ಕಳೆದ ನಾಲ್ಕು ವಾರಗಳ ಹಿಂದೆ ಆರಂಭವಾದ ಬಿಗ್ ಬಾಸ್ ಸೀಸನ್ 11 ಮೊದಲ ವಾರಕ್ಕೆ ಭರ್ಜರಿ ಟಿಆರ್‌ಪಿ ಕಂಡಿತ್ತು. ಆದರೆ ಇದೀಗ ಬಿಗ್ ಬಾಸ್ ಟಿಆರ್ ಪಿ ಕುಸಿದಿದೆ. ಜಗದೀಶ್ ಇದ್ದ ಕಾರಣಕ್ಕೆ ಬಿಗ್ ಬಾಸ್‌ಗೆ ಒಳ್ಳೆಯ ಟಿಆರ್‌ಪಿ ಸಿಕ್ಕಿತ್ತು ಎಂಬುದು ಕೆಲವರ ಅಭಿಪ್ರಾಯ. ಇದರ ಜೊತೆಗೆ ಈ ಮೊದಲು ಟಿಆರ್ ಪಿ ನಲ್ಲಿ ನಂಬರ್ ವನ್ ಸ್ಥಾನದಲ್ಲಿದ್ದ ಪುಟ್ಟಕ್ಕನ ಮಕ್ಕಳು ಕಳೆದ ಕೆಲ ವಾರಗಳಿಂದ ಕುಸಿತ ಕಂಡಿತ್ತು. ಇದೀಗ ಮತ್ತೆ ಕಮ್ ಬ್ಯಾಕ್ ಮಾಡಿದೆ. ಪುಟ್ಟಕ್ಕನ ಮಕ್ಕಳು ಧಾರಾವಾಹಿ ಮತ್ತೆ ಮೊದಲ ಸ್ಥಾನಕ್ಕೆ ಬಂದಿದೆ. ಒಪನಿಂಗ್ ದಿನ 9+ ಟಿಆರ್‌ಪಿ ಪಡೆದು ಮೊದಲ ಸ್ಥಾನ ಪಡೆದುಕೊಂಡಿತು. ಶನಿವಾರ ಬಿಗ್ ಬಾಸ್‌ಗೆ 7.3 ಟಿಆರ್‌ಪಿ ಸಿಕ್ಕಿದೆ. ಭಾನುವಾರ 6.9 ಟಿಆರ್‌ಪಿ ಸಿಕ್ಕಿದೆ. ವಾರದ ದಿನಗಳಲ್ಲಿ 7.0 ಟಿಆರ್‌ಪಿ ಸಿಕ್ಕಿದೆ. ವಾರಾಂತ್ಯದ ಟಿಆರ್ಪಿಯಲ್ಲಿ ಸಾಕಷ್ಟು ಕುಸಿತ ಕಂಡಿದೆ. ಇನ್ನು ಈ ವಾರದಿಂದ ಕೂಡ ಅಷ್ಟೇನೂ ಸಂಚಿಕೆ ಚೆನ್ನಾಗಿ ಆಗುತ್ತಿಲ್ಲ ಎನ್ನುವುದು ಕೆಲವರ ಅಭಿಪ್ರಾಯ.…
Author: Prajatv Kannada
ಅಲ್ಲು ಅರ್ಜುನ್ ನಟನೆಯ ಬಹುನಿರೀಕ್ಷಿತ ಪುಷ್ಪ ಸಿನಿಮಾಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ. ಹಲವು ಭಾರಿ ರಿಲೀಸ್ ಡೇಟ್ ಮುಂದೂಡಿದ್ದ ಚಿತ್ರತಂಡ ಇದೀಗ ಕೊನೆಗೂ ಸಿನಿಮಾ ರಿಲೀಸ್ ಮಾಡೋಕೆ ಮುಂದಾಗಿದೆ. ಇದೇ ಡಿಸೆಂಬರ್ 5ರಂದು ಬಿಡುಗಡೆ ಆಗಲಿದ್ದು, ಸದ್ಯ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಸಾಕಷ್ಟು ನಿರೀಕ್ಷೆ ಮೂಡಿಸಿರುವ ಪುಷ್ಪಾ 2 ಸಿನಿಮಾ ರಿಲೀಸ್ ಗೂ ಮುನ್ನವೇ 