ಬಾಲಿವುಡ್ ನಟ ವಿಕ್ಕಿ ಕೌಶಲ್, ತೃಪ್ತಿ ದಿಮ್ರಿ, ಆಮಿ ವಿರ್ಕ್ ನಟನೆಯ ‘ಬ್ಯಾಡ್ ನ್ಯೂಸ್’ ಸಿನಿಮಾ ಇದೇ ಜು.19ರಂದು ತೆರೆ ಕಾಣಲಿದೆ. ಈಗಾಗಲೇ ಟ್ರೈಲರ್ ಹಾಗೂ ಹಾಡುಗಳ ಮೂಲಕ ಮೋಡಿ ಮಾಡಿದ ಬ್ಯಾಡ್ ನ್ಯೂಸ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಕಮಾಲ್ ಮಾಡಲು ರೆಡಿಯಾಗಿದೆ. ಚಿತ್ರದ ಹಾಟ್ ಸಾಂಗ್ವೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಮಧ್ಯೆ ಚಿತ್ರದ 27 ಸೆಕೆಂಡ್ಗಳ ಕಿಸ್ಸಿಂಗ್ ದೃಶ್ಯಕ್ಕೆ ಸೆನ್ಸಾರ್ ಬೋರ್ಡ್ ಕತ್ತರಿ ಹಾಕಿದ್ದು ಇದು ವಿಕ್ಕಿ ಅಭಿಮಾನಿಗಳಿಗೆ ಬೇಸರ ತರಿಸಿದೆ.
ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ ಬ್ಯಾಡ್ ನ್ಯೂಸ್ ಚಿತ್ರದ ಲಿಪ್ಲಾಕ್ ದೃಶ್ಯಗಳಿಗೆ ಕತ್ತರಿ ಹಾಕಿದೆ. ಈ ದೃಶ್ಯಗಳಲ್ಲಿ ಒಂದು 9 ಸೆಕೆಂಡುಗಳ ಕಾಲ ಕಿಸ್ಸಿಂಗ್ ಸೀನ್ ಇದ್ದರೆ, ಇನ್ನೆರಡು ದೃಶ್ಯಗಳಲ್ಲಿ 10 ಸೆಕೆಂಡುಗಳು ಮತ್ತು 8 ಸೆಕೆಂಡುಗಳು ಕಾಲ ಕಿಸ್ಸಿಂಗ್ ದೃಶ್ಯಗಳನ್ನು ಸೆರೆ ಹಿಡಿಯಲಾಗಿತ್ತು. ಆದರೆ ಇದೀಗ ಅವುಗಳಿಗೆ ಸೆನ್ಸಾರ್ ಬೋರ್ಡ್ ಕತ್ತರಿ ಹಾಕಿದೆ.
‘ಅನಿಮಲ್’ ಸಿನಿಮಾದ ಸಕ್ಸಸ್ ಬಳಿಕ ತೃಪ್ತಿ ದಿಮ್ರಿ ‘ಬ್ಯಾಡ್ ನ್ಯೂಸ್’ ಚಿತ್ರ ಒಪ್ಪಿಕೊಂಡಿದ್ದಾರೆ. ವಿಕ್ಕಿ ಕೌಶಲ್ ಜೊತೆ ಇದೇ ಮೊದಲ ಬಾರಿಗೆ ಸ್ಕ್ರೀನ್ ಶೇರ್ ಮಾಡಿದ್ದಾರೆ. ಚಿತ್ರದ ‘ತೌಬಾ ತೌಬಾ’ ಸಾಂಗ್ ಹಿಟ್ ಆದ ಬಳಿಕ ಇಬ್ಬರ ರೊಮ್ಯಾಂಟಿಕ್ ಸಾಂಗ್ ಪಡ್ಡೆಹುಡುಗರ ನಿದ್ದೆಗೆಡಿಸಿದೆ. ಆದ್ರೆ ಚಿತ್ರದ ಕಿಸ್ಸಿಂಗ್ ದೃಶ್ಯಗಳನ್ನು ಕಟ್ ಮಾಡಲಾಗಿದೆ ಎಂಬ ಸುದ್ದಿ ಕೇಳಿ ತೃಪ್ತಿ ದಿಮ್ರಿ ಫ್ಯಾನ್ಸ್ ಕೊಂಚ ಡಲ್ ಆಗಿದ್ದಾರೆ.