ಡೆಂಗಿಯಿಂದ ಯಾವುದೇ ಪ್ರಾಣ ಹಾನಿಯಾಗದಿರಲಿ, ಅಧಿಕಾರಿಗಳು ಪ್ರತಿಯೊಂದು ಗ್ರಾಮದಲ್ಲಿ ಜಾಗೃತಿ ಮೂಡಿಸಬೇಕು ಎಂದು ಮುಂಡರಗಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಲಕ್ಷ್ಮಣ್ ಪೂಜಾರ್ ತಿಳಿಸಿದರು. ಮುಂಡರಗಿ ಪಟ್ಟಣದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಜರುಗಿದ ಡೆಂಗಿ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಅಧಿಕಾರಿಗಳಿಗೆ ತಿಳಿಸಿದ್ರು.
ನಿಂತ ನಿರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುವುದರಿಂದ ಮನೆ, ಜನವಸತಿ ಪ್ರದೇಶಗಳ ಸುತ್ತಮುತ್ತಲಿನ ಪ್ರದೇಶ ಸ್ವಚ್ಛವಾಗಿಟ್ಟುಕೊಳ್ಳುವುದು ಅವಶ್ಯವಿದೆ ಸೊಳ್ಳೆ ಕಚ್ಚುವುದರಿಂದ ಡೆಂಗಿ ಜ್ವರ ಬರಲಿದ್ದು ಈ ಬಗ್ಗೆ ಶಾಲಾ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು ಪಟ್ಟಣದ ಎಲ್ಲಾ ವಾರ್ಡಿನಲ್ಲೂ ಸೊಳ್ಳೆಗಳ ನಿಯಂತ್ರಣಕ್ಕಾಗಿ ಈಗಾಗಲೇ ಫಾಗಿಂಗ್ ಮಾಡಿಸಲಾಗುತ್ತಿದೆ ಚರಂಡಿಗಳನ್ನು ಸ್ವಚ್ಛಗೊಳಿಸುವುದು, ನಿಂತ ನೀರನ್ನು ತೆರವು ಗೊಳಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ್ ಹೊಸಮನಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದರು.