ಚಾಮರಾಜನಗರ:- ಗಡಿಜಿಲ್ಲೆ ಚಾಮರಾಜನಗರದಲ್ಲಿ ಹಿಂದೂಪರ ಸಂಘಟನೆಗಳು ಈ ಬಾರಿ ಅಯೋಧ್ಯೆ ರಾಮನ ಅವತಾರದ ಗಣಪತಿಮೂರ್ತಿಯನ್ನು ಪ್ರತಿಷ್ಠಾಪಿಸಿದರು.
ಗಡಿಜಿಲ್ಲೆ ಚಾಮರಾಜನಗರದಲ್ಲಿ ಹಿಂದೂಪರ ಸಂಘಟನೆಗಳು ಈ ಬಾರಿ ಅಯೋಧ್ಯೆ ರಾಮನ ಅವತಾರದ ಗಣಪತಿಯನ್ನು ಪ್ರತಿಷ್ಠಾಪಿಸಿದ್ದಾರೆ.
ಇದಕ್ಕೂ ಮುನ್ನ ಮಂಗಳವಾದ್ಯದಲ್ಲಿ ಗಣೇಶಮೂರ್ತಿಯನ್ನು ಮೆರವಣಿಗೆಯಲ್ಲಿ ತರಲಾಯಿತು. ಹೆಚ್ಚು ಪೊಲೀಸ್ ಬಂದೋಬಸ್ತ್ ಇರುವುದರಿಂದ ಇದು ಪೊಲೀಸ್ ಗಣಪತಿ ಅಂಥಲೂ, ದೊಡ್ಡ ಗಣಪತಿ, ಆರ್ಎಸ್ಎಸ್ ಗಣಪತಿ ಅಂಥಲೂ ಈ ಗಣೇಶ ಜನಪ್ರಿಯತೆ ಗಳಿಸಿದೆ.
ಇನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಪ್ರತಿಷ್ಠಾಪನೆ ವೇಳೆ ಹಾಜರಿದ್ದು, ಪೂಜೆಯಲ್ಲಿ ಪಾಲ್ಗೊಂಡು ಮೊದಲ ಪೂಜೆ ಮಾಡಿ ಗಮನ ಸೆಳೆದರು. ಈ ಬಾರಿಯೂ ಕೂಡ ಹಿಂದೂಪರ ಮುಖಂಡರು 27 ದಿನಗಳ ಕಾಲ ಪೂಜೆ, 7 ದಿನ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿಸಲು ತಯಾರಿ ಮಾಡಿಕೊಂಡಿದ್ದಾರೆ.
ಕಳೆದ 62 ವರ್ಷಗಳಿಂದ ವಿಜೃಂಭಣೆಯಿಂದ, ಸೌಹಾರ್ದತೆಯಿಂದ ಗಣೇಶ ಹಬ್ಬ ನಡೆದುಕೊಂಡು ಬಂದಿದ್ದು, ಈ ಬಾರಿಯೂ ಕೂಡ ಅದ್ಧೂರಿಯಾಗಿ ಮತ್ತು ಸೌಹಾರ್ದತೆಯಿಂದ ಕೂಡಿರಲಿ ಎಂದು ಡಿಸಿ ಶಿಲ್ಪಾನಾಗ್ ಹೇಳಿದರು.
ಪ್ರತಿ ವರ್ಷ ವೈವಿಧ್ಯಮಯ ಗಣಪ: ಪ್ರತಿ ವರ್ಷ ಒಂದಲ್ಲಾ ಒಂದು ವೈವಿದ್ಯಮಯ ಗಣಪತಿ ಪ್ರತಿಷ್ಠಾಪನೆಗೆ ಗಡಿಜಿಲ್ಲೆ ಗಣಪತಿ ಹೆಸರುವಾಸಿಯಾಗಿದೆ. ಅದರಂತೆ ಈ ಬಾರಿಯೂ ಸರ್ಕಾರದ ಷರತ್ತುಬದ್ಧ ಅನುಮತಿಯಂತೆ ಕೈಯಲ್ಲಿ ಬಿಲ್ಲು ಹಾಗೂ ತ್ರಿಶೂಲ ಹಿಡಿದ ಅಯೋಧ್ಯೆ ರಾಮನ ಅವತಾರದ ಗಣಪತಿಯನ್ನು ಪ್ರತಿಷ್ಠಾಪಿಸಿದೆ ಶ್ರೀ ವಿದ್ಯಾಗಣಪತಿ ಮಂಡಳಿ.
ಕಳೆದ 62 ವರ್ಷಗಳಿಂದ ವಿಜೃಂಭಣೆಯಿಂದ ಗಣಪತಿ ಪ್ರತಿಷ್ಠಾಪಿಸಿ ಒಂದು ತಿಂಗಳ ಕಾಲ ಗಣೇಶೋತ್ಸವ ಆಚರಿಸುತ್ತಿದ್ದ ವಿದ್ಯಾಗಣಪತಿ ಮಂಡಳಿ ಈ ವರ್ಷ ಸರ್ಕಾರದ ಮಾರ್ಗಸೂಚಿ ಆಚರಣೆಗೆ ಮುಂದಾಗಿದೆ. ಗಣಪತಿಯನ್ನು ಅಕ್ಟೋಬರ್ ತಿಂಗಳ ಮೊದಲ ವಾರದಲ್ಲಿ ವಿಸರ್ಜನೆ ಮಾಡಲು ನಿರ್ಧರಿಸಲಾಗಿದೆ.