PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಭಾರತೀಯ ಹೈಕಮಿಷನ್‌ ಕಚೇರಿಗೆ ಭದ್ರತೆ ಒದಗಿಸಿದ ಬ್ರಿಟನ್‌ ಸರ್ಕಾರ

March 23, 2023

ಭಾರತೀಯ ಅಮೆರಿಕನ್ ನಟಿಗೆ ರಾಷ್ಟ್ರೀಯ ಪದಕ ನೀಡಿದ ಬೈಡನ್

March 23, 2023

ಅಧ್ಯಕ್ಷ ಪುಟಿನ್ ಟೀಕಿಸಿ ಹಾಡಿದ್ದ ರಷ್ಯಾದ ಪಾಪ್ ತಾರೆ ಸಾವು

March 23, 2023
Facebook Twitter Instagram
Thursday, March 23
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » HDK Tweet: ಬೆಂಗಳೂರು – ಮೈಸೂರು ಹೆದ್ದಾರಿ ಯಾರಿಗೆ ಉಪಯೋಗ? : HDK ಸರಣಿ ಟ್ವೀಟ್
ಬೆಂಗಳೂರು Prajatv KannadaBy Prajatv KannadaMarch 13, 2023

HDK Tweet: ಬೆಂಗಳೂರು – ಮೈಸೂರು ಹೆದ್ದಾರಿ ಯಾರಿಗೆ ಉಪಯೋಗ? : HDK ಸರಣಿ ಟ್ವೀಟ್

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಬೆಂಗಳೂರು: ಮೈಸೂರು – ಬೆಂಗಳೂರು ದಶಪಥ ಹೆದ್ದಾರಿ (Mysuru Bengaluru Expressway) ಯಾರಿಗೆ ಉಪಯೋಗ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಕಿಡಿಕಾರಿದರು.

ಭಾನುವಾರ ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯನ್ನು ಮಂಡ್ಯದಲ್ಲಿ (Mandya) ಲೋಕಾರ್ಪಣೆಗೊಳಿಸಿದರು. ಈ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಹೆಚ್‍ಡಿಕೆ ವಾಗ್ದಾಳಿ ನಡೆಸಿದರು.

 

ಟ್ವೀಟ್‍ನಲ್ಲಿ ಏನಿದೆ?: ಇದು ಅತ್ಯಂತ ಮುಖ್ಯ ವಿಷಯ. ಬೆಂಗಳೂರು-ಮೈಸೂರು ನಗರಗಳ ನಡುವೆ ನಿರ್ಮಿಸಿರುವ ದಶಪಥ ಹೆದ್ದಾರಿ ಯಾರಿಗೆ ಉಪಯೋಗ? ಹಣ ಮಾಡಲು ಯಾರಿಗೆ ರಹದಾರಿ? ಎನ್ನುವುದು ನನ್ನ ಪ್ರಶ್ನೆ. ರಾಮನಗರ (Ramanagara), ಮಂಡ್ಯ ಜಿಲ್ಲೆಗಳ ಜನರಿಗೆ, ಅದರಲ್ಲೂ ಬೆಂಗಳೂರು-ಮೈಸೂರು ನಡುವೆ ಆ ಹೆದ್ದಾರಿ ಉದ್ದಕ್ಕೂ ಜೀವಿಸುತ್ತಿರುವ ಜನರಿಗೆ ಇದರಿಂದ ನಯಾಪೈಸೆ ಉಪಯೋಗ ಇದೆಯಾ? ಇಲ್ಲ.

ಸ್ಥಳೀಯರಿಗೆ ದಶಪಥದಿಂದ ಉಪಯೋಗ ಇದೆಯಾ ಎಂದು ಇನ್ನೂ ಒಳಹೊಕ್ಕು ಲೆಕ್ಕ ಹಾಕಿದರೆ, ಉತ್ತರ ದೊಡ್ಡ ಸೊನ್ನೆ. ಕೇವಲ ಬೆಂಗಳೂರಿನಿಂದ ಮೈಸೂರಿಗೆ ಶರವೇಗದಲ್ಲಿ ನೇರವಾಗಿ ಸಂಚರಿಸುವವರಿಗೆ ಮಾತ್ರ ಲಾಭ. ಹಾಗಾದರೆ, ರಾಮನಗರ, ಚನ್ನಪಟ್ಟಣ, ಮದ್ದೂರು, ಶ್ರೀರಂಗಪಟ್ಟಣದವರಿಗೆ ಉಪಯೋಗ ಇದೆಯಾ? ಎಳ್ಳಷ್ಟೂ ಇಲ್ಲ. ಈ ಸತ್ಯವನ್ನು ನಾವೆಲ್ಲರೂ ಅರಿಯಬೇಕಿದೆ.

ಕೆಲವರ ಪಾಲಿಗೆ ದೊಡ್ಡ ಎಟಿಎಂ ಆಗಿಬಿಟ್ಟ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಯ ಅಸಲಿ ಅಂಶಗಳನ್ನು ಪಟ್ಟಿ ಮಾಡಿದರೆ ಕನ್ನಡಿಗರಿಗೆ ನಿರಾಶೆ, ನೋವು, ಹತಾಶೆ ಖಂಡಿತಾ. ಹಾಗಾದರೆ ಕೆಳಗಿನ ಅಂಶಗಳನ್ನು ಗಮನಿಸೋಣ.

ಈ ದಶಪಥ ಹೆದ್ದಾರಿಯ ಮಾರಣಾಂತಿಕ ಹೊಡೆತ ಮೊದಲು ಬಿದ್ದಿರುವುದು ಮಂಡ್ಯ ಜಿಲ್ಲೆಯ ಜನರಿಗೆ. ಆರ್ಥಿಕವಾಗಿ, ಸಾಮಾಜಿಕವಾಗಿ ಈ ಜಿಲ್ಲೆಯನ್ನು ಮುಗಿಸುವುದೇ ದಶಪಥ ಹೆದ್ದಾರಿಯ ದುರುದ್ದೇಶವಾ? ಜಿಲ್ಲೆಯ ಆರ್ಥಿಕ ಸರಪಳಿಗೆ ಕುಣಿಕೆ ಬಿಗಿಯುವುದೇ ಇದರ ಒಳ ಉದ್ದೇಶವಾ? ಎನ್ನುವುದು ನನ್ನ ಅನುಮಾನ.

ಮಧ್ಯಮ, ಸಣ್ಣ ಗಾತ್ರದ ಹೊಟೆಲ್, ಸಣ್ಣ-ಅತಿಸಣ್ಣ ಉದ್ದಿಮೆ, ಕಬ್ಬುಬೆಲ್ಲ, ಪೆಟ್ರೋಲ್ ಬಂಕ್ ಸೇರಿ ಅಗತ್ಯ ವಸ್ತುಗಳ ಸುಮಾರು 2,600ಕ್ಕೂ ಹೆಚ್ಚು ಸ್ಥಳೀಯ ಉದ್ಯಮ ನೆಲಕಚ್ಚಿವೆ. ಎಳನೀರು ವ್ಯಾಪಾರಕ್ಕೆ ಎಳ್ಳುನೀರು ಬಿಡಲಾಗಿದೆ. 6,000ಕ್ಕೂ ಹೆಚ್ಚು ಜನರ ಜೀವನೋಪಾಯಕ್ಕೆ ಹೊಡೆತ ಬಿದ್ದು, ಅವರ ಬದುಕಿನ ಮೇಲೆ ಹೆದ್ದಾರಿ ಹೆಮ್ಮಾರಿ ಬಂದು ಕೂತಿದೆ.

ಮಂಡ್ಯ, ರಾಮನಗರ ಜಿಲ್ಲೆಗಳ ಜನರ ಜೀವನಾಡಿಯೇ ಆಗಿದ್ದ ಹಳೆಯ ಹೆದ್ದಾರಿ ಲಕ್ಷಾಂತರ ಜನರ ಜೀವನಕ್ಕೆ ದಾರಿ ಆಗಿತ್ತು. ಹೊಸ ಹೆದ್ದಾರಿ ಕೆಲವರಿಗೆ ಹಣದ ದಾರಿಯಷ್ಟೆ. ಜನರ ಜೀವನೋಪಾಯದ ಸರಪಳಿಯನ್ನು ಎಕ್ಸ್‌ಪ್ರೆಸ್ ಹೆದ್ದಾರಿ ಬಲಿ ತೆಗೆದುಕೊಂಡಿದೆ. ಅವರ ವೈಯಕ್ತಿಕ ಬದುಕಿಗೆ, ಆರ್ಥಿಕ ಶಕ್ತಿಗೆ ದೊಡ್ಡ ಹೊಡೆತ ಬಿದ್ದಿದೆ. ಇದು ಸತ್ಯ.

