Author: Prajatv Kannada
ತುಮಕೂರು ಜೈಲಿನಿಂದ ಬಿಡಗಡೆಗೊಂಡಿದ್ದಾರೆ. ಸೆ.23 ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ಮೂವರು ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್, ಹಾಗೂ ನಿಖಿಲ್‌ಗೆ ಷರತ್ತುಬದ್ಧ ಜಾಮೀನು ನೀಡಲಾಗಿತ್ತು. ಎ-16 ಆರೋಪಿ ಕೇಶವಮೂರ್ತಿಗೆ ಹೈಕೋಟ್‌ನಿಂದ ಹಾಗೂ ಎ-15 ಆರೋಪಿ ಕಾರ್ತಿಕ್, ಎ-17 ಆರೋಪಿ ನಿಖಿಲ್‌ಗೆ 57ನೇ ಸಿಸಿಹೆಚ್ ಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಸಿಕ್ಕಿತ್ತು. ಕೋರ್ಟ್ 2 ಲಕ್ಷ ರೂ. ಹಣ ಹಾಗೂ ಇಬ್ಬರು ಶೂರಿಟಿದಾರರನ್ನ ಹೊಂದಿಸಲು ಆರೋಪಿಗಳ ಕುಟುಂಬಸ್ಥರ ಬಳಿ ಕೇಳಿದ್ದರು. ಆದರೆ ಜಾಮೀನು ಶ್ಯೂರಿಟಿಗೂ ಹಣವಿಲ್ಲದೇ ಆರೋಪಿಗಳ ಕುಟುಂಬಸ್ಥರು ಪರದಾಡುತ್ತಿದ್ದರು. ಸತತ 9 ದಿನಗಳಿಂದ ಶ್ಯೂರಿಟಿದಾರರು ಸಿಗದೇ ಪರದಾಟ ನಡೆಸಿದ್ದ ಕುಟುಂಬಸ್ಥರಿಗೆ ಮಂಗಳವಾರ ಜಾಮೀನು ಶ್ಯೂರಿಟಿ ಪ್ರಕ್ರಿಯೆ ಪೂರ್ಣಗೊಂಡಿದೆ. ಮಂಗಳವಾರ ರಾತ್ರಿ ತುಮಕೂರು ಜೈಲಾಧಿಕಾರಿಗಳಿಗೆ ಜಮೀನು ಆದೇಶದ ಪ್ರತಿ ಮೇಲ್ ಮೂಲಕ ತಲುಪಿದ್ದು, ಬುಧವಾರ ಎ-16 ಆರೋಪಿ ಕೇಶವಮೂರ್ತಿ, ಎ-15 ಆರೋಪಿ ಕಾರ್ತಿಕ್, ಎ-17 ಆರೋಪಿ ನಿಖಿಲ್ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ರಾಮನಗರ: ಚನ್ನಪಟ್ಟಣದಲ್ಲಿ ಬೀದಿನಾಯಿಗಳ ಹಾವಳಿ ಮತ್ತಷ್ಟು ಹೆಚ್ಚಾಗಿದೆ. ಕಳೆದ ನಾಲ್ಕೈದು ದಿನಗಳ ಹಿಂದೆ ನಗರದ ಮೆಹದಿನಗರದಲ್ಲಿ ಪುಟ್ಟ ಮಗುವಿನ ಮೇಲೆ ನಾಯಿದಾಳಿ ಮಾಡಿತ್ತು. ಈಗ ಮತ್ತೆ ನಗರದ ಸಾತನೂರು ಸರ್ಕಲ್ ಬಳಿಯ ಬಡಾವಣೆಯಲ್ಲಿ 4 ವರ್ಷದ ಹೆಣ್ಣುಮಗು ಆಲ್ಫಿಯ ಎಂಬಾಕೆಯ ಮೇಲೆ ಬೀದಿನಾಯಿ ದಾಳಿ ಮಾಡಿ ಮಗುವಿನ ಬಾಯಿಗೆ ಗಂಭೀರ ಗಾಯವಾಗಿದೆ. ಇನ್ನು ಈ ಬಗ್ಗೆ ನಗರಸಭೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ನಾಯಿಗಳ ಕಾಟ ಹೆಚ್ಚಾಗಿದೆ, ಇದರಿಂದಾಗಿ ಪುಟ್ಟಮಕ್ಕಳಿಗೆ ಸಮಸ್ಯೆ ಆಗ್ತಿದೆ. ಬೇಗ ಕ್ರಮವಹಿಸಿ ಎಂದು ಆಗ್ರಹಿಸಿದ್ದಾರೆ.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಗ್ರಾಮದ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಹಾಗೂ ಗಾಂಧಿ ಜಯಂತಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು ಶಾಲೆಯ ಸುಮಾರು 80ಕ್ಕೂ ಅಧಿಕ ಮಕ್ಕಳು ಗಾಂಧೀಜಿ ಹಾಗೂ https://youtu.be/w2PohSDY9Ns?si=5_rS8hTIVbe5W6Mw ಕಸ್ತೂರಬಾ ವೇಷದಾರಿಗಳಾಗಿ ಮತ್ತು ಮಹಾತ್ಮರ ಭಾವಚಿತ್ರಗಳನ್ನು ಹಿಡಿದು ಊರಿನ ಪ್ರಮುಖ ಬೀದಿಗಳಲ್ಲಿ ಪ್ರಭಾತ್ ಪೇರಿ ಸಾಗಿ ಮಹಾತ್ಮರ ಘೋಷಣೆಗಳನ್ನು ಕೂಗುತ್ತಾ ದೇಶಭಕ್ತಿ ಗೀತೆಗಳನ್ನು ಹಾಡುತ್ತಾ ಮಹನೀಯರ ಸಂದೇಶಗಳನ್ನು ಸಾರ್ವಜನಿಕರಿಗೆ ತಲುಪಿಸಿದರು.