ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ(Bangalore) ನಾಳೆ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. ಈ ಸಂಬಂಧ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದು, ಬುದ್ಧ ಪೂರ್ಣಿಮೆ ಪ್ರಯುಕ್ತ ನಾಳೆ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು(Selling meat) ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ಬಿಬಿಎಂಪಿ(BBMP) ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಬಿಬಿಎಂಪಿ ಪಶುಪಾಲನೆ ವಿಭಾಗದ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಮಾಂಸದ ಅಂಗಡಿಗಳನ್ನು ತೆರೆದಿದ್ದಲ್ಲಿ ಪಾಲಿಕೆಯಿಂದ ಅವರ ಲೈಸೆನ್ಸ್ ರದ್ದು ಪಡಿಸಿ, ಸರ್ಕಾರದ ನಿಯಮಗಳನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪಾಲಿಕೆಯ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.