ಹಳೆಯ ಹೆದ್ದಾರಿ ಜೊತೆ ಹಾಸು ಹೊಕ್ಕಾಗಿದ್ದ ಜನರು, ಈಗ ತಮ್ಮ ಊರುಗಳಿಗೆ ತೆರಳಲು ಕನಿಷ್ಠ 10ರಿಂದ 25 ಕಿ.ಮೀ. ಸುತ್ತಿ ಬರಬೇಕಿದೆ. ಸ್ಥಳೀಯರಿಗೆ ಸುತ್ತುವ ಶಿಕ್ಷೆ ಯಾಕೆ? ಭೂಮಿ ಕಳೆದುಕೊಂಡ ಪುಣ್ಯಕ್ಕೆ ಅವರು ಬಳಸಿ ಬಳಿಸಿ ಬಸವಳಿದು ತಮ್ಮ ಹಳ್ಳಿಗಳಿಗೆ ಬರಬೇಕಾ? ಇದು ಯಾವ ಸೀಮೆಯ ನ್ಯಾಯ? ದಶಪಥ ಕಲ್ಪಿಸಿದ ದೌರ್ಭಾಗ್ಯ ಇದು.

ಬದುಕು ಕಸಿದುಕೊಂಡ ದಶಪಥ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಂಡ್ಯ ಸೇರಿ ಹೆದ್ದಾರಿ ಉದ್ದಕ್ಕೂ ಜನರ ಆಕ್ರೋಶ ಅಸ್ಫೋಟಗೊಂಡಿದೆ. ಕಪ್ಪುಪಟ್ಟಿ ಪ್ರದರ್ಶನ ಮಾಡಲು ಹೊರಟಿದ್ದಾರೆ. ಅದು ಬೇಡ ಎಂದು ವಿನಂತಿಸುತ್ತೇನೆ. ನ್ಯಾಯ ಕೇಳೋಣ, ಹಕ್ಕು ಪ್ರತಿಪಾದಿಸೋಣ. ಅವರಿಗೆ ಅಗೌರವ ತೋರಿಸುವುದು ಬೇಡ.

ಜನರಿಗೂ ಸಿಟ್ಟಿದೆ, ಅದು ಸಹಜ. ದ್ವಿಚಕ್ರ ವಾಹನಗಳಿಗೆ ಹೆದ್ದಾರಿಯಲ್ಲಿ ಸಂಚರಿಸಲು ಅವಕಾಶ ನಿರಾಕರಿಸಿದ್ದು ಏಕೆ? ಇದು ಅವೈಜ್ಞಾನಿಕ ಮತ್ತು ಅಕ್ಷಮ್ಯ. ಷಟ್ಪಥದ (ಆರು ಪಥ) ಮುಖ್ಯ ಕಾರಿಡಾರಿನಲ್ಲಿ ಕೊನೆಯ ಪಕ್ಷ ಎರಡನ್ನಾದರೂ ದ್ವಿಚಕ್ರ ವಾಹನಗಳಿಗೆ ಮೀಸಲಿಡಬಾರದೇಕೆ? ಇದೇನು ಬಿಟ್ಟಿ ಉಪಕಾರವೇ? ಅಲ್ಲ, ಆ ಜನರ ಹಕ್ಕು.

30 ವರ್ಷ ಕಾಲ ಈ ಹೆದ್ದಾರಿಯಲ್ಲಿ ಸಂಚರಿಸುವ ಜನರು ಟೋಲ್ ಕಟ್ಟುತ್ತಾರೆ. ಸಂಗ್ರಹವಾಗುವ ಶುಲ್ಕದ ಮೂಲಕವೇ ರಸ್ತೆ ನಿರ್ಮಾಣದ ಖರ್ಚನ್ನು ಜನರೇ ಭರಿಸುತ್ತಾರೆ. ಗುತ್ತಿಗೆದಾರರ ಜೇಬಿಗೆ ಬಹುದೊಡ್ಡ ಗಂಟು ಸೇರಲಿದೆ ಹಾಗೂ ಕೇಂದ್ರದ ಬಿಜೆಪಿ ಸರ್ಕಾರದಿಂದ ಈ ಯೋಜನೆಗೆ ಬಿಡಿಗಾಸು ಬಂದಿಲ್ಲ. ದಶಪಥದ ಒಳಲೆಕ್ಕಗಳ ಸತ್ಯ ಜನರಿಗೆ ಗೊತ್ತಾಗಬೇಕಿದೆ.

