ನವದೆಹಲಿ: ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದನ್ನು ವಿರೋಧಿಸಿ, ಕುಸ್ತಿಪಟು ಬಜರಂಗ್ ಪುನಿಯಾ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ.
ಸಂಜಯ್ ಸಿಂಗ್ ಆಯ್ಕೆ ವಿರೋಧಿಸಿ ಕುಸ್ತಿಪಟು ಸಾಕ್ಷಿ ಮಲಿಕ್ , ಗುರುವಾರ ಕಣ್ಣೀರಿಟ್ಟು ಕುಸ್ತಿಗೆ ವಿದಾಯ ಹೇಳಿದರು. ಇದರ ಬೆನ್ನಲ್ಲೇ ಬಜರಂಗ್ ಪುನಿಯಾ, ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ‘ನಾನು ನನ್ನ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನಿಗೆ ಹಿಂದಿರುಗಿಸುತ್ತಿದ್ದೇನೆ. ಅದನ್ನು ಹೇಳಲು ಈ ಪತ್ರ ಬರೆದಿದ್ದೇನೆ ಎಂದು ಬಜರಂಗ್ ಪುನಿಯಾ ಎಕ್ಸ್ನಲ್ಲಿ ಪೋಸ್ಟ್ ಹಾಕಿದ್ದಾರೆ.