ಬೆಂಗಳೂರು: ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿನ್ನೆ ಹಿಂದುಳಿದ, ದಲಿತ ಮಠಾಧೀಶರ ಒಕ್ಕೂಟದ ಶ್ರೀಗಳು ಭೇಟಿ ಮಾಡಿದ್ದಾರೆ. ದಲಿತ ಮತ್ತು ಹಿಂದುಳಿದ ಜಾತಿ, ಸಮುದಾಯಗಳ ಸ್ವಾಮೀಜಿಗಳ ನಿಯೋಗ ಕಾಗಿನೆಲೆ ಶ್ರೀಗಳ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ರನ್ನು ಭೇಟಿಯಾಗಿ ಸನ್ಮಾನಿಸಿ ಗೌರವಿಸಿದರು.
ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದು, ಅವರಿಗೆ ಹಲವು ಮಠಾಧೀಶರು ಸಾಥ್ ನೀಡಿದರು. ಒಕ್ಕೂಟದ ಸಂಚಾಲಕ ಭೋವಿಗುರುಪೀಠ ಚಿತ್ರದುರ್ಗ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕಾರ್ಯದರ್ಶಿ ಕುಂಚಿಟಿಗ ಮಹಾಸಂಸ್ಥಾನ ಮಠ ಹೊಸದುರ್ಗದ ಡಾ.ಶ್ರೀ ಶಾಂತವೀರ ಸ್ವಾಮೀಜಿ, ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಮಾದಾರ ಚನ್ನಯ್ಯ ಶ್ರೀ ಗುರುಪೀಠ ಚಿತ್ರದುರ್ಗ, ವಾಲ್ಮೀಕಿ ಪ್ರಸನ್ನನಂದ ಸ್ವಾಮೀಜಿ ವಾಲ್ಮೀಕಿ ಗುರುಪೀಠ ರಾಜನಹಳ್ಳಿ ಹರಿಹರ, ಈಶ್ವರಾನಂದಪುರಿ ಸ್ವಾಮೀಜಿ ಶಾಖಾಮಠ ಹೊಸದುರ್ಗ, ರೇಣುಕಾನಂದ ಸ್ವಾಮೀಜಿ ನಾರಾಯಣ ಗುರುಪೀಠ ಶಿವಮೊಗ್ಗ, ಬಸವ ಮಾಚಿದೇವ ಸ್ವಾಮೀಜಿ ಮಡಿವಾಳ ಗುರುಪೀಠ ಚಿತ್ರದುರ್ಗ ಮತ್ತಿತರರು ಉಪಸ್ಥಿತರಿದ್ದರು.