ಬೆಂಗಳೂರು: ಅಪ್ರಾಪ್ತೆಯ ವಿವಾಹವಾಗಿ ನ್ಯಾಯಾಂಗ ಬಂಧನದಲ್ಲಿದ್ದ ಅಂಗವಿಕಲ ವ್ಯಕ್ತಿಗೆ ಬೆಂಗಳೂರಿನ ಹೈಕೋರ್ಟ್(High Court) ಅಪ್ರಾಪ್ತೆಯನ್ನು ಮದುವೆಯಾಗಿ ನ್ಯಾಯಾಂಗ ಬಂಧನದಲ್ಲಿದ್ದ ಅಂಗವಿಕಲ ವ್ಯಕ್ತಿಗೆ ಜಾಮೀನು) ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಕೆ.ನಟರಾಜನ್ ಅವರ ಪೀಠ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಇಬ್ಬರ ನಡುವೆ ದೈಹಿಕ ಸಂಪರ್ಕವೇ ಏರ್ಪಟ್ಟಿಲ್ಲ ಎಂದು ಅಪ್ರಾಪ್ತೆ ತಿಳಿಸಿದ್ದಾಳೆ. ಹೀಗಿರುವಾಗ ಅರ್ಜಿದಾರನ ವಿರುದ್ಧ ಕೇವಲ ಬಾಲ್ಯ ವಿವಾಹ ತಡೆ ಕಾಯ್ದೆ ಅಡಿಯ ಕೃತ್ಯ ಹೊರತುಪಡಿಸಿ ಬೇರಾವುದೇ ಅಪರಾಧ ಕೃತ್ಯವೆಸಗಿದ ಆರೋಪ ಸಾಬೀತಾಗಿಲ್ಲ.
ಅರ್ಜಿದಾರ ಒಬ್ಬ ಅಂಗವಿಕಲನಾಗಿದ್ದು, ಕಳೆದ 1 ವರ್ಷಕ್ಕೂ ಹೆಚ್ಚು ಸಮಯದಿಂದ ನ್ಯಾಯಾಂಗ ಬಂಧನಲ್ಲಿದ್ದಾನೆ. ಈ ಅಂಶಗಳನ್ನು ಪರಿಗಣಿಸಿದರೆ ಆತ ಜಾಮೀನು ಪಡೆಯಲು ಅರ್ಹನಾಗಿದ್ದಾನೆ ಎಂದು ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ. ಆರೋಪಿಯು 2 ಲಕ್ಷ ರೂ. ಮೊತ್ತದ ಬಾಂಡ್ ಹಾಗೂ ಅಷ್ಟೇ ಮೊತ್ತದ ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ಸಾಕ್ಷಿಗಳ ನಾಶಕ್ಕೆ ಯತ್ನಿಸಬಾರದು. ನ್ಯಾಯಾಲಯದ ಅನುಮತಿ ಇಲ್ಲದೆ ವ್ಯಾಪ್ತಿ ಬಿಟ್ಟು ತೆರಳಬಾರದು ಎಂಬ ಷರತ್ತುಗಳನ್ನು ವಿಧಿಸಲಾಗಿದೆ.