ಕನ್ನಡಿಗರಿಗೆ ಕಣ್ಣಿಗೆ ಮಂಕುಬೂದಿ ಎರಚಿ, ಈ ಸತ್ಯವನ್ನು ಮರೆಮಾಚಿ, ತಾವೇ ಈ ರಸ್ತೆ ನಿರ್ಮಾಣಕ್ಕೆ ಕಾರಣ ಎಂದು ಬಿಜೆಪಿಗರು ರಣರಣ ಬೊಬ್ಬೆ ಹೊಡೆಯುತ್ತಿರುವುದು ದಶಪಥ ಹೆದ್ದಾರಿ ಹೆಸರಿನಲ್ಲಿ ಮಾಡುತ್ತಿರುವ ಮಹಾದ್ರೋಹವಾಗಿದೆ. ಈ ಎಕ್ಸ್‌ಪ್ರೆಸ್ ಹೆದ್ದಾರಿಯ ನಿಜವಾದ ಹಕ್ಕುದಾರರಾದ ರಾಮನಗರ, ಮಂಡ್ಯ ಜನರನ್ನು ಪರಾವಲಂಬಿಗಳನ್ನಾಗಿ ಮಾಡಿದ್ದಲ್ಲದೆ, ಭೂಮಿ ಕಳೆದುಕೊಂಡ ಬಡರೈತರು ಹೆದ್ದಾರಿ ಬದಿ ನಿಂತು ಭಿಕ್ಷೆ ಬೇಡುವಂಥ ದುಃಸ್ಥಿತಿಯನ್ನು ಕೇಂದ್ರ ಸರ್ಕಾರ ಸೃಷ್ಟಿಸಿದೆ.

ದಶಪಥ ಹೆದ್ದಾರಿ ಕಸಿದುಕೊಂಡ ಬದುಕಿಗೆ ಉತ್ತರದಾಯಿ ಯಾರು? ಅವರ ಜೀವನೋಪಾಯಕ್ಕೆ ಪರ್ಯಾಯ ದಾರಿ ಯಾವುದು? ಪ್ರಧಾನಮಂತ್ರಿಗಳು ಈ ಬಗ್ಗೆ ಜನರಿಗೆ ವಿಶ್ವಾಸ ತುಂಬಬೇಕು. ರೋಡ್ ಶೋ ಮಾಡುವುದಕ್ಕಿಂತ ತುರ್ತಾಗಿ ಮಾಡಬೇಕಿರುವುದು ಇದನ್ನು. ಅಬ್ಬರ, ಅರ್ಭಟದಲ್ಲಿ ಜನರ ಬದುಕು ಅವನತಿ ಆಗಬಾರದು ಎನ್ನುವುದು ನನ್ನ ಕಳಕಳಿ ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯ! ಕರ್ನಾಟಕ ಕೇಂದ್ರದಿಂದ ಅತಿಹೆಚ್ಚು ನಿರ್ಲಕ್ಷ್ಯಕ್ಕೆ ಒಳಗಾದ ರಾಜ್ಯ!! ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ, ಈ ನೀತಿಯ ಕೆನ್ನಾಲಿಗೆಗೆ ಸಿಕ್ಕಿ ಕನ್ನಡಿಗರು ಬೇಯುತ್ತಿದ್ದಾರೆ. ಹೆದ್ದಾರಿ ಕನ್ನಡಿಗರದು, ಅದನ್ನು ಬಳಸುವ ಹಕ್ಕು ಕನ್ನಡಿಗರದು. ಕನ್ನಡಿಗರಿಗೆ ನ್ಯಾಯ ಬೇಕು.

 

Share. Facebook Twitter WhatsApp Pinterest LinkedIn Tumblr Telegram Email

Related Posts

HDK: ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟಕ್ಕೆ H.D.ಕುಮಾರಸ್ವಾಮಿ ವ್ಯಂಗ್ಯ!

March 22, 2023

ಚುನಾವಣಾ ಗಿಮಿಕ್: ಬಿಜೆಪಿ ಶಾಸಕನಿಂದ ಮುಸ್ಲಿಂ ಟೋಪಿ ಧರಿಸಿ ಮಸೀದಿ ನಿರ್ಮಾಣಕ್ಕೆ ಭೂಮಿಪೂಜೆ

March 22, 2023

ಶಾರ್ಟ್ ಸರ್ಕ್ಯೂಟ್ : ಲಾರಿಗೆ ಕೆಇಬಿ ಲೈನ್ ತಗಲಿ ಡ್ರೈವರ್ ಸಾವು

March 22, 2023

ಅಪಾರ್ಟ್ ಮೆಂಟ್ ನಲ್ಲಿ ವಾಸಿಸುವ ಜನರೇ ಹುಷಾರ್: ಶೂ ಕಳ್ಳರ ಹಾವಳಿ- cctv Footage

March 22, 2023

Liver Transplant: ನಗರ ಪ್ರದೇಶದಲ್ಲಿ ವಾಸಿಸುವ ಜನರು ನೋಡಲೇಬೇಕಾದ ಸ್ಟೋರಿ : ಇತ್ತ ನೋಡಿ

March 22, 2023

Ugadi price Shock: ಯುಗಾದಿ ಹಬ್ಬಕ್ಕೆ ಜನರಿಗೆ ಶಾಕ್ – ಹೂವು, ಹಣ್ಣಿನ ಬೆಲೆ ದುಪ್ಪಟ್ಟು….

March 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.