ಲೋಕಸಭಾ ಚುನಾವಣೆ ಹಿನ್ನೆಲೆ 58 ಕ್ಷೇತ್ರಗಳಲ್ಲಿ ಇಂದು 6ನೇ ಹಂತದ ಮತದಾನ ನಡೆಯಲಿದೆ. ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸ್ವರಾಜ್, ಮನೋಹರ ಲಾಲ್ ಖಟ್ಟರ್, ಕನ್ಹಯ್ಯ ಕುಮಾರ್ ಸೇರಿ ಹಲವು ಪ್ರಮುಖ ನಾಯಕರ ಭವಿಷ್ಯವು ಮತಯಂತ್ರಗಳಲ್ಲಿ ಭದ್ರವಾಗಲಿದೆ.
ಶಾಂತಿಯುತ ಹಾಗೂ ಪಾರದರ್ಶಕ ಮತದಾನಕ್ಕಾಗಿ ಚುನಾವಣೆ ಆಯೋಗವು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಭದ್ರತೆ ಕೈಗೊಂಡಿದೆ.
ಆರನೇ ಹಂತದಲ್ಲಿ 5.84 ಕೋಟಿ ಪುರುಷರು, 5.29 ಕೋಟಿ ಮಹಿಳೆಯರು, 5120 ತೃತೀಯ ಲಿಂಗಿಗಳು ಸೇರಿ ಒಟ್ಟು 11.13 ಕೋಟಿ ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ. 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 58 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬಿಹಾರದ 8 ಸ್ಥಾನಗಳು, ಹರಿಯಾಣದ ಎಲ್ಲ 10 ಸ್ಥಾನ, ಜಾರ್ಖಂಡ್ 4, ಜಮ್ಮು-ಕಾಶ್ಮೀರ 1, ದೆಹಲಿಯ ಎಲ್ಲ 7 ಸ್ಥಾನ, ಒಡಿಶಾ 6, ಉತ್ತರ ಪ್ರದೇಶ 14