್ಯೆ ಏನೋ ನಡೆದಿರಬಹುದು ಇದೇ ಕಾರಣಕ್ಕೆ ಎರಡು…
ಕಳೆದ ಎರಡು ದಿನಗಳಿಂದ ಆಸ್ಕರ್ ಪ್ರಶಸ್ತಿ ವಿಜೇತ ಹಾಗೂ ಸಂಗೀತ ಸಂಯೋಜಕ, ಗಾಯಕ ಎಆರ್ ರೆಹಮಾನ್ ಸಖತ್ ಸುದ್ದಿಯಲ್ಲಿದ್ದಾರೆ. 29 ವರ್ಷಗಳ ವೈವಾಹಿಕ ಜೀವಕ್ಕೆ ಗುಡ್ ಬಾಯ್ ಹೇಳಿರುವ ರೆಹಮಾನ್ ಪತ್ನಿ ಸೈರಾ ಬಾನುಗೆ ವಿಚ್ಚೇದನ ಘೋಷಿಸಿದ್ದಾರೆ. 57ನೇ ವಯಸ್ಸಿಗೆ ರೆಹಮಾನ್ ವಿಚ್ಚೇಧನ ಘೋಷಿಸಿರೋದು ಹಲವರಿಗೆ ಶಾಕ್ ಆಗಿದೆ. ಏಕಾಏಕಿ ಇಬ್ಬರು ದೂರ ದೂರವಾಗ್ತಿರೋದಕ್ಕೆ ದಂಪತಿ ಕಾರಣ ತಿಳಿಸಿಲ್ಲ. ಆದರೆ ಇದು ಹಲವರಿಗೆ ಶಾಕ್ ನೀಡಿದೆ. ಅಂದ ಹಾಗೆ ಇಂದು ಸಂಗೀತ ಕ್ಷೇತ್ರದಲ್ಲಿ ಭಾರಿ ಡಿಮ್ಯಾಂಡ್ ಕ್ರಿಯೇಟ್ ಮಾಡಿರುವ ರೆಹಮಾನ್ ಈ ಹಿಂದೆ ಹಿಂದೂವಾಗಿದ್ದರು. ಬಳಿಕ ಮುಸ್ಲಿಂ ಆಗಿ ಬದಲಾದರು. ಇದೇ ಕಾರಣಕ್ಕೆ ರೆಹಮಾನ್ ಮುಸ್ಲಿಂ ಯುವತಿಯನ್ನೇ ಮದುವೆಯಾದರು. ಮುಸ್ಲಿಂ ಧರ್ಮಕ್ಕೆ ಎಆರ್ ರೆಹಮಾನ್ ಮಂತಾತಗೊಂಡು ಹಲವು ವರ್ಷಗಳೇ ಕಳೆದು ಹೋಗಿದೆ. ದಿಲೀಪ್ ಕುಮಾರ್ ಅಲಿಯಾಸ್ ರೆಹಮಾನ್ ಹಿಂದೂ ಎಆರ್ ರೆಹಮಾನ್ ಅವರ ತಂದೆ ಆರ್ ಕೆ ಶೇಖರ್ ಮಲಯಾಳಂ ಚಿತ್ರಗಳಿಗೆ ಸಂಗೀತ ನೀಡುತ್ತಿದ್ದರು. ಮಧ್ಯಮ ವರ್ಗದ ಕುಟುಂಬದಲ್ಲಿ ಬೆಳೆದ ರೆಹಮಾನ್ ಬಾಲ್ಯವು…
ಬೆಂಗಳೂರು: ರಾಜ್ಯ ಸರ್ಕಾರದ ಅಸಮರ್ಥ, ಆ್ಯಕ್ಟೀವ್ ಇಲ್ಲದ ಸಚಿವರನ್ನ ಸಂಪುಟದಿಂದ ಕೈಬಿಡುವ ಚಿಂತನೆ ನಡೆದಿದೆ.ಆರೇಳು ಮಂದಿ ಸಚಿವರನ್ನ ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವ ಚರ್ಚೆ ಜೋರಾಗ್ತಿದೆ.ಜನವರಿಯಲ್ಲಿ ಬಹುತೇಕ ಸಂಪುಟ ಪುನಾರಚನೆ ಮಾಡುವ ಚಿಂತನೆ ಸಿಎಂ ಮುಂದಿದೆ ಎನ್ನಲಾಗ್ತಿದೆ.ಜೊತೆಗೆ ಹೈಕಮಾಂಡ್ ಮಟ್ಟದಲ್ಲೂ ಇದು ಮುನ್ನೆಲೆಗೆ ಬಂದಿದೆ. https://youtu.be/k2moP957xUM?si=_TJzMdkiWEHDnRsj ಯಸ್..ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರ್ಣಗೊಳಿಸ್ತಿದೆ.