420 ಕೋಟಿ ರೂ. ಕಲೆಕ್ಷನ್ ಮಾಡಿದ್ದು ಈ ಬಗ್ಗೆ ಸಿನಿಮಾದ ನಿರ್ಮಾಪಕರೇ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ‘ಪುಷ್ಪ 2’ ಸಿನಿಮಾದ ನಿರ್ಮಾಪಕರು ಮತ್ತು ವಿತರಕರು ಸುದ್ದಿಗೋಷ್ಠಿ ನಡೆಸಿ ಸಿನಿಮಾದ ಬಗ್ಗೆ ಸಾಕಷ್ಟು ಮಾಹಿತಿ ಹಂಚಿಕೊಂಡಿದ್ದಾರೆ. ‘ಈವರೆಗಿನ ಬೇರೆಲ್ಲ ಸಿನಿಮಾಗಳಿಂತ ಅತಿ ಹೆಚ್ಚಿನ ಮೊತ್ತಕ್ಕೆ ಪ್ರೀ-ರಿಲೀಸ್ ಬಿಸ್ನೆಸ್ ಆಗಿದೆ. ಬಿಡುಗಡೆ ಬಳಿಕ ಆರಾಮಾಗಿ 1000 ಕೋಟಿ ರೂಪಾಯಿ ಬಿಸ್ನೆಸ್ ಆಗಲಿದೆ’ ಎಂದು ಪುಷ್ಪಾ 2 ಸಿನಿಮಾದ ಮೇಲೆ ಭರವಸೆ ನೀಡಿದ್ದಾರೆ. ನಿರ್ಮಾಪಕರು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಆಗಸ್ಟ್ ತಿಂಗಳಲ್ಲೇ ಬಿಡುಗಡೆ ಆಗಬೇಕಿತ್ತು. ಆದರೆ ಸಿನಿಮಾದ…
40 ವರ್ಷಗಳ ಸುದೀರ್ಘ ಕನಸನ್ನು ನಟ ಜಗ್ಗೇಶ್ ನನಸು ಮಾಡಿಕೊಂಡಿದ್ದಾರೆ. 1980ರಲ್ಲಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ನಟ ಜಗೇಶ್ ಇದೀಗ ತಮ್ಮದೆ ಹೆಸರಿನ ಸ್ಟುಡಿಯೋ ಆರಂಭಿಸಿದ್ದಾರೆ. ಸಹೋದರ ಕೋಮಲ್ ನಿರ್ಮಾಣದ ಯಲಾಕುನ್ನಿ ಸಿನಿಮಾದ ಎಲ್ಲ ಕೆಲಸ ‘ಜಗ್ಗೇಶ್ ಸ್ಟುಡಿಯೊಸ್’ ನಲ್ಲಿ ನಡೆಯುತ್ತಿದೆ. ಅಂದ ಹಾಗೆ ಈ ಸ್ಟುಡಿಯೋಗೆ ಜಗ್ಗೇಶ್ ಪತ್ನಿ ಪರಿಮಳ ನೀಡಿದ ಸಲಹೆಯಂತೆ ‘ಜಗ್ಗೇಶ್ ಸ್ಟುಡಿಯೊಸ್’ ಎಂದು ಹೆಸರು ಇಟ್ಟಿದ್ದಾರೆ. ನನ್ನ ಚಿಕ್ಕ ಮಗ ಯತಿರಾಜನ ಕನಸಿನ ಪ್ರಾಜೆಕ್ಟ್ ಈ ಸ್ಟುಡಿಯೋ’ ಎಂದು ಜಗ್ಗೇಶ್ ಹೇಳಿದ್ದಾರೆ. ‘ಗಾಂಧಿನಗರದಲ್ಲಿ ಒಂದು ಸ್ಟುಡಿಯೋದಲ್ಲಿ ಎನ್.ಎಸ್. ರಾವ್ ಅವರು ಡಬ್ಬಿಂಗ್ ಮಾಡುತ್ತಾ ಇದ್ದದ್ದು ನೋಡಿ ನಾನು ಇಂಪ್ರೆಸ್ ಆಗಿದ್ದೆ. ಆ ಸ್ಟುಡಿಯೋಗೆ ಆ ಸಮಯದಲ್ಲಿ 8.9 ಲಕ್ಷ ರೂಪಾಯಿ ಖರ್ಚು ಆಗಿತ್ತು ಎಂಬುದು ಗ್ರೇಟ್. ನನ್ನ ಸಿನಿಮಾ ಬದುಕಿನ ವರ್ಣ ರಂಜಿತ ಜರ್ನಿಗೆ ಚಾಮುಂಡೇಶ್ವರಿ ಸ್ಟುಡಿಯೋ ದೊಡ್ಡ ಪಾತ್ರ ವಹಿಸುತ್ತದೆ. ‘ಬಂಡ ನನ್ನ ಗಂಡ’ ಮೂಲಕ ನಾನು ಹೀರೋ ಆದೆ. ಆ ಸಮಯ ಶಂಕರನಾಗ್ ಅವರು ಸಂಕೇತ್…
ಅಮೆರಿಕಾ ಅಧ್ಯಕ್ಷೀಯ ಚುನಾವಣಾ ಕಣ ರಂಗೇರಿದೆ. ಟ್ರಂಪ್ ಹಾಗೂ ಹ್ಯಾರಿಸ್ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಈ ನಡುವೆ ದೇಶ ಮುನ್ನಡೆಸಲು ಡೊನಾಲ್ಡ್ ಟ್ರಂಪ್ ಅಸಮರ್ಥ ಎಂದು ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯೂ ಆಗಿರುವ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ವಾಗ್ದಾಳಿ ನಡೆಸಿದ್ದಾರೆ. ‘ಡೊನಾಲ್ಡ್ ಟ್ರಂಪ್ ಅವರು ಅಮೆರಿಕ ಅಧ್ಯಕ್ಷರಾಗಿದ್ದಾಗ ಸೇನಾ ಮುಖ್ಯಸ್ಥರಾಗಿದ್ದ ಜಾನ್ ಕೆಲ್ಲಿ ಮಂಗಳವಾರ ಹೇಳಿದ್ದಂತೆ, ಟ್ರಂಪ್ ಅವರಿಗೆ ಅಡಾಲ್ಫ್ ಹಿಟ್ಲರ್ ಬಳಿ ಇದ್ದಂತಹ ಸೇನಾ ಅಧಿಕಾರಿಗಳು ಬೇಕಿದ್ದರು. ಅಮೆರಿಕ ಸಂವಿಧಾನಕ್ಕೆ ಬದ್ಧವಾಗಿರುವಂತಹ ಸೇನೆ ಅವರಿಗೆ ಬೇಕಿರಲಿಲ್ಲ; ತಮಗೆ ನಿಷ್ಠವಾಗಿ ಇರುವಂತಹ ಸೇನೆ ಬೇಕಿತ್ತು’ ಎಂದು ಕಮಲಾ ಟೀಕಿಸಿದ್ದಾರೆ. ತಮ್ಮವರೇ ಆದ ಅಮೆರಿಕನ್ನರನ್ನು ಒಳಗಿನ ಶತ್ರುಗಳು ಎಂದು ಕಳೆದೊಂದು ವಾರದಲ್ಲಿ ಟ್ರಂಪ್ ಪದೇಪದೆ ಕರೆದಿದ್ದಾರೆ. ಅಮೆರಿಕ ಪ್ರಜೆಗಳ ಮೇಲೆ ಎರಗಲು ಸೇನೆಯನ್ನು ಬಳಸುವುದಾಗಿಯೂ ಹೇಳಿದ್ದಾರೆ. ಅವರೊಬ್ಬ ಸರ್ವಾಧಿಕಾರಿ ಹಾಗೂ ಅಂತಹ ಮನಃಸ್ಥಿತಿಯವರನ್ನೇ ಬೆಂಬಲಿಸುತ್ತಾರೆ ಎನ್ನುವುದಕ್ಕೆ ಈ ಮಾತುಗಳು ಪುಷ್ಟಿ ನೀಡುತ್ತವೆ ಎಂದು ಹೇಳಿದ್ದಾರೆ.
