ಕಲಬುರಗಿ: ಕಲಬುರ್ಗಿಯಲ್ಲಿ ಹಳೆ ವೈಷಮ್ಯದ ಹಿನ್ನಲೆಯಲ್ಲಿ ಹಾಡಹಗಲೇ ಸಾರಿಗೆ ಬಸ್ ಚಾಲಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವಂತ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ.
ಕಲಬುರ್ಗಿಯ ಸಿಟಿ ಬಸ್ ನಿಲ್ದಾಣದಲ್ಲಿ ಡಿವೋ ನಂ.3ರಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದಂತ ನಾಗಯ್ಯಸ್ವಾಮಿ(45) ಎಂಬುವರನ್ನು ಬಸ್ಸಿನಲ್ಲಿಯೇ ಮೂವರು ದುಷ್ಕರ್ಮಿಗಳಿಂದ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ದುಷ್ಕರ್ಮಿಗಳ ದಾಳಿಯಲ್ಲಿ ಚಾಲಕ ನಾಗಯ್ಯಸ್ವಾಮಿ(45) ಸ್ಥಳದಲ್ಲಿಯೇ ತೀವ್ರ ರಕ್ತಸ್ತ್ರಾವದಿಂದ ಸಾವನ್ನಪ್ಪಿದ್ದಾರೆ. ನೂರಾರು ಜನರ ಮುಂದೆಯೇ ಮಾರಕಾಸ್ತ್ರಗಳಿಂದ ಚಾಲಕನನ್ನು ಕೊಚ್ಚಿ ಕೊಲೆ ಮಾಡಿದ್ದನ್ನು ಕಂಡು ಬೆಚ್ಚಿ ಬೀಳುವಂತೆ ಆಗಿದೆ.
ಈ ವಿಷಯ ತಿಳಿದು ಸ್ಥಳಕ್ಕೆ ಬ್ರಹ್ಮಪುರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಅಂದಹಾಗೇ ಚಾಲಕ ನಾಗಯ್ಯಸ್ವಾಮಿಯನ್ನು ಹಳೆ ವೈಷಮ್ಯದಿಂದ ಕೊಚ್ಚಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.