ಶಾಲೆಯ ಮಕ್ಕಳು ಶಿಸ್ತಿನಿಂದ ಮಹಾತ್ಮ ಗಾಂಧೀಜಿ ಮತ್ತು ಕಸ್ತೂರಬಾ ಗಾಂಧಿ ಇವರ ವೇಷಭೂಷಣಕ್ಕೆ ಗ್ರಾಮಸ್ಥರು ಮನಸೋತು ಮೆಚ್ಚುಗೆ ವ್ಯಕ್ತಪಡಿಸಿದರು.
ಬೆಂಗಳೂರು:- ಅ. 8 ರವರೆಗೂ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. https://youtu.be/5jOiXtGl4Ro?si=07dAbfCC6i6o3jSh ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಇಂದು ಶುಭ್ರ ಆಕಾಶವಿದೆ, ಎಚ್ಎಎಲ್ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ…
ಬೆಂಗಳೂರು:- ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯಲ್ಲೂ ಫಲಾನುಭವಿಗಳಿಗೆ ಶಾಕ್ ಕೊಟ್ಟಿದೆ. ಕಳೆದ ಮೂರು ತಿಂಗಳುಗಳಿಂದ ಹಣ ಬಿಪಿಎಲ್ ಫಲಾನುಭವಿಗಳ ಕೈಸೇರಿಲ್ಲ. ಹೀಗಾಗಿ ಫಲಾನುಭವಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. https://youtu.be/ewgYFKTvakQ?si=SrCD0tZKWLzQ7XSp ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಫಾಲಾನುಭವಿಗಳು ಒಟ್ಟಿಗೆ ಸೇರಿ ಸಭೆ ಮಾಡಿ, ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ತಿಂಗಳಿನಿಂದ ಹಣವನ್ನೂ ಕೊಡದೆ, ಅಕ್ಕಿಯನ್ನೂ ಕೊಡದೆ ಆಹಾರ ಮತ್ತು ನಾಗಾರೀಕ ಸರಬರಾಜು ಇಲಾಖೆಯ ಜನರಿಗೆ ಟೋಪಿಹಾಕುವ ಕೆಲಸ ಮಾಡುತ್ತಿದೆ. ಮೂರು ತಿಂಗಳಿನಿಂದ ಹಣ ಬಂದಿಲ್ಲ. ಹಣವೂ ಇಲ್ಲದೇ ಅಕ್ಕಿಯೂ ಇಲ್ಲದೇ ಬಡವರ್ಗದ ಜನರು ಪರದಾಡುತ್ತಿದ್ದಾರೆ. ಅಕ್ಕಿ ಕೊಡುತ್ತೇವೆ ಎಂದು ಅಶ್ವಾಸನೆ ಕೊಟ್ಟು ಅಧಿಕಾರಕ್ಕೆ ಬಂದರು. ಇದೀಗ ಒಂದು ವರ್ಷ ಕಳೆಯುತ್ತಾ ಬಂದರೂ ಅಕ್ಕಿ ಕೊಟ್ಟಿಲ್ಲ. ಅಲ್ಲದೇ ಅಕ್ಕಿಯ ಬದಲಾಗಿದೆ ಹಣ ಕೊಡುತ್ತೇವೆ ಎಂದರು. ಆದರೆ ಆರು ತಿಂಗಳು ಹಣ ಹಾಕಿ ಈಗ ಸುಮ್ಮನಾಗಿದ್ದಾರೆ. ನಮಗೆ ಹಣದ ಅಗತ್ಯ ಇಲ್ಲ. ಹಣದ ಬದಲು ನಮಗೆ ಅಕ್ಕಿಯನ್ನೇ ಕೊಡಿ. ಅಥವಾ ಅಕ್ಕಿ ಸಿಗದಿದ್ದರೆ ದಿನಸಿ ಪದಾರ್ಥಗಳನ್ನ ಕೊಡಿ ಎಂದು…
ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ದೂರು ನೀಡಿದ್ದ ಸ್ನೇಹಮಯಿಗೆ ಕೃಷ್ಣಗೆ ಸಂಕಷ್ಟ ಶುರುವಾಗಿದೆ https://youtu.be/5jOiXtGl4Ro?si=oZMDqtK3Ac_CatHG ಮುಡಾ ಹಗರಣ ಸದ್ಯ ಸಿಎಂ ಸಿದ್ದರಾಮಯ್ಯ ಪಾಲಿಗೆ ಬರೀ ಮುಳ್ಳಲ್ಲ ಜಾಲಿ ಮುಳ್ಳಾಗಿದೆ. ನಂಜಾಗಿ ತೀವ್ರ ನೋವುಂಟು ಮಾಡುತ್ತಿದೆ. ತನ್ನ ಹೆಸ್ರಲ್ಲಿರೋ 14 ಮುಡಾ ಸೈಟ್ಗಳ ವಿಚಾರವಾಗಿ ಪತಿ ವಿರುದ್ಧ ಕೇಳಿ ಬರ್ತಿದ್ದ ಅಕ್ರಮ ಆರೋಪದ ವಿರುದ್ಧ ಸಿಎಂ ಪತ್ನಿ ಸಿಡಿದೆದ್ದಿದ್ದಾರೆ. ಖುದ್ದು ಪಾರ್ವತಿಯವರೇ ಮುಡಾ ಆಯುಕ್ತರಿಗೆ 14 ಸೈಟ್ಗಳನ್ನ ವಾಪಸ್ ನೀಡೋದಾಗಿ ಪತ್ರ ಬರೆದಿದ್ದಾರೆ. ಮಾತ್ರವಲ್ಲದೇ ಸೈಟ್‌ಗಳನ್ನು ವಾಪಸ್ ಮಾಡಿದ್ದಾರೆ. ಸಿಎಂ ಪತ್ನಿ ಮುಡಾ ಸೈಟ್‌ಗಳನ್ನು ವಾಪಸ್ ನೀಡುವ ಬಗ್ಗೆ ಪತ್ರ ಬರೆದ ಬೆನ್ನಲ್ಲೇ 14 ಸೈಟ್ಗಳ ಖಾತೆ ರದ್ದಾಗಿದೆ. ಪತ್ರ ಬರೆದ 24 ಗಂಟೆಗಳ ಒಳಗಾಗಿ ಸೈಟ್ಗಳು ವಾಪಸ್ ಆಗಿವೆ. ಮೈಸೂರು ನೋಂದಣಿ ಕಚೇರಿಯಲ್ಲಿ ಸೈಟ್ಗಳು ರದ್ದಾಗಿದ್ದು ಸೈಟ್ ರದ್ದು ಪತ್ರಕ್ಕೆ ಸಿಎಂ ಪತ್ನಿ ಪಾರ್ವತಿ ಸಹಿ ಮಾಡಿದ್ದಾರೆ. ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣಗೆ ಸಂಕಷ್ಟ ಶುರುವಾಗಿದೆ. 2015ರ…
ಮಂಗಳವಾರ ತಡರಾತ್ರಿ ಮಧ್ಯ ಇಸ್ರೇಲ್‌ನ ಟೆಲ್ ಅವಿವ್‌ನ ಜಾಫಾ ಪಟ್ಟಣದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು ದಾಳಿಯಲ್ಲಿ ಕನಿಷ್ಠ ಎಂಟು ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾಳಿಕೋರರು ಮನ ಬಂದಂತೆ ಗುಂಡಿನ ದಾಳಿಸಿದ್ದು ಈ ವೇಳೆ ಭದ್ರತಾ ಸಿಬ್ಬಂದಿ ಇಬ್ಬರು ದುಷ್ಕರ್ಮಿಗಳನ್ನು ಹೊಡೆದುರುಳಿಸಿದ್ದಾರೆ. ಹತ್ಯೆಗೀಡಾದ ಇಬ್ಬರು ವೆಸ್ಟ್‌ಬ್ಯಾಂಕ್‌ನ ಹೆಬ್ರಾನ್‌ನಿಂದ ಆಗಮಿಸಿದ್ದರು ರಂದು ರಕ್ಷಣಾ ಪಡೆ ತಿಳಿಸಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ 8 ಮಂದಿ ಮೃತಪಟ್ಟಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಟ್ರಾಫಿಕ್ ಕ್ರಾಸಿಂಗ್ ಬಳಿ ಗುಂಡಿನ ದಾಳಿ ನಡೆದ ನಂತರ ಹೆಚ್ಚಿನ ಸಾವುನೋವುಗಳು ಸಂಭವಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೈಲು ನಿಲ್ದಾಣದಲ್ಲಿ ಇಬ್ಬರು ಮನಬಂದಂತೆ ಗುಂಡು ಹಾರಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಚೆನ್ನೈನಲ್ಲಿ ಪೆಟ್ರೋಲ್ 13 ಪೈಸೆ ಮತ್ತು ಡೀಸೆಲ್ 13 ಪೈಸೆಗಳಷ್ಟು ಅಗ್ಗವಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ. ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ. ಡೀಸೆಲ್ 88.94 ರೂ. ಇದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.97 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 104.95 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 91.76 ರೂ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 100.85 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.43 ರೂ ಬಿಹಾರದಲ್ಲಿ ಪೆಟ್ರೋಲ್ ಲೀಟರ್‌ಗೆ 9 ಪೈಸೆ ಇಳಿಕೆಯಾಗಿದ್ದು, 107.12 ರೂ. ಪ್ರತಿ ಲೀಟರ್. ಯುಪಿಯಲ್ಲಿ, ಪೆಟ್ರೋಲ್ 8 ಪೈಸೆ ಇಳಿಕೆಯ ನಂತರ ಲೀಟರ್‌ಗೆ 94.49 ರೂ.ಗೆ ಮತ್ತು ಡೀಸೆಲ್ 9 ಪೈಸೆ ಇಳಿಕೆಯ ನಂತರ ಲೀಟರ್‌ಗೆ 87.55 ರೂ.ಗೆ ಲಭ್ಯವಿದೆ. ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಬೆಲೆ 18 ಪೈಸೆ ಇಳಿಕೆಯಾಗಿದ್ದು ಲೀಟರ್‌ಗೆ 104.35 ರೂ.ಗೆ ಮತ್ತು…
ಜಾಮೀನು ಸಿಕ್ಕ ಬಳಿಕವು ಶ್ಯೂರಿಟಿ ಸಿಗದೆ ಪರದಾಡುತ್ತಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೂವರು ಆರೋಪಿಗಳು ಇಂದು ತುಮಕೂರು ಜೈಲಿನಿಂದ ಬಿಡಗಡೆಗೊಂಡಿದ್ದಾರೆ. ಸೆ.23 ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ಮೂವರು ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್, ಹಾಗೂ ನಿಖಿಲ್‌ಗೆ ಷರತ್ತುಬದ್ಧ ಜಾಮೀನು ನೀಡಲಾಗಿತ್ತು. ಎ-16 ಆರೋಪಿ ಕೇಶವಮೂರ್ತಿಗೆ ಹೈಕೋಟ್‌ನಿಂದ ಹಾಗೂ ಎ-15 ಆರೋಪಿ ಕಾರ್ತಿಕ್, ಎ-17 ಆರೋಪಿ ನಿಖಿಲ್‌ಗೆ 57ನೇ ಸಿಸಿಹೆಚ್ ಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಸಿಕ್ಕಿತ್ತು. ಕೋರ್ಟ್ 2 ಲಕ್ಷ ರೂ. ಹಣ ಹಾಗೂ ಇಬ್ಬರು ಶೂರಿಟಿದಾರರನ್ನ ಹೊಂದಿಸಲು ಆರೋಪಿಗಳ ಕುಟುಂಬಸ್ಥರ ಬಳಿ ಕೇಳಿದ್ದರು. ಆದರೆ ಜಾಮೀನು ಶ್ಯೂರಿಟಿಗೂ ಹಣವಿಲ್ಲದೇ ಆರೋಪಿಗಳ ಕುಟುಂಬಸ್ಥರು ಪರದಾಡುತ್ತಿದ್ದರು. ಸತತ 9 ದಿನಗಳಿಂದ ಶ್ಯೂರಿಟಿದಾರರು ಸಿಗದೇ ಪರದಾಟ ನಡೆಸಿದ್ದ ಕುಟುಂಬಸ್ಥರಿಗೆ ಮಂಗಳವಾರ ಜಾಮೀನು ಶ್ಯೂರಿಟಿ ಪ್ರಕ್ರಿಯೆ ಪೂರ್ಣಗೊಂಡಿದೆ. ಮಂಗಳವಾರ ರಾತ್ರಿ ತುಮಕೂರು ಜೈಲಾಧಿಕಾರಿಗಳಿಗೆ ಜಮೀನು ಆದೇಶದ ಪ್ರತಿ ಮೇಲ್ ಮೂಲಕ ತಲುಪಿದ್ದು, ಬುಧವಾರ ಎ-16 ಆರೋಪಿ ಕೇಶವಮೂರ್ತಿ, ಎ-15 ಆರೋಪಿ ಕಾರ್ತಿಕ್, ಎ-17 ಆರೋಪಿ ನಿಖಿಲ್…