ರಷ್ಯಾದ ಕಜಾನ್‌ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆ ಸಂದರ್ಭದಲ್ಲಿ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವಿನ ಸಭೆಗೆ ‘ಹೆಚ್ಚು ಮಹತ್ವ’ ದೊರೆತಿದೆ ಎಂದು ಚೀನಾ ಹೇಳಿದೆ. ಎರಡೂ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ವೃದ್ಧಿಗೆ ಸಂಬಂಧಿಸಿ ಸಾಮಾನ್ಯ ವಿಚಾರಗಳ ಕುರಿತು ಉಭಯ ನಾಯಕರು ಒಪ್ಪಂದಕ್ಕೆ ಬಂದಿರುವ ಕಾರಣ ಈ ಸಭೆಗೆ ಮಹತ್ವ ಬಂದಿದೆ ಎಂದು ವಿದೇಶಾಂಗ ಸಚಿವಾಲಯ ವಕ್ತಾರ ಲಿನ್ ಜಿಯಾನ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಮೋದಿ, ಷಿ ಮಾತುಕತೆಯನ್ನು ಚೀನಾ ಯಾವ ರೀತಿ ವಿಶ್ಲೇಷಿಸುತ್ತದೆ ಎಂಬ ಪತ್ರಕರ್ತರ ಪ್ರಶ್ನೆಗೆ, ‘ದ್ವಿಪಕ್ಷೀಯ ಸಂಬಂಧ ವೃದ್ಧಿಗಾಗಿ ಭಾರತದೊಂದಿಗೆ ತಾನು ಕೆಲಸ ಮಾಡಲು ಸಿದ್ಧ ಎಂಬ ತನ್ನ ನಿಲುವನ್ನು ಚೀನಾ ಮತ್ತೊಮ್ಮೆ ಸ್ಪಷ್ಟಪಡಿಸಿದೆ’ ಎಂದು ಉತ್ತರಿಸಿದರು. ‘ಪರಸ್ಪರರಲ್ಲಿ ವಿಶ್ವಾಸ ಹೆಚ್ಚಳ, ಸಂವಹನ ಮತ್ತು ಸಹಕಾರವನ್ನು ಮತ್ತಷ್ಟು ಹೆಚ್ಚಿಸಲು ಚೀನಾ ಸಿದ್ಧವಿದೆ. ಭಾರತದೊಂದಿಗಿನ ಭಿನ್ನಾಭಿಪ್ರಾಯಗಳನ್ನು ನಿವಾರಿಸಿಕೊಂಡು ದ್ವಿಪಕ್ಷೀಯ ಸಂಬಂಧಗಳನ್ನು ಪುನಃ ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯುವುದಕ್ಕೂ ಸಿದ್ಧವಿದೆ’ ಎಂದರು.
ಬೆಟ್ಟದ ನೆಲ್ಲಿಕಾಯಿಯ ರುಚಿಯನ್ನು ಬಲ್ಲದವರು ಯಾರೂ ಇಲ್ಲ. ಆರ್ಯುವೇದ ವಿಜ್ಞಾನದಲ್ಲಂತೂ ನೆಲ್ಲಿಕಾಯಿಗೆ ಬಹಳ ಮಹತ್ವವಿದೆ. ಶತ ಶತಮಾನಗಳಿಂದಲೂ ನೆಲ್ಲಿಕಾಯಿಗಳನ್ನು ಔಷಧಿಯ ರೂಪದಲ್ಲಿ ಬಳಕೆ ಮಾಡಲಾಗುತ್ತಿದೆ.ವಿಟಮಿನ್ ಸಿ ಹಾಗೂ ಆಂಟಿಆಕ್ಸಿಡಂಟ್ ಗುಣಗಳು ಮತ್ತು ಅಗತ್ಯ ಪೋಷಕಾಂಶಗಳನ್ನು ಹೊಂದಿರುವ ನೆಲ್ಲಿಕಾಯಿಯು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ , ಜೀರ್ಣಕ್ರಿಯೆಯನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಮುಂಬರುವ IPL ಗೂ ಮುನ್ನ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಹೊರಬರಲಿದ್ದಾರೆ ಎಂಬ ಮಾಹಿತಿ ಹೊರ ಬಿದ್ದಿದೆ. ಹೀಗಾಗಿ ರಿಷಬ್ ಖರೀದಿಸಲು ಉಳಿದ ಪ್ರಾಂಚೈಸಿಗಳು ಮುಗಿ ಬೀಳುವ ಸಾಧ್ಯತೆ ಇದೆ.ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆಯಲು ಮುಂದಾಗಿರುವುದೇಕೆ ಎಂಬುದೇ ಪ್ರಶ್ನೆ. ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ಕೆಲ ಫ್ರಾಂಚೈಸಿಗಳಿಂದ ಪಂತ್ ಬಂದಿರುವ ಬಿಗ್ ಆಫರ್ಗಳು. ಹೀಗೆ ಎಡಗೈ ದಾಂಡಿಗನ ಮೇಲೆ ಕಣ್ಣಿಟ್ಟಿರುವ ಫ್ರಾಂಚೈಸಿಗಳ ಪೈಕಿ ಅಗ್ರಸ್ಥಾನದಲ್ಲಿರುವುದ ಚೆನ್ನೈ ಸೂಪರ್ ಕಿಂಗ್ಸ್ ಎಂಬುದು ವಿಶೇಷ. ಐಪಿಎಲ್ ಮೆಗಾ ಹರಾಜಿನ ಸುದ್ದಿಯ ಬೆನ್ನಲ್ಲೇ ರಿಷಭ್ ಪಂತ್ ಜೊತೆ ಚೆನ್ನೈ ಸೂಪರ್ ಕಿಂಗ್ಸ್ ಮಾತುಕತೆ ನಡೆಸಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಮಹೇಂದ್ರ ಸಿಂಗ್ ಧೋನಿಯ ಉತ್ತರಾಧಿಕಾರಿಯಾಗಿ ಅವರನ್ನು ನೇಮಿಸಿಕೊಳ್ಳಲು ಸಿಎಸ್ಕೆ ಆಸಕ್ತಿವಹಿಸಿದ್ದು, ಹೀಗಾಗಿ ಪಂತ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಹೊರಬರುತ್ತಿರುವ ಸುದ್ದಿಯ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಟಾರ್ಗೆಟ್ ಲಿಸ್ಟ್ನಲ್ಲೂ ರಿಷಭ್ ಪಂತ್…
ರಾಮನಗರ: ಬೊಂಬೆ ನಾಡಿನ ಮಿನಿ ಸಮರದಲ್ಲಿಸಿ..ಪಿ.ಯೋಗೇಶ್ವರ್ ನನ್ನ ಕಾಂಗ್ರೆಸ್ ಪಕ್ಷಕ್ಕೆ ಕರೆತರುವ ಮೂಲಕ,ದಳಪತಿಗಳಿಗೆ ಡಿಕೆ ಬದ್ರರ್ಸ್ ಮಾಸ್ಟರ್ ಸ್ಟ್ರೋಕ್ ನೀಡಿದ್ದಾರೆ. ಇದೀಗ ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಅಧಿಕೃತವಾಗಿ ಸಿಪಿ ಯೋಗೇಶ್ವರ್ ಚನ್ನಪಟ್ಟಣ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.ಚನ್ನಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು. ಸಿಪಿ ಯೋಗೇಶ್ವರ್ ಗೆ ಅಪಾರ ಜನಸಾಗರದೊಂದಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ , ಸಚಿವ ರಾಮಲಿಂಗಾ ರೆಡ್ಡಿ ಸಾಥ್ ನೀಡಿದ್ದಾರೆ. ಅಭಿವೃದ್ಧಿಗೆ ಕೈ ಜೋಡಿಸಬೇಕು ಎನ್ನುವ ದೃಷ್ಟಿಯಿಂದ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರಿದ್ದು ಚನ್ನಪಟ್ಟಣದ ಸ್ವರೂಪವೇ ಬದಲಾಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ನಿಂದ ಯೋಗೇಶ್ವರ್ ಅವರೇ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದ್ದರು. ಅದರಂತೆ ಇಂದು ಯೋಗೇಶ್ವರ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಬೆಂಗಳೂರು, ಅಕ್ಟೋಬರ್ 24: ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದ್ದು, ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಗಾಯಗೊಂಡವರಿಗೆ ಚಿಕಿತ್ಸೆ ಜೊತೆಗೆ ಪರಿಹಾರ ನೀಡಲು ಸರ್ಕಾರದ ಚಿಂತನೆ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ 8 ಜನರು ಸಾವು ಸಂಭವಿಸಿದ್ದು, ಅವರ ಶವಗಳನ್ನು ಹೊರತೆಗೆಯಲಾಗಿದ್ದು, ಉಳಿದಂತೆ 8 ಜನರನ್ನು ರಕ್ಷಣೆ ಮಾಡಲಾಗಿದೆ. ಅವರಲ್ಲಿ ಆರು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದವರಿಗೆ ಗಂಭೀರ ಗಾಯಗಳಾಗಿವೆ. ರಕ್ಷಣೆ ಮಾಡಿರುವವರು ಪ್ರಾಣಾಪಾಯದಿಂದ ಪಾರಾಗಿದ್ದು, ಅವರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸುತ್ತಿದೆ. ಸಾವನ್ನಪ್ಪಿರುವ 8 ಜನರಿಗೆ ತಲಾ 2 ಲಕ್ಷ ಕಾರ್ಮಿಕ ಇಲಾಖೆಯಿಂದ , 3 ಲಕ್ಷ ಬಿಬಿಎಂಪಿಯಿಂದ , ಒಟ್ಟು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಣೆ…
ಬೆಂಗಳೂರು: ಸಿಪಿವೈ ಕಾಂಗ್ರೆಸ್ ಸೇರ್ಪಡೆಗೊಂಡ ಬೆನ್ನಲ್ಲೇ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿಯನ್ನು ಜೆಡಿಎಸ್ ಕಣಕ್ಕೆ ಇಳಿಸಿದೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಹೆಚ್‌ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ನಾಯಕರ ಜೊತೆ ನಡೆಸಿದ ಸಭೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.ಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ, ಕಾರ್ಯಕರ್ತರ ಒತ್ತಡಕ್ಕೆ ಮಣಿದು ನಿಖಿಲ್ ಸ್ಪರ್ಧೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಅವರಿಗೆ ಕುಮಾರಸ್ವಾಮಿಯನ್ನ ಹೇಗಾದ್ರು ಮುಗಿಸಬೇಕು ಅಂತ ಇದೆ.ಚನ್ನಪಟ್ಟಣದ ಕಾರ್ಯಕರ್ತರು, ಜನರು ಇದಕ್ಕೆ ಉತ್ತರ ಕೊಡಬೇಕು. ನಾನೇ ಚನ್ನಪಟ್ಟಣಕ್ಕೆ ಬಂದು ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದರು. ಕುಮಾರಸ್ವಾಮಿ ತೆರವಾಗಿರುವ ಕ್ಷೇತ್ರಕ್ಕೆ ದೇವೇಗೌಡರ ಕುಟುಂಬದವರೇ ಅಭ್ಯರ್ಥಿ ಆಗಬೇಕು ಎಂದು ಕಾರ್ಯಕರ್ತರ ಒತ್ತಾಸೆಯಾಗಿತ್ತು. ಅಷ್ಟೇ ಅಲ್ಲದೇ ನಿಖಿಲ್ ಅಭ್ಯರ್ಥಿ ಆಗದೇ ಹೋದರೆ ನಾವು ಚುನಾವಣೆ ನಡೆಸುವುದಿಲ್ಲ ಎಂಬ ಸಂದೇಶವನ್ನು ದಳಪತಿಗಳಿಗೆ ಚನ್ನಪಟ್ಟಣ ನಾಯಕರು ರವಾನೆ ಮಾಡಿದ್ದರು. ಈ ಕಾರಣಕ್ಕೆ ಅಂತಿಮವಾಗಿ ಕುಮಾರಸ್ವಾಮಿ ಅವರನ್ನೇ ಜೆಡಿಎಸ್ ಕಣಕ್ಕೆ ಇಳಿಸಿದೆ. ಸಭೆಯಲ್ಲಿ ಮಾಜಿ ಪ್ರಧಾನಿ ಎಚ್ ಡಿ…