ಇದೇ ವೇಳೆ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡುವ ಲಕ್ಷಣಗಳು ಶುರುವಾಗಿವೆ.ಡಿಸೆಂಬರ್ ನಂತರ ಸಂಪುಟ ಪುನಾರಚನೆ ಬಹುತೇಕ ಫಿಕ್ಸ್ ಅಂತ ಹೇಳಲಾಗ್ತಿದೆ.ಮೊನ್ನೆ ನಡೆದ ಹಿರಿಯ ಸಚಿವರ ಸಭೆಯಲ್ಲೂ ಈ ವಿಚಾರ ಪ್ರಸ್ತಾಪ ಆಗಿದ್ದು, ಹಿರಿಯ ಸಚಿವರಿಗೆ ಈ ಬಗ್ಗೆ ಸುಳುವು ನೀಡಿದ್ದಾರೆಂಬ ಮಾತಿದೆ.. ಆರೇಳು ಸಚಿವರನ್ನ ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವ ಬಗ್ಗೆ ಸಿಎಂ ಕೂಡ ಮುಕ್ತಮನಸ್ಸಿನಲ್ಲಿದ್ದಾರೆ.ಹೈಕಮಾಂಡ್ ಕೂಡ ಈ ಬಗ್ಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ ಎನ್ನಲಾಗ್ತಿದೆ. ಇನ್ನು ಸಂಪುಟ ಪುನಾರಚನೆ ಮಾಡಿ ಸುಮಾರು ಆರೇಳು ಸಚಿವರನ್ನ ಕೈಬಿಡೋಕೆ ಸಿಎಂ ಚಿಂತಿಸಿದ್ದಾರೆ.ಮೂಡಾ ಹಗರಣ,ವಕ್ಫ್ ವಿವಾದ,ವಾಲ್ಮೀಕಿ ಹಗರಣಗಳವೇಳೆ ಯಾರು…
ಪಾಕಿಸ್ತಾನದ ವಾಯವ್ಯ ಪ್ರಾಂತ್ಯದ ಚೆಕ್‍ಪೋಸ್ಟ್ ಬಳಿ ದುಷ್ಕರ್ಮಿಗಳು ಆತ್ಮಹತ್ಯಾ ಬಾಂಬ್ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 11 ಯೋಧರು ಸೇರಿದಂತೆ 12 ಮಂದಿ ಮೃತಪಟ್ಟಿದ್ದು ಇತರ 7 ಮಂದಿ ಗಾಯಗೊಂಡಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕ್ಷುಬ್ಧ ಖೈಬರ್ ಪಖ್ತೂಂಕ್ವಾ ಪ್ರಾಂತದ ಬನ್ನು ಜಿಲ್ಲೆಯಲ್ಲಿ ಆತ್ಮಹತ್ಯಾ ಬಾಂಬರ್ ಭದ್ರತಾ ಚೆಕ್‍ಪೋಸ್ಟ್‍ಗೆ ಸ್ಫೋಟಕ ತುಂಬಿದ್ದ ವಾಹನವನ್ನು ಅಪ್ಪಳಿಸಿದಾಗ ನಡೆದ ಸ್ಫೋಟದಲ್ಲಿ ದಾಳಿಕೋರ ಹಾಗೂ 11 ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದು 7 ಮಂದಿ ಗಾಯಗೊಂಡಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಭಯೋತ್ಪಾದಕ ಸಂಘಟನೆ ಪಾಕಿಸ್ತಾನ್ ತಾಲಿಬಾನ್‍ನಿಂದ ಪ್ರತ್ಯೇಕಗೊಂಡಿರುವ ಹಫೀಝ್ ಗುಲ್ ಬಹಾದೂರ್ ಗುಂಪು ದಾಳಿಯ ಹೊಣೆಯನ್ನು ಹೊತ್ತುಕೊಂಡಿರುವುದಾಗಿ ವರದಿಯಾಗಿದೆ.
