ಮಂಡ್ಯ: ಇನ್ಮುಂದೆ ಸಹಾಯ ಕೇಳಿಕೊಂಡು ಯಾರೂ ನನ್ನ ಬಳಿ ಬರಬೇಡಿ ಎಂದು ಮಂಡ್ಯ ಜಿಲ್ಲೆ ಮದ್ದೂರು ಕ್ಷೇತ್ರದ ಕೊಪ್ಪದಲ್ಲಿ ನಾಗಮಂಗಲ ಕ್ಷೇತ್ರದ ಜೆಡಿಎಸ್ ಪರಾಜಿತ ಅಭ್ಯರ್ಥಿ ಸುರೇಶ್ಗೌಡ ಆಕ್ರೋಶದ ಮಾತುಗಳನ್ನಾಡಿದ್ದಾರೆ. ಇನ್ಮುಂದೆ ಯಾವುದೇ ಮದುವೆಗೆ ಬಂದರೂ ಮುಯ್ಯಿ ಕೂಡ ಹಾಕಲ್ಲ. ನಂಬಿದವರಿಂದಲೇ ನನಗೆ ಮೋಸ ಆಗಿದೆ,
ನಾನೀಗ ಸೋತಿದ್ದೇನೆ. ಈ ಚುನಾವಣೆ ಸೋಲಿನಿಂದ ಬೇಸರವಾಗಿ ನನ್ನ ಮನಸ್ಸು ಕಲ್ಲಾಗಿದೆ. ವೈಯಕ್ತಿಕ ಕಷ್ಟ ಹೇಳಿಕೊಂಡು ಯಾರು ಕೂಡ ನನ್ನ ಬಳಿ ಬರಬೇಡಿ. ಚುನಾವಣೆ ಸೋತು ಕಷ್ಟದಲ್ಲಿದ್ದೇನೆ, ಆದರೂ ಬಂದು ಸಹಾಯ ಕೇಳ್ತೀರಿ ಎಂದು ಅಸಮಾಧಾನ ಹೊರ ಹಾಕಿದ್ದಾರೆ.