ಬೆಂಗಳೂರು: ವಿಶ್ವ ವಿಖ್ಯಾತ ಬೆಂಗಳೂರು “ಕರಗ ಮಹೋತ್ಸವ” ಕುರಿತು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಪಾಲಿಕೆ ಕೇಂದ್ರ ಕಛೇರಿಯ ಸಭಾಂಗಣ-01ರಲ್ಲಿ ಇಂದು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.
ಸಭೆಯಲ್ಲಿ ಚರ್ಚೆಯಾದ ಪ್ರಮುಖ ಅಂಶಗಳು:
* ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕ್ರಮವಹಿಸಬೇಕು.
* ಕರಗ ಶಕ್ತ್ಯೋತ್ಸವವು ಹೊರಡುವ ಮಾರ್ಗದ ರಸ್ತೆಗಳು ಹಾಗೂ ಪಾದಚಾರಿ ಮಾರ್ಗಗಳ ದುರಸ್ತಿ ಕಾರ್ಯವನ್ನು ಕೈಗೊಳ್ಳುವುದು.
* ಕರಗ ಉತ್ಸವ ನಡೆಯುವ ಬೀದಿಗಳಲ್ಲಿ ದೀಪಗಳ ಅಳವಡಿಕೆ ವ್ಯವಸ್ಥೆ ಕೈಗೊಳ್ಳುವುದು.
* ಪಾಲಿಕೆಯ ಆರೋಗ್ಯ ಇಲಾಖೆ ವತಿಯಿಂದ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಯ ನಿಯೋಜನೆ ಮಾಡುವುದು.
* ಸ್ವಚ್ಛತಾ ನಿರ್ವಹಣೆತ ದೃಷ್ಠಿಯಿಂಧ ಘನತ್ಯಾಜ್ಯ ವಿಭಾಗದ ಅಧಿಕಾರಿ/ಸಿಬ್ಬಂದಿಯನ್ನು ನಿಯೋಜಿಸುವುದು.
* ಭಕ್ತಾದಿಗಳು ಹಾಗೂ ಸಾರ್ವಜನಿಕರಿಗಾಗಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಶೌಚಾಲಯಗಳ ವ್ಯವಸ್ಥೆ ಮಾಡುವುದು.
* ಜಲಮಂಡಳಿ ವತಿಯಿಂದ ಒಳಚರಂಡಿಗಳನ್ನು ಸ್ವಚ್ಛಗೊಳಿಸಿ, ಎಲ್ಲೂ ಕೊಳಚೆ ನೀರು ಹೊರಬಾರದಂತೆ ಅಗತ್ಯ ಕ್ರಮ ವಹಿಸುವುದು.
* ಸಂಚಾರ ದಟ್ಟಣೆಯಾಗದಂತೆ ಮಾರ್ಗ ಬದಾಲವಣೆ ಹಾಗೂ ವಾಹನಗಳ ನಿಲುಗಡೆಗೆ ಸ್ಥಳ ನಿಗದಿಪಡಿಸುವುದು.
ಸಂಚಾರ ದಟ್ಟಣೆಯಾಗದಂತೆ ಮಾರ್ಗ ಬದಾಲವಣೆ ಹಾಗೂ ವಾಹನಗಳ ನಿಲುಗಡೆಗೆ ಸ್ಥಳ ನಿಗದಿಪಡಿಸುವುದು.
* ಕರಗ ಮಹೋತ್ಸವ ನಡೆಯುವ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸಿಸಿ ಕ್ಯಾಮೆರಾಗಳ ಅಳವಡಿಕೆ.
* ಕರಗ ಶಕ್ತ್ಯೋತ್ಸವ ಕಾರ್ಯಕ್ರಮಗಳಲ್ಲಿ ಬೆಂಕಿಯಿಂದ ಅವಘಡಗಳು ಸಂಭವಿಸದಂತೆ ಅಗ್ನಿ ಶಾಮಕ ವ್ಯವಸ್ಥೆಯನ್ನು ಕೈಗೊಳ್ಳುವುದು.
* ಭಕ್ತಾದಿಗಳು ಹಾಗೂ ಸಾರ್ವಜನಿಕರ ಭದ್ರತೆಯ ಹಿತದೃಷ್ಟಿಯಿಂದ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವುದು.