ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆ ಏರಿಕೆ ಮಾಡಿರುವುದನ್ನು ವಿರೋಧಿಸಿ ನಗರದಲ್ಲಿಂದು ಉತ್ತರ ಅಟೋ ಚಾಲಕ ಮಾಲೀಕರು ಹಾಗೂ ಹುಬ್ಬಳ್ಳಿ ಅಟೋ ಸಂಘದ ವತಿಯಿಂದ ಪ್ರತಿಭಟನೆ ನಡೆಸಿದರು. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಯಿಂದಾಗಿ ನಿತ್ಯದ ಜೀವನದಲ್ಲಿ ಆಟೋ ಚಾಲಕರು ಹಾಗೂ ಇನ್ನಿತರೆ ಪ್ರಯಾಣ ಕರ ವಾಹನಗಳ ಮಾಲೀಕರು ಪರದಾಡು ವಂತಾಗಿದೆ.
ಅಲ್ಲದೆ ಸರಕು ಸಾಗಾಣ ಕೆ ಮೇಲೆ ವಾಹನಗಳ ಮಾಲೀಕರು ಹೆಚ್ಚು ಹಣ ವಸೂಲಿ ಮಾಡುತ್ತಿದ್ದು, ಜನರು ತೊಂದರೆಗೆ ಒಳಗಾಗುತ್ತಿದ್ದಾರೆ. ಆದ್ದರಿಂದ ತಕ್ಷಣವೇ ಕೇಂದ್ರ ಸರ್ಕಾರ ಅಬಕಾರಿ ಸುಂಕ ಕಡಿಮೆ ಮಾಡಿ ಪೆಟ್ರೋಲ್ ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ಸೇರಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯ ವಿಧಾನಸಭೆ ಚುನಾ ವಣೆ ಮುಗಿಯುವವರೆಗೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಸದ ಕೇಂದ್ರ ಸರ್ಕಾರ ಚುನಾವಣೆ ಮುಗಿದ ನಂತರ ಇದ್ದಕ್ಕಿದ್ದಂತೆ ಯಾವುದೇ ಮುನ್ಸೂಚನೆ ನೀಡದೆ ದಿನ ದಿಂದ ದಿನಕ್ಕೆ ಬೆಲೆ ಏರಿಸುತ್ತಿದೆ. ಇದರಿಂದ ಸಾಮಾನ್ಯ ಜನರ ಮೇಲೆ ದೊಡ್ಡ ಪೆಟ್ಟು ಬೀಳುತ್ತಿದೆ ಎಂದು
ಉತ್ತರ ಕರ್ನಾಟಕ ಅಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯಾ ಮಠಪತಿ ಆಕ್ರೋಶ ವ್ಯಕ್ತಪಡಿಸಿದರು. ನಿಲೀಂಜನ ರಸ್ತೆಯಿಂದ ನಗರದ ಪ್ರಮುಖ ರಸ್ತೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ಮಿನಿವಿಧಾನ ಸೌಧಕ್ಕೆ ಆಗಮಿಸಿ ತಹಸೀಲ್ದಾರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು