ಬೆಂಗಳೂರು:- ನಗರದಲ್ಲಿ ನೀರಿನ ಸಮಸ್ಯೆ ಹಿನ್ನೆಲೆ ಈಜು ಕೊಳಕ್ಕೆ ಕುಡಿಯುವ ನೀರಿನ ಬಳಕೆಗೆ ನಿಷೇಧ ಏರಲಾಗಿದೆ.
ಈ ಸಂಬಂಧ ನಗರದಲ್ಲಿ ಜಲಮಂಡಳಿ ಆದೇಶಿಟ ಹೊರಡಿಸಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964ರ ಕಲಂ 33 ಮತ್ತು 34 ರ ಅನುಸಾರ ನಿಷೇಧಿಸಲಾಗಿದ್ದು, ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ ದಂಡ ವಿಧಿಸುವುದರ ಜೊತೆಹೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ.
ಆದೇಶವನ್ನು ಯಾರಾದರು ಉಲ್ಲಂಘನೆ ಮಾಡುವುದು ಕಂಡುಬಂದಲ್ಲಿ ಕೂಡಲೇ ಮಂಡಳಿಯ ಕಾಲ್ ಸೆಂಟರ್ ಸಂಖ್ಯೆ 1916 ಗೆ ತಿಳಿಸುವಂತೆ ಮನವಿ ಮಾಡಲಾಗಿದೆ. ತಪ್ಪಿತಸ್ಥರಿಗೆ 1964 ರ ಕಾಯ್ದೆ ಕಲಂ 109 ರಂತೆ 5000 ರೂಪಾಯಿ ದಂಡ ವಿಧಿಸಲಾಗುತ್ತದೆ. ಆದೇಶ ಉಲ್ಲಂಘನೆ ಮರುಕಳಿಸಿದಲ್ಲಿ ದಂಡ ಮೊತ್ತ ಐದು ಸಾವಿರದ ಜೊತೆಗೆ ಹೆಚ್ಚುವರಿಯಾಗಿ 500 ರೂಪಾಯಿ (ಪ್ರತಿ ದಿನಕ್ಕೆ) ಪಾವತಿಸಬೇಕಾಗುತ್ತದೆ.
ದೊಡ್ಡ ಗಾತ್ರದ ನೀರಿನ ಸಂಪರ್ಕ ಪಡೆದ ಪ್ರಮುಖ ಗ್ರಾಹಕರೊಂದಿಗೆ ಜಲಮಂಡಳಿ ಅಧ್ಯಕ್ಷರ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಸಭೆ ನಡೆಸಿದರು. ಸಭೆಯಲ್ಲಿ ನೀರಿನ ಕೊರತೆ ನೀಗಿಸಲು ಕೆಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ದೊಡ್ಡಗಾತ್ರದ ಪ್ರಮುಖ ಗ್ರಾಹಕರ ನೀರಿನ ಪೂರೈಕೆಯಲ್ಲಿ ಶೇ.20ರಷ್ಟು ಕಡಿತಕ್ಕೆ ಜಲಮಂಡಳಿ ನಿರ್ಧಾರ ಮಾಡಿದೆ.