ಬೆಂಗಳೂರು: ಮದುವೆ ವಾರ್ಷಿಕೋತ್ಸವಕ್ಕೆ ಉಡುಗೊರೆ ಕೊಡಲಿಲ್ಲ ಎಂದು ಕೋಪ ಮಾಡಿಕೊಂಡು ಮಹಿಳೆಯೊಬ್ಬರು ತನ್ನ ಗಂಡನಿಗೆ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ ನಡೆದಿದೆ.
ಬೆಂಗಳೂರಿನ ಬೆಳ್ಳಂದೂರಿನಲ್ಲಿ ಫೆ.27 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮದುವೆ ವಾರ್ಷಿಕೋತ್ಸವದ ದಿನ ಮಧ್ಯರಾತ್ರಿ 1:30 ರ ಹೊತ್ತಿಗೆ ಗಂಡನಿಗೆ ಆತನ ಹೆಂಡತಿ ಚಾಕುವಿನಿಂದ ಇರಿದಿದ್ದಾಳೆ.
ಮದುವೆ ವಾರ್ಷಿಕೋತ್ಸವದ ದಿನ ಗಂಡ ನಿದ್ದೆಗೆ ಜಾರಿದ್ದ. ಈ ವೇಳೆ ಅಡುಗೆ ಮನೆಯಿಂದ ಚಾಕು ತಂದು ಪತ್ನಿ ಇರಿದಿದ್ದಾಳೆ. ಚಾಕುವಿನಿಂದ ಇರಿದ ಹಿನ್ನೆಲೆ ಗಂಡನ ಕೈಗೆ ರಕ್ತಗಾಯವಾಗಿದೆ. ಸ್ಥಳೀಯರ ಸಹಾಯದಿಂದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಡ-ಹೆಂಡತಿಗೆ ಪೊಲೀಸರು ಕೌನ್ಸೆಲಿಂಗ್ ನಡೆಸಿದ್ದಾರೆ. ತನಿಖೆ ವೇಳೆ ಮೊದಲ ಬಾರಿಗೆ ಗಿಫ್ಟ್ ನೀಡಿಲ್ಲ ಎಂದು ಮಹಿಳೆ ಕೃತ್ಯ ಎಸಗಿದ್ದಾಳೆ.