ಇತ್ತೀಚೆಗೆ ಸಿನಿಮಾ ವಿಮರ್ಷಕರ ಸಂಖ್ಯೆ ಹೆಚ್ಚುತ್ತಿದೆ. ಚಿತ್ರ ನೋಡಿ ಬಂದು ಸೋಷಿಯಲ್ ಮೀಡಿಯಾದಲ್ಲಿ ವಿಮರ್ಷೆ ತಿಳಿಸುತ್ತಾರೆ. ಈ ವಿಮರ್ಷೆ ನೋಡಿ ಸಾಕಷ್ಟು ಜನ ಥಿಯೇಟರ್ ಗೆ ಎಂಟ್ರಿಕೊಡ್ತಾರೆ. ಆದರಂತೆ ಇತ್ತೀಚೆಗೆ ರಿಲೀಸ್ ಆದ ‘ಕಂಗುವ’ ಹಾಗೂ ‘ವೆಟ್ಟೈಯಾನ್’ ಸಿನಿಮಾಗಳಿಗೆ ಕೆಟ್ಟ ವಿಮರ್ಶೆ ಸಿಕ್ಕವು. ‘ಕಂಗುವ’ ಸಿನಿಮಾ ನೋಡಿ ಬಂದ ಎಲ್ಲರೂ ಸಾಕಷ್ಟು ಟೀಕೆ ವ್ಯಕ್ತಪಡಿಸಿದರು. ಸಿನಿಮಾ ನೋಡುತ್ತೇನೆ ಎಂದು ಹೊರಡಬೇಕು ಎಂದುಕೊಂಡಿದ್ದವರಿಗೆ ಈ ವಿಮರ್ಶೆಯಿಂದ ಹಿನ್ನಡೆ ಆಯಿತು. ಇದನ್ನು ಗಮನದಲ್ಲಿ ಇಟ್ಟುಕೊಂಡು ತಮಿಳುನಾಡು ನಿರ್ಮಾಪಕರ ಸಂಘ ಪ್ರಮುಖ ನಿರ್ಧಾರ ತೆಗೆದುಕೊಂಡಿದೆ. ವಿಮರ್ಶೆ ಎಂದರೆ ಸಿನಿಮಾ ಬಗ್ಗೆ ಸಂಪೂರ್ಣ ವಿವರ ಇರಬೇಕು. ಆದರೆ, ಇಲ್ಲಿ ಆ ರೀತಿ ಆಗುವುದಿಲ್ಲ. ಸಿನಿಮಾ ಚೆನ್ನಾಗಿದೆ ಅಥವಾ ಚೆನ್ನಾಗಿಲ್ಲ ಎಂದಷ್ಟೇ ಹೇಳಲಾಗುತ್ತದೆ. ಈ ರೀತಿಯ ವಿಮರ್ಶೆಗಳಿಂದಲೇ ‘ಕಂಗುವ’ ಹಾಗೂ ‘ವೆಟ್ಟೈಯಾನ್’ ಸಿನಿಮಾ ಹಿನ್ನಡೆ ಅನುಭವಿಸಿತು ಎಂದು ಕೆಲವರು ಅಭಿಪ್ರಾಯ ಹೊರಹಾಕಿದ್ದಾರೆ. ಈ ಕಾರಣಕ್ಕೆ ತಮಿಳು ನಿರ್ಮಾಪಕರ ಸಂಘದವರು ಥಿಯೇಟರ್ ಮುಂಭಾಗದಲ್ಲಿ ಸಿನಿಮಾ ವಿಮರ್ಶೆ ಮಾಡೋದನ್ನು ಬ್ಯಾನ್ ಮಾಡಿದ್ದಾರೆ.…
ಬಹುನಿರೀಕ್ಷಿತ ಪುಷ್ಪ 2 ಬಿಡುಗಡೆಗೆ ಇನ್ನೆನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಬಾಕಿ ಇದೆ. ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ್ ನಟನೆಯ ಈ ಸಿನಿಮಾವನ್ನು ಮೈತ್ರಿ ಮೂವಿ ಮೇಕರ್ಸ್ ಅದ್ದೂರಿಯಾಗಿ ತೆರೆಗೆ ತರ್ತಿದೆ. ಸಿನಿಮಾದ ಪ್ರಚಾರಕ್ಕೆಂದೇ ಸುಮಾರು 50 ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಸಿನಿಮಾದ ಒಟ್ಟು ಬಜೆಟ್ 500 ಕೋಟಿಗೂ ಹೆಚ್ಚಾಗಿದೆ. ಸಿನಿಮಾಕ್ಕೆ ಹೂಡಿರುವ ಬಂಡವಾಳ ವಾಪಸ್ ಪಡೆಯಲು ಟಿಕೆಟ್ ದರಗಳನ್ನು ಹೆಚ್ಚಿಸಲು ಚಿತ್ರತಂಡ ಮುಂದಾಗಿದೆ. ಆದರೆ ಇದಕ್ಕೆ ಅಲ್ಲು ಅರ್ಜುನ್ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಂಧ್ರ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಸಿನಿಮಾ ಟಿಕೆಟ್ ದರಗಳ ಮೇಲೆ ನಿಯಂತ್ರಣ ಹೇರಲಾಗಿದೆ. ಒಂದೊಮ್ಮೆ ದೊಡ್ಡ ಬಜೆಟ್ ಸಿನಿಮಾಗಳು ಬಿಡುಗಡೆ ಆಗುವುದಿದ್ದರೆ ಸರ್ಕಾರದಿಂದ ಅನುಮತಿ ಪಡೆದ ಬಳಿಕವಷ್ಟೆ ಟಿಕೆಟ್ ದರಗಳನ್ನು ಹೆಚ್ಚಿಸಿಕೊಳ್ಳಬೇಕಾಗುತ್ತದೆ. ಟಿಕೆಟ್ ದರ ಎಷ್ಟು ಹೆಚ್ಚಿಸಬೇಕು, ಎಷ್ಟು ದಿನಗಳ ಕಾಲ ಟಿಕೆಟ್ ದರ ಹೆಚ್ಚಿಗೆ ಇರಬೇಕು ಎಂಬಿತ್ಯಾದಿಯನ್ನು ಸರ್ಕಾರವೇ ಸೂಚಿಸುತ್ತದೆ. ಇದೀಗ ‘ಪುಷ್ಪ 2’ ಸಿನಿಮಾದ ಟಿಕೆಟ್ ದರ ಹೆಚ್ಚಳ…
ಸಂಗೀತ ಮಾಂತ್ರಿಕ ಎಆರ್ ರೆಹಮಾನ್ 29 ವರ್ಷಗಳ ಸುದೀರ್ಘ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ. ಸೈರಾ ಬಾನುಗೆ ಡಿವೋರ್ಸ್ ಘೋಷಿಸಿದ ಬೆನ್ನಲೇ ರೆಹಮಾನ್ ತಂಡದ ಸದಸ್ಯರಾದ ಬಾಸಿಸ್ಟ್ ವಾದಕಿ ಮೋಹಿನಿ ಡೇ ತಮ್ಮ ಪತಿ, ಸಂಯೋಜಕ ಮಾರ್ಕ್ ಹಾರ್ಟ್ಸುಚ್‌ನಿಂದ ಬೇರ್ಪಡುವುದಾಗಿ ಘೋಷಿಸಿದ್ದಾರೆ. ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ಸುದ್ದಿಯನ್ನು ಮೋಹಿನಿ ಡೇ ಸ್ಪಷ್ಟಪಡಿಸಿದ್ದಾರೆ. ರೆಹಮಾನ್ ತಮ್ಮದೇ ಟ್ರೂಫ್ ಹೊಂದಿದ್ದು, ಈ ಟ್ರೂಫ್ನಲ್ಲಿ ಮೋಹಿನಿ ಅವರು ಬಾಸಿಸ್ಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, ಬರೆದುಕೊಂಡಿರುವ ಮೋಹಿನಿ, “ಭಾರವಾದ ಹೃದಯದಿಂದ, ಮಾರ್ಕ್ ಮತ್ತು ನಾನು ಬೇರ್ಪಟ್ಟಿದ್ದೇವೆ ಎಂದು ಘೋಷಿಸುತ್ತೇವೆ. ಮೊದಲನೆಯದಾಗಿ, ನಮ್ಮ ಸ್ನೇಹಿತರು ಮತ್ತು ಕುಟುಂಬಕ್ಕೆ, ಇದು ನಮ್ಮ ನಡುವಿನ ಪರಸ್ಪರ ನಿರ್ಧಾರ. ನಾವು ಉತ್ತಮ ಸ್ನೇಹಿತರಾಗಿದ್ದರೂ, ನಮ್ಮ ಜೀವನದಲ್ಲಿ ಇಬ್ಬರಿಗೂ ಬೇರೆ ಬೇರೆ ಅಂಶಗಳು ಬೇಕಾಗಿವೆ. ಪರಸ್ಪರ ಒಪ್ಪಂದ ಪಡೆದು ಬೇರೆ ಆಗುತ್ತಿದ್ದೇವೆ. ಖಾಸಗಿತನಕ್ಕೆ ಆದ್ಯತೆ ನೀಡಿ ಎಂದಿದ್ದಾರೆ. ಡಿವೋರ್ಸ್ ಜತೆಗೆ ಮುಂದೆ ಅನೇಕ ಹೊಸ ಯೋಜನೆಗಳ ಮೂಲಕ ಕನ್‌ಬ್ಯಾಕ್ ಆಗುವುದಾಗಿ ಹೇಳಿಕೊಂಡಿದ್ದಾರೆ…
ಬಿಗ್ ಬಾಸ್ ಮನೆಯಲ್ಲಿ ದಿನದಿಂದ ದಿನಕ್ಕೆ ಆಟ ಜೋರಾಗುತ್ತಿದೆ. 50ನೇ ದಿನಕ್ಕೆ ವೈಲ್ಡ್ ಕಾರ್ಡ್ ಮೂಲಕ ಶೋಭಾ ಶೆಟ್ಟಿ ಹಾಗೂ ರಜತ್ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಬಿಗ್ ಬಾಸ್ ವೇದಿಕೆಗೆ ಕಾಲಿಡ್ತಿದ್ದಂಗೆ ಇಬ್ಬರು ಸಾಕಷ್ಟು ಮಾತನಾಡಿದ್ದರು. ಅಲ್ಲದೆ ಶೋಭಾ ಶೆಟ್ಟಿ ಜೋರು ಧ್ವನಿಯಲ್ಲಿ ಕಿರುಚಾಡುತ್ತಾ ಎಲ್ಲರಿಗೂ ನಡುಕ ಹುಟ್ಟಿಸಲು ಪ್ರಯತ್ನಿಸಿದ್ದರು. ಆದರೆ ಮೊದಲ ಆಟದಲ್ಲೇ ಶೋಭಾ ಶೆಟ್ಟಿಗೆ ಹಿನ್ನಡೆ ಆಗಿದೆ ಇದರಿಂದ ಶೋಭಾ ಕಣ್ಣೀರು ಹಾಕಿದ್ದಾರೆ. ಇಂದಿನ ಸಂಚಿಕೆಯಲ್ಲಿನ ಪ್ರೋಮೋವೊಂದನ್ನು ವಾಹಿನಿ ಹಂಚಿಕೊಂಡಿದೆ. ಅದರಲ್ಲಿ ಶೋಭಾ ಮತ್ತು ಭವ್ಯಾ ಗೌಡ ನೇತೃತ್ವದಲ್ಲಿ ಎರಡು ಟೀಮ್‌ಗಳಾಗಿ ವಿಂಗಡಿಸಿದ್ದಾರೆ. ಎದುರಾಳಿ ತಂಡ ಭವ್ಯಾಗಿಂತ ವೇಗವಾಗಿ ಟಾಸ್ಕ್ ಪೂರ್ಣಗೊಳಿಸಬೇಕು ಎಂಬ ಆತುರದಲ್ಲಿ ಶೋಭಾ ಆಟ ಆಡುವಾಗ ಎತ್ತರದಿಂದ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ. ಇದನ್ನು ನೋಡಿ ಸಹಸ್ಪರ್ಧಿಗಳು ಒಂದು ಕ್ಷಣ ಶಾಕ್ ಆಗಿದ್ದಾರೆ. ಎತ್ತರದಿಂದ ಬಿದ್ದರೂ ಕೂಡ ಅವರು ಆಟ ನಿಲ್ಲಿಸಲಿಲ್ಲ. ದೇವರ ಸ್ಮರಣೆ ಮಾಡುತ್ತಾ ಆಟ ಮುಂದುವರಿಸಿದರು. ಹಾಗಿದ್ದರೂ ಕೂಡ ಅವರಿಗೆ ಗೆಲವು ಸಿಗಲಿಲ್ಲ. ಅಂತಿಮವಾಗಿ…
ಸಂಭಾವ್ಯ ವಾಯುದಾಳಿಯ ಮಾಹಿತಿ ಪಡೆದ ನಂತರ ಉಕ್ರೇನ್ ರಾಜಧಾನಿ ಕೀವ್‍ನಲ್ಲಿನ ಅಮೆರಿಕದ ರಾಯಭಾರ ಕಚೇರಿಯನ್ನು ಮುಚ್ಚಲಾಗಿದೆ ಎಂದು ವರದಿಯಾಗಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ ರಾಯಭಾರ ಕಚೇರಿಯನ್ನು ಮುಚ್ಚಲಾಗುವುದು ಮತ್ತು ರಾಯಭಾರ ಕಚೇರಿಯ ಸಿಬ್ಬಂದಿಗಳಿಗೆ ಸುರಕ್ಷಿತ ಪ್ರದೇಶಕ್ಕೆ ತೆರಳಲು ಸೂಚಿಸಲಾಗಿದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆಯ ಕಾನ್ಸುಲರ್ ವ್ಯವಹಾರಗಳ ವಿಭಾಗ ಹೇಳಿದೆ. ವಾಯುದಾಳಿಯ ಎಚ್ಚರಿಕೆ ಕೇಳಿಬಂದರೆ ತಕ್ಷಣ ಸುರಕ್ಷಿತ ಸ್ಥಳಕ್ಕೆ ತೆರಳಲು ಸಿದ್ಧವಾಗಿರುವಂತೆ ಅಮೆರಿಕದ ಪ್ರಜೆಗಳಿಗೆ ರಾಯಭಾರ ಕಚೇರಿ ಸೂಚಿಸಿದೆ. ಅಮೆರಿಕ ಒದಗಿಸಿದ ಎಟಿಎಸಿಎಂಎಸ್ ಕ್ಷಿಪಣಿಗಳನ್ನು ಬಳಸಿ ಮಂಗಳವಾರ ಉಕ್ರೇನ್ ರಶ್ಯದ ವಿರುದ್ಧ ದಾಳಿ ನಡೆಸಿದ ಬೆನ್ನಲ್ಲೇ ಅಮೆರಿಕ ರಾಯಭಾರ ಕಚೇರಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.